ಕರ್ನಾಟಕ

ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಸಕಲ ನೆರವು- ರಾಜ್‍ಕುಮಾರ್ ಖತ್ರಿ

( ನ್ಯೂಸ್ ಕಡಬ) newskadaba.com ಮಂಗಳೂರು, ಮೇ.6 ಕರಾವಳಿ ಜಿಲ್ಲೆಗಳಲ್ಲಿ ನೈಋತ್ಯ ಮುಂಗಾರಿನ ಸಂದರ್ಭದಲ್ಲಿ ಪ್ರಾಕೃತಿಕ ವಿಕೋಪ ಸಂಭವಿಸಿದರೆ ಅಂತಹ ಪರಿಸ್ಥಿತಿಯನ್ನು ಎದುರಿಸಲು ಎಲ್ಲ ರೀತಿಯ ನೆರವನ್ನು ನೀಡಲಾಗುವುದು ಎಂದು ಕಂದಾಯ ಇಲಾಖೆ ಮತ್ತು ವಿಪತ್ತು ನಿರ್ವಹಣಾ ವಿಭಾಗದ ಸರ್ಕಾರದ ಪ್ರಧಾನ ಕಾರ್ಯದರ್ಶಿ ರಾಜ್‍ಕುಮಾರ್ ಖತ್ರಿ ಹೇಳಿದರು. ಅವರಿಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಆಯೋಜಿಸಲಾದ ನೈಋತ್ಯ ಮುಂಗಾರಿನ ಸನ್ನದ್ಧತೆ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಕಳೆದ ಸಾಲಿನಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪಗಳ ಅನುಭವದಿಂದಾಗಿ ಈ ಸಾಲಿನಲ್ಲಿ ಜಿಲ್ಲಾಡಳಿತ ಸಾಕಷ್ಟು […]

ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಸಕಲ ನೆರವು- ರಾಜ್‍ಕುಮಾರ್ ಖತ್ರಿ Read More »

ಕರ್ನಾಟಕ

ಇಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ ➤ ಫಲಿತಾಂಶ ತಿಳಿಯಲು ಕೆಳಗಿನ ಲಿಂಕನ್ನು ಕ್ಲಿಕ್ ಮಾಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.30. ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶವು ಇಂದು(ಎ.30) ಮಧ್ಯಾಹ್ನ 12 ಗಂಟೆಗೆ ಪ್ರಕಟಗೊಳ್ಳಲಿದೆ ಎಂದು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕಿ ವಿ. ಸುಮಂಗಲಾ ಹೇಳಿದ್ದಾರೆ.   ಮಧ್ಯಾಹ್ನ 12 ಗಂಟೆಗೆ ಪ್ರೌಢಶಿಕ್ಷಣ ಮಂಡಳಿಯ ವೆಬ್ ಸೈಟ್‌ನಲ್ಲಿ ಫಲಿತಾಂಶವನ್ನು ನೋಡಬಹುದಾಗಿದೆ. ಫಲಿತಾಂಶವನ್ನು ತಿಳಿಯಲು ಈ ಕೆಳಗಿನ ವೆಬ್‌ಸೈಟ್ ಲಿಂಕನ್ನು ಕ್ಲಿಕ್ ಮಾಡಿ. www.karresults.nic.in , http://www.kaceb.kar.nic.in

ಇಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ ➤ ಫಲಿತಾಂಶ ತಿಳಿಯಲು ಕೆಳಗಿನ ಲಿಂಕನ್ನು ಕ್ಲಿಕ್ ಮಾಡಿ Read More »

ಕರ್ನಾಟಕ

ದ.ಕ. ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮಿಥುನ್ ರೈ ಪರ ಪ್ರಚಾರ ಸಭೆ ➤ ನಾಳೆ ಮುಖ್ಯಮಂತ್ರಿ ಕುಮಾರಸ್ವಾಮಿ ಸುಳ್ಯಕ್ಕೆ

(ನ್ಯೂಸ್ ಕಡಬ) newskadaba.com ಸುಳ್ಯ, ಎ.06. ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಅಭ್ಯರ್ಥಿ ಮಿಥುನ್ ರೈ ಪರವಾಗಿ ಚುನಾವಣಾ ಪ್ರಚಾರ ಸಭೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಭಾಗವಹಿಸಲಿದ್ದಾರೆ ಎಂದು ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎನ್.ಜಯಪ್ರಕಾಶ್ ರೈ ಹೇಳಿದರು. ಶನಿವಾರದಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಎಪ್ರಿಲ್ 07 ರಂದು ಸಂಜೆ ಆಗಮಿಸಲಿರುವ ಸಿಎಂ ಕುಮಾರಸ್ವಾಮಿ ಚೆನ್ನಕೇಶವ ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿರುವ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಲಿದ್ದಾರೆ. ಸಚಿವ ಯು.ಟಿ.ಖಾದರ್,

ದ.ಕ. ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮಿಥುನ್ ರೈ ಪರ ಪ್ರಚಾರ ಸಭೆ ➤ ನಾಳೆ ಮುಖ್ಯಮಂತ್ರಿ ಕುಮಾರಸ್ವಾಮಿ ಸುಳ್ಯಕ್ಕೆ Read More »

ಕರ್ನಾಟಕ

ಗೋಳಿತೊಟ್ಟು: ಲಾರಿ ಚಾಲಕನ ಕೈಕಾಲು ಕಟ್ಟಿ ಹಾಕಿ ದರೋಡೆ ಪ್ರಕರಣ ಭೇದಿಸಿದ ಪೊಲೀಸರು ➤ ಉಪ್ಪಿನಂಗಡಿ ಪೊಲೀಸರಲ್ಲಿ ಸತ್ಯ ಬಾಯ್ಬಿಟ್ಟ ಆರೋಪಿ ಲಾರಿ ಮಾಲೀಕ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಎ.03. ಕಳೆದ ಮಾರ್ಚ್ 25 ರಂದು ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿತೊಟ್ಟು ಎಂಬಲ್ಲಿ ಲಾರಿ ಚಾಲಕನ ಬಾಯಿಗೆ ಬಟ್ಟೆ ತುರುಕಿ ಕೈಕಟ್ಟಿ ಹಾಕಿ ದರೋಡೆ ನಡೆಸಿದ ಪ್ರಕರಣದಲ್ಲಿ ಉಪ್ಪಿನಂಗಡಿ ಪೊಲೀಸ್ ತನಿಖಾ ತಂಡ ಮಹತ್ವದ ಯಶಸ್ಸು ಸಾಧಿಸಿದ್ದು, ದರೋಡೆ ಪ್ರಕರಣದ ಸತ್ಯಾಂಶ ಬಯಲುಗೊಳಿಸಿದೆ. ಆರ್ಥಿಕ ಮುಗ್ಗಟ್ಟಿನಿಂದ ಪಾರಾಗಲು ಸ್ವತಃ ಲಾರಿ ಮಾಲಕ ಹಾಗೂ ಚಾಲಕನಾಗಿದ್ದ ಮಂಡ್ಯ ಪಾಂಡವಪುರದ ನಿವಾಸಿ ಅಂಬರೀಶ್ ಸ್ವತಃ ತಾನೇ ಮಾಡಿದ ದರೋಡೆ ನಾಟಕ ಎನ್ನುವುದು ಪತ್ತೆಯಾಗಿದೆ.

ಗೋಳಿತೊಟ್ಟು: ಲಾರಿ ಚಾಲಕನ ಕೈಕಾಲು ಕಟ್ಟಿ ಹಾಕಿ ದರೋಡೆ ಪ್ರಕರಣ ಭೇದಿಸಿದ ಪೊಲೀಸರು ➤ ಉಪ್ಪಿನಂಗಡಿ ಪೊಲೀಸರಲ್ಲಿ ಸತ್ಯ ಬಾಯ್ಬಿಟ್ಟ ಆರೋಪಿ ಲಾರಿ ಮಾಲೀಕ Read More »

ಕರ್ನಾಟಕ

ಕೊಯಿಲ: ನೀರಿಗೆ ಬಿದ್ದು ಯುವತಿ ಮೃತ್ಯು ➤ ಮದುವೆ ನಿಶ್ಚಿತಾರ್ಥವಾಗಿ ಅತಿಥಿ ಸತ್ಕಾರಕ್ಕೆ ಬಂದಿದ್ದ ವೇಳೆ ಘಟನೆ

(ನ್ಯೂಸ್ ಕಡಬ) newskadaba.com ಕಡಬ, ಮಾ.25. ನದಿ ತೀರಕ್ಕೆ ತೆರಳಿದ ಯುವತಿಯೋರ್ವಳು ಆಕಸ್ಮಿಕವಾಗಿ ನೀರಿಗೆ ಬಿದ್ದು ಮೃತಪಟ್ಟ ಘಟನೆ ಸೋಮವಾರ ಸಂಜೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲದಲ್ಲಿ ನಡೆದಿದೆ. ಮೃತ ಯುವತಿಯನ್ನು ಸಕಲೇಶಪುರ ತಾಲೂಕಿನ ಬಾಳೆಗೇರಿ ನಿವಾಸಿ ಕುಮಾರ – ಹೊನ್ನಮ್ಮ ದಂಪತಿಯ ಪುತ್ರಿ ದಿವ್ಯಾ(19) ಎಂದು ಗುರುತಿಸಲಾಗಿದೆ. ಈಕೆಗೆ ಮದುವೆ ನಿಶ್ಚಿತಾರ್ಥವಾಗಿದ್ದು, ಈ ಹಿನ್ನೆಲೆಯಲ್ಲಿ ಅತಿಥಿ ಸತ್ಕಾರಕ್ಕಾಗಿ ಕೊಯಿಲ ಗ್ರಾಮದ ವಳಕಡಮದಲ್ಲಿರುವ ತನ್ನ ದೊಡ್ಡಮ್ಮನ ಮನೆಗೆ ಆಗಮಿಸಿದ್ದಳು. ಸೋಮವಾರ ಸಂಜೆ ಮನೆ ಸಮೀಪದ ನದಿಯಲ್ಲಿ ಸ್ನಾನಕ್ಕೆಂದು

ಕೊಯಿಲ: ನೀರಿಗೆ ಬಿದ್ದು ಯುವತಿ ಮೃತ್ಯು ➤ ಮದುವೆ ನಿಶ್ಚಿತಾರ್ಥವಾಗಿ ಅತಿಥಿ ಸತ್ಕಾರಕ್ಕೆ ಬಂದಿದ್ದ ವೇಳೆ ಘಟನೆ Read More »

ಕರ್ನಾಟಕ

ಉದನೆ: ಬೈಕ್ – ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮಾ.22. ಬೈಕ್ ಮತ್ತು ಕೆಎಸ್ಸಾರ್ಟಿಸಿ ಬಸ್ ನೆಉವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಎಂಬಲ್ಲಿ ಶುಕ್ರವಾರ ಸಂಜೆ‌ ಸಂಭವಿಸಿದೆ. ಮೃತ ಸವಾರನನ್ನು ಶಿರಾಡಿ ಗಡಿಯಲ್ಲಿ ಅಂಗಡಿ ನಡೆಸುತ್ತಿದ್ದ ನಿವಾಸಿ ಉಮೇಶ್ ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಢಿಕ್ಕಿಯುಂಟಾಗಿ ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ

ಉದನೆ: ಬೈಕ್ – ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ

ರಾಜ್ಯಾದ್ಯಂತ ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ ➤ ತಮ್ಮ ಭವಿಷ್ಯ ಬರೆಯಲಿರುವ 8 ಲಕ್ಷ ವಿದ್ಯಾರ್ಥಿಗಳು

ಸಾಂದರ್ಭಿಕ ಚಿತ್ರ (ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ.21. ರಾಜ್ಯಾದ್ಯಂತ ಇಂದಿನಿಂದ ಎಪ್ರಿಲ್ 04 ರವರೆಗೆ ಎಸೆಸೆಲ್ಸಿ ಪರೀಕ್ಷೆಗಳು ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಯಾವುದೇ ಅಹಿತರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಇಂದಿನಿಂದ ನಡೆಯಲಿರುವ ಪರೀಕ್ಷೆಯಲ್ಲಿ 4,47,864 ಗಂಡು ಮಕ್ಕಳು, 3,93,802 ಹೆಣ್ಣು ಮಕ್ಕಳು ಸೇರಿದಂತೆ 8,41,666 ವಿದ್ಯಾರ್ಥಿಗಳು ಅದೃಷ್ಟ ಪರೀಕ್ಷೆಯನ್ನು ಎದುರಿಸಲಿದ್ದಾರೆ. 4651 ವಿಕಲಚೇತನ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 1451 ಅರ್ಹ ವಿಕಲಚೇತನರಿಗೆ ಭಾಷಾ ವಿನಾಯಿತಿ ಹಾಗೂ 480

ರಾಜ್ಯಾದ್ಯಂತ ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭ ➤ ತಮ್ಮ ಭವಿಷ್ಯ ಬರೆಯಲಿರುವ 8 ಲಕ್ಷ ವಿದ್ಯಾರ್ಥಿಗಳು Read More »

ಕರ್ನಾಟಕ

ಉಪ್ಪಿನಂಗಡಿ: ಖಾಸಗಿ ಬಸ್ ಪಲ್ಟಿ ➤ ಮೂವರಿಗೆ ಗಾಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಮಾ.15. ಖಾಸಗಿ ಬಸ್ಸೊಂದು ಉಪ್ಪಿನಂಗಡಿ ಬಳಿಯ ಬೆದ್ರೋಡಿಯಲ್ಲಿ ಶುಕ್ರವಾರ ಬೆಳಗ್ಗಿನ ಜಾವ ಮಗುಚಿ ಬಿದ್ದಿದ್ದು, ಮೂವರು ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ವಿಆರ್ ಎಲ್ ಸಂಸ್ಥೆಯ ಬಸ್ ಬೆದ್ರೋಡಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ. ಗಾಯಗೊಂಡ ಮೂವರನ್ನು ಉಪ್ಪಿನಂಗಡಿ ತನಕ ರಿಕ್ಷಾದಲ್ಲಿ ಸಾಗಿಸಿ ಬಳಿಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಆ್ಯಂಬುಲೆನ್ಸ್ ನಲ್ಲಿ ಸಾಗಿಸಲಾಯಿತು. ಬಸ್ ನಲ್ಲಿದ್ದ 25 ಪ್ರಯಾಣಿಕರನ್ನು ಉಪ್ಪಿನಂಗಡಿಗೆ ಆಗಮಿಸಿದ ಸಂಸ್ಥೆಯ ಇನ್ನೊಂದು ಬಸ್ ನ ಮೂಲಕ

ಉಪ್ಪಿನಂಗಡಿ: ಖಾಸಗಿ ಬಸ್ ಪಲ್ಟಿ ➤ ಮೂವರಿಗೆ ಗಾಯ Read More »

ಕರ್ನಾಟಕ

➤➤ Big Breaking News ಶಿರಾಡಿ: ಬೆಳ್ಳಂಬೆಳಗ್ಗೆ ಕೆಎಸ್ಸಾರ್ಟಿಸಿ ಬಸ್ – ಸ್ವಿಫ್ಟ್ ಡಿಸೈರ್ ಕಾರು ಮಧ್ಯೆ ಮುಖಾಮುಖಿ ಢಿಕ್ಕಿ ➤ ಮಗು ಸಹಿತ ನಾಲ್ವರು ದುರ್ಮರಣ, ಇಬ್ಬರ ಸ್ಥಿತಿ ಚಿಂತಾಜನಕ

(ನ್ಯೂಸ್ ಕಡಬ) newskadaba.com ಸಕಲೇಶಪುರ, ಮಾ.10. ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ‌ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ದಾರುಣ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ನಲ್ಲಿ ಭಾನುವಾರದಂದು ಸಂಭವಿಸಿದೆ. ಧರ್ಮಸ್ಥಳದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ಸ್ವಿಫ್ಟ್ ಡಿಸೈರ್ ಕಾರು ಮಧ್ಯೆ ಸಕಲೇಶಪುರ ಠಾಣಾ ವ್ಯಾಪ್ತಿಯ ಶಿರಾಡಿ ಘಾಟ್ ಪ್ರದೇಶದಲ್ಲಿ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಪರಿಣಾಮ ಆರು ವರ್ಷದ ಮಗು ಸೇರಿದಂತೆ

➤➤ Big Breaking News ಶಿರಾಡಿ: ಬೆಳ್ಳಂಬೆಳಗ್ಗೆ ಕೆಎಸ್ಸಾರ್ಟಿಸಿ ಬಸ್ – ಸ್ವಿಫ್ಟ್ ಡಿಸೈರ್ ಕಾರು ಮಧ್ಯೆ ಮುಖಾಮುಖಿ ಢಿಕ್ಕಿ ➤ ಮಗು ಸಹಿತ ನಾಲ್ವರು ದುರ್ಮರಣ, ಇಬ್ಬರ ಸ್ಥಿತಿ ಚಿಂತಾಜನಕ Read More »

ಕರ್ನಾಟಕ

ಕೊನೆಗೂ ನನಸಾದ ಕಡಬದ ಜನತೆಯ ಬಹುಕಾಲದ ಕನಸು ► ನೂತನ ಕಡಬ ತಾಲೂಕಿಗೆ ಚಾಲನೆ ► ವೇದಿಕೆಯಲ್ಲಿ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು

ಕಡಬ, ಮಾ.08. ಕಡಬದ ನಾಗರಿಕರ ಬಹುಕಾಲದ ಬೇಡಿಕೆಯೊಂದು ಕೊನೆಗೂ ಈಡೇರಿದ್ದು, ಈಗಾಗಲೇ ವಿವಿಧ ಕಾರಣಗಳಿಂದಾಗಿ ಆರು ಬಾರಿ ಮುಂದೂಡಿಕೆಯಾಗಿದ್ದ ನೂತನ ಕಡಬ ತಾಲೂಕು ಶುಕ್ರವಾರ ಸಂಜೆ ಅಧಿಕೃತವಾಗಿ ಉದ್ಘಾಟನೆಗೊಂಡಿತು. ಉಪ್ಪಿನಂಗಡಿಯಿಂದ ಕಡಬವನ್ನು ಸಂಪರ್ಕಿಸುವ ನೂತನ ಹೊಸ್ಮಠ ಸೇತುವೆಯನ್ನು ಉದ್ಘಾಟಿಸಿ ಕಡಬಕ್ಕೆ ಆಗಮಿಸಿದ ರಾಜ್ಯ ಕಂದಾಯ ಸಚಿವ ಆರ್.ವಿ. ದೇಶಪಾಂಡೆ, ನೂತನ ಕಡಬ ತಾಲೂಕನ್ನು ಉದ್ಘಾಟಿಸಿ ಮಿನಿ ವಿಧಾನಸೌಧಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಆ ಬಳಿಕ ಮೇಲ್ದರ್ಜೆಗೇರಿರುವ ಕಡಬ ಸಮುದಾಯ ಆಸ್ಪತ್ರೆಯನ್ನು ಉದ್ಘಾಟಿಸಿ ಅನುಗ್ರಹ ಸಭಾಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ

ಕೊನೆಗೂ ನನಸಾದ ಕಡಬದ ಜನತೆಯ ಬಹುಕಾಲದ ಕನಸು ► ನೂತನ ಕಡಬ ತಾಲೂಕಿಗೆ ಚಾಲನೆ ► ವೇದಿಕೆಯಲ್ಲಿ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು Read More »

ಕರ್ನಾಟಕ
Scroll to Top