ಕರ್ನಾಟಕ

ಚಾರ್ಮಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಕಾರು ➤ ಕಂದಕದಲ್ಲಿ ಸಿಲುಕಿಕೊಂಡ ಐವರು.!

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಡಿ. 05: ಚಾಲಕನ ನಿಯಂತ್ರಣ ತಪ್ಪಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಾರೊಂದು 150 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದಿರುವ ಘಟನೆ ಚಾರ್ಮಾಡಿ ಘಾಟ್‍ನ ಬಿದರತಳದಲ್ಲಿ ನಡೆದಿದೆ.     ಕಾರಿನಲ್ಲಿದ್ದ ಐವರು ಕಂದಕದಲ್ಲಿ ಸಿಲುಕಿದ್ದು, ಮೂವರು ಗಾಯಗೊಂಡಿದ್ದಾರೆ. ಇವರನ್ನು ಸ್ಥಳೀಯರ ಸಹಾಯದಿಂದ ರಕ್ಷಣೆ ಮಾಡಲಾಗಿದ್ದು, ಅಪಘಾತದಲ್ಲಿ ಗಾಯಗೊಂಡವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.  

ಚಾರ್ಮಡಿ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಕಾರು ➤ ಕಂದಕದಲ್ಲಿ ಸಿಲುಕಿಕೊಂಡ ಐವರು.! Read More »

ಕರ್ನಾಟಕ

ಕಡಬ ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ➤ ಅಧ್ಯಕ್ಷರಾಗಿ ನಾಗರಾಜ್ ಎನ್.ಕೆ., ಕಾರ್ಯದರ್ಶಿಯಾಗಿ ವಿಜಯ್ ಕುಮಾರ್ ಪೆರ್ಲ

(ನ್ಯೂಸ್ ಕಡಬ) newskadaba.com ಕಡಬ, ಡಿ.05. ಕಡಬ ತಾಲೂಕು ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಕಛೇರಿಯಲ್ಲಿ ಶನಿವಾರದಂದು ನಡೆಯಿತು. ನೂತನ ಅಧ್ಯಕ್ಷರಾಗಿ ಕಡಬದ ಉದಯವಾಣಿ ವರದಿಗಾರ ನಾಗರಾಜ್ ಎನ್.ಕೆ. ಅವಿರೋಧವಾಗಿ ಆಯ್ಕೆಯಾದರು. ಕಾರ್ಯದರ್ಶಿಯಾಗಿ ಸುದ್ದಿ ಬಿಡುಗಡೆ ಪತ್ರಿಕೆಯ ಕಡಬ ವರದಿಗಾರ ವಿಜಯ ಕುಮಾರ್ ಪೆರ್ಲ, ಉಪಾಧ್ಯಕ್ಷರಾಗಿ ಸುಧಾಕರ ಆಚಾರ್ಯ ಕಾಣಿಯೂರು, ಜೊತೆ ಕಾರ್ಯದರ್ಶಿಯಾಗಿ ವಿಜಯವಾಣಿ ಪತ್ರಿಕೆಯ ಕಡಬದ ವರದಿಗಾರ ಪ್ರವೀಣ್ ರಾಜ್ ಕೊಯಿಲ, ಕೋಶಾಧಿಕಾರಿಯಾಗಿ ವಾರ್ತಾಭಾರತಿಯ ತಸ್ಲೀಂ ಮರ್ಧಾಳ ಅವರನ್ನು ಆಯ್ಕೆ ಮಾಡಲಾಯಿತು.

ಕಡಬ ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ➤ ಅಧ್ಯಕ್ಷರಾಗಿ ನಾಗರಾಜ್ ಎನ್.ಕೆ., ಕಾರ್ಯದರ್ಶಿಯಾಗಿ ವಿಜಯ್ ಕುಮಾರ್ ಪೆರ್ಲ Read More »

ಕರ್ನಾಟಕ

ಕಾಸರಗೋಡು: ಆಕಸ್ಮಿಕವಾಗಿ ಅಶ್ರುವಾಯು (ಗ್ರನೇಡ್) ಸ್ಪೋಟ…!

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ. 04: ಕಾಸರಗೋಡು ಸಶಸ್ತ್ರ ಮೀಸಲು ಪಡೆಯ ಮೈದಾನದಲ್ಲಿ ಆಕಸ್ಮಿಕವಾಗಿ ಗ್ರನೇಡ್ (ಅಶ್ರುವಾಯು) ಸ್ಪೋಟಗೊಂಡು ಇಬ್ಬರು ಪೊಲೀಸರು ಗಾಯಗೊಂಡ ಘಟನೆ ಇಂದು ನಡೆದಿದೆ. ಗಾಯಗೊಂಡ ವ್ಯಕ್ತಿಗಳನ್ನು ಸುಧಾಕರ ಹಾಗೂ ಪವಿತ್ರ ಎಂದು ಗುರುತಿಸಲಾಗಿದೆ.     ಸ್ಥಳೀಯಾಡಳಿತ ಸಂಸ್ಥೆ ಚುನಾವಣೆ ಹಿನ್ನಲೆಯಲ್ಲಿ ತರಭೇತಿ ನಡೆಯುತ್ತಿದ್ದಾಗ ಆಕಸ್ಮಿಕವಾಗಿ ಗ್ರನೇಡ್ ಸ್ಪೋಟಿಸಿ ಈ ಅವಘಡ ನಡೆದಿದೆ. ಘಟನೆಯಲ್ಲಿ ಗಾಯಗೊಂಡ ವ್ಯಕ್ತಿಗಳನ್ನು ಕಾಸರಗೋಡಿನ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಸುಧಾಕರ ಅವರ ತಲೆಗೆ ತೀವ್ರ ಗಾಯಗಳಾಗಿದ್ದು, ಹೆಚ್ಚಿನ

ಕಾಸರಗೋಡು: ಆಕಸ್ಮಿಕವಾಗಿ ಅಶ್ರುವಾಯು (ಗ್ರನೇಡ್) ಸ್ಪೋಟ…! Read More »

ಕರ್ನಾಟಕ

ನಟಿ ರಾಗಿಣಿ ಜಾಮೀನು ನಿರಾಕರಿಸಿದ ಸುಪ್ರೀಂ ➤ ಇನ್ನೂ 1 ತಿಂಗಳು ಪರಪ್ಪನ ಅಗ್ರಹಾರದಲ್ಲೇ ರಾ’ಗಿಣಿ’

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.04: ಡ್ರಗ್ಸ್ ಪ್ರಕರಣ ಸಂಬಂಧ ಪರಪ್ಪನ ಅಗ್ರಹಾರ ಸೇರಿರುವ ನಟಿ ರಾಗಿಣಿ ದ್ವಿವೇದಿಗೆ ಇನ್ನೂ ಒಂದು ತಿಂಗಳು ಜೈಲು ಫಿಕ್ಸ್ ಆಗಿದೆ. ರಾಗಿಣಿ ದ್ವಿವೇದಿ ಜಾಮೀನು ಕೋರಿ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಆದರೆ ಇದೀಗ ಈ ಜಾಮೀನು ಅರ್ಜಿ ವಿಚಾರಣೆಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್ ಜನವರಿ ಮೊದಲ ವಾರಕ್ಕೆ ಮುಂದೂಡಿದೆ. ಇದೇ ವೇಳೆ ಕೋರ್ಟ್, ರಾಜ್ಯ ಸರ್ಕಾರ ಹಾಗೂ ಸಿಸಿಬಿ ಪೊಲೀಸರಿಗೂ ನೋಟಿಸ್ ನೀಡಿದೆ. ಅಲ್ಲದೆ ಅರ್ಜಿ ವಿಚಾರಣೆಯನ್ನು ಮುಂದಿನ ತಿಂಗಳಿಗೆ

ನಟಿ ರಾಗಿಣಿ ಜಾಮೀನು ನಿರಾಕರಿಸಿದ ಸುಪ್ರೀಂ ➤ ಇನ್ನೂ 1 ತಿಂಗಳು ಪರಪ್ಪನ ಅಗ್ರಹಾರದಲ್ಲೇ ರಾ’ಗಿಣಿ’ Read More »

ಕರಾವಳಿ, ಕರ್ನಾಟಕ

ಕಡಬ: ಮುಖ್ಯ ಪೇಟೆಯಲ್ಲಿ ಡಿ.07 ರಂದು “ಮಹಾನಾಯಕ ಡಾ.ಬಿ.ಆರ್‌.ಅಂಬೇಡ್ಕರ್” ಧಾರಾವಾಹಿಯ ಫ್ಲೆಕ್ಸ್ ಅನಾವರಣ

(ನ್ಯೂಸ್ ಕಡಬ) newskadaba.com ಕಡಬ, ಡಿ.04: ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಜೀವನಾಧರಿತ ಮಹಾನಾಯಕ ಧಾರಾವಾಹಿಗೆ ನಾಡಿನೆಲ್ಲೆಡೆ ಅಭೂತಪೂರ್ವ ಜನಬೆಂಬಲ ಸಿಗುತ್ತಿದೆ ಜತೆಗೆ ಯಶಸ್ವಿಯನ್ನು ಕಂಡಿದೆ.ಪ್ರತಿ ಹಳ್ಳಿ ಹಳ್ಳಿಗಳಲ್ಲೂ ಮಹಾನಾಯಕ ಧಾರಾವಾಹಿಯನ್ನು ಮೆಚ್ಚಿಕೊಂಡಿದ್ದಾರೆ. ಈ ಒಂದು ಯಶಸ್ವಿನ ಹಿನ್ನಲೆಯಲ್ಲಿ ಕಡಬದ ಮುಖ್ಯ ಪೇಟೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ರವರ ಕುರಿತಾದ ಧಾರವಾಹಿಯ ಫ್ಲೆಕ್ಸ್  ಉಮೇಶ್ ಕೋಡಿಂಬಾಳ ಇವರ ಅಧ್ಯಕ್ಷತೆಯಲ್ಲಿ ಅನಾವರಣಗೊಳ್ಳಲಿದೆ. ಕರ್ನಾಟಕ ಸಂಘರ್ಷ ಸಮಿತಿ ಪ್ರೊ.ಬಿ. ಕೃಷ್ಣಪ್ಪ ಸ್ಥಾಪಿತ (ರಿ)47/74-75 ಕಡಬ ತಾಲೂಕು ಶಾಖೆ

ಕಡಬ: ಮುಖ್ಯ ಪೇಟೆಯಲ್ಲಿ ಡಿ.07 ರಂದು “ಮಹಾನಾಯಕ ಡಾ.ಬಿ.ಆರ್‌.ಅಂಬೇಡ್ಕರ್” ಧಾರಾವಾಹಿಯ ಫ್ಲೆಕ್ಸ್ ಅನಾವರಣ Read More »

ಕರಾವಳಿ, ಕರ್ನಾಟಕ

ಕಾಸರಗೋಡು: ಬೈಕ್ ಸ್ಕಿಡ್ ➤ ಗಂಭೀರ ಗಾಯಗೊಂಡಿದ್ದ ವಧು ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಡಿ. 04: ಬೈಕ್ ಸ್ಕಿಡ್ ಆಗಿ ಗಂಭೀರವಾಗಿ ಗಾಯಗೊಂಡಿದ್ದ ವಧು ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಭಾವಿಯನ್ನು ಬಾಡೂರು ಮಂಟಪಾಡಿಯ ಅಮಿತಾ ಶೆಟ್ಟಿ ಎಂದು ಗುರುತಿಸಲಾಗಿದೆ.   ನವೆಂಬರ್ 30 ರಂದು ಈ ಅಪಘಾತ ನಡೆದಿದ್ದು, ಇವರಿಗೆ ಜನವರಿಯಲ್ಲಿ ವಿವಾಹ ನಿಶ್ಚಯವಾಗಿದ್ದ ಯುವಕನ ಜೊತೆ ಬೈಕ್ ನಲ್ಲಿ ಕಾಸರಗೋಡಿಗೆ ತೆರಳಿ ಮರಳುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ರಸ್ತೆಗೆ ಎಸೆಯಲ್ಪಟ್ಟ ಅಮಿತಾ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಆದರೇ ಚಿಕಿತ್ಸೆ ಫಲಕಾರಿಯಾಗದೆ ಅಮಿತಾ

ಕಾಸರಗೋಡು: ಬೈಕ್ ಸ್ಕಿಡ್ ➤ ಗಂಭೀರ ಗಾಯಗೊಂಡಿದ್ದ ವಧು ಮೃತ್ಯು Read More »

ಕರ್ನಾಟಕ

ಕಡಬ: ಜೋಯೆಲ್ ಸ್ಕರಿಯ ಅವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕಾರ

(ನ್ಯೂಸ್ ಕಡಬ) newskadaba.com ಕಡಬ, ಡಿ. 04. ಮಂಗಳೂರಿನ ಸೈಂಟ್ ಆ್ಯಗ್ನೆಸ್ ಕಾಲೇಜಿನಲ್ಲಿ ಎಂಎಸ್ಸಿ (Big Data Analytics) ವಿದ್ಯಾರ್ಥಿಯಾಗಿರುವ ಕಡಬದ ಜೋಯೆಲ್ ಸ್ಕರಿಯ ಅವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕಾರ ಲಭಿಸಿದೆ. ವೈಯಕ್ತಿಕ ನೆಲೆಯಲ್ಲಿ ವಿವಿಧ ರೀತಿಯಲ್ಲಿ ಅತೀ ಹೆಚ್ಚು ಡಿಜಿಟಲ್ ಮಂಡಲ ಆರ್ಟ್ಸ್ ರಚನೆ ಮಾಡಿರುವ ಅವರ ಸಾಧನೆಯನ್ನು ಗುರುತಿಸಿ ಸಂಸ್ಥೆಯು ಈ ಪುರಸ್ಕಾರ ನೀಡಿದೆ. ಇವರು ಕಡಬದ ಕೇಳಂಕುನ್ನೆಲ್ ಸ್ಕರಿಯ ಹಾಗೂ ಬೆಟ್ಟಿ ದಂಪತಿಯ ಪುತ್ರ.

ಕಡಬ: ಜೋಯೆಲ್ ಸ್ಕರಿಯ ಅವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪುರಸ್ಕಾರ Read More »

ಕರಾವಳಿ, ಕರ್ನಾಟಕ

ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ವಿದ್ಯಾವಿನ್ ಟೋಲ್ ಫ್ರೀ ನಂಬರ್ ಲೋಕಾರ್ಪಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 03: ಸರ್ವ ಶಿಕ್ಷಣ ಅಭಿಯಾನ ಕಚೇರಿ ಸಭಾಂಗಣದಲ್ಲಿ ಕಳೆದ ದಿನ ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗಾಗಿ ವಿದ್ಯಾವಿನ್ ಟೋಲ್ ಫ್ರೀ ನಂಬರ್ 18005724920 ನ್ನು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ರವರು ಲೋಕಾರ್ಪಣೆ ಮಾಡಿದರು.     ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಪ್ರಾಥಮಿಕ ಹಾಗೂ ಪ್ರಾಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ಕೋವಿಡ್ ಮಹಾಮಾರಿ ಎಲ್ಲಾ ಕ್ಷೇತ್ರಗಳ ಮೇಲೂ ಕರಾಳ ಛಾಯೆ ಬೀರಿದೆ. ಶಿಕ್ಷಣ ಕ್ಷೇತ್ರ, ಶಾಲೆಗಳ ಮೇಲೆ ಇದರ

ರಾಜ್ಯದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ವಿದ್ಯಾವಿನ್ ಟೋಲ್ ಫ್ರೀ ನಂಬರ್ ಲೋಕಾರ್ಪಣೆ Read More »

ಕರ್ನಾಟಕ

ಇಂದು A.S.I ಆಗಿ ಅಧಿಕಾರ ಸ್ವೀಕರಿಸಬೇಕಿದ್ದ ಮುಖ್ಯ ಪೇದೆ ರಸ್ತೆ ಅಪಘಾತದಲ್ಲಿ ಮೃತ್ಯು.!

(ನ್ಯೂಸ್ ಕಡಬ) newskadaba.com ಚಿಕ್ಕಮಂಗಳೂರು, ಡಿ. 03: ಚಿಕ್ಕಮಂಗಳೂರು ತಾಲೂಕಿನ ಹಿರೇಗೌಡ ಸಮೀಪ ಕಳೆದ ದಿನ ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಇಂದು ಎಎಸ್ಸೈ ಆಗಿ ಪದೋನ್ನತಿ ಆಗಬೇಕಿದ್ದ ಪೊಲೀಸ್ ಮುಖ್ಯ ಪೇದೆ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಸಿದ್ದರಾಮಪ್ಪ ಎಂದು ಗುರುತಿಸಲಾಗಿದೆ.     ಮೂಲತ: ಅಜ್ಜಂಪುರ ತಾಲೂಕಿನ ತಮ್ಮಟಹಳ್ಳಿ ನಿವಾಸಿಯಾಗಿದ್ದ ಇವರು ಸತತ 25 ವರ್ಷ ಕಾಲ ಸೇವೆ ಸಲ್ಲಿಸಿದ್ದು, ಕಳೆದ ದಿನ ಕರ್ತವ್ಯ ಮುಗಿಸಿ ಸಖರಾಯಪಟ್ಟಣದಿಂದ ಚಿಕ್ಕಮಂಗಳೂರಿಗೆ ಬರುತ್ತಿದ್ದ

ಇಂದು A.S.I ಆಗಿ ಅಧಿಕಾರ ಸ್ವೀಕರಿಸಬೇಕಿದ್ದ ಮುಖ್ಯ ಪೇದೆ ರಸ್ತೆ ಅಪಘಾತದಲ್ಲಿ ಮೃತ್ಯು.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೀರು ಕುಡಿಯಲು ಕೃಷ್ಣ ನದಿಗೆ ಇಳಿದಿದ್ದ ಯುವಕನನ್ನು ಎಳೆದೊಯ್ದು ತಿಂದು ಹಾಕಿದ ಮೊಸಳೆ

(ನ್ಯೂಸ್ ಕಡಬ) newskadaba.com ರಾಯಚೂರು ಡಿ. 03: ಕೃಷ್ಣ ನದಿಗೆ ನೀರು ಕುಡಿಯಲು ಹೋದ ಬಾಲಕನನ್ನು ಮೊಸಳೆ ತಿಂದು ಹಾಕಿರುವ ಹೃದಯ ವಿದ್ರಾವಕ ಘಟನೆ ರಾಯಚೂರಿನ ಡೊಂಗಾರಾಂಪುರ ಗ್ರಾಮದಲ್ಲಿ ನಡೆದಿದೆ. ಮಲ್ಲಿಕಾರ್ಜುನ (12) ಮೊಸಳೆಗೆ ಬಲಿಯಾದ ಬಾಲಕ.ಬುಧವಾರದಂದು ಮಲ್ಲಿಕಾರ್ಜುನ ತನ್ನ ಸ್ನೇಹಿತರೊಂದಿಗೆ ದನ ಮೇಯಿಸಲು ಕೃಷ್ಣ ನದಿ ದಂಡೆಯತ್ತ ಹೋಗಿದ್ದ. ಮಧ್ಯಾಹ್ನದ ವೇಳೆ ಗೆಳೆಯರು ಎಲ್ಲ ಗೆಳೆಯರು ಸೇರಿಕೊಂಡು ಊಟ ಮಾಡಿದ್ದಾರೆ. ಊಟ ಮಾಡಿದ ಬಳಿಕ ಬಾಯಾರಿಕೆಯಾದ ಹಿನ್ನೆಲೆ ಕೃಷ್ಣ ನದಿಯಲ್ಲಿ ನೀರು‌ ಕುಡಿಯಲು ಮಲ್ಲಿಕಾರ್ಜುನ ನೀರಿಗೆ ಇಳಿದಿದ್ದಾನೆ. ಈ

ನೀರು ಕುಡಿಯಲು ಕೃಷ್ಣ ನದಿಗೆ ಇಳಿದಿದ್ದ ಯುವಕನನ್ನು ಎಳೆದೊಯ್ದು ತಿಂದು ಹಾಕಿದ ಮೊಸಳೆ Read More »

ಕರ್ನಾಟಕ
Scroll to Top