ಕರ್ನಾಟಕ

ಸಿಸಿಬಿ ತನಿಖೆಗೆ ಸಹಕರಿಸುತ್ತೇನೆ : ನಟ ದಿಗಂತ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23:  ಸ್ಯಾಂಡಲ್ ವುಡ್‍ ನಲ್ಲಿ ಮಾದಕ ನಶೆಯ ನಂಟು ಪ್ರಕರಣಕ್ಕೆ ಸಂಬಂಧಿಸಿ, ನಟ ದಿಗಂತ್ ಎರಡನೇ ಬಾರಿ ಸಿಸಿಬಿ ವಿಚಾರಣೆ ಎದುರಿಸಿದ್ದಾರೆ.   ನಗರದ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಯಲ್ಲಿ ವಿಚಾರಣೆ ಮುಗಿಸಿ ಹೊರಬಂದ ಬಳಿಕ ಸುದ್ದಿಗಾರರೊಡನೆ ಮಾತನಾಡಿ, ಸಿಸಿಬಿಗೆ ನನ್ನ ಬಳಿಯಿದ್ದ ಅಗತ್ಯ ಮಾಹಿತಿ ನೀಡಿರುವೆ. ಅಗತ್ಯಬಿದ್ದರೆ ಮತ್ತೆ ವಿಚಾರಣೆಗೆ ಹಾಜರಾಗಿ ತನಿಖೆಗೆ ಸಹಕರಿಸುತ್ತೇನೆ. ತನಿಖೆ ಪ್ರಗತಿಯಲ್ಲಿರುವ ಕಾರಣ ಯಾವುದೇ ಮಾಹಿತಿಯನ್ನು ಹಂಚಿಕೊಳ್ಳುವಂತಿಲ್ಲ ಎಂದರು.  

ಸಿಸಿಬಿ ತನಿಖೆಗೆ ಸಹಕರಿಸುತ್ತೇನೆ : ನಟ ದಿಗಂತ್ Read More »

ಕರ್ನಾಟಕ

ಇಂದು ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಾದೇಶಿಕ ಭಾಷಾ ತರಬೇತಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಸೆ. 23:  ಇಂದು ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಾದೇಶಿಕ ಭಾಷೆಯಾದ ತುಳು ತರಬೇತಿಯನ್ನು ಆಯೋಜಿಸಲಾಗಿತ್ತು. ಜಿಲ್ಲಾ ಪೊಲೀಸ್ ಅಧೀಕ್ಷಕರು ಹೊರ ಜಿಲ್ಲಾ ಸಿಬ್ಬಂದಿಗಳಿಗೆ ತುಳು ಮತ್ತು ಕೊಂಕಣಿ ಭಾಷೆಯ ತರಬೇತಿಯನ್ನು ನೀಡಲು ಆದೇಶಸಿದ್ದರು. ಅದರಂತೆ ಇಂದು ಶ್ರೀ ಗೋಪಾಲಕೃಷ್ಣ ಪ್ರೌಢಶಾಲಾ ದೈಹಿಕ ಶಿಕ್ಷಕ ಶಿವರಾಮ ಏನೆಕಲ್ಲುರವರು ತುಳು ಭಾಷೆ ಬಗ್ಗೆ ತರಬೇತಿ ನೀಡಿದರು .      

ಇಂದು ಸುಬ್ರಹ್ಮಣ್ಯ ಠಾಣೆಯಲ್ಲಿ ಪ್ರಾದೇಶಿಕ ಭಾಷಾ ತರಬೇತಿ Read More »

ಕರಾವಳಿ, ಕರ್ನಾಟಕ

ಮಂಗಳೂರು: ‘ಮುಲ್ಕಿ ಸುಂದರರಾಮ ಶೆಟ್ಟಿ’ ಎಂದು ಮರುನಾಮಕರಣ ಪಡೆದ ‘ಲೈಟ್ ಹೌಸ್ ಹಿಲ್’ ರಸ್ತೆ*

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 23. ಬಾವುಟಗುಡ್ಡೆ ರಸ್ತೆಯೆಂದು ಸ್ಥಳೀಯರಿಂದ ಕರೆಯಲ್ಪಡುವ ಲೈಟ್ ಹೌಸ್ ಹಿಲ್ ರಸ್ತೆಯನ್ನು ಅಧಿಕೃತವಾಗಿ ವಿಜಯ ಬ್ಯಾಂಕ್‌ನ ಮಾರ್ಗದರ್ಶಕರು, ಜಿಲ್ಲೆಯ ಸಾವಿರಾರು ಯುವಕರಿಗೆ ಉದ್ಯೋಗವನ್ನು ಕಲ್ಪಿಸಿಕೊಟ್ಟ ಮುಲ್ಕಿ ಸುಂದರ್ ರಾಮ್ ಶೆಟ್ಟಿ ಅವರ ಹೆಸರಿನಲ್ಲಿ ‘ಮುಲ್ಕಿ ಸುಂದರ್ ರಾಮ್ ಶೆಟ್ಟಿ ರಸ್ತೆ’ ಎಂದು ಮರುನಾಮಕರಣ ಮಾಡಲಾಯಿತು.   ಈ ರಸ್ತೆಯನ್ನು ಮರುನಾಮಕರಣದ ಪ್ರಸ್ತಾಪವನ್ನು ನಗರ ಪಾಲಿಕೆ ಅಂಗೀಕರಿಸಿದ್ದು, ಆಕ್ಷೇಪಗಳು ಕೇಳಿಬಂದ ಹಿನ್ನೆಲೆ, ಹೈಕೋರ್ಟ್ ಮೇ 24, 2017 ರಂದು ತಡೆಯಾಜ್ಞೆ ನೀಡಿತ್ತು.

ಮಂಗಳೂರು: ‘ಮುಲ್ಕಿ ಸುಂದರರಾಮ ಶೆಟ್ಟಿ’ ಎಂದು ಮರುನಾಮಕರಣ ಪಡೆದ ‘ಲೈಟ್ ಹೌಸ್ ಹಿಲ್’ ರಸ್ತೆ* Read More »

ಕರಾವಳಿ, ಕರ್ನಾಟಕ

ಮಡಿಕೇರಿಯಲ್ಲಿ ಏಕಾಏಕಿ ಕುಸಿದು ಬಿದ್ದ ಮನೆ ಗೋಡೆ ➤ ಮನೆಯಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಮಡಿಕೇರಿ, ಸೆ.23: ಕೆಲವು ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಎಡೆಬಿಡದೆ ಮಳೆಸುರಿಯುತ್ತಿದೆ. ಭಾರೀ ಮಳೆಯಿಂದಾಗಿ ಸೋಮವಾರಪೇಟೆ ನಗರದ ಕಲ್ಕಂದೂರು ಬಾಣೆಯಲ್ಲಿ ಅಬ್ಬಾಸ್ ಎಂಬುವರ ಮನೆಯ ಗೋಡೆ ಕುಸಿತಗೊಂಡಿದೆ. ಸಿನಿಮೀಯ ರೀತಿಯಲ್ಲಿ ಮನೆಯಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.     ಸೋಮಪಾರಪೇಟೆಯ ಕಲ್ಕಂದೂರು ಬಾಣೆಯ ಅಬ್ಬಾಸ್ ಎಂಬುವರ ಮನೆ ಭಾರೀ ಗಾಳಿ ಮಳೆಗೆ ಮುಂಜಾನೆ 3.30ಕ್ಕೆ ಕುಸಿತಗೊಂಡಿದೆ. ಕುಸಿಯುತ್ತಿದ್ದಂತ ಶಬ್ದ ಕೇಳಿದ್ದೇ ತಡ, ಮನೆಯಲ್ಲಿದ್ದಂತ ನಾಲ್ವರು ತಕ್ಷಣವೇ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಈ

ಮಡಿಕೇರಿಯಲ್ಲಿ ಏಕಾಏಕಿ ಕುಸಿದು ಬಿದ್ದ ಮನೆ ಗೋಡೆ ➤ ಮನೆಯಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರು Read More »

ಕರ್ನಾಟಕ

ಸುಳ್ಯ ಆರೋಗ್ಯ ಇಲಾಖೆಯ ನೌಕರರಿಂದ ಪ್ರತಿಭಟನೆ ➤ ನಾಳೆಯಿಂದ ಅನಿರ್ಧಿಷ್ಟಾವದಿ ಮುಷ್ಕರಕ್ಕೆ ಕರೆ!

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 23:  ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಹಾಗೂ ವೈದ್ಯಕೀಯ ಶಿಕ್ಷಣ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ(ರಿ) ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯವ್ಯಾಪಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಇದರ ಅಂಗವಾಗಿ ಸುಳ್ಯದ ತಾಲೂಕು ಆರೋಗ್ಯಾಧಿಕಾರಿ ಕಚೇರಿಯಲ್ಲಿ ಗುತ್ತಿಗೆ ಹಾಗು ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದರು. ಕೋರೋನಾ ನಡುವೆ ಕೋವಿಡ್ ವಾರಿಯರ್ಸ್ ಗಾಳಗಿ ಸೇವೆ ಸಲ್ಲಿಸುತ್ತಿರುವ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾ ಭದ್ರತೆ

ಸುಳ್ಯ ಆರೋಗ್ಯ ಇಲಾಖೆಯ ನೌಕರರಿಂದ ಪ್ರತಿಭಟನೆ ➤ ನಾಳೆಯಿಂದ ಅನಿರ್ಧಿಷ್ಟಾವದಿ ಮುಷ್ಕರಕ್ಕೆ ಕರೆ! Read More »

ಕರಾವಳಿ, ಕರ್ನಾಟಕ

ಕಡಬ: ಇಸ್ಕಾನ್ ಅಕ್ಷಯ ಪಾತ್ರ ಕಾರ್ಯಕ್ರಮ ➤ ಬಡವರಿಗೆ ಅಹಾರದ ಕಿಟ್ ವಿತರಣೆ ಹಾಗೂ ಪ್ರತಿಭಾ ವಿದ್ಯಾರ್ಥಿಗಳಿಗೆ ಸನ್ಮಾನ

(ನ್ಯೂಸ್ ಕಡಬ) newskadaba.com ಕಡಬ, ಸೆ. 23. ಮಂಗಳೂರು ಇಸ್ಕಾನ್ ಅಕ್ಷಯ ಪಾತ್ರ ಇದರ ವತಿಯಿಂದ ಕಡಬ ವಿ.ಹಿಂ.ಪ ಬಜರಂಗದಳದ ಸಹಕಾರದೊಂದಿಗೆ ಆಹಾರ ಸಾಮಗ್ರಿ ವಿತರಣೆ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಇಸ್ಕಾನ್ ನ ಕಾರುಣ್ಯ ಸಾಗರದಾಸ ಸ್ವಾಮೀಜಿ ಹಾಗೂ ಸಭೆಯ ಅಧ್ಯಕ್ಷತೆಯನ್ನು ಕಡಬ ತಾಲೂಕು ಪಂಚಾಯತ್ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ ಅವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ನೂರಾರು ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿಯ ಕಿಟ್

ಕಡಬ: ಇಸ್ಕಾನ್ ಅಕ್ಷಯ ಪಾತ್ರ ಕಾರ್ಯಕ್ರಮ ➤ ಬಡವರಿಗೆ ಅಹಾರದ ಕಿಟ್ ವಿತರಣೆ ಹಾಗೂ ಪ್ರತಿಭಾ ವಿದ್ಯಾರ್ಥಿಗಳಿಗೆ ಸನ್ಮಾನ Read More »

ಕರಾವಳಿ, ಕರ್ನಾಟಕ

ಅ.17 ರಂದು ತಲಕಾವೇರಿಯಲ್ಲಿ ಬೆಳಿಗ್ಗೆ 7.03 ಗಂಟೆಗೆ ತೀರ್ಥೋದ್ಭವ

(ನ್ಯೂಸ್ ಕಡಬ) newskadaba.com ತಲಕಾವೇರಿ, ಸೆ.23: ಕಾವೇರಿ ನದಿಯ ಉಗಮ ಸ್ಥಾನ ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಅಕ್ಟೋಬರ್ 17 ರಂದು ಬೆಳಿಗ್ಗೆ 7.03 ಗಂಟೆಗೆ ತೀರ್ಥೋದ್ಭವವಾಗಲಿದೆ. ತಲಕಾವೇರಿಯ ತೀರ್ಥೋದ್ಭವದ ಕುರಿತು ಶ್ರೀ ತಲಕಾವೇರಿ, ಭಾಗಮಂಡಲ ದೇವಾಲಯ ಕಾರ್ಯನಿರ್ವಾಹಕ ಅಧಿಕಾರಿ ಮಾಹಿತಿ ನೀಡಿದ್ದಾರೆ. ಇದೇ ಮುಂಬರುವ ಸೆಪ್ಟೆಂಬರ್ 26 ರಂದು ಬೆಳಗ್ಗೆ 8.31 ಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ಪತ್ತಾಯಕ್ಕೆ ಅಕ್ಕಿ ಹಾಕಲಾಗುವುದು. ಅಕ್ಟೋಬರ್ 4 ರಂದು ಬೆಳಿಗ್ಗೆ 10.33 ಗಂಟೆಗೆ ಸಲ್ಲುವ ವೃಶ್ಚಿಕ ಲಗ್ನದಲ್ಲಿ ಆಜ್ಞಾ ಮುಹೂರ್ತ,

ಅ.17 ರಂದು ತಲಕಾವೇರಿಯಲ್ಲಿ ಬೆಳಿಗ್ಗೆ 7.03 ಗಂಟೆಗೆ ತೀರ್ಥೋದ್ಭವ Read More »

ಕರಾವಳಿ, ಕರ್ನಾಟಕ

ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ಪಿಎಂ ನರೇಂದ್ರ ಮೋದಿ ಸಭೆ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ. 23:  ನಾಲ್ಕನೇ ಹಂತದ ಅಲ್​ಲಾಕ್ ಅಂತ್ಯಗೊಳ್ಳುತ್ತಿದೆ. ಸೆ. 30ರ ನಂತರದ ಐದನೇ ಹಂತದ ಲಾಕ್​ಡೌನ್ ಸಡಿಲಿಕೆ ಹೇಗಿರುತ್ತದೆ ಎಂಬುದು ಇನ್ನೂ ಗೊತ್ತಾಗಿಲ್ಲ. ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ಸೇರಿದಂತೆ ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ಸಭೆ ನಡೆಸುತ್ತಿದ್ದಾರೆ.     ಕರ್ನಾಟಕ ಅಲ್ಲದೆ, ಮಹಾರಾಷ್ಟ್ರ, ಆಂಧ್ರ ಪ್ರದೇಶ, ಉತ್ತರ ಪ್ರದೇಶ, ತಮಿಳುನಾಡು, ದೆಹಲಿ ಮತ್ತು ಪಂಜಾಬ್ ರಾಜ್ಯಗಳ ಸಿಎಂಗಳು ಆನ್​ಲೈನ್​ನಲ್ಲಿ ನಡೆಯುವ

ಏಳು ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ಪಿಎಂ ನರೇಂದ್ರ ಮೋದಿ ಸಭೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ವಿದ್ಯಾರ್ಥಿನಿಯ ಆನ್‌ಲೈನ್ ಶಿಕ್ಷಣಕ್ಕೆ ಲ್ಯಾಪ್‌ಟಾಪ್ ನೀಡಿದ ಇನ್‌ಫೋಸಿಸ್

(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 23:  ಮಡಲು ಗೂಡಲ್ಲಿ ಕೂತು ಆನ್‌ಲೈನ್ ತರಗತಿಯಲ್ಲಿ ಪಾಲ್ಗೊಳ್ಳುತ್ತಿದ್ದ ಇಡೂರು ಕುಂಜ್ಞಾಡಿಯ ವಿದ್ಯಾರ್ಥಿನಿಗೆ ಇನ್ಫೋಸಿಸ್ ಸಂಸ್ಥೆ ಲ್ಯಾಪ್‌ಟಾಪ್ ಕೊಡುಗೆಯಾಗಿ ನೀಡುವ ಮೂಲಕ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದೆ.   ಬೈಂದೂರು ತಾಲೂಕು ಇಡೂರು ಕುಂಜ್ಞಾಡಿ ಗ್ರಾಮದ ಗೋಳಿಕೆರೆ ಗೋಪಾಲ ಗೌಡ ಮತ್ತು ಗೀತಾ ಮಕ್ಕಳಾದ ಹೆಬ್ರಿ ನವೋದಯ ಶಾಲೆ 10ನೇ ತರಗತಿ ವಿದ್ಯಾರ್ಥಿನಿ ಭೂಮಿಕಾ ಹಾಗೂ 9ನೇ ತರಗತಿ ವಿದ್ಯಾರ್ಥಿ ಭರತ್ ಪ್ರತಿಭಾವಂತ ವಿದ್ಯಾರ್ಥಿಗಳು. ಮನೆ ಪರಿಸರದಲ್ಲಿ ಸೂಕ್ತ ನೆಟ್‌ವರ್ಕ್ ಸಿಗದೆ

ವಿದ್ಯಾರ್ಥಿನಿಯ ಆನ್‌ಲೈನ್ ಶಿಕ್ಷಣಕ್ಕೆ ಲ್ಯಾಪ್‌ಟಾಪ್ ನೀಡಿದ ಇನ್‌ಫೋಸಿಸ್ Read More »

ಕರ್ನಾಟಕ

ಉನ್ನತ ವ್ಯಾಸಂಗಕ್ಕೆಂದು ಭಾರತಕ್ಕೆ ಬಂದ ➤ ಮಾದಕ ವಸ್ತು ಮಾರಾಟ ಮಾಡಿ ಸಿಕ್ಕಿಬಿದ್ದ.⁉️

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23. ಉನ್ನತ ವ್ಯಾಸಂಗಕ್ಕೆಂದು ಬೆಂಗಳೂರಿಗೆ ಬಂದು ಎಂ.ಸಿ.ಎ ಪದವಿ ವ್ಯಾಸಂಗ ಮಾಡುತ್ತಿದ್ದು, ಇದರ ಜೊತೆಗೆ ಮಾದಕ ವಸ್ತುಗಳ ಸೇವನೆಯ ಚಟಕ್ಕೆ ಬಿದ್ದು ಆರ್ಥಿಕ ಅಡಚಣೆಯಿಂದ ಮಾದಕ ವಸ್ತುಗಳ ಮಾರಾಟ ಆರಂಭಿಸಿದ್ದ ವಿದೇಶಿ ಪ್ರಜೆ ಸೇರಿ ಐದು ಮಂದಿಯನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿ, ಸುಮಾರು 5 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೊಪಿಗಳನ್ನು ಸೂಡಾನ್ ದೇಶದ ಅಹಮ್ಮದ್ ಒಮರ್ (27), ತಾಬ್‍ ಶೇರ್(24), ಲಜೀಮ್(23), ಸೈಯದ್ ಶಕೀರ್(24),

ಉನ್ನತ ವ್ಯಾಸಂಗಕ್ಕೆಂದು ಭಾರತಕ್ಕೆ ಬಂದ ➤ ಮಾದಕ ವಸ್ತು ಮಾರಾಟ ಮಾಡಿ ಸಿಕ್ಕಿಬಿದ್ದ.⁉️ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top