ಕರ್ನಾಟಕ

ಮಂಗಳೂರು: ಹಳೆಯ ಸ್ನೇಹಿತೆ ಹಾಗೂ ಆಕೆಯ ಪ್ರಿಯಕರನಿಗೆ ರೌಡಿಯಿಂದ ಹಲ್ಲೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 01. ಯುವತಿಯೋರ್ವಳು ಸ್ನೇಹಿತರೊಂದಿಗೆ ರೆಸ್ಟೋರೆಂಟ್‌ ಒಂದರಲ್ಲಿ ಕುಳಿತಿದ್ದ ಸಂದರ್ಭ ಆಕೆಯ ಹಳೆ ಸ್ನೇಹಿತ ಮತ್ತು ಆತನ ಗೆಳೆಯರು ಏಕಾಏಕಿ ದಾಳಿ ನಡೆಸಿದ ಘಟನೆ ನಗರದ ಕದ್ರಿ ಎಂಬಲ್ಲಿ ನಡೆದಿದೆ. ಜ. 30ರಂದು ಮಧ್ಯಾಹ್ನ ಕದ್ರಿಯ ಬಾರ್ ಆ್ಯಂಡ್ ರೆಸ್ಟೋರೆಂಟ್ ವೊಂದರಲ್ಲಿ ಈ ಘಟನೆ ನಡೆದಿದ್ದು, ಇದರ ಸಿಸಿಟಿವಿ ವಿಡಿಯೋ ತುಣುಕು ಇದೀಗ ಸಾಮಾಜಿಕ‌ ಜಾಲತಾಣದಲ್ಲಿ ವೈರಲ್ ಆಗಿದೆ. ಆಕೆ ತನ್ನ ಮೂವರು ಗೆಳೆಯರೊಂದಿಗೆ ರೆಸ್ಟೋರೆಂಟ್ ನಲ್ಲಿ ಕುಳಿತಿದ್ದಾಗ ಏಕಾಏಕಿ ನುಗ್ಗಿದ […]

ಮಂಗಳೂರು: ಹಳೆಯ ಸ್ನೇಹಿತೆ ಹಾಗೂ ಆಕೆಯ ಪ್ರಿಯಕರನಿಗೆ ರೌಡಿಯಿಂದ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೇರಳ ಐಶ್ವರ್ಯ ಯಾತ್ರೆಗೆ ಚಾಲನೆ

(ನ್ಯೂಸ್ ಕಡಬ) newskadaba.com ಜ. 31. ಕೇರಳ ಸರ್ಕಾರದ ವಿರೋಧ ಪಕ್ಷದ ನಾಯಕ ರಮೇಶ್ ಚೆನ್ನಿತಲ ಮಂಜೇಶ್ವರದಿಂದ ತಿರುವನಂತಪುರಂ ವರೆಗೆ ಮುನ್ನಡೆಸುವ ಐಶ್ವರ್ಯ ಯಾತ್ರೆ ಗೆ ಮಂಜೇಶ್ವರದಲ್ಲಿ ಯಾತ್ರೆಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಾಜಿ ಕಾರ್ಯದರ್ಶಿ ಟಿ.ಎಮ್.ಶಹೀದ್ ತೆಕ್ಕಿಲ್ ರವರು ಜಾಥದ ನೇತೃತ್ವ ವಹಿಸಿದ ಕೇರಳ ಸರ್ಕಾರದ ವಿರೋಧ ಪಕ್ಷದ ನಾಯಕ ರಮೇಶ್ ಚನ್ನಿತಲರವರನ್ನು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಅಖಿಲ ಭಾರತ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಆಡ್ವಕೇಟ್ ವಿಧ್ಯಾ

ಕೇರಳ ಐಶ್ವರ್ಯ ಯಾತ್ರೆಗೆ ಚಾಲನೆ Read More »

ಕರಾವಳಿ, ಕರ್ನಾಟಕ

ಡೀಮ್ಡ್ ಫಾರೆಸ್ಟ್ ಸಮಸ್ಯೆ ಬಗ್ಗೆ ಕಂದಾಯ ಮತ್ತು ಅರಣ್ಯ ಸಚಿವರ ಜೊತೆ ಮಾತುಕತೆ ➤ ಸಚಿವ ಎಸ್.ಅಂಗಾರ

ಕಡಬ, ಜ.31. ಡೀಮ್ಡ್ ಫಾರೆಸ್ಟ್ ಸಮಸ್ಯೆ ಬಗ್ಗೆ ಕಂದಾಯ ಸಚಿವರ ಜೊತೆ ಈಗಾಗಲೇ ಮಾತುಕತೆ ನೇಸಲಾಗಿದ್ದು ಅಧಿವೇಶನದ ಸಂದರ್ಭದಲ್ಲಿ ಕರಾವಳಿಯ ಎಲ್ಲ ಶಾಸಕರ ಉಪಸ್ಥಿತಿಯಲ್ಲಿ ವಿಶೇಷ ಸಭೆಗೆ ಅವಕಾಶ ಕಲ್ಪಿಸಲಾಗಿದೆ. ಕಂದಾಯ ಮತ್ತು ಅರಣ್ಯ ಸಚಿವರ ಜೊತೆ ವಿಶೇಷ ಸಭೆ ನಡೆಸಿ ಚರ್ಚೆ ನಡೆಸಿ ಸಮಸ್ಯೆ ಪರಿಹರಿಸಲಾಗುವುದು ಹಾಗು 94 ಸಿ ಯೋಜನೆಯಡಿ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ಕೊಡುವಂತೆ ಕೇಳಿಕೊಳ್ಳಲಾಗಿದೆ ಎಂದು‌ ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಅಂಗಾರ ಹೇಳಿದ್ದಾರೆ. ದ.ಕ ಜಿಲ್ಲಾ

ಡೀಮ್ಡ್ ಫಾರೆಸ್ಟ್ ಸಮಸ್ಯೆ ಬಗ್ಗೆ ಕಂದಾಯ ಮತ್ತು ಅರಣ್ಯ ಸಚಿವರ ಜೊತೆ ಮಾತುಕತೆ ➤ ಸಚಿವ ಎಸ್.ಅಂಗಾರ Read More »

ಕರ್ನಾಟಕ

ಬಂಟ್ವಾಳ: ಮನೆಗೆ ನುಗ್ಗಿ ಚಿನ್ನಾಭರಣ ಕಳವು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 31. ಮನೆಯೊಂದಕ್ಕೆ ನುಗ್ಗಿದ ಕಳ್ಳರು ಚಿನ್ನಾಭರಣ ಕಳವುಗೈದ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಣಿನಾಲ್ಕೂರು ಗ್ರಾಮದ ನೇಲ್ಯಪಲ್ಕೆ ಎಂಬಲ್ಲಿ ನಡೆದಿದೆ. ನೇಲ್ಯಪಲ್ಕೆ ನಿವಾಸಿ ಖಾದರ್ ಎಂಬವರ ಮನೆಯಿಂದ ಕಳ್ಳತನವಾಗಿದ್ದು, ಸುಮಾರು 22 ಪವನ್ ಚಿನ್ನಾಭರಣ ದೋಚಿದ್ದಾರೆ ಎನ್ನಲಾಗಿದೆ. ಈ ವೇಳೆ ಮನೆಯಲ್ಲಿದ್ದ ಸಿ.ಸಿ ಕ್ಯಾಮರಾ ಆಫ್ ಆಗಿದ್ದು, ಹಿಂಬಾಗಿಲನ್ನು ತೆಗೆಯಲಾಗಿತ್ತು. ಘಟನಾ ಸ್ಥಳಕ್ಕೆ ಪೊಲೀಸರು, ಬೆರಳಚ್ಚು ತಜ್ಞರು ಹಾಗೂ ಶ್ವಾನ ದಳದವರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಬಂಟ್ವಾಳ: ಮನೆಗೆ ನುಗ್ಗಿ ಚಿನ್ನಾಭರಣ ಕಳವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ದುಬೈನಿಂದ ಅಕ್ರಮ ಚಿನ್ನ ಸಾಗಾಟ ➤ ಓರ್ವನ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 31. ಅಕ್ರಮವಾಗಿ ಚಿನ್ನ‌ಸಾಗಿಸುತ್ತಿದ್ದ ಆರೋಪಿಯೋರ್ವನನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಕಾಸರಗೋಡು ಮೂಲದ ಮಶ್ಕೂರ್ ಎಂದು ಗುರುತಿಸಲಾಗಿದೆ. ಈತನ ಬಳಿ ಸುಮಾರು 30 ಲಕ್ಷ ಮೌಲ್ಯದ 587 ಗ್ರಾಂ ತೂಕದ 24 ಕ್ಯಾರೆಟ್ ಚಿನ್ನ ಪತ್ತೆಯಾಗಿದ್ದು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮಂಗಳೂರು: ದುಬೈನಿಂದ ಅಕ್ರಮ ಚಿನ್ನ ಸಾಗಾಟ ➤ ಓರ್ವನ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಂಕ್ರೀಟ್ ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ➤ ಮೂವರು ದುರ್ಮರಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 31. ಕಾಂಕ್ರಿಟ್ ಮಿಕ್ಸರ್ ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆದಿದೆ. ಮೃತಪಟ್ಟವರನ್ನು ಬಾಗಲೂರಿನ ಶಿವು(26), ಮಿಲನ್ (25) ಹಾಗೂ ಸಾತನೂರಿನ ಮಧು (26) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಅನುಷಾ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಂಕ್ರೀಟ್ ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ➤ ಮೂವರು ದುರ್ಮರಣ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೊಂಬಾರು: ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ➤ ಸ್ಥಳೀಯರ ಸಂಭ್ರಮ

(ನ್ಯೂಸ್ ಕಡಬ) newskadaba.com ಕಡಬ, ಜ. 31. ದ.ಕ‌ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಡಬ ತಾಲ್ಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಕಡಬ ತಾಲೂಕಿನ ಕೊಂಬಾರಿನಲ್ಲಿ ಆಯೋಜಿಸಲಾಗಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಮತ್ತು ಜಾಗ್ರತಿ ಶಿಬಿರವು ಸ್ಥಳೀಯರ ಸಂಭ್ರಮಕ್ಕೆ ಸಾಕ್ಷಿಯಾಯಿತು. ಕಳೆದ ಕೆಲ ದಿನಗಳಿಂದ ಸಿದ್ಧತೆಗಾಗಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಕೊಂಡಿದ್ದ ಸಿರಿಬಾಗಿಲು ಮತ್ತು ಕೊಂಬಾರು ಗ್ರಾಮಸ್ಥರು ಇಂದು ಜಾತ್ರೆ ಸಮಾರಂಭದಂತೆ ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡರು. ಕೊಂಬಾರಿನ ದ.ಕ.ಜಿ.ಪಂ. ಉನ್ನತ ಹಿ.ಪ್ರಾ. ಶಾಲೆಯಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಆರೋಗ್ಯ

ಕೊಂಬಾರು: ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ➤ ಸ್ಥಳೀಯರ ಸಂಭ್ರಮ Read More »

ಕರಾವಳಿ, ಕರ್ನಾಟಕ

ಕೊಂಬಾರನ್ನು ಸಂಪರ್ಕಿಸುವ ನಾಲ್ಕು ರಸ್ತೆಗಳಿಗೆ ಶೀಘ್ರದಲ್ಲೇ ಅಭಿವೃದ್ಧಿ ಭಾಗ್ಯ ➤ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಘೋಷಣೆ

ಕಡಬ, ಜ.31. ತಾಲೂಕಿನ ಕೊಂಬಾರು ಗ್ರಾಮ ಸಂಪರ್ಕದ ನಾಲ್ಕು ರಸ್ತೆಗಳನ್ನು ಶೀಘ್ರದಲ್ಲೇ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವರಾದ ಕೆ.ಎಸ್.ಈಶ್ವರಪ್ಪ ಘೋಷಿಸಿದರು. ಅವರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಡಬ ತಾಲ್ಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಕಡಬ ತಾಲೂಕಿನ ಕೊಂಬಾರಿನಲ್ಲಿ ಭಾನುವಾರ ನಡೆಯುತ್ತಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಗ್ರಾಮ ವಾಸ್ತವ್ಯ ಅಂಗವಾಗಿ ಹಮ್ಮಿಕೊಂಡ ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರಕ್ಕೆ ಭೇಟಿ ನೀಡಿದ ಸಚಿವರುಗಳು ವಿವಿಧ ಇಲಾಖೆಗಳ ಸ್ಟಾಲ್ ಗಳನ್ನು

ಕೊಂಬಾರನ್ನು ಸಂಪರ್ಕಿಸುವ ನಾಲ್ಕು ರಸ್ತೆಗಳಿಗೆ ಶೀಘ್ರದಲ್ಲೇ ಅಭಿವೃದ್ಧಿ ಭಾಗ್ಯ ➤ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಘೋಷಣೆ Read More »

ಕರ್ನಾಟಕ

ಅಧಿಕಾರಿಗಳು ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿ ➤ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಜಿಲ್ಲಾಧಿಕಾರಿ ಕರೆ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 31. ಅಭಿವೃದ್ಧಿ ಎಂಬುದು ನಿಂತ ನೀರಲ್ಲ. ಅದು ನಿರಂತರ ಪ್ರಕ್ರಿಯೆಯಾಗಿದೆ. ಗ್ರಾಮದ ಅಭಿವೃದ್ಧಿಗೆ ಸರಕಾರ, ಅಧಿಕಾರಿಗಳ ಜೊತೆಗೆ ಜನರ ಸಹಭಾಗಿತ್ವವೂ ಬಹಳ ಮುಖ್ಯವಾದುದು ಎಂದು ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹೇಳಿದ್ದಾರೆ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಕಡಬ ತಾಲೂಕು ಪತ್ರಕರ್ತರ ಸಂಘದ ಆಶ್ರಯದಲ್ಲಿ ಕಡಬ ತಾಲೂಕಿನ ಕೊಂಬಾರಿನಲ್ಲಿ ಭಾನುವಾರ ನಡೆದ ಪತ್ರಕರ್ತರ ಗ್ರಾಮ ವಾಸ್ತವ್ಯ ಹಾಗು ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಂಡ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ತಾಲೂಕುಮಟ್ಟದ ಹಾಗು

ಅಧಿಕಾರಿಗಳು ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಿ ➤ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಉದ್ಘಾಟಿಸಿ ಜಿಲ್ಲಾಧಿಕಾರಿ ಕರೆ Read More »

ಕರಾವಳಿ, ಕರ್ನಾಟಕ

ಕೊಂಬಾರಿನಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ➤ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಸಚಿವ ಎಸ್.ಅಂಗಾರ ಭೇಟಿ

(ನ್ಯೂಸ್ ಕಡಬ) newskadaba.com ಕಡಬ, ಜ.31. ತಾಲೂಕಿನ ಕೊಂಬಾರಿನಲ್ಲಿ ನಡೆಯುತ್ತಿರುವ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವರಾದ ಕೆ.ಎಸ್. ಈಶ್ವರಪ್ಪ ಹಾಗೂ ಬಂದರು, ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರು ಭೇಟಿ ನೀಡಿದರು. ಗ್ರಾಮಸ್ಥರ ಪರವಾಗಿ ಈಶ್ವರಪ್ಪ ರವರನ್ನು ಶಾಲು ಹೊದಿಸಿ ಸನ್ಮಾನಿಸಿ, ಗೌರವಿಸಲಾಯಿತು. ಸಚಿವರು ಕಳೆದ‌ ವರ್ಷ ಮಡಪ್ಪಾಡಿಯಲ್ಲಿ ನಡೆದ ಪತ್ರಕರ್ತರ ಗ್ರಾಮ ವಾಸ್ತವ್ಯದ ಮಾಹಿತಿ ಪುಸ್ತಕ ಬಿಡುಗಡೆಗೊಳಿಸಿದರು. ಗ್ರಾಮದ ನಾಲ್ವರು ಮಕ್ಕಳಿಗೆ ಭಾಗ್ಯಲಕ್ಷ್ಮೀ ಬಾಂಡ್ ವಿತರಿಸಿದರು. ಕಾರ್ಯಕ್ರಮದಲ್ಲಿ ನೂತನ ಸಚಿವರಾದ ಎಸ್.

ಕೊಂಬಾರಿನಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ➤ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಸಚಿವ ಎಸ್.ಅಂಗಾರ ಭೇಟಿ Read More »

ಕರ್ನಾಟಕ
Scroll to Top