ಕರ್ನಾಟಕ

? ಮಂಗಳೂರು: ಹನ್ನೆರಡರ ಬಾಲಕನ ಕೊಲೆಗೈದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಉಳ್ಳಾಲ, ಎ. 04. ದುಷ್ಕರ್ಮಿಗಳ ತಂಡವೊಂದು ಅಪ್ರಾಪ್ತ ವಯಸ್ಸಿನ ಬಾಲಕನೋರ್ವನನ್ನು ಕೊಲೆ ಮಾಡಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೆ.ಸಿ.ರೋಡ್ ನಲ್ಲಿರುವ ನಿರ್ಜನ ಪ್ರದೇಶದಲ್ಲಿ ಶನಿವಾರ ರಾತ್ರಿ ನಡೆದಿದೆ. ಕೊಲೆಯಾದವನನ್ನು ಕೆ.ಸಿ.ರೋಡ್ ಕೋಮರಂಗಳ ನಿವಾಸಿ ಹನೀಫ್ ಎಂಬವರ ಪುತ್ರ ಆಕಿಫ್ (12) ಎಂದು ಗುರುತಿಸಲಾಗಿದೆ. ಆಕಿಫ್ ಶನಿವಾರದಂದು ರಾತ್ರಿ 9 ಗಂಟೆಯ ಸುಮಾರಿಗೆ ಮದ್ರಸದಿಂದ ಮನೆಗೆ ಬಂದಿದ್ದು, ಬಳಿಕ ಅಂಗಡಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದ ಬಾಲಕ ನಾಪತ್ತೆಯಾಗಿದ್ದ‌. ಆತನಿಗಾಗಿ ಹುಡುಕಾಟ […]

? ಮಂಗಳೂರು: ಹನ್ನೆರಡರ ಬಾಲಕನ ಕೊಲೆಗೈದ ದುಷ್ಕರ್ಮಿಗಳು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದಾದ್ಯಂತ ಕೊರೋನಾ ಏರಿಕೆಯ ಹಿನ್ನೆಲೆ ➤ ಎ. 20ರ ವರೆಗೆ ಕೊಡಗಿನ ಎಲ್ಲಾ ಪ್ರವಾಸಿ ತಾಣಗಳು ಬಂದ್

(ನ್ಯೂಸ್ ಕಡಬ) newskadaba.com ಮಡಿಕೇರಿ, ಎ. 04. ಕೊಡಗು ಜಿಲ್ಲೆ ಸೇರಿದಂತೆ ರಾಜ್ಯದಾದ್ಯಂತ ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಏ.03ರಿಂದ ಎ. 20ರ ವರೆಗೆ ಕೊಡಗು ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳನ್ನು ಬಂದ್ ಮಾಡಿ, ಎಲ್ಲಾ ಪ್ರವಾಸಿ ತಾಣಗಳಿಗೂ ಪ್ರವಾಸಿಗರು ಮತ್ತು ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶ ಹೊರಡಿಸಿದ್ದಾರೆ. ಆದೇಶ ಉಲ್ಲಂಘನೆಯಾದಲ್ಲಿ ಶಿಕ್ಷಾರ್ಹವಾಗಿರುತ್ತದೆ ಎಂದೂ ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ. ಬೇಸಿಗೆ ಅವಧಿಯಲ್ಲಿ ಕೊಡಗು ಜಿಲ್ಲೆಗೆ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಆಗಮಿಸುವುದು ಸಾಮಾನ್ಯವಾಗಿದ್ದರೂ,

ರಾಜ್ಯದಾದ್ಯಂತ ಕೊರೋನಾ ಏರಿಕೆಯ ಹಿನ್ನೆಲೆ ➤ ಎ. 20ರ ವರೆಗೆ ಕೊಡಗಿನ ಎಲ್ಲಾ ಪ್ರವಾಸಿ ತಾಣಗಳು ಬಂದ್ Read More »

ಕರ್ನಾಟಕ

ಧರ್ಮಸ್ಥಳ: ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ➤ 15ಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಎ. 04. ಮದುವೆ ಕಾರ್ಯಕ್ರಮದ ನಿಮಿತ್ತ ಮೈಸೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ 15ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ನಿಡ್ಲೆ ಗ್ರಾಮದ ಬೂಡುಜಾಲು ಶಾಂತಿನಗರ ಸಮೀಪ ಶನಿವಾರ ರಾತ್ರಿ ನಡೆದಿದೆ. ಮದುವೆ ನಿಮಿತ್ತ ಬರುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ ಒರ್ವನಿಗೆ ಗಂಭೀರ ಗಾಯಗಳಾಗಿವೆ. ಬಸ್ಸಿನಲ್ಲಿ ಸುಮಾರು 30 ಮಂದಿ ಪ್ರಯಾಣಿಸುತ್ತಿದ್ದು, ಘಟನೆ ನಡೆದ ತಕ್ಷಣವೇ ಸ್ಥಳೀಯರು ಸ್ಪಂದಿಸಿ ರಕ್ಷಣಾ

ಧರ್ಮಸ್ಥಳ: ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ➤ 15ಕ್ಕೂ ಅಧಿಕ ಮಂದಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶಿರ್ವ: ಪೋಷಕರೊಂದಿಗೆ ಬಟ್ಟೆಯಂಗಡಿಗೆ ಬಂದಿದ್ದ ಬಾಲಕಿ ಬಾವಿಗೆ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಶಿರ್ವ, ಎ. 04. ಪೋಷಕರೊಂದಿಗೆ ಬಟ್ಟೆ ಅಂಗಡಿಗೆ ಬಂದಿದ್ದ ಪುಟ್ಟ ಮಗುವೊಂದು ಆಟವಾಡುತ್ತಾ ಪಕ್ಕದಲ್ಲಿದ್ದ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಮುದರಂಗಡಿಯ ಪೇಟೆಯಲ್ಲಿ ಶನಿವಾರದಂದು ನಡೆದಿದೆ. ಮೃತ ಬಾಲಕಿಯನ್ನು ವಾಜಪೇಯಿ ನಗರದ ಜಯಲಕ್ಷ್ಮೀ ಮತ್ತು ಕೃಷ್ಣ ದಂಪತಿಗಳ ಎರಡೂವರೆ ವರ್ಷದ ಪ್ರಿಯಾಂಕ ಎಂದು ಗುರುತಿಸಲಾಗಿದೆ. ಈ ಬಾಲಕಿಯು ತನ್ನ ಪೋಷಕರೊಂದಿಗೆ ಇಲ್ಲಿನ ಮುಖ್ಯ ರಸ್ತೆಯಲ್ಲಿದ್ದ ಬಟ್ಟೆಯಂಗಡಿಗೆ ಬಂದಿದ್ದು, ಸಂಜೆ ಸುಮಾರು 4.30 ರ ವೇಳೆಗೆ ಅಂಗಡಿಯ ಹೊರಗೆ ಆಟವಾಡುತ್ತಾ ಅಲ್ಲಿ ಪಕ್ಕದಲ್ಲಿ ಅಪೂರ್ಣ

ಶಿರ್ವ: ಪೋಷಕರೊಂದಿಗೆ ಬಟ್ಟೆಯಂಗಡಿಗೆ ಬಂದಿದ್ದ ಬಾಲಕಿ ಬಾವಿಗೆ ಬಿದ್ದು ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸಕಲೇಶಪುರ: ಕಾಡಾನೆ ದಾಳಿಗೆ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಸಕಲೇಶಪುರ, ಎ. 03. ಕಾಡಾನೆ ದಾಳಿಗೆ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ತಾಲೂಕಿನ ಕುನಿಗನಹಳ್ಳಿ ಸಮೀಪ ಹಳೆಕೆರೆ ಗ್ರಾಮದ ಕಾಲುದಾರಿಯಲ್ಲಿ ನಡೆದಿದೆ.   ಮೃತಪಟ್ಟವರನ್ನುಶಿವಣ್ಣ ಗೌಡ (65) ಎಂದು ಗುರುತಿಸಲಾಗಿದೆ. ಅವರು ಶುಕ್ರವಾರದಂದು ರಾತ್ರಿ ಕಾಲು ದಾರಿಯಲ್ಲಿ ಮನೆಗೆ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

ಸಕಲೇಶಪುರ: ಕಾಡಾನೆ ದಾಳಿಗೆ ವ್ಯಕ್ತಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಕಾರು, ಟಿಪ್ಪರ್ ಹಾಗೂ ಬೈಕ್ ನಡುವೆ ಸರಣಿ ಅಪಘಾತ ➤ ಬೈಕ್ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಎ. 03. ಟಿಪ್ಪರ್, ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ದ್ವಿಚಕ್ರ ಸವಾರನೋರ್ವ ಗಾಯಗೊಂಡ ಘಟನೆ ಘಟನೆ ಕಲ್ಲಡ್ಕ- ಕಾಂಞಂಗಾಡ್ ಹೆದ್ದಾರಿಯ ಉಕ್ಕುಡ- ಅಪ್ಪೆರಿಪಾದೆ ಎಂಬಲ್ಲಿ ನಡೆದಿದೆ. ಗಾಯಗೊಂಡವರನ್ನು ದ್ವಿಚಕ್ರ ವಾಹನ ಸವಾರ ಮುಳಿಯ ತಾಳಿಪಡ್ಪು ನಿವಾಸಿ ರತ್ನಾಕರ ಶೆಟ್ಟಿ (43) ಎಂದು ಗುರುತಿಸಲಾಗಿದೆ. ಪೆರ್ಲ ಕಡೆಯಿಂದ ವಿಟ್ಲಕ್ಕೆ ಹೋಗುತ್ತಿದ್ದ ಬಲೆನೊ ಕಾರೊಂದು ಟಿಪ್ಪರ್ ಅನ್ನು ಹಿಂದಿಕ್ಕುವ ಭರದಲ್ಲಿ ಎದುರಿನಿಂದ ಬರುತ್ತಿದ್ದ ದ್ವಿಚಕ್ರವಾಹನಕ್ಕೆ ಇನ್ನೇನು ಢಿಕ್ಕಿ

ವಿಟ್ಲ: ಕಾರು, ಟಿಪ್ಪರ್ ಹಾಗೂ ಬೈಕ್ ನಡುವೆ ಸರಣಿ ಅಪಘಾತ ➤ ಬೈಕ್ ಸವಾರನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೊಕ್ಕಡ: ಒಂಟಿ ಮನೆಗೆ ನುಗ್ಗಿ ಮನೆ ಮಾಲೀಕನ ಕಟ್ಟಿ ಹಾಕಿ ದರೋಡೆ ಪ್ರಕರಣ ➤ 9 ಮಂದಿ ಜಿಲ್ಲಾ ಹಾಗೂ ಅಂತರ್ ಜಿಲ್ಲಾ ದರೋಡೆಕೋರರ ಬಂಧನ

(ನ್ಯೂಸ್ ಕಡಬ) newskadaba.com ಸೌತಡ್ಕ, ಎ. 03. ಒಂಟಿ ಮನೆಗೆ ನುಗ್ಗಿ ಮನೆ ಮಾಲಿಕ ತುಕ್ರಪ್ಪ ಶೆಟ್ಟಿ ಎಂಬವರನ್ನು ಕಟ್ಟಿಹಾಕಿದ್ದಲ್ಲದೇ ಅವರ ಪತ್ನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದ 9 ಮಂದಿ ದರೋಡೆಕೋರರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳನ್ನು ಅಬ್ದುಲ್ ರವೂಫ್ (24 ), ರಾಮಮೂರ್ತಿ (23), ಅಶ್ರಫ್ ಪೆರಾಡಿ(27), ಸಂತೋಷ್(24), ನವೀದ್(36), ರಮಾನಂದ ಎನ್ ಶೆಟ್ಟಿ(48), ಸುಮನ್(24), ಸಿದ್ಧಿಕ್(27) ಹಾಗೂ ಅಲಿಕೋಯಾ ಎಂದು ಗುರುತಿಸಲಾಗಿದೆ. ಒಟ್ಟು 9 ಮಂದಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣಾ ಸಂದರ್ಭ ಆರೋಪಿಗಳು

ಕೊಕ್ಕಡ: ಒಂಟಿ ಮನೆಗೆ ನುಗ್ಗಿ ಮನೆ ಮಾಲೀಕನ ಕಟ್ಟಿ ಹಾಕಿ ದರೋಡೆ ಪ್ರಕರಣ ➤ 9 ಮಂದಿ ಜಿಲ್ಲಾ ಹಾಗೂ ಅಂತರ್ ಜಿಲ್ಲಾ ದರೋಡೆಕೋರರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರಿನಲ್ಲಿ ಕಾರು ಅಪಘಾತ ➤ ಪುತ್ತೂರಿನ ಮೂವರು ಗಂಭೀರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ. 03. ಕಾರೊಂದು ಅಪಘಾತಕ್ಕೀಡಾದ ಪರಿಣಾಮ ಪುತ್ತೂರು ಮೂಲದ ಮೂವರು ಗಂಭೀರ ಗಾಯಗೊಂಡ ಘಟನೆ ನೆಲಮಂಗಲದಲ್ಲಿ ನಡೆದಿದೆ. ಗಾಯಗೊಂಡವರನ್ನು ಪುತ್ತೂರು ದಾರಂದಕುಕ್ಕುವಿನವರು ಎನ್ನಲಾಗಿದೆ. ಇವರು ಶನಿವಾರದಂದು ನಸುಕಿನ ಜಾವ ಪುತ್ತೂರಿನಿಂದ ಬೆಂಗಳೂರಿಗೆ ಕಾರ್ಯಕ್ರಮಕ್ಕೆಂದು ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಬೆಂಗಳೂರಿನಲ್ಲಿ ಕಾರು ಅಪಘಾತ ➤ ಪುತ್ತೂರಿನ ಮೂವರು ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇಂದಿನ (ಎ. 03) ಕೊರೋನಾ ಅಪ್ಡೇಟ್ಸ್ ➤ ಕಡಬ ತಾಲೂಕಿನ 6 ಮಂದಿಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ, ಎ. 03. ಕೊರೋನಾ ವೈರಸ್ ದಿನೇದಿನೇ ತನ್ನ ಅಟ್ಟಹಾಸವನ್ನು ಮೆರೆಯುತ್ತಿದ್ದು, ಇಂದಿನ ಆರೋಗ್ಯ ಇಲಾಖಾ ವರದಿಯಂತೆ ಇಂದು ಕಡಬದ 6 ಮಂದಿಗೆ ಕೊರೋನಾ ದೃಢಪಟ್ಟಿದೆ. ಕಡಬ ತಾಲೂಕಿನ ನೆಲ್ಯಾಡಿಯ 27 ವರ್ಷದ ಯುವಕ, 58 ವರ್ಷದ ಮಹಿಳೆ, ಕೊಣಾಲುವಿನ 21 ವರ್ಷದ ಯುವತಿ, ಶಿರಾಡಿಯ 32 ವರ್ಷದ ಪುರುಷ, 9 ವರ್ಷದ ಬಾಲಕಿ, 60 ವರ್ಷದ ಮಹಿಳೆಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಇಂದಿನ (ಎ. 03) ಕೊರೋನಾ ಅಪ್ಡೇಟ್ಸ್ ➤ ಕಡಬ ತಾಲೂಕಿನ 6 ಮಂದಿಗೆ ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಪತಿ- ಪತ್ನಿಯ ನಡುವೆ ಕೌಟುಂಬಿಕ ಕಲಹದಲ್ಲಿ ಮನೆಗೆ ಬೆಂಕಿ ಕೊಟ್ಟ ಪತಿರಾಯ ➤ 6 ಮಂದಿ ಸಜೀವ ದಹನ

(ನ್ಯೂಸ್ ಕಡಬ) newskadaba.com ಗೋಣಿಕೊಪ್ಪ, ಎ. 03. ದಂಪತಿಗಳ ನಡುವಿನ ಜಗಳದಿಂದಾಗಿ ಆರು ಮಂದಿ ಸಜೀವ ದಹನವಾದ ಘಟನೆ ಪೊನ್ನಂಪೇಟೆ ತಾಲೂಕಿನ ಕಾನೂರು ಗ್ರಾಮದಲ್ಲಿ ನಡೆದಿದೆ. ಸಜೀವ ದಹನವಾದವರನ್ನು ಬೇಬಿ, ಸೀತೆ, ವಿಶ್ವಾಸ್, ಪ್ರಾರ್ಥನಾ, ಪ್ರಕಾಶ್ ಎಂದು ಗುರುತಿಸಲಾಗಿದೆ. ಮತ್ತಿಬ್ಬರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎಂಸು ತಿಳಿದು ಬಂದಿದೆ. ಕ್ಷುಲ್ಲಕ ಕಾರಣಕ್ಕೆ ಪತಿ-ಪತ್ನಿಯ ನಡುವೆ ಉಂಟಾದ ಜಗಳದಲ್ಲಿ ಬೇಬಿ ಎಂಬವರ ಪತಿ ಎರವರ ಬೋಜ ಎಂಬಾತನು ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಪರಾರಿಯಾಗಿದ್ದಾನೆ. ಮೂವರು

ಪತಿ- ಪತ್ನಿಯ ನಡುವೆ ಕೌಟುಂಬಿಕ ಕಲಹದಲ್ಲಿ ಮನೆಗೆ ಬೆಂಕಿ ಕೊಟ್ಟ ಪತಿರಾಯ ➤ 6 ಮಂದಿ ಸಜೀವ ದಹನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top