ಕರ್ನಾಟಕ

ರೆಂಜಿಲಾಡಿ ಶಾಲೆಯಲ್ಲಿ ತುಳುನಾಡ ತುಡರ್ ಯುವಕ ಮಂಡಲದ ವತಿಯಿಂದ ಶ್ರಮದಾನ

(ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ಜ. 18. ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೂಜಿ-ರೆಂಜಿಲಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನೂಜಿಬೈಲ್ ತುಳುನಾಡ ತುಡರ್ ಯುವಕ ಮಂಡಲದ ವತಿಯಿಂದ ಜ.17ರಂದು ಶ್ರಮದಾನ ನಡೆಯಿತು. ನೂಜಿ ರೆಂಜಿಲಾಡಿ ಶಾಲೆಯಲ್ಲಿ ಸುವರ್ಣ ಮಹೋತ್ಸವ ನಡೆಯಲಿದ್ದು, ಪೂರ್ವಭಾವಿಯಾಗಿ  ಅಭಿವೃದ್ಧಿ ಕೆಲಸ ಕಾರ್ಯಗಳು ಭರದಿಂದ ಸಾಗುತ್ತಿದೆ. ಯುವಕ ಮಂಡಲದ ಸದಸ್ಯರು ಶಾಲೆಯ ಗೋಡೆಗೆ ಬಣ್ಣ ಬಳಿಯುವುದು, ವಠಾರ ಸ್ವಚ್ಚತೆ, ಹುಲ್ಲು ತೆರವು ಸೇರಿದಂತೆ ಇತರೆ ಕೆಲಸ ಕಾರ್ಯಗಳನ್ನು ನಡೆಸಿದರು. ಸುವರ್ಣ ಮಹೋತ್ಸವ ಸಮಿತಿ […]

ರೆಂಜಿಲಾಡಿ ಶಾಲೆಯಲ್ಲಿ ತುಳುನಾಡ ತುಡರ್ ಯುವಕ ಮಂಡಲದ ವತಿಯಿಂದ ಶ್ರಮದಾನ Read More »

ಕರಾವಳಿ, ಕರ್ನಾಟಕ

ಎಟಿಎಂ ನಿಂದ ನಗದು ದೋಚಿದ ಖತರ್ನಾಕ್ ಕಳ್ಳರು

(ನ್ಯೂಸ್ ಕಡಬ) newskadaba.com ತುಮಕೂರು, ಜ. 18. ಎಟಿಎಂ ಬಾಗಿಲು ಹೊಡೆದು ನಗದು ದೋಚಿದ ಘಟನೆ ಹೊರವಲಯದ ಹೆಗ್ಗೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಿದ್ದಾರ್ಥ ಮೆಡಿಕಲ್ ಕಾಲೇಜು ಬಳಿಯಿರುವ ಇಂಡಿಯನ್ ಓವರ್ ಸೀಸ್ ಬ್ಯಾಂಕಿಗೆ ಸೇರಿದ ಎಟಿಎಂ ನಿಂದ ನಗದು ಕಳ್ಳತನಗೈಯ್ಯಲಾಗಿದೆ. ಈ ಕಟ್ಟಡದ ಮೇಲ್ಬಾಗದಲ್ಲಿ ಕಾರ್ಯಾಚರಿಸುತ್ತಿರುವ ಜಿಮ್ ಗೆ ಮುಂಜಾನೆ ಯುವಕರು ಬಂದಾಗ ಘಟನೆ ಬೆಳಕಿಗೆ ಬಂದಿದೆ. ಅವರು ಕೂಡಲೇ ಪೋಲೀಸರಿಗೆ ಮಾಹಿತಿ ನೀಡಿದ್ದು, ತುಮಕೂರು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಎಟಿಎಂ ನಿಂದ ನಗದು ದೋಚಿದ ಖತರ್ನಾಕ್ ಕಳ್ಳರು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಫೋನ್ ಕರೆಗೆ ಮೋಸ ಹೋದ ಹೆಡ್ ಕಾನ್ಸ್‌ಟೇಬಲ್..! ➤ ಹೌಸ್ ಲೋನ್ ನಂಬಿ 34 ಲಕ್ಷ ಖೋತಾ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಜ‌ 18. ದೊಡ್ಡ ಮೊತ್ತದ ಲೋನ್ ಕೊಡಿಸುವುದಾಗಿ ನಂಬಿಸಿ ಪೊಲೀಸ್ ಹೆಡ್ ಕಾನ್ಸ್‌ಟೇಬಲ್ ಒಬ್ಬರನ್ನು ವಂಚಿಸಿ 34 ಲಕ್ಷ ರೂ ದೋಚಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಬಳ್ಳಾರಿ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಹೆಡ್ ಕಾನ್ಸ್‌ಟೇಬಲ್ ಅಗಿದ್ದ ಆರೋಗ್ಯಪ್ಪ(43) ಎಂಬವರು ಮೋಸ ಹೋದವರು. ಇವರಿಗೆ ಸಂಜಯ್ ಶರ್ಮಾ ಎಂಬಾತ ರಾಜಸ್ಥಾನ ಕಂಪನಿಯಿಂದ ಕವಿತಾದೇವಿ ಎಂದು ಹೇಳಿಕೊಂಡು ಕರೆಮಾಡಿ ನಿಮಗೆ ಐವತ್ತು ಲಕ್ಷ ರೂ. ಹೌಸಿಂಗ್ ಸಾಲದ ಆಫರ್ ಇದೆ. ವರ್ಷಕ್ಕೆ ಎರಡರಷ್ಟು

ಫೋನ್ ಕರೆಗೆ ಮೋಸ ಹೋದ ಹೆಡ್ ಕಾನ್ಸ್‌ಟೇಬಲ್..! ➤ ಹೌಸ್ ಲೋನ್ ನಂಬಿ 34 ಲಕ್ಷ ಖೋತಾ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ಮತ್ತೆ ಸದ್ದುಮಾಡಿದ ಹನಿಟ್ರ್ಯಾಪ್..! ➤ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 18. ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವಕನೋರ್ವನಿಗೆ ಮಹಿಳೆಯರಿಬ್ಬರು ಹನಿ ಟ್ರ್ಯಾಪ್ ಮಾಡಿ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕುಂಬಳೆಯ ಯುವಕನೋರ್ವನಿಗೆ ಸಾಮಾಜಿಕ ಜಾಲತಾಣದಲ್ಲಿ ಕೃಷ್ಣಾಪುರ ಮೂಲದ ಇಬ್ಬರು ಮಹಿಳೆಯರ ಪರಿಚಯವಾಗಿದ್ದು, ಬಳಿಕ ಯುವಕನೊಂದಿಗೆ ಸಲುಗೆಯಿಂದ ವರ್ತಿಸಿ ಭೇಟಿಯಾಗಲೆಂದು ಕೃಪ್ಣಾಪುರಕ್ಕೆ ಬರುವಂತೆ ಹೇಳಿದ್ದರು. ಇಬ್ಬರು ಮಹಿಳೆಯರ ಜೊತೆ ಮತ್ತಿಬ್ಬರು ಯುವಕರಿದ್ದು, ಈತನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ವಿವಸ್ತ್ರಗೊಳಿಸಿ, ಆತನ ಫೋಟೋ

ಮಂಗಳೂರು: ಮತ್ತೆ ಸದ್ದುಮಾಡಿದ ಹನಿಟ್ರ್ಯಾಪ್..! ➤ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರು: ರೈತ ವಿರೋಧಿ ನೀತಿಗಳನ್ನು ಹಿಂಪಡೆಯಲು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.18. ಕೇಂದ್ರ ಸರಕಾರ ಜಾರಿಗೆ ತಂದಿರುವ ನೂತನ ಕೃಷಿ ಮಸೂದೆಗಳನ್ನು  ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಕ್ಯಾಂಪಸ್ ಫ್ರಂಟ್ ಮಂಗಳೂರು ಜಿಲ್ಲಾ ಸಮಿತಿ ವತಿಯಿಂದ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟಿಸಲಾಯಿತು. ಈ ಸಂದರ್ಭ ಕ್ಯಾಂಪಸ್ ಫ್ರಂಟ್ ಮಂಗಳೂರು ಜಿಲ್ಲಾಧ್ಯಕ್ಷ ಹಸನ್ ಸಿರಾಜ್ ಮಾತನಾಡಿ ಕೇಂದ್ರದಲ್ಲಿ ಬಿಜೆಪಿ ಸರಕಾರವು ಅಧಿಕಾರಕ್ಕೆ ಬಂದ ನಂತರ ದೇಶದಲ್ಲಿ ವಿದ್ಯಾರ್ಥಿಗಳು, ದಲಿತರು, ಶಿಕ್ಷಕರು ಹೀಗೆ ವಿವಿಧ ವರ್ಗದ ಜನರ ಜೀವನ ಅಸ್ತವ್ಯಸ್ತವಾಗಿದೆ. ಈಗ ರೈತರ

ಮಂಗಳೂರು: ರೈತ ವಿರೋಧಿ ನೀತಿಗಳನ್ನು ಹಿಂಪಡೆಯಲು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಪರಿಸರ ಸ್ವಚ್ಛತೆಗೆ ನಮ್ಮ ಮೊದಲ ಆದ್ಯತೆ ➤ ಡಾ|| ಚೂಂತಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 18. ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳ, ದಕ್ಷಿಣ ಕನ್ನಡ ಜಿಲ್ಲಾ  ಪೌರರಕ್ಷಣಾ ಪಡೆ ಇದರ ಜಂಟಿ ಆಶ್ರಯದಲ್ಲಿ ಭಾನುವಾರದಂದು ನಗರದ ಮಂಗಳಾದೇವಿ ಸಮೀಪದ ಮಾರಿಗುಡಿ ದೇವಸ್ಥಾನ, ಬೋಳಾರ ಇಲ್ಲಿನ ದೇವಾಲಯದ ಆವರಣದಲ್ಲಿ ಸ್ವಚ್ಛತಾ  ಅಭಿಯಾನ  ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ  ಸಮಾದೇಷ್ಟರು ಮತ್ತು ಪೌರರಕ್ಷಣಾ ತಂಡದ ಮುಖ್ಯಪಾಲಕರಾದ ಡಾ|| ಮುರಲೀಮೋಹನ ಚೂಂತಾರು  ಅವರು ಪರಿಸರ ಸ್ವಚ್ಛತೆಗೆ ಪ್ರತಿಯೊಬ್ಬರು ಪ್ರಾಮುಖ್ಯತೆ ನೀಡಬೇಕು. ನಮ್ಮ

ಪರಿಸರ ಸ್ವಚ್ಛತೆಗೆ ನಮ್ಮ ಮೊದಲ ಆದ್ಯತೆ ➤ ಡಾ|| ಚೂಂತಾರು Read More »

ಕರಾವಳಿ, ಕರ್ನಾಟಕ

ಹಸಿವು ನೀಗಿಸುವುದು ಪುಣ್ಯದ ಕೆಲಸ ➤ ಮೇಯರ್ ದಿವಾಕರ ಪಾಂಡೇಶ್ವರ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 18. ಅತ್ಯಂತ ಬಡ ಮತ್ತು ಮಧ್ಯಮ ವರ್ಗದವರು ಆರ್ಥಿಕ ಸಂಕಷ್ಟದಿಂದ ಸರಕಾರಿ ಆಸ್ಪತ್ರೆಗೆ ದಾಖಲಾಗುತ್ತಾರೆ. ಅವರ ಜತೆಗಾರರಿಗೆ ಊಟದ ಖರ್ಚು ಮತ್ತಷ್ಟು ಹೊರೆ. ಇಂಥ ಸಂದರ್ಭದಲ್ಲಿ ಅವರಿಗೆ ನಿರಂತರ ಉಚಿತ ಊಟ ಕೊಡುತ್ತಿರುವ ಎಂ ಫ್ರೆಂಡ್ಸ್‍ ನ ಕಾರ್ಯಕ್ರಮ ಅತ್ಯಂತ ಪುಣ್ಯದಾಯಕ. ಇದಕ್ಕೆ ಸರ್ವರ ಸಹಕಾರ ಅಗತ್ಯ ಎಂದು ಮೇಯರ್ ದಿವಾಕರ ಪಾಂಡೇಶ್ವರ ಹೇಳಿದರು. ವೆನ್ಲಾಕ್ ಆಸ್ಪತ್ರೆಯಲ್ಲಿ ಒಳರೋಗಿಗಳ ಜತೆ ಇರುವವರಿಗೆ ಎಂ-ಫ್ರೆಂಡ್ಸ್  ಚಾರಿಟೇಬಲ್  ಟ್ರಸ್ಟ್‍ನಿಂದ  ಉಚಿತ  ಊಟ  ನೀಡುವ

ಹಸಿವು ನೀಗಿಸುವುದು ಪುಣ್ಯದ ಕೆಲಸ ➤ ಮೇಯರ್ ದಿವಾಕರ ಪಾಂಡೇಶ್ವರ Read More »

ಕರಾವಳಿ, ಕರ್ನಾಟಕ

ಕಾಸರಗೋಡು: ಅಕ್ರಮ ಮದ್ಯ ಹಾಗೂ ತಂಬಾಕು ಸಾಗಾಟ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 17. ಕೆಎಸ್.ಆರ್‌.ಟಿಸಿ ಬಸ್ ಮೂಲಕ ಅಕ್ರಮ ಮದ್ಯ ಮತ್ತು ತಂಬಾಕು ಉತ್ಪನ್ನಗಳನ್ನು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಮಂಜೇಶ್ವರ ಅಬಕಾರಿ ದಳದ ಸಿಬಂದಿಗಳು ವಶಕ್ಕೆ ಪಡೆದಿದ್ದಾರೆ.   ಬಂಧಿತ ಆರೋಪಿಯನ್ನು ಬಂಗಾಳ ಮೂಲದ ಫರೀದ್ ( 25) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಕಾಸರಗೋಡಿಗೆ ಬರುತ್ತಿದ್ದ ಕರ್ನಾಟಕ ಕೆ.ಎಸ್.ಆರ್‌.ಟಿಸಿ ಬಸ್ಸಿನಲ್ಲಿ ಸಾಗಿಸುತ್ತಿದ್ದ 50 ಕಿಲೋ ತಂಬಾಕು ಉತ್ಪನ್ನಗಳನ್ನು ವಶಪಡಿಸಿಕೊಂಡಿರುವ ಅಬಕಾರಿ ಸಿಬಂದಿಗಳು ಆರೋಪಿಯನ್ನು ಬಂಧಿಸಿದ್ದಾರೆ.

ಕಾಸರಗೋಡು: ಅಕ್ರಮ ಮದ್ಯ ಹಾಗೂ ತಂಬಾಕು ಸಾಗಾಟ ➤ ಆರೋಪಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕೆಇಬಿ ನೌಕರನ ಗುಂಡಿಟ್ಟು ಹತ್ಯೆ ➤ ಸ್ಥಳದಲ್ಲೇ ಪಾರ್ಟಿ ಮಾಡಿದ ಹಂತಕರು

(ನ್ಯೂಸ್ ಕಡಬ) newskadaba.com ಹಾಸನ, ಜ. 17. ಕೆಇಬಿ ನೌಕರನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಹಾಸನದ ಹೂವಿನಹಳ್ಳಿ ಕಾವಲು ಬಳಿ ನಡೆದಿದೆ. ಮೃತರನ್ನು ಸಂತೋಷ್(36) ಎಂದು ಗುರುತಿಸಲಾಗಿದೆ. ಇವರ ಮೃತದೇಹವು ಜಮೀನೊಂದರಲ್ಲಿ ಪತ್ತೆಯಾಗಿದ್ದು, ಈ ಸ್ಥಳದಲ್ಲಿ ಮದ್ಯದ ಬಾಟಲಿ ಹಾಗೂ ಊಟದ ಪ್ಯಾಕೆಟ್ ಗಳು ಪತ್ತೆಯಾಗಿದೆ. ಕೊಲೆಗೂ ಮೊದಲು ಹಂತಕರು ಈ ಪ್ರದೇಶದಲ್ಲಿ ಪಾರ್ಟಿ ಮಾಡಿರಬಹುದು ಅಥವಾ ಸಂತೋಷ್ ಜೊತೆಗೆ ಹಂತಕರು ಪಾರ್ಟಿ ನಡೆಸಿ ಆ ಬಳಿಕ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಭೇಟಿ

ಕೆಇಬಿ ನೌಕರನ ಗುಂಡಿಟ್ಟು ಹತ್ಯೆ ➤ ಸ್ಥಳದಲ್ಲೇ ಪಾರ್ಟಿ ಮಾಡಿದ ಹಂತಕರು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಅಕ್ರಮ ಮದ್ಯ ಸಾಗಾಟ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 17. ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಟೊಯೊಟಾ ಇಟಿಯೋಸ್ ಕಾರಿನಲ್ಲಿದ್ದ 50 ಲೀಟರ್ ಮದ್ಯವನ್ನು ವಶಕ್ಕೆ ಪಡೆದು ಆರೋಪಿಯನ್ನು ಬಂಧಿಸಿದ ಘಟನೆ ನಡೆದಿದೆ. ಬಂಧಿತ ಆರೋಪಿಯನ್ನು ಬಂಟ್ವಾಳ ತಾಲೂಕಿನ ಮೊಡಂಕಾಪಿನ ಸಂದೀಪ್ ಎಂದು ಗುರುತಿಸಲಾಗಿದೆ. ಆರೋಪಿಯ ಬಂಧನದ ಬಳಿಕ ಪೊಲೀಸರು ಆರೋಪಿಗೆ ಸಂಬಂಧಿಸಿದ ಕಟ್ಟಡಕ್ಕೆ ದಾಳಿ ನಡೆಸಿದ್ದು, 107 ಲೀಟರ್ ಮದ್ಯ ಮತ್ತು 34 ಲೀಟರ್ ಬಿಯರ್ ಹಾಗೂ ಆತನಲ್ಲಿದ್ದ ಇಟಿಯೋಸ್ ಕಾರು ಮತ್ತು ಅಶೋಕ್

ಬಂಟ್ವಾಳ: ಅಕ್ರಮ ಮದ್ಯ ಸಾಗಾಟ ➤ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top