ಕರ್ನಾಟಕ

ದಂಡ ಹಾಕಲು ತೆರಳಿದ ಪೊಲೀಸರ ತಲೆದಂಡ | ಹಿಗ್ಗಾಮುಗ್ಗ ಥಳಿಸಿದ ಸಾರ್ವಜನಿಕರು ➤ ವೀಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಮೈಸೂರು, ಮಾ.22. ಪೊಲೀಸರು ನಿಲ್ಲಿಸಲು ಸೂಚಿಸಿದರೂ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ ಬೈಕ್‌ ಸವಾರನಿಗೆ ಸಂಚಾರ ಪೊಲೀಸರು ಲಾಠಿಯಲ್ಲಿ ಹೊಡೆದ ಪರಿಣಾಮ ಬೈಕ್‌ ಸವಾರ ಕೆಳಗೆ ಬಿದ್ದಿದ್ದು, ಈ ವಲೆ ಹಿಂಬದಿಯಿಂದ ಬಂದ ಲಾರಿಯು ಸವಾರನ ಹರಿದು ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ನಗರದ ಹಿನಕಲ್‌ ರಿಂಗ್‌ ರಸ್ತೆಯಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಬಂದ ಬೈಕನ್ನು ನಿಲ್ಲಿಸಲು ಸೂಚಿಸಿದರೂ ಬೈಕ್ ಸವಾರ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದಾರೆ ಎನ್ನಲಾಗಿದೆ. ತಕ್ಷಣವೇ […]

ದಂಡ ಹಾಕಲು ತೆರಳಿದ ಪೊಲೀಸರ ತಲೆದಂಡ | ಹಿಗ್ಗಾಮುಗ್ಗ ಥಳಿಸಿದ ಸಾರ್ವಜನಿಕರು ➤ ವೀಡಿಯೋ ವೈರಲ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಲಾಕ್‍ಡೌನ್, ನೈಟ್‍ ಕರ್ಫ್ಯೂ ಸದ್ಯಕ್ಕಿಲ್ಲ | ಕೊರೋನಾ ತಡೆಗೆ ಕಠಿಣ ಕ್ರಮ ➤ ಸಭೆ, ಸಮಾರಂಭಗಳಿಗೆ ಜಿಲ್ಲಾಧಿಕಾರಿಯ ಅನುಮತಿ ಕಡ್ಡಾಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.22. ಕೋವಿಡ್-19 ಸೋಂಕಿನ ಎರಡನೇ ಅಲೆಯನ್ನು ನಿಯಂತ್ರಿಸಲು ರಾಜ್ಯದಲ್ಲಿ ಲಾಕ್‍ಡೌನ್ ಅಥವಾ ನೈಟ್‍ ಕರ್ಫ್ಯೂ ಹೇರಲಾಗುತ್ತದೆ ಎಂಬ ಆತಂಕ ಎದುರಾಗಿತ್ತಾದರೂ, ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಯಾವುದೇ ತೀರ್ಮಾನವಾಗಿಲ್ಲ. ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ, ಕೊರೋನ ಎರಡನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸೋಂಕಿನ ನಿಯಂತ್ರಣ ಸಂಬಂಧ ಚರ್ಚೆ ನಡೆಸಲಾಯಿತು. ಕೊರೋನಾ ಮಾರ್ಗಸೂಚಿಗಳನ್ನು ಪಾಲಿಸಲು ಜನ ಜಾಗೃತಿ ಹಾಗೂ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ

ರಾಜ್ಯದಲ್ಲಿ ಲಾಕ್‍ಡೌನ್, ನೈಟ್‍ ಕರ್ಫ್ಯೂ ಸದ್ಯಕ್ಕಿಲ್ಲ | ಕೊರೋನಾ ತಡೆಗೆ ಕಠಿಣ ಕ್ರಮ ➤ ಸಭೆ, ಸಮಾರಂಭಗಳಿಗೆ ಜಿಲ್ಲಾಧಿಕಾರಿಯ ಅನುಮತಿ ಕಡ್ಡಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಳ್ಳಾಲ: ಬಸ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ➤ ಸ್ಕೂಟರ್ ಸವಾರನಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಉಳ್ಳಾಲ, ಮಾ. 22. ಬಸ್ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಟಯರ್ ಅಂಗಡಿ ಮಾಲೀಕ ಗಂಭಿರ ಗಾಯಗೊಂಡಿರುವ ಘಟನೆ ತಲಪಾಡಿ ಬಳಿ ಸಂಭವಿಸಿದೆ.   ಗಂಭೀರ ಗಾಯಗೊಂಡವರನ್ನು ಸ್ಕೂಟರ್ ಸವಾರ ಉದ್ಯಾವರ ಮಾಡ ನಿವಾಸಿ ತುಳಸಿ (35) ಎಂದು ಗುರುತಿಸಲಾಗಿದೆ. ಇವರು ತಲಪಾಡಿಯಲ್ಲಿ ಟಯರ್ ಅಂಗಡಿ ಹೊಂದಿದ್ದು, ಮನೆಯಿಂದ ಸ್ಕೂಟರಿನಲ್ಲಿ ಅಂಗಡಿಗೆ ಬರುತ್ತಿದ್ದ ಸಂದರ್ಭ ಡಿವೈಡರ್ ಬಳಿ ಸ್ಕೂಟರ್ ತಿರುಗಿಸುತ್ತಿದ್ದ ವೇಳೆ ಮಂಗಳೂರಿನಿಂದ ಕಾಸರಗೋಡಿಗೆ ತೆರಳುತ್ತಿದ್ದ ಕರ್ನಾಟಕ ಸಾರಿಗೆ ಬಸ್

ಉಳ್ಳಾಲ: ಬಸ್ ಹಾಗೂ ಸ್ಕೂಟರ್ ನಡುವೆ ಢಿಕ್ಕಿ ➤ ಸ್ಕೂಟರ್ ಸವಾರನಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಧರ್ಮಸ್ಥಳ: ನಿಡ್ಲೆ ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ಬಾಲಕಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 22. ಧರ್ಮಸ್ಥಳಕ್ಕೆ ಹೆತ್ತವರೊಂದಿಗೆ ಆಗಮಿಸಿದ್ದ ಬಾಲಕಿಯೋರ್ವಳು ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಕಾಲು ಜಾರಿ ನದಿಗೆ ಬಿದ್ದು ಮೃತಪಟ್ಟ ಘಟನೆ ನಿಡ್ಲೆ ಎಂಬಲ್ಲಿ ನಡೆದಿದೆ.   ಮೃತಳನ್ನು ಮಾನಸ (15) ಎಂದು ಗುರುತಿಸಲಾಗಿದೆ. ಬೆಂಗಳೂರಿನ ನಂದಿನಿ‌ ಲೇಔಟ್ ನಿವಾಸಿಗಳಾದ ದೇವಯ್ಯ ಸ್ವಾಮಿ ಕುಟುಂಬಸ್ಥರು ಧರ್ಮಸ್ಥಳಕ್ಕೆ ಆಗಮಿಸಿದ್ದರು. ದೇಶದ ದೇವಸ್ಥಾನದಲ್ಲಿ ಹರಕೆ ಮುಡಿ ಒಪ್ಪಿಸಿ ಬಳಿಕ ಸ್ನಾನಕ್ಕೆಂದು ನೇತ್ರಾವತಿ ನದಿ ಘಟ್ಟಕ್ಕೆ ತೆರಳಿದ್ದು, ಅಲ್ಲಿ ಜನಸಂದಣಿ ಹೆಚ್ಚಿದ್ದರಿಂದ ನಿಡ್ಲೆ ಕುದ್ರಾಯ ಸಮೀಪದ

ಧರ್ಮಸ್ಥಳ: ನಿಡ್ಲೆ ನದಿಯಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಕಾಲು ಜಾರಿ ಬಿದ್ದು ಬಾಲಕಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ರುಂಡ ಕತ್ತರಿಸಿ ಬಿಜೆಪಿ ಕಾರ್ಯಕರ್ತನ ಕೊಲೆ ➤ ಮೃತದೇಹದ ಮೇಲೆ ವಾಹನ ಚಲಾಯಿಸಿ ಅಪಘಾತವೆಂದು ಬಿಂಬಿಸಲು ಯತ್ನ

(ನ್ಯೂಸ್ ಕಡಬ) newskadaba.com ಕಲಬುರಗಿ, ಮಾ. 22. ಕೆಲಸ‌ ಮುಗಿಸಿ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದ ಬಿಜೆಪಿ ಕಾರ್ಯಕರ್ತನೋರ್ವನನ್ನು ರುಂಡ ಕತ್ತರಿಸಿ ಹತ್ಯೆಗೈದಿರುವ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ಯಾತನೂರು ಎಂಬಲ್ಲಿ ನಡೆದಿದೆ.   ಹತ್ಯೆಗೀಡಾದವರನ್ನು ಸಂಗನಗೌಡ ನಿಂಗನಗೌಡ ಪಾಟೀಲ (32 ವರ್ಷ) ಎಂದು ಗುರುತಿಸಲಾಗಿದೆ. ಈತ ದಿನನಿತ್ಯದಂತೆ ಕೆಲಸ‌ಮುಗಿಸಿ ತನ್ನ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಊರಿನ ಹೊರ ಭಾಗದಲ್ಲಿ ಮೂರು ಬೈಕಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಸಂಗನ ಗೌಡನ ರುಂಡ ಕತ್ತರಿಸಿ, ಬಳಿಕ ಮೃತದೇಹದ ಮೇಲೆ

? ರುಂಡ ಕತ್ತರಿಸಿ ಬಿಜೆಪಿ ಕಾರ್ಯಕರ್ತನ ಕೊಲೆ ➤ ಮೃತದೇಹದ ಮೇಲೆ ವಾಹನ ಚಲಾಯಿಸಿ ಅಪಘಾತವೆಂದು ಬಿಂಬಿಸಲು ಯತ್ನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಬೈಕ್ ಸ್ಕಿಡ್ ಆಗಿ ಓರ್ವ ವಿದ್ಯಾರ್ಥಿ ಮೃತ್ಯು- ಮತ್ತೋರ್ವ ಗಂಭೀರ

(ನ್ಯೂಸ್ ಕಡಬ) newskadaba.com ಪುತ್ತೂರು, ಮಾ. 22. ಬೈಕ್ ಸ್ಕಿಡ್ ಆದ ಪರಿಣಾಮ ಕಾಲೇಜ್ ವಿದ್ಯಾರ್ಥಿಯೋರ್ವ ದಾರುಣವಾಗಿ ಮೃತಪಟ್ಟು, ಮತ್ತೋರ್ವ ವಿದ್ಯಾರ್ಥಿ ಗಂಭೀರ ಗಾಯಗೊಂಡ ಘಟನೆ ಕಾಣಿಯೂರು – ಪುತ್ತೂರು ರಸ್ತೆಯ ಮಾಂತೂರು ಎಂಬಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಮೃತರನ್ನು ಕೊಡಗು ಜಿಲ್ಲೆಯ ಸೋಮವಾರ ಪೇಟೆ ನಿವಾಸಿ ಚೇತನ್ ಎಂದು ಗುರುತಿಸಲಾಗಿದೆ. ಅವರ ಸ್ನೇಹಿತ ಬೆಳ್ಳಾರೆ ನಿವಾಸಿ ಸುದೀಪ್ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೇತನ್ ಅವರು ಪುತ್ತೂರು ಪಿಜಿಯಲ್ಲಿದ್ದು ಭಾನುವಾರದಂದು ಮಾಣಿ ಸಾದಿಕುಕ್ಕು ಜಾತ್ರೆಗೆ

ಪುತ್ತೂರು: ಬೈಕ್ ಸ್ಕಿಡ್ ಆಗಿ ಓರ್ವ ವಿದ್ಯಾರ್ಥಿ ಮೃತ್ಯು- ಮತ್ತೋರ್ವ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸಿಡಿ ಲೇಡಿ ಜೊತೆ ನಾಲ್ಕು ತಿಂಗಳಿನಿಂದ ಸಂಪರ್ಕದಲ್ಲಿದ್ದ ಮತ್ತೋರ್ವ ಬಿಜೆಪಿ ಶಾಸಕ ➤ ಎಸ್ಐಟಿ ಅಧಿಕಾರಿಗಳಿಗೆ ಸಿಕ್ಕಿತು ಸ್ಫೋಟಕ ಮಾಹಿತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.22. ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಪ್ರಮುಖ ಸುದ್ದಿ ಹೊರಬಿದ್ದಿದೆ. ಸಿಡಿ ಲೇಡಿಯ ಜೊತೆಯಲ್ಲಿ ಉತ್ತರ ಕರ್ನಾಟಕ ಮೂಲದ ಬಿಜೆಪಿ ಶಾಸಕರೊಬ್ಬರು ಕಳೆದ 4 ತಿಂಗಳುಗಳಿಂದ ಸಂಪರ್ಕದಲ್ಲಿದ್ದರು ಎಂಬ ಸ್ಫೋಟಕ ವಿಚಾರ ಹೊರಬಂದಿದೆ. ಯುವತಿಯ ಮೊಬೈಲ್ ಕಾಲ್ ಲಿಸ್ಟ್ (ಸಿಡಿಆರ್‌) ಶೋಧಿಸಿದ ಎಸ್ಐಟಿ ಅಧಿಕಾರಿಗಳಿಗೆ ಈ ಮಹತ್ವದ ಸುದ್ದಿ ತಿಳಿದುಬಂದಿದ್ದು, ಯುವತಿಯಿಂದ ಶಾಸಕರ ಮೊಬೈಲ್‌ಗೆ ನಿರಂತರವಾಗಿ ಕರೆಗಳು ಹೋಗಿರುವುದು ಪತ್ತೆಯಾಗಿದೆ. ಜಾರಕಿಹೊಳಿ ಅವರ ರಾಜಕೀಯ ವಿರೋಧಿ

ಸಿಡಿ ಲೇಡಿ ಜೊತೆ ನಾಲ್ಕು ತಿಂಗಳಿನಿಂದ ಸಂಪರ್ಕದಲ್ಲಿದ್ದ ಮತ್ತೋರ್ವ ಬಿಜೆಪಿ ಶಾಸಕ ➤ ಎಸ್ಐಟಿ ಅಧಿಕಾರಿಗಳಿಗೆ ಸಿಕ್ಕಿತು ಸ್ಫೋಟಕ ಮಾಹಿತಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೆಟ್ರೋಲ್, ಗ್ಯಾಸ್ ಜೊತೆಗೆ ದುಬಾರಿಯಾದ ಅಡುಗೆ ಎಣ್ಣೆ ➤ ಜನಸಾಮಾನ್ಯರಿಗೆ ಗಾಯದ ಮೇಲೆ ಮತ್ತೆ ಬರೆ‌

(ನ್ಯೂಸ್ ಕಡಬ) newskadaba.com ನವದೆಹಲಿ, ಮಾ.22. ಪೆಟ್ರೋಲ್, ಡೀಸೆಲ್ ಬೆಲೆ ಮುಗಿಲೆತ್ತರಕ್ಕೆ ಏರಿರುವುದರ ನಡುವೆಯೇ ಇದೀಗ ದಿನಬಳಕೆಯ ವಸ್ತುಗಳ ಬೆಲೆ ಗಗನಕ್ಕೇರುತ್ತಿರುವುದು ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಗ್ಯಾಸ್ ಸಿಲಿಂಡರ್ ದರ ಕಳೆದೆರಡು ತಿಂಗಳ ಅವಧಿಯಲ್ಲೇ ಗರಿಷ್ಠ ಬೆಲೆಯಲ್ಲಿ ನೆಲೆ ನಿಂತಿದ್ದು, ಅಡುಗೆ ಎಣ್ಣೆ ದರ ಕೂಡ ಭಾರೀ ಏರಿಕೆಯಾಗಿದೆ. ಪಾಮ್ ಆಯಿಲ್, ಸನ್ ಫ್ಲವರ್, ಶೇಂಗಾ ಎಣ್ಣೆ ಬೆಲೆಯಲ್ಲಿ ದಿಢೀರ್ ಏರಿಕೆ ಕಂಡಿದೆ. ಶೇಂಗಾ ಎಣ್ಣೆ 160 ರೂಪಾಯಿಂದ 200 ರೂಪಾಯಿಗೆ ಹೆಚ್ಚಳವಾದರೆ, ಸನ್

ಪೆಟ್ರೋಲ್, ಗ್ಯಾಸ್ ಜೊತೆಗೆ ದುಬಾರಿಯಾದ ಅಡುಗೆ ಎಣ್ಣೆ ➤ ಜನಸಾಮಾನ್ಯರಿಗೆ ಗಾಯದ ಮೇಲೆ ಮತ್ತೆ ಬರೆ‌ Read More »

ಅಡುಗೆ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಲೈಫ್‍ಸ್ಟೈಲ್

ಅರಂತೋಡು: ಕಬಡ್ಡಿ ಪಂದ್ಯಾಟ- ಸಮಾರೋಪ ಸಮಾರಂಭ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 22. ಕ್ಲಾಸಿಕ್ ಅರಂತೋಡು ಇದರ ಅಶ್ರಯದಲ್ಲಿ ಪ್ರಥಮ ವರ್ಷದ 60 ಕೆ.ಜಿ ವಿಭಾಗದ ಪುರುಷರ ಸೂರ್ಯ ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾಟದ ಸಮಾರೋಪ ಸಮಾರಂಭವು ಭಾನುವಾರದಂದು ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಿತು. ಇದರ ಅಧ್ಯಕ್ಷತೆಯನ್ನು ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅಗಮಿಸಿ ಮಾತನಾಡಿದ ಕರ್ನಾಟಕ ರಾಜ್ಯ ಮೊಗೇರ ಸಂಘದ ಗೌರವಾಧ್ಯಕ್ಷರಾದ ಡಾ.ಬಿ.ರಘು

ಅರಂತೋಡು: ಕಬಡ್ಡಿ ಪಂದ್ಯಾಟ- ಸಮಾರೋಪ ಸಮಾರಂಭ Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್

ಪಂಪ್‌ವೆಲ್ ಫ್ಲೈಓವರ್ ನಲ್ಲಿ ಉರುಳಿದ ಕಾರು ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ.21. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ಭಾನುವಾರ ಸಂಜೆ ಪಂಪ್‌ವೆಲ್ ಮೇಲ್ಸೇತುವೆಯಲ್ಲಿ ನಡೆದಿದೆ. ನಂತೂರು ಕಡೆಯಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಪಂಪ್‌ವೆಲ್ ಮೇಲ್ಸೇತುವೆಯಲ್ಲಿ ಪಲ್ಟಿಯಾಗಿದೆ. ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಮಂಗಳೂರು ದಕ್ಷಿಣ ಸಂಚಾರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.      

ಪಂಪ್‌ವೆಲ್ ಫ್ಲೈಓವರ್ ನಲ್ಲಿ ಉರುಳಿದ ಕಾರು ➤ ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top