ಕರ್ನಾಟಕ

ಬಂಟ್ವಾಳದ 10 ತಿಂಗಳ ಮಗುವಿಗೆ ಕೊರೋನ ಸೋಂಕು ದೃಢ

ಬಂಟ್ವಾಳ, ಮಾ 27: ಇಲ್ಲಿನ ಸಜಿಪನಡು ಗ್ರಾಮದ 10 ತಿಂಗಳ ಮಗುವಿನಲ್ಲಿ ಕೊರೋನ ಸೋಂಕು ಪತ್ತೆಯಾಗಿದ್ದು, ಸ್ಥಳೀಯರು ಆತಂಕಿತರಾಗಿದ್ದಾರೆ. ಜ್ವರ ಹಾಗೂ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಗುವನ್ನು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಗಿತ್ತು. ಮಗುವಿನಲ್ಲಿ ಶಂಕಿತ ಕೊರೋನ ಸೋಂಕು ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಮಗುವಿನ ಗಂಟಲು ದ್ರವವನ್ನು ಬುಧವಾರ ಪರೀಕ್ಷೆ ರವಾನಿಸಲಾಗಿತ್ತು. ಗುರುವಾರ ಬಂದ ವರದಿಯಲ್ಲಿ ಕೊರೋನ ಪಾಸಿಟಿವ್ ಬಂದಿತ್ತು. ಆದರೆ ಈ ಮಗುವಿನ ಕುಟುಂಬ ಕೊರೋನ ಪೀಡಿತ ದೇಶಗಳಿಗೆ ಪ್ರಯಾಣ ಬೆಳೆಸಿರಲಿಲ್ಲ. ಮಗುವನ್ನು […]

ಬಂಟ್ವಾಳದ 10 ತಿಂಗಳ ಮಗುವಿಗೆ ಕೊರೋನ ಸೋಂಕು ದೃಢ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಕೆಲಸದ ವೇಳೆ ಕೊರೋನಾ ಹರಡಿರುವ ಭೀತಿ ➤ ಪೆಟ್ರೋಲ್ ಬಂಕ್ ಉದ್ಯೋಗಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಮಾ.27. ಜಗತ್ತಿನಾದ್ಯಂತ ಇತ್ತೀಚೆಗೆ ವ್ಯಾಪಕವಾಗಿ ಹಬ್ಬುತ್ತಿರುವ ಕೊರೋನಾ ರೋಗವು ತನಗೆ ತಗುಲಿರಬಹುದು ಎಂದು ಭಯಗೊಂಡು ಪೆಟ್ರೋಲ್ ಬಂಕ್ ಉದ್ಯೋಗಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಶುಕ್ರವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡ ಉದ್ಯೋಗಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಮೇರಮಜಲು ಗ್ರಾಮದ ಅಬ್ಬೆಟ್ಟು ನಿವಾಸಿ ಸದಾಶಿವ ಶೆಟ್ಟಿ (56) ಎಂದು ಗುರುತಿಸಲಾಗಿದೆ. ಇತ್ತೀಚೆಗೆ ವ್ಯಾಪಕವಾಗಿ ಹಬ್ಬುತ್ತಿರುವ ಕೊರೋನಾ ರೋಗವು ಪೆಟ್ರೋಲ್

ಬಂಟ್ವಾಳ: ಕೆಲಸದ ವೇಳೆ ಕೊರೋನಾ ಹರಡಿರುವ ಭೀತಿ ➤ ಪೆಟ್ರೋಲ್ ಬಂಕ್ ಉದ್ಯೋಗಿ ಆತ್ಮಹತ್ಯೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ ಶಾಸಕ ಎಸ್ ಅಂಗಾರ ರಕ್ತದೊತ್ತಡದಿಂದ ದಿಢೀರ್ ಅಸ್ವಸ್ಥ ➤ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರು ಆಸ್ಪತ್ರೆಗೆ

(ನ್ಯೂಸ್ ಕಡಬ) newskadaba.com ಕಡಬ, ಮಾ.27. ಪಡಿತರ ವ್ಯವಸ್ಥೆಯ ಕುರಿತು ಸಹಕಾರಿ ಸಂಘಗಳ ಮುಖ್ಯಸ್ಥರ ಸಭೆ ನಡೆಸುತ್ತಿದ್ದ ವೇಳೆ ರಕ್ತದೊತ್ತಡ ಕಡಿಮೆಯಾಗಿ ಸುಳ್ಯ ಶಾಸಕ ಎಸ್.ಅಂಗಾರ ಅಸ್ವಸ್ಥಗೊಂಡ ಘಟನೆ ಶುಕ್ರವಾರದಂದು ಕಡಬದಲ್ಲಿ ನಡೆದಿದೆ. ಕಡಬದಲ್ಲಿ ನಡೆದ ಅಧಿಕಾರಿಗಳು, ವರ್ತಕರು ಹಾಗೂ ಜನಪ್ರತಿನಿಧಿಗಳ ಸಭೆಯ ಬಳಿಕ ಕಡಬದ ಸಹಕಾರಿ ಸಂಘಗಳ ಮುಖ್ಯಸ್ಥರ ಸಭೆ ನಡೆಸುತ್ತಿದ್ದ ವೇಳೆ ದಿಢೀರ್ ರಕ್ತದೊತ್ತಡ ಕಡಿಮೆಯಾಗಿದೆ‌. ತಕ್ಷಣವೇ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರಿನ ಪ್ರಗತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ.

ಸುಳ್ಯ ಶಾಸಕ ಎಸ್ ಅಂಗಾರ ರಕ್ತದೊತ್ತಡದಿಂದ ದಿಢೀರ್ ಅಸ್ವಸ್ಥ ➤ 108 ಆಂಬ್ಯುಲೆನ್ಸ್ ಮೂಲಕ ಪುತ್ತೂರು ಆಸ್ಪತ್ರೆಗೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಮುದಾಯ ಹಂತಕ್ಕೆ ಕಾಲಿಟ್ಟಿತೇ ಕೊರೋನ ವೈರಸ್: ಅನುಮಾನ ಮೂಡಿಸುತ್ತಿದೆ ಮೈಸೂರು, ಬೆಂಗಳೂರು ಪ್ರಕರಣ

ಬೆಂಗಳೂರು, ಮಾ.27: ರಾಜ್ಯದಲ್ಲಿ ಕೊರೋನ ವೈರಸ್ 3ನೇ ಹಂತಕ್ಕೆ ಕಾಲಿಟ್ಟಿದೆಯೇ ಎಂಬ ಅನುಮಾನ ಕಾಡತೊಡಗಿದೆ. ಯಾವುದೇ ವಿದೇಶ ಪ್ರಯಾಣದ ಇತಿಹಾಸವಿಲ್ಲದ ಹಾಗೂ ವಿದೇಶದಿಂದ ಬಂದವರ ಸಂಪರ್ಕ ಸಾಧಿಸದ ಇಬ್ಬರು ವ್ಯಕ್ತಿಗಳಲ್ಲಿ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು ಹೀಗಾಗಿ ಕರ್ನಾಟಕದಲ್ಲಿ ಸಮುದಾಯಕ್ಕೆ ಹಂತಕ್ಕೆ ತಲುಪಿದೆಯೇ ಎಂಬ ಶಂಕೆ ವ್ಯಕ್ತವಾಗಿದೆ. ಮಾ.26ರಂದು ಒಂದೇ ದಿನ ರಾಜ್ಯದಲ್ಲಿ 4 ಪ್ರಕರಣಗಳು ಪತ್ತೆಯಾಗಿದೆ. ಆದರೆ ಇದಕ್ಕಿಂತಲೂ ಅತಂಕಕಾರಿ ಸಂಗತಿ ಇಬ್ಬರಿಗೂ ಟ್ರಾವೆಲ್ ಹಿಸ್ಟರಿ ಹಾಗೂ ಟ್ರಾವೆಲ್ ಹಿಸ್ಟರಿ ಉಳ್ಳವರ ಸಂಪರ್ಕವಿಲ್ಲದೆ ಕೊರೋನಾ ಸೋಂಕು

ಸಮುದಾಯ ಹಂತಕ್ಕೆ ಕಾಲಿಟ್ಟಿತೇ ಕೊರೋನ ವೈರಸ್: ಅನುಮಾನ ಮೂಡಿಸುತ್ತಿದೆ ಮೈಸೂರು, ಬೆಂಗಳೂರು ಪ್ರಕರಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಲಾಕ್‌ಡೌನ್ ಉಲ್ಲಂಘಿಸಿದವರನ್ನು ಅರೆಸ್ಟ್ ಮಾಡಿ: ಡಿಸಿಗಳಿಗೆ ಸಿಎಂ ಸೂಚನೆ

ಬೆಂಗಳೂರು, ಮಾ.26: ಪ್ರಧಾನಿಯವರ ಸೂಚನೆಯಂತೆ 21 ದಿನಗಳ ಲಾಕ್ ಡೌನ್ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಸೂಚನೆ ನೀಡಿದರು. ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೊ ಕಾನ್ಫರೆನ್ಸ್‌ನಲ್ಲಿ ಸಮಾಲೋಚಿಸಿದ ಅವರು, ಲಾಕ್ ಡೌನ್ ಮೀರಿ ಹೊರಬರುವವರನ್ನು ಬಂಧಿಸುವಂತೆ ಸೂಚನೆ ನೀಡಿದರು. ಎಲ್ಲಾ ಜಿಲ್ಲೆಯ ಬಾರ್ಡರ್‌ಗಳನ್ನು ಸೀಲ್ ಮಾಡಬೇಕು. ವಿಶೇಷವಾಗಿ ಕಾಸರಗೋಡು ಮೂಲಕ ಬರುವವರ ಮೇಲೆ ತೀವ್ರ ನಿಗಾ ಇಡುವಂತೆ ಸೂಚನೆ ನೀಡಲಾಯಿತು. ಈಗಾಗಲೇ ಡಿಸ್ಟಲರಿ ಕಂಪನಿಗಳ ಜೊತೆ ಸ್ಯಾನಿಟೈಸರ್ ಉತ್ಪಾದನೆ ಮಾಡಲು ಸೂಚನೆ ನೀಡಲಾಗಿದ್ದು, ಕೆಲವು ಕಂಪೆನಿಗಳ

ಲಾಕ್‌ಡೌನ್ ಉಲ್ಲಂಘಿಸಿದವರನ್ನು ಅರೆಸ್ಟ್ ಮಾಡಿ: ಡಿಸಿಗಳಿಗೆ ಸಿಎಂ ಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿಕ್ಕಬಳ್ಳಾಪುರ: ಶಂಕಿತ ಕೊರೋನ ಸೋಂಕಿನಿಂದ ವೃದ್ಧೆ ಮೃತ್ಯು

ಚಿಕ್ಕಬಳ್ಳಾಪುರ, ಮಾ.25: ಶಂಕಿತ ಕೊರೋನ ಸೋಂಕಿನಿಂದ ವೃದ್ಧೆ ಮೃತಪಟ್ಟ ಘಟನೆ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ನಡೆದಿದೆ. ಗೌರಿಬಿದನೂರಿನ 70 ವರ್ಷದ ವೃದ್ದೆ ಇತ್ತೀಚೆಗೆ ಮಕ್ಕಾದಿಂದ ಹಿಂದಿರುಗಿ ಕ್ವಾರಂಟೈನ್‌ನಲ್ಲಿ ಇದ್ದರು. ಚಿಕ್ಕಬಳ್ಳಾಪುರದಲ್ಲಿ ಈಗಾಗಲೇ ಒಂದೇ ಕುಟುಂಬದ ಮೂವರಲ್ಲಿ ಕೋವಿಡ್ 19 ಸೋಂಕು ದೃಢಪಟ್ಟಿದೆ. ಈ ನಡುವೆ ಹೋಮ್ ಕ್ವಾರೆಂಟೈನ್ ನಲ್ಲಿದ್ದ ಮಹಿಳೆ ಸಾವನ್ನಪ್ಪಿರುವುದು ಕಳವಳಕ್ಕೆ ಕಾರಣವಾಗಿದೆ. ಮಂಗಳವಾರ ರಾತ್ರಿ ಈ ವೃದ್ಧೆಗೆ ಇದ್ದಕ್ಕಿದ್ದಂತೆ ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡ ಕಾರಣ ಅವರನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ವೃದ್ಧೆಯ ಆರೋಗ್ಯ

ಚಿಕ್ಕಬಳ್ಳಾಪುರ: ಶಂಕಿತ ಕೊರೋನ ಸೋಂಕಿನಿಂದ ವೃದ್ಧೆ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಲಾಕ್‌ಡೌ‌ನ್ ಉಲ್ಲಂಘಿಸಿದರೆ ಲೈಸೆನ್ಸ್ ರದ್ದು

ಬೆಂಗಳೂರು , ಮಾ.25: ದೇಶಾದ್ಯಂತ ಕೊರೋನ ವೈರಸ್‌ ನಿಯಂತ್ರಣಕ್ಕೆ ಲಾಕ್‌ ಡೌನ್‌ ಘೋಷಿಸಿದ್ದರೂ, ಲಾಕ್‌ ಡೌನ್‌ ಉಲ್ಲಂಘಿಸಿ ಜನರು ಅನಗತ್ಯವಾಗಿ ಓಡಾಡುತ್ತಿರುವ ಹಿನ್ನೆಲೆ ಪೊಲೀಸರು ಕೆಲವೆಡೆ ಲಾಠಿ ಚಾರ್ಜ್ ಮಾಡಿದ್ದಾರೆ.   ವಾಹನಗಳು ಲಾಕ್‌ ಡೌನ್‌ ಸಂದರ್ಭ ಅನಗತ್ಯವಾಗಿ ರಸ್ತೆಗಿಳಿದರೆ ಅಂತವರ ಲೈಸೆನ್ಸ್‌ ರದ್ದು ಮಾಡಲು ಉತ್ತರ ಕನ್ನಡ ಡಿಸಿ ಸೂಚಿಸಿದ್ದಾರೆ. ವಾಹನ ಸವಾರರ ಲೈಸೆನ್ಸ್ ರದ್ದು ಮಾಡಲು ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್ ಸೂಚನೆ ನೀಡಿದ್ದಾರೆ. ದಿನದಿಂದ ದಿನಕ್ಕೆ ಕೊರೋನ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ, ಕೇಂದ್ರ

ಲಾಕ್‌ಡೌ‌ನ್ ಉಲ್ಲಂಘಿಸಿದರೆ ಲೈಸೆನ್ಸ್ ರದ್ದು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾ.31ರವರೆಗೆ ಕರ್ನಾಟಕ ಸಂಪೂರ್ಣ ಲಾಕ್‌ಡೌನ್

ಬೆಂಗಳೂರು, ಮಾ.24: ಕೊರೋನ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯಾದ್ಯಂತ ಮಾ.31ರವರೆಗೆ ಲಾಕ್‌ಡೌನ್ ಮಾಡಲು ರಾಜ್ಯ ಸರಕಾರ ಆದೇಶಿಸಿದೆ. ಪ್ರಾರಂಭದಲ್ಲಿ ಕೊರೋನ ಪೀಡಿತ 9 ಜಿಲ್ಲೆಗಳನ್ನು ಮಾತ್ರ ಲಾಕ್‌ಡೌನ್ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ಬಳಿಕ ಈ ನಿರ್ಧಾರವನ್ನು ಪುನರ್ ಪರಿಶೀಲಿಸಿರುವ ರಾಜ್ಯ ಸರಕಾರ ಇದೀಗ ಮಾರ್ಚ್ 23ರ ಮಧ್ಯರಾತ್ರಿಯಿಂದಲೇ ಈ ಲಾಕ್‌ಡೌನ್ ಆದೇಶವನ್ನು ರಾಜ್ಯಾದ್ಯಂತ ವಿಸ್ತರಿಸುವ ನಿರ್ಧಾರವನ್ನು ಕೈಗೊಂಡಿದೆ. ಈ ಕುರಿತಾದ ಮಾಹಿತಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಪ್ರಕಟಿಸಿದ್ದಾರೆ.

ಮಾ.31ರವರೆಗೆ ಕರ್ನಾಟಕ ಸಂಪೂರ್ಣ ಲಾಕ್‌ಡೌನ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಲಾಕ್‌ಡೌನ್’ ಪಾಲಿಸದಿದ್ದಲ್ಲಿ ಬಂಧನ: ಪೊಲೀಸ್ ಆಯುಕ್ತ ಡಾ.ಹರ್ಷ

ಮಂಗಳೂರು, ಮಾ.23: ಕೊರೋನ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರ ಹಾಗೂ ಜಿಲ್ಲಾಡಳಿತ ಲಾಕ್‌ಡೌನ್ ಘೋಷಿಸಿದೆ. ಅಲ್ಲದೆ ಜಿಲ್ಲಾಧಿಕಾರಿ ಸೆಕ್ಷನ್ 144ರಲ್ಲಿ ನಿರ್ಬಂಧಕಾಜ್ಞೆಯನ್ನು ಹೊರಡಿಸಿದ್ದಾರೆ. ಇದನ್ನು ಉಲ್ಲಂಘಿಸಿ ಜನರು ಹೊರಬಂದಲ್ಲಿ ಅವರ ಮೇಲೆ ಪ್ರಕರಣ ದಾಖಲಿಸಿ ಅಗತ್ಯ ಬಿದ್ದಲ್ಲಿ ದಸ್ತಗಿರಿ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಎಚ್ಚರಿಕೆ ನೀಡಿದ್ದಾರೆ. ಯಾವುದಾದರೂ ವೈದ್ಯಕೀಯ ತುರ್ತು ಹೊರತು ಪಡಿಸಿ ಬೇರೆ ಯಾರೂ ಕೂಡಾ ಮನೆಯಿಂದ ಹೊರ ಬರುವುದನ್ನು ಸಂಪೂರ್ಣವಾಗಿ ನಿಲ್ಲಿಸಬೇಕು.

‘ಲಾಕ್‌ಡೌನ್’ ಪಾಲಿಸದಿದ್ದಲ್ಲಿ ಬಂಧನ: ಪೊಲೀಸ್ ಆಯುಕ್ತ ಡಾ.ಹರ್ಷ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಾ.31ರವರೆಗೆ ಅಂತರ್ ರಾಜ್ಯ ಸರಕಾರಿ ಬಸ್ ಸೇವೆ ಸ್ಥಗಿತ

ಬೆಂಗಳೂರು, ಮಾ.22: ದೇಶದಲ್ಲಿ ಹೆಚ್ಚಾಗುತ್ತಿರುವ ಕೊರೋನ ವೈರಸ್ ಸೋಂಕು ಪ್ರಕರಣಗಳ ಹಿನ್ನೆಲೆಯಲ್ಲಿ ಕೇಂದ್ರ ಸರಕಾರದಿಂದ ಪ್ರಯಾಣಿಕ ರೈಲು ಸೇವೆ ಸ್ಥಗಿತ ಆದೇಶ ಹೊರಬಿದ್ದ ಬೆನ್ನಲ್ಲೇ ಇದೀಗ ಕರ್ನಾಟಕ ಸರಕಾರ ಎಲ್ಲ ಅಂತರರಾಜ್ಯ ಬಸ್ ಸೇವೆಯನ್ನು ಮಾರ್ಚ್ 31ರ ವರೆಗೆ ಸ್ಥಗಿತಗೊಳಿಸಿ ಆದೇಶ ಹೊರಡಿಸಿದೆ. ಮಾರ್ಚ್ 31ರವರೆಗೆ ಹುಬ್ಬಳ್ಳಿ-ಧಾರವಾಡದಲ್ಲಿ ಸಾರಿಗೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಧಾರವಾಡ ಜಿಲ್ಲೆಯಲ್ಲಿ ಮೊದಲ ಕೊರೋನ ವೈರಸ್ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಹಾಗೂ ಕೊರೋನ ವೈರಸ್ ನಿಯಂತ್ರಣ ಮಾಡುವ ಸದುದ್ದೇಶದಿಂದ ಅವಳಿನಗರದಲ್ಲಿನ

ಮಾ.31ರವರೆಗೆ ಅಂತರ್ ರಾಜ್ಯ ಸರಕಾರಿ ಬಸ್ ಸೇವೆ ಸ್ಥಗಿತ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top