ಕರ್ನಾಟಕ

ರಸ್ತೆ ಬದಿ ನಿಂತಿದ್ದ ಲಾರಿಗೆ ಓಮ್ನಿ ಢಿಕ್ಕಿ ➤ ಮೂವರ ದುರ್ಮರಣ

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಜ. 07. ನಿಂತಿದ್ದ ಲಾರಿಗೆ ಓಮ್ನಿ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟ ಘಟನೆ ತಾಲೂಕಿನ ಕ್ಯಾದಿಗೆರೆ ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ರೇಣುಕಮ್ಮಾ ಶಂಕರ್ ಪುಟ್ಟಲಿಂಗಯ್ಯ ಹಾಗೂ ಶಿವರಾಜ್ ಎಂದು ಗುರುತಿಸಲಾಗಿದೆ. ದಾವಣಗೆರೆಯಿಂದ ಬೆಂಗಳೂರಿಗೆ ಕಡೆಗೆ ತೆರಳುತ್ತಿದ್ದ ಓಮ್ನಿ ಕಾರೊಂದು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಇನ್ನುಳಿದ ಮೂವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಚಿತ್ರದುರ್ಗ ಠಾಣಾ […]

ರಸ್ತೆ ಬದಿ ನಿಂತಿದ್ದ ಲಾರಿಗೆ ಓಮ್ನಿ ಢಿಕ್ಕಿ ➤ ಮೂವರ ದುರ್ಮರಣ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ ➤ ಆರೋಪಗಳಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 07. ವಿದೇಶದಿಂದ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ವರದಿಯಾಗಿದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ತಪಾಸಣೆ ನಡೆಸುತ್ತಿದ್ದ ವೇಳೆ ಗುದನಾಳದೊಳಗೆ ಅಂಟುವ ಫೇಸ್ಟ್ ಗುಳಿಗೆ ಹಾಗೂ ಒಳ ಉಡುಪಿನಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದುದು ಪತ್ತೆಯಾಗಿದೆ. ಇದಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.

ಮಂಗಳೂರು: ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ ➤ ಆರೋಪಗಳಿಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜ. 17: ರಾಜ್ಯದಾದ್ಯಂತ ಪಲ್ಸ್ ಪೋಲಿಯೊ

 (ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 07. ಜ.17ರಂದು ಕರ್ನಾಟಕ ರಾಜ್ಯದಾದ್ಯಂತ ಪಲ್ಸ್ ಪೋಲಿಯೊ ಕಾರ್ಯಕ್ರಮ ಆಯೋಜಿಸಲಾಗಿದ್ದು, ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಆರೋಗ್ಯ ಇಲಾಖಾ ವರದಿ ತಿಳಿಸಿದೆ. ಪೋಲಿಯೊ ವಿರುದ್ಧ ಹೋರಾಟದಲ್ಲಿ ಜಯಗಳಿಸಲು 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಎರಡು ಹನಿ ಪೋಲಿಯೊ ಲಸಿಕೆ ಹಾಕಿಸಬೇಕು. ಯಾವುದೇ ಮಗು ಲಸಿಕೆಯಿಂದ ವಂಚಿತವಾಗದಂತೆ ನೋಡಿಕೊಳ್ಳಬೇಕು ಎಂದು  ಆರೋಗ್ಯ ಇಲಾಖೆ ತಿಳಿಸಿದೆ.  

ಜ. 17: ರಾಜ್ಯದಾದ್ಯಂತ ಪಲ್ಸ್ ಪೋಲಿಯೊ Read More »

ಕರ್ನಾಟಕ

ರೌಡಿ ಶೀಟರ್ ಬಂಧಿಸಲು ಪೊಲೀಸರಿಂದ ಗುಂಡಿನ ದಾಳಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 07. ಹದನೈದಕ್ಕೂ ಅಧಿಕ ಪ್ರಕರಣಗಳ ಆರೋಪಿ ರೌಡಿ ಶೀಟರ್ ಓರ್ವನನ್ನು ಬಂಧಿಸಲು ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಆರೋಪಿ ಕಾರ್ತಿಕ್ ಎಂಬಾತನನ್ನು ಬಂಧಿಸಲೆಂದು ತೆರಳಿದ್ದ ವೇಳೆ ಆತ ಪೊಲೀಸರಿಗೆ ಹಲ್ಲೆ ನಡೆಸಿದ್ದು, ಪರಿಣಾಮ ಆತ್ಮರಕ್ಷಣೆಗೋಸ್ಕರ ಗುಂಡಿನ ದಾಳಿ ನಡೆಸಿದ್ದಾರೆ. ಆರೋಪಿಯ ಕಾಲಿಗೆ ಗುಂಡು ತಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ರೌಡಿ ಶೀಟರ್ ಬಂಧಿಸಲು ಪೊಲೀಸರಿಂದ ಗುಂಡಿನ ದಾಳಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ಸಿಡಿಲು ಬಡಿದು ಬೆಂಕಿಗಾಹುತಿಯಾದ ಹೋಟೆಲ್

(ನ್ಯೂಸ್ ಕಡಬ) newskadaba.com ಉಡುಪಿ, ಜ. 07. ಬುಧವಾರದಂದು ಸಂಜೆ ಸುರಿದ ಭಾರೀ ಮಳೆಯ ಮರಿಣಾಮ ಸಿಡಿಲು ಬಡಿದು ಹೋಟೆಲ್ ಬೆಂಕಿಗಾಹುತಿಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ಬ್ರಹ್ಮಾವರದ ಸಪ್ತಮಿ ಎಂಬ ಹೋಟೆಲೊಂದಕ್ಕೆ ಸಿಡಿಲು ಬಡಿದು ಬೆಂಕಿಗಾಹುತಿಯಾಗಿದೆ.

ಉಡುಪಿ: ಸಿಡಿಲು ಬಡಿದು ಬೆಂಕಿಗಾಹುತಿಯಾದ ಹೋಟೆಲ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಂಗ್ರೆಸ್ ಗೆ ಮತ್ತೆ ಆಘಾತ ➤ ಪ್ರಭಾವಿ ಕಾಂಗ್ರೆಸ್ ನಾಯಕ ಜೆಡಿಎಸ್ ಗೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 07. ಕಾಂಗ್ರೆಸ್ ಪಕ್ಷಕ್ಕೆ ಇದೀಗ ಮತ್ತೊಂದು ಆಘಾತ ಎದುರಾಗಿದ್ದು, ಕಾಂಗ್ರೆಸ್ ನಾಯಕ ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಜೆಡಿಎಸ್ ಸೇರುವುದಾಗಿ ಘೋಷಿಸಿಕೊಂಡಿದ್ದಾರೆ. ಬುಧವಾರದಂದು ಬೆಂಗಳೂರಿನಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಖಚಿತಪಡಿಸಿದ್ದ ಸಿ.ಎಂ.ಇಬ್ರಾಹಿಂ, ಇಂದು ಬೆಳಿಗ್ಗೆ ಬೆಂಗಳೂರಿನ ಪದ್ಮನಾಭನಗರದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಸಮಾಲೋಚನೆ ನಡೆಸಿದ್ದಾರೆ. ಮೊದಲು ಜನತಾ ದಳದಲ್ಲಿದ್ದ ಇಬ್ರಾಹಿಂ ತದನಂತರ ಕಾಂಗ್ರಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಸಿದ್ಧರಾಮಯ್ಯರ ಆಪ್ತರಾಗಿದ್ದ ಇವರು ಕೆಲಕಾಲ ಕಾಂಗ್ರೆಸ್

ಕಾಂಗ್ರೆಸ್ ಗೆ ಮತ್ತೆ ಆಘಾತ ➤ ಪ್ರಭಾವಿ ಕಾಂಗ್ರೆಸ್ ನಾಯಕ ಜೆಡಿಎಸ್ ಗೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ತಂಗಡಿ: ಅಂಗಡಿಗೆ ನುಗ್ಗಿದ ಪೊಲೀಸ್ ವಾಹನ ➤ ಮಹಿಳೆಗೆ ಗಾಯ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 07. ನಿಯಂತ್ರಣ ತಪ್ಪಿದ ಪೊಲೀಸ್ ವಾಹನವೊಂದು ದಿನಸಿ ಅಂಗಡಿಗೆ ನುಗ್ಗಿದ ಘಟನೆ ತಾಲೂಕಿನ ನಾರಾವಿ ಕೆಳಗಿನಪೇಟೆಯಲ್ಲಿ ನಡೆದಿದೆ. ಬೆಂಗಳೂರಿಗೆ ತೆರಳುತ್ತಿದ್ದ ಕಾರ್ಕಳ ಆರಕ್ಷಕ ಠಾಣೆಯ ಬೊಲೆರೊ ವಾಹನವೊಂದು ನಿಯಂತ್ರಣ ತಪ್ಪಿ ರಮೇಶ್ ಎಂಬವರ ಅಂಗಡಿಗೆ ನುಗ್ಗಿದ ಪರಿಣಾಮ ಮಹಿಳೆಯೋರ್ವರು ಗಾಯಗೊಂಡು, ಅಂಗಡಿ ಮಾಲಕ ಅಪಾಯದಿಂದ ಪಾರಾಗಿದ್ದಾರೆ.

ಬೆಳ್ತಂಗಡಿ: ಅಂಗಡಿಗೆ ನುಗ್ಗಿದ ಪೊಲೀಸ್ ವಾಹನ ➤ ಮಹಿಳೆಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜೂನ್ ನಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಮೇ ಎರಡನೇ ವಾರ ದ್ವಿತೀಯ ಪಿಯುಸಿ ಪರೀಕ್ಷೆ ➤ ಸಚಿವ ಸುರೇಶ್ ಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 07. ಜೂನ್ ಮೊದಲ ವಾರದಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಹಾಗೂ ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಜೂನ್ ನಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಮೇ ಎರಡನೇ ವಾರ ದ್ವಿತೀಯ ಪಿಯುಸಿ ಪರೀಕ್ಷೆ ➤ ಸಚಿವ ಸುರೇಶ್ ಕುಮಾರ್ Read More »

ಕರ್ನಾಟಕ

ಪಡಿತರ ಚೀಟಿದಾರರಿಗೆ ಸಿಹಿಸುದ್ದಿ ನೀಡಿದ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 07. ಪಡಿತರ ಚೀಟಿದಾರರಿಗೆ ರಾಜ್ಯ ಸರಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ರಾಜ್ಯದ ನ್ಯಾಯಬೆಲೆ ಅಂಗಡಿಗಳಲ್ಲಿ ಸ್ಯಾಂಡಲ್ ಸೋಪ್, ಅಡುಗೆ ಎಣ್ಣೆ ಹಾಗೂ ಉಪ್ಪು ಸಿಗಲಿದೆ ಎಂದು ಕರ್ನಾಟಕ ರಾಜ್ಯ ಸರಕಾರಿ ಪಡಿತರ ವಿತರಕರ ಸಂಘದಿಂದ ಹಮ್ಮಿಕೊಳ್ಳಲಾದ ರಾಜ್ಯ ಮಟ್ಟದ ಸಮ್ಮೇಳನದಲ್ಲಿ ಆಹಾರ ನಾಗರಿಕ ಸರಬರಾಜು ಸಚಿವ ಕೆ.ಗೋಪಾಲಯ್ಯ ತಿಳಿಸಿದ್ದಾರೆ. ಈ ಯೋಜನೆಯನ್ನು ಹಂತ ಹಂತವಾಗಿ ರಾಜ್ಯದಾದ್ಯಂತ ವಿತರಿಸಲಾಗುವುದು ಎಂದಿದ್ದಾರೆ.

ಪಡಿತರ ಚೀಟಿದಾರರಿಗೆ ಸಿಹಿಸುದ್ದಿ ನೀಡಿದ ರಾಜ್ಯ ಸರಕಾರ Read More »

ಕರ್ನಾಟಕ

ಶ್ರೀ ಸದ್ಗುರು ಸಾಯಿಬಾಬಾ ಸ್ವಾಮಿಯನ್ನು ನೆನೆಯುತ್ತ ಇಂದಿನ ನಿಮ್ಮ ಜೀವನದ ಭವಿಷ್ಯ ತಿಳಿದುಕೊಳ್ಳಿ

ಪಂಡಿತ್ ದಾಮೋದರ್ ಭಟ್ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9008993001 ಮೇಷ ರಾಶಿ ನಿಮ್ಮ ಕೆಲಸಗಳಲ್ಲಿ ಅನೇಕ ಸಕಾರಾತ್ಮಕ ಬದಲಾವಣೆಗಳನ್ನು ಕಾಣಬಹುದು ನಿಮ್ಮ ದೀರ್ಘಕಾಲದ

ಶ್ರೀ ಸದ್ಗುರು ಸಾಯಿಬಾಬಾ ಸ್ವಾಮಿಯನ್ನು ನೆನೆಯುತ್ತ ಇಂದಿನ ನಿಮ್ಮ ಜೀವನದ ಭವಿಷ್ಯ ತಿಳಿದುಕೊಳ್ಳಿ Read More »

ಕರ್ನಾಟಕ, ಭವಿಷ್ಯ
Scroll to Top