ಕರ್ನಾಟಕ

ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಬೆಳಗಾವಿ ಕ್ಷೇತ್ರದ ಮತ ಎಣಿಕೆ ➤ ಜಿದ್ದಾ ಜಿದ್ದಿನ ಕಣದಲ್ಲಿ ಮಂಗಳಾ ಅಂಗಡಿ vs ಸತೀಶ್ ಜಾರಕಿಹೊಳಿ

ಇಡೀ ದೇಶವೇ ತೀವ್ರ ಕುತೂಹಲದಿಂದ ಗಮನಿಸುತ್ತಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆಯು ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದೆ. ಆರಂಭದಲ್ಲಿ ಹತ್ತು ಸಾವಿರದಷ್ಟು ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದ ಬಿಜೆಪಿಯ ಮಂಗಳಾ ಅಂಗಡಿಯವರು 40 ನೇ ಸುತ್ತಿನ ವೇಳೆಗೆ ಹಿನ್ನಡೆ ಅನುಭವಿಸಿದ್ದರು. ನಂತರ 10 ಸಾವಿರದಷ್ಟು ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದ ಕಾಂಗ್ರೆಸ್ ನ ಸತೀಶ್ ಜಾರಕಿಹೊಳಿ ಇದೀಗ ಎರಡು ಸಾವಿರ ಮತಗಳ ಅಂತರದಲ್ಲಿದ್ದಾರೆ. ಮತ ಎಣಿಕೆಯು ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ್ದು, ಬೆಳಗಾವಿಯ ಜನತೆ ಯಾರ ಕೈ ಹಿಡೀತಾರೆ ಅನ್ನೋದು […]

ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಬೆಳಗಾವಿ ಕ್ಷೇತ್ರದ ಮತ ಎಣಿಕೆ ➤ ಜಿದ್ದಾ ಜಿದ್ದಿನ ಕಣದಲ್ಲಿ ಮಂಗಳಾ ಅಂಗಡಿ vs ಸತೀಶ್ ಜಾರಕಿಹೊಳಿ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮಸ್ಕಿಯಲ್ಲಿ ‘ಕೈ’ಗೆ ಜೈ ಅಂದ ಮತದಾರ ➤ ಕಾಂಗ್ರೆಸ್ ನ ಬಸನಗೌಡ ತುರುವಿಹಾಳ್ ಜಯಭೇರಿ

ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ. ಕಾಂಗ್ರೆಸ್ ನಿಂದ ಗೆದ್ದು ಶಾಸಕಾರಾಗಿ ಆಪರೇಷನ್ ಕಮಲದ ಮೂಲಕ ಬಿಜೆಪಿಗೆ ಹೋಗಿದ್ದ ಪ್ರತಾಪಗೌಡ ಪಾಟೀಲರನ್ನು ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳ್ ಅವರು 30,641 ಮತಗಳ ಅಂತರದಿಂದ ಸೋಲಿಸಿದ್ದಾರೆ. ಇಲ್ಲಿನ ವಿಶೇಷ ಎಂದರೆ ಈ ಹಿಂದೆ ಬಿಜೆಪಿಯಲ್ಲಿದ್ದ ಬಸನಗೌಡ ತುರುವಿಹಾಳ್ ಅವರು ಕಾಂಗ್ರೆಸ್ ಪಕ್ಷವನ್ನು ಸೇರಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಿಳಿದಿದ್ದರು. ಇಲ್ಲಿನ ಇಬ್ಬರು ನಾಯಕರು ಪರಸ್ಪರ ಪಕ್ಷಗಳನ್ನು ಬದಲಾಯಿಸಿ ರಾಜಕೀಯ ಅದೃಷ್ಟ ಪರೀಕ್ಷೆಗಿಳಿದಿದ್ದರು.

ಮಸ್ಕಿಯಲ್ಲಿ ‘ಕೈ’ಗೆ ಜೈ ಅಂದ ಮತದಾರ ➤ ಕಾಂಗ್ರೆಸ್ ನ ಬಸನಗೌಡ ತುರುವಿಹಾಳ್ ಜಯಭೇರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಸವ ಕಲ್ಯಾಣದಲ್ಲಿ ಗೆಲುವಿನ ನಗೆ ಬೀರಿದ ಬಿಜೆಪಿ ➤ 22 ಸಾವಿರ ಮತಗಳ ಅಂತರದಿಂದ ಗೆದ್ದ ಶರಣು ಸಲಗರ

ಬಸವ ಕಲ್ಯಾಣ, ಮೇ.02. ಬಸವ ಕಲ್ಯಾಣದಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ ವಿಜಯದ ನಗೆ ಬೀರಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಿ 22 ಸಾವಿರ ಮತಗಳ ಅಂತರದಿಂದ ಶರಣು ಸಲಗರ ವಿಜಯದ ಪತಾಕೆ ಹಾರಿಸಿದ್ದಾರೆ. ಬಿಜೆಪಿ ಬಂಡಾಯವಿದ್ದರೂ ಬಸವ ಕಲ್ಯಾಣದಲ್ಲಿ ಬಿಜೆಪಿ ಭಾರೀ ಅಂತರದಿಂದ ಗೆದ್ದಿದೆ.      

ಬಸವ ಕಲ್ಯಾಣದಲ್ಲಿ ಗೆಲುವಿನ ನಗೆ ಬೀರಿದ ಬಿಜೆಪಿ ➤ 22 ಸಾವಿರ ಮತಗಳ ಅಂತರದಿಂದ ಗೆದ್ದ ಶರಣು ಸಲಗರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನಿಂದ ಮಧ್ಯಾಹ್ನ 12 ಗಂಟೆಯವರೆಗೆ ದಿನಸಿ ಅಂಗಡಿಗಳು ಓಪನ್ ➤ ಸರಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.02. ರಾಜ್ಯ ಸರಕಾರವು ಕೊರೋನ ಕರ್ಫ್ಯೂ ಮಾರ್ಗಸೂಚಿಯನ್ನು ಮತ್ತೆ ಪರಿಷ್ಕರಿಸಿದ್ದು, ರಾಜ್ಯದಲ್ಲಿ ಬೆಳಗ್ಗೆ 6 ರಿಂದ ಮಧ್ಯಾಹ್ನ 12 ರವರೆಗೆ ದಿನಸಿ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಿ ಆದೇಶ ಹೊರಡಿಸಿದೆ. ಇಂದಿನಿಂದಲೇ (ಮೇ.2) ಅನ್ವಯವಾಗುವಂತೆ ಹೊಸ ಮಾರ್ಗಸೂಚಿಯು ಜಾರಿಗೆ ಬರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಹಾಪ್​ಕಾಮ್ಸ್​, ಹಾಲಿನ ಬೂತ್​, ತಳ್ಳುವ ಗಾಡಿ ವ್ಯಾಪಾರಕ್ಕೆ ಬೆಳಗ್ಗೆ 6ರಿಂದ ಸಂಜೆ 6 ಗಂಟೆವರೆಗೂ ಅವಕಾಶ ನೀಡಲಾಗಿದೆ. ಆದರೆ ಸಂತೆ ಮತ್ತು ಮಾರುಕಟ್ಟೆಗಳು ಸಂಪೂರ್ಣ ಬಂದ್

ಇಂದಿನಿಂದ ಮಧ್ಯಾಹ್ನ 12 ಗಂಟೆಯವರೆಗೆ ದಿನಸಿ ಅಂಗಡಿಗಳು ಓಪನ್ ➤ ಸರಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ Read More »

ಕರ್ನಾಟಕ

ರಾಜ್ಯದಲ್ಲಿಂದು 40,990 ಮಂದಿಗೆ ಕೊರೋನಾ ದೃಢ | 271 ಮಂದಿ ಮೃತ್ಯು ➤ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 990 ಮಂದಿಗೆ ಸೋಂಕು ದೃಢ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.01. ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯು ಕಾಡ್ಗಿಚ್ಚಿನಂತೆ ಹರಡುತ್ತಿದ್ದು, ದಾಖಲೆಯ ಪ್ರಮಾಣದಲ್ಲಿ ಸೋಂಕು ಪತ್ತೆಯಾಗುತ್ತಿದೆ. ಆರೋಗ್ಯ ಇಲಾಖೆಯ ವರದಿಯಂತೆ ಶುಕ್ರವಾರದಂದು ರಾಜ್ಯದಲ್ಲಿ 40990 ಮಂದಿಗೆ ಕೊರೋನಾ ಸೋಂಕು ತಗುಲಿದೆ. ರಾಜ್ಯದಲ್ಲಿ ಇಂದು 271 ಮಂದಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ‌. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 933 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಇಬ್ಬರು ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.      

ರಾಜ್ಯದಲ್ಲಿಂದು 40,990 ಮಂದಿಗೆ ಕೊರೋನಾ ದೃಢ | 271 ಮಂದಿ ಮೃತ್ಯು ➤ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 990 ಮಂದಿಗೆ ಸೋಂಕು ದೃಢ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಯುವಕನಿಗೆ ಚೂರಿ ಇರಿತ ಪ್ರಕರಣ ➤ ಇಬ್ಬರ ಬಂಧನ

(ನ್ಯೂಸ್ ಕಡಬ) Newskadaba.com ಬಂಟ್ವಾಳ, ಮೇ. 01. ಬಿ.ಸಿ.ರೋಡ್ ಅಜ್ಜಿಬೆಟ್ಟು ಎಂಬಲ್ಲಿ ಯುವಕನೋರ್ವನಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಬಿ.ಸಿ.ರೋಡ್ ಕೈಕಂಬ ಸಮೀಪದ ಪರ್ಲ್ಯ ನಿವಾಸಿಗಳಾದ ಇಮ್ರಾನ್ ಹಾಗೂ ಸಫ್ವಾನ್ ಎಂದು ಗುರುತಿಸಲಾಗಿದೆ. ಬ್ರಹ್ಮರಕೂಟ್ಲು ನಿವಾಸಿ ಮನೋಜ್ ಸಪಲ್ಯ ಎಂಬವರಿಗೆ ಎ. 04ರಂದು ರಾತ್ರಿ ಬಿ.ಸಿ.ರೋಡ್ ಬಳಿಯ ಅಜ್ಜಿಬೆಟ್ಟು ಕ್ರಾಸ್ ನಲ್ಲಿ ಸ್ಕೂಟರ್ ನಲ್ಲಿ ಬಂದ ಇಬ್ಬರು ಚೂರಿಯಿಂದ ಇರಿದು ಪರಾರಿಯಾಗಿದ್ದರು ಎಂದು ದೂರು

ಬಂಟ್ವಾಳ: ಯುವಕನಿಗೆ ಚೂರಿ ಇರಿತ ಪ್ರಕರಣ ➤ ಇಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ನಿಸರ್ಗ ಬಾರ್ ಆ್ಯಂಡ್ ರೆಸ್ಟೋರೆಂಟ್ ಗೆ ಪೊಲೀಸ್ ದಾಳಿ ➤ 50 ಬಾಕ್ಸ್ ಮದ್ಯ ಹಾಗೂ ಆರೋಪಿ ವಶಕ್ಕೆ

(ನ್ಯೂಸ್ ಕಡಬ) Newskadaba.com ಮಂಗಳೂರು, ಮೇ. 01. ಬಾರ್ ವೊಂದಕ್ಕೆ ದಾಳಿ ನಡೆಸಿದ ಪೊಲೀಸರು 1.53 ಲಕ್ಷ ರೂ. ಮೌಲ್ಯದ 52 ಬಾಕ್ಸ್‌ ಅಕ್ರಮ ಮದ್ಯ ವಶಪಡಿಸಿ, ಓರ್ವನನ್ನು ಬಂಧಿಸಿದ ಘಟನೆ ತಲಪಾಡಿ ಚೆಕ್‌ಪಾಯಿಂಟ್ ಬಳಿ ನಡೆದಿದೆ. ಬಂಧಿತನನ್ನು ಕ್ಯಾಷಿಯರ್ ಚರಣ್ (22)ಎಂದು ಗುರುತಿಸಲಾಗಿದೆ. ಈ ಕುರಿತು ಆತನಲ್ಲಿ ಪ್ರಶ್ನಿಸಿದಾಗ ಆತ ಮದ್ಯವನ್ನು ನಗರದ ಮತ್ತೊಂದು ವೈನ್ ಶಾಪ್‌ನಿಂದ ಖರೀದಿಸಿರುವುದಾಗಿ ತಿಳಿಸಿದ್ದಾನೆ. ಇದೀಗ ಚರಣ್‌ನನ್ನು ಬಂಧಿಸಿರುವ ಪೊಲೀಸರು, ಬಾರ್‌ ವ್ಯವಸ್ಥಾಪಕರಾದ ದಿವ್ಯಾ ರಾಜ್ ಮತ್ತು ರೋಹಿತ್‌ ಎಂಬವರ

ಮಂಗಳೂರು: ನಿಸರ್ಗ ಬಾರ್ ಆ್ಯಂಡ್ ರೆಸ್ಟೋರೆಂಟ್ ಗೆ ಪೊಲೀಸ್ ದಾಳಿ ➤ 50 ಬಾಕ್ಸ್ ಮದ್ಯ ಹಾಗೂ ಆರೋಪಿ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದಲ್ಲಿಂದು 48 ಸಾವಿರದ ಗಡಿ ದಾಟಿ ಕೊರೋನಾ ಸೋಂಕು➤ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1205 ಮಂದಿಗೆ ಸೋಂಕು ದೃಢ

(ನ್ಯೂಸ್ ಕಡಬ) newskadaba.com ಮಂಗಳೂರು, ಎ.30. ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯು ಕಾಡ್ಗಿಚ್ಚಿನಂತೆ ಹರಡುತ್ತಿದ್ದು, ಹಿಂದಿನ ದಾಖಲೆಯನ್ನು ಮುರಿದು ಹೊಸ ದಾಖಲೆ ನಿರ್ಮಾಣವಾಗಿದೆ. ಆರೋಗ್ಯ ಇಲಾಖೆಯ ವರದಿಯಂತೆ ಶುಕ್ರವಾರದಂದು ರಾಜ್ಯದಲ್ಲಿ 48296 ಮಂದಿಗೆ ಕೊರೋನಾ ಸೋಂಕು ತಗುಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 1205 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇಂದು ಸೋಂಕಿನಿಂದ ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.      

ರಾಜ್ಯದಲ್ಲಿಂದು 48 ಸಾವಿರದ ಗಡಿ ದಾಟಿ ಕೊರೋನಾ ಸೋಂಕು➤ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1205 ಮಂದಿಗೆ ಸೋಂಕು ದೃಢ Read More »

ಕರಾವಳಿ, ಕರ್ನಾಟಕ

ನೆಲ್ಯಾಡಿ: ಗ್ಯಾಸ್ ಟ್ಯಾಂಕರ್ ಪಲ್ಟಿ ➤ ತಪ್ಪಿದ ಅನಾಹುತ, ಚಾಲಕ ಪಾರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಎ.30. ಚಾಲಕನ ನಿಯಂತ್ರಣ ತಪ್ಪಿದ ಗ್ಯಾಸ್ ಟ್ಯಾಂಕರೊಂದು ರಸ್ತೆ ಬದಿ ಮಗುಚಿ ಬಿದ್ದ ಘಟನೆ ಶುಕ್ರವಾರದಂದು ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿಯಲ್ಲಿ ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಗ್ಯಾಸ್ ತುಂಬಿಕೊಂಡು ಹೊರಟಿದ್ದ ಟ್ಯಾಂಕರ್ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಘಟನೆಯಲ್ಲಿ ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಗ್ಯಾಸ್ ಸೋರಿಕೆ ಆಗದೆ ಇದ್ದುದರಿಂದ ಅನಾಹುತ ತಪ್ಪಿದೆ. ಸ್ಥಳಕ್ಕೆ ನೆಲ್ಯಾಡಿ ಹೊರಠಾಣಾ

ನೆಲ್ಯಾಡಿ: ಗ್ಯಾಸ್ ಟ್ಯಾಂಕರ್ ಪಲ್ಟಿ ➤ ತಪ್ಪಿದ ಅನಾಹುತ, ಚಾಲಕ ಪಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದಲ್ಲಿ ಮುಂದುವರಿಯುತ್ತಾ ಲಾಕ್‍ಡೌನ್..⁉️ ➤ ಸುಳಿವು ನೀಡಿದ ಆರೋಗ್ಯ ಸಚಿವ ಡಾ| ಸುಧಾಕರ್

(ನ್ಯೂಸ್ ಕಡಬ) newskadaba.com ಬೀದರ್, ಎ.30. ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಸೋಂಕು ನಿಯಂತ್ರಣಕ್ಕೆ ಬರದಿದ್ದರೆ ರಾಜ್ಯದಲ್ಲಿ ಲಾಕ್‍ಡೌನ್ ಮುಂದುವರಿಸುವುದು ಅನಿವಾರ್ಯ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. ಅವರು ಶುಕ್ರವಾರದಂದು ಬೀದರ್ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೋವಿಡ್ ನಿಯಂತ್ರಿಸುವ ಸಲುವಾಗಿ 14 ದಿನಗಳ ಕಾಲ ಕರ್ಫ್ಯೂ ಜಾರಿ ಮಾಡಲಾಗಿದೆ. ಜನರು ಜವಾಬ್ದಾರಿಯಿಂದ ವರ್ತಿಸುವ ಮೂಲಕ ಸೋಂಕು ತಡೆಗಟ್ಟಲು ಸಹಕರಿಸಬೇಕಿದೆ. ಕೊರೋನಾ ಹೀಗೆಯೇ ಮುಂದುವರಿದರೆ ಕಠಿಣ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯವಾಗಿದೆ ಎಂದು

ರಾಜ್ಯದಲ್ಲಿ ಮುಂದುವರಿಯುತ್ತಾ ಲಾಕ್‍ಡೌನ್..⁉️ ➤ ಸುಳಿವು ನೀಡಿದ ಆರೋಗ್ಯ ಸಚಿವ ಡಾ| ಸುಧಾಕರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top