ಕರ್ನಾಟಕ

ಇಂದು 2019ನೇ ಸಾಲಿನ CET ಫಲಿತಾಂಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.25. ವೃತ್ತಿಶಿಕ್ಷಣ ಕೋರ್ಸ್‌ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನಡೆಸಿದ್ದ 2019ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವು ಇಂದು ಬೆಳಿಗ್ಗೆ 11 ಗಂಟೆಗೆ ಪ್ರಕಟವಾಗಲಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡ ಬೆಂಗಳೂರಿನಲ್ಲಿ ತಿಳಿಸಿದ್ದಾರೆ. ಶುಕ್ರವಾರದಂದು ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಬೆಳಿಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದ್ದು, ಮಧ್ಯಾಹ್ನ 1 ಗಂಟೆಗೆ ಅಧಿಕೃತ ವೆಬ್ ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದಿದ್ದಾರೆ. ಸಿಇಟಿ ಫಲಿತಾಂಶಕ್ಕಾಗಿ […]

ಇಂದು 2019ನೇ ಸಾಲಿನ CET ಫಲಿತಾಂಶ Read More »

ಕರ್ನಾಟಕ

ಕಡಬ: ಅಕ್ರಮ ಮರಳುಗಾರಿಕೆಯ ವರದಿಯ ಹಿನ್ನೆಲೆ ➤ ಖಾಸಗಿ ವಾಹಿನಿ ವರದಿಗಾರನಿಗೆ ಕೊಲೆ ಬೆದರಿಕೆ – ದೂರು ದಾಖಲು

(ನ್ಯೂಸ್ ಕಡಬ) newskadaba.com ಕಡಬ, ಮೇ.18. ಕಡಬ ಪರಿಸರದಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವುದನ್ನು ವರದಿ ಮಾಡಿದ್ದಕ್ಕಾಗಿ ಖಾಸಗಿ ವಾಹಿನಿಯ ವರದಿಗಾರರೋರ್ವರಿಗೆ ಕೊಲೆ ಬೆದರಿಕೆಯೊಡ್ಡಲಾಗುತ್ತಿದ್ದು, ಈ ಬಗ್ಗೆ ಸೂಕ್ತ ಭದ್ರತೆ ಒದಗಿಸುವಂತೆ ಕಡಬ ಠಾಣೆಗೆ ದೂರು ನೀಡಲಾಗಿದೆ. ಕಹಳೆ ನ್ಯೂಸ್ ಕಡಬ ತಾಲೂಕು ವರದಿಗಾರ ಗಣೇಶ್ ಇಡಾಳ ಈ ಬಗ್ಗೆ ಕಡಬ ಪೊಲೀಸರಿಗೆ ದೂರು ನೀಡಿ, ಈ ಹಿಂದೆ ನಾನು ಹಾಗೂ ನಮ್ಮ ವಾಹಿನಿಯು ಕಡಬ ತಾಲೂಕು ವ್ಯಾಪ್ತಿಯಲ್ಲಿ ಆಗುತ್ತಿದ್ದ ಅಕ್ರಮ ಮರಳುಗಾರಿಕೆ ಹಾಗೂ ಇನ್ನಿತರ ಅಕ್ರಮಗಳ ಕುರಿತು

ಕಡಬ: ಅಕ್ರಮ ಮರಳುಗಾರಿಕೆಯ ವರದಿಯ ಹಿನ್ನೆಲೆ ➤ ಖಾಸಗಿ ವಾಹಿನಿ ವರದಿಗಾರನಿಗೆ ಕೊಲೆ ಬೆದರಿಕೆ – ದೂರು ದಾಖಲು Read More »

ಕರ್ನಾಟಕ

ಜಿಲ್ಲೆಯಲ್ಲಿ ತೀವ್ರಗೊಂಡ ನೀರಿನ ಸಮಸ್ಯೆ ➤ ಧರ್ಮಸ್ಥಳ ಭೇಟಿಯನ್ನು ಕೆಲಕಾಲ ಮುಂದೂಡುವಂತೆ ಹೆಗ್ಗಡೆಯವರಿಂದ ಮನವಿ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಮೇ.18. ದೇಶಾದ್ಯಂತ ತೀವ್ರ ತರದಲ್ಲಿ ನೀರಿನ ಕೊರತೆ ಎದುರಾಗಿದ್ದು, ಇದರ ಪರಿಣಾಮ ಇದೀಗ ಹೊರ ಜಿಲ್ಲೆಗಳಿಂದ ದಕ್ಷಿಣ ಕನ್ನಡಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳ, ಪ್ರಮುಖ ಪುಣ್ಯಕ್ಷೇತ್ರಗಳ ಭೇಟಿ ಮಾಡುವ ಭಕ್ತರ ಮೇಲೂ ಬಿದ್ದಿದೆ. ಒಂದೆಡೆ ಜಿಲ್ಲೆಯಲ್ಲಿ ರೇಶನ್ ಮೂಲಕ ಜಿಲ್ಲಾಡಳಿತವು ನೀರನ್ನು ಪೂರೈಸುತ್ತಿದ್ದು, ವಾರಕ್ಕೆ ಎರಡು – ಮೂರು ದಿನಕ್ಕೊಮ್ಮೆ‌ ಮಾತ್ರ ನೀರು ದೊರೆಯುತ್ತಿದೆ. ಇನ್ನೊಂದೆಡೆ ಧರ್ಮಸ್ಥಳದಲ್ಲಿ ನೀರಿನ ಸಮಸ್ಯೆ ಉಲ್ಬಣಿಸಿರುವ ಹಿನ್ನಲೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತಾದಿಗಳು ತಮ್ಮ ಪ್ರವಾಸವನ್ನು

ಜಿಲ್ಲೆಯಲ್ಲಿ ತೀವ್ರಗೊಂಡ ನೀರಿನ ಸಮಸ್ಯೆ ➤ ಧರ್ಮಸ್ಥಳ ಭೇಟಿಯನ್ನು ಕೆಲಕಾಲ ಮುಂದೂಡುವಂತೆ ಹೆಗ್ಗಡೆಯವರಿಂದ ಮನವಿ Read More »

ಕರ್ನಾಟಕ

ಇನ್ಮುಂದೆ ಅಟೋ ರಿಕ್ಷಾಗಳಲ್ಲಿ ಮಿತಿ ಮೀರಿ ಮಕ್ಕಳ ಸಾಗಾಟ ಮಾಡುವಂತಿಲ್ಲ ➤ ನಿಯಮ ಉಲ್ಲಂಘಿಸಿದ್ದಲ್ಲಿ ಸಾರಿಗೆ ಇಲಾಖೆಯಿಂದ ಕ್ರಮ

(ನ್ಯೂಸ್ ಕಡಬ) newskadaba.com,ಮಂಗಳೂರು,ಮೇ.18.  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವಾರು ಕಾರ್ಖಾನೆಗಳಿದ್ದು, ಬಹಳ ಜನ ಕೆಲಸ ನಿರ್ವಹಿಸುತ್ತಿದ್ದಾರೆ. ಇವರಿಗೆ ವ್ಯವಸ್ಥಾಪಕರು ವಾಹನ ವ್ಯವಸ್ಥೆ ಮಾಡಿದ್ದಾರೆಯೇ? ಅಥವಾ ಇವರಿಗೆ ಸಮರ್ಪಕ ಬಸ್ ವ್ಯವಸ್ಥೆ ಇದೆಯೇ, ಇಲ್ಲದಿದ್ದಲ್ಲಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ನಿಯೋಜಿಸುವಂತೆ ಬೆಂಗಳೂರು, ಕಾರ್ಮಿಕ ಇಲಾಖೆಯ ಆಯುಕ್ತ ಪಾಲಯ್ಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.  ಇವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸರಕು ಸಾಗಾಣಿಕೆ ವಾಹನಗಳಲ್ಲಿ ಮಾನವ ಸಾಗಾಣಿಕೆ ತಡೆ ಕುರಿತ ಸಮಾಲೋಚನಾ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು.

ಇನ್ಮುಂದೆ ಅಟೋ ರಿಕ್ಷಾಗಳಲ್ಲಿ ಮಿತಿ ಮೀರಿ ಮಕ್ಕಳ ಸಾಗಾಟ ಮಾಡುವಂತಿಲ್ಲ ➤ ನಿಯಮ ಉಲ್ಲಂಘಿಸಿದ್ದಲ್ಲಿ ಸಾರಿಗೆ ಇಲಾಖೆಯಿಂದ ಕ್ರಮ Read More »

ಕರ್ನಾಟಕ

ಸುಬ್ರಹ್ಮಣ್ಯ: ದೇವರ ಕಾಣಿಕೆ ಹುಂಡಿಗೆ ಕನ್ನ ➤ ಹಣ ಎಗರಿಸುತ್ತಿದ್ದಾಗ ಸಿಕ್ಕಿಬಿದ್ದ ಆರೋಪಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಮೇ.17. ದಕ್ಷಿಣ ಭಾರತದ ಅತ್ಯಂತ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕುಕ್ಕೇ ಸುಬ್ರಹ್ಮಣ್ಯ ದೇವರ ಹುಂಡಿಗೆ ಕನ್ನ ಹಾಕುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಸುಬ್ರಹ್ಮಣ್ಯ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ ಆರೋಪಿಯನ್ನು ತುಮಕೂರು ಮೂಲದ ಅಶ್ವಿನ್ ಎಂದು ಗುರುತಿಸಲಾಗಿದೆ. ಆರೋಪಿಯು ಗುರುವಾರದಂದು ದೇವಸ್ಥಾನದ ಕಾಣಿಕೆ ಹುಂಡಿಯಿಂದ ಹಣವನ್ನು ಎಗರಿಸುತ್ತಿದ್ದ ವೇಳೆ ಸಿಬ್ಬಂದಿಗಳು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಸುಬ್ರಹ್ಮಣ್ಯ: ದೇವರ ಕಾಣಿಕೆ ಹುಂಡಿಗೆ ಕನ್ನ ➤ ಹಣ ಎಗರಿಸುತ್ತಿದ್ದಾಗ ಸಿಕ್ಕಿಬಿದ್ದ ಆರೋಪಿ Read More »

ಕರ್ನಾಟಕ

ಶಿವಮೊಗ್ಗದಿಂದ ನಾಪತ್ತೆಯಾಗಿದ್ದ ಬಾಲಕ ಕಡಬದಲ್ಲಿ ಪತ್ತೆ ➤ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದಾಗ ಮಾಹಿತಿ ನೀಡಿದ ಹೋಟೆಲ್ ಮಾಲಕ

(ನ್ಯೂಸ್ ಕಡಬ) newskadaba.com ಕಡಬ, ಮೇ.17. ಶಿವಮೊಗ್ಗದಿಂದ ನಾಪತ್ತೆಯಾಗಿದ್ದ ಬಾಲಕನೋರ್ವ ಶುಕ್ರವಾರದಂದು ಕಡಬ ಠಾಣಾ ವ್ಯಾಪ್ತಿಯ ಕೆಂಜಾಳದಲ್ಲಿ ಪತ್ತೆಯಾಗಿದ್ದಾನೆ. ಶಿವಮೊಗ್ಗ ಜಿಲ್ಲೆಯ ಸಿಗೆಟ್ಟಿ ನಿವಾಸಿ ಉಮೇಶ್ ಎಂಬವರ ಪುತ್ರ ಅಶ್ವಥ್(12) ಎಂಬಾತ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದು, ಈ ಬಗ್ಗೆ ಶಿವಮೊಗ್ಗ ದೊಡ್ಡ ಪೇಟೆ ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿತ್ತು. ಶಿವಮೊಗ್ಗದಿಂದ ಧರ್ಮಸ್ಥಳಕ್ಕೆ‌ ಬಂದಿದ್ದ ಈತ ಸುಬ್ರಹ್ಮಣ್ಯ ರಸ್ತೆಯ ಕೆಂಜಾಳ ಬಳಿ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದಾಗ ಕೆಂಜಾಳದ ಹೊಟೇಲ್‌ ಮಾಲಿಕರೋರ್ವರು ಕಡಬ ಠಾಣೆಗೆ ಮಾಹಿತಿ ನೀಡಿದ್ದಾರೆ.

ಶಿವಮೊಗ್ಗದಿಂದ ನಾಪತ್ತೆಯಾಗಿದ್ದ ಬಾಲಕ ಕಡಬದಲ್ಲಿ ಪತ್ತೆ ➤ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದಾಗ ಮಾಹಿತಿ ನೀಡಿದ ಹೋಟೆಲ್ ಮಾಲಕ Read More »

ಕರ್ನಾಟಕ

ಸಂಪಾಜೆ: ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಕಾರು ➤ ಓರ್ವ ಸ್ಥಳದಲ್ಲೇ ಮೃತ್ಯು, ಮತ್ತೋರ್ವ ಗಂಭೀರ

(ನ್ಯೂಸ್ ಕಡಬ) newskadaba.com ಸುಳ್ಯ, ಮೇ.13. ನಿಂತಿದ್ದ ಲಾರಿಗೆ ಕಾರೊಂದು ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಸಂಪಾಜೆಯಲ್ಲಿ ಸೋಮವಾರದಂದು ಸಂಭವಿಸಿದೆ. ಮೃತ ವ್ಯಕ್ತಿಯನ್ನು ಪುತ್ತೂರಿನ ಬೆದ್ರಾಳ ನಿವಾಸಿ ಜಯರಾಮ ಎಂದು ಗುರುತಿಸಲಾಗಿದೆ. ಜಯರಾಮರು ತನ್ನ ಸಹೋದರನೊಂದಿಗೆ ಮಡಿಕೇರಿಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದಾಗ ಸಂಪಾಜೆ ಪೆಟ್ರೋಲ್ ಬಂಕ್ ಬಳಿ ನಿಲ್ಲಿಸಿದ್ದ ಲಾರಿಗೆ ಹಿಂಬದಿಯಿಂದ ಕಾರು ಢಿಕ್ಕಿ ಹೊಡೆದಿದ್ದು, ಗಾಯಗೊಂಡ ಜಯರಾಮರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸಂಪಾಜೆ: ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಕಾರು ➤ ಓರ್ವ ಸ್ಥಳದಲ್ಲೇ ಮೃತ್ಯು, ಮತ್ತೋರ್ವ ಗಂಭೀರ Read More »

ಕರ್ನಾಟಕ

ಯೋಧ ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು,ಮೇ.09.ರಾಯಚೂರು ವಾರದ ರಜೆಯ ಮೇಲೆ ಮನೆಗೆ ಬಂದಿದ್ದ  ಯೋಧ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ಘಟನೆ ಬುಧವಾರ ತಡರಾತ್ರಿ ಬಳ್ಳಾರಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.ಸಿಂಧನೂರು ತಾಲೂಕಿನ ಅಲಬನೂರು ಗ್ರಾಮದ ಶಿವಕುಮಾರ್‌ (34) ಮೃತ ಯೋಧನಾಗಿದ್ದು, ವಾರದ ರಜೆಯ ಮೇಲೆ ಮನೆಗೆ ಬಂದಿದ್ದರು. ರಾಜಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಶಿವಕುಮಾರ್‌ರವರು 15 ವರ್ಷಗಳಿಂದ ನಿರಂತರವಾಗಿ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.ಶಿವಕುಮಾರ್‌ ಅವರಿಗೆ ಈ ಹಿಂದೆ 2 ಬಾರಿ ಹೃದಯಾಘಾತವಾಗಿತ್ತು ಎಂದು ತಿಳಿದು ಬಂದಿದೆ.

ಯೋಧ ಹೃದಯಾಘಾತದಿಂದ ನಿಧನ Read More »

ಕರ್ನಾಟಕ

ಶಿರಾಡಿ: ಆಳಕ್ಕೆ ಉರುಳಿದ ಟೊಯೋಟಾ ಎಟಿಯೋಸ್ ಕಾರು ➤ ಓರ್ವ ಮೃತ್ಯು, ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮೇ.07. ಚಾಲಕನ ನಿಯಂತ್ರಣ ತಪ್ಪಿದ ಟೊಯೋಟಾ ಎಟಿಯೋಸ್ ಕಾರೊಂದು ರಸ್ತೆ ಬದಿಯ ಆಳ ಪ್ರದೇಶಕ್ಕೆ ಉರುಳಿ ಬಿದ್ದುದರಿಂದ ಓರ್ವ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿಯಲ್ಲಿ ಮಂಗಳವಾರದಂದು ನಡೆದಿದೆ. ಬೆಂಗಳೂರು ಮೂಲದ ಯಾತ್ರಾರ್ಥಿಗಳಿದ್ದ ಕಾರು ಧರ್ಮಸ್ಥಳದಿಂದ ಬೆಂಗಳೂರಿಗೆ ಹಿಂತಿರುಗುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಗ್ರಾಮದ ಕೊಡ್ಯಕಲ್ಲುವಿನಲ್ಲಿ ರಸ್ತೆ ಬದಿಯ ಆಳವಾದ ಗುಂಡಿಗೆ ಬಿದ್ದಿದೆ. ಪರಿಣಾಮ ಕಾರಿನಲ್ಲಿದ್ದ ಬೆಂಗಳೂರು ಮೂಲದ ವ್ಯಕ್ತಿಯೋರ್ವರು

ಶಿರಾಡಿ: ಆಳಕ್ಕೆ ಉರುಳಿದ ಟೊಯೋಟಾ ಎಟಿಯೋಸ್ ಕಾರು ➤ ಓರ್ವ ಮೃತ್ಯು, ನಾಲ್ವರಿಗೆ ಗಾಯ Read More »

ಕರ್ನಾಟಕ

ಮಹಿಳೆಯರನ್ನು ಚುಡಾಯಿಸುವ ಪುಂಡು ಪೋಕರಿಗಳ ಹೆಡೆಮುರಿ ಕಟ್ಟಲು ಸಿದ್ಧವಾಗಿದೆ “ರಾಣಿ ಅಬ್ಬಕ್ಕ ಪಡೆ” ➤ ಪ್ರತೀ ತಾಲೂಕಿಗೆ ಎರಡರಂತೆ ಉತ್ಸಾಹಿ ಮಹಿಳಾ ಪೊಲೀಸರ ತಂಡ ರಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.07. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹಿಳೆಯರನ್ನು ಚುಡಾಯಿಸುವ ಪುಂಡು ಪೋಕರಿಗಳ ಹೆಡೆಮುರಿ ಕಟ್ಟಲು “ರಾಣಿ ಅಬ್ಬಕ್ಕ ಪಡೆ” ಸಿದ್ಧಗೊಂಡಿದ್ದು, ಸೋಮವಾರದಂದು ಅಧಿಕೃತವಾಗಿ ಚಾಲನೆ ನೀಡಲಾಯಿತು. ಬಿ.ಸಿ.ರೋಡ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಮಹಿಳಾ ಪೊಲೀಸರನ್ನೊಳಗೊಂಡ “ರಾಣಿ ಅಬ್ಬಕ್ಕ ಪಡೆ”ಗೆ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಲಕ್ಷ್ಮೀ ಪ್ರಸಾದ್ ಚಾಲನೆ ನೀಡಿದರು. ಪ್ರತೀ ತಾಲೂಕಿಗೆ 06 ಜನ ಯುವ ಉತ್ಸಾಹಿ ಮಹಿಳಾ ಪೊಲೀಸ್ ಸಿಬ್ಬಂದಿಗಳಿಂದ ಕೂಡಿದ ಎರಡು ತಂಡವನ್ನು ರಚಿಸಲಾಗಿದ್ದು, ತಾಲೂಕು ಮಟ್ಟದಲ್ಲಿ

ಮಹಿಳೆಯರನ್ನು ಚುಡಾಯಿಸುವ ಪುಂಡು ಪೋಕರಿಗಳ ಹೆಡೆಮುರಿ ಕಟ್ಟಲು ಸಿದ್ಧವಾಗಿದೆ “ರಾಣಿ ಅಬ್ಬಕ್ಕ ಪಡೆ” ➤ ಪ್ರತೀ ತಾಲೂಕಿಗೆ ಎರಡರಂತೆ ಉತ್ಸಾಹಿ ಮಹಿಳಾ ಪೊಲೀಸರ ತಂಡ ರಚನೆ Read More »

ಕರ್ನಾಟಕ
Scroll to Top