ಕರ್ನಾಟಕ

ಕ್ಯಾಂಪಸ್ ಫ್ರಂಟ್ ಅಧ್ಯಕ್ಷರಾಗಿ ಎಂ.ಎಸ್ ಸಾಜಿದ್ ಆಯ್ಕೆ

(ನ್ಯೂಸ್ ಕಡಬ) newskadaba.com ಮಲಪ್ಪುರಂ, ಮಾ. 26. ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ರಾಷ್ಟ್ರೀಯ ಪ್ರತಿನಿಧಿ ಸಭೆಯು ಕೇರಳದ ಮಲಪ್ಪುರಂ ನಲ್ಲಿ ನಡೆಯಿತು. ಎರಡು ದಿನಗಳ ಪ್ರತಿನಿಧಿ ಸಭೆಯ ಅಧ್ಯಕ್ಷತೆಯನ್ನು ರಾಷ್ಟ್ರೀಯ ಅಧ್ಯಕ್ಷರಾದ ಎಂ.ಎಸ್ ಸಾಜಿದ್ ವಹಿಸಿ ಮಾತನಾಡಿ “ದೇಶದಲ್ಲಿ ಅಸಮಾನತೆ ಮತ್ತು ಅಭದ್ರತೆ ಹೆಚ್ಚುತ್ತಿರುವಾಗ ವಿದ್ಯಾರ್ಥಿ ಸಮುದಾಯವು ಅತೀ ಕ್ರಿಯಾಶೀಲ ಪಾತ್ರವನ್ನು ವಹಿಸಬೇಕಾಗಿದೆ” ಎಂದು ಅವರು ಹೇಳಿದರು. ಸಭೆಯಲ್ಲಿ ದೇಶದ ಶೈಕ್ಷಣಿಕ, ರಾಜಕೀಯ, ಸಾಮಾಜಿಕ ವಿಷಯಗಳ ಕುರಿತು ಚರ್ಚೆ ನಡೆಯಿತು. ರಾಷ್ಟ್ರೀಯ ಕಾರ್ಯದರ್ಶಿ ಇರ್ಶಾದ್ ಕಾವು […]

ಕ್ಯಾಂಪಸ್ ಫ್ರಂಟ್ ಅಧ್ಯಕ್ಷರಾಗಿ ಎಂ.ಎಸ್ ಸಾಜಿದ್ ಆಯ್ಕೆ Read More »

ಕರ್ನಾಟಕ

ಕೊರೋನಾ ನಿಯಂತ್ರಣಕ್ಕೆ ಸರಕಾರದಿಂದ ಪರಿಷ್ಕೃತ ಮಾರ್ಗಸೂಚಿ ➤ ಯುಗಾದಿ, ಹೋಳಿ, ಬರಾಅತ್, ಗುಡ್ ಫ್ರೈಡೇ ಆಚರಣೆಗೆ ನಿಷೇಧ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.26. ಕೋವಿಡ್-19 ಎರಡನೇ ಅಲೆಯಿಂದಾಗಿ ದಿಢೀರ್ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದರ ನಿಯಂತ್ರಣಕ್ಕಾಗಿ ರಾಜ್ಯ ಸರಕಾರವು ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಟಿಸಿದೆ. ಮುಂಬರುವ ಯುಗಾದಿ, ಹೋಳಿ, ಶಬೇ – ಬರಾಅತ್, ಗುಡ್ ಫ್ರೈಡೆ ಹಬ್ಬಗಳ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗುಂಪುಗೂಡದಂತೆ ನಿಷೇಧ ಹೇರಿ ಸರಕಾರವು ಆದೇಶ ಹೊರಡಿಸಿದೆ. ಪರಿಷ್ಕೃತ ಮಾರ್ಗಸೂಚಿಯ ಅನ್ವಯ ಸಾರ್ವಜನಿಕ ಸ್ಥಳ, ಮೈದಾನ, ಪಾರ್ಕ್, ಮಾರ್ಕೆಟ್ ಮತ್ತು ಪ್ರಾರ್ಥನಾ ಮಂದಿರಗಳಲ್ಲಿ ಹಬ್ಬಗಳ ಆಚರಣೆಯನ್ನು ನಿಷೇಧಿಸಲಾಗಿದೆ. ಆದೇಶವನ್ನು ಉಲ್ಲಂಘಿಸಿದರೆ ಎನ್‍ಡಿಎಂಎ

ಕೊರೋನಾ ನಿಯಂತ್ರಣಕ್ಕೆ ಸರಕಾರದಿಂದ ಪರಿಷ್ಕೃತ ಮಾರ್ಗಸೂಚಿ ➤ ಯುಗಾದಿ, ಹೋಳಿ, ಬರಾಅತ್, ಗುಡ್ ಫ್ರೈಡೇ ಆಚರಣೆಗೆ ನಿಷೇಧ Read More »

ಕರ್ನಾಟಕ

ಎಡಮಂಗಲ: ದಲಿತ ಮಹಿಳೆಯ ಮನೆ ಧ್ವಂಸ ಪ್ರಕರಣ ➤ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

(ನ್ಯೂಸ್ ಕಡಬ) newskadaba.com ಎಡಮಂಗಲ, ಮಾ. 26. ದಲಿತ ಮಹಿಳೆಯೋರ್ವರು ವಾಸಿಸುತ್ತಿದ್ದ ತಾತ್ಕಾಲಿಕ ಮನೆಯನ್ನು ಧ್ವಂಸ ಮಾಡಿ, ಅವಾಚ್ಯ ಶಬ್ದಗಳಿಂದ ಬೈದು ಜಾತಿ ನಿಂದನೆ ಮಾಡಿದ ಪ್ರಕರಣದ ಇಬ್ಬರು ಆರೋಪಿಗಳಿಗೆ ಪುತ್ತೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತು ಬದ್ದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಮಾ. 03 ರಂದು ರವಿ ಶೆಟ್ಟಿ ಮತ್ತು ವಿದ್ಯಾ ಶೆಟ್ಟಿ ಹಾಗೂ ಮತ್ತಿಬ್ಬರು ಎಡಮಂಗಲ ಗ್ರಾಮದ ಕಜೆತ್ತಡ್ಕ ಎಂಬಲ್ಲಿ ಬಾಲಕಿ ಎಂಬವರು 20 ವರ್ಷಗಳಿಂದ ವಾಸಿಸುತ್ತಿದ್ದ ಮನೆಗೆ ಬಂದು ಅವಾಚ್ಯ

ಎಡಮಂಗಲ: ದಲಿತ ಮಹಿಳೆಯ ಮನೆ ಧ್ವಂಸ ಪ್ರಕರಣ ➤ ಆರೋಪಿಗಳಿಗೆ ನಿರೀಕ್ಷಣಾ ಜಾಮೀನು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಬೆಳ್ಳಂಬೆಳಗ್ಗೆ ಕರ್ತವ್ಯದಲ್ಲಿದ್ದ ಎಸ್.ಐ ವಿನೋದ್ ರೆಡ್ಡಿ ಮೇಲೆ ಗುಂಡಿನ ದಾಳಿ ➤ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 26. ಕರ್ತವ್ಯ ನಿರತರಾಗಿದ್ದ ವಿಟ್ಲ ಎಸ್.ಐ ವಿನೋದ್ ರೆಡ್ಡಿ ಮೇಲೆ ಗುಂಡಿನ ದಾಳಿ ನಡೆಸಿ ಕೊಲೆ ಮಾಡಲೆತ್ನಿಸಿದ ದುಷ್ಕರ್ಮಿಯನ್ನು ವಿಟ್ಲ ಪೋಲೀಸರು ಬಂಧಿಸಿದ ಘಟನೆ ವಿಟ್ಲ ಕೊಡಂಗೆ ಚೆಕ್ ಪೋಸ್ಟ್ ನಲ್ಲಿ ಇಂದು ಮುಂಜಾನೆ ನಡೆದಿದೆ. ವಿಟ್ಲ ಸಮೀಪದ ಸಾಲೆತ್ತೂರು ಕೊಡಂಗೆ ಚೆಕ್ ಪೋಸ್ಟ್ ನಲ್ಲಿ ವಿಟ್ಲ ಎಸ್ಐ ವಿನೋದ್ ರೆಡ್ಡಿ ಹಾಗೂ ಸಿಬ್ಬಂದಿಗಳು ವಾಹನಗಳನ್ನು ತಡೆದು, ತಪಾಸಣೆ ನಡೆಸುತ್ತಿದ್ದ ವೇಳೆ ಬಿಳಿ ಬಣ್ಣದ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಯೊರ್ವ ಎಸ್ಐ

ವಿಟ್ಲ: ಬೆಳ್ಳಂಬೆಳಗ್ಗೆ ಕರ್ತವ್ಯದಲ್ಲಿದ್ದ ಎಸ್.ಐ ವಿನೋದ್ ರೆಡ್ಡಿ ಮೇಲೆ ಗುಂಡಿನ ದಾಳಿ ➤ ಆರೋಪಿ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೈತಡ್ಕ: ತೂಫಾನ್ ಹಾಗೂ ಅಟೋ ರಿಕ್ಷಾ ನಡುವೆ ಢಿಕ್ಕಿ

(ನ್ಯೂಸ್ ಕಡಬ) newskadaba.com ಕಾಣಿಯೂರು, ಮಾ. 25. ತೂಫಾನ್ ಹಾಗೂ ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಕಾಣಿಯೂರು ಸಮೀಪದ ಬೈತ್ತಡ್ಕ ಎಂಬಲ್ಲಿ ಇಂದು ನಡೆದಿದೆ. ಈ ಘಟನೆಯಿಂದ ರಿಕ್ಷಾದಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.  

ಬೈತಡ್ಕ: ತೂಫಾನ್ ಹಾಗೂ ಅಟೋ ರಿಕ್ಷಾ ನಡುವೆ ಢಿಕ್ಕಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೇಂದ್ರ ಸರಕಾರದ ಕೃಷಿ ಕಾಯ್ದೆಯನ್ನು ವಿರೋಧಿಸಿ ನಾಳೆ (ಮಾ.26) ಭಾರತ್ ಬಂದ್ ➤ ರಾಷ್ಟ್ರೀಯ ಸಂಯುಕ್ತ ಕಿಸಾನ್ ಮೋರ್ಚಾ ಕರೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 25. ಕೇಂದ್ರ ಸರಕಾರ ಜಾರಿಗೊಳಿಸಿರುವ ಕೃಷಿ ಮಸೂದೆಯನ್ನು ವಿರೋಧಿಸಿ ನಾಳೆ ಭಾರತ್ ಬಂದ್‍ಗೆ ಕರೆ ನೀಡಲಾಗಿದ್ದು, ಈ ಹಿನ್ನೆಲೆ ರಾಜ್ಯದಲ್ಲಿ ವಿವಿಧೆಡೆ ಪ್ರತಿಭಟನೆ ಹಾಗೂ ಕೃಷಿ ಕಾಯ್ದೆಗಳ ಶವಯಾತ್ರೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.   ಈ ಕುರಿತು ಮಾಹಿತಿ ನೀಡಿರುವ ಐಕ್ಯ ಹೋರಾಟ ಸಮಿತಿ ಅಧ್ಯಕ್ಷ ಬಡಗಲಪುರ ನಾಗೇಂದ್ರ ಅವರು, ಕೇಂದ್ರದ ಕೃಷಿ ವಿನಾಶ ಕಾಯ್ದೆ, ರೈತರ ಮರಣ ಶಾಸನ ವಿರೋಧಿಸಿ ರಾಜ್ಯದ ಎಲ್ಲಾ ನಗರಗಳ

ಕೇಂದ್ರ ಸರಕಾರದ ಕೃಷಿ ಕಾಯ್ದೆಯನ್ನು ವಿರೋಧಿಸಿ ನಾಳೆ (ಮಾ.26) ಭಾರತ್ ಬಂದ್ ➤ ರಾಷ್ಟ್ರೀಯ ಸಂಯುಕ್ತ ಕಿಸಾನ್ ಮೋರ್ಚಾ ಕರೆ Read More »

ಕರ್ನಾಟಕ

ಖ್ಯಾತ ಚಿತ್ರನಟಿ ಸಂಚರಿಸುತ್ತಿದ್ದ ಬಸ್ ಬೆಂಕಿಗಾಹುತಿ ➤ ಸೇರಿದಂತೆ ಹಲವರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ.25. ಕಂಟೇನರ್ ಲಾರಿ ಹಾಗೂ ಖಾಸಗಿ ಬಸ್ ನಡುವೆ ಢಿಕ್ಕಿ ಸಂಭವಿಸಿ ಬೆಂಕಿಗಾಹುತಿಯಾದ ಬಸ್ ನಲ್ಲಿ ತುಳುನಾಡಿನ ಖ್ಯತ ನಟಿಯೊಬ್ಬರಿದ್ದರು ಎನ್ನುವ ಮಾಹಿತಿ‌ ಇದೀಗ ಕೇಳಿ ಬರುತ್ತಿದೆ. ಬೆಂಗಳೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೇನರ್ ಲಾರಿ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ನಡುವೆ ನೆಲ್ಯಾಡಿ ಸಮೀಪದ ಮಣ್ಣಗುಂಡಿ ಎಂಬಲ್ಲಿ ಬುಧವಾರ ತಡರಾತ್ರಿ ಮುಖಾಮುಖಿ ಢಿಕ್ಕಿ ಸಂಭವಿಸಿತ್ತು. ಘಟನೆಯಲ್ಲಿ ಲಾರಿಗೆ ಬೆಂಕಿ ಹಿಡಿದಿದ್ದು, ಲಾರಿ ಚಾಲಕ ಹೊರಬರಲಾರದೆ ಸಜೀವ ದಹನವಾಗಿದ್ದರು‌. ಬಸ್ಸು

ಖ್ಯಾತ ಚಿತ್ರನಟಿ ಸಂಚರಿಸುತ್ತಿದ್ದ ಬಸ್ ಬೆಂಕಿಗಾಹುತಿ ➤ ಸೇರಿದಂತೆ ಹಲವರು ಅಪಾಯದಿಂದ ಪಾರು Read More »

ಕರ್ನಾಟಕ, ಸಿನಿಮಾ

ಮುಂದುವರಿದ ಕೊರೋನಾ ಎರಡನೇ ಅಲೆ- ಸರಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ ➤ ಮದುವೆಗೆ 200 ಹಾಗೂ ರಾಜಕೀಯ, ಧಾರ್ಮಿಕ ಕಾರ್ಯಕ್ರಮಕ್ಕೆ 500 ಮಂದಿಗೆ ಅವಕಾಶ ➤ ನಿಯಮ ಉಲ್ಲಂಘನೆಯಾದಲ್ಲಿ 5ರಿಂದ 10 ಸಾವಿರದವರೆಗೆ ದಂಡ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 25. ಸಾರ್ವಜನಿಕ ಸ್ಥಳಗಳಲ್ಲಿ ಕೊರೋನಾ ನಿಯಮಾವಳಿಗಳನ್ನು ಪಾಲಿಸದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಕುರಿತು ಬುಧವಾರ ಹೊಸ ಅಧಿಸೂಚನೆ ಹೊರಡಿಸಲಾಗಿದೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದ್ದು, ಧಾರ್ಮಿಕ ಹಾಗೂ ರಾಜಕೀಯ ಸಮಾವೇಶಗಳಲ್ಲಿ ಮಾಸ್ಕ್ ಧರಿಸದಿದ್ದರೆ ಮತ್ತು ಅಂತರ ಕಾಪಾಡದಿದ್ದಲ್ಲಿ ಆಯೋಜಕರನ್ನೇ ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದೂ ತಿಳಿಸಿದೆ.   ಮಾಸ್ಕ್ ಧರಿಸದವರ ಮತ್ತು ಅಂತರ ಕಾಪಾಡದವರ ವಿರುದ್ಧ ಬಿಬಿಎಂಪಿ ಮತ್ತು ನಗರಸಭೆ ವ್ಯಾಪ್ತಿಯಲ್ಲಿ 250ರೂ. ಹಾಗೂ ಇತರ ಪ್ರದೇಶಗಳಲ್ಲಿ

ಮುಂದುವರಿದ ಕೊರೋನಾ ಎರಡನೇ ಅಲೆ- ಸರಕಾರದಿಂದ ಹೊಸ ಮಾರ್ಗಸೂಚಿ ಪ್ರಕಟ ➤ ಮದುವೆಗೆ 200 ಹಾಗೂ ರಾಜಕೀಯ, ಧಾರ್ಮಿಕ ಕಾರ್ಯಕ್ರಮಕ್ಕೆ 500 ಮಂದಿಗೆ ಅವಕಾಶ ➤ ನಿಯಮ ಉಲ್ಲಂಘನೆಯಾದಲ್ಲಿ 5ರಿಂದ 10 ಸಾವಿರದವರೆಗೆ ದಂಡ Read More »

ಕರ್ನಾಟಕ

?? ಮಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡರ ಪುತ್ರನ ಮನೆಗೆ ನುಗ್ಗಿದ ಕಳ್ಳರು ➤ ಸುಮಾರು 75 ಪವನ್ ಹಾಗೂ ಐದು ಲಕ್ಷ ರೂ ನಗದು ಕಳವು

(ನ್ಯೂಸ್ ಕಡಬ) newskadaba.com ಕೊಣಾಜೆ, ಮಾ. 25. ಇಲ್ಲಿನ ಮಂಗಳೂರು ವಿವಿ ಕ್ಯಾಂಪಸ್ ಬಳಿಯಿರುವ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಅಪಾರ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳವುಗೈದು ಪರಾರಿಯಾಗಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.     ಹಿರಿಯ ಕಾಂಗ್ರೆಸ್ ಮುಖಂಡ ಕೋಡಿಜಾಲ್ ಇಬ್ರಾಹಿಂ ಅವರ ಪುತ್ರ ಹಬೀಬ್ ಎಂಬವರ ಮನೆಯಲ್ಲಿ ಈ ಕೃತ್ಯ ನಡೆದಿದ್ದು, ಹಬೀಬ್ ಹಾಗೂ ಅವರ ಕುಟುಂಬ ಮನೆಯೊಳಗೆ ಇದ್ದಾಗಲೇ ರಾತ್ರಿ ವೇಳೆ ಕಳ್ಳತನ ನಡೆಸಿದ್ದಾರೆ. ಮನೆಯ ಮಹಡಿಯ ಬಾಗಿಲು ಮುರಿದು ಒಳನುಗ್ಗಿರುವ

?? ಮಂಗಳೂರು: ಕಾಂಗ್ರೆಸ್ ಹಿರಿಯ ಮುಖಂಡರ ಪುತ್ರನ ಮನೆಗೆ ನುಗ್ಗಿದ ಕಳ್ಳರು ➤ ಸುಮಾರು 75 ಪವನ್ ಹಾಗೂ ಐದು ಲಕ್ಷ ರೂ ನಗದು ಕಳವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಪುತ್ತೂರು: ಪೊಲೀಸ್ ಠಾಣೆಯ 50 ಮೀಟರ್ ಅಂತರದಲ್ಲಿರುವ 4 ಚಿನ್ನಾಭರಣಗಳ ಅಂಗಡಿಗಳಿಂದ ಕಳ್ಳತನ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 25. ಇಲ್ಲಿನ 4 ಚಿನ್ನಾಭರಣ ಮಳಿಗೆಗಳಿಗೆ ಕಳ್ಳರು ನುಗ್ಗಿ ಚಿನ್ನಾಭರಣ ಕಳವು ಮಾಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.     ಇಲ್ಲಿನ ಪೊಲೀಸ್ ಠಾಣೆಯ ಸಮೀಪವಿರುವ ಶ್ರೀಧರ್ ಭಟ್ ಅಂಗಡಿ, ಕೋರ್ಟ್ ರಸ್ತೆಯಲ್ಲಿನ ಶ್ರೀ ನವಮಿ ಜ್ಯುವೆಲ್ಲರ್ಸ್, ಕೋರ್ಟ್ ರಸ್ತೆಯಲ್ಲಿನ ಶೃತಿ ಜ್ಯುವೆಲ್ಲರ್ಸ್ ಮತ್ತು ಹಿರಣ್ಯ ಮೆಷಿನ್‌ ಕಟ್ಟಿಂಗ್ ಗೆ ನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದಿದ್ದಾರೆ. ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

? ಪುತ್ತೂರು: ಪೊಲೀಸ್ ಠಾಣೆಯ 50 ಮೀಟರ್ ಅಂತರದಲ್ಲಿರುವ 4 ಚಿನ್ನಾಭರಣಗಳ ಅಂಗಡಿಗಳಿಂದ ಕಳ್ಳತನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top