ಕರ್ನಾಟಕ

ಜಾತಿ ನಿಂದನೆ ಆರೋಪ ➤ ‘ಝೀ ಕನ್ನಡ’ ಮುಖ್ಯಸ್ಥ ಸೇರಿ ಹಲವರ ವಿರುದ್ದ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 24. ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದಲ್ಲಿ ಜಾತಿ ನಿಂದನೆ ಮಾಡಿದ್ದಾರೆ ಎಂಬ ಆರೋಪದಡಿ ಝೀ ಕನ್ನಡ ವಾಹಿನಿ ಮುಖ್ಯಸ್ಥ ಸೇರಿದಂತೆ ಹಲವರ ವಿರುದ್ಧ ಅಶೋಕನಗರ ಠಾಣೆಯಲ್ಲಿ ಎಫ್‍.ಐ.ಆರ್ ದಾಖಲಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ಈ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ತನಿಖೆಯನ್ನು ಎಸಿಪಿಯವರು ನಡೆಸಲಿದ್ದು, ಅವರೇ ಆರೋಪಿಗಳಿಗೆ ನೋಟಿಸ್ ನೀಡಿ ವಿಚಾರಣೆಗೆ ಒಳಪಡಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಜಾತಿ ನಿಂದನೆ ಆರೋಪ ➤ ‘ಝೀ ಕನ್ನಡ’ ಮುಖ್ಯಸ್ಥ ಸೇರಿ ಹಲವರ ವಿರುದ್ದ ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಪಯಸ್ವಿನಿ ನದಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 24. ಇಲ್ಲಿನ ಕೇರ್ಪಳ ಎಂಬಲ್ಲಿನ ಮಹಿಳೆಯೋರ್ವರು ಜ.18ರಂದು ಕಾಣೆಯಾಗಿದ್ದು, ಇದೀಗ ಅವರ ಮೃತದೇಹವು ಪಯಸ್ವಿನಿ ಹೊಳೆಯಲ್ಲಿ ಪತ್ತೆಯಾಗಿದೆ. ಸುಳ್ಯದ ಕೇರ್ಪಳದಲ್ಲಿ ಬಾಡಿಗೆ ಕೋಣೆಯಲ್ಲಿರುವ ಆನಂದ ಎಂಬವರ ಪತ್ನಿ ಚಂದ್ರಾವತಿಯವರ ಮೊಬೈಲ್ ಫೋನ್ ಮತ್ತು ಪರ್ಸ್ ನದಿಯಲ್ಲಿದ್ದುದನ್ನು ಕಂಡು ಸ್ಥಳೀಯರು, ಅಗ್ನಿಶಾಮಕ ದಳ ಹಾಗೂ ಗೃಹರಕ್ಷಕ ದಳದವರು ಸೇರಿ ಹೊಳೆಯಲ್ಲಿ ಹುಡುಕಾಟ ನಡೆಸಿದ್ದರೂ ಮೃತದೇಹ ಪತ್ತೆಯಾಗಿರಲಿಲ್ಲ ಹಾಗೂ ಮನೆಗೂ ಹಿಂತಿರುಗಿರಲಿಲ್ಲ. ಇದೀಗ ಜ.23 ರಂದು ನಾರ್ಕೋಡು ಸಮೀಪ ಪಯಸ್ವಿನಿ ಹೊಳೆಯ ನೀರಲ್ಲಿ

ಸುಳ್ಯ: ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಪಯಸ್ವಿನಿ ನದಿಯಲ್ಲಿ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಅಶ್ವತ್ಥ ಮರ ಬಿದ್ದು ವಾಹನಗಳು ಜಖಂ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 24. ಇಲ್ಲಿನ ರಥಬೀದಿಯಲ್ಲಿರುವ ವೆಂಕಟರಮಣ ದೇವಸ್ಥಾನದ ಮುಂದೆ ಇದ್ದ ಅಶ್ವತ್ಥ ಕಟ್ಟೆಯ ಹಳೆಯದಾದ ಮರವೊಂದು ಬುಡ ಸಮೇತ ಉರುಳಿ ಬಿದ್ದ ಪರಿಣಾಮ ‌ಟ್ಯಾಂಕರ್, ಜೆಸಿಬಿ ಹಾಗೂ ಕಾರಿಗೆ ಹಾನಿಯಾಗಿದೆ. ಬೆಳಗ್ಗಿನ ಜಾವ ಈ ಘಟನೆ ನಡೆದಿದ್ದು ಮರದಡಿ ನಿಲ್ಲಿಸಿದ್ದ ಒಂದು ನೀರಿನ ಟ್ಯಾಂಕರ್, ಜೆಸಿಬಿ ಮತ್ತು ಒಂದು ಕಾರಿನ ಮೇಲೆ ಮರದ ಕೊಂಬೆಗಳು ಬಿದ್ದು ಹಾನಿಯಾಗಿದೆ. ಈ ಸಂದರ್ಭ ಆ ಸ್ಥಳದಲ್ಲಿ ಯಾರೂ ಇಲ್ಲದ ಕಾರಣ ಪ್ರಾಣ ಹಾನಿ ಸಂಭವಿಸಿಲ್ಲ.

ಮಂಗಳೂರು: ಅಶ್ವತ್ಥ ಮರ ಬಿದ್ದು ವಾಹನಗಳು ಜಖಂ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ತೊಕ್ಕೊಟ್ಟು: ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿ ➤ ವೃದ್ದ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 24. ಪಾದಚಾರಿ ವೃದ್ದರೋರ್ವರಿಗರ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ವೃದ್ದ ಸ್ಥಳದಲ್ಲೇ ಮೃತಪಟ್ಟ ಘಟನೆ ನಸುಕಿನ ಜಾವ ತೊಕ್ಕೊಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.   ಮೃತರನ್ನು ಪಾಣೆಮಂಗಳೂರಿನ ನಿವಾಸಿ ಹಮ್ಮಬ್ಬ (60) ಎಂದು ಗುರುತಿಸಲಾಗಿದೆ. ಇವರು ತೊಕ್ಕೊಟ್ಟು ಸಹರಾ ಆಸ್ಪತ್ರೆಯ ಎದುರು ರಸ್ತೆ ದಾಟುತ್ತಿದ್ದ ವೇಳೆ ಅಪರಿಚಿತ ವಾಹನವು ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇವರು ತೊಕ್ಕೊಟ್ಟಿನ ಕಲ್ಲಾಪಿನಲ್ಲಿರುವ ಸಂಬಂಧಿಕರ ಮ‌ನೆಗೆ ಬಂದಿದ್ದರೆನ್ನಲಾಗಿದೆ. ಮಂಗಳೂರು

ತೊಕ್ಕೊಟ್ಟು: ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿ ➤ ವೃದ್ದ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ತಾಲೂಕು ಕೇಂದ್ರಗಳಿಗೆ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 23. ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಉಪಾಧೀಕ್ಷಕರು ಕೆ.ಸಿ. ಪ್ರಕಾಶ್, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್.ಎಂ. ಮತ್ತು ಗುರುರಾಜ್ ರವರು ದ.ಕ. ಜಿಲ್ಲೆಯ ವಿವಿಧ ತಾಲೂಕು ಕೇಂದ್ರಗಳಿಗೆ ಜನವರಿ 28, 29 ಮತ್ತು 30 ರಂದು ಭೇಟಿ ನೀಡಿ ಜನಸಂಪರ್ಕ ಸಭೆ ನಡೆಸಲಿದ್ದಾರೆ. ಜನವರಿ 28 ರಂದು ಬೆಳಿಗ್ಗೆ 11 ಗಂಟೆಗೆ ಸುಳ್ಯ ಸರ್ಕಾರಿ ನಿರೀಕ್ಷಣಾ ಮಂದಿರ, ಮಧ್ಯಾಹ್ನ 2.30 ಗಂಟೆಗೆ ಪುತ್ತೂರು ಸರ್ಕಾರಿ ನಿರೀಕ್ಷಣಾ ಮಂದಿರ,

ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ತಾಲೂಕು ಕೇಂದ್ರಗಳಿಗೆ ಭೇಟಿ Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ಚರ್ಚ್ ಗೆ ನುಗ್ಗಿದ ಕಳ್ಳರು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 23. ಇಲ್ಲಿನ ನಾವೂರು ಗ್ರಾಮದ ಪರ್ಲ ಚರ್ಚ್ ನ ಒಳನುಗ್ಗಿದ ಕಳ್ಳರು ಹಣಕ್ಕಾಗಿ ತಡಕಾಡಿ ಪವಿತ್ರ ವಸ್ತುಗಳನ್ನು ಹಾನಿ ಮಾಡಿದ ಘಟನೆ ವರದಿಯಾಗಿದೆ. ಶುಕ್ರವಾರದಂದು ರಾತ್ರಿ ವೇಳೆ ಈ ಘಟನೆ ನಡೆದಿದ್ದು, ಇಂದು ಬೆಳಗ್ಗೆ ಚರ್ಚ್ ಪ್ರತಿನಿಧಿಗಳು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕಳ್ಳರ ದುಷ್ಕೃತ್ಯ ಚರ್ಚ್ ನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಾವೂರು ಚರ್ಚ್ ರಸ್ತೆಯಲ್ಲಿದ್ದ ಬಾರ್ ಮತ್ತು ಪ್ರಾವಿಷನ್

ಬಂಟ್ವಾಳ: ಚರ್ಚ್ ಗೆ ನುಗ್ಗಿದ ಕಳ್ಳರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಮುಜರಾಯಿ ದೇವಾಲಯಗಳಲ್ಲಿ ಪ್ರತೀ ತಿಂಗಳು ಎರಡು ಬಾರಿ ಸಪ್ತಪದಿ ಕಾರ್ಯಕ್ರಮ ➤ ಕೋಟ ಶ್ರೀ ನಿವಾಸ್ ಪೂಜಾರಿ

(ನ್ಯೂಸ್ ಕಡಬ) newskadaba.com ಸುಬ್ರಮಣ್ಯ, ಜ. 23. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸಭಾಂಗಣದಲ್ಲಿ ನಡೆದ 11ನೇ ರಾಜ್ಯ ಧಾರ್ಮಿಕ ಪರಿಷತ್‌ ಸಭೆಯಲ್ಲಿ ಮುಜರಾಯಿ ದೇವಸ್ಥಾನಗಳಲ್ಲಿ ಬಡವರಿಗೆ ನೆರವಾಗುವ ನಿಟ್ಟಿನಲ್ಲಿ ತಿಂಗಳಿಗೆ ಎರಡು ಸಲ ಸಪ್ತಪದಿ ಕಾರ್ಯಕ್ರಮ ನಡೆಸಲು ನಿರ್ಧರಿಸಲಾಗಿದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಫೆಬ್ರವರಿ ತಿಂಗಳ 17 ಮತ್ತು 25ರಂದು ಸಪ್ತಪದಿ ಸರಳ ಸಾಮೂಹಿಕ ವಿವಾಹ ಆಯೋಜಿಸಲಾಗುವುದು. ಆ ಬಳಿಕ ಆಯಾ ತಿಂಗಳ ಮುಹೂರ್ತ ನೋಡಿಕೊಂಡು ಆಯಾ ಜಿಲ್ಲೆಗಳ ಜನರ ಸಂಪ್ರದಾಯ,

ಸುಬ್ರಹ್ಮಣ್ಯ: ಮುಜರಾಯಿ ದೇವಾಲಯಗಳಲ್ಲಿ ಪ್ರತೀ ತಿಂಗಳು ಎರಡು ಬಾರಿ ಸಪ್ತಪದಿ ಕಾರ್ಯಕ್ರಮ ➤ ಕೋಟ ಶ್ರೀ ನಿವಾಸ್ ಪೂಜಾರಿ Read More »

ಕರಾವಳಿ, ಕರ್ನಾಟಕ

ಉಳ್ಳಾಲ: ಮಹಿಳೆಗೆ ಅತ್ಯಾಚಾರ ಹಾಗೂ ಮಕ್ಕಳಿಗೆ ಕಿರುಕುಳ ಪ್ರಕರಣ ➤ ಎಸ್ಡಿಪಿಐ ಮುಖಂಡನ ಬಂಧನ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 23. ಮತಾಂತರಗೊಂಡ ಮಹಿಳೆಗೆ ಸಹಾಯದ ನೆಪವಿಟ್ಟು ಅತ್ಯಾಚಾರವೆಸಗಿ ಆಕೆಯ ಇಬ್ಬರು ಹೆಣ್ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿ ತಲೆಮರೆಸಿಕೊಂಡಿದ್ದ ಉಳ್ಳಾಲದ ಎಸ್ಡಿಪಿಐ ಮುಖಂಡನನ್ನು ಉಳ್ಳಾಲ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.   ಬಂಧಿತ ಆರೋಪಿಯನ್ನು SDPI ಮುಖಂಡ ಸಿದ್ದೀಕ್ ಎಂದು ಗುರುತಿಸಲಾಗಿದೆ. ಈ ಸಂತ್ರಸ್ತ ಮಹಿಳೆಯು ಗಂಡನಿಂದ ದೂರವಾಗಿ ಉಳ್ಳಾಲದ ಒಂಭತ್ತುಕೆರೆ ಎಂಬಲ್ಲಿ ತನ್ನ ಇಬ್ಬರು ಅಪ್ರಾಪ್ತ ಹೆಣ್ಮಕ್ಕಳೊಂದಿಗೆ ವಾಸಿಸುತ್ತಿದ್ದು, ಈಕೆಗೆ ಸಹಾಯ ಮಾಡೋ ನೆಪದಲ್ಲಿ ಸ್ನೇಹ ಬೆಳೆಸಿಕೊಂಡ ಸಿದ್ದೀಕ್ ಆಕೆಯನ್ನು

ಉಳ್ಳಾಲ: ಮಹಿಳೆಗೆ ಅತ್ಯಾಚಾರ ಹಾಗೂ ಮಕ್ಕಳಿಗೆ ಕಿರುಕುಳ ಪ್ರಕರಣ ➤ ಎಸ್ಡಿಪಿಐ ಮುಖಂಡನ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಗಣರಾಜ್ಯೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 23. ಜಿಲ್ಲೆಯಲ್ಲಿ ನಡೆಯುವ ಈ ವರ್ಷದ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಕೋವಿಡ್ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸುವುದರೊಂದಿಗೆ  ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಎಮ್. ಜೆ. ರೂಪಾ ತಿಳಿಸಿದರು. ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮದ 2ನೇ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನೆಹರು ಮೈದಾನದಲ್ಲಿ ಜನವರಿ 26 ರಂದು ಬೆಳಗ್ಗೆ 9 ಗಂಟೆಗೆ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಲಿದ್ದು,  ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರೆವೇರಿಸಲಿದ್ದಾರೆ. ಕಾರ್ಯಕ್ರಮಕ್ಕೆ ಜನಪ್ರತಿನಿಧಿಗಳು,

ಮಂಗಳೂರು: ಗಣರಾಜ್ಯೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ Read More »

ಕರಾವಳಿ, ಕರ್ನಾಟಕ

ಸುರತ್ಕಲ್: ಫರ್ನಿಚರ್ ಮಳಿಗೆಯಲ್ಲಿ ಬೆಂಕಿ ಅವಘಡ ➤ ಅಪಾರ ನಷ್ಟ

(ನ್ಯೂಸ್ ಕಡಬ) newskadaba.com ಸುರತ್ಕಲ್‌, ಜ. 23. ಇಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಅಂಗಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಸುರತ್ಕಲ್‌ನಲ್ಲಿ ನಡೆದಿದೆ. ಶುಕ್ರವಾರದಂದು ರಾತ್ರಿ 11 ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದರಿಂದ ಅಂಗಡಿಯಲ್ಲಿದ್ದ ಸೊತ್ತುಗಳು ಬೆಂಕಿಗಾಹುತಿಯಾಗಿದೆ ಅಲ್ಲದೇ ಅಪಾರ ನಷ್ಟವೂ ಸಂಭವಿಸಿದೆ ಎನ್ನಲಾಗಿದೆ. ಸ್ಥಳಕ್ಕೆ ಸುರತ್ಕಲ್ ಠಾಣಾ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿ, ಬೆಂಕಿಯು ಶಾರ್ಟ್ ಸರ್ಕ್ಯೂಟ್ ನಿಂದ ಉಂಟಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಇನ್ನು ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕದಳದ ವಾಹನಗಳು ಕಾರ್ಯಾಚರಣೆ

ಸುರತ್ಕಲ್: ಫರ್ನಿಚರ್ ಮಳಿಗೆಯಲ್ಲಿ ಬೆಂಕಿ ಅವಘಡ ➤ ಅಪಾರ ನಷ್ಟ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top