ಕರ್ನಾಟಕ

?ಮಂಗಳೂರು: ಪಾದಚಾರಿಗೆ ಕಾರು ಢಿಕ್ಕಿ- ಪಾದಚಾರಿ ಸ್ಥಳದಲ್ಲೇ ಮೃತ್ಯು ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 29. ಮದ್ಯ ಸೇವಿಸಿದ್ದ ಪಿಡಬ್ಲ್ಯೂಡಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಚಲಾಯಿಸಿದ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ, ಪಾದಚಾರಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಕದ್ರಿ ಪ್ರವಾಸಿ ಮಂದಿರ ರಸ್ತೆಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಮೃತಪಟ್ಟವರನ್ನು ಬಿಎಸ್‌ಎನ್‌ಎಲ್‌ ನಿವೃತ್ತ ಉದ್ಯೋಗಿ ಆನಂದ ಎಂದು ಗುರುತಿಸಲಾಗಿದೆ. ಆರೋಪಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ದಿ ಇಲಾಖೆ ಮಂಗಳೂರು ಉಪ ವಿಭಾಗದ ಎಇಇ ಶಣ್ಮುಗಂ ಎಂಬವರನ್ನು ಬಂಧಿಸಲಾಗಿದೆ. ಭಾನುವಾರ ರಾತ್ರಿ 9.53ರ ಸುಮಾರಿಗೆ, ರಸ್ತೆ […]

?ಮಂಗಳೂರು: ಪಾದಚಾರಿಗೆ ಕಾರು ಢಿಕ್ಕಿ- ಪಾದಚಾರಿ ಸ್ಥಳದಲ್ಲೇ ಮೃತ್ಯು ➤ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆಕಾಶವಾಣಿ ಉದ್ಘೋಷಕ ಸುಳ್ಯದ ಚಿತ್ತರಂಜನ್ ದಾಸ್ ವಿಧಿವಶ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 29. ಆಕಾಶವಾಣಿಯಲ್ಲಿ ಉದ್ಘೋಷಕರಾಗಿ ಸೇವೆ ಸಲ್ಲಿಸಿದ್ದ ಸುಳ್ಯ ಮೂಲದ ಚಿತ್ತರಂಜನ್ ದಾಸ್ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಅವರಿಗೆ 61 ವರ್ಷ ಪ್ರಾಯವಾಗಿತ್ತು.   ದೆಹಲಿಯ ಆಕಾಶವಾಣಿಯಲ್ಲಿ ಉದ್ಘೋಷಕರಾಗಿ ಸೇವೆ ಸಲ್ಲಿಸಿದ್ದ ಇವರು, ಬಳಿಕ ಜಾಹೀರಾತು ಕ್ಷೇತ್ರದಲ್ಲಿಯೂ ತೊಡಗಿಸಿಕೊಂಡಿದ್ದ ಇವರು, ಮೂಲತಃ ಸುಳ್ಯದ ನೆಲ್ಲೂರು ಸಮೀಪದ ಕೆಮ್ರಾಜೆ ನಿವಾಸಿಯಾಗಿದ್ದು, ನಿವೃತ್ತಿ ಬಳಿಕ ಬೆಂಗಳೂರಿನಲ್ಲಿಯೇ ವಾಸವಾಗಿದ್ದರು.  

ಆಕಾಶವಾಣಿ ಉದ್ಘೋಷಕ ಸುಳ್ಯದ ಚಿತ್ತರಂಜನ್ ದಾಸ್ ವಿಧಿವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮರ್ಧಾಳ: ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಉರುಳಿದ ಕಾರು ➤ ರಬ್ಬರ್ ಶೀಟ್ ಮಾಡುವ ಯಂತ್ರಕ್ಕೆ ಹಾನಿ

(ನ್ಯೂಸ್ ಕಡಬ) newskadaba.com ಕಡಬ, ಮಾ.29. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ವದಿಯ ತೋಟಲ್ಕೆ ಉರುಳಿ ಬಿದ್ದ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳದಲ್ಲಿ ನಡೆದಿದೆ. ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಟೊಯೋಟಾ ಇಟಿಯೋಸ್ ಕಾರು ಮರ್ಧಾಳ ಸಮೀಪದ ಚಾಕಟೆಕೆರೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟದಲ್ಲಿದ್ದ ರಬ್ಬರ್ ಶೀಟ್ ಮಾಡುವ ಶೆಡ್ ಮೇಲೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ರಬ್ಬರ್ ಶೀಟ್ ಮಾಡುವ ಯಂತ್ರಕ್ಕೆ

ಮರ್ಧಾಳ: ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ಉರುಳಿದ ಕಾರು ➤ ರಬ್ಬರ್ ಶೀಟ್ ಮಾಡುವ ಯಂತ್ರಕ್ಕೆ ಹಾನಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

? ಹಾಸನ: ಬಸ್ ನಿಲ್ದಾಣದಲ್ಲಿ ಹೆತ್ತವರ ಜೊತೆ ಮಲಗಿದ್ದ ಅಪ್ರಾಪ್ತ ಬಾಲಕಿಯ ಹೊತ್ತೊಯ್ದು ಅತ್ಯಾಚಾರ ➤ ದೃಶ್ಯ ಸಿಸಿಟಿವಿಯಲ್ಲಿ ಸೆರೆ

(ನ್ಯೂಸ್ ಕಡಬ) newskadaba.com ಹಾಸನ, ಮಾ. 29. ಇಲ್ಲಿನ ಬಸ್ ನಿಲ್ದಾಣದಲ್ಲಿ ಪೋಷಕರೊಂದಿಗೆ ಮಲಗಿದ್ದ ಐದು ವರ್ಷದ ಅಪ್ರಾಪ್ತ ಬಾಲಕಿಯನ್ನು ಹೊತ್ತೊಯ್ದು ಲೈಂಗಿಕ ದೌರ್ಜನ್ಯವೆಸಗಿರುವ ಅಮಾನವೀಯ ಕೃತ್ಯ ನಗರದ ಹೊಸ ಬಸ್ ನಿಲ್ದಾಣದಲ್ಲಿ ನಡೆದಿದೆ. ರಾಮನಗರಕ್ಕೆ ತೆರಳಲೆಂದು ಬಂದ ಭಿಕ್ಷುಕ ದಂಪತಿಗಳು ರಾತ್ರಿಯಾಗಿದ್ದರಿಂದ ಬಸ್ ಸಿಗದೆ ಮಗುವನ್ನು ಮಲಗಿಸಿಕೊಂಡು ಬಾಸ್ ನಿಲ್ದಾಣದಲ್ಲೇ ಮಲಗಿದ್ದರು. ಈ ವೇಳೆ ಆಗಮಿಸಿದ ಕಿರಾತಕನೋರ್ವ ಮಗುವನ್ನು ಹೊತ್ತೊಯ್ದು ದುಷ್ಕೃತ್ಯವೆಸಗಿದ್ದಾನೆ. ನಿದ್ರೆಯಿಂದ ಎಚ್ಚೆತ್ತ ಪೋಷಕರು ಮಗುವಿಗಾಗಿ ಹುಡುಕಾಡಿದ ವೇಳೆ ಅಳುತ್ತಿದ್ದ ಮಗು ಪತ್ತೆಯಾಗಿದೆ. ಕಿರಾತಕ

? ಹಾಸನ: ಬಸ್ ನಿಲ್ದಾಣದಲ್ಲಿ ಹೆತ್ತವರ ಜೊತೆ ಮಲಗಿದ್ದ ಅಪ್ರಾಪ್ತ ಬಾಲಕಿಯ ಹೊತ್ತೊಯ್ದು ಅತ್ಯಾಚಾರ ➤ ದೃಶ್ಯ ಸಿಸಿಟಿವಿಯಲ್ಲಿ ಸೆರೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ➤ ಆರೋಪಿಯ ವಿರುದ್ದ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 29. ಮದುವೆ ಕಾರ್ಯಕ್ರಮಕ್ಕೆಂದು ಬಂದಿದ್ದ ಬಾಲಕನ ಮೇಲೆ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಟ್ಲ -ಪುತ್ತೂರು ರಸ್ತೆಯ ಕಬಕ ಸಮೀಪದ ಮನೆಯೊಂದರಲ್ಲಿ ಮದುವೆ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಇಲ್ಲಿಗೆ ಪುತ್ತೂರಿನ ಹನ್ನೊಂದು ವರ್ಷದ ಬಾಲಕ ಬಂದಿದ್ದು, ಅಲ್ಲದೇ ಇದೇ ಮದುವೆ ಕಾರ್ಯಕ್ರಮಕ್ಕೆ ಕಬಕ ಮೂಲದ ಹಮೀದ್ ಯಾನೆ ಮೌಲ ಅಮ್ಮಿ ಎಂಬಾತ ಕೂಡಾ ಬಂದಿದ್ದ. ಈ ಸಂದರ್ಭ ಬಾಲಕನನ್ನು ಪುಸಲಾಯಿಸಿ ಹೊರಗಡೆ ಕರೆದುಕೊಂಡು ಹೋಗಿ

ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ➤ ಆರೋಪಿಯ ವಿರುದ್ದ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಾಳೆ ಸೆಕ್ಸ್‌ ಸಿಡಿ ಪ್ರಕರಣಕ್ಕೆ ತಾರ್ಕಿಕ ಅಂತ್ಯ..‼️ ➤ ಈ ಬಗ್ಗೆ ಸಿಡಿ ಲೇಡಿಯ ವಕೀಲರು ಹೇಳಿದ್ದೇನು..⁉️

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.28. ರಾಜ್ಯ ರಾಜಕೀಯದಲ್ಲಿ ಕ್ಷಣಕ್ಕೊಂದು ತಿರುವು ಪಡೆಯುತ್ತಿರುವ ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಅವರ ಸೆಕ್ಸ್ ಸಿಡಿ ಪ್ರಕರಣವು ನಾಳೆ ತಾರ್ಕಿಕ ಅಂತ್ಯ ಕಾಣುವ ಸಾಧ್ಯತೆ ಕಂಡು ಬಂದಿದೆ. ಈ ಕುರಿತು ಯುವತಿಯ ಪರ ವಕೀಲರಾದ ಜಗದೀಶ್ ಫೇಸ್​ಬುಕ್​ ಲೈವ್ ನಲ್ಲಿ ಹೇಳಿಕೆ ನೀಡಿದ್ದು,‌ ಪೊಲೀಸರು ಹಾಗೂ ತನಿಖಾಧಿಕಾರಿಗಳ ಮೇಲೆ ಆರೋಪಿಯ ಪ್ರಭಾವ ಹೆಚ್ಚಾಗಿದ್ದು, ಈ ಕೇಸ್​​ನಲ್ಲಿ ಸರಿಯಾದ ತನಿಖೆ ಸಾಧ್ಯವಿಲ್ಲ. ಪೊಲೀಸರು ಸಂಪೂರ್ಣವಾಗಿ ತನಿಖೆಯ ದಿಕ್ಕು ತಪ್ಪಿಸಿದ್ದಾರೆ. ಆದ್ದರಿಂದ ಇದಕ್ಕೆ

ನಾಳೆ ಸೆಕ್ಸ್‌ ಸಿಡಿ ಪ್ರಕರಣಕ್ಕೆ ತಾರ್ಕಿಕ ಅಂತ್ಯ..‼️ ➤ ಈ ಬಗ್ಗೆ ಸಿಡಿ ಲೇಡಿಯ ವಕೀಲರು ಹೇಳಿದ್ದೇನು..⁉️ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ ➤ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 27. ಕೆಎಸ್ಸಾರ್ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಪಡಂಗಡಿ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಪೊಯ್ಯೆಗುಡ್ಡೆ ನಿವಾಸಿ ಜಾಬಿರ್ (34) ಎಂದು ಗುರುತಿಸಲಾಗಿದೆ. ಧರ್ಮಸ್ಥಳದಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಸರಕಾರಿ ಬಸ್ಸು ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದೆ. ಪರಿಣಾಮ ಬೈಕ್ ಸವಾರ ರಸ್ತೆಗೆಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಾಬಿರ್ ಕಳೆದ 15 ದಿನಗಳ ಹಿಂದೆಯಷ್ಟೇ ವಿದೇಶದಿಂದ ಊರಿಗೆ ಮರಳಿದ್ದರು ಎನ್ನಲಾಗಿದೆ.

ಬೆಳ್ತಂಗಡಿ: ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ ➤ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸಿಡಿ ಪ್ರಕರಣ ➤ ಜಾರಕಿಹೊಳಿ ಮೊಬೈಲ್ ಜಪ್ತಿ ಮಾಡಿದ ಎಸ್ಐಟಿ ಅಧಿಕಾರಿಗಳು

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 27. ಸೆಕ್ಸ್ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ರಮೇಶ್ ಜಾರಕಿಹೊಳಿ ಯುವತಿಗೆ ಕರೆ ಮಾಡಿದ್ದರಾ ಅಥವಾ ಆಕೆಯೇ ಇವರಿಗೆ ಕರೆ ಮಾಡಿದ್ಳಾ ಎಂಬುವುದರ ಸತ್ಯಾನ್ವೇಷಣೆಗೆ ಎಸ್‌ಐಟಿ ಅಧಿಕಾರಿಗಳು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ಮೊಬೈಲ್ ನ್ನು ವಶಕ್ಕೆ ಪಡೆದಿದ್ದಾರೆ. ರಮೇಶ್ ರವರೇ ಸ್ವತಃ ಯುವತಿಗೆ ಕರೆ ಮಾಡಿರುವ ಕುರಿತು ಮಾಹಿತಿಯನ್ನು ಎಸ್‌ಐಟಿ ಅಧಿಕಾರಿಗಳು ಸಂಗ್ರಹಿಸುತ್ತಿದೆ. ಈ ಸಿಡಿಗೆ ಸಂಬಂಧಿಸಿ ರಮೇಶ್ ಜಾರಕಿಹೊಳಿಯನ್ನು ವಿಶೇಷ ತನಿಖಾಧಿಕಾರಿಗಳು ಎರಡು ಬಾರಿ ವಿಚಾರಣೆ ನಡೆಸಿದ್ದು,

ಸಿಡಿ ಪ್ರಕರಣ ➤ ಜಾರಕಿಹೊಳಿ ಮೊಬೈಲ್ ಜಪ್ತಿ ಮಾಡಿದ ಎಸ್ಐಟಿ ಅಧಿಕಾರಿಗಳು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

?ಸುಳ್ಯ: ಬಿಯರ್ ತುಂಬಿದ್ದ ಕಂಟೇನರ್ ಲಾರಿ ಪಲ್ಟಿ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 27. ಇಲ್ಲಿನ ಪರಿವಾರಕಾನ ತಿರುವಿನ ಬಳಿ ಭಾರತ್ ಟ್ರಾನ್ಸ್ ಪೋರ್ಟ್ ಕಂಪನಿಯ ಬಿಯರ್ ತುಂಬಿದ ಲಾರಿಯೊಂದು ಪಲ್ಟಿಯಾದ ಘಟನೆ ನಡೆದಿದೆ. ವಾಹನದಲ್ಲಿ ಚಾಲಕ ಒಬ್ಬನೇ ಇದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ.    

?ಸುಳ್ಯ: ಬಿಯರ್ ತುಂಬಿದ್ದ ಕಂಟೇನರ್ ಲಾರಿ ಪಲ್ಟಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

?ಹಿರಿಯಡ್ಕ: ಯುವಕ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಹಿರಿಯಡ್ಕ, ಮಾ. 27. ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರಿಯಡಕ ಕೊಂಡಾಡಿ ಭಜನೆ ಕಟ್ಟೆ ಎಂಬಲ್ಲಿ ಶನಿವಾರದಂದು ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡವರನ್ನು ದೇವೇಂದ್ರ ಆಚಾರ್ಯ( ಮುನ್ನ) ಎಂದು ಗುರುತಿಸಲಾಗಿದೆ. ಇವರು ವೃತ್ತಿಯಲ್ಲಿ ಬಡಗಿಯಾಗಿದ್ದು, ಕೊರೋನಾ ಲಾಕ್ ಡೌನ್ ಬಳಿಕ ಸರಿಯಾಗಿ ಕೆಲಸವಿಲ್ಲದೆ ಆರ್ಥಿಕ ಸಂಕಷ್ಟ ಉಂಟಾಗಿ, ಖಿನ್ನತೆಗೆ ಒಳಗಾಗಿದ್ದರು. ಇದೇ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.  

?ಹಿರಿಯಡ್ಕ: ಯುವಕ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top