ಕಾಸರಗೋಡಿನಲ್ಲಿ ಹೆಚ್ಚುತ್ತಿರುವ ಕೊರೋನಾ ಎರಡನೇ ಅಲೆ ➤ ದ.ಕ ಜಿಲ್ಲೆಯ ಹಲವು ಗಡಿ ಬಂದ್ ಗೆ ಜಿಲ್ಲಾಧಿಕಾರಿ ಆದೇಶ ➤ ಜಿಲ್ಲೆಗೆ ಪ್ರವೇಶಿಸುವ ವೇಳೆ ನೆಗೆಟಿವ್ ರಿಪೋರ್ಟ್ ಕಡ್ಡಾಯ
(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 21. ದೇಶದಾದ್ಯಂತ ದಿನೇ ದಿನೇ ಕೊರೋನಾ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಕೇರಳದ ಕಾಸರಗೋಡು ಜಿಲ್ಲೆಯಲ್ಲೂ ಕೊರೊನಾ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆ ದ.ಕ ಜಿಲ್ಲೆಗೆ ಬರುವಂತಹ ಪ್ರಮುಖ ಗಡಿ ಹಾಗೂ ಚೆಕ್ ಪೋಸ್ಟ್ ಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಕೇರಳದಿಂದ ಮಂಗಳೂರು ತಲಪಾಡಿ, ಸಾರಡ್ಕ, ಮೇಣಾಲ ಮತ್ತು ಜಾಲ್ಸೂರು ಹೊರತುಪಡಿಸಿ ಉಳಿದೆಲ್ಲಾ ಗಡಿಗಳನ್ನು ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ತೆರೆದಿರುವಂತಹ ಪ್ರತೀ ಚೆಕ್ ಪೋಸ್ಟ್ ಗಳಲ್ಲಿ ಆರೋಗ್ಯ ಇಲಾಖೆ ತಪಾಸಣೆ ನಡೆಸಬೇಕು. […]





