ಕರ್ನಾಟಕ

ಭೂ ಅವ್ಯವಹಾರ ಆರೋಪ: ಡಾ. ವೀರೇಂದ್ರ ಹೆಗ್ಗಡೆಗೆ ಹೈಕೋರ್ಟ್ ಕ್ಲೀನ್ ಚಿಟ್

ಬೆಂಗಳೂರು, ಡಿ.14: ಭೂ ಅವ್ಯವಹಾರ ಆರೋಪಕ್ಕೆ  ಸಂಬಂಧಿಸಿದಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಹೈಕೋರ್ಟ್ ಕ್ಲೀನ್ ಚಿಟ್ ನೀಡಿದೆ. ಬೆಳ್ತಂಗಡಿಯ ಜೆಎಂಎಫ್ ಸಿ ನ್ಯಾಯಾಲಯದ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸುವಂತೆ ಕೋರಿ ವೀರೇಂದ್ರ ಹೆಗ್ಗಡೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರಿದ್ದ ಏಕಸದಸ್ಯ ಪೀಠ ಪ್ರಕರಣವನ್ನು ರದ್ದುಗೊಳಿಸಿದೆ.

ಭೂ ಅವ್ಯವಹಾರ ಆರೋಪ: ಡಾ. ವೀರೇಂದ್ರ ಹೆಗ್ಗಡೆಗೆ ಹೈಕೋರ್ಟ್ ಕ್ಲೀನ್ ಚಿಟ್ Read More »

ಕರ್ನಾಟಕ

ಪತ್ನಿಯೊಂದಿಗಿನ ಖಾಸಗಿ ಕ್ಷಣದ ವೀಡಿಯೋ ಶೇರ್ ಮಾಡಿದ ಗ್ರಾ.ಪಂ. ಸದಸ್ಯೆಯ ಪತಿ ➤ ವೀಡಿಯೋ ಸಖತ್ ವೈರಲ್

(ನ್ಯೂಸ್ ಕಡಬ) newskadaba.com ಧಾರವಾಡ, ಡಿ.13. ಗ್ರಾಮ ಪಂಚಾಯತ್ ಸದಸ್ಯೆಯ ಪತಿಯೋರ್ವ ತನ್ನ ಹೆಂಡತಿಯೊಂದಿಗಿದ್ದ ಖಾಸಗಿ ಕ್ಷಣಗಳನ್ನು ವಾಟ್ಸಪ್ ಗ್ರೂಪ್ ಗೆ ಅಪ್ಲೋಡ್ ಮಾಡಿ ಪ್ರಮಾದ ಮಾಡಿಕೊಂಡ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ಜಿಲ್ಲೆಯ ಗ್ರಾಮವೊಂದರ ಪಂಚಾಯತ್ ಸದಸ್ಯೆಯ ಪತಿಯು ತನ್ನ ಪತ್ನಿಯೊಂದಿಗೆ ನಡೆಸಿದ ಕಾಮಕೇಳಿಯ ದೃಶ್ಯವನ್ನು ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗದ ಪೊಲೀಸರು ರಚಿಸಿದ ವಾಟ್ಸಪ್ ಗ್ರೂಪ್ ಒಂದರಲ್ಲಿ ಶೇರ್ ಮಾಡಿದ್ದಾನೆ. ಈ ಗ್ರೂಪಿನಲ್ಲಿ ಪೊಲೀಸರು ಮಾತ್ರವಲ್ಲದೆ ವಿವಿಧ ನಾಗರಿಕರು ಇದ್ದುದರಿಂದ ವೀಡಿಯೋ ಕ್ಷಣಮಾತ್ರದಲ್ಲಿ ವಿವಿಧ

ಪತ್ನಿಯೊಂದಿಗಿನ ಖಾಸಗಿ ಕ್ಷಣದ ವೀಡಿಯೋ ಶೇರ್ ಮಾಡಿದ ಗ್ರಾ.ಪಂ. ಸದಸ್ಯೆಯ ಪತಿ ➤ ವೀಡಿಯೋ ಸಖತ್ ವೈರಲ್ Read More »

ಕರ್ನಾಟಕ

ಆರೋಗ್ಯದಲ್ಲಿ ಏರುಪೇರು: ಗಾಳಿ ಸುದ್ದಿಗಳಿಗೆ ಕಿವಿಕೊಡದಂತೆ ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು, ಡಿ.11:   ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ಬೆಳಗ್ಗೆ  ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು ಯಾವುದೇ ಗಾಳಿ ಸುದ್ದಿಗೆ ಕಿವಿಕೊಡಬೇಡಿ ಎಂದು ಅವರು ಟ್ವೀಟ್‌ ಮಾಡಿದ್ದಾರೆ. ಈ  ವದಂತಿಯ ಕುರಿತು ಟ್ವೀಟ್‌ ಮಾಡಿರುವ ಅವರು, “ನಾನು ಆರೋಗ್ಯವಾಗಿದ್ದೇನೆ, ತಪಾಸಣೆಗಾಗಿ ವೈದ್ಯರ ಬಳಿ ಹೋಗಿದ್ದೇನೆ. ಗಾಳಿಸುದ್ದಿಗಳನ್ನು ನಂಬಿ ಆತಂಕ ಪಡುವ ಅಗತ್ಯ ಇಲ್ಲ” ಎಂದು ಹೇಳಿದ್ದಾರೆ. ಸಿದ್ಧರಾಮಯ್ಯ ಅವರಿಗೆ ಆರೋಗ್ಯದಲ್ಲಿ ಸಮಸ್ಯೆ ಉಂಟಾಗಿದ್ದು ಇಂದು ಬೆಳಿಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ತದೊತ್ತಡ ಏರಿಕೆಯಾಗಿ, ಎದೆನೋವು ಕಾಣಿಸಿಕೊಂಡಿದೆ ಎಂದು ಸುದ್ದಿಯಾಗಿತ್ತು.

ಆರೋಗ್ಯದಲ್ಲಿ ಏರುಪೇರು: ಗಾಳಿ ಸುದ್ದಿಗಳಿಗೆ ಕಿವಿಕೊಡದಂತೆ ಸಿದ್ದರಾಮಯ್ಯ ಟ್ವೀಟ್ Read More »

ಕರ್ನಾಟಕ

ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ಆಸ್ಪತ್ರೆಗೆ ದಾಖಲು

ಬೆಂಗಳೂರು, ಡಿ.11: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಧವಾರ ಬೆಳಗ್ಗೆ 6:30ರ ಸುಮಾರಿಗೆ ಅವರಿಗೆ ರಕ್ತದೊತ್ತಡ ಜಾಸ್ತಿಯಾಗಿದ್ದು, ಸ್ವಲ್ಪ ಪ್ರಮಾಣದಲ್ಲಿ ಎದೆನೋವು ಕೂಡ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರ ಸಂಬಂಧಿಕರು ಅವರನ್ನು ಬಸವೇಶ್ವರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇತ್ತೀಚಿಗೆ ಉಪಚುನಾವಣೆಯಲ್ಲಿ ಸಕ್ರಿಯವಾಗಿದ್ದ ಸಿದ್ದರಾಮಯ್ಯ ಅವರು ಸ್ವಲ್ಪ ದಣಿದಿದ್ದರು. ಈ ಕಾರಣಕ್ಕೆ ಅವರಿಗೆ ರಕ್ತದೊತ್ತಡ ಜಾಸ್ತಿಯಾಗಿದ್ದು, ಅವರ ಕುಟುಂಬ ವೈದ್ಯರ ಸಲಹೆಯ ಮೇರೆಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ಆಸ್ಪತ್ರೆಗೆ ದಾಖಲು Read More »

ಕರ್ನಾಟಕ

ಬಿಜೆಪಿಯ ಭರ್ಜರಿ ಬ್ಯಾಟಿಂಗ್‌ಗೆ ಸೋಲೊಪ್ಪಿಕೊಂಡ ಕಾಂಗ್ರೆಸ್ ➤ 15 ಕ್ಷೇತ್ರಗಳ ಪೈಕಿ 12 ರಲ್ಲಿ ಅರಳಿದ ಕಮಲ

ಬೆಂಗಳೂರು, ಡಿ.09. ದೇಶದ ಗಮನ ಸೆಳೆದಿದ್ದ ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ 12 ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಕಾಂಗ್ರೆಸ್ಸನ್ನು ಶಾಕ್ ನೀಡಿದೆ. 15 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಜಯಭೇರಿ ಭಾರಿಸುವ ಮೂಲಕ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರವು ಸ್ಪಷ್ಟ ಬಹುಮತಕ್ಕೆ ಅಗತ್ಯವಿರುವ ಸ್ಥಾನಗಳ ಗಡಿಯನ್ನು ದಾಟಿದೆ. ವಿಧಾನಸಭೆಯಲ್ಲಿ ಪಕ್ಷೇತರ ಸದಸ್ಯರೊಬ್ಬರ ಬೆಂಬಲದೊಂದಿಗೆ 107 ಸ್ಥಾನಗಳನ್ನು ಹೊಂದಿದ್ದ ಬಿಜೆಪಿ, ಇದೀಗ ಉಪ ಚುನಾವಣೆಯ ಫಲಿತಾಂಶದ ಬಳಿಕ ತನ್ನ ಸಂಖ್ಯಾಬಲವನ್ನು 119ಕ್ಕೆ

ಬಿಜೆಪಿಯ ಭರ್ಜರಿ ಬ್ಯಾಟಿಂಗ್‌ಗೆ ಸೋಲೊಪ್ಪಿಕೊಂಡ ಕಾಂಗ್ರೆಸ್ ➤ 15 ಕ್ಷೇತ್ರಗಳ ಪೈಕಿ 12 ರಲ್ಲಿ ಅರಳಿದ ಕಮಲ Read More »

ಕರ್ನಾಟಕ

ಉಪಚುನಾವಣೆ: ಯಲ್ಲಾಪುರದಲ್ಲಿ ಹೆಬ್ಬಾರ್ ಗೆಲವು, ಅಧಿಕೃತ ಘೋಷಣೆಯೊಂದೇ ಬಾಕಿ

ಉತ್ತರಕನ್ನಡ, ಡಿ.9: ರಾಜ್ಯದ 15 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ  ಉತ್ತರಕನ್ನಡದ ಯಲ್ಲಾಪುರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವರಾಮ್ ಹೆಬ್ಬಾರ್ ಗೆಲುವಿನ ನಗು ಬೀರಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ. ಯಲ್ಲಾಪುರ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯ ಮತಎಣಿಕೆಯ 14 ಸುತ್ತಿನಲ್ಲಿಯೂ ಮುನ್ನಡೆ ಕಾಯ್ದುಕೊಂಡಿದ್ದ ಶಿವರಾಮ್ ಹೆಬ್ಬಾರ್ 27 ಸಾವಿರ ಮತಗಳ ಮುನ್ನಡೆ ಕಾಯ್ದುಕೊಂಡು, ಮೂರನೇ ಸುತ್ತಿನ ಮತಎಣಿಕೆಯಷ್ಟೇ ಬಾಕಿ ಉಳಿದಿದೆ. ಕಾಂಗ್ರೆಸ್ ನ ಭೀಮಣ್ಣ ನಾಯ್ಕ್ ಪರಾಜಯಗೊಂಡಿದ್ದಾರೆ. ಯಲ್ಲಾಪುರ ಕ್ಷೇತ್ರದಲ್ಲಿ ಶಿವರಾಮ್ ಹೆಬ್ಬಾರ್ ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಿದ್ದರು.

ಉಪಚುನಾವಣೆ: ಯಲ್ಲಾಪುರದಲ್ಲಿ ಹೆಬ್ಬಾರ್ ಗೆಲವು, ಅಧಿಕೃತ ಘೋಷಣೆಯೊಂದೇ ಬಾಕಿ Read More »

ಕರ್ನಾಟಕ

Breaking News ವಿಟ್ಲ: ಮಣ್ಣಿನಡಿ ಸಿಲುಕಿ ಮೂವರು ಕಾರ್ಮಿಕರು ಮೃತ್ಯು ➤ ಕಟ್ಟಡ ಕಾಮಗಾರಿ ವೇಳೆ ದುರ್ಘಟನೆ

(ನ್ಯೂಸ್ ಕಡಬ) newskadaba.com ವಿಟ್ಲ, ಡಿ.07. ಕಟ್ಟಡ ಕಾಮಗಾರಿಗಾಗಿ ಗುಡ್ಡ ಅಗೆಯಲಾಗುತ್ತಿದ್ದ ವೇಳೆ ಏಕಾಏಕಿ ಮೇಲ್ಭಾಗದ ಗುಡ್ಡ ಕುಸಿದುಬಿದ್ದ ಪರಿಣಾಮ ಮಣ್ಣಿನಡಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡ ಘಟನೆ ವಿಟ್ಲದ ಕನ್ಯಾನ ಸಮೀಪದ ಒಡಿಯೂರು ಎಂಬಲ್ಲಿ ಶನಿವಾರದಂದು ನಡೆದಿದೆ. ಮೃತರನ್ನು ರಮೇಶ್, ಪ್ರಕಾಶ್, ಬಾಳಪ್ಪ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಪ್ರಭಾಕರ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೃಹತ್ ಗಾತ್ರದಲ್ಲಿ ಮಣ್ಣು ಕುಸಿದಿದ್ದರಿಂದ ಕೆಳಗಿನ ಭಾಗದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ

Breaking News ವಿಟ್ಲ: ಮಣ್ಣಿನಡಿ ಸಿಲುಕಿ ಮೂವರು ಕಾರ್ಮಿಕರು ಮೃತ್ಯು ➤ ಕಟ್ಟಡ ಕಾಮಗಾರಿ ವೇಳೆ ದುರ್ಘಟನೆ Read More »

ಕರ್ನಾಟಕ

ಶಿವಮೊಗ್ಗ: ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಸ್ಪದ ಸಾವು

ಶಿವಮೊಗ್ಗ, ಡಿ.7: ಇಲ್ಲಿನ ಇಜಿನಿಯರಿಂಗ್ ಕಾಲೇಜೊಂದರ ವಿದ್ಯಾರ್ಥಿನಿ ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಬೀರನಕೆರೆ ಬಳಿ ನಡೆದಿದೆ. ಸಾವನ್ನಪ್ಪಿದ ವಿದ್ಯಾರ್ಥಿಯನ್ನು ಪ್ರಣಿತಾ (20) ಎಂದು ಗುರುತಿಸಲಾಗಿದೆ.ಅವರು ಸರ್ವೆ ಕಾರ್ಯಕ್ಕೆ ಸಂಬಂಧಿಸಿದ ಕ್ಯಾಂಪ್ ಗೆ ತೆರಳಿದ್ದ ವೇಳೆ ಈ ಘಟನೆ ನಡೆದಿದೆ. ಕಳೆದ ನಾಲ್ಕು ದಿನಗಳಿಂದ ಬೀರನಕೆರೆಯಲ್ಲಿ ಕ್ಯಾಂಪ್ ನಡೆಯುತ್ತಿದೆ. ಶನಿವಾರ ಬೆಳಿಗ್ಗೆ ವಾಕಿಂಗ್ ತೆರಳಿದ್ದ ವೇಳೆ ಪ್ರಣಿತ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾರೆ. ವಾಕಿಂಗ್ ತೆರಳಿದ್ದ ವೇಳೆ ಅಪರಿಚಿತ ವಾಹನ ಗುದ್ದಿ ಸಾವು ಸಂಭವಿಸಿದೆ ಎಂದು ಕಾಲೇಜ್ ಆಡಳಿತ ಮಂಡಳಿಯ

ಶಿವಮೊಗ್ಗ: ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಸ್ಪದ ಸಾವು Read More »

ಕರ್ನಾಟಕ

ಶಾಲಾ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಮತ್ತು ಕಾರು ನಡುವೆ ಢಿಕ್ಕಿಯಾಗಿ ಬಸ್ ಪಲ್ಟಿ ➤ ಹಲವು ಮಕ್ಕಳಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಡಿ.06. ಶಾಲಾ ವಿದ್ಯಾರ್ಥಿಗಳು ಪ್ರವಾಸಕ್ಕೆಂದು ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಕಾರು ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಹಲವರು ಗಾಯಗೊಂಡ ಘಟನೆ ನೆಲ್ಯಾಡಿ ಸಮೀಪದ ಕೊಕ್ಕಡ ಎಂಬಲ್ಲಿ ಶುಕ್ರವಾರದಂದು ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಶಾಲಾ ವಿದ್ಯಾರ್ಥಿಗಳು ಶೈಕ್ಷಣಿಕ ಖಾಸಗಿ ಬಸ್ ನಲ್ಲಿ ಪ್ರವಾಸ ತೆರಳುತ್ತಿದ್ದ ವೇಳೆ ಕೊಕ್ಕಡ ಸಮೀಪದ ಕಾಪಿನ ಬಾಗಿಲು ಎಂಬಲ್ಲಿ ತಮಿಳುನಾಡು ಮೂಲದವರಿದ್ದ ಕಾರು ನಡುವೆ ಢಿಕ್ಕಿ ಸಂಭವಿಸಿ ಬಸ್ಸು ಪಲ್ಟಿಯಾಗಿದೆ. ಘಟನೆಯಲ್ಲಿ ಹತ್ತು ಮಂದಿ ವಿದ್ಯಾರ್ಥಿಗಳು, ಶಿಕ್ಷಕ

ಶಾಲಾ ಪ್ರವಾಸಕ್ಕೆ ತೆರಳುತ್ತಿದ್ದ ಬಸ್ ಮತ್ತು ಕಾರು ನಡುವೆ ಢಿಕ್ಕಿಯಾಗಿ ಬಸ್ ಪಲ್ಟಿ ➤ ಹಲವು ಮಕ್ಕಳಿಗೆ ಗಾಯ Read More »

ಕರ್ನಾಟಕ

ಶಾಲಾ ಬಾವಿಯ ನೀರಿಗೆ ವಿಷ ಬೆರೆಸಿರುವ ಶಂಕೆ ➤ ನೀರು ಕುಡಿದ ಎಂಟು ಮಂದಿ ವಿದ್ಯಾರ್ಥಿಗಳು ಅಸ್ವಸ್ಥ

ಬೆಳ್ತಂಗಡಿ, ಡಿ.02. ವಿಷ ಸೇರ್ಪಡೆಗೊಂಡ ಬಾವಿಯ ನೀರನ್ನು ಸೇವಿಸಿದ ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಬಾಜೆಯಲ್ಲಿ ನಡೆದಿದೆ. ಶಿಬಾಜೆ ಗ್ರಾಮದ ಪೆರ್ಲ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ 8 ವಿದ್ಯಾರ್ಥಿಗಳು ಸೋಮವಾರದಂದು ಶಾಲೆಯ ಆವರಣದಲ್ಲಿರುವ ತರಕಾರಿ ತೋಟಕ್ಕೆ ಬಾವಿಯಿಂದ ನೀರು ಹಾಕುತ್ತಿದ್ದ ಸಂದರ್ಭದಲ್ಲಿ ನೀರನ್ನು ಕುಡಿದಿದ್ದರು. ಕೆಲವೇ ಹೊತ್ತಿನಲ್ಲಿ ಆರನೇ ತರಗತಿಯ ರಾಜೇಶ್, ಮೋನಿಸ್, ಶ್ರವಣ್, ಸುದೀಪ್, ಏಳನೇ ತರಗತಿಯ ಚೇತನ್ ಕುಮಾರ್, ಎಂಟನೇ ತರಗತಿಯ ರಾಧಾಕೃಷ್ಣ, ಸುದೀಶ್

ಶಾಲಾ ಬಾವಿಯ ನೀರಿಗೆ ವಿಷ ಬೆರೆಸಿರುವ ಶಂಕೆ ➤ ನೀರು ಕುಡಿದ ಎಂಟು ಮಂದಿ ವಿದ್ಯಾರ್ಥಿಗಳು ಅಸ್ವಸ್ಥ Read More »

ಕರ್ನಾಟಕ
Scroll to Top