ಕರ್ನಾಟಕ

ನಾಲ್ಕು ರಾಜ್ಯದ ಜನರಿಗೆ ಪ್ರವೇಶವಿಲ್ಲ: ಬಿಎಸ್‌ವೈ

ಬೆಂಗಳೂರು, ಮೇ 18: ಕೊರೋನ ಸೋಂಕು ಹರಡುವಿಕೆ ನಿಯಂತ್ರಿಸಲು ಗುಜರಾತ್, ಮಹಾರಾಷ್ಟ್ರ, ಕೇರಳ ಮತ್ತು ತಮಿಳುನಾಡಿನಿಂದ ಬರುವ ಜನರಿಗೆ ಮೇ 31ರ ವರೆಗೆ ಅವಕಾಶವಿರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಲಾಕ್‌ಡೌನ್ 4.0 ಜಾರಿಯಲ್ಲಿದ್ದು, ಈ ಹಂತದಲ್ಲಿ ಹೊರ ರಾಜ್ಯಗಳ ಜನರಿಗೆ ತೀರಾ ಅನಿವಾರ್ಯವಾದರೆ ಮಾತ್ರ ರಾಜ್ಯಕ್ಕೆ ಬರಲು ಅವಕಾಶ ನೀಡಲಾಗುವುದು. ಅಂತಹವರಿಗೆ ಹಂತ ಹಂತವಾಗಿ ಬಸ್ ವ್ಯವಸ್ಥೆ ಮಾಡಲಾಗುವುದು. ಹಾಗೆ ಬಂದವರನ್ನು ತಪಾಸಣೆ ಮಾಡಿ ಕಡ್ಡಾಯವಾಗಿ ಸಾಮೂಹಿಕ ಕ್ವಾರಂಟೈನ್‌ಗೆ ಒಳಪಡಿಸಲಾಗುವುದು ಎಂದು ಅವರು ಹೇಳಿದ್ದಾರೆ. ರಾಜ್ಯದ […]

ನಾಲ್ಕು ರಾಜ್ಯದ ಜನರಿಗೆ ಪ್ರವೇಶವಿಲ್ಲ: ಬಿಎಸ್‌ವೈ Read More »

ಕರ್ನಾಟಕ

ಜೂ.18ಕ್ಕೆ ಪಿಯುಸಿ ಇಂಗ್ಲಿಷ್, ಜೂ.25ರಿಂದ ಎಸೆಸೆಲ್ಸಿ ಪರೀಕ್ಷೆ

ಬೆಂಗಳೂರು, ಮೇ 18: ಕೊರೋನ-ಲಾಕ್‌ಡೌನ್ ಹಿನ್ನೆಲೆಯಲ್ಲಿ ಮುಂದೂಡಲಾಗಿರುವ ಎಸೆಸೆಲ್ಸಿ ಪರೀಕ್ಷೆಯನ್ನು ಜೂನ್ 25ರಿಂದ ಜುಲೈ 4 ರವರೆಗೆ, ಪಿಯುಸಿಯ ಇಂಗ್ಲೀಷ್ ಪರೀಕ್ಷೆಯನ್ನು ಜೂನ್ 18ರಂದು ನಡೆಸಲು ಸರಕಾರ ತೀರ್ಮಾನಿಸಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಎಸೆಸೆಲ್ಸಿ ಪರೀಕ್ಷೆ ಬದಲಾದ ಪರಿಸ್ಥಿತಿಯಲ್ಲಿ ಹೆಚ್ಚುವರಿ ಕೊಠಡಿ ಬಳಸುತ್ತೇವೆ. 2,879 ಪರೀಕ್ಷಾ ಕೇಂದ್ರಗಳಲ್ಲಿ 43,720 ಕೊಠಡಿ ಬಳಸುತ್ತಿದ್ದೇವೆ. ಆರೋಗ್ಯ ಇಲಾಖೆಯ ಅಧಿಕಾರಿಗಳ ಸಲಹೆ ಪಡೆದು ಪ್ರತಿ ಸಭಾಂಗಣದಲ್ಲಿ ವಿದ್ಯಾರ್ಥಿಗಳ ನಡುವೆ ಅಂತರ ಕಾಯ್ದುಕೊಳ್ಳುವ ವ್ಯವಸ್ಥೆ ಮಾಡುತ್ತೇವೆ. ಪ್ರತಿ

ಜೂ.18ಕ್ಕೆ ಪಿಯುಸಿ ಇಂಗ್ಲಿಷ್, ಜೂ.25ರಿಂದ ಎಸೆಸೆಲ್ಸಿ ಪರೀಕ್ಷೆ Read More »

ಕರ್ನಾಟಕ

ಜೂನ್ 25 ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ➤ ಶಿಕ್ಷಣ ಸಚಿವ ಸುರೇಶ್ ಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು. ಮೇ.18, ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಜೂನ್ 25ರಿಂದ ಜುಲೈ 4ರ ವರೆಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ. ಜೂನ್ 18 ರಂದು ದ್ವಿತೀಯ ಪಿಯುಸಿಯ ಇಂಗ್ಲಿಷ್‌ ಪರೀಕ್ಷೆಯು ನಡೆಯಲಿರುವುದು ಎಂದು ಅವರು ಹೇಳಿದರು. ಸೋಮವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು 2,879 ಪರೀಕ್ಷಾ ಕೇಂದ್ರಗಳಲ್ಲಿ 43,720 ಕೊಠಡಿಗಳನ್ನು ಬಳಸಲಾಗುತ್ತಿದ್ದು, ಪ್ರತೀ ಕೊಠಡಿಯಲ್ಲಿ ಸುರಕ್ಷಿತ ಅಂತರ ಕಾಯ್ದುಕೊಂಡು ಆಸನದ ವ್ಯವಸ್ಥೆ ಮಾಡಲಾಗುವುದು

ಜೂನ್ 25 ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ➤ ಶಿಕ್ಷಣ ಸಚಿವ ಸುರೇಶ್ ಕುಮಾರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಾಳೆಯಿಂದ ಬಸ್ ಸಂಚಾರಕ್ಕೆ ಅವಕಾಶ: ಬಿಎಸ್‌ವೈ

ರವಿವಾರ ಸಂಪೂರ್ಣ ಲಾಕ್‌ಡೌನ್ ಬೆಂಗಳೂರು, ಮೇ 18: ಕೆಎಸ್ಸಾರ್ಟಿಸಿ, ಬಿಎಂಟಿಸಿ, ವಾಯುವ್ಯ ಹಾಗೂ ಈಶಾನ್ಯ ಸಾರಿಗೆ ಬಸ್ ಸಂಚಾರ ಮೇ 19ರಂದು ಆರಂಭವಾಗಲಿದೆ. ಆದರೆ ರಾತ್ರಿ 7ರಿಂದ ಬೆಳಗ್ಗೆ 7ರವರೆಗೆ ಜನ, ಬಸ್ ಸಂಚಾರ ನಿಷೇಧವಿರಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ರಾಜ್ಯದಲ್ಲಿ ಖಾಸಗಿ ಬಸ್ ಸಂಚಾರಕ್ಕೂ ಅವಕಾಶ ನೀಡಲಾಗಿದ್ದು, ಬಸ್‌ನಲ್ಲಿ 30 ಜನರಿಗಷ್ಟೇ ಪ್ರಯಾಣಕ್ಕೆ ಅವಕಾಶ ನೀಡಲಾಗುವುದು. ಕೆಂಪು ವಲಯ ಹಾಗೂ ಕಂಟೈನ್ಮೆಂಟ್ ಹೊರತುಪಡಿಸಿ ಉಳಿದೆಡೆ ಸಂಚಾರ ಆರಂಭವಾಗಲಿದೆ ಎಂದು ಹೇಳಿದರು. ಆಟೊ, ಕ್ಯಾಬ್‌ಗಳಲ್ಲಿ

ನಾಳೆಯಿಂದ ಬಸ್ ಸಂಚಾರಕ್ಕೆ ಅವಕಾಶ: ಬಿಎಸ್‌ವೈ Read More »

ಕರ್ನಾಟಕ

ರಾಜ್ಯದಲ್ಲಿ ಇಂದು 55 ಮಂದಿಗೆ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 1,147ಕ್ಕೆ ಏರಿಕೆ

ಬೆಂಗಳೂರು, ಮೇ 17: ರಾಜ್ಯದಲ್ಲಿ ಇಂದು ಹೊಸದಾಗಿ 55 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 1,147ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಮಂಡ್ಯ ಜಿಲ್ಲೆಯೊಂದರಲ್ಲೇ 22 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕಲಬುರಗಿಯಲ್ಲಿ 10, ಹಾಸನ ಜಿಲ್ಲೆಯಲ್ಲಿ 6, ಧಾರವಾಡದಲ್ಲಿ 4, ಯಾದಗಿರಿಯಲ್ಲಿ 3, ಶಿವಮೊಗ್ಗದಲ್ಲಿ 2, ಕೋಲಾರದಲ್ಲಿ 3, ದಕ್ಷಿಣ ಕನ್ನಡದಲ್ಲಿ 2, ಉಡುಪಿಯಲ್ಲಿ 1, ವಿಜಯಪುರದಲ್ಲಿ 1 ಉತ್ತರ ಕನ್ನಡದಲ್ಲಿ 1 ಪ್ರಕರಣ ಪತ್ತೆಯಾಗಿದೆ. 1,147

ರಾಜ್ಯದಲ್ಲಿ ಇಂದು 55 ಮಂದಿಗೆ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 1,147ಕ್ಕೆ ಏರಿಕೆ Read More »

ಕರ್ನಾಟಕ

ರಾಜ್ಯದಲ್ಲಿ ಇನ್ನೆರೆಡು ದಿನ ಲಾಕ್‌ಡೌನ್ ಮುಂದುವರಿಕೆ

ಬೆಂಗಳೂರು, ಮೇ 17: ರಾಜ್ಯದಲ್ಲಿ ಇನ್ನೆರಡು ದಿನಗಳ ಕಾಲ ಲಾಕ್‌ಡೌನ್ ಮುಂದುವರಿಯಲಿದೆ. ಮೇ 19ರವರೆಗೂ ಈಗಿರುವ ಮಾರ್ಗಸೂಚಿಗಳನ್ನೇ ಅನುಸರಿಸುವಂತೆ ಕರ್ನಾಟಕ ಸರಕಾರ ಆದೇಶಿಸಿದೆ. ಕೊರೋನ ನಿಯಂತ್ರಣಕ್ಕೆ ಸದ್ಯ ಜಾರಿಯಲ್ಲಿರುವ ಲಾಕ್‌ಡೌನ್ ಮೂರನೇ ಹಂತದಲ್ಲಿನ ಮಾರ್ಗಸೂಚಿಗಳಲ್ಲಿನ ಕ್ರಮಗಳನ್ನು ಕಡ್ಡಾಯವಾಗಿ ಮುಂದಿನ ಆದೇಶದವರೆಗೆ ಅಥವಾ ಮೇ 19ರ ಮಧ್ಯರಾತ್ರಿ 12 ಗಂಟೆಯವರೆಗೂ ಪಾಲಿಸುವಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಅಧ್ಯಕ್ಷರು ಆಗಿರುವ ಸರಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ ಭಾಸ್ಕರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಇನ್ನೆರೆಡು ದಿನ ಲಾಕ್‌ಡೌನ್ ಮುಂದುವರಿಕೆ Read More »

ಕರ್ನಾಟಕ

ರಾಜ್ಯದಲ್ಲಿ ಬಸ್ ಸಂಚಾರಕ್ಕೆ ಅವಕಾಶ ನೀಡಿ: ಗಡ್ಕರಿಗೆ ಪತ್ರ ಬರೆದ ಸವದಿ

ಬೆಂಗಳೂರು, ಮೇ 17: ಸಾಮಾಜಿಕ ಅಂತರ ಕಾಯ್ದುಕೊಂಡು ಬಸ್‌ನೊಳಗೆ ಪ್ರಯಾಣ ಮಾಡಲು ಸಾಧ್ಯವಿಲ್ಲ. ಹಾಗಾಗಿ ಪೂರ್ಣ ಪ್ರಮಾಣದಲ್ಲಿ ಪ್ರಯಾಣಿಕರಿಗೆ ಸಂಚಾರ ಮಾಡಲು ಅವಕಾಶ ನೀಡಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಸಚಿನ ನಿತಿನ್ ಗಡ್ಕರಿ ಅವರಿಗೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪತ್ರ ಬರೆದಿದ್ದಾರೆ. ಸಾಮಾಜಿಕ ಅಂತರ ಕಾಯ್ದುಕೊಂಡು ಬಸ್‌ಗಳನ್ನು ಕಾರ್ಯಾಚರಣೆಗೆ ಇಳಿಸಬೇಕಾದರೆ ಸೀಟುಗಳ ಸಂಖ್ಯೆ ಕಡಿಮೆ ಮಾಡಬೇಕು. ಪ್ರಯಾಣಿಕರು ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಇರುತ್ತಾರೆ. ಹೆಚ್ಚುವರಿ ಬಸ್‌ಗಳೂ ನಮ್ಮ ಬಳಿಯಿಲ್ಲ ಎಂದು ತಿಳಿಸಿದ್ದಾರೆ. ಸಾರಿಗೆ ಸಂಸ್ಥೆಗಳ ಬಸ್ಸುಗಳ

ರಾಜ್ಯದಲ್ಲಿ ಬಸ್ ಸಂಚಾರಕ್ಕೆ ಅವಕಾಶ ನೀಡಿ: ಗಡ್ಕರಿಗೆ ಪತ್ರ ಬರೆದ ಸವದಿ Read More »

ಕರ್ನಾಟಕ

ಸದ್ಯಕ್ಕೆ ಶಾಲೆಗಳು ತೆರೆಯುವುದಿಲ್ಲ: ಸುರೇಶ್ ಕುಮಾರ್ ಸ್ಪಷ್ಟನೆ

ಬೆಂಗಳೂರು, ಮೇ 17: ಲಾಕ್‌ಡೌನ್ ಮೂರನೇ ಹಂತದ ಮುಕ್ತಾಯದ ಹಂತದಲ್ಲಿ ಆದಷ್ಟು ಬೇಗ ಶಾಲೆಗಳು ಪುನರಾರಂಭ ಆಗಬಹುದೆಂಬ ವದಂತಿಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಇತಿಶ್ರೀ ಹಾಡಿದ್ದಾರೆ. ಸದ್ಯಕ್ಕೆ ಶಾಲೆಗಳು ತೆರೆಯುವುದಿಲ್ಲ. ಈ ವಿಷಯದಲ್ಲಿ ಸರಕಾರ ಯಾವುದೇ ತರಾತುರಿಯಲ್ಲಿ ಇಲ್ಲ ಎಂದು ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ತರಾತುರಿಯಲ್ಲಿ ನಮ್ಮ ರಾಜ್ಯದ ಶಾಲೆಗಳನ್ನು ತೆರೆಯುವುದಿಲ್ಲ. ಮಕ್ಕಳ ಹಿತ ಕಾಪಾಡುವ ಜವಾಬ್ದಾರಿ ನಮ್ಮದು. ಈ ಬಗ್ಗೆ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಸುರೇಶ್ ಹೇಳಿದ್ದಾರೆ. ಇಲಾಖಾ ಮಟ್ಟದಲ್ಲಿ ತಯಾರಾದ

ಸದ್ಯಕ್ಕೆ ಶಾಲೆಗಳು ತೆರೆಯುವುದಿಲ್ಲ: ಸುರೇಶ್ ಕುಮಾರ್ ಸ್ಪಷ್ಟನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಇಂದು 39 ಹೊಸ ಕೋವಿಡ್ ಪ್ರಕರಣ ಪತ್ತೆ

ಬೆಂಗಳೂರು, ಮೇ 16: ರಾಜ್ಯದಲ್ಲಿ ಶುಕ್ರವಾರ ಸಂಜೆ 5ರಿಂದ ಶನಿವಾರ ಸಂಜೆ 5ರವರೆಗೆ 36 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 1092ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಈ ವರೆಗೆ ಒಟ್ಟು 496 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ. ಇನ್ನು 559 ಪ್ರಕರಣಗಳು ಸಕ್ರಿಯವಾಗಿವೆ. ಬೆಂಗಳೂರಿನಲ್ಲಿ 14, ಕಲಬುರಗಿ 8, ಹಾಸನ 4, ಶಿವಮೊಗ್ಗ 3, ಮಂಡ್ಯ,

ರಾಜ್ಯದಲ್ಲಿ ಇಂದು 39 ಹೊಸ ಕೋವಿಡ್ ಪ್ರಕರಣ ಪತ್ತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕ್ವಾರಂಟೈನ್ ನಲ್ಲಿದ್ದರೂ ಕಡಬಕ್ಕೆ ಬಂದು ಕೆಲಸಕ್ಕೆ ಹಾಜರಾದ ಮ್ಯಾನೇಜರ್ ➤ ಮ್ಯಾನೇಜರ್ ಗೆ 14 ದಿನ ಕಛೇರಿಯಲ್ಲೇ ಕ್ವಾರಂಟೈನ್, ಸಿಬ್ಬಂದಿಗಳಿಗೆ 14 ದಿನ ರಜೆ

(ನ್ಯೂಸ್ ಕಡಬ) newskadaba.com ಕಡಬ, ಮೇ.15. ಚಿಕ್ಕಮಗಳೂರುನಿಂದ ಕಡಬಕ್ಕೆ ಆಗಮಿಸಿ ಕ್ವಾರಂಟೈನ್ ನಲ್ಲಿ ಇರಬೇಕಾಗಿದ್ದ ಮೈಕ್ರೋ ಫೈನಾನ್ಸ್‌ವೊಂದರ ಮ್ಯಾನೇಜರ್ ಕಛೇರಿಯಲ್ಲಿ ಇತರ ಸಿಬ್ಬಂದಿಗಳೊಂದಿಗೆ ಕಳೆದ ಎಂಟು ದಿನಗಳಿಂದ ಕೆಲಸ ನಿರ್ವಹಿಸುತ್ತಿದ್ದುದನ್ನು ಪತ್ತೆ ಹಚ್ಚಿದ ಕಡಬ ಗ್ರಾಮ ಪಂಚಾಯತ್ ಕೋವಿಡ್ ಕಾರ‍್ಯಪಡೆಯ ಅಧಿಕಾರಿಗಳು ಕಛೇರಿಯಲ್ಲಿದ್ದ ಸಿಬ್ಬಂದಿಗಳಿಗೆ ರಜೆ ನೀಡಿ, ಕಛೇರಿಯಲ್ಲೇ ಮ್ಯಾನೇಜರ್‌ಗೆ ಕ್ವಾರಂಟೈನ್ ಮಾಡಿಸಿದ ಘಟನೆ ಶುಕ್ರವಾರದಂದು ನಡೆದಿದೆ. ಕಡಬದಲ್ಲಿ ಕಾರ‍್ಯಾಚರಿಸುತ್ತಿದ್ದ ಮೈಕ್ರೋ ಫೈನಾನ್ಸ್‌ವೊಂದರ ಮ್ಯಾನೇಜರ್ ಚಿಕ್ಕಮಗಳೂರಿನಿಂದ ಮೇ 6 ರಂದು ಕಡಬಕ್ಕೆ ಆಗಮಿಸಿದ್ದರು. ಈ ವೇಳೆ ಅವರಿಗೆ

ಕ್ವಾರಂಟೈನ್ ನಲ್ಲಿದ್ದರೂ ಕಡಬಕ್ಕೆ ಬಂದು ಕೆಲಸಕ್ಕೆ ಹಾಜರಾದ ಮ್ಯಾನೇಜರ್ ➤ ಮ್ಯಾನೇಜರ್ ಗೆ 14 ದಿನ ಕಛೇರಿಯಲ್ಲೇ ಕ್ವಾರಂಟೈನ್, ಸಿಬ್ಬಂದಿಗಳಿಗೆ 14 ದಿನ ರಜೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top