ಕರ್ನಾಟಕ

ಹಸಿರು ವಲಯಗಳಲ್ಲಿ ಲಾಕ್‌ಡೌನ್ ಸಡಿಲಿಕೆ: ಷರತ್ತು ಬದ್ಧ ಆರ್ಥಿಕ ಚಟುವಟಿಕೆ ಅವಕಾಶ

ಬೆಂಗಳೂರು, ಎ.28: ರಾಜ್ಯದಲ್ಲಿ ಒಂದೂ ಕೊರೋನ ವೈರಸ್ ಪ್ರಕರಣಗಳಿಲ್ಲದ ಹಸಿರುವ ವಲಯದ ಜಿಲ್ಲೆಗಳಲ್ಲಿ ಷರತ್ತು ಬದ್ಧ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ. ಚಾಮರಾಜನಗರ, ಕೊಪ್ಪಳ, ಚಿಕ್ಕಮಗಳೂರು, ರಾಯಚೂರು, ಚಿತ್ರದುರ್ಗ, ರಾಮನಗರ, ಹಾಸನ, ಶಿವಮೊಗ್ಗ, ಹಾವೇರಿ, ಯಾದಗಿರಿ, ಕೋಲಾರ, ದಾವಣಗೆರೆ, ಉಡುಪಿ ಮತ್ತು ಕೊಡಗು ಜಿಲ್ಲೆಗಳು ಹಸಿರು ವಲಯದ ವ್ಯಾಪ್ತಿಗೆ ಬರುತ್ತವೆ ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಹಸಿರು ವಲಯದ ಜಿಲ್ಲೆಗಳಲ್ಲಿ ಅಂಗಡಿಗಳು, ಪುರಸಭೆಯ ಮಿತಿಯಲ್ಲಿರುವ ವಸತಿ […]

ಹಸಿರು ವಲಯಗಳಲ್ಲಿ ಲಾಕ್‌ಡೌನ್ ಸಡಿಲಿಕೆ: ಷರತ್ತು ಬದ್ಧ ಆರ್ಥಿಕ ಚಟುವಟಿಕೆ ಅವಕಾಶ Read More »

ಕರ್ನಾಟಕ

ರಾಜ್ಯದಲ್ಲಿ ಇಂದು 9 ಮಂದಿಗೆ ಕೊರೋ ಸೋಂಕು ದೃಢ: ಸೋಂಕಿತರ ಸಂಖ್ಯೆ 512ಕ್ಕೆ ಏರಿಕೆ

ಬೆಂಗಳೂರು, ಎ.27: ರಾಜ್ಯದಲ್ಲಿ ಇಂದು 9 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 512ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಬೆಂಗಳೂರು ನಗರ 1, ಮಂಡ್ಯ 2, ದ.ಕ. 2, ವಿಜಯಪುರ 2 ಮತ್ತು ಬಾಗಲಕೋಟೆಯಲ್ಲಿ ಇಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ತಿಳಿಸಿದೆ.

ರಾಜ್ಯದಲ್ಲಿ ಇಂದು 9 ಮಂದಿಗೆ ಕೊರೋ ಸೋಂಕು ದೃಢ: ಸೋಂಕಿತರ ಸಂಖ್ಯೆ 512ಕ್ಕೆ ಏರಿಕೆ Read More »

ಕರ್ನಾಟಕ

ಸಕ್ರಿಯವಾಗಿದೆ ಒಟಿಪಿ ಮೂಲಕ ಬ್ಯಾಂಕಿನಿಂದ ಹಣ ದೋಚುವ ಜಾಲ ➤ ಅಪರಿಚಿತ ಕರೆಗೆ ಉತ್ತರಿಸುವ ಮುನ್ನ ಏನು ಮಾಡಬೇಕು..?

(ನ್ಯೂಸ್ ಕಡಬ) newskadaba.com ಕಡಬ, ಎ.27. ಇತ್ತೀಚಿನ ದಿನಗಳಲ್ಲಿ ಕೊರೋನಾ (ಕೋವಿಡ್ -19) ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಈ ಬಗ್ಗೆ ಮಾನ್ಯ ಪ್ರಧಾನ ಮಂತ್ರಿಗಳ, ಮಾನ್ಯ ಮುಖ್ಯಮಂತ್ರಿಗಳ ಪರಿಹಾರ ಖಾತೆಗೆ ಹಣ ಕಳುಹಿಸುವರೇ ಹಾಗೂ ಸಾರ್ವಜನಿಕವಾಗಿ ಖಾಸಗಿ ಸಂಸ್ಥೆಗಳು ಪರಿಹಾರಕ್ಕಾಗಿ ಅಥವಾ ದೇಣಿಗೆ ನೀಡಬೇಕೆಂದು ನಕಲಿ ಸಂಸ್ಥೆಗಳು ಕರೆ ಅಥವಾ ಸಾಮಾಜಿಕ ಜಾಲತಾಣಗಳ ಮುಖಾಂತರ ಕಾರ್ಯಾಚರಿಸುತ್ತಿವೆ. ಈ ಮೂಲಕ ಎಲ್ಲಾ ಸಾರ್ವಜನಿಕರಿಗೆ ತಿಳಿಯಪಡಿಸುವುದೇನೆಂದರೆ ವಿಜಯ ಬ್ಯಾಂಕ್, ಬ್ಯಾಂಕ್ ಆಫ್ ಬರೋಡದೊಂದಿಗೆ ವಿಲೀನ ಗೊಂಡಿದ್ದು, ಈ ವಿಷಯವನ್ನು ಮುಂದಿಟ್ಟುಕೊಂಡು

ಸಕ್ರಿಯವಾಗಿದೆ ಒಟಿಪಿ ಮೂಲಕ ಬ್ಯಾಂಕಿನಿಂದ ಹಣ ದೋಚುವ ಜಾಲ ➤ ಅಪರಿಚಿತ ಕರೆಗೆ ಉತ್ತರಿಸುವ ಮುನ್ನ ಏನು ಮಾಡಬೇಕು..? Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಇಂದು ಮೂವರಿಗೆ ಕೊರೋನ ಸೋಂಕು ದೃಢ

ಬೆಂಗಳೂರು, ಎ.26: ರಾಜ್ಯದಲ್ಲಿ ರವಿವಾರ ಹೊಸದಾಗಿ ಮೂವರಿಗೆ ಕೊರೋನ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಕೊರೋನ ಸೋಂಕಿತರ ಸಂಖ್ಯೆ 503ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ದ.ಕ. ಜಿಲ್ಲೆಯಲ್ಲಿ ಓರ್ವ ಮಹಿಳೆ ಹಾಗೂ ಕಲಬುರಗಿಯ ಇಬ್ಬರಿಗೆ ಸೋಂಕು ದೃಢಪಟ್ಟಿದೆ. 182 ಮಂದಿ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದು, 19 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು ಮೂವರಿಗೆ ಕೊರೋನ ಸೋಂಕು ದೃಢ Read More »

ಕರ್ನಾಟಕ

ಪತ್ರಕರ್ತ ಸೇರಿ ರಾಜ್ಯದಲ್ಲಿ 15 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 489ಕ್ಕೆ ಏರಿಕೆ

ಬೆಂಗಳೂರು, ಎ.25: ರಾಜ್ಯದಲ್ಲಿ ಶುಕ್ರವಾರ ಸಂಜೆ 5ರಿಂದ ಶನಿವಾರ ಮಧ್ಯಾಹ್ನ 12ರವರೆಗೆ 15 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 489ಕ್ಕೆ ಏರಿಕೆಯಾಗಿದೆ. ಬೆಂಗಳೂರು ನಗರ 6, ಬೆಳಗಾವಿ 6, ಮಂಡ್ಯ 1, ಚಿಕ್ಕಬಳ್ಳಾಪುರ 1, ದ.ಕ. 1 ಪ್ರಕರಣ ವರದಿಯಾಗಿದೆ. ಬೆಂಗಳೂರಿನ ಬಿಬಿಎಂಪಿಯ ಕಂಟೈನ್ಮೆಂಟ್ ವಲಯಕ್ಕೆ ಭೇಟಿ ನೀಡಿದ ಪತ್ರಕರ್ತರೋರ್ವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಪ್ರಸ್ತುಕ ಸೋಂಕಿಗೊಳಗಾಗಿರುವ ಪತ್ರಕರ್ತ ಕರ್ತವ್ಯದ ಮೇರೆಗೆ ಸೂಕ್ಷ್ಮ್ಮ ಪ್ರದೇಶಗಳಿಗೆ ಭೇಟಿ ನೀಡಿದ್ದರು. ಇವರನ್ನು ಪರೀಕ್ಷೆಗೊಳಪಡಿಸಿದಾಗ ಸೋಂಕಿನ ಲಕ್ಷಣಗಳು

ಪತ್ರಕರ್ತ ಸೇರಿ ರಾಜ್ಯದಲ್ಲಿ 15 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 489ಕ್ಕೆ ಏರಿಕೆ Read More »

ಕರ್ನಾಟಕ

ಎಸ್ಸೆಸ್ಸೆಲ್ಸಿ ಪರೀಕ್ಷೆ: ಮೇ 3ರ ಬಳಿಕ ನಿರ್ಧಾರ; ಸಚಿವ ಸುರೇಶ್ ಕುಮಾರ್

ಚಾಮರಾಜನಗರ, ಎ.25: ಮೇ 3ರ ವರೆಗೂ ಲಾಕ್‌ಡೌನ್ ಜಾರಿಯಲ್ಲಿರುತ್ತದೆ ಆ ಬಳಿಕ ಎಸ್ಸೆಸ್ಸೆಲ್ಸಿ ಪರೀಕ್ಷೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಸೆಸ್ಸೆಲ್ಸಿಗಿಂತ ದೊಡ್ಡ ಪರೀಕ್ಷೆ ಕೊರೋನ ವಿರುದ್ಧ ಹೋರಾಡುವುದು. ಪರೀಕ್ಷೆ ಯಾವ ಸಮಯದಲ್ಲಿ ಮಾಡಬೇಕು ಮಕ್ಕಳಿಗೆ ಎಷ್ಟು ಸಮಯ ಕೊಡಬೇಕು ಎಂಬುದನ್ನು ನಂತರ ತೀರ್ಮಾನ ಮಾಡುತ್ತೇವೆ ಎಂದರು. ಕೆಲವರು ಪರೀಕ್ಷೆ ಅನುಮಾನವೆಂದು ಗೊಂದಲ ಮೂಡಿಸುತ್ತಿದ್ದಾರೆ. ಮಕ್ಕಳ ಮನಸ್ಸಿನಲ್ಲಿ ಗೊಂದಲವಿಲ್ಲ. ಪೋಷಕರಲ್ಲಿ ಕೆಲವರಿಗೆ

ಎಸ್ಸೆಸ್ಸೆಲ್ಸಿ ಪರೀಕ್ಷೆ: ಮೇ 3ರ ಬಳಿಕ ನಿರ್ಧಾರ; ಸಚಿವ ಸುರೇಶ್ ಕುಮಾರ್ Read More »

ಕರ್ನಾಟಕ

Breaking news ದ.ಕ. ಜಿಲ್ಲೆಯಲ್ಲಿ ಮತ್ತೊಂದು ಕೊರೋನ ಸೋಂಕು ದೃಢ: ಬಂಟ್ವಾಳದ 33  ವರ್ಷದ ಮಹಿಳೆಗೆ ಪಾಸಿಟಿವ್

ಮಂಗಳೂರು, ಎ.25: ಜಿಲ್ಲೆಯಲ್ಲಿ ಮತ್ತೊಂದು ಕೊರೋನ ಸೋಂಕು ದೃಢಪಟ್ಟಿದೆ. ಬಂಟ್ವಾಳದ 65ಹರೆಯದ ಮಹಿಳೆಯ ಸಂಪರ್ಕಕ್ಕೆ ಬಂದಿದ್ದ ಬಂಟ್ವಾಳದ 33 ವರ್ಷದ ಮಹಿಳೆಗೂ ಸೋಂಕು ದೃಢವಾಗಿದ್ದು, ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.   ಜಿಲ್ಲೆಯಲ್ಲಿ ಈವರೆಗೆ ಕೊರೋನ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ. ಕೊರೋನ ಬಲಿಯಾದ ವೃದ್ದ ಮಹಿಳೆಯ ನೆರೆಮನೆಯ ಮಹಿಳೆಗೂ ಕೊರೋನ ತಗುಲಿದ್ದು, ಈಕೆಯ ಮಗಳಿಗೂ ಇದೀಗ ಕೋವಿಡ್ ಸೋಂಕು ಇರುವುದು ದೃಡವಾಗಿದೆ. ಈ ಹಿನ್ನಲೆಯಲ್ಲಿ ತಾಯಿ, ಮಗಳು ಇಬ್ಬರಿಗೂ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.  

Breaking news ದ.ಕ. ಜಿಲ್ಲೆಯಲ್ಲಿ ಮತ್ತೊಂದು ಕೊರೋನ ಸೋಂಕು ದೃಢ: ಬಂಟ್ವಾಳದ 33  ವರ್ಷದ ಮಹಿಳೆಗೆ ಪಾಸಿಟಿವ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಖ್ಯಾತ ಸಾಮಾಜಿಕ ಕಾರ್ಯಕರ್ತ ಮಹೇಂದ್ರ ಕುಮಾರ್ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.25. ಬಜರಂಗದಳದ ಮಾಜಿ ರಾಜ್ಯ ಸಂಚಾಲಕ, ಸಾಮಾಜಿಕ ಕಾರ್ಯಕರ್ತ ಮಹೇಂದ್ರ ಕುಮಾರ್ ಕೊಪ್ಪ ಶನಿವಾರ ಬೆಳಗಿನ ಜಾವ ಹೃದಯಾಘಾತದಿಂದ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೂಲತ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದವರಾಗಿದ್ದು, ಬೆಂಗಳೂರಿನಲ್ಲಿ ವಾಸವಾಗಿದ್ದ ಅವರಿಗೆ 47 ವರ್ಷ ವಯಸ್ಸಾಗಿತ್ತು. ಬಜರಂಗದಳದಲ್ಲಿ ಗುರುತಿಸಿಕೊಂಡು ರಾಜ್ಯ ಸಂಚಾಲಕ ಹುದ್ದೆಯವರೆಗೆ ಏರಿದ್ದ ಅವರು ಆ ಬಳಿಕದ ದಿನಗಳಲ್ಲಿ ಸಂಘ ಪರಿವಾರದ ವಿರುದ್ದ ಧ್ವನಿಯೆತ್ತತೊಡಗಿದ್ದರು.

ಖ್ಯಾತ ಸಾಮಾಜಿಕ ಕಾರ್ಯಕರ್ತ ಮಹೇಂದ್ರ ಕುಮಾರ್ ಇನ್ನಿಲ್ಲ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

breaking news ರಾಜ್ಯದಲ್ಲಿ ಇಂದು ಒಂದೇ ದಿನ 29 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 474ಕ್ಕೆ ಏರಿಕೆ

ಬೆಂಗಳೂರು, ಎ.24: ರಾಜ್ಯದಲ್ಲಿ ಹೊಸದಾಗಿ 29 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿಒಟ್ಟು ಸೋಂಕಿತರ ಸಂಖ್ಯೆ 474ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಬೆಂಗಳೂರು 19, ಚಿಕ್ಕಬಳ್ಳಾಪುರ 1, ತುಮಕೂರು 1, ಬೆಳಗಾವಿ 2, ವಿಜಪುರ 2, ಬಾಗಲಕೋಟೆಯಲ್ಲಿ 4 ಮಂದಿಗೆ ಸೋಂಕು ದೃಢಪಟ್ಟಿದೆ ಎಂದು ಇಲಾಖೆ ತಿಳಿಸಿದೆ.

breaking news ರಾಜ್ಯದಲ್ಲಿ ಇಂದು ಒಂದೇ ದಿನ 29 ಮಂದಿಗೆ ಕೊರೋನ ಸೋಂಕು ದೃಢ: ಸೋಂಕಿತರ ಸಂಖ್ಯೆ 474ಕ್ಕೆ ಏರಿಕೆ Read More »

ಕರ್ನಾಟಕ

ಕಡಬದಲ್ಲಿ ಮತ್ತೊಂದು ಒಟಿಪಿ ವಂಚನೆ ಬೆಳಕಿಗೆ..!! ➤ ಕ್ಷಣಮಾತ್ರದಲ್ಲಿ 50 ಸಾವಿರ ರೂ. ಗುಳುಂ

(ನ್ಯೂಸ್ ಕಡಬ) newskadaba.com ಕಡಬ, ಎ.24. ಕಡಬದಲ್ಲಿ ಮತ್ತೊಂದು ಒಟಿಪಿ ವಂಚನೆ‌ ನಡೆದಿದ್ದು, ನೆಟ್ಟಣ ನಿವಾಸಿಯೋರ್ವರ ಬ್ಯಾಂಕ್ ಅಕೌಂಟ್ ನಿಂದ ಐವತ್ತು ಸಾವಿರ ರೂ.ಗಳನ್ನು ಎಗರಿಸಲಾಗಿದೆ. ಕಡಬ ತಾಲೂಕಿನ ಬಿಳಿನೆಲೆ ನಿವಾಸಿ ಧರ್ಮಪಾಲ ಎಂಬವರ ಬ್ಯಾಂಕ್ ಖಾತೆಯಲ್ಲಿದ್ದ ಹಣವನ್ನು ಎಪ್ರಿಲ್ 21 ರಂದು ತೆಗೆದಿರುವ ಬಗ್ಗೆ ಮೊಬೈಲ್‌ ಗೆ ಮೆಸೇಜ್‌ ಬಂದಿದ್ದು, ಅದರಂತೆ ಬ್ಯಾಂಕ್ ಗೆ ತೆರಳಿ ವಿಚಾರಿಸಿದಾಗ‌ 20 ಸಾವಿರ ಮತ್ತು 30 ಸಾವಿರ‌ ರೂ. ಗಳನ್ನು ತೆಗೆದಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಧರ್ಮಪಾಲ

ಕಡಬದಲ್ಲಿ ಮತ್ತೊಂದು ಒಟಿಪಿ ವಂಚನೆ ಬೆಳಕಿಗೆ..!! ➤ ಕ್ಷಣಮಾತ್ರದಲ್ಲಿ 50 ಸಾವಿರ ರೂ. ಗುಳುಂ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top