ಕರ್ನಾಟಕ

ಬಾಳಿಲ: ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯ ತುಳು ಲಿಪಿ ನಾಮಫಲಕ ಅನಾವರಣ

(ನ್ಯೂಸ್ ಕಡಬ) newskadaba.com ಬಾಳಿಲ, ಫೆ. 12. ತುಳುವನ್ನು 8 ನೇ ಪರಿಚ್ಛೇದಕ್ಕೆ ಸೇರಿಸಬೇಕು, ತುಳು ರಾಜ್ಯದ ಅಧಿಕೃತ ಭಾಷೆ ಆಗಬೇಕು ಇದು ಪ್ರತಿಯೊಬ್ಬ ತುಳುವನ ದೊಡ್ಡ ಕನಸು, ಅದಕ್ಕಾಗಿ ತುಳುವರು ಹೋರಾಡುತ್ತಿದ್ದಾರೆ. ಈ ನಡುವೆ ತುಳು ಲಿಪಿಯ ಬೆಳವಣಿಗೆಗೂ ದುಡಿಯುತ್ತಿದ್ದಾರೆ. ಪ್ರತಿಯೊಂದು ಊರಿನಲ್ಲಿಯೂ ತುಳು ಲಿಪಿ ಕಲಿಕಾ ತರಗತಿ ನಡೆಸುತ್ತಿದ್ದಾರೆ. ಅಲ್ಲಲ್ಲಿ ತುಳು ಲಿಪಿ ನಾಮ ಫಲಕ ಹಾಕುತ್ತಿದ್ದಾರೆ, ಇದಕ್ಕೆ ಬೆಂಬಲವಾಗಿ ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯದ ತುಳು ಲಿಪಿಯ […]

ಬಾಳಿಲ: ಕಾಂಚೋಡು ಶ್ರೀ ಮಂಜುನಾಥೇಶ್ವರ ದೇವಾಲಯ ತುಳು ಲಿಪಿ ನಾಮಫಲಕ ಅನಾವರಣ Read More »

ಕರಾವಳಿ, ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿ ಬಿಯರ್ ತುಂಬಿದ್ದ ಲಾರಿ ಪಲ್ಟಿ ➤ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 12. ಬಿಯರ್ ಸಾಗಾಟ ಮಾಡುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕಲ್ಲುಗುಂಡಿ ಸಮೀಪದ ಜೋಡುಪಾಲದಲ್ಲಿ ನಡೆದಿದೆ. ಮಡಿಕೇರಿಯಿಂದ ಮಂಗಳೂರು ಕಡೆಗೆ ಬಿಯರ್ ಬಾಕ್ಸ್ ಗಳನ್ನು ತುಂಬಿಸಿಕೊಂಡು ಬರುತ್ತಿದ್ದ ಲಾರಿಯು ಜೋಡುಪಾಲ ಎಂಬಲ್ಲಿ ಪಲ್ಟಿಯಾಗಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.  

ಚಾಲಕನ ನಿಯಂತ್ರಣ ತಪ್ಪಿ ಬಿಯರ್ ತುಂಬಿದ್ದ ಲಾರಿ ಪಲ್ಟಿ ➤ ಚಾಲಕ ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಪ್ರಚೋದನಕಾರಿ ಭಾಷಣ ಮಾಡಿದ ಶಾಸಕ ಹರೀಶ್ ಪೂಂಜಾ ಮತ್ತು ಈಶ್ವರಪ್ಪ ವಿರುದ್ದ ಎಸ್ಡಿಪಿಐ ದೂರು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ: ಫೆ. 12. ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಳೆದ ಜನವರಿ 31 ರಂದು ಬಿಜೆಪಿ ಪಕ್ಷದ ಬಹಿರಂಗ ಕಾರ್ಯಕ್ರಮವೊಂದರಲ್ಲಿ ಕೋಮುಭಾವನೆಗೆ ಧಕ್ಕೆಯಾಗುವ ರೀತಿಯಲ್ಲಿ ಉದ್ರೇಕಕಾರಿ ಭಾಷಣ ಮಾಡಿದ್ದು, ಈ ಬಗ್ಗೆ ಎಸ್‌ಡಿಪಿಐ ಪಕ್ಷದ ಮುಸ್ತಫಾ ಎಂಬುವವರು ಭಾಷಣ ವಿಡಿಯೋ ಸಿಡಿಯ ಲಗತ್ತಿಸಿದ ದಾಖಲೆಯೊಂದಿಗೆ ಉಪ್ಪಿನಂಗಡಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವರು ತನ್ನ ಕಾರ್ಯಕರ್ತರಲ್ಲಿ ಗೋವನ್ನು ಮುಟ್ಟುವವರ ಕೈಕಾಲು ಕಡಿಯಿರಿ ನಾಲಗೆ

ಉಪ್ಪಿನಂಗಡಿ: ಪ್ರಚೋದನಕಾರಿ ಭಾಷಣ ಮಾಡಿದ ಶಾಸಕ ಹರೀಶ್ ಪೂಂಜಾ ಮತ್ತು ಈಶ್ವರಪ್ಪ ವಿರುದ್ದ ಎಸ್ಡಿಪಿಐ ದೂರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಫೆ. 14 ಪ್ರೇಮಿಗಳ ದಿನದ ಪ್ರಯುಕ್ತ 5 ದಿವಸಗಳ ರಜೆ ಕೋರಿ ಪ್ರಾಂಶುಪಾಲರಿಗೆ ರಜಾ ಅರ್ಜಿ ಬರೆದ ವಿದ್ಯಾರ್ಥಿ..! ➤ ಅಷ್ಟಕ್ಕೂ ಆತ ಬರೆದದ್ದಾರೂ ಏನು..? ? ರಜಾ ಅರ್ಜಿ ವೈರಲ್

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಫೆ. 11. ವಿದ್ಯಾರ್ಥಿಗಳು ಸಾಮಾನ್ಯವಾಗಿ ಅನಾರೋಗ್ಯ, ಮನೆಯಲ್ಲಿ ನಡೆಯುವ ಶುಭ ಸಮಾರಂಭಗಳಿಗೆ ರಜೆ ಕೇಳಿ ಶಾಲಾ ಮುಖ್ಯ ಗುರುಗಳಿಗೆ ರಜಾ ಅರ್ಜಿ ಬರೆಯುವುದನ್ನು ನಾವು ಕೇಳಿದ್ದೇವೆ. ಆದರೆ ಇಲ್ಲೊಬ್ಬ ವಿದ್ಯಾರ್ಥಿ ಬರೆದಿರುವ ರಜೆ ಅರ್ಜಿಯ ಪತ್ರವು ಇದೀಗ ಭಾರೀ ವೈರಲ್ ಆಗಿದೆ. ಇದಕ್ಕೆ ಕಾರಣ ಇಲ್ಲೊಬ್ಬ ವಿದ್ಯಾರ್ಥಿ ಫೆಬ್ರವರಿ 14 ರಂದು ಪ್ರೇಮಿಗಳ ದಿನದ ಹಿನ್ನೆಲೆ ರಜೆ ಕೇಳಿ ಪತ್ರ ಬರೆಯುವ ಮೂಲಕ ಸುದ್ದಿಯಾಗಿದ್ದಾನೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಪ್ರಥಮ

ಫೆ. 14 ಪ್ರೇಮಿಗಳ ದಿನದ ಪ್ರಯುಕ್ತ 5 ದಿವಸಗಳ ರಜೆ ಕೋರಿ ಪ್ರಾಂಶುಪಾಲರಿಗೆ ರಜಾ ಅರ್ಜಿ ಬರೆದ ವಿದ್ಯಾರ್ಥಿ..! ➤ ಅಷ್ಟಕ್ಕೂ ಆತ ಬರೆದದ್ದಾರೂ ಏನು..? ? ರಜಾ ಅರ್ಜಿ ವೈರಲ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

? ಪುತ್ತೂರು: ಖಾಸಗಿ ಜಾಗದಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಪುತ್ತೂರು, ಫೆ. 11. ಇಲ್ಲಿನ ಬೆಟ್ಟಂಪಾಡಿ ರಸ್ತೆ ಸಮೀಪದ ಖಾಸಗಿ ಜಾಗವೊಂದರಲ್ಲಿ ವ್ಯಕ್ತಿಯ ಮೃತದೇಹವೊಂದು ಪತ್ತೆಯಾಗಿದೆ. ಮೃತರನ್ನು ಬೆಟ್ಟಂಪಾಡಿ ಕೋನಡ್ಕ ನಿವಾಸಿ ಸೇಸಪ್ಪ ನಾಯ್ಕ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

? ಪುತ್ತೂರು: ಖಾಸಗಿ ಜಾಗದಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಮಂಗಳೂರು: ಅಕ್ರಮ ಚಿನ್ನ ಸಾಗಾಟ ➤ ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 11. ಅಕ್ರಮವಾಗಿ ಸಾಗಿಸುತ್ತಿದ್ದ ಅರ್ಧ ಕೆ.ಜಿ ಚಿನ್ನವನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ಧಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ. ಕೇರಳ ಮೂಲದ ಕಾಸರಗೋಡಿನ ವ್ಯಕ್ತಿ ವಿದೇಶದಿಂದ ತನ್ನ ದೇಹದಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವೇಳೆ ಈತನಿಂದ 510 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಹಾಗೂ ವಶಕ್ಕೆ ಪಡೆದ ಆರೋಪಿಯನ್ನು ಬಂಧಿಸಿ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ಮುಂದುವರಿಸಿದ್ದಾರೆ.

? ಮಂಗಳೂರು: ಅಕ್ರಮ ಚಿನ್ನ ಸಾಗಾಟ ➤ ಆರೋಪಿ ಅಂದರ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

? ಮಂಗಳೂರು: ಅನ್ಯಕೋಮಿನ ಜೋಡಿಯ ಜಾಲಿ ರೈಡ್ ➤ ತಡೆಹಿಡಿದು ಪೊಲೀಸರಿಗೆ ಒಪ್ಪಿಸಿದ ಭಜರಂಗದಳ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 11.‌ ಕೇರಳ ಮೂಲದ ಹಿಂದೂ ಹುಡುಗಿಯ ಜೊತೆಗೆ ಮುಸ್ಲಿಂ ಹುಡುಗನೋರ್ವ ಮಡಿಕೇರಿಗೆ ಜಾಲಿ ರೈಡ್ ಹೋಗುತ್ತಿದ್ದ ಸಂದರ್ಭ ಪಂಪ್ ವೆಲ್ ಬಳಿ ಬಜರಂಗದಳ ಕಾರ್ಯಕರ್ತರು ತಡೆಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.

? ಮಂಗಳೂರು: ಅನ್ಯಕೋಮಿನ ಜೋಡಿಯ ಜಾಲಿ ರೈಡ್ ➤ ತಡೆಹಿಡಿದು ಪೊಲೀಸರಿಗೆ ಒಪ್ಪಿಸಿದ ಭಜರಂಗದಳ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಿಂದ ನೂತನ 11 ಉತ್ಪನ್ನಗಳು ಬಿಡುಗಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 11. ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ 11 ಉತ್ಪನ್ನಗಳ ಲೋಕಾರ್ಪಣೆ ಕಾರ್ಯಕ್ರಮವು ಬೆಂಗಳೂರಿನ ಭಾರತೀಯ ವಿದ್ಯಾ ಭವನದಲ್ಲಿ ನಡೆಯಿತು. ದರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ, ನಟ ರಮೇಶ್ ಅರವಿಂದ್, ನಟಿ ತಾರಾ ಅನುರಾಧ, ಶಾಸಕ ಹರೀಶ್ ಪೂಂಜಾ ಮೊದಲಾದವರು ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯು ಹೊರ ತಂದಿರುವಂತಹ 11 ಬಗೆಯ ಸಿರಿ ಉತ್ಪನ್ನಗಳನ್ನು ಬಿಡುಗಡೆಗೊಳಿಸಿದರು. ಸಿರಿ ಸಂಸ್ಥೆಯು ಈಗಾಗಲೇ 13 ಸ್ವಂತ ಮಳಿಗೆ ಹಾಗೂ 300

ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಿಂದ ನೂತನ 11 ಉತ್ಪನ್ನಗಳು ಬಿಡುಗಡೆ Read More »

ಕರ್ನಾಟಕ

? ಎಟಿಎಂಗೆ ತುಂಬಿಸಬೇಕಿದ್ದ 64 ಲಕ್ಷ ರೂ ಕದ್ದು ಪರಾರಿಯಾಗಿದ್ದ ಚಾಲಕ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 11. ಎಟಿಎಂಗೆ ಹಣ ತುಂಬಿಸಬೇಕಿದ್ದ 64 ಲಕ್ಷ ರೂ. ಹಣವನ್ನು ಕದ್ದೊಯ್ದು ಪ್ರೇಯಸಿಯ ಜೊತೆ ಪರಾರಿಯಾಗಿದ್ದ ವ್ಯಕ್ತಿಯನ್ನು ಬಂಧಿಸುವಲ್ಲಿ ಬೆಂಗಳೂರಿನ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಯೋಗೇಶ್ ಎಂದು ಗುರುತಿಸಲಾಗಿದೆ. ಈತ ಫೆ. 03. ರಂದು ಎಟಿಎಂಗೆ ಹಣ ತುಂಬಿಸಲಿಕೋಸ್ಕರ ಸೆಕ್ಯೂರಿಟಿಗಳು ಎಟಿಎಂಗೆಂದು ತೆರಳಿದ್ದ ವೇಳೆ ಹಣದ ಬ್ಯಾಗನ್ನು ತೆಗೆದುಕೊಂಡು ಪರಾರಿಯಾಗಿದ್ದ. ಈತನ ಪತ್ತೆಗಾಗಿ ಶೋಧ ಕಾರ್ಯ ನಡೆಸಿದ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಸೆಕ್ಯೂರ್ ವ್ಯಾಲ್ಯೂ ಏಜೆನ್ಸಿಯಲ್ಲಿ ಡ್ರೈವರ್ ಆಗಿದ್ದ

? ಎಟಿಎಂಗೆ ತುಂಬಿಸಬೇಕಿದ್ದ 64 ಲಕ್ಷ ರೂ ಕದ್ದು ಪರಾರಿಯಾಗಿದ್ದ ಚಾಲಕ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಂದೂರು: ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಬೈಕ್ ಡಿವೈಡರ್ ಗೆ ಢಿಕ್ಕಿ- ಬಾಲಕ ಮೃತ್ಯು ➤ ಪೋಷಕರ ಮೇಲೆ ಕೇಸು ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೈಂದೂರು, ಫೆ. 11. ಬೈಕೊಂದು ಡಿವೈಡರ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರೂರಿನ ಅಳ್ವೆಗದ್ದೆ ಕ್ರಾಸ್ ಬಳಿ ಇಂದು ಬೆಳಗ್ಗೆ ನಡೆದಿದೆ. ಮೃತ ಬಾಲಕನನ್ನು ಹಡವಿನಕೋಣೆ ನಿವಾಸಿ ಅರಾನ್ (15) ಎಂದು ಗುರುತಿಸಲಾಗಿದೆ. ಈತನ ಅತೀ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಕಳೆದ ವಾರವಷ್ಟೇ ಲೈಸೆನ್ಸ್ ಇಲ್ಲದೆ ಬೈಕ್ ಚಲಾಯಿಸಿದ ಕಾರಣ ಈತನಿಗೆ ದಂಡ ವಿಧಿಸಲಾಗಿತ್ತು. ಇಂದು ಆಳ್ವೆಗದ್ದೆ ಕ್ರಾಸ್ ಬಳಿ ವೇಗದಿಂದ ಬೈಕ್

ಬೈಂದೂರು: ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಬೈಕ್ ಡಿವೈಡರ್ ಗೆ ಢಿಕ್ಕಿ- ಬಾಲಕ ಮೃತ್ಯು ➤ ಪೋಷಕರ ಮೇಲೆ ಕೇಸು ಸಾಧ್ಯತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top