ಕರ್ನಾಟಕ

ಎರಡು ದಿನಗಳ ರಾಜ್ಯ ಪ್ರವಾಸಕ್ಕೆ ಆಗಮಿಸಿದ ಗೃಹ ಸಚಿವ ಅಮಿತ್ ಶಾ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.17. ಬಿಜೆಪಿ ಹಿರಿಯ ನಾಯಕ, ಕೇಂದ್ರ ಗೃಹ ಸಚಿವ ಸಚಿವ ಅಮಿತ್ ಶಾ ಅವರು ಎರಡು ದಿನಗಳ ರಾಜ್ಯ ಪ್ರವಾಸಕ್ಕಾಗಿ ಶನಿವಾರದಂದು ಬೆಂಗಳೂರಿಗೆ ಆಗಮಿಸಿದ್ದಾರೆ. ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುಲಾಬಿ ಹೂ ನೀಡುವ ಮೂಲಕ ಸ್ವಾಗತಿಸಿದರು. ಬಳಿಕ ಅವರು ಶಿವಮೊಗ್ಗದ ಭದ್ರಾವತಿ ತಾಲೂಕಿನ ಬುಳ್ಳಾಪುರದ ಕ್ಷಿಪ್ರ ಕಾರ್ಯಾಚರಣೆ ಪಡೆಯ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಇಂದು ಬೆಳಗಾವಿಯಲ್ಲಿ ಬಹಿರಂಗ ಸಮಾವೇಶವನ್ನು ಉದ್ದೇಶಿಸಿ […]

ಎರಡು ದಿನಗಳ ರಾಜ್ಯ ಪ್ರವಾಸಕ್ಕೆ ಆಗಮಿಸಿದ ಗೃಹ ಸಚಿವ ಅಮಿತ್ ಶಾ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

Breaking News ➤ ವಿವಾದಿತ ಗೋಹತ್ಯಾ ನಿಷೇಧ ನಾಳೆ (ಜ.18)ಯಿಂದ ಜಾರಿ…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 17. ವಿವಾದಿಯ ಗೋಹತ್ಯಾ ನಿಷೇಧ ಕಾನೂನು ಜನವರಿ 18 ರಿಂದ ರಾಜ್ಯದಲ್ಲಿ ಜಾರಿಯಾಗಲಿದೆ ಎಂದು ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ. ಗೋಹತ್ಯೆ ನಿಷೇಧದ ಹಿನ್ನೆಲೆಯಲ್ಲಿ ಗೋವುಗಳ ಸಂರಕ್ಷಣೆಗೆ ಬೇಕಾಗುವ ಗೋಶಾಲೆ ಹಾಗೂ ಇನ್ನಿತರ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿ ಹಂತ ಹಂತವಾಗಿ ಗೋಶಾಲೆಗಳ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ಗೋವುಗಳ ಅಕ್ರಮ ಸಾಗಾಟ ಮತ್ತು ವಧೆ ಆಗುತ್ತಿರುವುದು

Breaking News ➤ ವಿವಾದಿತ ಗೋಹತ್ಯಾ ನಿಷೇಧ ನಾಳೆ (ಜ.18)ಯಿಂದ ಜಾರಿ…! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಸ್ತೆ ಬದಿ ನಿಂತಿದ್ದ ಬೈಕ್ ಗೆ ಬಸ್ ಢಿಕ್ಕಿ ➤ ಶಿಕ್ಷಕ ಮೃತ್ಯು

(ನ್ಯೂಸ್ ಕಡಬ) newskadaba.com ಕಾರ್ಕಳ, ಜ. 17. ರಸ್ತೆ ಬದಿ ಬೈಕ್ ನಿಲ್ಲಿಸಿ ಮೊಬೈಲ್ ಸಂಭಾಷಣೆಯಲ್ಲಿದ್ದ ವ್ಯಕ್ತಿಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ ಘಟನೆ ನಿಟ್ಟೆ ಗ್ರಾಮದ ಫಾರೆವರ್ ಎಂಬಲ್ಲಿ ನಡೆದಿದೆ. ಮೃತರನ್ನು ನಿಟ್ಟೆ ಗ್ರಾಮದ ವಸಂತ ದೇವಾಡಿಗ (45) ಎಂದು ಗುರುತಿಸಲಾಗಿದೆ. ಇವರು ಶನಿವಾರದಂದು ನಿಟ್ಟೆ ಗ್ರಾಮದ ಫಾರೆವರ್ ಸಮೀಪ ರಸ್ತೆ ಬದಿ ಬೈಕ್ ನಿಲ್ಲಿಸಿ ಫೋನ್‌ ನಲ್ಲಿ ಮಾತನಾಡುತ್ತಿದ್ದ ವೇಳೆ ಕಾರ್ಕಳ ಕಡೆಯಿಂದ ಪಡುಬಿದ್ರೆ ಕಡೆಗೆ ಸಾಗುತ್ತಿದ್ದ ಖಾಸಗಿ ಬಸ್ಸೊಂದು ರಸ್ತೆಯ ಎಡ

ರಸ್ತೆ ಬದಿ ನಿಂತಿದ್ದ ಬೈಕ್ ಗೆ ಬಸ್ ಢಿಕ್ಕಿ ➤ ಶಿಕ್ಷಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ನಿಯಂತ್ರಣ ತಪ್ಪಿ ತಡೆಬೇಲಿಗೆ ಢಿಕ್ಕಿ ಹೊಡೆದು ಕಾರು ಜಖಂ

(ನ್ಯೂಸ್ ಕಡಬ) newskadaba.com ಗಾಂಧಿನಗರ, ಜ. 17. ಇಲ್ಲಿನ ಮಸೀದಿಯ ಸಮೀಪ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಬೇಲಿಗೆ ಗುದ್ದಿದ ಘಟನೆ ರಾತ್ರಿ 3 ಗಂಟೆಗೆ ನಡೆದಿದೆ. ಘಟನೆಯಲ್ಲಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ.

ಸುಳ್ಯ: ನಿಯಂತ್ರಣ ತಪ್ಪಿ ತಡೆಬೇಲಿಗೆ ಢಿಕ್ಕಿ ಹೊಡೆದು ಕಾರು ಜಖಂ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅರಂತೋಡು: ಬಿಯರ್ ತುಂಬಿದ್ದ ಲಾರಿ ಪಲ್ಟಿ ➤ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಅರಂತೋಡು, ಜ. 17. ಮೈಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಬಿಯರ್ ತುಂಬಿದ ಲಾರಿಯೊಂದು ಅರಂತೋಡು ಸಮೀಪ ಕೊಡಂಕೇರಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾತ್ರಿ ನಡೆದಿದೆ. ಘಟನೆಯಲ್ಲಿ ವಿದ್ಯುತ್ ಕಂಬವೊಂದು ಮುರಿದು ಬಿದ್ದಿದ್ದು ಚಾಲಕ ಮತ್ತು ಕ್ಲೀನರ್ ಅಪಾಯದಿಂದ ಪಾರಾಗಿದ್ದಾರೆ. ಸುಮಾರು ರೂ 45 ಲಕ್ಷ ಮೌಲ್ಯದ ಬಿಯರ್ ಇತ್ತೆಂದು ಹೇಳಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

ಅರಂತೋಡು: ಬಿಯರ್ ತುಂಬಿದ್ದ ಲಾರಿ ಪಲ್ಟಿ ➤ ಚಾಲಕ ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ತೊಕ್ಕೊಟ್ಟು ಬೀಫ್ ಸ್ಟಾಲ್ ಗಳಿಗೆ ಬೆಂಕಿ ಹಚ್ಚಿದ ಪ್ರಕರಣ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 16. ಕಳೆದ ವಾರ ತೊಕ್ಕೊಟ್ಟು ಎಂಬಲ್ಲಿ ಬೀಫ್ ಸ್ಟಾಲ್ ಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ತೊಕ್ಕೊಟ್ಟು ಒಳಪೇಟೆ ನಿವಾಸಿ ನಾಗರಾಜ (37) ಎಂದು ಗುರುತಿಸಲಾಗಿದೆ. ಆರೋಪಿಯು ಇದೇ ಬೀಫ್ ಸ್ಟಾಲ್‌ ನಿಂದ ಹಲವು ಬಾರಿ ಮಾಂಸ ಖರೀದಿಸಿ ತನ್ನ ಸ್ನೇಹಿತನ ಮನೆಯಲ್ಲಿ ಅಡುಗೆ ಮಾಡಿ ಸೇವಿಸುತ್ತಿದ್ದನು. ಈ ಹಿಂದೆ ಮಾಂಸದಂಗಡಿಯ ಮಾಲಕರ ಜೊತೆ ನಿಗದಿತ ಬೆಲೆಗಿಂತ ಅಧಿಕ ಮಾಂಸ ನೀಡುವಂತೆ

ತೊಕ್ಕೊಟ್ಟು ಬೀಫ್ ಸ್ಟಾಲ್ ಗಳಿಗೆ ಬೆಂಕಿ ಹಚ್ಚಿದ ಪ್ರಕರಣ ➤ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಕರಾವಳಿಯ ವಿವಿಧ ದೇವಾಲಯಗಳಲ್ಲಿ ದರೋಡೆ ಮಾಡುತ್ತಿದ್ದ ಆರು ಮಂದಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 16. ಕರ್ನಾಟಕದ ವಿವಿಧ ದೇವಾಲಯಗಳಲ್ಲಿ ನಡೆದ ಹಲವಾರು ಕಳ್ಳತನಕ್ಕೆ ಸಂಬಂಧಿಸಿ ನಾಲ್ಕು ಮಹಿಳೆಯರು ಸೇರಿದಂತೆ ಆರು ಜನರನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಯಮುನಪ್ಪ ಮುತ್ತಪ್ಪ ಚಲವಾಡಿ (55), ಪ್ರಕಾಶ್ ಚೆನ್ನಪ್ಪ (26), ಶೋಭಾ ಮುತ್ತಾಗರ್ (40), ಕುಮಾರಮ್ಮ ಮಾರುತಿ ಮುತ್ತಾಗರ್ (45), ಶಾಂತಮ್ಮ ಮುತ್ತಾಗರ್ (55) ಹಾಗೂ ಚಂದ್ರಶೇಖರ್ ಶಿವರೆದಪ್ಪ (49) ಎಂಬವರನ್ನು ಬಂಧಿಸಿದ್ದಾರೆ. ಜೊತೆಗೆ ಇವರಲ್ಲಿದ್ದ ಏಳು ಮೊಬೈಲ್ ಫೋನ್‌, 21,540 ರೂ. ನಗದು, ಮತ್ತು

ಮಂಗಳೂರು: ಕರಾವಳಿಯ ವಿವಿಧ ದೇವಾಲಯಗಳಲ್ಲಿ ದರೋಡೆ ಮಾಡುತ್ತಿದ್ದ ಆರು ಮಂದಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ನೂತನ ಸಚಿವ ಎಸ್.ಅಂಗಾರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜ. 16. ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಜಿಲ್ಲೆಗೆ ಆಗಮಿಸಿದ ಸಚಿವ ಎಸ್. ಅಂಗಾರ ಅವರು ಇಂದು ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.  

ಸುಬ್ರಹ್ಮಣ್ಯ ದೇವಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ನೂತನ ಸಚಿವ ಎಸ್.ಅಂಗಾರ Read More »

ಕರಾವಳಿ, ಕರ್ನಾಟಕ

ಮಲ್ಪೆ: ಮೀನುಗಾರಿಕೆಂದು ತೆರಳಿದ್ದ ಮೀನುಗಾರ ಸಮುದ್ರಪಾಲು

(ನ್ಯೂಸ್ ಕಡಬ) newskadaba.com ಉಡುಪಿ, ಜ. 16. ಮೀನುಗಾರಿಕೆಗೆಂದು ತೆರಳಿದ್ದ ವೇಳೆ ಬೋಟಿನಿಂದ ಕಾಲು ಜಾರು ಕೆಳಗೆ ಬಿದ್ದು ಮೀನುಗಾರನೋರ್ವ ಮೃತಪಟ್ಟ ಘಟನೆ ಜಿಲ್ಲೆಯ ಮಲ್ಪೆ ತೀರದಿಂದ ಸುಮಾರು‌13 ನಾಟಿಕಲ್ ಮೈಲಿ ದೂರದಲ್ಲಿ ನಡೆದಿದೆ. ಮೃತ ಮೀನುಗಾರನನ್ನು ಸುಧಾಕರ ವೆಂಕಣ್ಣ ಹೊಸಕಟ್ಟೆ(39) ಎಂದು ಗುರುತಿಸಲಾಗಿದೆ. ಜನವರಿ ಹತ್ತರ ಸಂಜೆ ನಾಲ್ಕು ಗಂಟೆಯ ವೇಳೆಗೆ ಆಳ ಸಮುದ್ರ ಮೀನುಗಾರಿಕೆಗೆಂದು ಮಲ್ಪೆ ಬಂದರಿನಿಂದ ತ್ರಿಜಲ್ ಬೋಟಿನ ಮೂಲಕ ತೆರಳಿದ್ದರು. ಜನವರಿ ಹದಿಮೂರರ ಮಧ್ಯರಾತ್ರಿ ಮಲ್ಪೆ ಬಂದರಿನಿಂದ ಸುಮಾರು 13 ನಾಟಿಕಲ್

ಮಲ್ಪೆ: ಮೀನುಗಾರಿಕೆಂದು ತೆರಳಿದ್ದ ಮೀನುಗಾರ ಸಮುದ್ರಪಾಲು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಮನೆಗೆ ನುಗ್ಗಿದ ಕಳ್ಳರು ➤ ಲಕ್ಷಾಂತರ ರೂ. ಮೌಲ್ಯದ ನಗದು ಕಳವು

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ‌.16. ಇಲ್ಲಿನ ಮನೆಯೊಂದಕ್ಕೆ ಮುಂಬಾಗಿಲ ಬೀಗ ಮುರಿದು ಒಳನುಗ್ಗಿದ ಕಳ್ಳರು ಲಕ್ಷಾಂತರ ರೂ. ನಗದು ಕದ್ದೊಯ್ದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಕಲ್ಲೇರಿ ಎಂಬಲ್ಲಿ ಅಯದಯಂಗಾರ್ ಬೇಕರಿ ನಡೆಸುತ್ತಿದ್ದ ಶರತ್ ಎಂಬವರ ಮನೆಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನುಗ್ಗಿದ ಕಳ್ಳರು 180 ಗ್ರಾಂ. ತೂಕದ ಚಿನ್ನಾಭರಣ, ಹತ್ತು ಸಾವಿರಕ್ಕೂ ಮಿಕ್ಕ ನಗದು ಹಾಗೂ ದೇವರ ಕೋಣೆಯಲ್ಲಿದ್ದ ಬೆಳ್ಳಿ ಸಾಮಾಗ್ರಿಗಳನ್ನು ಕದ್ದೊಯ್ದಿದ್ದಾರೆ. ರಾತ್ರಿ ಅಂಗಡಿ ಮುಚ್ಚಿ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.

ಉಪ್ಪಿನಂಗಡಿ: ಮನೆಗೆ ನುಗ್ಗಿದ ಕಳ್ಳರು ➤ ಲಕ್ಷಾಂತರ ರೂ. ಮೌಲ್ಯದ ನಗದು ಕಳವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top