ಕರ್ನಾಟಕ

ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಮೃತದೇಹ ಪತ್ತೆ

(ನ್ಯೂಸ್‌ ಕಡಬ) newskadaba.com,ಫೆ.06: ಪಾಣೆಮಂಗಳೂರು ಸಮೀಪ ಕಂಚಿಕಾರಪೇಟೆ ಬಳಿ ನೇತ್ರಾವತಿ ನದಿಯಲ್ಲಿ ಗುರುವಾರ ಸಂಜೆ ಮೃತದೇಹವೊಂದು ಪತ್ತೆಯಾಗಿದೆ. ವೀರಕಂಭ ಗ್ರಾಮದ ಬಾಯಿಲ ನಿವಾಸಿ ಪ್ರಕಾಶ್ (35) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಕಂಚಿಕಾರಪೇಟೆ ಸೇತುವೆ ಬಳಿ ನದಿ ಮಧ್ಯೆ ತೇಲಿಕೊಂಡಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರ ಗಮನಕ್ಕೆ ತಂದಿದ್ದು, ಕೂಡಲೇ ದೋಣಿ ಸಹಾಯದಿಂದ ಸ್ಥಳೀಯರ ನೆರವಿನಿಂದ ದಡಕ್ಕೆ ತರಲಾಯಿತು. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.

ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಫೆ.06: ರಾಜ್ಯದಲ್ಲಿ ಚಳಿಯ ಕಡಿಮೆಯಾಗುತ್ತಿದೆ. ಬಹುತೇಕ ಭಾಗಗಳಲ್ಲಿ ಮುಂಜಾನೆ ಹಾಗೂ ಸಂಜೆಯ ವೇಳೆ ಮಾತ್ರ ಚಳಿ ಇರಲಿದ್ದು, ಮಧ್ಯಾಹ್ನದ ಬಿಸಿಲು ನೆತ್ತಿ ಸುಡಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ SITಯಿಂದ IT ಅಧಿಕಾರಿಗಳ ವಿಚಾರಣೆ ಸಾಧ್ಯತೆ

(ನ್ಯೂಸ್‌ ಕಡಬ) newskadaba.com,ಫೆ.05 ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್‌ನ ಅಧ್ಯಕ್ಷ ಸಿಜೆ ರಾಯ್ ಅವರು ತಮ್ಮ ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡರಚಿಸಿದೆ. ಆದರೆ, ಈ ಪ್ರಕರಣದಲ್ಲಿ ಆದಾಯ ತೆರಿಗೆ ಅಧಿಕಾರಿಗಳ ಪಾತ್ರದ ಕುರಿತು ತನಿಖೆಯ ವ್ಯಾಪ್ತಿ ಕುರಿತು ಚರ್ಚೆಗಳು ಶುರುವಾಗಿವೆ. ಸಿಜೆ ರಾಯ್ ಕುಟುಂಬವು, “ಐಟಿ ಅಧಿಕಾರಿಗಳ ಕಿರುಕುಳವೇ ಆತ್ಮಹತ್ಯೆಗೆ ಕಾರಣ” ಎಂದು ಗಂಭೀರ ಆರೋಪ ಮಾಡಿದ್ದು, ತೆರಿಗೆ ತಪ್ಪಿಸುವಿಕೆ ಸಂಬಂಧಿತ ಎಲ್ಲಾ ಕಡತಗಳು ಮತ್ತು ದಾಖಲೆಗಳು ಕೇಂದ್ರ ಸರ್ಕಾರದ

ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ SITಯಿಂದ IT ಅಧಿಕಾರಿಗಳ ವಿಚಾರಣೆ ಸಾಧ್ಯತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಪಚ್ಚನಾಡಿಯಲ್ಲಿ ದುರಂತ: ರೈಲ್ವೇ ಹಳಿ ಮೇಲೆ ಶವವಾಗಿ ಪತ್ತೆಯಾದ ಯುವಕ

(ನ್ಯೂಸ್‌ ಕಡಬ) newskadaba.com,ಫೆ.05 : ಮಂಗಳೂರಿನ ಪಚ್ಚನಾಡಿ ಪರಿಸರದ ರೈಲ್ವೇ ಹಳಿಯ ಬಳಿ ಅಪರಿಚಿತ ಯುವಕನ ಮೃತದೇಹವೊಂದು ಇಂದು ಪತ್ತೆಯಾಗಿದೆ. ಸ್ಥಳೀಯರು ಮೃತದೇಹವನ್ನು ಕಂಡು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಾವಿನ ಕುರಿತು ಅನುಮಾನಗಳು ವ್ಯಕ್ತವಾಗಿದ್ದು, ಪ್ರಕರಣವು ಸಂಶಯಾಸ್ಪದವಾಗಿರುವುದರಿಂದ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ಥಳದಲ್ಲಿ ಬ್ಯಾಗ್ ಸೇರಿದಂತೆ ಮೃತನಿಗೆ ಸೇರಿದ್ದ ಇತರ ವಸ್ತುಗಳು ಪತ್ತೆಯಾಗಿದ್ದು, ​ ಇದು ಚಲಿಸುವ ರೈಲಿನಿಂದ ಬಿದ್ದು ಸಂಭವಿಸಿದ ಅಪಘಾತವೇ ಅಥವಾ ಆತ್ಮಹತ್ಯೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.. ಸ್ಥಳಕ್ಕೆ ಮಂಗಳೂರು

ಪಚ್ಚನಾಡಿಯಲ್ಲಿ ದುರಂತ: ರೈಲ್ವೇ ಹಳಿ ಮೇಲೆ ಶವವಾಗಿ ಪತ್ತೆಯಾದ ಯುವಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮತ್ತೆ ನಮ್ಮ ಮೆಟ್ರೋ ಪ್ರಯಾಣ ದರ ದುಬಾರಿ ಫೆ.9 ರಿಂದ ಜಾರಿ

(ನ್ಯೂಸ್‌ ಕಡಬ) newskadaba.com,ಫೆ.05 : ಒಂದು ವರ್ಷದ ಹಿಂದಷ್ಟೇ ಪ್ರಯಾಣ ದರವನ್ನು 71.5% ರಷ್ಟು ಹೆಚ್ಚಳ ಮಾಡಿದ್ದ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್‌ ಲಿಮಿಟೆಡ್‌ (BMRCL) ಈಗ 5% ಹೆಚ್ಚಳ ಮಾಡಲು ನಿರ್ಧರಿಸಿದೆ. 0ಬಿಎಂಆರ್‌ಸಿಎಲ್‌ ಪ್ರತಿ ವರ್ಷ 5% ರಷ್ಟು ಪ್ರಯಾಣ ದರ ಹೆಚ್ಚಳ ಮಾಡಬಹುದು ಎಂದು ದರ ನಿಗದಿ ಸಮಿತಿ (FFC) 2025ರಲ್ಲಿ ಶಿಫಾರಸು ಮಾಡಿತ್ತು. ಈ ಬಗ್ಗೆ ಎರಡು ದಿನಗಳ ಹಿಂದೆ ನಡೆದ ಬಿಎಂಆರ್‌ಸಿಎಲ್‌ ಮಂಡಳಿ ಸಭೆಯಲ್ಲಿ ಚರ್ಚೆ ನಡೆದು 5% ರಷ್ಟು ಏರಿಸಲು

ಮತ್ತೆ ನಮ್ಮ ಮೆಟ್ರೋ ಪ್ರಯಾಣ ದರ ದುಬಾರಿ ಫೆ.9 ರಿಂದ ಜಾರಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತ-ಪಾಕ್ ಕ್ರಿಕೆಟ್ ಕದನಕ್ಕೆ ಬ್ರೇಕ್ ಭಾರತದ ವಿರುದ್ಧ ಆಡಲು ಶೆಹಬಾಝ್ ಷರೀಫ್ ನಕಾರ

(ನ್ಯೂಸ್‌ ಕಡಬ) newskadaba.com,ಫೆ.05 : ಭಾರತ ಮತ್ತು ಪಾಕಿಸ್ತಾನ ನಡುವಿನ ಬಹುನಿರೀಕ್ಷಿತ ಕ್ರಿಕೆಟ್ ಪಂದ್ಯವು ರಾಜತಾಂತ್ರಿಕ ಸಂಘರ್ಷದಿಂದಾಗಿ ರದ್ದಾಗುವ ಭೀತಿ ಎದುರಾಗಿದೆ. ಪಾಕಿಸ್ತಾನ ಪ್ರಧಾನಿ ಶೆಹಬಾಝ್ ಷರೀಫ್ ಅವರು ಬಾಂಗ್ಲಾದೇಶದ ಪರವಾಗಿ ಬ್ಯಾಟ್ ಬೀಸಿದ್ದು, ಭಾರತದ ವಿರುದ್ಧದ ಪಂದ್ಯದಲ್ಲಿ ತಮ್ಮ ತಂಡ ಭಾಗವಹಿಸುವುದಿಲ್ಲ ಎಂಬ ಕಠಿಣ ನಿಲುವು ತಳೆದಿದ್ದಾರೆ. ​ಬಾಂಗ್ಲಾದೇಶದ ಮೇಲಿನ ಅಂತರಾಷ್ಟ್ರೀಯ ಕ್ರಿಕೆಟ್ ನಿರ್ಬಂಧಗಳನ್ನು ವಿರೋಧಿಸಿ ಪಾಕಿಸ್ತಾನ ಈ ನಿರ್ಧಾರ ಕೈಗೊಂಡಿದೆ. ಇದರಿಂದಾಗಿ ಐಸಿಸಿ (ICC) ಮತ್ತು ಬಿಸಿಸಿಐ (BCCI) ಗೆ ಆರ್ಥಿಕವಾಗಿ ಭಾರಿ ಹೊಡೆತ

ಭಾರತ-ಪಾಕ್ ಕ್ರಿಕೆಟ್ ಕದನಕ್ಕೆ ಬ್ರೇಕ್ ಭಾರತದ ವಿರುದ್ಧ ಆಡಲು ಶೆಹಬಾಝ್ ಷರೀಫ್ ನಕಾರ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು ಕರಾವಳಿಯನ್ನು ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ- ಸಂಸದ ಕ್ಯಾ.  ಚೌಟ

(ನ್ಯೂಸ್‌ ಕಡಬ) newskadaba.com ಮಂಗಳೂರು, ಫೆ. 05.  ಭಾರತದ ಗ್ರೀನ್ ಎನರ್ಜಿ ಸ್ವಾವಲಂಬನೆ ಮತ್ತು ಬಂದರು ಆಧಾರಿತ ಅಭಿವೃದ್ಧಿ ಕಾರ್ಯತಂತ್ರವನ್ನು ದೃಷ್ಟಿಯಲ್ಲಿಟ್ಟುಕೊಂಡು ಮಂಗಳೂರು ಕಡಲ ತೀರದಲ್ಲಿ ‘ಕಡಲ ಪವನ ಶಕ್ತಿ’ (‘ಸಮುದ್ರ ತೀರದ ಪವನ ಶಕ್ತಿ’ Offshore Wind Energy) ಉತ್ಪಾದನೆಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.   ಲೋಕಸಭೆಯಲ್ಲಿ ನಿಯಮ 377ರ ಅಡಿಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಸಂಸದ ಕ್ಯಾ. ಚೌಟ ಅವರು, ಕಡಲನಗರಿ ಮಂಗಳೂರು ಸಮುದ್ರ ತೀರದ ಪವನ ಶಕ್ತಿ ಉತ್ಪಾದನೆಗೆ ವಿಪುಲ ಅವಕಾಶವಿದೆ. ನ್ಯಾಷನಲ್ ಇನ್‌ಸ್ಟಿಟ್ಯೂಟ್‌ ಆಫ್ ಓಷಿಯಾನೋಗ್ರಫಿ (NIO) ವರದಿಯನ್ನು ಉಲ್ಲೇಖಿಸಿ, ಭಾರತದ ಭರವಸೆಯ ಕಡಲ ಪವನ ಇಂಧನ ‘ವಲಯ-2ರಲ್ಲಿ ಮಂಗಳೂರು ಕರಾವಳಿ’ ಗುರುತಿಸಿಕೊಂಡಿದ್ದು, ಮಂಗಳೂರು ಕರಾವಳಿಯು ಸುಮಾರು 6,490 ಚ.ಕಿಮೀ. ಪ್ರದೇಶವು ಪವನ ಇಂಧನ ಉತ್ಪಾದನೆಗೆ ಹೆಚ್ಚು ಪೂರಕವಾಗಿದೆ. ಇಲ್ಲಿ ಭೂಕಂಪನ, ಚಂಡಮಾರುತ ಮುಂತಾದ ನೈಸರ್ಗಿಕ ವಿಕೋಪಗಳ ಅಪಾಯ ಕಡಿಮೆ ಇರುವುದರಿಂದ ದೀರ್ಘಕಾಲದ ಪವನ ಇಂಧನ ಯೋಜನೆಗಳ ಸ್ಥಾಪನೆಗೆ ಅತ್ಯಂತ ಸೂಕ್ತ ಹಾಗೂ ಸುರಕ್ಷಿತ ಪ್ರದೇಶವಾಗಿದೆ. ಹೀಗಾಗಿ, ಮಂಗಳೂರು ಕಡಲ ತೀರವನ್ನು ಪವನ ಶಕ್ತಿ ಉತ್ಪಾದನೆ ತಾಣವಾಗಿ ಅಭಿವೃದ್ಧಿಪಡಿಸಬೇಕೆಂದು ಕ್ಯಾ. ಚೌಟ ಅವರು ಹೇಳಿದ್ದಾರೆ.   ನವ ಮಂಗಳೂರು ಬಂದರಿನ ಕಾರ್ಯತಂತ್ರದ ಪ್ರಯೋಜನವನ್ನು ಒತ್ತಿ ಹೇಳಿದ ಕ್ಯಾ.

ಮಂಗಳೂರು ಕರಾವಳಿಯನ್ನು ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ- ಸಂಸದ ಕ್ಯಾ.  ಚೌಟ Read More »

ಕರಾವಳಿ, ಕರ್ನಾಟಕ

ಅಬುಧಾಬಿ ಬಿಗ್ ಟಿಕೆಟ್ ಲಾಟರಿಯಲ್ಲಿ ಉಡುಪಿಯ ಶಂತನುಗೆ 49 ಕೋಟಿ ರೂ. ಜಾಕ್‌ಪಾಟ್!

(ನ್ಯೂಸ್‌ ಕಡಬ) newskadaba.com,ಫೆ.05 : ಉಡುಪಿ ಜಿಲ್ಲೆಯ ಉದ್ಯಾವರ ಮೂಲದ ಶಂತನು ಶೆಟ್ಟಿಗಾರ್ ಅವರು ಫೆಬ್ರವರಿ 3, 2026 ರಂದು ನಡೆದ ಅಬುಧಾಬಿ ಬಿಗ್ ಟಿಕೆಟ್ ಲಾಟರಿಯಲ್ಲಿ 20 ಮಿಲಿಯನ್ ದಿರ್ಹಮ್ (ಸುಮಾರು 45 ರಿಂದ 49 ಕೋಟಿ ರೂಪಾಯಿ) ಮೊತ್ತದ ಬೃಹತ್ ಜಾಕ್‌ಪಾಟ್ ಗೆದ್ದಿದ್ದಾರೆ. 20 ಮಿಲಿಯನ್ ದಿರ್ಹಮ್‌ಗಳು (ಭಾರತೀಯ ರೂಪಾಯಿ ಮೌಲ್ಯದಲ್ಲಿ ಅಂದಾಜು ₹49 ಕೋಟಿ).ಶಂತನು ಅವರು ಜನವರಿ 20 ರಂದು ಖರೀದಿಸಿದ್ದ 305810 ಸಂಖ್ಯೆಯ ಟಿಕೆಟ್‌ಗೆ ಈ ಬೃಹತ್ ಬಹುಮಾನ ಲಭಿಸಿದೆ. ಇದು

ಅಬುಧಾಬಿ ಬಿಗ್ ಟಿಕೆಟ್ ಲಾಟರಿಯಲ್ಲಿ ಉಡುಪಿಯ ಶಂತನುಗೆ 49 ಕೋಟಿ ರೂ. ಜಾಕ್‌ಪಾಟ್! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಳಿಯುತ್ತಿರುವ ಚಿನ್ನದ ಬೆಲೆ ಇನ್ನೂ ಇಳಿಕೆಯಾಗುತ್ತಾ ಚಿನ್ನದ ಬೆಲೆ

(ನ್ಯೂಸ್‌ ಕಡಬ) newskadaba.com ಫೆ. 05. ಚಿನ್ನ -ಬೆಳ್ಳಿ ದರ ಬುಧವಾರದಂದು ಬರೋಬ್ಬರಿ 6600 ರೂಪಾಯಿ ಏರಿಕೆ ಆಗುವ ಮೂಲಕ ದಿಗಿಲು ಹುಟ್ಟಿಸಿತ್ತು. ಇಂದು ಮತ್ತೆ ಭರ್ಜರಿ 5020 ರೂಪಾಯಿ ಇಳಿಕೆ ಆಗಿದೆ. ಬೆಳ್ಳಿ ಬೆಲೆಯೂ 3 ಲಕ್ಷಕ್ಕೆ ಇಳಿದಿದೆ.ಫೆಬ್ರವರಿ 5 2026, ಗುರುವಾರದಂದು ಮಾರುಕಟ್ಟೆಗಳಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಗ್ರಾಂ ಒಂದಕ್ಕೆ ಒಂದೇ ದಿನಕ್ಕೆ 502 ರೂ ಇಳಿಕೆಯಾಗಿದ್ದು, 10 ಗ್ರಾಂ ಗೆ 5020 ರೂ. ಇಳಿಕೆ ಆದಂತಾಗಿದೆ. ಆ ಮೂಲಕ 1 ಗ್ರಾಂ ಬೆಲೆ

ಇಳಿಯುತ್ತಿರುವ ಚಿನ್ನದ ಬೆಲೆ ಇನ್ನೂ ಇಳಿಕೆಯಾಗುತ್ತಾ ಚಿನ್ನದ ಬೆಲೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಖಾಲಿ ಇರುವ ಒಟ್ಟು 2000 ಬೋಧಕ ಹುದ್ದೆ ಭರ್ತಿಗೆ ಅಸ್ತು ನೇರ ನೇಮಕಾತಿ ಮೂಲಕ ಭರ್ತಿ

(ನ್ಯೂಸ್‌ ಕಡಬ) newskadaba.com,ಫೆ.05 ಬೆಂಗಳೂರು : ರಾಜ್ಯ ಸರ್ಕಾರಿ ಪ್ರಥಮ ದರ್ಜೆ, ಪಾಲಿಟೆಕ್ನಿಕ್‌, ಎಂಜಿನಿಯರಿಂಗ್‌ ಕಾಲೇಜುಗಳು ಮತ್ತು ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜು ವಿಶ್ವವಿದ್ಯಾಲಯದಲ್ಲಿ(ಯುವಿಸಿಇ) ಖಾಲಿ ಇರುವ ಒಟ್ಟು 2000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಅನುಮತಿ ನೀಡಿದೆ…… ಪ್ರಥಮ ದರ್ಜೆ ಕಾಲೇಜುಗಳಲ್ಲಿನ 825 ಸಹಾಯಕ ಪ್ರಾಧ್ಯಾಪಕ ಹುದ್ದೆ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 825 ಸಹಾಯಕ ಪ್ರಾಧ್ಯಾಪಕ ಹುದ್ದೆ, ಪಾಲಿಟೆಕ್ನಿಕ್‌ಗಳಲ್ಲಿನ 941 ಉಪನ್ಯಾಸಕರ ಹುದ್ದೆ, ಎಂಜಿನಿಯರಿಂಗ್‌ ಕಾಲೇಜುಗಳಿಗೆ 186 ಸಹಾಯಕ ಪ್ರಾಧ್ಯಾಪಕ ಹುದ್ದೆ ಮತ್ತು ಯುವಿಸಿಇಯ 47 ಬೋಧಕ ಹುದ್ದೆಗಳು

ಖಾಲಿ ಇರುವ ಒಟ್ಟು 2000 ಬೋಧಕ ಹುದ್ದೆ ಭರ್ತಿಗೆ ಅಸ್ತು ನೇರ ನೇಮಕಾತಿ ಮೂಲಕ ಭರ್ತಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top