ಕರ್ನಾಟಕ

ಮಂಗಳೂರು ಕಮಿಷನರ್ ಹರ್ಷ ಕುಮಾರ್ ವರ್ಗಾವಣೆ ➤ ನೂತನ ಆಯುಕ್ತರಾಗಿ ವಿಕಾಸ್ ಕುಮಾರ್ ನೇಮಕ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ. 26, ನಗರದಲ್ಲಿ ಪೊಲೀಸ್ ಆಯುಕ್ತರಾಗಿದ್ದ ಡಾ. ಪಿ.ಎಸ್. ಹರ್ಷಾ ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಮಂಗಳೂರಿಗೆ ನೂತನ ಪೊಲೀಸ್ ಆಯುಕ್ತರಾಗಿ ವಿಕಾಸ್ ಕುಮಾರ್ ವಿಕಾಸ್ ಅವರನ್ನು ನೇಮಕಗೊಳಿಸಿ ಆದೇಶ ನೀಡಲಾಗಿದೆ. ಕೊರೋನಾ ಸಂಕಷ್ಟದ ಸಂದರ್ಭದಲ್ಲೇ ಸರಕಾರ ಆಡಳಿತಾತ್ಮಕ ಕ್ಷೇತ್ರದಲ್ಲಿ ಮೇಜರ್ ಸರ್ಜರಿ ನಡೆಸಿದೆ. ವಿಕಾಸ್ ಕುಮಾರ್ ಈ ಹಿಂದೆ ನಕ್ಸಲ್ ನಿಗ್ರಹ ಪಡೆಯ ಡಿಐಜಿಪಿಯಾಗಿದ್ದ ಇವರು ಕಾರ್ಕಳದಲ್ಲಿ ಕರ್ತವ್ಯ ನಿರ್ವಹಿಸಿ ಅನುಭವವನ್ನು ಹೊಂದಿದ್ದಾರೆ. ಇನ್ನು ಡಾ. ಹರ್ಷಾ ಅವರನ್ನು ಬೆಂಗಳೂರು […]

ಮಂಗಳೂರು ಕಮಿಷನರ್ ಹರ್ಷ ಕುಮಾರ್ ವರ್ಗಾವಣೆ ➤ ನೂತನ ಆಯುಕ್ತರಾಗಿ ವಿಕಾಸ್ ಕುಮಾರ್ ನೇಮಕ Read More »

ಕರಾವಳಿ, ಕರ್ನಾಟಕ

ಪುತ್ತೂರು ಗ್ರಾಮಾಂತರ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಉಮೇಶ್ ಉಪ್ಪಳಿಕೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 26. ಈ ಹಿಂದೆ ಕಡಬ ಠಾಣೆಯಲ್ಲಿ ಉಪ ನಿರೀಕ್ಷಕರಾಗಿದ್ದ ಉಮೇಶ್ ಉಪ್ಪಳಿಕೆಯವರು ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಮೊದಲು ಸರ್ಕಲ್ ಇನ್ಸ್‌ಪೆಕ್ಟರ್ ಆಗಿದ್ದ ನಾಗೇಶ್ ಕದ್ರಿಯವರಿಗೆ ವರ್ಗಾವಣೆಯಾಗಿದ್ದು, ಅವರ ಸ್ಥಾನಕ್ಕೆ ಉಮೇಶ್ ಉಪ್ಪಳಿಕೆಯವರನ್ನು ನೇಮಕಗೊಳಿಸಿ ಆದೇಶಿಸಲಾಗಿತ್ತು. ಅದರಂತೆ ಶುಕ್ರವಾರ ಸಂಜೆ ನೂತನ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಉಮೇಶ್ ಉಪ್ಪಳಿಕೆಯವರು ಅಧಿಕಾರ ಸ್ವೀಕರಿಸಿದ್ದಾರೆ.  

ಪುತ್ತೂರು ಗ್ರಾಮಾಂತರ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಉಮೇಶ್ ಉಪ್ಪಳಿಕೆ Read More »

ಕರ್ನಾಟಕ

ಕಮಿಷನರ್ ಕಛೇರಿಗೂ ವಕ್ಕರಿಸಿದ ಕೊರೋನಾ ➤ ಬೆಂಗಳೂರು ನಗರ ಪೊಲೀಸ್‌ ಆಯುಕ್ತರ ಕಛೇರಿ 3 ದಿನ ಸೀಲ್‌ಡೌನ್‌

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.26. ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿಗೆ ಕೊರೊನಾ ಸೋಂಕು ಬಂದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್‌ ಆಯುಕ್ತರ ಕಚೇರಿಯನ್ನು ಸೀಲ್‌ಡೌನ್‌ ಮಾಡಲಾಗಿದೆ. ಇಲ್ಲಿಯವರೆಗೆ 92ಕ್ಕೂ ಹೆಚ್ಚು ಪೊಲೀಸರಿಗೆ ಕೊರೊನಾ ಮಹಾಮಾರಿ ಆವರಿಸಿದ್ದು, 15 ಪೊಲೀಸ್ ಠಾಣೆಗಳನ್ನು ಸೀಲ್ ಡೌನ್ ಮಾಡಲಾಗಿದೆ. ಸೋಂಕಿತರೊಂದಿಗೆ ಪ್ರಥಮ ಹಾಗೂ ದ್ವಿತೀಯ ಸಂಪರ್ಕ ದಲ್ಲಿದ್ದ ಸುಮಾರು 870 ಮಂದಿ ಪೊಲೀಸರನ್ನು ಕ್ವಾರಂಟೈನ್ ಮಾಡಲಾಗಿದೆ. ಪೊಲೀಸ್ ಕಮಿಷನರ್ ಕಚೇರಿಯನ್ನು ಇಂದಿನಿಂದ ಮೂರು ದಿನಗಳ ಕಾಲ ಸೀಲ್‌ಡೌನ್‌ ಮಾಡಲಾಗಿದೆ.

ಕಮಿಷನರ್ ಕಛೇರಿಗೂ ವಕ್ಕರಿಸಿದ ಕೊರೋನಾ ➤ ಬೆಂಗಳೂರು ನಗರ ಪೊಲೀಸ್‌ ಆಯುಕ್ತರ ಕಛೇರಿ 3 ದಿನ ಸೀಲ್‌ಡೌನ್‌ Read More »

ಕರ್ನಾಟಕ

ದ.ಕ ಜಿಲ್ಲೆಯಲ್ಲಿಂದು 35 ಮಂದಿಯಲ್ಲಿ ಕೊರೋನಾ ಸೋಂಕು ದೃಢ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ.26, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 35 ಮಂದಿಯಲ್ಲಿ ಕೊರೋನ ಸೋಂಕು ದೃಢಪಟ್ಟಿದ್ದು, ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆಯೂ ಜಿಲ್ಲೆಯಲ್ಲಿ 29 ಮಂದಿಯಲ್ಲಿ ಸೋಂಕು ದೃಢಪಟ್ಟಿತ್ತು. ನಿನ್ನೆ ಐವರು ವೈದ್ಯ ವಿದ್ಯಾರ್ಥಿಗಳಲ್ಲೂ ಸೋಂಕು ಕಾಣಿಸಿಕೊಂಡಿದ್ದು, ಅವರನ್ನು ಕೋವಿಡ್ ಆಸ್ಪತ್ರೆಯಲ್ಲಿ ನಿಗಾದಲ್ಲಿರಿಸಿ ಅವರು ವಾಸ್ತವ್ಯವಿದ್ದ ಫ್ಲ್ಯಾಟ್ ಅನ್ನು ಸೀಲ್ ಡೌನ್ ಮಾಡಲಾಗಿದೆ.

ದ.ಕ ಜಿಲ್ಲೆಯಲ್ಲಿಂದು 35 ಮಂದಿಯಲ್ಲಿ ಕೊರೋನಾ ಸೋಂಕು ದೃಢ Read More »

ಕರಾವಳಿ, ಕರ್ನಾಟಕ

ಕರಾವಳಿ ಮೀನುಗಾರಿಕೆ ➤ ಜೂನ್ 30ರಂದು ಸಭೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ. 26, ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ಜೂನ್ 30 ರಂದು ಬೆಳಿಗ್ಗೆ 10.30 ಗಂಟೆಗೆ ಮಂಗಳೂರು ಮಹಾನಗರಪಾಲಿಕೆ ಮಂಗಳಾ ಸಭಾಂಗಣದಲ್ಲಿ ಸಭೆಯನ್ನು ಏರ್ಪಡಿಸಲಾಗಿದೆ. ಸಭೆಯಲ್ಲಿ ಕರಾವಳಿ ಮೀನುಗಾರಿಕೆ ಬಗ್ಗೆ ಹಾಗೂ ಭವಿಷ್ಯದಲ್ಲಿ ಅನುಸರಿಸಬೇಕಾದ ಕ್ರಮಗಳ ಬಗ್ಗೆ ಕರಾವಳಿ ಭಾಗದ ಶಾಸಕರು, ವಿಷಯ ತಜ್ಞರು, ಮೀನುಗಾರ ಮುಖಂಡರು, ಇಲಾಖೆಯ ನಿವೃತ್ತ ಅಧಿಕಾರಿಗಳು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಯಲಿದೆ ಎಂದು ಮೀನುಗಾರಿಕಾ ಇಲಾಖೆ

ಕರಾವಳಿ ಮೀನುಗಾರಿಕೆ ➤ ಜೂನ್ 30ರಂದು ಸಭೆ Read More »

ಕರಾವಳಿ, ಕರ್ನಾಟಕ

ಜುಲೈ 7ರಂದು ಮಂಗಳೂರು ತಾಲೂಕು ಪಂಚಾಯತ್ ಸಾಮಾನ್ಯ ಸಭೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ. 26, ಮಂಗಳೂರು ತಾಲೂಕು ಪಂಚಾಯತ್‍ನ 21 ನೇ ಸಾಮಾನ್ಯ ಸಭೆ ಜುಲೈ 7 ರಂದು ಬೆಳಿಗ್ಗೆ 10.30 ಗಂಟೆಗೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ ಮುಹಮ್ಮದ್ ಮೋನು ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ಜುಲೈ 7ರಂದು ಮಂಗಳೂರು ತಾಲೂಕು ಪಂಚಾಯತ್ ಸಾಮಾನ್ಯ ಸಭೆ Read More »

ಕರಾವಳಿ, ಕರ್ನಾಟಕ

ಎರಡನೇ ದಿನದ ಎಸ್ಸೆಸ್ಸೆಲ್ಸಿ ಪರೀಕ್ಷಾ ಹಾಜರಾತಿ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ. 26, 2ನೇ ದಿನವಾದ ಶುಕ್ರವಾರ ನಡೆದ ಎಸ್.ಎಸ್.ಎಲ್.ಸಿ. ಅರ್ಥಶಾಸ್ತ್ರ ಪರೀಕ್ಷೆಗೆ ಭಾಗಶಃ ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಅರ್ಥಶಾಸ್ತ್ರ ಪರೀಕ್ಷೆಗೆ 42 ವಿದ್ಯಾರ್ಥಿಗಳು ರಿಜಿಸ್ಟ್ರೇಶನ್ (ನೊಂದಣಿ) ಮಾಡಿದ್ದು, ಒಟ್ಟು 41 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಒರ್ವ ವಿದ್ಯಾರ್ಥಿ ಗೈರು ಹಾಜರಾಗಿರುತ್ತಾನೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

ಎರಡನೇ ದಿನದ ಎಸ್ಸೆಸ್ಸೆಲ್ಸಿ ಪರೀಕ್ಷಾ ಹಾಜರಾತಿ Read More »

ಕರಾವಳಿ, ಕರ್ನಾಟಕ

ವೆನ್ ಲಾಕ್ ನಲ್ಲಿ ಶೀಘ್ರವೇ ಒಳರೋಗಿ ಸೇವೆ ➤ ಸಚಿವ ಕೋಟ

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ. 26, ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಶೀಘ್ರವೇ ಒಳರೋಗಿ ಸೇವೆ ಆರಂಭಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೋವಿಡ್ ನಿರ್ವಹಣೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವೆನ್‍ಲಾಕ್ ಆಸ್ಪತ್ರೆಯನ್ನು ಕೋವಿಡ್‍ಗೆ ನಿಗದಿತ ಆಸ್ಪತ್ರೆಯಾಗಿ ಪರಿಗಣಿಸಿದ್ದರಿಂದ ಇತರೆ ಸೇವೆಗಳನ್ನು ನಿಲ್ಲಿಸಲಾಗಿತ್ತು. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು, ಈ ನಿಟ್ಟಿನಲ್ಲಿ ಈಗಾಗಲೇ ವೆನ್‍ಲಾಕ್‍ನಲ್ಲಿ ಹೊರರೋಗಿ ಸೇವೆ ಆರಂಭಿಸಲಾಗಿದೆ. ಪ್ರತೀದಿನ

ವೆನ್ ಲಾಕ್ ನಲ್ಲಿ ಶೀಘ್ರವೇ ಒಳರೋಗಿ ಸೇವೆ ➤ ಸಚಿವ ಕೋಟ Read More »

ಕರಾವಳಿ, ಕರ್ನಾಟಕ

ಉಳ್ಳಾಲ ಎಸ್ಐ ಬಳಿಕ ಎಎಸ್ಐ ಗೂ ಕೊರೋನಾ‌ ಪಾಸಿಟಿವ್

(ನ್ಯೂಸ್ ಕಡಬ)newskadaba.com ಮಂಗಳೂರು, ಜೂ.26, ಮೊನ್ನೆಯಷ್ಟೇ ಉಳ್ಳಾಲ ಠಾಣಾ ಪಿಎಸ್‍ಐ ಅವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು, ಇಂದು ಠಾಣಾ ಎ ಎಸ್ ಐ ಅವರಿಗೂ ಸೋಂಕು ಖಚಿತಪಟ್ಟಿದೆ. ಅವರನ್ನು ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳ್ಳಾಲದಲ್ಲಿ ಕಳೆದೊಂದು ವಾರದಿಂದ ಐವರಲ್ಲಿ ಸೋಂಕು ಪತ್ತೆಯಾದಂತಾಗಿದೆ. ಇವರಲ್ಲಿ 57ರ ಹರೆಯದ ಮಹಿಳೆಯೊಬ್ಬರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಇದೀಗ ಸೋಂಕು ದೃಢಪಟ್ಟ ಎ ಎಸ್ ಐ ಕಳೆದ ಕೆಲ ಸಮಯಗಳಿಂದ ಕರ್ನಾಟಕ-ಕೇರಳ ಗಡಿಭಾಗವಾದ ತಲಪಾಡಿ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರೆನ್ನಲಾಗಿದೆ.

ಉಳ್ಳಾಲ ಎಸ್ಐ ಬಳಿಕ ಎಎಸ್ಐ ಗೂ ಕೊರೋನಾ‌ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ, ಮದ್ರಾಸ್ ನಡೆಸಿರುವ ಹಿಂದಿ ಪರೀಕ್ಷೆಯಲ್ಲಿ ಶಕ್ತಿರೆಸಿಡೆನ್ಶಿಯಲ್ ಶಾಲೆಯ ವಿದ್ಯಾರ್ಥಿಗಳು ವಿಶೇಷ ಶ್ರೇಣಿಯಲ್ಲಿತೇರ್ಗಡೆ

ಮಂಗಳೂರು 26. ಶಕ್ತಿನಗರದ ಶಕ್ತಿ ರೆಸಿಡೆನ್ಶಿಯಲ್ ಶಾಲೆಯ ವಿದ್ಯಾರ್ಥಿಗಳು ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಮದ್ರಾಸ್ ಫೆಬ್ರವರಿಯಲ್ಲಿ ನಡೆಸಿರುವ ಹಿಂದಿ ಪ್ರಾಥಮಿಕ ಮತ್ತು ಮಧ್ಯಮ ಪರೀಕ್ಷೆಯಲ್ಲಿ ವಿಶೇಷ ಶ್ರೇಣಿಯಲ್ಲಿ ತೇರ್ಗಡೆ ಹೊಂದಿ ಶಾಲೆಗೆ ಗೌರವವನ್ನು ತಂದುಕೊಟ್ಟಿದ್ದಾರೆ. ಒಟ್ಟು 32 ವಿದ್ಯಾರ್ಥಿಗಳು ಪ್ರಾಥಮಿಕ ಪರೀಕ್ಷೆಯನ್ನು ಬರೆದಿದ್ದು, ಅದರಲ್ಲಿ ಪ್ರತ್ಯುಷ್‍ದೇವ್‍ದಾರ್, ಸಾಯಿಸಮರ್ಥ ಮಲ್ಲೂರು, ಸಮ್ಯಖ್‍ ಚಡಗ, ಮತ್ತು ಶ್ರೇಯಸ್‍ ಯು. ಶೆಟ್ಟಿಇವರು ವಿಶೇಷ ಶ್ರೇಣಿಯಲ್ಲಿಉತ್ತೀರ್ಣರಾಗಿದ್ದಾರೆ. 13 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 15 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿಉತ್ತೀರ್ಣರಾಗಿದ್ದಾರೆ. ಮಧ್ಯಮ ಪರೀಕ್ಷೆಯಲ್ಲಿ

ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ, ಮದ್ರಾಸ್ ನಡೆಸಿರುವ ಹಿಂದಿ ಪರೀಕ್ಷೆಯಲ್ಲಿ ಶಕ್ತಿರೆಸಿಡೆನ್ಶಿಯಲ್ ಶಾಲೆಯ ವಿದ್ಯಾರ್ಥಿಗಳು ವಿಶೇಷ ಶ್ರೇಣಿಯಲ್ಲಿತೇರ್ಗಡೆ Read More »

ಕರಾವಳಿ, ಕರ್ನಾಟಕ
Scroll to Top