ಕರ್ನಾಟಕ

ಇನ್ನುಂದೆ ಅಂಬಾರಿ ಜವಾಬ್ದಾರಿ ಅಭಿಮನ್ಯುವಿಗೆ ➤ ಮೆರವಣಿಗೆ ದಿಕ್ಸೂಚಿ ಮಾತ್ರ ಅರ್ಜುನನಿಗೆ

(ನ್ಯೂಸ್ ಕಡಬ) newskadaba.com ಮೈಸೂರು, ಸೆ.18:  ಎಂಟು ವರ್ಷಗಳ ಕಾಲ ಚಿನ್ನದ ಅಂಬಾರಿ ಹೊತ್ತು ಜನರ ಆಕರ್ಷಣೆಯ ಕೇಂದ್ರಬಿಂದುವಾಗಿ ಮಿಂಚಿದ ಅರ್ಜುನ ಇನ್ನು ಮುಂದೆ ಕೇವಲ ಮೆರವಣಿಗೆ ದಿಕ್ಸೂಚಿ ಮಾತ್ರ!     ಜಂಬೂ ಸವಾರಿ ಮೆರವಣಿಗೆಯಲ್ಲಿ ಅಗ್ರ ಜವಾಬ್ದಾರಿ ನಿರ್ವಹಿಸಿದ್ದ ಅರ್ಜುನ ವಯಸ್ಸಿನ ಕಾರಣಕ್ಕೆ ನಿಶಾನೆ ಆನೆಯಾಗಿ ಕಾರ್ಯ ನಿರ್ವಹಿಸುವ ಮುಖಾಂತರ ನೇಪತ್ಯಕ್ಕೆ ಸರಿಯಲಿದೆ. ಈ ಸಾಲಿನಲ್ಲಿ ಕೊರೊನಾ ಕಾರಣಕ್ಕೆ ಜಂಬೂಸವಾರಿಯನ್ನು ಅರಮನೆಗೆ ಸೀಮಿತಗೊಳಿಸಿ, ಆನೆಗಳ ಸಂಖ್ಯೆಯನ್ನು 12ರಿಂದ 5ಕ್ಕೆ ಇಳಿಸಲಾಗಿದೆ. ಹೀಗಾಗಿ 2012ರಿಂದ ಸತತ […]

ಇನ್ನುಂದೆ ಅಂಬಾರಿ ಜವಾಬ್ದಾರಿ ಅಭಿಮನ್ಯುವಿಗೆ ➤ ಮೆರವಣಿಗೆ ದಿಕ್ಸೂಚಿ ಮಾತ್ರ ಅರ್ಜುನನಿಗೆ Read More »

ಕರ್ನಾಟಕ

ಇನ್ನುಮುಂದೆ ಜಿಲ್ಲೆಯಲ್ಲಿ ಅಧಿಕಾರಿಗಳು ಹಣದ ಬೇಡಿಕೆಯಿಟ್ಟರೆ ನಿರ್ದಾಕ್ಷಿಣ್ಯ ಕ್ರಮ ➤ ಬಿಜೆಪಿ ಸಂಸದ ನಳೀನ್ ಕುಮಾರ್ ಕಟೀಲು ಖಡಕ್ ವಾರ್ನಿಂಗ್.!!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.18:  ಜಿಲ್ಲೆಯಲ್ಲಿ ಇನ್ನುಮುಂದೆ ಯಾವುದೇ ಇಲಾಖೆಯ ಅಧಿಕಾರಿ, ಕೆಲಸಕ್ಕೆ ಸಂಬಂಧಪಟ್ಟಂತೆ ಹಣಕ್ಕೆ ಬೇಡಿಕೆಯಿಟ್ಟರೆ, ನನಗೆ ಅಥವಾ ಉಸ್ತುವರಿ ಸಚಿವರಿಗೆ,ಯಾ ಜಿಲ್ಲೆಯ ಬಿಜೆಪಿ ಶಾಸಕರಿಗೆ ಕರೆ ಮಾಡಿದರೆ, ಅಂತವರನ್ನು ನಿರ್ದಾಕ್ಷಿಣ್ಯವಾಗಿ ಮನೆಗೆ ಕಳುಹಿಸಲಾಗುವುದು ಹಾಗೂ ಬಂಧಿಸಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ರವರು ತಿಳಿಸಿದ್ದಾರೆ. ಪ್ರಧಾನಿ ಮೋದಿ ಅವರ 70ನೇ ಜ್ಮದಿನಾಚರಣೆ ಅಂಗವಾಗಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಹಾಗೂ ಮೋರ್ಚಾಗಳ ವತಿಯಿಂದ ನಡೆದ

ಇನ್ನುಮುಂದೆ ಜಿಲ್ಲೆಯಲ್ಲಿ ಅಧಿಕಾರಿಗಳು ಹಣದ ಬೇಡಿಕೆಯಿಟ್ಟರೆ ನಿರ್ದಾಕ್ಷಿಣ್ಯ ಕ್ರಮ ➤ ಬಿಜೆಪಿ ಸಂಸದ ನಳೀನ್ ಕುಮಾರ್ ಕಟೀಲು ಖಡಕ್ ವಾರ್ನಿಂಗ್.!! Read More »

ಕರಾವಳಿ, ಕರ್ನಾಟಕ

ಖಾಸಗಿ ಆಸ್ಪತ್ರೆಗಳಲ್ಲಿ ಹಣ ಸುಲಿಗೆಯ ಆರೋಪ ➤ ಡಿ.ವೈ.ಎಫ್.ಐ ನಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ‌.18. ಕೊರೋನಾ ಕಾರಣವನ್ನು ನೆಪ ಮಾಡಿಕೊಂಡು ಸುಲಿಗೆ ಮಾಡುತ್ತಿರುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ಡಿ.ವೈ.ಎಫ್.ಐ ಸಮಿತಿಯಿಂದ ಆರೋಗ್ಯಾಧಿಕಾರಿ ಕಛೇರಿಯ ಎದುರು ವಿಶಿಷ್ಟವಾಗಿ ಪ್ರತಿಭಟನೆ ಮಾಡಲಾಯಿತು. ಕೊರೋನಾ ಸೋಂಕಿತ ರೋಗಿಗಳನ್ನು ಚಿಕಿತ್ಸೆಯ ಹೆಸರಲ್ಲಿ ವಂಚನೆ ಮಾಡುತ್ತಿರುವ ಖಾಸಗಿ ಆಸ್ಪತ್ರೆಗಳ ವಿರುದ್ದ ಕ್ರಮ ಕೈಗೊಂಡು, ಎಲ್ಲಾ ಸೋಂಕಿತರಿಗೆ ಉಚಿತ ಚಿಕಿತ್ಸೆ ಹಾಗೂ ಜಿಲ್ಲೆಯಲ್ಲಿ ಸರಕಾರಿ ಮೆಡಿಕಲ್‌ ಕಾಲೇಜು ಸ್ಥಾಪನೆ ಮಾಡಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಮುಂಭಾಗದಲ್ಲಿ ಅಣಕು ಶವಗಳನ್ನಿಟ್ಟು

ಖಾಸಗಿ ಆಸ್ಪತ್ರೆಗಳಲ್ಲಿ ಹಣ ಸುಲಿಗೆಯ ಆರೋಪ ➤ ಡಿ.ವೈ.ಎಫ್.ಐ ನಿಂದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಜುಗಾರಿ ಅಡ್ಡೆಗೆ ದಾಳಿ ➤ ಹನ್ನೊಂದು ಆರೋಪಿಗಳ ಸಹಿತ ಆರು ವಾಹನಗಳು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 18. ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಪೊಲೀಸರು 11 ಮಂದಿ ಆರೋಪಿಗಳ ಸಹಿತ 6 ವಾಹನಗಳನ್ನು ವಶಕ್ಕೆ ಪಡೆದ ಘಟನೆ ಮೂಡುಬಿದಿರೆ ತಾಲೂಕಿನ ಕಲ್ಲಬೆಟ್ಟು ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಮನೆಯೊಂದರಲ್ಲಿ ಜುಗಾರಿ ನಡೆಯುತ್ತಿದ್ದ ಸಂದರ್ಭ ದಾಳಿ ನಡೆಸಿದ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ದಿನೇಶ್ ಕುಮಾರ್ ನೇತೃತ್ವದ ಪೊಲೀಸರ ತಂಡ ವು ಜೂಜಾಟದಲ್ಲಿ ನಿರತರಾಗಿದ್ದ 11 ಮಂದಿ ಆರೋಪಿಗಳನ್ನು ಬಂಧಿಸಿದ್ದಲ್ಲದೇ, ಜೂಜಾಟಕ್ಕೆ ಬಳಸಿದ್ದ 18,800 ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ ಹಾಗೂ ಸ್ಥಳದಲ್ಲಿದ್ದ

ಜುಗಾರಿ ಅಡ್ಡೆಗೆ ದಾಳಿ ➤ ಹನ್ನೊಂದು ಆರೋಪಿಗಳ ಸಹಿತ ಆರು ವಾಹನಗಳು ಪೊಲೀಸ್ ವಶಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೂಡಬಿದಿರೆ ಶಾಸಕ ಉಮನಾಥ ಕೋಟ್ಯಾನ್ ರಿಗೆ ಕೊವೀಡ್ ದೃಢ

(ನ್ಯೂಸ್ ಕಡಬ) newskadaba.com ಮೂಡುಬಿದಿರೆ , ಸೆ.18:  ಮೂಡುಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಅವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.   ಶಾಸಕ ಉಮಾನಾಥ ಕೋಟ್ಯಾನ್ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರಾಗುವ ನಾಲ್ಕನೇ ಶಾಸಕರಾಗಿದ್ದಾರೆಈ ಕುರಿತು ತಮ್ಮ ಟ್ವಿಟರ್ ಖಾತೆಯಲ್ಲಿ ಅವರು, ‘ನಾನು ಕೋವಿಡ್-19 ಪರೀಕ್ಷೆಗೆ ಒಳಗಾಗಿದ್ದು, ವರದಿಯಲ್ಲಿ ಪಾಸಿಟಿವ್ ಬಂದಿದೆ. ಇದೀಗ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ಶೀಘ್ರವೇ ಗುಣಮುಖವಾಗಿ ನಿಮ್ಮ ಸೇವೆ ಮಾಡಲು ಹಾಜರಾಗುವ ವಿಶ್ವಾಸವಿದೆ’ ಎಂದು ಬರೆದುಕೊಂಡಿದ್ದಾರೆ.  

ಮೂಡಬಿದಿರೆ ಶಾಸಕ ಉಮನಾಥ ಕೋಟ್ಯಾನ್ ರಿಗೆ ಕೊವೀಡ್ ದೃಢ Read More »

ಕರಾವಳಿ, ಕರ್ನಾಟಕ

ಅಕ್ರಮ ಗಾಂಜಾ ಮಾರಾಟ ➤ ಮೂವರು ಆರೋಪಿಗಳು ಅರೇಷ್ಟ್

(ನ್ಯೂಸ್ ಕಡಬ) newskadaba.com ಭಟ್ಕಳ, ಸೆ.18:  ಸಾಗರ ರಸ್ತೆಯ ಕಿತ್ರೆ ಕ್ರಾಸ್ ಹತ್ತಿರ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಪೊಲೀಸರು ವಶಕ್ಕೆ ಪಡೆದು ಬಂಧಿತರಿಂದ ಸುಮಾರು 750 ಗ್ರಾಂ ತೂಕದ ಗಾಂಜಾ, ಸ್ಕೂಟಿ, 3 ಮೊಬೈಲ್ ಫೋನ್ ಹಾಗೂ 2700 ರೂ. ನಗದು ವಶಪಡಿಸಿಕೊಂಡಿದ್ದಾರೆ.     ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಭಟ್ಕಳ ಗ್ರಾಮೀಣ ಠಾಣೆ ಪಿಎಸ್​ಐ ಓಂಕಾರಪ್ಪ, ಭಟ್ಕಳ ಶಹರ ಪೊಲೀಸ್ ಠಾಣೆಯ ಪಿಎಸ್​ಐ ಭರತಕುಮಾರ ವಿ., ಎಚ್ ಬಿ. ಕುಡಗುಂಟಿ. ಎಎಸ್​ಐ ರಾಮಚಂದ್ರ

ಅಕ್ರಮ ಗಾಂಜಾ ಮಾರಾಟ ➤ ಮೂವರು ಆರೋಪಿಗಳು ಅರೇಷ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತ್ಯು

(ನ್ಯೂಸ್ ಕಡಬ) newskadaba.com ಗಂಗೊಳ್ಳಿ, ಸೆ.18:   ದೇವಸ್ಥಾನದೊಳಗೆ ಪೆಟ್ರೋಲ್ ಸುರಿದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಇಂದು  (ಶುಕ್ರವಾರ) ಬೆಳಿಗ್ಗೆ ಮೃತಪಟ್ಟಿದ್ದಾರೆ.ಮೃತ ವ್ಯಕ್ತಿಯನ್ನು ಖಾರ್ವಿಕೇರಿಯ ದಾಕುಹಿತ್ಲು ನಿವಾಸಿ ರಾಘವೇಂದ್ರ ಖಾರ್ವಿ (35) ಎಂದು ಗುರುತಿಸಲಾಗಿದೆ. ಗುರುವಾರ ಖಾರ್ವಿಕೇರಿಯ ಮಹಾಂಕಾಳಿ ದೇವಸ್ಥಾನದ ಹಿಂಬದಿಯಲ್ಲಿರುವ ಮಹಾಮ್ಮಾಯಿ ಮಹಾಸತಿ ದೇವಸ್ಥಾನದಲ್ಲಿ ಮಹಾಲಯ ಅಮವಾಸ್ಯೆ ಪ್ರಯುಕ್ತ ಪೂಜಾ ಕಾರ್ಯಗಳು ಸಮಯದಲ್ಲಿ ಏಕಾಏಕಿ ಪೆಟ್ರೋಲ್ ಕ್ಯಾನ್ ಹಿಡಿದು ದೇವಸ್ಥಾನದೊಳಗೆ ಬಂದ ರಾಘವೇಂದ್ರ ಖಾರ್ವಿ ಪೆಟ್ರೋಲ್ ಸುರಿದುಕೊಂಡು

ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಉಪನ್ಯಾಸಕಿ ಸಫಿಯಾ ಅವರಿಗೆ ಮಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್ ಡಿ ಪದವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 17. ಮಂಗಳೂರು ವಿಶ್ವ ವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಉಪನ್ಯಾಸಕಿ ಸಫಿಯಾ ಅವರು ಮಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್‌ಡಿ ಪದವಿ ಪಡೆದಿದ್ದಾರೆ. ಇಂಪ್ಯಾಕ್ಟ್‌ ಆಫ್‌ ಸೋಷಿಯಲ್‌ ನೆಟ್‌ವರ್ಕಿಂಗ್‌ ಸೈಟ್ಸ್‌ ಅಮಾಂಗ್‌ ಮೀಡಿಯಾ ಪ್ರೊಫೇಶನಲ್ಸ್‌ ಇನ್‌ ಕರ್ನಾಟಕ (ಕರ್ನಾಟಕದ ಮಾಧ್ಯಮ ವೃತ್ತಿಪರರಲ್ಲಿ ಸಾಮಾಜಿಕ ಜಾಲತಾಣಗಳ ಪ್ರಭಾವ) ಎಂಬ ವಿಷಯದಲ್ಲಿ ಸಫಿಯಾ ಅವರು ಮಾಡಿದ ಸಂಶೋಧನಾ ಕಾರ್ಯಕ್ಕಾಗಿ ಪಿಎಚ್‌ಡಿ ಪದವಿ ನೀಡಲಾಗಿದೆ. ಸಫಿಯಾ ಅವರು ಮೂಡಬಿದ್ರೆಯ ಆಳ್ವಾಸ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಪಡೆದ

ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಉಪನ್ಯಾಸಕಿ ಸಫಿಯಾ ಅವರಿಗೆ ಮಂಗಳೂರು ವಿಶ್ವವಿದ್ಯಾಲಯದಿಂದ ಪಿಎಚ್ ಡಿ ಪದವಿ Read More »

ಕರಾವಳಿ, ಕರ್ನಾಟಕ

ಪುತ್ತೂರು: ಸ್ಕೂಟರ್ ಹಾಗೂ ಮಹೀಂದ್ರಾ ಟೆಂಪೋ ನಡುವೆ ಢಿಕ್ಕಿ ➤ ಸವಾನಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 17. ಸ್ಕೂಟಿ ಮತ್ತು ಮಹೀಂದ್ರಾ ಟೆಂಪೋ ನಡುವೆ ಢಿಕ್ಕಿ ಸಂಭವಿಸಿ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುಕ್ರಂಪಾಡಿ ಎಂಬಲ್ಲಿ ಇಂದು ನಡೆದಿದೆ. ಗಾಯಗೊಂಡ ಸ್ಕೂಟರ್ ಸವಾರನನ್ನು ಮುಕ್ವೆ ನಿವಾಸಿ ಮಹಮ್ಮದ್ ಅಕ್ಷಮ್ ಎಂದು ಗುರುತಿಸಲಾಗಿದೆ. ಈ ಸಂದರ್ಭ ಅಲ್ಲೇ ಪಕ್ಕದ ಕಛೇರಿಯಲ್ಲಿದ್ದ ಅರುಣ್ ಕುಮಾರ್ ಪುತ್ತಿಲ ಅವರು ಗಾಯಾಳುವನ್ನು ತನ್ನ ವಾಹನದಲ್ಲೇ ಆಸ್ಪತ್ರೆಗೆ ಕರೆದೊಯ್ಯುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಪುತ್ತೂರು: ಸ್ಕೂಟರ್ ಹಾಗೂ ಮಹೀಂದ್ರಾ ಟೆಂಪೋ ನಡುವೆ ಢಿಕ್ಕಿ ➤ ಸವಾನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪ್ರಧಾನಿಯವರ ಜನ್ಮದಿನದ ಅಂಗವಾಗಿ ವಿಕಲಚೇತನರಿಗೆ ಉಚಿತ ವ್ಹೀಲ್ ಚಯರ್ ವಿತರಣೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 17. ಬಿಜೆಪಿ ಹಾಗೂ ಅಲ್ಪಸಂಖ್ಯಾತ ಮೋರ್ಚಾ ಉಡುಪಿ ನಗರ ಇದರ ವತಿಯಿಂದ ಪ್ರಧಾನಿಯವರ 70ನೇ ವರ್ಷದ ಜನ್ಮ ದಿನಾಚರಣೆಯ ಅಂಗವಾಗಿ ವಿಕಲಚೇತನರಿಗೆ ಉಚಿತ ವೀಲ್ ಚಯರ್ ವಿತರಿಸುವ ಮೂಲಕ ಶಾಸಕ ಶ್ರೀ. ಕೆ ರಘುಪತಿ ಭಟ್ ಭಾಗವಹಿಸಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ಅಲ್ಪಸಂಖ್ಯಾತ ಮೋರ್ಚಾದ ಉಡುಪಿ ನಗರ ಬಿಜೆಪಿ ರಾಜ್ಯ ಅಲ್ಪಸಂಖ್ಯಾತ ಮೋರ್ಚಾದ

ಪ್ರಧಾನಿಯವರ ಜನ್ಮದಿನದ ಅಂಗವಾಗಿ ವಿಕಲಚೇತನರಿಗೆ ಉಚಿತ ವ್ಹೀಲ್ ಚಯರ್ ವಿತರಣೆ Read More »

ಕರಾವಳಿ, ಕರ್ನಾಟಕ
Scroll to Top