ಕರ್ನಾಟಕ

ಕೆಂಪೇಗೌಡರ ಪ್ರತಿಮೆ ಸ್ಥಾಪಿಸಲು ಮುಖ್ಯಮಂತ್ರಿಯಿಂದ ಭೂಮಿ ಪೂಜೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜೂನ್ 27, ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸ್ಥಾಪಿಸಲು ನಿರ್ಧರಿಸಲಾಗಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಭೂಮಿ ಪೂಜೆ ನೆರವೇರಿಸಿದ್ದಾರೆ. ಬಳಿಕ ಮಾತನಾಡಿದ ಅವರು ಬೆಂಗಳೂರನ್ನು ಯೋಜನಾ ಬದ್ಧವಾಗಿ ಬೆಳೆಸಲು ಕೆಂಪೇಗೌಡರ ಕೊಡುಗೆ ಅಪಾರ. ನದಿ ಮೂಲಗಳಿಲ್ಲದ ಬೆಂಗಳೂರಿನಲ್ಲಿ ನೂರಾರು ಕೆರೆಗಳ ನಿರ್ಮಾಣ ಮಾಡಿದರು, ಬೆಂಗಳೂರು ನಗರವನ್ನು ಅತ್ಯಂತ ವೈಜ್ಞಾನಿಕವಾಗಿ ನಿರ್ಮಿಸಿದ್ದಾರೆ ಎಂದರು. ಬೆಂಗಳೂರು ನಗರದ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳ ಅನುಷ್ಠಾನಕ್ಕೆ […]

ಕೆಂಪೇಗೌಡರ ಪ್ರತಿಮೆ ಸ್ಥಾಪಿಸಲು ಮುಖ್ಯಮಂತ್ರಿಯಿಂದ ಭೂಮಿ ಪೂಜೆ Read More »

ಕರ್ನಾಟಕ

ದಿನೇ ದಿನೇ ಏರಿಕೆಯಾಗುತ್ತಿರುವ ಪೆಟ್ರೋಲ್, ಡೀಸೆಲ್ ದರ ➤ ಜೂ.29ರಂದು ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

(ನ್ಯೂಸ್ ಕಡಬ)newskadaba.com ಕಡಬ, ಜೂ.27. ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಕುಸಿದಿದ್ದರೂ, ಕೇಂದ್ರ ಸರ್ಕಾರವು ದೇಶಾದ್ಯಂತ ಪೆಟ್ರೋಲ್, ಡೀಸೆಲ್ ಬೆಲೆಯನ್ನು ದಿನೇ ದಿನೇ ಗಗನಕ್ಕೆ ಏರಿಸಿ ಬಡ ಸಾಮಾನ್ಯ ಜನರ ಜೀವನದಲ್ಲಿ ಚೆಲ್ಲಾಟವಾಡುತ್ತಿರುವುದನ್ನು ಖಂಡಿಸಿ ಜೂನ್ 29 ರಂದು ಕಡಬ ತಹಶೀಲ್ದಾರ್ ಕಛೇರಿಯ ಮುಂಭಾಗದಲ್ಲಿ ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಲಿದೆ. ಕಡಬ ಕಾಂಗ್ರೆಸ್ ಕಛೇರಿಯಲ್ಲಿ‌ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಣೇಶ್ ಕೈಕುರೆ ಹಾಗೂ ಜಿಲ್ಲಾ ಪಂಚಾಯತ್ ಸದಸ್ಯ ಪಿ.ಪಿ

ದಿನೇ ದಿನೇ ಏರಿಕೆಯಾಗುತ್ತಿರುವ ಪೆಟ್ರೋಲ್, ಡೀಸೆಲ್ ದರ ➤ ಜೂ.29ರಂದು ಕಡಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಕುಕ್ಕೆ ಸುಬ್ರಹ್ಮಣ್ಯ; ಮಾಸ್ಟರ್ ಪ್ಲಾನ್ ಯೋಜನೆಯ ಕಾಮಗಾರಿ ಉದ್ಘಾಟನೆ ದಿನಾಂಕ ಫಿಕ್ಸ್

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ,ಜೂ.27:  ಕುಕ್ಕೆ ಸುಬ್ರಹ್ಮಣ್ಯದಲ್ಲಿ 29 ರ ಸೋಮವಾರ ದಂದು ಪೂರ್ವಾಹ್ನ 11 ಗಂಟೆಗೆ  ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಮಾಸ್ಟರ್ ಪ್ಲಾನ್ ಯೋಜನೆಯಡಿಯ ಕಾಮಗಾರಿ    ಶ್ರೀ ದೇವಳದ ನೂತನ ಗೋಶಾಲೆ, ಆದಿ ಸುಬ್ರಹ್ಮಣ್ಯ ಬಳಿ ಇರುವ ನೂತನ ವಸತಿಗೃಹ , ಆದಿ ಸುಬ್ರಹ್ಮಣ್ಯ ಬಳಿಯ ಪುರುಷ ಹಾಗೂ ಮಹಿಳೆಯರ ಶೌಚಾಲಯ ಕಟ್ಟಡ ಮತ್ತು ಸವಾರಿ ಮಂಟಪ ಬಳಿಯ ಶೌಚಾಲಯ ಕಟ್ಟಡವನ್ನು ಶ್ರೀ ಯಸ್ ಅಂಗಾರ. ಮಾನ್ಯ ಶಾಸಕರು. ಸುಳ್ಯ ವಿಧಾನಸಭಾ ಕ್ಷೇತ್ರ

ಕುಕ್ಕೆ ಸುಬ್ರಹ್ಮಣ್ಯ; ಮಾಸ್ಟರ್ ಪ್ಲಾನ್ ಯೋಜನೆಯ ಕಾಮಗಾರಿ ಉದ್ಘಾಟನೆ ದಿನಾಂಕ ಫಿಕ್ಸ್ Read More »

ಕರಾವಳಿ, ಕರ್ನಾಟಕ

ಪುತ್ತೂರು; ಕಾನೂನು ಮಹಾವಿದ್ಯಾಲಯದಲ್ಲಿ ಕಳವಿಗೆ ಯತ್ನ

(ನ್ಯೂಸ್ ಕಡಬ) newskadaba.com ಪುತ್ತೂರು,ಜೂ.27: ನೆಹರು ನಗರ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಛೇರಿ ಮತ್ತು ಪ್ರಾಂಶುಪಾಲ ಕೊಠಡಿ ಬೀಗ ಮುರಿದು ಕಳ್ಳರು ಒಳನುಗ್ಗಿ ಕಳವಿಗೆ ಯತ್ನಿಸಿದ ಘಟನೆ ಶುಕ್ರವಾರ ದಂದು ಬೆಳಕಿಗೆ ಬಂದಿದೆ. ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಕಛೇರಿಯ ಬೀಗ ಮುರಿಯಲೆತ್ನಿಸಿದ ಕಳ್ಳರು ಪ್ರಾಶುಂಪಾಲರ ಕೊಠಡಿಯ ಬೀಗ ಮುರಿದು ಕಪಾಟಿನೊಳಗಿದ್ದ ದಾಖಲೆಪತ್ರಗಳನ್ನು ಚೆಲ್ಲಾಪಿಲ್ಲಿ ಮಾಡಿ ಕಳವಿಗೆ ಯತ್ನಿಸಿದ್ದಾರೆ. ಕಾಲೇಜಿನ ಸಿಬ್ಬಂದಿಗಳು ಎಂದಿನಂತೆ ಶುಕ್ರವಾರ ಬೆಳಿಗ್ಗೆ ಕಚೇರಿಗೆ ಆಗಮಿಸಿದ ವೇಳೆ ಕಳವಿಗೆ ಯತ್ನಿಸಿದ ವಿಚಾರ ಬೆಳಕಿಗೆ ಬಂದಿದೆ. ಘಟನೆ

ಪುತ್ತೂರು; ಕಾನೂನು ಮಹಾವಿದ್ಯಾಲಯದಲ್ಲಿ ಕಳವಿಗೆ ಯತ್ನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಾಡದೋಣಿ ಮೀನುಗಾರಿಕೆಗೆ ನಾಳೆಯಿಂದ ಚಾಲನೆ

(ನ್ಯೂಸ್ ಕಡಬ)newskadaba.com ಕುಂದಾಪುರ, ಜೂ.27, ಗಂಗೊಳ್ಳಿ ಹಾಗೂ ಬೈಂದೂರು ವಲಯದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರು ಕಡಲಿಗಿಳಿಯಲು ಸಜ್ಜಾಗಿದ್ದು, ಜೂ. 28ರಿಂದ ಅವಿಭಜಿತ ಕುಂದಾಪುರ ತಾಲೂಕು ವ್ಯಾಪ್ತಿಯಲ್ಲಿ ಮೀನುಗಾರಿಕೆ ಆರಂಭವಾಗಲಿದೆ. ಗಂಗೊಳ್ಳಿ ಹಾಗೂ ಬೈಂದೂರು ವಲಯದ ನಾಡದೋಣಿ ಮೀನುಗಾರರ ಸಂಘದಿಂದ ಮರವಂತೆಯ ವರಾಹ ದೇವಸ್ಥಾನದ ಬಳಿಯ ಸಮುದ್ರ ತೀರದಲ್ಲಿ ಜೂ.28ಕ್ಕೆ ಸಮುದ್ರ ಪೂಜೆ ನಡೆಯಲಿದ್ದು, ಇದರೊಂದಿಗೆ ಕುಂದಾಪುರ ತಾಲೂಕಿನಲ್ಲಿ ಈ ಋತುವಿನ ನಾಡದೋಣಿ ಮೀನುಗಾರಿಕೆ ಚಾಲನೆ ಪಡೆಯಲಿದೆ. ಸಮೃದ್ಧಿಗೆ ಪ್ರಾರ್ಥನೆ ಉಭಯ ವಲಯಗಳ ಮೀನುಗಾರ ಮುಖಂಡರು, ಮೀನುಗಾರರ ಉಪಸ್ಥಿತಿಯಲ್ಲಿ

ನಾಡದೋಣಿ ಮೀನುಗಾರಿಕೆಗೆ ನಾಳೆಯಿಂದ ಚಾಲನೆ Read More »

ಕರಾವಳಿ, ಕರ್ನಾಟಕ

ಜೋಡುಪಾಲದ ಪ್ರಾಕೃತಿ ವಿಕೋಪಕ್ಕೆ ಸಿಲುಕಿ ಮನೆ ಕಳೆದುಕೊಂಡ ಜೀವಕ್ಕೆ ಕೊನೆಗೂ ಮುಕ್ತಿ

(ನ್ಯೂಸ್ ಕಡಬ) newskadaba.com.ಸುಳ್ಯ,ಜೂ.27:ಪ್ರಾಕೃತಿ ವಿಕೋಪಕ್ಕೆ ಸಿಲುಕಿ ತನ್ನ ಮನೆವರು ಮತ್ತು ಮನೆಯನ್ನೇ ಕಳೆದುಕೊಂಡು ತೀವ್ರ ನೊಂದ ಜೀವಕ್ಕೆ ಕೊನೆಗೂ ಪ್ರಾಕೃತಿಕವಿಕೋಪದಡಿ ನಿರ್ಮಿಸಿದ ಮನೆ ದೊರೆತಿದೆ. ಎರಡು ವರ್ಷಗಳ ಹಿಂದೆ ಜೋಡುಪಾಲದಲ್ಲಿ ಸಂಭವಿಸಿದ ಭೀಕರ ಜಲ ಸ್ಪೋಟ ಸಂಭವಿಸಿದ ವೇಳೆ ಮೋಹಿತ್ ಎಂಬ ಯುವಕನ ತಂದೆ ಬಸಪ್ಪ, ತಾಯಿ ಗೌರಮ್ಮ .ಸಹೋದರಿ ಮೋನಿಶಾ ಮತ್ತು ಸಂಬಂಧಿ ಮದೆ ಗ್ರಾಮದ ಬೆಟ್ಟತ್ತೂರು ನಿವಾಸಿ ಮಂಜುಳಾ ಮೃತಪಟ್ಟಿದ್ದರು.ಬೆಟ್ಟದಿಂದ ಬಂದ ಪ್ರವಾಹ ಶೀಟು ಹಾಕಿದ ಮನೆ ಸಹಿತ ಮನೆ ಮಂದಿಯನ್ನು ಕೊಚ್ಚಿಕೊಂಡು ಹೋಗಿತ್ತು.

ಜೋಡುಪಾಲದ ಪ್ರಾಕೃತಿ ವಿಕೋಪಕ್ಕೆ ಸಿಲುಕಿ ಮನೆ ಕಳೆದುಕೊಂಡ ಜೀವಕ್ಕೆ ಕೊನೆಗೂ ಮುಕ್ತಿ Read More »

ಕರ್ನಾಟಕ

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು ➤ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಜೂ.27, ಚಾಲಕನ ಅತೀ ವೇಗದ ಚಾಲನೆಯ ಕಾರಣದಿಂದ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಲ್ಟಿಯಾದ ಕಾರಣ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಕರ್ತಿಕೆರೆ ಗ್ರಾಮದ ಬಳಿ ತಡರಾತ್ರಿ ನಡೆದಿದೆ. ಬೆಂಗಳೂರು ಮೂಲದ ಮಂಜುನಾಥ್ (30), ಮುತ್ತು ರಾಜ್ (28) ಮೃತ ದುರ್ದೈವಿಗಳು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಚಿಕ್ಕಮಗಳೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರು ಮೂಲದ ಐವರು ಜೊತೆಯಾಗಿ ಕಾರಿನಲ್ಲಿ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಅತಿಯಾದ ವೇಗದಿಂದ ಚಾಲನೆ

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು ➤ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಇಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಕರಾವಳಿಯಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.27:  ಕಳೆದ ಕೆಲವು ದಿನಗಳಿಂದ ಕರಾವಳಿ ಭಾಗದಲ್ಲಿ ಮುಂಗಾರು ದುರ್ಬಲಗೊಂಡಿದ್ದು, ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಭಾರತೀಯ ಹವಾಮಾನ ಇಲಾಖೆಯು “ಆರೆಂಜ್‌ ಅಲರ್ಟ್‌’ ಘೋಷಣೆ ಮಾಡಿದೆ.   ಈ ವೇಳೆ ಕರಾವಳಿ ಭಾಗದಲ್ಲಿ 115.6 ಮಿ.ಮೀ. ನಿಂದ 204.4 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ.ಮಂಗಳೂರು ನಗರದಲ್ಲಿ ಶುಕ್ರವಾರದಂದು ಬಿಸಿಲು ಮತ್ತು ಸೆಕೆಯಿಂದ ಕೂಡಿದ ವಾತಾವರಣ ಇತ್ತು. ರಾತ್ರಿ ಭಾರೀ ಮಳೆಯಾಗಿದ್ದು ರಸ್ತೆಯಲ್ಲಿ ನೀರು ನಿಂತ ಕಾರಣ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.

ಕರಾವಳಿಯಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ Read More »

ಕರಾವಳಿ, ಕರ್ನಾಟಕ

13 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ರಾಜ್ಯ ಸರಕಾರ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜೂ.27, ಮಂಗಳೂರಿನ ಪೊಲೀಸ್ ಆಯುಕ್ತ ಡಾ.ಪಿ.ಎಸ್. ಹರ್ಷ ಸೇರಿದಂತೆ 13 ಐಪಿಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಮಂಗಳೂರಿನ ನಗರದ ನೂತನ ಪೊಲೀಸ್‌ ಆಯುಕ್ತರಾಗಿ ವಿಕಾಸ್ ಕುಮಾರ್ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದ್ದು, ಪ್ರಸ್ತುತ ಕಮಿಷನರ್‌ ಆಗಿರುವ ಡಾ.ಪಿ.ಎಸ್. ಹರ್ಷ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಸ್ಥಾನಕ್ಕೆ ವರ್ಗಾಯಿಸಲಾಗಿದೆ. ಅದೇ ರೀತಿ, ಸೀಮಂತ್ ‌ಕುಮಾರ್ ಸಿಂಗ್ ಅವರನ್ನು ಕೇಂದ್ರ ವಲಯದ ಐಜಿಪಿ ಸ್ಥಾನಕ್ಕೆ,

13 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ರಾಜ್ಯ ಸರಕಾರ Read More »

ಕರ್ನಾಟಕ

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ – ದಿನ ಭವಿಷ್ಯ

ಶ್ರೀ ಕಾರ್ಯಸಿದ್ದಿ ಆಂಜನೇಯ ಸ್ವಾಮಿ ಜ್ಯೋತಿಷ್ಯಂ ಈ ದಿನದ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಶ್ರೀ ಗಿರಿಧರ ಭಟ್ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಚಾರ, ದಾಂಪತ್ಯ ಕಲಹ, ಸಂತಾನ, ಆರೋಗ್ಯ, ಆರ್ಥಿಕ, ಸಾಲಬಾದೆ, ಶತ್ರುಬಾಧೆ, ವಶಿಕರಣದಂತಹ ಇನ್ನಿತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನಿಶ್ಚಿತ. ಹೋಮ ಹವನ ಪೂಜಾ ಕಾರ್ಯಗಳಿಗೆ ಸಂಪರ್ಕಿಸಿ. ಸಮಸ್ಯೆ ನಿಮ್ಮದು ಪರಿಹಾರ ನಮ್ಮದು ಭವಿಷ್ಯದ ಕನಸು ನನಸಾಗಲು ಇಂದೇ ಕರೆ ಮಾಡಿ 9945410150 ಮೇಷ ರಾಶಿ ಮಾತಿನಿಂದ

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ – ದಿನ ಭವಿಷ್ಯ Read More »

ಕರಾವಳಿ, ಕರ್ನಾಟಕ, ಭವಿಷ್ಯ, ಲೈಫ್‍ಸ್ಟೈಲ್, ವಿಶೇಷ ಲೇಖನಗಳು
Scroll to Top