ಕರ್ನಾಟಕ

ರಾಜ್ಯದ ಮರಳು ನೀತಿಯ ವಿರುದ್ಧ ಸೆ.27 ರಂದು ಕಡಬದಲ್ಲಿ ಬಿಜೆಪಿಯಿಂದ ಪ್ರತಿಭಟನೆ ► ತಿಂಗಳೊಳಗೆ ಅವಕಾಶ ನೀಡದಿದ್ದಲ್ಲಿ ‘ನಮ್ಮ ನದಿ – ನಮ್ಮ ಹಕ್ಕು’ ನೆಲೆಯಲ್ಲಿ ಸಾರ್ವಜನಿಕ ಮರಳುಗಾರಿಕೆ

(ನ್ಯೂಸ್ ಕಡಬ) newskadaba.com ಕಡಬ, ಸೆ.25. ರಾಜ್ಯದಲ್ಲಿರುವ ಜನ ವಿರೋಧಿ ಮರಳು ನೀತಿಯ ವಿರುದ್ಧ ಸೆಪ್ಟೆಂಬರ್ 27 ಗುರುವಾರದಂದು ಕಡಬ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ಕೃಷ್ಣ ಶೆಟ್ಟಿ ಕಡಬ ತಿಳಿಸಿದ್ದಾರೆ. ಅವರು ಮಂಗಳವಾರದಂದು ಕಡಬ ಬಿಜೆಪಿ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಸರಕಾರವು ಮರಳು ನೀತಿಯನ್ನು ರೂಪಿಸದೆ ಇರುವುದರಿಂದಾಗಿ ಬಡವರು ವಸತಿ ಯೋಜನೆಯಲ್ಲಿ ಮನೆ ಕಟ್ಟಿಕೊಳ್ಳಲಾಗದೆ ಬೀದಿಗೆ ಬಿದ್ದಿದ್ದಾರೆ. ಒಂದು ಲೋಡು ಮರಳಿಗೆ […]

ರಾಜ್ಯದ ಮರಳು ನೀತಿಯ ವಿರುದ್ಧ ಸೆ.27 ರಂದು ಕಡಬದಲ್ಲಿ ಬಿಜೆಪಿಯಿಂದ ಪ್ರತಿಭಟನೆ ► ತಿಂಗಳೊಳಗೆ ಅವಕಾಶ ನೀಡದಿದ್ದಲ್ಲಿ ‘ನಮ್ಮ ನದಿ – ನಮ್ಮ ಹಕ್ಕು’ ನೆಲೆಯಲ್ಲಿ ಸಾರ್ವಜನಿಕ ಮರಳುಗಾರಿಕೆ Read More »

ಕರ್ನಾಟಕ

ಭರತ ನಾಟ್ಯ ಮನಸ್ವಿ ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣ

ಸವಣೂರು : : ಕರ್ನಾಟಕ ರಾಜ್ಯ ಪ್ರೌಡ ಶಿಕ್ಷಣ ಪರೀಕ್ಷಾ ಮಂಡಲಿಯವರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ  ಪುತ್ತೂರು ದರ್ಬೆ ಶ್ರೀ ಶಾರದಾ ಕಲಾ ಕೇಂದ್ರದ ಸುದರ್ಶನ್ ಭಟ್ ಅವರ ಶಿಷ್ಯೆ ದೀಪ್ತಿಯವರ ಶಿಷ್ಯೆ ಕಾಣಿಯೂರು ಪ್ರಗತಿ ವಿದ್ಯಾ ಸಂಸ್ಥೆಯ ೬ನೇ ತರಗತಿ ವಿದ್ಯಾರ್ಥಿನಿ ಮನಸ್ವಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಈಕೆ ಸವಣೂರು ಗ್ರಾ.ಪಂ.ಲೆಕ್ಕ ಸಹಾಯಕ ಎ.ಮನ್ಮಥ ಮತ್ತು ಪ್ರಮೀಳಾ ದಂಪತಿಯ ಪುತ್ರಿ.

ಭರತ ನಾಟ್ಯ ಮನಸ್ವಿ ಡಿಸ್ಟಿಂಕ್ಷನ್‌ನಲ್ಲಿ ಉತ್ತೀರ್ಣ Read More »

ಕರಾವಳಿ, ಕರ್ನಾಟಕ

ಪುತ್ತೂರು: ಕಾಲೇಜು ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.25. ಕಾಲೇಜು ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರದಂದು ನರಿಮೊಗರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಾಕೆಯನ್ಮು ಮೂಲತಃ ಕೊಡಗು ಜಿಲ್ಲೆಯ ಸೋಮವಾರ ಪೇಟೆಯ ತಣ್ಣೀರುಹಳ್ಳಿ ನಿವಾಸಿ ಅಣ್ಣಪ್ಪ ಎಂಬವರ ಪುತ್ರಿ ಪುತ್ತೂರು ಕೊಂಬೆಟ್ಟು ಸರ್ಕಾರಿ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಜೀವಿತಾ(17) ಎಂದು ಗುರುತಿಸಲಾಗಿದೆ. ನರಿಮೊಗರು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದಲ್ಲಿ ವಾಸ್ತವ್ಯವಿದ್ದ ಈಕೆ ಸೋಮವಾರ ಮಧ್ಯಾಹ್ನ ವೇಳೆಗೆ ಕಾಲೇಜಿನಿಂದ ವಸತಿ ನಿಲಯಕ್ಕೆ ಆಗಮಿಸಿ ಹಾಸ್ಟೆಲ್

ಪುತ್ತೂರು: ಕಾಲೇಜು ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದು ಆತ್ಮಹತ್ಯೆ Read More »

ಕರ್ನಾಟಕ

ಕರಾವಳಿಯಲ್ಲಿ ತೀವ್ರಗೊಂಡ ಮರಳು ಸಮಸ್ಯೆ ► ಸೆ. 24 ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.20. ಸೆಪ್ಟೆಂಬರ್ 24 ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಮರಳು ಸಮಸ್ಯೆ ಮತ್ತು ಭೂಪರಿವರ್ತನೆ ಸಂಬಂಧ ಸಭೆಯನ್ನು ಕರೆಯಲಾಗಿದೆ. ಈ ಸಭೆಗೆ ಪೂರ್ವಭಾವಿಯಾಗಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಚಿವರಾದ ರಾಜಶೇಖರ್ ಪಾಟೀಲ್ ಅವರು 24 ರಂದು ಅಪರಾಹ್ನ ಎರಡು ಗಂಟೆಗೆ ವಿಶೇಷ ಸಭೆಯನ್ನು ನಡೆಸಲಿದ್ದಾರೆ. ಬಳಿಕ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಅದೇ ದಿನ ಸಂಜೆ 4 ಗಂಟೆಗೆ ಸಭೆ ನಡೆಯಲಿದೆ. ಕರಾವಳಿಯ

ಕರಾವಳಿಯಲ್ಲಿ ತೀವ್ರಗೊಂಡ ಮರಳು ಸಮಸ್ಯೆ ► ಸೆ. 24 ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಸಭೆ Read More »

ಕರ್ನಾಟಕ

ಕಾಣಿಯೂರು : ಶ್ರೀ ಲಕ್ಷ್ಮೀನರಸಿಂಹ ಯುವಕಮಂಡಲದಿಂದ ಪ್ರತಿಭಾ ಪುರಸ್ಕಾರ

ಕಾಣಿಯೂರು : ಇಲ್ಲಿನ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ನಡೆದ ೩೧ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತೀವರ್ಷದಂತೆ ಪ್ರತಿಭಾ ಪುರಸ್ಕಾರವನ್ನು ನೀಡಲಾಯಿತು. ೨೦೧೭-೧೮ ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದ ಸರಕಾರಿ ಪದವಿ ಪೂರ್ವ ಕಾಲೇಜು ಕಾಣಿಯೂರು ಇಲ್ಲಿನ ವಿದ್ಯಾರ್ಥಿ ಚರಣ್ ಕುಮಾರ್ ಎಂ. ಹಾಗೂ ದ್ವಿತೀಯ ಸ್ಥಾನ ಪಡೆದ ಹರ್ಷಿತಾ ಕೆ.ಎಸ್. ಮತ್ತು ೭ ನೇ ತರಗತಿಯ ಅತ್ಯಽಕ ಅಂಕ

ಕಾಣಿಯೂರು : ಶ್ರೀ ಲಕ್ಷ್ಮೀನರಸಿಂಹ ಯುವಕಮಂಡಲದಿಂದ ಪ್ರತಿಭಾ ಪುರಸ್ಕಾರ Read More »

ಕರಾವಳಿ, ಕರ್ನಾಟಕ

ಓವರ್‌ಟೇಕ್ ಭರಾಟೆ: ಕೆಎಸ್‌ಆರ್‌ಟಿಸಿ ಬಸ್‌ – ಬೊಲೇರೋ ಢಿಕ್ಕಿ ► ಶಾಲಾ ವಿದ್ಯಾರ್ಥಿಗೆ ಗಾಯ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ.19. ಓವರ್ ಟೇಕ್ ಮಾಡುವ ಭರದಲ್ಲಿ ಮಹೀಂದ್ರ ಬೊಲೇರೋ ವಾಹನವೊಂದು ಎದುರಿನಿಂದ ಬಂದ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿಯಾದ ಘಟನೆ ಸೆ.19ರಂದು ಬೆಳಿಗ್ಗೆ ಮಾಣಿ-ಮೈಸೂರು ಹೆದ್ದಾರಿಯ ಕಾವು ಎಂಬಲ್ಲಿ ನಡೆದಿದೆ. ಸುಳ್ಯದಿಂದ ಪುತ್ತೂರು ಕಡೆಗೆ ಬರುತ್ತಿದ್ದ ಮಹೀಂದ್ರ ಬೊಲೇರೋ(ಕೆಎ19ಡಿ2737) ವಾಹನ ಕಾವು ಬುಶ್ರಾ ಶಾಲೆಯ ಸಮೀಪ ಕಾರೊಂದನ್ನು ಹಿಂದಿಕ್ಕುವ ಭರದಲ್ಲಿ ಎದುರಿನಿಂದ ಬಂದ ಕೆಎಸ್‌ಆರ್‌ಟಿಸಿ ಬಸ್(ಕೆಎ21ಎಫ್0132)ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬೊಲೇರೋ ನಜ್ಜುಗುಜ್ಜಾಗಿ ಬೊಲೇರೋದಲ್ಲಿದ್ದ ಬುಶ್ರಾ ಶಾಲಾ ವಿದ್ಯಾರ್ಥಿ ರಾಝಿಕ್(13.ವ) ಎಂಬವರಿಗೆ ಗಾಯವಾಗಿದೆ.

ಓವರ್‌ಟೇಕ್ ಭರಾಟೆ: ಕೆಎಸ್‌ಆರ್‌ಟಿಸಿ ಬಸ್‌ – ಬೊಲೇರೋ ಢಿಕ್ಕಿ ► ಶಾಲಾ ವಿದ್ಯಾರ್ಥಿಗೆ ಗಾಯ Read More »

ಕರಾವಳಿ, ಕರ್ನಾಟಕ

ಚೆನ್ನಾವರ : ಎಸ್.ಎಮ್.ಎ ಅಧ್ಯಕ್ಷ ಅರಿಯಡ್ಕ  ಅಬ್ದುಲ್ ರಹಿಮಾನ್ ಹಾಜಿಗೆ ಸಮ್ಮಾನ

ಸವಣೂರು : ಸುನ್ನೀ ಮೆನೇಜ್ಮೆಂಟ್ ಅಸೋಸಿಯೇಶನ್ (ಎಸ್ ಎಮ್ ಎ) ವಿಟ್ಲ ವಲಯ ಅಧ್ಯಕ್ಷರಾಗಿ ಆಯ್ಕೆಗೊಂಡ ಅಬ್ದುಲ್ ರಹಿಮಾನ್ ಹಾಜಿ ಅರಿಯಡ್ಕರವರನ್ನು ಎಸ್ ಎಮ್ ಎ ಬೈತಡ್ಕ ರಿಜಿನಲ್ ವತಿಯಿಂದ ಪಾಲ್ತಾಡಿ ಗ್ರಾಮದ ಚೆನ್ನಾವರ ಸಿರಾಜುಲ್ ಉಲೂಮ್ ಮದರಸ ಹಾಲ್ ನಲ್ಲಿ  ಸಮ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಎಮ್ ಎ ಬೈತಡ್ಕ ರಿಜಿನಲ್ ಅಧ್ಯಕ್ಷ ಅಬ್ದುರ್ರಹ್ಮಾನ್ ನೆಲ್ಲಿಕಟ್ಟೆ ವಹಿಸಿದ್ದರು.ಅಬ್ದುಲ್ಲಾ ಅಹ್ಸನಿ ಮಾಡನ್ನೂರು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ  ಚೆನ್ನಾವರ ಮುಹಿಯ್ಯುದ್ದಿನ್ ಜುಮಾ ಮಸೀದಿಯ ಜಮಾತ್ ಕಮಿಟಿ ಅಧ್ಯಕ್ಷ ಕರೀಮ್ ಹಾಜಿ,

ಚೆನ್ನಾವರ : ಎಸ್.ಎಮ್.ಎ ಅಧ್ಯಕ್ಷ ಅರಿಯಡ್ಕ  ಅಬ್ದುಲ್ ರಹಿಮಾನ್ ಹಾಜಿಗೆ ಸಮ್ಮಾನ Read More »

ಕರಾವಳಿ, ಕರ್ನಾಟಕ

ಸರ್ವೆಯ ವಿನುತಾ ಕೊಲೆ ಪ್ರಕರಣದಲ್ಲಿ ಸೈನೆಡ್ ಮೋಹನ್‌ಗೆ ಗಲ್ಲು ಶಿಕ್ಷೆ ವಿಧಿಸಿ’ ಸಂಪ್ಯ ಪೊಲೀಸರ ಮೇಲ್ಮನವಿ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ ಹೈಕೋರ್ಟ್

ಸವಣೂರು: ಸರ್ವೆಯ ವಿನುತಾರವರ ಕೊಲೆ ಪ್ರಕರಣದಲ್ಲಿ ಅಪರಾಧಿಯಾಗಿರುವ ಸರಣಿ ಸ್ತ್ರೀ ಹಂತಕ ಸೈನೈಡ್ ಮೋಹನ್ ಕುಮಾರ್‌ಗೆ ಅಧೀನ ನ್ಯಾಯಾಲಯ ವಿಧಿಸಿರುವ ಜೀವಾವಧಿ ಶಿಕ್ಷೆ ಪ್ರಮಾಣವನ್ನು ಹೆಚ್ಚಿಸುವಂತೆ ಕೋರಿ ಸಂಪ್ಯದಲ್ಲಿರುವ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಸಲ್ಲಿಸಿರುವ ಮೇಲ್ಮನವಿಯನ್ನು ಹೈಕೋರ್ಟ್ ವಿಚಾರಣೆಗೆ ಅಂಗೀಕರಿಸಿದೆ. ೨೦ಕ್ಕೂ ಅಧಿಕ ಯುವತಿಯರನ್ನು ಮದುವೆಯಾಗುವುದಾಗಿ ನಂಬಿಸಿ ಬಳಿಕ ದೈಹಿಕ ಸಂಪರ್ಕ ಬೆಳೆಸಿ ನಂತರ ಸೈನೆಡ್ ನೀಡಿ ಕೊಲೆ ಮಾಡಿ ಪರಾರಿಯಾಗುತ್ತಿದ್ದ ಪುತ್ತೂರು ತಾಲೂಕಿನ ವಿವಿಧ ಶಾಲೆಗಳಲ್ಲಿ ಶಿಕ್ಷಕನಾಗಿದ್ದ ಕನ್ಯಾನ ಮೂಲದ ಮೋಹನ್ ಕುಮಾರ್‌ಗೆ ಸರ್ವೆಯ

ಸರ್ವೆಯ ವಿನುತಾ ಕೊಲೆ ಪ್ರಕರಣದಲ್ಲಿ ಸೈನೆಡ್ ಮೋಹನ್‌ಗೆ ಗಲ್ಲು ಶಿಕ್ಷೆ ವಿಧಿಸಿ’ ಸಂಪ್ಯ ಪೊಲೀಸರ ಮೇಲ್ಮನವಿ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ ಹೈಕೋರ್ಟ್ Read More »

ಕರಾವಳಿ, ಕರ್ನಾಟಕ

ಬೈಕಂಪಾಡಿ: ತಾಳೆ ಎಣ್ಣೆ ಸಾಗಾಟದ ಲಾರಿ ಚಾಲಕನ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ► ಚಾಲಕನನ್ನು ಕೊಂದು ಲಾರಿಯಲ್ಲಿದ್ದ ಸ್ವತ್ತು ದೋಚಿದ ದುಷ್ಕರ್ಮಿಗಳು..!!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.18. ಬೆಂಗಳೂರಿಗೆ ತಾಳೆ ಎಣ್ಣೆ ಸಾಗಿಸುತ್ತಿದ್ದ ಲಾರಿಯ ಚಾಲಕನನ್ನು ಅಪಹರಿಸಿ ಕೊಲೆಗೈದಿರುವ ಪ್ರಕರಣವನ್ನು ಭೇದಿಸಿರುವ ಮಂಗಳೂರು ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಆಗಸ್ಟ್ 28 ರಂದು ಬೈಕಂಪಾಡಿಯಲ್ಲಿರುವ ರುಚಿ ಸೋಯ ಇಂಡಸ್ಟ್ರೀಯಿಂದ ಸುಮಾರು 7‌ ಲಕ್ಷ 50 ಸಾವಿರ ರೂ. ಮೌಲ್ಯದ 1050 ಬಾಕ್ಸ್ ತಾಳೆ ಎಣ್ಣೆಯನ್ನು ಸುಗಮ ಕಂಪನಿಯ ಲಾರಿಯಲ್ಲಿ ಬೆಂಗಳೂರಿಗೆ ಕಳುಹಿಸಿಕೊಡಲಾಗಿದ್ದು, ತಲುಪಿಸಬೇಕಾದ ಸ್ಥಳಕ್ಕೆ ತಲುಪಿಸದೇ ಮೋಸ ಮಾಡಿರುವ ಬಗ್ಗೆ ಶಿವಗಣೇಶ್ ಟ್ರಾನ್ಸ್ ಪೋರ್ಟ್ ಮಾಲೀಕರು ಪಣಂಬೂರು ಠಾಣೆಗೆ

ಬೈಕಂಪಾಡಿ: ತಾಳೆ ಎಣ್ಣೆ ಸಾಗಾಟದ ಲಾರಿ ಚಾಲಕನ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್ ► ಚಾಲಕನನ್ನು ಕೊಂದು ಲಾರಿಯಲ್ಲಿದ್ದ ಸ್ವತ್ತು ದೋಚಿದ ದುಷ್ಕರ್ಮಿಗಳು..!! Read More »

ಕರ್ನಾಟಕ

ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಇಳಿಕೆ – ಲೀಟರಿಗೆ 2 ರೂ.ನಷ್ಟು ಕಡಿತ ► ಮುಖ್ಯಮಂತ್ರಿ ಕುಮಾರಸ್ವಾಮಿ ಘೋಷಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.17. ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯು ದಿನೇ ದಿನೇ ಹೆಚ್ಚಾಗುತ್ತಿರುವುದರಿಂದ ಜನಸಾಮಾನ್ಯರು ತೊಂದರೆ ಅನುಭವಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ತೆರಿಗೆಯನ್ನು ಇಳಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ. ಪೆಟ್ರೋಲ್ ಮೇಲಿನ ತೆರಿಗೆ ಇಳಿಸುವುದರಿಂದಾಗಿ ಪ್ರತೀ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್‌ನ ಬೆಲೆಯಲ್ಲಿ 2 ರೂ. ಕಡಿತಗೊಳ್ಳಲಿದೆ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಸುವಂತೆ ಸೆಪ್ಟೆಂಬರ್ 10 ರಂದು ಕಾಂಗ್ರೆಸ್ ಪಕ್ಷವು ಭಾರತ ಬಂದ್

ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಇಳಿಕೆ – ಲೀಟರಿಗೆ 2 ರೂ.ನಷ್ಟು ಕಡಿತ ► ಮುಖ್ಯಮಂತ್ರಿ ಕುಮಾರಸ್ವಾಮಿ ಘೋಷಣೆ Read More »

ಕರ್ನಾಟಕ
Scroll to Top