ಕರ್ನಾಟಕ

ಕಡಬ: 108 ಆಂಬ್ಯುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ…‼️

(ನ್ಯೂಸ್ ಕಡಬ) newskadaba.com ಕಡಬ, ಡಿ.09. ಕಡಬದ 108 ಅಂಬ್ಯುಲೆನ್ಸ್ ನಲ್ಲಿ ಗರ್ಭಿಣಿ ಮಹಿಳೆಯೋರ್ವರು ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಬುಧವಾರದಂದು ನಡೆದಿದೆ. ಎಡಮಂಗಲ ಡೆಕ್ಕಳ ನಿವಾಸಿ ಹರಿಪ್ರಸಾದ್ ಎಂಬವರ ಪತ್ನಿ ಹೇಮಲತಾ ಎಂಬಾಕೆ ಮೊದಲ ಹೆರಿಗೆಗೆಂದು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಾಗಿದ್ದರು. ತಪಾಸಣೆ ನಡೆಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಯ ಅಗತ್ಯ ಇದ್ದುದರಿಂದ ಪುತ್ತೂರು ಅಥವಾ ಸುಳ್ಯಕ್ಕೆ ಕರೆದೊಯ್ಯಲು ಸೂಚಿಸಿದ್ದು, ಅದರಂತೆ ಕಡಬದ 108 ಅಂಬ್ಯುಲೆನ್ಸ್ ನಲ್ಲಿ ತೆರಳುತ್ತಿದ್ದಾಗ ಐವರ್ನಾಡು ಸಮೀಪ ಮಹಿಳೆ ಹೆಣ್ಣು […]

ಕಡಬ: 108 ಆಂಬ್ಯುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ…‼️ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದ ಕಾರು ➤ ಕೆಎಂಎಫ್‌ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.09: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದ ಪರಿಣಾಮ ಕೆಎಂಎಫ್ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಮೃತಪಟ್ಟಿದ್ದಾರೆ. ಅವರು ಶಂಕರನಾರಾಯಣದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.ಸ್ಥಳಕ್ಕೆ ಶಂಕರನಾರಾಯಣ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಹದ್ದೂರು ರಾಜೀವ್ ಶೆಟ್ಟಿಯವರನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆತರುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ.  

ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದ ಕಾರು ➤ ಕೆಎಂಎಫ್‌ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಮೃತ್ಯು Read More »

ಕರಾವಳಿ, ಕರ್ನಾಟಕ

ಕಾಸರಗೋಡು :ಯುವತಿಗೆ ಬೆದರಿಸಿ ಲಕ್ಷಾಂತರ ರೂ. ವಂಚಿಸಲು ಯತ್ನ ➤ ಆರೋಪಿ ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ವಿದ್ಯಾನಗರ, ಡಿ.09: ಯುವತಿಗೆ ಬೆದರಿಸಿ ಲಕ್ಷಾಂತರ ರೂ. ವಂಚಿಸಲು ಯತ್ನಿಸಿದ್ದ ಓರ್ವ ಆರೋಪಿಯನ್ನು ವಿದ್ಯಾನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೊಲ್ಲಂಪಾಡಿಯ ಅಬ್ದುಲ್ ಖಾದರ್ (31) ಎಂದು ಗುರುತಿಸಲಾಗಿದೆ. ಅಬ್ದುಲ್ ಖಾದರ್ ಸಾಮಾಜಿಕ ಜಾಲತಾಣದಲ್ಲಿ ಯುವತಿಯೊಬ್ಬಳಿಗೆ ಪರಿಚಯವಾಗಿದ್ದ. ಆಕೆಯ ಸ್ನೇಹ ಬೆಳೆಸಿ ಖಾಸಗಿ ಫೋಟೋವನ್ನು ಪಡೆದುಕೊಂಡಿದ್ದ. ಅವುಗಳನ್ನು ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗಪಡಿಸುವುದಾಗಿ ಬೆದರಿಸಿದ್ದ ಆರೋಪಿಯು 25 ಲಕ್ಷ ರೂ. ಗೆ ಬೇಡಿಕೆ ಇಟ್ಟಿದ್ದ. ಈ ಸಂಬಂಧ ಯುವತಿಯು ವಿದ್ಯಾನಗರ ಠಾಣೆಗೆ ದೂರು

ಕಾಸರಗೋಡು :ಯುವತಿಗೆ ಬೆದರಿಸಿ ಲಕ್ಷಾಂತರ ರೂ. ವಂಚಿಸಲು ಯತ್ನ ➤ ಆರೋಪಿ ಖಾಕಿ ಬಲೆಗೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕುಸಿದು ಬಿದ್ದ ವೃಕ್ಷಗಳ ಮಾತೆ ಸಾಲುಮರದ ತಿಮ್ಮಕ್ಕ ➤ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಬೇಲೂರು, ಡಿ.09: ಪದ್ಮ ಶ್ರೀ ಪುರಸ್ಕ್ರತ, ವೃಕ್ಷಗಳ ಮಾತೆ ಪರಿಸರ ಪ್ರೇಮಿ ಸಾಲುಮರದ ತಿಮ್ಮಕ್ಕ ಅವರು ಅನಾರೋಗ್ಯಕ್ಕೆ ಒಳಗಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೇಲೂರಿನ ತಮ್ಮ ನಿವಾಸದಲ್ಲಿ ಕುಸಿದು ಬಿದ್ದ ತಿಮ್ಮಕ್ಕರವರಿಗೆ ಸೊಂಟದ ಮೂಳೆ ಮುರಿದಿದೆ ಎಂದು ಮೂಲಗಳು ತಿಳಿಸಿವೆ.ಡಿ.09 ರ ಇಂದು ಅಪರೇಷನ್ ನಡೆಸುವ ಸಾಧ್ಯತೆಯಿದೆ ಎಂದು ತಿಮ್ಮಕ್ಕರವರ ದತ್ತು ಪುತ್ರ ಉಮೇಶ್ ರವರು ಮಾಹಿತಿ ನೀಡಿದ್ದಾರೆ.    

ಕುಸಿದು ಬಿದ್ದ ವೃಕ್ಷಗಳ ಮಾತೆ ಸಾಲುಮರದ ತಿಮ್ಮಕ್ಕ ➤ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ

ರಫ್ತಾರ್ ಟರ್ಮಿನಲ್ ಪ್ರೈವೇಟ್ ಲಿಮಿಟೆಡ್‌ನ ಪೆಟ್ರೋಲಿಯಂ ತೈಲ ಘಟಕದಲ್ಲಿ ಆನ್‌ಸೈಟ್ ತುರ್ತು ಅಣುಕು ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.09: ಮಂಗಳೂರಿನ ನಗರದ ಹೊರವಲಯದ ಪಣಂಬೂರಿನಲ್ಲಿ ಬೀಚಿನಲ್ಲಿ ಕೆ.ಐ.ಎ.ಡಿ.ಬಿಯಲ್ಲಿ ಕೈಗಾರಿಕಾ ರಾಸಾಯನಿಕ ತುರ್ತು ನಿವಾರಣಾ ಮಾಹೆಯ ಅಂಗವಾಗಿ ಪಣಂಬೂರು ಬೀಚಿನ ರಫ್ತರ್ ಟರ್ಮಿನಲ್ ಪ್ರೈವೇಟ್ ಲಿಮಿಟೆಡ್‌ನ ಪೆಟ್ರೋಲಿಯಂ ತೈಲ ಘಟಕದಲ್ಲಿ ಡೀಸೆಲ್‌ಗೆ ಬೆಂಕಿ ಬಿದ್ದಂತಹ ಸಂದರ್ಭದಲ್ಲಿ ತುರ್ತು ನಿರ್ವಹಣಾ ಅಣುಕು ಕಾರ್ಯಾಚರಣೆಯನ್ನು ಕೈಗೊಂಡು ಬೆಂಕಿ ನಂದಿಸಲಾಯಿತು. ಮಧ್ಯಾಹ್ನ 3.35 ರ ಸಮಯದಲ್ಲಿ ತೈಲವನ್ನು ಲಾರಿಗಳಿಗೆ ತುಂಬುವ ನಿಲ್ದಾಣದಲ್ಲಿ ಲಾರಿಯ ಟ್ಯಾಂಕಿನ ಕ್ಯಾಪ್‌ನ್ನು ತಿರುಗಿಸಿ ತೆರೆಯುವ ಸಂದರ್ಭದಲ್ಲಿ ಲಾರಿಯ ಒಳಗಿದ್ದ ಡೀಸೆಲ್ ಕ್ಯಾಪ್‌ನ

ರಫ್ತಾರ್ ಟರ್ಮಿನಲ್ ಪ್ರೈವೇಟ್ ಲಿಮಿಟೆಡ್‌ನ ಪೆಟ್ರೋಲಿಯಂ ತೈಲ ಘಟಕದಲ್ಲಿ ಆನ್‌ಸೈಟ್ ತುರ್ತು ಅಣುಕು ಕಾರ್ಯಾಚರಣೆ Read More »

ಕರಾವಳಿ, ಕರ್ನಾಟಕ

ಕೆಫೆ ಕಾಫಿ ಡೇ ನೂತನ ಸಿಇಒ ಆಗಿ ಮಾಳವಿಕ ಹೆಗ್ಡೆ ನೇಮಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.08:ಕಾಫೀ ಡೇ ಎಂಟರ್ ಪ್ರೈಸಸ್ ಸಂಸ್ಥೆಯ ನೂತನ ಮುಖ್ಯ ಕಾರ್ಯ ನಿರ್ವಾಹಕ ಆಧಿಕಾರಿಯಾಗಿ( ಸಿಇಒ) ವಿ.ಜಿ. ಸಿದ್ಧಾರ್ಥ ಪತ್ನಿ ಮಾಳವಿಕಾ ಹೆಗ್ಡೆ ಅವರು ನೇಮಕಗೊಂಡಿದ್ದಾರೆ. ಕಳೆದ ವರ್ಷ ಕಾಫಿ ಡೇ ಸಂಸ್ಥಾಪಕ ಸಿದ್ದಾರ್ಥ್ ಹೆಗ್ಡೆ ಮಂಗಳೂರಿನಲ್ಲಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಸಿದ್ದಾರ್ಥ್ ನಿಧನದಿಂದ ತಾತ್ಕಾಲಿಕ ಅಧ್ಯಕ್ಷರಾಗಿ ನಿವೃತ್ತ ಮುಖ್ಯ ಕಾರ್ಯದರ್ಶಿ ಎಸ್.ವಿ. ರಂಗನಾಥ್ ಅವರನ್ನು ನೇಮಕ ಮಾಡಲಾಗಿತ್ತು. ಇದೀಗ ನೂತನ ಸಿಇಒ ಆಗಿ ಮಾಳವಿಕರನ್ನು ನೇಮಕಾತಿ ಮಾಡಲಾಗಿದೆ ಎಂದು ಸಂಸ್ಥೆ

ಕೆಫೆ ಕಾಫಿ ಡೇ ನೂತನ ಸಿಇಒ ಆಗಿ ಮಾಳವಿಕ ಹೆಗ್ಡೆ ನೇಮಕ Read More »

ಕರ್ನಾಟಕ

ಹಿರಿಯ ಪತ್ರಕರ್ತ, ನಿವೃತ್ತ ಪ್ರಾಚಾರ್ಯ ಕೆ ದಾಮೋದರ ಐತಾಳ ನಿಧನ

(ನ್ಯೂಸ್ ಕಡಬ) newskadaba.com ಉಡುಪಿ, ಡಿ.08: ಹಿರಿಯ ಪತ್ರಕರ್ತ, ನಿವೃತ್ತ ಪ್ರಾಚಾರ್ಯ ಕೆ ದಾಮೋದರ ಐತಾಳ ನಿಧನರಾಗಿದ್ದಾರೆ.  ಅನೇಕ ವರ್ಷಗಳ ಕಾಲ ನಾಡಿನ‌ ವಿವಿಧ ಶಿಕ್ಷಕ ತರಬೇತಿ ಕಾಲೇಜುಗಳಲ್ಲಿ ಪ್ರಾಧ್ಯಾಪಕ , ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ , ಪತ್ರಕರ್ತರಾಗಿ  ಉಡುಪಿ ಬಳಕೆದಾರರ ವೇದಿಕೆ ವಿಶ್ವಸ್ಥ, ತುಳು ಶಿವಳ್ಳಿ ಮಾಧ್ವ ಮಹಾಮಂಡಲದ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ , ಪ್ರತಿಷ್ಠಿತ ಉಡುಪಿ ಟೀಚರ್ಸ್ ಕೋ ಆಪರೇಟಿವ್ ಬ್ಯಾಂಕ್ ಸ್ಥಾಪನೆಗೆ ಶ್ರಮಿಸಿದ್ದ ಹಿರಿಯ ಸಾಮಾಜಿಕ ಧುರೀಣ ಕೆ ದಾಮೋದರ

ಹಿರಿಯ ಪತ್ರಕರ್ತ, ನಿವೃತ್ತ ಪ್ರಾಚಾರ್ಯ ಕೆ ದಾಮೋದರ ಐತಾಳ ನಿಧನ Read More »

ಕರ್ನಾಟಕ

ಶಸ್ತ್ರಾಸ್ತ್ರಗಳ ಠೇವಣಿ ➤ ಪರಿಷ್ಕøತ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.08: 2020 ನೇ ಸಾಲಿನ ಗ್ರಾಮ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದುಗ್ರಾಮ ಪಂಚಾಯಿತಿ ಬೆಳ್ತಂಗಡಿ ತಾಲೂಕಿನ ವೇಣೂರು ಮತ್ತು ಆರಂಬೋಡಿ ಗ್ರಾಮ ಪಂಚಾಯಿತಿ ವ್ಯಾಪ್ತಿ ಹೊರತುಪಡಿಸಿ ಉಳಿದಂತೆ ಎಲ್ಲಾಗ್ರಾಮ ಪಂಚಾಯಿತಿಗಳಿಗೊಳಪಟ್ಟ ಬೆಳೆ ರಕ್ಷಣೆಗಾಗಿ ಮತ್ತು ಆತ್ಮರಕ್ಷಣೆಗಾಗಿ ಪರವಾನಿಗೆ ಹೊಂದಿರುವಎಲ್ಲಾ ಪರವಾನಿಗೆದಾರರು ತಮ್ಮ ಪರವಾನಿಗೆ ಹೊಂದಿರುವ ಎಲ್ಲಾ ಶಸ್ತ್ರಾಸ್ತ್ರಗಳನ್ನು ಚುನಾವಣಾ ಅವಧಿಯಲ್ಲಿ ಠೇವಣಿಯಲ್ಲಿರಿಸುವಂತೆ ಜಿಲ್ಲಾಧಿಕಾರಿ ಡಾರಾಜೇಂದ್ರ ಕೆ.ವಿ ಪರಿಷ್ಕೃತವಾಗಿ ಆದೇಶಿಸಿದ್ದಾರೆ.   ಮಂಗಳೂರು ನಗರ ಪೊಲೀಸ್

ಶಸ್ತ್ರಾಸ್ತ್ರಗಳ ಠೇವಣಿ ➤ ಪರಿಷ್ಕøತ ಆದೇಶ Read More »

ಕರಾವಳಿ, ಕರ್ನಾಟಕ

ಆಸ್ಪತ್ರೆಯಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ➤ ನಾಲ್ವರು ಆರೋಪಿಗಳು ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಡಿ.08: ರಾಜ್ಯದ ಜನತೆಯನ್ನು ಬೆಚ್ಚಿಬೀಳಿಸಿದ್ದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದ ಬಾಲಕಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ನಾಲ್ವರು ಆರೋಪಿತರು ಒಂದೇ ಬಡಾವಣೆಯ ನಿವಾಸಿಗಳು. ಈ ಪೈಕಿ ಒಬ್ಬ ವಿದ್ಯಾರ್ಥಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಮುಖ ಆರೋಪಿ ಮನೋಜ್, ಪ್ರಜ್ಬಲ್, ವಿನಯ್, ಸಂದೀಪ್ ಎಂಬವರನ್ನು ಬಂಧಿಸಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.ಬಂಧಿತರೆಲ್ಲರೂ ಒಂದೇ ಬಡಾವಣೆಯವರಾಗಿದ್ದು, 20 ರಿಂದ 23 ವಷರ್ದವರಾಗಿದ್ದಾರೆ. ಬಂಧಿತರ ಪೈಕಿ

ಆಸ್ಪತ್ರೆಯಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ ➤ ನಾಲ್ವರು ಆರೋಪಿಗಳು ಖಾಕಿ ಬಲೆಗೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ ವರ್ಗಾವಣೆ ಆದೇಶಕ್ಕೆ ತಡೆ ➤ ಆಡಳಿತಾತ್ಮಕ ನ್ಯಾಯ ಮಂಡಳಿಯಿಂದ ಮಧ್ಯಂತರ ಆದೇಶ

(ನ್ಯೂಸ್ ಕಡಬ) newskadaba.com ಕಡಬ, ಡಿ.07. ಕಡಬ ತಾಲ್ಲೂಕು ಕಚೇರಿಯಲ್ಲಿ ಕಂದಾಯ ನಿರೀಕ್ಷಕರಾಗಿ ಕರ್ತವ್ಯದಲ್ಲಿದ್ದ ಅವಿನ್ ರಂಗತ್ತಮಲೆ ಅವರ ವರ್ಗಾವಣೆ ಆದೇಶಕ್ಕೆ ಬೆಂಗಳೂರಿನ ಆಡಳಿತಾತ್ಮಕ ನ್ಯಾಯ ಮಂಡಳಿಯು ತಡೆ ನೀಡಿದೆ. ಕಡಬ ತಾಲೂಕು ಕಂದಾಯ ನಿರೀಕ್ಷಕರಾಗಿ ಗೋಪಾಲ ಕೆ. ಎಂಬವರನ್ನು ಬಂಟ್ವಾಳದಿಂದ ಕಡಬಕ್ಕೆ ವರ್ಗಾಯಿಸಿ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ನವೆಂಬರ್ 21ರಂದು ಆದೇಶವನ್ನು ಹೊರಡಿಸಿದ್ದರು. ಸದರಿ ಆದೇಶದ ವಿರುದ್ಧ ಅವಿನ್ ರಂಗತ್ತಮಲೆಯವರು ಅವಧಿಗೆ ಮುನ್ನ ಹಾಗೂ ಬೇರೆ ಯಾವುದೇ ಕೆಲಸದ ಜಾಗವನ್ನು ತೋರಿಸದೆ ವರ್ಗಾವಣೆ

ಕಡಬ ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ ವರ್ಗಾವಣೆ ಆದೇಶಕ್ಕೆ ತಡೆ ➤ ಆಡಳಿತಾತ್ಮಕ ನ್ಯಾಯ ಮಂಡಳಿಯಿಂದ ಮಧ್ಯಂತರ ಆದೇಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top