ಕರ್ನಾಟಕ

ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕಾವ, ಜಾಣ ಮತ್ತು ರತ್ನ ಪರೀಕ್ಷೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ .18. ಕನ್ನಡ ಸಾಹಿತ್ಯ ಪರಿಷತ್ತಿನ 2018-19ನೇ ಸಾಲಿನ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳು 2019ನೇ ಜನವರಿ 11, 12 ಮತ್ತು 13 ರಂದು ಒಟ್ಟು 3 ದಿನಗಳ ಕಾಲ ರಾಜ್ಯದ 19 ಕೇಂದ್ರಗಳಲ್ಲಿ ನಡೆಯಲಿವೆ. ಪರೀಕ್ಷಾ ಪ್ರವೇಶ ಪತ್ರಗಳನ್ನು ವಿದ್ಯಾರ್ಥಿಗಳಿಗೆ ಅಂಚೆ ಮೂಲಕ ಕಳುಹಿಸಲಾಗಿದೆ. 29-12-2018ರ ನಂತರವೂ ಪ್ರವೇಶಪತ್ರ ತಲುಪದಿರುವ ಬಗ್ಗೆ ವಿದ್ಯಾರ್ಥಿಗಳು ಗೌರವ ಕಾರ್ಯದರ್ಶಿಗಳು, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು-18 ಇಲ್ಲಿ ವಿಚಾರಿಸಬಹುದು.   ಬೇರೆ ಜಿಲ್ಲೆಯವರಿಗೆ […]

ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕಾವ, ಜಾಣ ಮತ್ತು ರತ್ನ ಪರೀಕ್ಷೆ Read More »

ಕರ್ನಾಟಕ

ಸರ್ಕಾರಿ ಹುದ್ದೆಯಲ್ಲಿ ವಿನೂತನ ಸಾಧನೆಗೈದವರಿಗೆ ಮನ್ನಣೆ  ►ಸಾಧಕರಿಂದ ಸರ್ವೋತ್ತಮ ಪ್ರಶಸ್ತಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿಸೆಂಬರ್, 17 . ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ತಮ್ಮ ಹುದ್ದೆಯಲ್ಲಿ ಸಲ್ಲಿಸಿದ ಅತ್ಯುನ್ನತ ಸೇವೆಯನ್ನು ಆಧರಿಸಿ ಮತ್ತು ಸರ್ಕಾರಿ ಕೆಲಸದಲ್ಲಿ ವಿನೂತನ ಸಾಧನೆ ಮಾಡಿ ಹೊಸ ಬದಲಾವಣೆಗೈದ ಸಾಧಕರನ್ನು ಗುರುತಿಸಿ ಸರ್ವೋತ್ತಮ ಪ್ರಶಸ್ತಿಯನ್ನು ಜನವರಿ 26 ರಂದು ನೀಡಲಾಗುತ್ತದೆ. ಅದರಂತೆ 2018-19 ನೇ ಸಾಲಿನಲ್ಲಿ ಸರ್ವೋತ್ತಮ ಪ್ರಶಸ್ತಿಯನ್ನು ನೀಡುವರೇ ಆಸಕ್ತ ಅಧಿಕಾರಿ/ನೌಕರರು ತಮ್ಮ ಸಾಧನೆಗಳ ಕುರಿತು ಪ್ರಸ್ತಾವನೆಯನ್ನು ತಮ್ಮ ಮೇಲಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗಳ ಕಚೇರಿಗೆ ದಿನಾಂಕ 10/01/2019 ರೊಳಗೆ ಸಲ್ಲಿಸಬೇಕು

ಸರ್ಕಾರಿ ಹುದ್ದೆಯಲ್ಲಿ ವಿನೂತನ ಸಾಧನೆಗೈದವರಿಗೆ ಮನ್ನಣೆ  ►ಸಾಧಕರಿಂದ ಸರ್ವೋತ್ತಮ ಪ್ರಶಸ್ತಿಗೆ ಅರ್ಜಿ ಆಹ್ವಾನ Read More »

ಕರ್ನಾಟಕ

ಮುಂದಿನ ಆರು ತಿಂಗಳಲ್ಲಿ ಶಿರಾಡಿ ಘಾಟ್ ಸುರಂಗ ಮಾರ್ಗ ಕಾಮಗಾರಿ ಆರಂಭ ► ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ.16. ಮಂಗಳೂರಿನಿಂದ ರಾಜ್ಯ ರಾಜಧಾನಿ ಬೆಂಗಳೂರನ್ನು ಸಂಪರ್ಕಿಸುವ ಶಿರಾಡಿ ಘಾಟ್ ಪ್ರದೇಶದಲ್ಲಿ ಪ್ರಸ್ತಾಪಿಸಲಾಗಿರುವ 21 ಕಿ ಮೀ ಉದ್ದದ ಸುರಂಗ ಕಾಮಗಾರಿಯನ್ನು ಆರು ತಿಂಗಳೊಳಗೆ ಕೈಗೆತ್ತಿಕೊಳ್ಳಲಾಗುವುದು ಎಂದು ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ತಿಳಿಸಿದ್ದಾರೆ. ಈ ಬಗ್ಗೆ ಶುಕ್ರವಾರದಂದು ವಿಧಾನ ಪರಿಷತ್ತಿನಲ್ಲಿ ತೇಜಸ್ವಿನಿ ಗೌಡ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಮಂಗಳೂರು ಮತ್ತು ಬೆಂಗಳೂರಿನ ನಡುವಿನ ಪ್ರಮುಖ ಸಂಪರ್ಕ ಕೊಂಡಿಯಾಗಿರುವ ಶಿರಾಡಿ ಘಾಟ್ ಪ್ರದೇಶದಲ್ಲಿ ಸುರಂಗ ಮಾರ್ಗ ನಿರ್ಮಿಸುವುದರಿಂದ ಸಂಚಾರಕ್ಕೆ

ಮುಂದಿನ ಆರು ತಿಂಗಳಲ್ಲಿ ಶಿರಾಡಿ ಘಾಟ್ ಸುರಂಗ ಮಾರ್ಗ ಕಾಮಗಾರಿ ಆರಂಭ ► ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ Read More »

ಕರ್ನಾಟಕ

ಮೈಸೂರು: ದೇವಸ್ಥಾನದ ಪ್ರಸಾದ ತಿಂದು 12 ಮಂದಿ ಮೃತ್ಯು ► 80 ಕ್ಕೂ ಅಧಿಕ ಮಂದಿ ಆಸ್ವಸ್ಥ ► 60 ಕ್ಕೂ ಹೆಚ್ಚು ಕಾಗೆಗಳ ಸಾವು

(ನ್ಯೂಸ್ ಕಡಬ) newskadaba.com ಮೈಸೂರು, ಡಿ.15. ಜಿಲ್ಲೆಯ ಮಾರ್ತಳ್ಳಿ ಸಮೀಪದ ಕಿತ್ತಗುಚ್ಚಿ ಮಾರಮ್ಮ ದೇವಸ್ಥಾನದ ಪ್ರಸಾದ ಸೇವಿಸಿ 12 ಮಂದಿ ಮೃತಪಟ್ಟು, 80 ಕ್ಕೂ ಅಧಿಕ ಮಂದಿ ಅಸ್ವಸ್ಥಗೊಂಡಿದ್ದು, ನಗರದ ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸುಲ್ವಾಡಿಯ ಕಿಚ್ಚುಕುತ್ತಿ ಮಾರಮ್ಮ ದೇವಸ್ಥಾನದ ಗೋಪುರ ಶಂಕುಸ್ಥಾಪನೆ ಸಮಾರಂಭದಲ್ಲಿ ಈ ಅವಘಡ ಸಂಭವಿಸಿದೆ. ಕಾರ್ಯಕ್ರಮದಲ್ಲಿ ಭಕ್ತರಿಗೆ ಹಂಚಿದ ಪ್ರಸಾದ ತಿಂದ ಬಳಿಕ ಎಲ್ಲರೂ ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ. ಪ್ರಸಾದದಲ್ಲಿ ಜಮೀನಿಗೆ ಸಿಂಪಡಿಸುವ ಓಪಿ ಪಾಯ್ಸನ್ ಮಿಕ್ಸ್​ ಆಗಿದೆ ಎಂಬ ಅನುಮಾನ ವ್ಯಕ್ತವಾಗಿದ್ದು, ಪ್ರಸಾದವನ್ನು

ಮೈಸೂರು: ದೇವಸ್ಥಾನದ ಪ್ರಸಾದ ತಿಂದು 12 ಮಂದಿ ಮೃತ್ಯು ► 80 ಕ್ಕೂ ಅಧಿಕ ಮಂದಿ ಆಸ್ವಸ್ಥ ► 60 ಕ್ಕೂ ಹೆಚ್ಚು ಕಾಗೆಗಳ ಸಾವು Read More »

ಕರ್ನಾಟಕ

ಕಬಕ: 21 ವಯಸ್ಸಿನ ಯುವಕ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ.10. ಇಲ್ಲಿನ ಕಬಕದ ಯುವಕನೋರ್ವ ಹೃದಯಾಘಾತದಿಂದಾಗಿ ಮೃತಪಟ್ಟ ಘಟನೆ ಸೋಮವಾರ ಬೆಳಗ್ಗಿನ ಜಾವ ಬೆಂಗಳೂರಿನಲ್ಲಿ ನಡೆದಿದೆ. ಮೃತ ಯುವಕನನ್ನು ಪುತ್ತೂರು ತಾಲೂಕಿನ ಕಬಕ ಸಮೀಪದ ಕೊಡಿಪ್ಪಾಡಿ ಬಳಿಯ ಅರ್ಕ ವಿದ್ಯಾಪುರ ನಿವಾಸಿ ಅಬೂಬಕರ್ ಎಂಬವರ ಪುತ್ರ ಸಿನಾನ್(21) ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನಲ್ಲಿದ್ದು, ಭಾನುವಾರ ತಡರಾತ್ರಿ ಎದೆನೋವು ಕಾಣಿಸಿಕೊಂಡಿದ್ದು, ಸೋಮವಾರ ಬೆಳಗ್ಗಿನ ಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತದೇಹವನ್ನು ಊರಿಗೆ ತರುವ ಪ್ರಯತ್ನ ಸಾಗಿದೆ.

ಕಬಕ: 21 ವಯಸ್ಸಿನ ಯುವಕ ಹೃದಯಾಘಾತದಿಂದ ಮೃತ್ಯು Read More »

ಕರ್ನಾಟಕ

ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ► ಪಿಜಕಳ ಶಾಲಾ ಮುಖ್ಯ ಶಿಕ್ಷಕಿ ಚೇತನಾ ರಾಜ್ಯಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಡಿ.10. ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ದ.5ರಂದು ನಡೆದ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ರಿಲೇ ಹಾಗೂ ಟ್ರಿಪ್ಪಲ್ ಜಂಪ್ ಪಂದ್ಯಾಟದಲ್ಲಿ ಪಿಜಕಳ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಚೇತನಾ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ದ.ಕ.ಜಿಲ್ಲಾಡಳಿತ ಮತ್ತು ಜಿ.ಪಂ. ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ದ.ಕ.ಜಿಲ್ಲಾ ಸರಕಾರಿ ನೌಕರರ ಸಂಘದ ಸಹಯೋಗದಲ್ಲಿ ನಡೆದ ಜಿಲ್ಲಾ ಮಟ್ಟದ

ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ► ಪಿಜಕಳ ಶಾಲಾ ಮುಖ್ಯ ಶಿಕ್ಷಕಿ ಚೇತನಾ ರಾಜ್ಯಮಟ್ಟಕ್ಕೆ ಆಯ್ಕೆ Read More »

ಕರ್ನಾಟಕ

ಬಂಟ್ವಾಳ: ಇಂದಿರಾ ಕ್ಯಾಂಟೀನ್ ಉದ್ಘಾಟನೆ ► ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ ಮಧ್ಯೆ ಜಟಾಪಟಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ.09. ಬಂಟ್ವಾಳ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ಕಾರ್ಯಕರ್ತರ ನಡುವೆ ಸಂಘರ್ಷ ಉಂಟಾಗಿದ್ದು, ಪೊಲೀಸರ ಸಕಾಲಿಕ ಕ್ರಮದಿಂದಾಗಿ ಹತೋಟಿಗೆ ಬಂದಿದೆ. ಇಂದಿರಾ ಕ್ಯಾಂಟೀನ್ ಉದ್ಘಾಟನೆಗೆ ಮಾಜಿ ಸಚಿವ ಬಿ.ರಮಾನಾಥ ರೈ ಅವರು ಬಾರದಂತೆ ಬಿಜೆಪಿ ಮುಖಂಡರು ತಹಶೀಲ್ದಾರ್ ಮೂಲಕ ಪೊಲೀಸರಿಗೆ ದೂರು ನೀಡಿದ್ದರೆನ್ನಲಾಗಿದ್ದು, ಇದನ್ನು ಕಾಂಗ್ರೆಸ್ ನಾಯಕರು ಪ್ರಶ್ನಿಸಿದ್ದರಿಂದ ಕಾಂಗ್ರೆಸ್ ಮತ್ತು ಬಿಜೆಪಿ ಮುಖಂಡರ ನಡುವೆ ಜಟಾಪಟಿ ನಡೆದಿದೆ ಎನ್ನಲಾಗಿದೆ. ಮಾಜಿ ಸಚಿವ ಬಿ.ರಮಾನಾಥ ರೈ

ಬಂಟ್ವಾಳ: ಇಂದಿರಾ ಕ್ಯಾಂಟೀನ್ ಉದ್ಘಾಟನೆ ► ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ ಮಧ್ಯೆ ಜಟಾಪಟಿ Read More »

ಕರ್ನಾಟಕ

ಮೂಡುಬಿದಿರೆ: ಪತ್ನಿಗೆ ಕತ್ತಿಯಿಂದ ಕಡಿದು ಬಾವಿಗೆ ಹಾರಿದ ಪತಿ ► ಮುಂದೇನಾಯಿತು ಗೊತ್ತೇ…?

(ನ್ಯೂಸ್ ಕಡಬ) newskadaba.com ಮೂಡುಬಿದಿರೆ, ಡಿ.08. ಪತ್ನಿಗೆ ಕತ್ತಿಯಿಂದ ಕಡಿದು ಮಾರಣಾಂತಿಕ ಹಲ್ಲೆ ನಡೆಸಿ ಬಳಿಕ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯೋರ್ವನನ್ನು ಸ್ಥಳೀಯರು ರಕ್ಷಿಸಿದ ಘಟನೆ ಮೂಡುಬಿದಿರೆಯಲ್ಲಿ ಶುಕ್ರವಾರ ನಡೆದಿದೆ. ಹೊಟೇಲ್ ಉದ್ಯೋಗಿಯಾಗಿರುವ ಕುಪ್ಪೆಪದವು ನಿವಾಸಿ ರವಿರಾಜ್ ಶೆಟ್ಟಿ ಎಂಬವರಿಗೆ ಪಡುಮಾರ್ನಾಡು ನಿವಾಸಿ ಶಾಲಾ ಶಿಕ್ಷಕಿ ಸೌಮ್ಯ ಎಂಬಾಕೆಯ ಜೊತೆ ವಿವಾಹವಾಗಿದ್ದು, ಮದುವೆಯಾದ ಕೆಲವೇ ತಿಂಗಳಲ್ಲಿ ದಂಪತಿ ಮಧ್ಯೆ ವೈಮನಸ್ಸು ಉಂಟಾದ ಹಿನ್ನೆಲೆಯಲ್ಲಿ ಸೌಮ್ಯ ಪತಿಯಿಂದ ದೂರವಾಗಿ ತನ್ನ ತವರು ಮನೆಯಲ್ಲಿ ಉಳಿದುಕೊಂಡಿದ್ದರು ಎನ್ನಲಾಗಿದೆ. ಇದರಿಂದ

ಮೂಡುಬಿದಿರೆ: ಪತ್ನಿಗೆ ಕತ್ತಿಯಿಂದ ಕಡಿದು ಬಾವಿಗೆ ಹಾರಿದ ಪತಿ ► ಮುಂದೇನಾಯಿತು ಗೊತ್ತೇ…? Read More »

ಕರ್ನಾಟಕ

ಸುಬ್ರಹ್ಮಣ್ಯ ಶ್ರೀ ಸಂಪುಟ ಮಠದ ವಿರುದ್ಧದದ ಆಪಾದನೆ ಸತ್ಯಕ್ಕೆ ದೂರ ► ಸಂಪುಟ ನರಸಿಂಹ ಸ್ವಾಮಿ ಮಠದ ಆಡಳಿತಾಧಿಕಾರಿ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ ಡಿ.07. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಪಹಣಿ ಪತ್ರದಲ್ಲಿ ಶ್ರೀ ಸಂಪುಟ ನರಸಿಂಹ ಮಠದ ಕಡೆಯಿಂದ ತಿದ್ದುಪಡಿ ಮಾಡಿದ ಆರೋಪ ಸತ್ಯಕ್ಕೆ ದೂರವಾದುದು ಎಂದು ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ಆಡಳಿತಾಧಿಕಾರಿ ಸ್ಪಷ್ಠೀಕರಣ ನೀಡಿದ್ದಾರೆ. ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟನೆ ನೀಡಿರುವ ಮಠದ ಆಡಳಿತಾಧಿಕಾರಿ ಸುದರ್ಶನ ಜೋಯಿಷ ಅವರು, ಸುಬ್ರಹ್ಮಣ್ಯ ಗ್ರಾಮದ ಸ.ನಂ 82/1ರ ಕೈ ಬರಹದ ಪಹಣಿಯಲ್ಲಿ ಸುಬ್ರಾಯ ದೇವಸ್ಥಾನ, ನರಸಿಂಹ ಮಠದ ಹೆಸರು ಅನಾದಿಕಾಲದಿಂದ ಕಲಂ ನಂ.11ರಲ್ಲಿ

ಸುಬ್ರಹ್ಮಣ್ಯ ಶ್ರೀ ಸಂಪುಟ ಮಠದ ವಿರುದ್ಧದದ ಆಪಾದನೆ ಸತ್ಯಕ್ಕೆ ದೂರ ► ಸಂಪುಟ ನರಸಿಂಹ ಸ್ವಾಮಿ ಮಠದ ಆಡಳಿತಾಧಿಕಾರಿ ಸ್ಪಷ್ಟನೆ Read More »

ಕರ್ನಾಟಕ

ಕಡಬದ ಯುವಕ ಬೆಂಗಳೂರಿನಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಡಿ.06. ಕಡಬದ ಯುವಕನೋರ್ವ ಬೆಂಗಳೂರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಬಿಳಿನೆಲೆ ಗ್ರಾಮದ ಬೈಲು ಆನಂದ ಗೌಡ ಎಂಬವರ ಪುತ್ರ ರಾಜೇಶ್(24) ಎಂದು ಗುರುತಿಸಲಾಗಿದೆ. ಕಳೆದ ಕೆಲವು ಸಮಯಗಳಿಂದ ಊರಿನಲ್ಲಿದ್ದ ಈತ ತನ್ನ ಅಕ್ಕನ ಜೊತೆಗೆ ಬೆಂಗಳೂರಿಗೆ ತೆರಳಿದ್ದು, ಗುರುವಾರ ಸಂಜೆ ಡೆತ್ ನೋಟ್ ಬರೆದಿಟ್ಟು ಇಲಿ ಪಾಷಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕಡಬದ ಯುವಕ ಬೆಂಗಳೂರಿನಲ್ಲಿ ಆತ್ಮಹತ್ಯೆ Read More »

ಕರ್ನಾಟಕ
Scroll to Top