ಕರ್ನಾಟಕ

ಮಂಗಳೂರು ನಗರ ಪೊಲೀಸ್ ಆಯುಕ್ತ ಹಾಗೂ ಎಸಿಪಿ ದಿಢೀರ್ ವರ್ಗಾವಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 31. ಗ್ರಾಮ ಪಂಚಾಯತ್ ಚುನಾವಣಾ ಫಲಿತಾಂಶ ಹೊರ ಬೀಳುತ್ತಲೇ ಮಂಗಳೂರು ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಹಾಗೂ ಮಂಗಳೂರು ಎ.ಸಿ.ಪಿ ರಂಜಿತ್ ಕುಮಾರ್ ಅವರನ್ನು ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಹಾಗೂ ಎಸಿಪಿ ದಿಢೀರ್ ವರ್ಗಾವಣೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ತೆಕ್ಕಾರು: ಒಂದೇ ವಾರ್ಡ್ ನಲ್ಲಿ 3 ಪಕ್ಷದ ಅಭ್ಯರ್ಥಿಗಳನ್ನು ಕೈ ಹಿಡಿದ ಮತದಾರರು

(ನ್ಯೂಸ್ ಕಡಬ) newskadaba.com ಬೆಂಗಳೂರು , ಡಿ.31. ಈ ಬಾರಿಯ ಪಂಚಾಯತ್ ಚುನಾವಣೆ ಒಂದಲ್ಲ ಒಂದು ರೀತಿಯಿಂದ ವಿಶೇಷವಾಗಿತ್ತು. ಅದರಲ್ಲಿ ತೆಕ್ಕಾರು ಪಂಚಾಯತ್ ವ್ಯಾಪ್ತಿಯ ವಾರ್ಡ್-2 ರಲ್ಲಿ ಈ ಬಾರಿ ಮತದಾರರು 3 ಪಕ್ಷದ ಒಂದೊಂದು ಅಭ್ಯರ್ಥಿಗಳನ್ನು ಬೆಂಬಲಿಸಿದ್ದಾರೆ.   ಕಾಂಗ್ರೆಸ್ ನ ಭದ್ರ ಕೋಟೆ ಎಂದು ಹೇಳುತ್ತಿದ್ದ ತೆಕ್ಕಾರು-2 ನೇ ವಾರ್ಡ್ ನಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಐಸಮ್ಮರವರು 7 ಮತಗಳ ಅಂತರದಿಂದ ಜಯಶಾಲಿಯಾದರೆ, ಎಸ್.ಡಿ.ಪಿ.ಐ ಬೆಂಬಲಿತ ಅಭ್ಯರ್ಥಿ ಅನ್ವರ್ ನೆಲ್ಲಿಪಳಿಕೆ 10 ಮತಗಳ ಅಂತರದಿಂದ

ತೆಕ್ಕಾರು: ಒಂದೇ ವಾರ್ಡ್ ನಲ್ಲಿ 3 ಪಕ್ಷದ ಅಭ್ಯರ್ಥಿಗಳನ್ನು ಕೈ ಹಿಡಿದ ಮತದಾರರು Read More »

ಕರಾವಳಿ, ಕರ್ನಾಟಕ

ಮಂಗಳೂರು: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ➤ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 31. ಎರಡು ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಯುವಕನೋರ್ವ ಮೃತಪಟ್ಟ ಘಟನೆ ಇಂದು ನಡೆದಿದೆ. ಮೃತ ಯುವಕನನ್ನು ಸಿಪಿಸಿ ಕಾಂಪೌಂಡ್ ನಿವಾಸಿ ಹಸನ್ ತೈಶೀರ್ (18) ಎಂದು ಗುರುತಿಸಲಾಗಿದೆ. ಕಾಲೇಜು ವಿದ್ಯಾರ್ಥಿಯಾಗಿದ್ದ ಈತ ಬೈಕ್ ನಲ್ಲಿ‌ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಈ ಬಗ್ಗೆ ಸಂಚಾರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಂಗಳೂರು: ದ್ವಿಚಕ್ರ ವಾಹನಗಳ ನಡುವೆ ಢಿಕ್ಕಿ ➤ ಯುವಕ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ➤ ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಬೆಂಗಳೂರು , ಡಿ.31. ರಾಜ್ಯದ ಜನತೆ ಹೊಸ ವರ್ಷಾಚರಣೆಯ ಸಂಭ್ರಮದಲ್ಲಿದ್ದು, ಆದರೆ ಕೊರೋನಾ ಇದೀಗ ಜನರ ಸಂಭ್ರಮಕ್ಕೆ ಬ್ರೇಕ್ ಹಾಕಿದೆ.   ಇದರ ನಡುವೆ ಬ್ರಿಟನ್ ಕೊರೊನಾ ಸೋಂಕು ರಾಜ್ಯದಲ್ಲಿ ತಾಂಡವವಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಿ ಹಲವು ಕಡೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ರಾಜ್ಯದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ➤ ನಿಷೇಧಾಜ್ಞೆ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಜಿರೆಯಲ್ಲಿ ಪಾಕಿಸ್ತಾನ್ ಝಿಂದಾಬಾದ್ ಘೋಷಣೆ ಪ್ರಕರಣ ➤ ಆರು ಮಂದಿ ಕಾರ್ಯಕರ್ತರ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 31. ‌ತಾಲೂಕಿನ ಉಜಿರೆ‌ ಎಂಬಲ್ಲಿ ಗ್ರಾಮ ಪಂಚಾಯತ್ ಚುನಾವಣೆಯ‌ ಮತ‌ಎಣಿಕೆ ಸಂದರ್ಭದಲ್ಲಿ ಪಾಕಿಸ್ಥಾನ ಪರವಾಗಿ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಪೊಲೀಸರು 6 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಗುರುವಾಯನಕೆರೆ‌‌ ಸಮೀಪದ ಪಿಲಿಚಂಡಿಕಲ್ಲು ಕುವೆಟ್ಟು ನಿವಾಸಿಗಳಾದ ಮೊಹಮ್ಮದ್ ಹರ್ಷದ್( 22 ), ದಾವೂದ್ ( 36) ಹಾಗೂ ಇಸಾಕ್ (28) ಎಂಬವರನ್ನು ವಶಕ್ಕೆ ಪಡೆಯಲಾಗಿದ್ದು, ಇನ್ನೂ ಕೂಡ ಕೆಲವರನ್ನು ಬಂಧಿಸುವ ಸಾಧ್ಯತೆ ಇದೆ. ಎಸ್ಪಿ ಬಿ.ಎಂ.

ಉಜಿರೆಯಲ್ಲಿ ಪಾಕಿಸ್ತಾನ್ ಝಿಂದಾಬಾದ್ ಘೋಷಣೆ ಪ್ರಕರಣ ➤ ಆರು ಮಂದಿ ಕಾರ್ಯಕರ್ತರ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕೊರೋನಾ ಪರೀಕ್ಷೆ ಕಡ್ಡಾಯ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 28. ಮಂಗಳೂರಿಗೆ ಆಗಮಿಸುವ ಎಲ್ಲಾ ಅಂತರಾಷ್ಟ್ರೀಯ ಪ್ರಯಾಣಿಕರು 72 ಗಂಟೆಯ ಒಳಗೆ ಕೊರೋನಾ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೊರೋನಾ ವೈರಸ್‌ನ ಎರಡನೇ ಅಲೆಯು ಹರಡುವಿಕೆಯನ್ನು ತಡೆಗಟ್ಟಲು ಮುನ್ನೆಚ್ಚರಿಕಾ ಕ್ರಮವಾಗಿ ಈ ನಿಯಮವನ್ನು ಕೈಗೊಳ್ಳಲಾಗುತ್ತಿದೆ. ವಿದೇಶಿ ಪ್ರಯಾಣಿಕರು ತಮ್ಮ ಕೊರೊನಾ ಪರೀಕ್ಷೆಯನ್ನು ಮಾಡದಿದ್ದಲ್ಲಿ ಆರ್‌.ಟಿ-ಪಿಸಿಆರ್ ಪರೀಕ್ಷೆಯನ್ನು ಮಾಡಲಾಗುತ್ತದೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರು

ಮಂಗಳೂರು: ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕೊರೋನಾ ಪರೀಕ್ಷೆ ಕಡ್ಡಾಯ Read More »

ಕರಾವಳಿ, ಕರ್ನಾಟಕ

ತಾಯಿಯ ಜೊತೆ ಮಲಗಿದ್ದ 11 ತಿಂಗಳ ಕಂದಮ್ಮ ನಾಪತ್ತೆ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಡಿ. 28. ಶ್ವೇತಾ ಮತ್ತು ಶ್ರೀನಿವಾಸ್ ಎಂಬ ದಂಪತಿಗಳ 11 ತಿಂಗಳ ಹೆಣ್ಣು ಮಗು ಅನಿಶಾಳನ್ನು ಕಳ್ಳತನ ಮಾಡಿರುವ ಘಟನೆ ಜಿಲ್ಲೆಯ ಕಡೂರು ಪಟ್ಟಣದಲ್ಲಿ ನಡೆದಿದೆ. ಮನೆಗೆ ನುಗ್ಗಿದ ಕಳ್ಳರು ತಂದೆ-ತಾಯಿಯ ಜೊತೆ ಮಲಗಿದ್ದ ಕಂದಮ್ಮನನ್ನು ಕದ್ದು ಪರಾರಿಯಾಗಿದ್ದಾರೆ. 2 ವರ್ಷದ ಹಿಂದೆ ಶ್ವೇತಾ ಮತ್ತು ಶ್ರೀನಿವಾಸ್ ವಿವಾಹವಾಗಿತ್ತು. ಕೂಲಿ ಕೆಲಸ ಮಾಡಿಕೊಂಡಿದ್ದ ದಂಪತಿಗಳಿಗೆ ಒಬ್ಬಳೇ ಮಗಳಿದ್ದು, ಅತ್ಯಂತ ಪ್ರೀತಿಯಿಂದ ಸಾಕಿದ್ದರು. ಅಲ್ಲದೇ ಶ್ವೇತಾ ಮತ್ತು ಶ್ರೀನಿವಾಸ್ ದಂಪತಿ ಇತ್ತೀಚೆಗೆ ಹೊಸಮನೆಯೊಂದನ್ನು

ತಾಯಿಯ ಜೊತೆ ಮಲಗಿದ್ದ 11 ತಿಂಗಳ ಕಂದಮ್ಮ ನಾಪತ್ತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶ್ರೀ ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಯನ್ನು ನೆನೆಯುತ್ತ ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ

ಪಂಡಿತ್ ದಾಮೋದರ್ ಭಟ್ ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ .9008993001 ಮೇಷ ರಾಶಿ ನಿಮ್ಮ ವ್ಯವಹಾರಗಳಲ್ಲಿ ಮತ್ತಷ್ಟು ವಿಸ್ತರಣೆ ಮಾಡುವುದು ಅಗತ್ಯ ಆಪ್ತ ವರ್ಗದಿಂದ ವಿಶೇಷ

ಶ್ರೀ ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಯನ್ನು ನೆನೆಯುತ್ತ ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ Read More »

ಕರ್ನಾಟಕ, ಭವಿಷ್ಯ

ಡಿವೈಎಫ್‌ಐ ಕಾರ್ಯಕರ್ತನ ಹತ್ಯೆ ಪ್ರಕರಣ ➤ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ.27: ಡಿವೈಎಫ್‌ಐ ಕಾರ್ಯಕರ್ತ ಕಲ್ಲೂರಾವಿ ಹಳೆ ಕಡಪ್ಪುರದ ಅಬ್ದುಲ್ ರಹಮಾನ್ (30) ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರನ್ನು ತನಿಖಾ ತಂಡ ಬಂಧಿಸಿದೆ. ಬಂಧಿತರನ್ನು ಇರ್ಷಾದ್, ಹಸನ್ ಹಾಗೂ ಆಶೀರ್ ಎಂದು ಗುರುತಿಸಲಾಗಿದೆ. ಮೂವರು ಕೃತ್ಯದಲ್ಲಿ ನೇರವಾಗಿ ಶಾಮೀಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಘರ್ಷಣೆ ಸಂದರ್ಭದಲ್ಲಿ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದ ಇರ್ಷಾದ್‌ನನ್ನು ಶುಕ್ರವಾರ ಬೆಳಗ್ಗೆ ಕಾಸರಗೋಡಿಗೆ ಕರೆತರಲಾಯಿತು. ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿದ್ದು, 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನ್ಯಾಯಾಧೀಶರ ಮುಂದೆ

ಡಿವೈಎಫ್‌ಐ ಕಾರ್ಯಕರ್ತನ ಹತ್ಯೆ ಪ್ರಕರಣ ➤ ಮೂವರ ಬಂಧನ Read More »

ಕರ್ನಾಟಕ

ವಿದ್ಯುತ್ ಶಾಕ್ ತಗುಲಿ 11 ವರ್ಷದ ಬಾಲಕ ಮೃತ್ಯು.!

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ.27: ವಿದ್ಯುತ್ ಶಾಕ್ ತಗುಲಿ 11 ವರ್ಷದ ಬಾಲಕ ಮೃತಪಟ್ಟ ಘಟನೆ ಶನಿವಾರ ಸಂಜೆ ನಗರ ಹೊರವಲಯದ ಅಣಂಗೂರುನಲ್ಲಿ ನಡೆದಿದೆ. ಅಣಂಗೂರು ಗ್ರೀನ್ ಪಾರ್ಕ್ ಪ್ಲಾಟ್‌ನ ತ್ವಾಹಿರ್ ಬಾನುರವರ ಪುತ್ರ ಮುಹಮ್ಮದ್ ಇಬುಹಾ ಮೃತಪಟ್ಟ ಬಾಲಕ. ಆಟವಾಡುತ್ತಿದ್ದ ಬಾಲಕ ಸಮೀಪದ ಅಂಗಡಿಯೊಂದರ ಗ್ರಿಲ್ಸ್ ಸ್ಪರ್ಶಿಸಿದಾಗ ಈ ಘಟನೆ ನಡೆದಿದೆ.ಗ್ರಿಲ್ಸ್‌ಗೆ ವಿದ್ಯುತ್ ಪ್ರವಹಿಸುತ್ತಿತ್ತು ಎನ್ನಲಾಗಿದೆ. ಕಾಸರಗೋಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿದ್ಯುತ್ ಶಾಕ್ ತಗುಲಿ 11 ವರ್ಷದ ಬಾಲಕ ಮೃತ್ಯು.! Read More »

ಕರ್ನಾಟಕ
Scroll to Top