ಕರ್ನಾಟಕ

ಪೂರ್ವ ದ್ವೇಷದ ಹಿನ್ನೆಲೆ ► ಚಿಕ್ಕಮಗಳೂರು ಬಿಜೆಪಿ ಜಿಲ್ಲಾ ಪ್ರ.ಕಾರ್ಯದರ್ಶಿಯ ಬರ್ಬರ ಕೊಲೆ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜೂನ್‌.23. ಬಿಜೆಪಿ ಮುಖಂಡರೋರ್ವರನ್ನು ಚೂರಿಯಿಂದ ಇರಿದು ಬರ್ಬರವಾಗಿ ಕೊಂದ ಘಟನೆ‌ ಚಿಕ್ಕಮಗಳೂರು ಜಿಲ್ಲೆಯ ಗೌರಿ ಕಾಲುವೆ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಚಿಕ್ಕಮಗಳೂರಿನ ಉಪ್ಪಳ್ಳಿ ನಿವಾಸಿ, ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್‌ ಅನ್ವರ್ (46) ಎಂದು ಗುರುತಿಸಲಾಗಿದೆ. ಅನ್ವರ್ ಶುಕ್ರವಾರ ರಾತ್ರಿ ತನ್ನ ಮನೆಗೆ ಹೋಗುತ್ತಿದ್ದ ವೇಳೆ ಗೌರಿ ಕಾಲುವೆಯ ಬಳಿ ದುಷ್ಕರ್ಮಿಗಳು ಕಾದು ಕುಳಿತು ಚಾಕುವಿನಿಂದ ಇರಿದು ಕೊಲೆ ಗೈದಿದ್ದಾರೆ ಎಂದು ತಿಳಿದುಬಂದಿದೆ. ಹಳೇ ದ್ವೇಷವೇ […]

ಪೂರ್ವ ದ್ವೇಷದ ಹಿನ್ನೆಲೆ ► ಚಿಕ್ಕಮಗಳೂರು ಬಿಜೆಪಿ ಜಿಲ್ಲಾ ಪ್ರ.ಕಾರ್ಯದರ್ಶಿಯ ಬರ್ಬರ ಕೊಲೆ Read More »

ಕರ್ನಾಟಕ

ಧರ್ಮಸ್ಥಳ: ಕೆಎಸ್ಸಾರ್ಟಿಸಿಯ ಅವ್ಯವಸ್ಥೆಯ ವಿರುದ್ಧ ಸಿಡಿದೆದ್ದಿದ್ದ ಬಸ್ ಚಾಲಕ ► ನಿಗಮದ ಮಾನವನ್ನು ಹರಾಜು ಹಾಕಿದ್ದ ರಮೇಶ್ ಕೊನೆಗೂ ಅಮಾನತು

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಜೂ.22. ಕೆಎಸ್ಸಾರ್ಟಿಸಿ ಧರ್ಮಸ್ಥಳ ಘಟಕದ ಅವ್ಯವಸ್ಥೆಗಳನ್ನು ಬಿಚ್ಚಿಟ್ಟಿದ್ದ ನಿಗಮದ ಚಾಲಕ ರಮೇಶ್ ಎಂಬವರನ್ನು ಕರ್ತವ್ಯದಿಂದ ವಿಚಾರಣಾ ಪೂರ್ವ ಅಮಾನತುಗೊಳಿಸಿ ಆದೇಶಿಸಲಾಗಿದೆ. ಅವರು ಧರ್ಮಸ್ಥಳ ಘಟಕದಲ್ಲಿನ ಅವ್ಯವಸ್ಥೆಗಳನ್ನು ವೀಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸುವ ಮೂಲಕ ನಿಗಮದ ಮಾನವನ್ನು ಹರಾಜು ಹಾಕಿದ್ದರು. ಅಲ್ಲದೆ ಜೂನ್ 30 ರಂದು ಇಲಾಖೆಯ ಮೇಲಾಧಿಕಾರಿಗಳು ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಟ್ಟಣ ಎಂಬಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ತನಿಖಾಧಿಕಾರಿಗಳ ವಿರುದ್ಧ ಮಾತನಾಡಿದ್ದಾರೆ‌ ಎಂದು ಆರೋಪಿಸಿ

ಧರ್ಮಸ್ಥಳ: ಕೆಎಸ್ಸಾರ್ಟಿಸಿಯ ಅವ್ಯವಸ್ಥೆಯ ವಿರುದ್ಧ ಸಿಡಿದೆದ್ದಿದ್ದ ಬಸ್ ಚಾಲಕ ► ನಿಗಮದ ಮಾನವನ್ನು ಹರಾಜು ಹಾಕಿದ್ದ ರಮೇಶ್ ಕೊನೆಗೂ ಅಮಾನತು Read More »

ಕರ್ನಾಟಕ

ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸದ್ದಕ್ಕೆ ಬೇಸತ್ತ ಮಹಿಳೆ ► ತನ್ನ ಮೂವರು ಮಕ್ಕಳನ್ನು ಕೆರೆಗೆ ದೂಡಿ ತಾನೂ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.17. ಮಕ್ಕಳನ್ನು ಕಾನ್ವೆಂಟ್ ಶಾಲೆಗೆ ಸೇರಿಸಲು ಆರ್ಥಿಕ ಸಂಕಷ್ಟ ಇರುವುದರಿಂದ ಸರಕಾರಿ ಶಾಲೆಗೆ ಕಳುಹಿಸೋಣ ಎಂದುದಕ್ಕೆ ಮಹಿಳೆಯೋರ್ವರು ತನ್ನ ಮೂವರು ಮಕ್ಕಳನ್ನು ಕೆರೆಗೆ ದೂಡಿ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಮಾಲೂರು ಮಾಸ್ತಿ ಠಾಣಾ ವ್ಯಾಪ್ತಿಯ ನಕ್ಕನಹಳ್ಳಿ ನಿವಾಸಿ ಪಾರ್ವತಮ್ಮ(25), ತನ್ನ ಮಕ್ಕಳಾದ ಜೀವನ್(7), ಚಂದನ(5) ಹಾಗೂ ಅಕ್ಷಯ್(3)ರನ್ನು ಕೆರೆಗೆ ದೂಡಿಹಾಕಿ ಬಳಿಕ ತಾನೂ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಖಾಸಗಿ ಶಾಲೆಗೆ ಮಕ್ಕಳನ್ನು ಸೇರಿಸಬೇಕೆನ್ನುವ ಹಠದಿಂದ ಮಂಜುನಾಥ್

ಮಕ್ಕಳನ್ನು ಖಾಸಗಿ ಶಾಲೆಗೆ ಸೇರಿಸದ್ದಕ್ಕೆ ಬೇಸತ್ತ ಮಹಿಳೆ ► ತನ್ನ ಮೂವರು ಮಕ್ಕಳನ್ನು ಕೆರೆಗೆ ದೂಡಿ ತಾನೂ ಆತ್ಮಹತ್ಯೆ Read More »

ಕರ್ನಾಟಕ

ಮಳೆಯ ಪ್ರಮಾಣ ತಗ್ಗಿದ ಹಿನ್ನೆಲೆ ► ಚಾರ್ಮಾಡಿ ಘಾಟ್ ನಲ್ಲಿ ಸಂಚಾರ ಪುನರಾರಂಭ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜೂ.16. ಚಾರ್ಮಾಡಿ ಘಾಟ್ ನಲ್ಲಿ ಭೂಕುಸಿತದಿಂದಾಗಿ ಸ್ಥಗೊತಗೊಂಡಿದ್ದ ವಾಹನ ಸಂಚಾರವು ಶುಕ್ರವಾರದಿಂದ ಸರಾಗವಾಗಿ ಆರಂಭಗೊಂಡಿದೆ. ಚಾರ್ಮಾಡಿ ಘಾಟಿಯಲ್ಲಿ ಉಂಟಾಗಿದ್ದ ಭೂ ಕುಸಿತದ ಮಣ್ಣು ಹಾಗೂ ಮರಗಳ ತೆರವು ಕಾರ್ಯವು ಗುರುವಾರ ಸಂಜೆಯ ವೇಳೆಗೆ ಮುಕ್ತಾಯಗೊಂಡಿದ್ದು, ಗುರುವಾರ ರಾತ್ರಿಯಿಂದಲೇ ಚಾರ್ಮಾಡಿ ಘಾಟಿಯಲ್ಲಿ ಕಾರು, ಜೀಪು ಸೇರಿದಂತೆ ಲಘು ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿತ್ತು. ಶುಕ್ರವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿ ಸಕಲೇಶಪುರ ಉಪ ವಿಭಾಗದ ಎಂಜಿನಿಯರ್‌ಗಳು ಘಾಟಿಯಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿದ್ದು, ವಾಹನ ಸಂಚಾರಕ್ಕೆ

ಮಳೆಯ ಪ್ರಮಾಣ ತಗ್ಗಿದ ಹಿನ್ನೆಲೆ ► ಚಾರ್ಮಾಡಿ ಘಾಟ್ ನಲ್ಲಿ ಸಂಚಾರ ಪುನರಾರಂಭ Read More »

ಕರ್ನಾಟಕ

ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಧರ್ಮಸ್ಥಳಕ್ಕೆ ► ಎರಡು ವಾರಗಳ ಕಾಲ ಇಲ್ಲೇ ಉಳಿದುಕೊಳ್ಳಲಿರುವ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಜೂ.16. ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಕೂಟದ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಇಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದು, ಎರಡು ವಾರಗಳ ಕಾಲ ಇಲ್ಲೇ ಉಳಿದುಕೊಳ್ಳಲಿದ್ದಾರೆ. ಬೆಂಗಳೂರಿನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಅಗಮಿಸುವ ಅವರು ಅಲ್ಲಿಂದ ರಸ್ತೆ ಮಾರ್ಗವಾಗಿ ಧರ್ಮಸ್ಥಳಕ್ಕೆ ಪ್ರಯಾಣಿಸಲಿದ್ದಾರೆ. ಧರ್ಮಸ್ಥಳದಲ್ಲಿರುವ ನ್ಯಾಚುರೋಪತಿ ಚಿಕಿತ್ಸಾ ಕೇಂದ್ರದಲ್ಲಿ ಮುಂದಿನ ಎರಡು ವಾರಗಳ ಕಾಲ ವಿರಾಮ ಹಾಗು ಚಿಕಿತ್ಸೆ ಪಡೆಯಲಿದ್ದಾರೆ. ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಒತ್ತಡ ನಿವಾರಣೆಗಾಗಿ

ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಧರ್ಮಸ್ಥಳಕ್ಕೆ ► ಎರಡು ವಾರಗಳ ಕಾಲ ಇಲ್ಲೇ ಉಳಿದುಕೊಳ್ಳಲಿರುವ ಸಿದ್ದರಾಮಯ್ಯ Read More »

ಕರ್ನಾಟಕ

ಮಹಾ ಮಳೆಗೆ ಮತ್ತೊಮ್ಮೆ ತತ್ತರಿಸಿದ ಕರಾವಳಿ ► ಚಿಕ್ಕಮಗಳೂರು – ಮಂಗಳೂರು ಬದಲಿ ಮಾರ್ಗವೂ ಬಂದ್

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.14. ಕರಾವಳಿಯಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಕರಾವಳಿಯು ಮತ್ತೊಮ್ಮೆ ತತ್ತರಿಸಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಕರಾವಳಿಯ ಪುತ್ತೂರು, ಬೆಳ್ತಂಗಡಿ ಹಾಗೂ ಸುಳ್ಯ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನದಿ, ಹಳ್ಳಗಳು ತುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದೆ. ಪದೇ ಪದೇ ಭೂಕುಸಿತ ಉಂಟಾಗುತ್ತಿರುವುದರಿಂದ ಚಿಕ್ಕಮಗಳೂರು ಮಂಗಳೂರು ರಸ್ತೆಯ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸಂಚಾರ ನಿಷೇಧಿಸಲಾದ ನಂತರ ಬದಲಿ‌ ಮಾರ್ಗವಾಗಿದ್ದ ಕುದುರೆಮುಖದಲ್ಲೂ ಸೇತುವೆಯೊಂದು ಮುಳುಗಿದ್ದು,

ಮಹಾ ಮಳೆಗೆ ಮತ್ತೊಮ್ಮೆ ತತ್ತರಿಸಿದ ಕರಾವಳಿ ► ಚಿಕ್ಕಮಗಳೂರು – ಮಂಗಳೂರು ಬದಲಿ ಮಾರ್ಗವೂ ಬಂದ್ Read More »

ಕರ್ನಾಟಕ

ಕೊನೆಗೂ ಜೆಡಿಎಸ್ – ಕಾಂಗ್ರೆಸ್ ಸಮ್ಮಿಶ್ರ ಸರಕಾರದ ಸಚಿವರಿಗೆ ಖಾತೆ‌ ಹಂಚಿಕೆ ► ಯಾರ್ಯಾರಿಗೆ ಯಾವ್ಯಾವ ಖಾತೆ ಎಂದು ತಿಳಿಯಬೇಕೆ..?

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.08. ರಾಜ್ಯದ ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಎಲ್ಲರಿಗೂ ಖಾತೆಯನ್ನು ಅಂತಿಮಗೊಳಿಸಲಾಗಿದ್ದು, ಈ ಕೆಳಗಿನಂತೆ ಹಂಚಲಾಗಿದೆ. ಎಚ್‌.ಡಿ. ಕುಮಾರಸ್ವಾಮಿ – ಹಣಕಾಸು / ಇಂಧನ / ಗುಪ್ತವಾರ್ತೆ / ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಖಾತೆ ಪರಮೇಶ್ವರ್ – ಗೃಹ / ಬೆಂಗಳೂರು ನಗರಾಭಿವೃದ್ಧಿ ಎಚ್‌ಡಿ ರೇವಣ್ಣ – ಲೋಕೋಪಯೋಗಿ ಆರ್‌ವಿ ದೇಶಪಾಂಡೆ – ಕಂದಾಯ ಡಿಕೆ ಶಿವಕುಮಾರ್ – ಜಲಸಂಪನ್ಮೂಲ / ವೈದ್ಯಕೀಯ

ಕೊನೆಗೂ ಜೆಡಿಎಸ್ – ಕಾಂಗ್ರೆಸ್ ಸಮ್ಮಿಶ್ರ ಸರಕಾರದ ಸಚಿವರಿಗೆ ಖಾತೆ‌ ಹಂಚಿಕೆ ► ಯಾರ್ಯಾರಿಗೆ ಯಾವ್ಯಾವ ಖಾತೆ ಎಂದು ತಿಳಿಯಬೇಕೆ..? Read More »

ಕರ್ನಾಟಕ

ಜೂನ್ 10 ರ ವರೆಗೆ ರಾಜ್ಯದೆಲ್ಲೆಡೆ ಭಾರೀ ಮಳೆಯಾಗುವ ಸಾಧ್ಯತೆ ► ಕರಾವಳಿಯಲ್ಲಿ ಹೈ-ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.08. ಮಹಾರಾಷ್ಟ್ರದಿಂದ ಕೇರಳದವರೆಗೆ ದಟ್ಟಮೋಡ ಕವಿದ ವಾತಾವರಣ ನಿರ್ಮಾಣವಾಗಿದೆಯಲ್ಲದೆ, ಮುಂಬಯಿಯಾದ್ಯಂತ ಭಾರೀ ಮಳೆಯಾಗಿದ್ದು, ಕರಾವಳಿಯಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ‌. ಗುರುವಾರದಿಂದ ಕರಾವಳಿಯಲ್ಲಿ ವಿವಿಧೆಡೆ ಭಾರೀ ಮಳೆಯಾಗುತ್ತಿದ್ದು, ರಾಜ್ಯದೆಲ್ಲೆಡೆ ಜೂನ್ 10 ರವರೆಗೆ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೈ-ಅಲರ್ಟ್ ಘೋಷಿಸಲಾಗಿದೆ. ಸಮುದ್ರದ ಮಟ್ಟದಲ್ಲಿ ಏರಿಕೆಯಾಗುವ ಲಕ್ಷಣಗಳಿದ್ದು, ಕಡಲ ತೀರದ

ಜೂನ್ 10 ರ ವರೆಗೆ ರಾಜ್ಯದೆಲ್ಲೆಡೆ ಭಾರೀ ಮಳೆಯಾಗುವ ಸಾಧ್ಯತೆ ► ಕರಾವಳಿಯಲ್ಲಿ ಹೈ-ಅಲರ್ಟ್ ಘೋಷಣೆ Read More »

ಕರ್ನಾಟಕ

ಕರಾವಳಿಯ ಏಕೈಕ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಗೆ ಸಚಿವ ಸ್ಥಾನ ► ಇಂದು ಪ್ರಮಾಣ ವಚನ ಸ್ವೀಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.06. ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಗೆ ಸಮ್ಮಿಶ್ರ ಸರಕಾರದ ಕ್ಯಾಬಿನೆಟ್ ದರ್ಜೆಯ ಸಚಿವರಾಗಿ ಮುಂದುವರಿಯಲು ಕಾಂಗ್ರೆಸ್ ಹೈಕಮಾಂಡ್ ಹಸಿರು ನಿಶಾನೆ ತೋರಿದೆ. ಬುಧವಾರ ಮಧ್ಯಾಹ್ನ ನೂತನ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಹಲವು ಗೊಂದಲಗಳ ನಡುವೆಯೂ ನೂತನ ಸಚಿವರ ಪಟ್ಟಿಯಲ್ಲಿ ಖಾದರ್ ಹೆಸರು ಸೇರ್ಪಡೆಯಾಗಿದೆ. ಹಿಂದಿನ ಸರ್ಕಾರದಲ್ಲಿ ಆರೋಗ್ಯ ಹಾಗು ಆಹಾರ ಸಚಿವರಾಗಿ ಸೇವೆ ಸಲ್ಲಿಸಿ ಗಮನ

ಕರಾವಳಿಯ ಏಕೈಕ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಗೆ ಸಚಿವ ಸ್ಥಾನ ► ಇಂದು ಪ್ರಮಾಣ ವಚನ ಸ್ವೀಕಾರ Read More »

ಕರ್ನಾಟಕ

ಐಶಾರಾಮಿ ಆಡಳಿತಕ್ಕೆ ಮೇಜರ್ ಸರ್ಜರಿ ► ಅನಗತ್ಯ ದುಂದುವೆಚ್ಚಕ್ಕೆ ಕತ್ತರಿ: ಕುಮಾರಸ್ವಾಮಿ ನಿರ್ಧಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.04. ಸರಕಾರದ ಬೊಕ್ಕಸಕ್ಕೆ ಆಗುತ್ತಿರುವ ನಷ್ಟವನ್ನು ಸರಿದೂಗಿಸಲು ಕ್ರಮ ಕೈಗೊಂಡಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ಅನಗತ್ಯ ದುಂದು ವೆಚ್ಚಗಳನ್ನು ಕಡಿತಗೊಳಿಸಲು ನಿರ್ಧರಿಸಿದ್ದಾರೆ. ಆರ್ಥಿಕ ಭದ್ರತೆ ಕಾಯ್ದುಕೊಳ್ಳುವ ಹಿತದೃಷ್ಟಿಯಿಂದ ಸರಕಾರದ ವತಿಯಿಂದ ತನಗೆ ಸಹಿತ ಯಾರಿಗೂ ವಿಶೇಷ ವಿಮಾನದ ಸೌಕರ್ಯವನ್ನು ಕಡಿತಗೊಳಿಸಲಾಗುವುದು. ತುರ್ತು ಸಂದರ್ಭ ಮಾತ್ರ ವಿಶೇಷ ವಿಮಾನ ಬಳಕೆಗೆ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಸಿಎಂ ಬೆಂಗಾವಲು ಪಡೆಯನ್ನು ಕಡಿತಗೊಳಿಸಲು ಕುಮಾರಸ್ವಾಮಿ ನಿರ್ಧರಿಸಿದ್ದು, ಸಿಎಂ ಕಚೇರಿಯಲ್ಲೂ ಅನಗತ್ಯ ಸಿಬ್ಬಂದಿಗೆ ಗೇಟ್ ಪಾಸ್ ನೀಡಲು ತೀರ್ಮಾನ ಮಾಡಿದ್ದಾರೆ.

ಐಶಾರಾಮಿ ಆಡಳಿತಕ್ಕೆ ಮೇಜರ್ ಸರ್ಜರಿ ► ಅನಗತ್ಯ ದುಂದುವೆಚ್ಚಕ್ಕೆ ಕತ್ತರಿ: ಕುಮಾರಸ್ವಾಮಿ ನಿರ್ಧಾರ Read More »

ಕರ್ನಾಟಕ
Scroll to Top