ಕರ್ನಾಟಕ

ಕಡಬ: ಶ್ರೀ ಗಣೇಶ್ ಮೆಡಿಕಲ್ಸ್ ಸರ್ಜಿಕಲ್, ವೆಟ್, ಪೆಟ್ ಶಾಪ್ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಫೆ. 21. ಇಲ್ಲಿನ   ಶ್ರೀರಾಮ ಟವರ್ಸ್ ನಲ್ಲಿ  ಕಳೆದ 15  ವರ್ಷಗಳಿಂದ ವ್ಯವಹರಿಸುತ್ತಿರುವ ಶ್ರೀ  ಗಣೇಶ್ ಮೆಡಿಕಲ್ಸ್ ನ ಸರ್ಜಿಕಲ್, ವೆಟ್ ಆ್ಯಂಡ್ ಪೆಟ್ ವಿಸ್ಕೃತ ಹವಾ ನಿಯಂತ್ರಿತ ಔಷಧಾಲಯವು ಶನಿವಾರದಂದು ಶುಭಾರಂಭಗೊಂಡಿತು. ಹಿರಿಯ ಕೃಷಿಕ ಬಿ.ಜಿ.ನಾರಾಯಣ ಭಟ್ ತೆಕ್ಕಡ್ಕ ಅವರು ದೀಪ ಬೆಳಗಿಸುವ ಮೂಲಕ ಮಳಿಗೆಯನ್ನು ಉದ್ಘಾಟಿಸಿದರು. ಕಟ್ಟಡದ ಮಾಲಕ ಶಿವರಾಮ ಶೆಟ್ಟಿ ಕೇಪು, ಕಡಬ ಎಸ್‌.ಐ ರುಕ್ಮ ನಾಯ್ಕ್, ಪ್ರಮುಖರಾದ ಕೃಷ್ಣ ಶೆಟ್ಟಿ ಕಡಬ, ಸೀತಾರಾಮ ಗೌಡ ಪೊಸವಳಿಕೆ, […]

ಕಡಬ: ಶ್ರೀ ಗಣೇಶ್ ಮೆಡಿಕಲ್ಸ್ ಸರ್ಜಿಕಲ್, ವೆಟ್, ಪೆಟ್ ಶಾಪ್ ಶುಭಾರಂಭ Read More »

ಕರಾವಳಿ, ಕರ್ನಾಟಕ

ದ.ಕ- ಕೇರಳ ಗಡಿ ಪ್ರವೇಶಕ್ಕೆ ನಾಲ್ಕು ಗಡಿಗಳ ಮೂಲಕ ಮಾತ್ರವೇ ಅವಕಾಶ ➤ ದ.ಕ ಜಿಲ್ಲಾಧಿಕಾರಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ 21. ನಾಳೆಯಿಂದ ಕೇರಳದಿಂದ ಜಿಲ್ಲೆಗೆ ಪ್ರವೇಶಿಸುವವರು ಕೇವಲ ನಾಲ್ಕು ಗಡಿ ಮಾರ್ಗಗಳ ಮುಖಾಂತರ ಮಾತ್ರ ಪ್ರವೇಶ ಮಾಡಬಹುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಕೇರಳದಲ್ಲಿ ಕೋವಿಡ್ 19 ಹೆಚ್ಚಾಗುತ್ತಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಮತ್ತೆ ಈ ನಿಯಮವನ್ನು ಜಾರಿಗೊಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರವೇಶಕ್ಕೆ ತಲಪಾಡಿ, ಸಾರಡ್ಕ, ಮೇನಾಲ ಮತ್ತು ಜಾಲ್ಸೂರು ಈ ನಾಲ್ಕು ಗಡಿಗಳನ್ನು ಹೊರತುಪಡಿಸಿ ಉಳಿದೆಲ್ಲಾ ಗಡಿಗಳು ನಾಳೆಯಿಂದ (ಫೆ.22) ಬಂದ್ ಆಗಿರಲಿದೆ

ದ.ಕ- ಕೇರಳ ಗಡಿ ಪ್ರವೇಶಕ್ಕೆ ನಾಲ್ಕು ಗಡಿಗಳ ಮೂಲಕ ಮಾತ್ರವೇ ಅವಕಾಶ ➤ ದ.ಕ ಜಿಲ್ಲಾಧಿಕಾರಿ ಆದೇಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ಅಟೋರಿಕ್ಷಾ ಹಾಗೂ ಆಂಬ್ಯುಲೆನ್ಸ್ ನಡುವೆ ಢಿಕ್ಕಿ ➤ ಅಟೋ ಚಾಲಕ ಗಂಭೀರ

(ನ್ಯೂಸ್ ಕಡಬ) newskadaba.com ಸುಳ್ಯ, ಫೆ. 21.‌ ಆಂಬುಲೆನ್ಸ್ ಹಾಗೂ ಆಟೋರಿಕ್ಷಾ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಹಳೆಗೇಟು ಮೊಗರ್ಪಣೆ ಸಮೀಪ ಭಾನುವಾರದಂದು ನಡೆದಿದೆ. ಗಾಯಾಳುವನ್ನು ಜಲೀಲ್ ಎಂದು ಗುರುತಿಸಲಾಗಿದೆ. ಮಂಗಳೂರು ಮೂಲದ ಗಣೇಶ್ ಹೆಸರಿನ ಆಂಬುಲೆನ್ಸ್ ವಾಹನವೊಂದು ಮಂಗಳೂರಿನಿಂದ ರೋಗಿಯೊಬ್ಬರನ್ನು ಮಡಿಕೇರಿಗೆ ಕೊಂಡೊಯ್ದು ಹಿಂತಿರುಗುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಆಟೋ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಆಟೋ ರಿಕ್ಷಾ ಸಂಪೂರ್ಣ ಜಖಂಗೊಂಡಿದ್ದು, ಅಟೋ ಚಾಲಕ

ಸುಳ್ಯ: ಅಟೋರಿಕ್ಷಾ ಹಾಗೂ ಆಂಬ್ಯುಲೆನ್ಸ್ ನಡುವೆ ಢಿಕ್ಕಿ ➤ ಅಟೋ ಚಾಲಕ ಗಂಭೀರ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೇಣು ಬಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬಾಗಲಕೋಟೆ, ಫೆ. 21. ಎಂಬಿಬಿಎಸ್ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆಯಲ್ಲಿ ‌ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವಳನ್ನು ಸಿಂಧೂರಿಕಾ (24) ಎಂದು ಗುರುತಿಸಲಾಗಿದೆ. ಈಕೆ ಮೆಡಿಕಲ್​ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ. ನಗರದ ಕುಮಾರೇಶ್ವರ ಆಸ್ಪತ್ರೆಯ ಸಮೀಪ ಬಾಡಿಗೆ ಮನೆಯೊಂದರಲ್ಲಿ ಪೋಷಕರೊಂದಿಗೆ ವಾಸವಾಗಿದ್ದ ಈಕೆ ಪೋಷಕರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ. ವಿದ್ಯಾರ್ಥಿನಿಯು ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು

ನೇಣು ಬಿಗಿದು ಎಂಬಿಬಿಎಸ್ ವಿದ್ಯಾರ್ಥಿನಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅರಂತೋಡು: ಕ್ರಿಕೆಟ್ ಪಂದ್ಯಾಟ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಅರಂತೋಡು, ಫೆ. 21. ಗರುಡ ಸ್ಪೋರ್ಟ್ ಕ್ಲಬ್ ವತಿಯಿಂದ 2ನೇ ವರ್ಷದ ಗರುಡ ಟ್ರೋಫಿ -2021 ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟವು ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಫೆ.21 ರಂದು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಂತೋಡು ಗ್ರಾಮ ಪಂಚಾಯತ್ ಸದಸ್ಯ ಶಿವಾನಂದ ಕುಕ್ಕುಂಬಳ ವಹಿಸಿದರು. ಸಭಾ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಲಿ ದೀಪ ಬೆಳಗಿಸಿ ಉದ್ಘಾಟಿಸಿದರು. ಕ್ರಿಕೆಟ್ ಅಂಗಣವನ್ನು ಅರಂತೋಡು ತೊಡಿಕಾನ ವ್ಯವಸಾಯ ಸಹಕಾರ ಸಂಘದ

ಅರಂತೋಡು: ಕ್ರಿಕೆಟ್ ಪಂದ್ಯಾಟ ಉದ್ಘಾಟನೆ Read More »

ಕರಾವಳಿ, ಕರ್ನಾಟಕ

? ಸೌದೆ ತರಲೆಂದು ತೋಟಕ್ಕೆ ತೆರಳಿದ್ದ ಬಾಲಕನನ್ನು ತಿಂದು ತೇಗಿದ ಹುಲಿ..!

(ನ್ಯೂಸ್ ಕಡಬ) newskadaba.com ಮಡಿಕೇರಿ, ಫೆ. 21. ಕಾಫುತೋಟಕ್ಕೆ ಸೌದೆ ತರಲೆಂದು ತೆರಳುತ್ತಿದ್ದ ಬಾಲಕನನ್ನು ಹುಲಿಯೊಂದು ಕೊಂದು ಹಾಕಿರುವ ಘಟನ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ ಎಂಬಲ್ಲಿ ನಡೆದಿದೆ. ಮೃತ ಬಾಲಕನನ್ನು 8ನೇ ತರಗತಿ ವಿದ್ಯಾರ್ಥಿ ಅಯ್ಯಪ್ಪ (14) ಎಂದು ಗುರುತಿಸಲಾಗಿದೆ. ಈತ ಕೋಟ್ರಂಗಡ ಅಶ್ವತ್ ಎಂಬವರ ಕಾಫಿ ತೋಟದಲ್ಲಿ ಸೌದೆಗಾಗಿ ತೆರಳುತ್ತಿದ್ದ ಸಂದರ್ಭ ಹುಲಿಯೊಂದು ಆತನ ಮೇಲೆರಗಿ ದಾಳಿ ನಡೆಸಿದೆ, ಪರಿಣಾಮ ಬಾಲಕ ದಾರುಣವಾಗಿ ಮೃತಪಟ್ಟಿದ್ದಾನೆ. ಕಳೆದ ಕೆಲ ಸಮಯಗಳಿಂದ ದ.ಕೊಡಗಿನಾದ್ಯಂತ ನಿರಂತರವಾಗಿ ಜಾನುವಾರುಗಳನ್ನು

? ಸೌದೆ ತರಲೆಂದು ತೋಟಕ್ಕೆ ತೆರಳಿದ್ದ ಬಾಲಕನನ್ನು ತಿಂದು ತೇಗಿದ ಹುಲಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಜಿರೆ: ಬೈಕ್ ಢಿಕ್ಕಿ ➤ ಪಾದಚಾರಿ ಮೃತ್ಯು

(ನ್ಯೂಸ್ ಕಡಬ) newskadaba.com ಉಜಿರೆ, ಫೆ. 21. ಬೈಕ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಮೃತಪಟ್ಟ ಘಟನೆ ಉಜಿರೆಯಲ್ಲಿ ನಡೆದಿದೆ. ಮೃತರನ್ನು ನಿವೃತ್ತ ಗ್ರಾಮಕರಣಿಕ ಚಂದ್ರಮೋಹನ್ ರೈ (80) ಎಂದು ಗುರುತಿಸಲಾಗಿದೆ. ಇವರು ಶನಿವಾರದಂದು ಸಂಜೆ ವೇಳೆ ವಾಕಿಂಗ್ ಹೋಗಿ ಮನೆಗೆ ಹಿಂತಿರುಗುತ್ತಿದ್ದ ಸಂದರ್ಭ ಬೈಕ್ ಢಿಕ್ಕಿ ಹೊಡೆದಿತ್ತು. ತಕ್ಷಣವೇ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಉಜಿರೆ: ಬೈಕ್ ಢಿಕ್ಕಿ ➤ ಪಾದಚಾರಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಅಂಗನವಾಡಿ ಕೇಂದ್ರದಲ್ಲಿ ಹೆಣ್ಣು ಶಿಶು ಪ್ರದರ್ಶನ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ. 21. ಗ್ರಾಮ ಪಂಚಾಯತ್ ಮಟ್ಟದಲ್ಲಿ ‘ಹೆಣ್ಣು ಮಗುವನ್ನು ರಕ್ಷಿಸಿ, ಹೆಣ್ಣು ಮಗುವನ್ನು ಓದಿಸಿ’ ಎಂಬ ವಿನೂತನ ಯೋಜನೆಯಡಿ ಆರೋಗ್ಯವಂತ ಹೆಣ್ಣು ಶಿಶು ಪ್ರದರ್ಶನ ಕಾರ್ಯಕ್ರಮವು ಸುಬ್ರಹ್ಮಣ್ಯ ಅಂಗನವಾಡಿ ಕೇಂದ್ರದಲ್ಲಿ ಫೆ. 18ರಂದು ನಡೆಯಿತು. ಇದರ ಅಧ್ಯಕ್ಷತೆಯನ್ನು ಅಂಬಿಕಾ ಸ್ತ್ರೀ ಶಕ್ತಿ ಗೊಂಚಲಿನ ಅಧ್ಯಕ್ಷೆ ಶ್ರೀಮತಿ‌ ಶೈಲಜಾರವರು ವಹಿಸಿದ್ದರು. ಉದ್ಘಾಟನೆಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ/ತ್ರಿಮೂರ್ತಿ ಅವರು ನೆರವೇರಿಸಿ, ತಾಯಿ-ಮಗುವಿನ ಆರೋಗ್ಯ ಸಲಹೆಗಳನ್ನು ನೀಡಿದರು. ಅಂಗನವಾಡಿ ಕಾರ್ಯಕರ್ತೆಯರಾದ ಸುಗುಣ ನಿರೂಪಿಸಿ,

ಸುಬ್ರಹ್ಮಣ್ಯ: ಅಂಗನವಾಡಿ ಕೇಂದ್ರದಲ್ಲಿ ಹೆಣ್ಣು ಶಿಶು ಪ್ರದರ್ಶನ ಕಾರ್ಯಕ್ರಮ Read More »

ಕರಾವಳಿ, ಕರ್ನಾಟಕ

ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 21. ವಿಕಲಚೇತನರ  ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ವಿಕಲಚೇತನರಿಗೆ ವಿಕಲಚೇತನರ ಮೂಲಕ ಅವರು ವಾಸಿಸುತ್ತಿರುವ ವ್ಯಾಪ್ತಿಯಲ್ಲಿ ಶೈಕ್ಷಣಿಕ ಉದ್ಯೋಗ ತರಬೇತಿ, ಆರ್ಥಿಕ ಪುನರ್ವಸತಿ ಮತ್ತು ಸಾಮಾಜಿಕ ಭದ್ರತೆ ಸೌಲಭ್ಯವನ್ನು ಒದಗಿಸಿಕೊಡಲು ಅನುಕೂಲವಾಗುವಂತೆ ನಗರ ಪುನರ್ವಸತಿ ಕಾರ್ಯಕರ್ತರನ್ನು ನೇಮಕ ಮಾಡಲು ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಾಸಿಸುವ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ

ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ, ಕರ್ನಾಟಕ

ರಸ್ತೆ ಸಂಚಾರಗಣತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 21.  ಮಂಗಳೂರು ಲೋಕೋಪಯೋಗಿ ಇಲಾಖಾ ವಿಭಾಗದ ವ್ಯಾಪ್ತಿಯಲ್ಲಿ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ಹಾಗೂ ಬೆಳ್ತಂಗಡಿ ತಾಲೂಕುಗಳಲ್ಲಿನ ರಾಜ್ಯ ಹೆದ್ದಾರಿ ಮತ್ತು ಜಿಲ್ಲಾ ಮುಖ್ಯ ರಸ್ತೆಗಳ ಆಯ್ದ ಸ್ಥಳಗಳಲ್ಲಿ ಸಿ.ಸಿ. ಕ್ಯಾಮೆರಾ ಅಳವಡಿಸಿ ಸ್ವಯಂಚಾಲಿತ ತಂತ್ರಾಂಶದ ಮೂಲಕ ರಸ್ತೆ ಸಂಚಾರ ಗಣತಿಯನ್ನು ಫೆಬ್ರವರಿ 23 ರಂದು ಬೆಳಿಗ್ಗೆ 6 ಗಂಟೆಯಿಂದ ಫೆಬ್ರವರಿ 25 ರಂದು ಬೆಳಿಗ್ಗೆ  6ಗಂಟೆಯವರೆಗೆ 2 ದಿನಗಳ ಕಾಲ ನಡೆಸಲಾಗುವುದು ಎಂದು ಮಂಗಳೂರು ವಿಭಾಗದ ಲೋಕೋಪಯೋಗಿ ಇಲಾಖೆಯ

ರಸ್ತೆ ಸಂಚಾರಗಣತಿ Read More »

ಕರಾವಳಿ, ಕರ್ನಾಟಕ
Scroll to Top