ಕರ್ನಾಟಕ

ಕೊರೋನ ಭೀತಿ: ಮಾ.31ರವರೆಗೆ ದೇಶದ 75 ಜಿಲ್ಲೆಗಳು, ದ.ಕ. ಸೇರಿ ಕರ್ನಾಟಕದ 9 ಜಿಲ್ಲೆಗಳು ಲಾಕ್‌ಡೌನ್

ಹೊಸದಿಲ್ಲಿ, ಮಾ.22: ಕೊರೋನ ವೈರಸ್ ದೇಶದ ವಿವಿಧ ಭಾಗಗಳಲ್ಲಿ ಹಬ್ಬುತ್ತಿರುವ ಹಿನ್ನಲೆಯಲ್ಲಿ ಮಂಗಳೂರು ಸೇರಿದಂತೆ ದೇಶದ ಒಟ್ಟು 75 ಜಿಲ್ಲೆಗಳನ್ನು ಲಾಕ್ ಡೌನ್ ಸ್ಥಿತಿಯಲ್ಲಿರಿಸಿ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ ಆರು ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಸ್ಥಿತಿ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಗಳೂರು, ಕಲಬುರಗಿ, ಮೈಸೂರು, ಕೊಡಗು, ಚಿಕ್ಕಬಳ್ಳಾಪುರ, ಧಾರವಾಡ, ಬೆಳಗಾವಿ ಜಿಲ್ಲೆಗಳನ್ನು ಮಾರ್ಚ್ 31ರವರೆಗೆ ಲಾಕ್‌ಡೌನ್ ಮಾಡಿ ಇಂದು ಆದೇಶ ಹೊರಡಿಸಲಾಗಿದೆ.

ಕೊರೋನ ಭೀತಿ: ಮಾ.31ರವರೆಗೆ ದೇಶದ 75 ಜಿಲ್ಲೆಗಳು, ದ.ಕ. ಸೇರಿ ಕರ್ನಾಟಕದ 9 ಜಿಲ್ಲೆಗಳು ಲಾಕ್‌ಡೌನ್ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮತ್ತೊಬ್ಬ ವ್ಯಕ್ತಿಗೆ ಕೊರೋನ ಸೋಂಕು ಧೃಡ: ರಾಜ್ಯದಲ್ಲಿ ಪೀಡಿತರ ಸಂಖ್ಯೆ 21ಕ್ಕೆ ಏರಿಕೆ

ಧಾರವಾಡ, ಮಾ.22: ರಾಜ್ಯದಲ್ಲಿ ಮತ್ತೊಬ್ಬ ವ್ಯಕ್ತಿಗೆ ಕೊರೋನ ಸೋಂಕು ಇರುವುದು ಧೃಡಪಟ್ಟಿದ್ದು, ಇದೀಗ ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ಸೋಂಕಿತ ವ್ಯಕ್ತಿಯು ಆಸ್ಟ್ರೇಲಿಯಾ, ದುಬೈ, ಮಸ್ಕತ್ ಹಾಗೂ ಗೋವಾ ಮೂಲಕ ಧಾರವಾಡ ನಗರಕ್ಕೆ ಆಗಮಿಸಿರುವುದಾಗಿ ಧಾರವಾಡ ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದ್ದಾರೆ. ವ್ಯಕ್ತಿಯಲ್ಲಿ ಶಂಕಿತ ಕೊರೋನದ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ , ಮಾರ್ಚ್ 18 ರಂದು ಅವರು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದರು. ಅದೇ ದಿನ ಅವರ ಅವರ ಗಂಟಲು ಮತ್ತು ಮೂಗಿನ

ಮತ್ತೊಬ್ಬ ವ್ಯಕ್ತಿಗೆ ಕೊರೋನ ಸೋಂಕು ಧೃಡ: ರಾಜ್ಯದಲ್ಲಿ ಪೀಡಿತರ ಸಂಖ್ಯೆ 21ಕ್ಕೆ ಏರಿಕೆ Read More »

ಕರ್ನಾಟಕ

ಕೊರೋನ ಹಿನ್ನೆಲೆ: ಎಸೆಸೆಲ್ಸಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು, ಮಾ.22: ಕೊರೋನ ವೈರಸ್ ಭೀತಿ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದಲ್ಲಿ ಮಾ. 27ರಿಂದ ನಿಗದಿಯಾಗಿದ್ದ ಎಸೆಸೆಲ್ಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಇಂದು ಬೆಳಗ್ಗೆ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಹಾಗೂ ಡಾ.ದೇವಿಪ್ರಸಾದ್ ಅವರೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಈ ತೀರ್ಮಾನ ಕೈಗೊಂಡಿದ್ದಾರೆ. ಇದರ ಜೊತೆಗೆ, ವಿವಿಧ ನೇಮಕಾತಿಗಳಿಗೆ ಸಂಬಂಧಿಸಿದ ಪರೀಕ್ಷೆಗಳನ್ನು ಕೂಡ ಮುಂದೂಡಲಾಗಿದೆ.

ಕೊರೋನ ಹಿನ್ನೆಲೆ: ಎಸೆಸೆಲ್ಸಿ ಪರೀಕ್ಷೆ ಮುಂದೂಡಿಕೆ Read More »

ಕರ್ನಾಟಕ

ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಂದೂಡಿಕೆ: ಸಿಎಂ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.22. ಕೊರೋನ ವೈರಸ್ ಸೋಂಕು ಭೀತಿಯ ಹಿನ್ನೆಲೆಯಲ್ಲಿ ಮಾ.27ರಿಂದ ಆರಂಭವಾಗಬೇಕಿದ್ದ ಎಸೆಸೆಲ್ಸಿ ಸೇರಿದಂತೆ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನತೆ ಯಾವುದೇ ರೀತಿಯಲ್ಲಿ ಗಾಬರಿಯಾಗುವ ಅಗತ್ಯವಿಲ್ಲ. ಎಸ್ಸೆಸ್ಸೆಲ್ಸಿ ಜೊತೆಗೆ ವಿವಿಧ ನೇಮಕಾತಿಗಳಿಗೆ ಸಂಬಂಧಿಸಿದ ಪರೀಕ್ಷೆಗಳು, ಸ್ಥಳೀಯ ಸಂಸ್ಥೆಗಳು ಸೇರಿದಂತೆ ಎಲ್ಲ ಚುನಾವಣೆಗಳನ್ನು ಮುಂದೂಡಲಾಗಿದೆ. ಜೀವನಾವಶ್ಯಕ ವಸ್ತುಗಳ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಎರಡು ತಿಂಗಳ ಪಡಿತರವನ್ನು ವಿತರಿಸಲಾಗುವುದು ಎಂದರು ಹೇಳಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆ ಮುಂದೂಡಿಕೆ: ಸಿಎಂ ಘೋಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

BREAKING NEWS ರಾಜ್ಯದಲ್ಲಿ ಕೊರೋನ ಪೀಡಿತರ ಸಂಖ್ಯೆ 20ಕ್ಕೆ ಏರಿಕೆ

ಶನಿವಾರ ಒಂದೇ ದಿನ ಐದು ಪ್ರಕರಣ ಪತ್ತೆ ಬೆಂಗಳೂರು, ಮಾ.21: ಮಹಾಮಾರಿ ಕೊರೋನ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ರಾಜ್ಯದಲ್ಲಿ ಶನಿವಾರ ಐದು ಹೊಸ ಪ್ರಕರಣಗಳು ಬೆಳಕಿದೆ ಬಂದಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಚಿಕ್ಕಬಳ್ಳಾಪುರ ಗೌರಿಬಿದನೂರಿನಲ್ಲಿ ಒಂದು ಪ್ರಕರಣ ಮತ್ತು ಬೆಂಗಳೂರಿನಲ್ಲಿ ಮೂರು ಹೊಸ ಪ್ರಕರಣ ಹಾಗೂ ಮೈಸೂರಿನಲ್ಲಿ ಒಂದು ಪ್ರಕರಣ ದೃಢವಾಗಿದೆ ಎಂದು ವರದಿಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 20ಕ್ಕೇರಿದೆ. ಮೈಸೂರಿನಲ್ಲಿ ಇದು ಪ್ರಥಮ ಪ್ರಕರಣವಾಗಿದೆ ಎಂದು ತಿಳಿದು

BREAKING NEWS ರಾಜ್ಯದಲ್ಲಿ ಕೊರೋನ ಪೀಡಿತರ ಸಂಖ್ಯೆ 20ಕ್ಕೆ ಏರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ಮತ್ತೊಂದು ಕೊರೋನ ದೃಢ: ಒಟ್ಟು ಪೀಡಿತರ ಸಂಖ್ಯೆ 19ಕ್ಕೆ ಏರಿಕೆ

ಬೆಂಗಳೂರು, ಮಾ.21: ಮಹಾಮಾರಿ ಕೊರೋನ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ರಾಜ್ಯದಲ್ಲಿ ಶನಿವಾರ ನಾಲ್ಕು ಹೊಸ ಪ್ರಕರಣಗಳು ಬೆಳಕಿದೆ ಬಂದಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಚಿಕ್ಕಬಳ್ಳಾಪುರ ಗೌರಿಬಿದನೂರಿನಲ್ಲಿ ಒಂದು ಪ್ರಕರಣ ಮತ್ತು ಬೆಂಗಳೂರಿನಲ್ಲಿ ಮೂರು ಹೊಸ ಪ್ರಕರಣಗಳು ದೃಢವಾಗಿದೆ ಎಂದು ವರದಿಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 19ಕ್ಕೇರಿದೆ. ಮಕ್ಕಾ ಪ್ರವಾಸದಿಂದ ಆಗಮಿಸಿದ್ದ 32 ವರ್ಷದ ಚಿಕ್ಕಬಳ್ಳಾಪುರ ಗೌರಿಬಿದನೂರಿನ ವ್ಯಕ್ತಿಗೆ ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದರು.

ರಾಜ್ಯದಲ್ಲಿ ಮತ್ತೊಂದು ಕೊರೋನ ದೃಢ: ಒಟ್ಟು ಪೀಡಿತರ ಸಂಖ್ಯೆ 19ಕ್ಕೆ ಏರಿಕೆ Read More »

ಕರ್ನಾಟಕ

ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆ 18ಕ್ಕೇರಿಕೆ

ಬೆಂಗಳೂರು, ಮಾ.21: ರಾಜ್ಯದಲ್ಲಿ ಕೊರೋನ ಪೀಡಿತರ ಸಂಖ್ಯೆ 18ಕ್ಕೇರಿದೆ. ಶನಿವಾರ ಒಂದೇ ದಿನ ಮೂವರಿಗೆ ಕೊರೋನ ಇರುವುದು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಕೊರೋನ ಸೋಂಕು ಇರುವವರಿಗೆ ಹಾಗೂ ಮನೆ ಮತ್ತು ಆಸ್ಪತ್ರೆಗಳಲ್ಲಿ ಕ್ವಾರಂಟೈನ್ ಆಗಿರುವವರಿಗೆ ಮಾನಸಿಕ ಆರೋಗ್ಯ ಸಮಾಲೋಚನೆ ನಡೆಸಲಾಗುತ್ತಿದ್ದು ಈ ವರೆಗೆ 4,390 ಜನರಿಗೆ ಕೌನ್ಸಲಿಂಗ್ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ತನ್ನ ಸುತ್ತೋಲೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆ 18ಕ್ಕೇರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಚಿಲಂಪಾಡಿ: ಸ್ನಾನಕ್ಕೆಂದು ತೆರಳಿದ್ದ ಇಬ್ಬರು ನೀರಿನಲ್ಲಿ ಕಣ್ಮರೆ ➤ ಓರ್ವನ ಮೃತದೇಹ ಪತ್ತೆ

ಸಾಂದರ್ಭಿಕ ಚಿತ್ರ (ನ್ಯೂಸ್ ಕಡಬ) newskadaba.com ಕಡಬ, ಮಾ.20. ಸ್ನಾನಕ್ಕೆಂದು ತೆರಳಿದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಕಣ್ಮರೆಯಾಗಿರುವ ಘಟನೆ ಶುಕ್ರವಾರ ಸಂಜೆ ಇಚಿಲಂಪಾಡಿಯಲ್ಲಿ ನಡೆದಿದೆ. ನಾಪತ್ತೆಯಾಗಿರುವ ಯುವಕರನ್ನು ಇಚಿಲಂಪಾಡಿ ಸಮೀಪದ ಕೊರಮೇರು ನಿವಾಸಿಗಳಾದ ವೆಂಕಟೇಶ್ ಹಾಗೂ ಗುರುನಂದನ್ ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಇಚಿಲಂಪಾಡಿ ಸಮೀಪದ ಕೊರಮೇರು ಬದನೆಗುಂಡಿ ಎಂಬಲ್ಲಿ ಸ್ನಾನಕ್ಕೆಂದು ತೆರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಓರ್ವನ ಮೃತದೇಹ ಪತ್ತೆಯಾಗಿದ್ದು, ಮತ್ತೋರ್ವನಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಇಚಿಲಂಪಾಡಿ: ಸ್ನಾನಕ್ಕೆಂದು ತೆರಳಿದ್ದ ಇಬ್ಬರು ನೀರಿನಲ್ಲಿ ಕಣ್ಮರೆ ➤ ಓರ್ವನ ಮೃತದೇಹ ಪತ್ತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊರೋನಾ ನಿಯಂತ್ರಣಕ್ಕೆ ಸ್ವಯಂ ನಿಗಾ ಅನಿವಾರ್ಯ ➤ ಮಾಧ್ಯಮ ಸಂವಾದದಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್

ಮಂಗಳೂರು, ಮಾ.20. ಕೊರೊನಾ ಸೋಂಕು ಹರಡದಂತೆ ತಡೆಗಟ್ಟಲು ಪ್ರತಿಯೊಬ್ಬರು ಸ್ವಯಂ ನಿಗಾ ಅಳವಡಿಸಿಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ಬಿ.ರೂಪೇಶ್ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಶುಕ್ರವಾರ ನಗರದ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೊರೊನಾ ವೈರಾಣು ಅತಿ ವೇಗವಾಗಿ ಹಬ್ಬುತ್ತದೆ. ಇದಕ್ಕೆ ತಕ್ಕ ಜನಸಾಮಾನ್ಯರು ಮುನ್ನೆಚ್ಚರಿಕೆ

ಕೊರೋನಾ ನಿಯಂತ್ರಣಕ್ಕೆ ಸ್ವಯಂ ನಿಗಾ ಅನಿವಾರ್ಯ ➤ ಮಾಧ್ಯಮ ಸಂವಾದದಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್ Read More »

ಕರ್ನಾಟಕ

ನೆಲ್ಯಾಡಿ: ಗ್ಯಾಸ್ ಟ್ಯಾಂಕರ್ ಪಲ್ಟಿ ➤ ಚಾಲಕನಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ.20. ಗ್ಯಾಸ್ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಉರುಳಿ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿ ಸಮೀಪದ ಲಾವತಡ್ಕ ಎಂಬಲ್ಲಿ ಶುಕ್ರವಾರದಂದು ಸಂಭವಿಸಿದೆ. ಮಂಗಳೂರಿನಿಂದ ಗ್ಯಾಸ್ ತುಂಬಿಸಿಕೊಂಡು ಬೆಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಲಾವತ್ತಡ್ಕದಲ್ಲಿ ಪಲ್ಟಿಯಾಗಿದೆ. ಅಪಘಾತದಲ್ಲಿ ಟ್ಯಾಂಕರ್ ಚಾಲಕ ಗಾಯಗೊಂಡಿದ್ದು, ಅಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮಂಗಳೂರಿನಿಂದ ಅಧಿಕಾರಿಗಳು ಆಗಮಿಸಿ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದ್ದಾರೆ. ಟ್ಯಾಂಕರ್ ಅನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದ್ದು,

ನೆಲ್ಯಾಡಿ: ಗ್ಯಾಸ್ ಟ್ಯಾಂಕರ್ ಪಲ್ಟಿ ➤ ಚಾಲಕನಿಗೆ ಗಾಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top