ಕರ್ನಾಟಕ

ಬಸ್ಸಿನಲ್ಲಿ ಯುವತಿಯ ಮೈ ಮುಟ್ಟಿದವನಿಗೆ ಬಿತ್ತು ಧರ್ಮದೇಟು ➤ ಸಾರ್ವಜನಿಕರ ಎದುರೇ ರುಬ್ಬಿದ ಯುವತಿ

(ನ್ಯೂಸ್ ಕಡಬ) newskadaba.com ಹಾಸನ, ಮಾ.21. ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಅಸಭ್ಯವಾಗಿ ವರ್ತಿಸಿದಾತನಿಗೆ ಯುವತಿಯೋರ್ವಳು ಸಾರ್ವಜನಿಕವಾಗಿ ಹೊಡೆದಿರುವ ಘಟನೆ ಹಾಸನದ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೇಲೂರಿನಿಂದ ಹಾಸಕ್ಕೆ ತೆರಳುತ್ತಿದ್ದ ಬಸ್​ ಹತ್ತಿದ್ದ ವ್ಯಕ್ರಿಯೋರ್ವ ಪಕ್ಕದ ಸೀಟಿನಲ್ಲಿ ಕುಳಿತಿದ್ದ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಬಸ್ ಹಾಸನ ನಿಲ್ದಾಣ ತಲುಪುತ್ತಿದ್ದಂತೆ ಯುವತಿಯು ವ್ಯಕ್ತಿಯ ಮೇಲೆ ಮುಗಿಬಿದ್ದಿದ್ದು, ಸಾರ್ವಜನಿಕವಾಗಿ ಚೆನ್ನಾಗಿ ಬಾರಿಸಿದ್ದಾಳೆ. ಬಳಿಕ ಸ್ಥಳದಲ್ಲಿದ್ದ ಸಾರಿಗೆ ಇಲಾಖೆಯ ಅಧಿಕಾರಿಗಳು ಆರೋಪಿಯನ್ನು ಹಿಡಿದು ಹಾಸನ ಪೊಲೀಸರಿಗೆ ಒಪ್ಪಿಸಿದ್ದಾರೆ.    

ಬಸ್ಸಿನಲ್ಲಿ ಯುವತಿಯ ಮೈ ಮುಟ್ಟಿದವನಿಗೆ ಬಿತ್ತು ಧರ್ಮದೇಟು ➤ ಸಾರ್ವಜನಿಕರ ಎದುರೇ ರುಬ್ಬಿದ ಯುವತಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್..⁉️ ➤ ಗೃಹ ಸಚಿವ ಬೊಮ್ಮಾಯಿ ಹೇಳಿದ್ದು ಹೀಗೆ..‼️

(ನ್ಯೂಸ್ ಕಡಬ) newskadaba.com ಧಾರವಾಡ, ಮಾ.21. ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕು ಹೆಚ್ಚಾಗುತ್ತಿರುವುದರ ನಡುವೆಯೇ ಮತ್ತೆ ಲಾಕ್‍ಡೌನ್ ಘೋಷಿಸುವ ಸಂಬಂಧ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ಭಾನುವಾರದಂದು ಧಾರವಾಡದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೊರೋನಾ ಸೋಂಕು ನಿಯಂತ್ರಿಸಲು ಪರಿಣತರ ಸಮಿತಿಯು ಲಾಕ್‍ಡೌನ್ ಘೋಷಿಸುವಂತೆ ಶಿಫಾರಸು ಮಾಡಿದೆ. ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರೊಂದಿಗೆ ಸಮಾಲೋಚನೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸ್ಪಷ್ಟನೆ ನೀಡಿದರು.    

ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್..⁉️ ➤ ಗೃಹ ಸಚಿವ ಬೊಮ್ಮಾಯಿ ಹೇಳಿದ್ದು ಹೀಗೆ..‼️ Read More »

ಕರ್ನಾಟಕ

ತಿಂಗಳೊಳಗೆ ಸಿದ್ದರಾಮಯ್ಯ ಕಾಂಗ್ರೆಸ್ ಗೆ ಗುಡ್ ಬೈ..? ➤ ಸಂಚಲನ ಮೂಡಿಸಿದೆ ಈ ಪಕ್ಷದ ರಾಜ್ಯಾಧ್ಯಕ್ಷರ ಹೇಳಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.21. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಒಂದು ತಿಂಗಳಲ್ಲೇ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌ ಭವಿಷ್ಯ ನುಡಿದರು. ಬಿಜೆಪಿ ಪಕ್ಷದ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಗೆಲ್ಲುವ ಪಕ್ಷವಾಗಿದ್ದು, ಕಾಂಗ್ರೆಸ್‌ ಸೋಲಿನ ಪಕ್ಷವಾಗಿದೆ. ಕಾಂಗ್ರೆಸ್‌ ಒಳಜಗಳದ ಮಿತಿಮೀರಿದ್ದು, ಎಲ್ಲಿಯೂ ನಿಲ್ಲದ ಸಿದ್ದರಾಮಯ್ಯ ಅವರು ಈ ಹಿಂದೆ ಗುರುವಿಗೆ ತಿರುಮಂತ್ರ ಹಾಕಿ ಜೆಡಿಎಸ್‌ ಗೆ ಗುಡ್ ಬೈ ಹೇಳಿ ಕಾಂಗ್ರೆಸ್‌ ಸೇರಿದ್ದರು. ಇದೀಗ

ತಿಂಗಳೊಳಗೆ ಸಿದ್ದರಾಮಯ್ಯ ಕಾಂಗ್ರೆಸ್ ಗೆ ಗುಡ್ ಬೈ..? ➤ ಸಂಚಲನ ಮೂಡಿಸಿದೆ ಈ ಪಕ್ಷದ ರಾಜ್ಯಾಧ್ಯಕ್ಷರ ಹೇಳಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ಯದಲ್ಲಿ ದಿನೇದಿನೇ ಏರಿಕೆಯತ್ತ ಕೊರೋನಾ ಸೋಂಕು ➤ ಸಾರ್ವಜನಿಕರು ಎಚ್ಚೆತ್ತುಕೊಳ್ಳುವಂತೆ ಡಾ| ಸುಧಾಕರ್ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.21. ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ದಿನೇದಿನೇ ಹೆಚ್ಚುತ್ತಿದ್ದು, ಜನಸಾಮಾನ್ಯರು ಎಚ್ಚೆತ್ತುಕೊಂಡು ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ಸಭೆ, ಸಮಾರಂಭಗಳನ್ನು ಕಡಿಮೆಗೊಳಿಸುವಂತೆ ಸೂಚಿಸಿದ ಅವರು ಕೊರೋನಾ ಸೋಂಕು ಯಾರಿಗೂ ರಿಯಾಯಿತಿ ನೀಡಲ್ಲ. ಸಾರ್ವಜನಿಕರು ಈ ಬಗ್ಗೆ ಎಚ್ಚರಿಕೆಯಿಂದಿದ್ದು ಅನಗತ್ಯ ಓಡಾಟದಿಂದ ದೂರವಿರಬೇಕು. ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಕರೆ ನೀಡಿದರು.      

ರಾಜ್ಯದಲ್ಲಿ ದಿನೇದಿನೇ ಏರಿಕೆಯತ್ತ ಕೊರೋನಾ ಸೋಂಕು ➤ ಸಾರ್ವಜನಿಕರು ಎಚ್ಚೆತ್ತುಕೊಳ್ಳುವಂತೆ ಡಾ| ಸುಧಾಕರ್ ಸೂಚನೆ Read More »

ಕರ್ನಾಟಕ

ಮಧ್ಯರಾತ್ರಿ ಮನೆಗೆ ನುಗ್ಗಿ ಅರಣ್ಯಾಧಿಕಾರಿಗಳಿಂದ ದಾಂಧಲೆ ಆರೋಪ ➤ ಅರಣ್ಯಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ

ಕಡಬ, ಮಾ.20. ಸುಬ್ರಹ್ಮಣ್ಯ ವಲಯದ ಐತ್ತೂರು ರಕ್ಷಿತಾರಣ್ಯದಿಂದ ಬೆಲೆ ಬಾಳುವ ಮರಗಳ ಲೂಟಿಯಾಗುತ್ತಿದೆ ಎಂದು ದೂರು ನೀಡಿದ ಐತ್ತೂರು ಗ್ರಾಮದ ಮೂಜೂರು ನಿವಾಸಿ ಪ್ರಸಾದ್ ಎಂಬವರ ಮನೆಗೆ ಅರಣ್ಯಾಧಿಕಾರಿಗಳು ನಡು ರಾತ್ರಿ ದಾಳಿ ನೆಪದಲ್ಲಿ ದಾಂಧಲೆ ನಡೆಸಿ ದ್ವೇಷ ಸಾಧನೆ ಮಾಡಿದ್ದಾರೆ ಎಂದು ಹೇಳಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರಣ್ಯಾಧಿಕಾರಿಗಳು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಅಗ್ರಹಿಸಿ ದೂರುದಾರ ಮನೆಯವರು ಹಾಗೂ ನೀತಿ ತಂಡದವರು ಕಳೆದ ಆರು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು, ಇದುವರೆಗೆ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ

ಮಧ್ಯರಾತ್ರಿ ಮನೆಗೆ ನುಗ್ಗಿ ಅರಣ್ಯಾಧಿಕಾರಿಗಳಿಂದ ದಾಂಧಲೆ ಆರೋಪ ➤ ಅರಣ್ಯಾಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ Read More »

ಕರ್ನಾಟಕ

ಬಂಟ್ವಾಳ: ಜ್ಯೋತಿಷಿಗೆ ಚೂರಿಯಿಂದ ಇರಿದು ದುಷ್ಕರ್ಮಿಗಳು ಪರಾರಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ. 20. ಜ್ಯೋತಿಷಿಯೋರ್ವರಿಗೆ ದುಷ್ಕರ್ಮಿಗಳು ಚೂರಿಯಿಂದ ಇರಿದು ಪರಾರಿಯಾದ ಘಟನೆ ಬಿ.ಸಿ ರೋಡಿನಲ್ಲಿ ನಡೆದಿದೆ. ಚೂರಿ ಇರಿತಕ್ಕೊಳಗಾದವರನ್ನು ಪಂಡಿತ್ ಲಕ್ಷ್ಮೀಕಾಂತ್ ಭಟ್ ಎಂದು ಗುರುತಿಸಲಾಗಿದೆ. ಜ್ಯೋತಿಷಿಯ ಬಳಿ ಬಂದ ಇಬ್ಬರು ವ್ಯಕ್ತಿಗಳು ಯಾವುದೋ ದ್ವೇಷದಿಂದಾಗಿ ಚೂರಿಯಿಂದ ಇರಿದು ಬಾಗಿಲು ಹಾಕಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಘಟನೆಯಿಂದ ಮೂರ್ಛೆ ಹೋಗಿದ್ದ ಪಂಡಿತ್ ಅವರು ಸ್ವಲ್ಪ ಸಮಯದ ನಂತರ ಎಚ್ಚರಗೊಂಡು, ಬಳಿಕ ಅವರೇ ಎದ್ದು ಕೋಣೆಯಿಂದ ಹೊರಬಂದಿದ್ದಾರೆ. ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದ ಪಂಡಿತ್ ಅವರನ್ನು ಕಂಡ

ಬಂಟ್ವಾಳ: ಜ್ಯೋತಿಷಿಗೆ ಚೂರಿಯಿಂದ ಇರಿದು ದುಷ್ಕರ್ಮಿಗಳು ಪರಾರಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಂತರ್ರಾಷ್ಟ್ರೀಯ ಮಾನವ ಹಕ್ಕುಗಳ ರಾಯಭಾರಿ ಅಯೋಗದ ಜಿಲ್ಲಾಧ್ಯಕ್ಷರಾಗಿ ರಿಯಾಝ್ ಕಲ್ಲುಗುಂಡಿ ನೇಮಕ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 20. ಅಂತರ್ರಾಷ್ಟ್ರೀಯ ಮಾನವ ಹಕ್ಕುಗಳ ರಾಯಭಾರಿ ಆಯೋಗದ ಜಿಲ್ಲಾಧ್ಯಕ್ಷರಾಗಿ ಸಂಪಾಜೆ ಗ್ರಾಮದ ಕಲ್ಲುಂಗುಂಡಿಯ ರಿಯಾಝ್ ರವರನ್ನು ಮಾನವ ಹಕ್ಕುಗಳ ಅಯೋಗದ ಜಿಲ್ಲಾಧ್ಯಕ್ಷರಾದ ಮಹಮ್ಮದ್ ಇಕ್ಬಾಲ್ ಪೆರಿಗೇರಿಯವರ ಶಿಫಾರಸ್ಸು ಮೇರೆಗೆ ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಅಯೋಗದ ರಾಷ್ಟ್ರೀಯ ನಾಯಕರಾದ ಡಾ.ಅವಿನಾಶ್ ಸಕುಂದೆರವರು ನೇಮಕ ಗೊಳಿಸಿದರು. ಇವರು ಸಂಪಾಜೆ ಗ್ರಾಮದ ಪೇರಡ್ಕ ಮುಹಿಯದ್ದೀನ್ ಜುಮ್ಮಾಮಸೀದಿ ಅಧ್ಯಕ್ಷರಾದ ಎಸ್.ಅಲಿ ಹಾಜಿಯವರ ಸುಪುತ್ರ.  

ಅಂತರ್ರಾಷ್ಟ್ರೀಯ ಮಾನವ ಹಕ್ಕುಗಳ ರಾಯಭಾರಿ ಅಯೋಗದ ಜಿಲ್ಲಾಧ್ಯಕ್ಷರಾಗಿ ರಿಯಾಝ್ ಕಲ್ಲುಗುಂಡಿ ನೇಮಕ Read More »

ಕರಾವಳಿ, ಕರ್ನಾಟಕ

ಬೆಂಗಳೂರಿನ ಅಪ್ರಾಪ್ತ ಬಾಲಕಿ ಪ್ರಿಯಕರನೊಂದಿಗೆ ಕಡಬದಲ್ಲಿ ಪತ್ತೆ ➤ ಜೋಡಿಯನ್ನು ಕರೆದೊಯ್ದ ಶ್ರೀರಾಂಪುರ ಪೊಲೀಸರು

(ನ್ಯೂಸ್ ಕಡಬ) newskadaba.com ಕಡಬ, ಮಾ.20. ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಯುವತಿಯೋರ್ವಳು ಕಡಬ ಠಾಣಾ ವ್ಯಾಪ್ತಿಯ ಕೊಂಬಾರು ಗ್ರಾಮದ ಕೆಂಜಾಳದಲ್ಲಿ ತನ್ನ ಪ್ರಿಯಕರನೊಂದಿಗೆ ಪತ್ತೆಯಾಗಿದ್ದಾಳೆ. ಬೆಂಗಳೂರಿನ ಶ್ರೀರಾಂಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕು| ಪುಷ್ಪ (16) ಎಂಬಾಕೆಯನ್ನು ಆಕೆಯ ಪ್ರಿಯಕರ ಬೆಂಗಳೂರು ನಿವಾಸಿ ಅನಿರುದ್ಧ್ ಅಪಹರಿಸಿರುವ ಬಗ್ಗೆ ಶ್ರೀರಾಂಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು‌. ಧರ್ಮಸ್ಥಳಕ್ಕೆ ಬಂದಿದ್ದ ಜೋಡಿಯು ಪಾದಯಾತ್ರೆಯ ಮೂಲಕ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ಕೊಂಬಾರು ಗ್ರಾಮದ ಕೆಂಜಾಳ ಎಂಬಲ್ಲಿ ಕಡಬ ಪೊಲೀಸರು ವಿಚಾರಣೆ ನಡೆಸಿ

ಬೆಂಗಳೂರಿನ ಅಪ್ರಾಪ್ತ ಬಾಲಕಿ ಪ್ರಿಯಕರನೊಂದಿಗೆ ಕಡಬದಲ್ಲಿ ಪತ್ತೆ ➤ ಜೋಡಿಯನ್ನು ಕರೆದೊಯ್ದ ಶ್ರೀರಾಂಪುರ ಪೊಲೀಸರು Read More »

ಕರ್ನಾಟಕ

ಕಡಬ: ಎ.ಕೆ. ಡಿಲಕ್ಸ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ ➤ ಸುಸಜ್ಜಿತ ಎಸಿ/ನಾನ್ ಎಸಿ ರೂಂಗಳು ಲಭ್ಯ

(ನ್ಯೂಸ್ ಕಡಬ) newskadaba.com ಕಡಬ, ಮಾ.19. ಇಲ್ಲಿನ ಪಂಜ ರಸ್ತೆಯಲ್ಲಿರುವ ಎ.ಕೆ.ಟವರ್ಸ್ ನಲ್ಲಿ ಕಡಬದಲ್ಲಿ ಮೊತ್ತ ಮೊದಲ ಬಾರಿಗೆ ಎ.ಕೆ. ಡಿಲಕ್ಸ್ ಬೋರ್ಡಿಂಗ್ ಮತ್ತು ಲಾಡ್ಜ್ಂಗ್, ಸರ್ವೀಸ್ ಅಪಾರ್ಮೆಂಟ್ ಮಾ.18ರಂದು ಶುಭಾರಂಭಗೊಂಡಿತು. ಸಂಸ್ಥೆಯಲ್ಲಿ ಬಹು|ಅಸ್ಸಯ್ಯದ್ ಝೈನುಲ್ ಅಬಿದೀನ್ ತಂಙಳ್ ಅಲ್ ಬುಖಾರಿ ಎಣ್ಮೂರು ಅವರು ಧಾರ್ಮಿಕ ವಿಧಿ ವಿಧಾನ ನೆರವೇರಿಸಿದರು. ಕಡಬ ಆರ್.ಜೆ.ಎಂ.ನ ಖತೀಬರಾದ ಅಲ್ಹಾಜ್ ಪಿ.ಎಂ. ಇಬ್ರಾಹಿಂ ದಾರಿಮಿ, ಕಡಬ ಕೇಂದ್ರ ಜುಮ್ಮಾ ಮಸೀದಿಯ ಖತೀಬರಾದ ಮಹಮ್ಮದ್ ಫಾರೂಕ್ ಹಿಮಮಿ ಸಖಾಫಿ ಉಪಸ್ಥಿತರಿದ್ದರು. ಬಳಿಕ ಲಾಡ್ಜಿಂಗನ್ನು

ಕಡಬ: ಎ.ಕೆ. ಡಿಲಕ್ಸ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ ➤ ಸುಸಜ್ಜಿತ ಎಸಿ/ನಾನ್ ಎಸಿ ರೂಂಗಳು ಲಭ್ಯ Read More »

ಕರ್ನಾಟಕ

“ಝೀರೋ ಡ್ರಾಪ್ ಔಟ್” ಅಭಿಯಾನದ ಭಾಗವಾಗಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ವತಿಯಿಂದ ತಾಲೂಕು ಶಿಕ್ಷಣಾಧಿಕಾರಿಯ ಭೇಟಿ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಮಾ. 19. ಸಮಾಜದಲ್ಲಿ ಯಾರೂ ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿಯು ‘ಉತ್ತಮ ಭವಿಷ್ಯಕ್ಕಾಗಿ ಕಾರ್ಯ ಪ್ರವೃತ್ತರಾಗೋಣ’ ಎಂಬ ಘೋಷಾ ವಾಕ್ಯದೊಂದಿಗೆ “ಝೀರೋ ಡ್ರಾಪ್ ಔಟ್” ಎಂಬ ಅಭಿಯಾನವನ್ನು ರಾಜ್ಯದಾದ್ಯಂತ ಹಮ್ಮಿಕೊಂಡಿದೆ. ಈ ಅಭಿಯಾನದಲ್ಲಿ ಶಿಕ್ಷಣ ಇಲಾಖೆಯೊಂದಿಗೆ ಸಮಾಲೋಚನೆ, ವಿದ್ಯಾರ್ಥಿಗಳ ಸಮಾಲೋಚನೆ, ಜಾಗೃತಿ ಕಾರ್ಯಕ್ರಮ, ಪೋಷಕರ ಸಭೆ, ಹೆಲ್ಪ್ ಡೆಸ್ಕ್ ಮುಂತಾದ ಕಾರ್ಯಕ್ರಮಗಳು ನಡೆಯಲಿದ್ದು, ಇದರ ಭಾಗವಾಗಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ವತಿಯಿಂದ ತಾಲೂಕು

“ಝೀರೋ ಡ್ರಾಪ್ ಔಟ್” ಅಭಿಯಾನದ ಭಾಗವಾಗಿ ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ವತಿಯಿಂದ ತಾಲೂಕು ಶಿಕ್ಷಣಾಧಿಕಾರಿಯ ಭೇಟಿ Read More »

ಕರಾವಳಿ, ಕರ್ನಾಟಕ
Scroll to Top