ಕರ್ನಾಟಕ

ಮಠ, ದೇಗುಲಗಳನ್ನು ನಿಯಂತ್ರಿಸುವ ಯಾವುದೇ ಉದ್ದೇಶ ಸರಕಾರಕ್ಕಿಲ್ಲ ► ವಿಧಾನ ಪರಿಷತ್ ಕಲಾಪದಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.08. ‘ಮಠ ಹಾಗೂ ಮಠಗಳ ವಶದಲ್ಲಿರುವ ಹಿಂದೂ ದೇವಾಲಯಗಳನ್ನು ನಿಯಂತ್ರಿಸುವ ಯಾವುದೇ ಉದ್ದೇಶ ರಾಜ್ಯ ಸರಕಾರದ ಮುಂದೆ ಇಲ್ಲ’ ಎಂದು ಸಿಎಂ ಸಿದ್ದರಾಮಯ್ಯ ಅವರು ಗುರುವಾರ ವಿಧಾನ ಪರಿಷತ್‌ ಕಲಾಪದಲ್ಲಿ ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಸದಸ್ಯರ ಪ್ರಶ್ನೆಗಳ ಸುರಿಮಳೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಈ ಬಗ್ಗೆ ಜನರ ಅಭಿಪ್ರಾಯಗಳನ್ನು ಕೇಳಿದ್ದೇವು. ಈಗ ಆ ಪ್ರಸ್ತಾವನೆಯನ್ನು ಕೈಬಿಟ್ಟಿದ್ದೇವೆ. ಅಂತಹ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ತಿಳಿಸಿದರು. ಸುತ್ತೋಲೆಯನ್ನು ವಾಪಾಸ್ ಪಡೆದಿದ್ದು, ಅದು […]

ಮಠ, ದೇಗುಲಗಳನ್ನು ನಿಯಂತ್ರಿಸುವ ಯಾವುದೇ ಉದ್ದೇಶ ಸರಕಾರಕ್ಕಿಲ್ಲ ► ವಿಧಾನ ಪರಿಷತ್ ಕಲಾಪದಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ Read More »

ಕರ್ನಾಟಕ

ಕನಿಷ್ಠ ವೇತನಕ್ಕೆ ಆಗ್ರಹಿಸಿ ಮೂರನೇ ದಿನಕ್ಕೆ ಕಾಲಿಟ್ಟ ಬಿಸಿಯೂಟ ತಯಾರಕರ ಮುಷ್ಕರ ► ಪ್ರತಿಭಟನಾ ನಿರತರಿಂದ ವಿಧಾನಸೌಧಕ್ಕೆ ಮುತ್ತಿಗೆ ಯತ್ನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.08. ಸುಪ್ರೀಂ ಕೋರ್ಟ್‌ ಆದೇಶದಂತೆ ಕನಿಷ್ಠ ವೇತನ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಬಿಸಿಯೂಟ ತಯಾರಕರ ಫೆಡರೇಷನ್‌ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್‌ನಲ್ಲಿ ಮಂಗಳವಾರದಿಂದ ಆರಂಭಿಸಿರುವ ಅಹೋರಾತ್ರಿ ಧರಣಿ ಮೂರನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿರುವ ಸಾವಿರಾರು ಕಾರ್ಯಕರ್ತೆಯರು ವಿಧಾನ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದು ಬಿಗಿ ಪೊಲೀಸ್‌ ಬಂದೋಬಸ್ತ್ ಕೈಗೊಳ್ಳಲಾಗಿದೆ. ಬ್ಯಾರಿಕೇಡ್‌ಗಳನ್ನು ತಳ್ಳಿ ಮುಂದಕ್ಕೆ ಸಾಗಲು ಯತ್ನಿಸಿದ ಪ್ರತಿಭಟನಾ ನಿರತರನ್ನು ತಡೆಯಲು ಮಹಿಳಾ ಪೊಲೀಸ್‌

ಕನಿಷ್ಠ ವೇತನಕ್ಕೆ ಆಗ್ರಹಿಸಿ ಮೂರನೇ ದಿನಕ್ಕೆ ಕಾಲಿಟ್ಟ ಬಿಸಿಯೂಟ ತಯಾರಕರ ಮುಷ್ಕರ ► ಪ್ರತಿಭಟನಾ ನಿರತರಿಂದ ವಿಧಾನಸೌಧಕ್ಕೆ ಮುತ್ತಿಗೆ ಯತ್ನ Read More »

ಕರ್ನಾಟಕ

ಮಾಣಿ-ಮೈಸೂರು ಹೆದ್ದಾರಿಯಲ್ಲಿ ಕೆಎಸ್ಸಾರ್ಟಿಸಿ ಬಸ್ ಗಳ ಮುಖಾಮುಖಿ ಢಿಕ್ಕಿ ► ಚಾಲಕರಿಬ್ಬರು ಮೃತ್ಯು, 20 ಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಮಡಿಕೇರಿ, ಫೆ.08. ಕೆಎಸ್ಸಾರ್ಟಿಸಿ ಬಸ್ ಗಳೆರಡರ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಎರಡೂ ವಾಹನಗಳ ಚಾಲಕರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 275 ರ ಸುಂಟಿಕೊಪ್ಪ ಸಮೀಪದ ಶಾಂತಿಗಿರಿ ಎಂಬಲ್ಲಿ ಗುರುವಾರದಂದು ನಡೆದಿದೆ. ಮೃತ ಚಾಲಕರನ್ನು ಪಾಲಾಕ್ಷ ಹಾಗೂ ಷರೀಪ್ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಓರ್ವ ಪ್ರಯಾಣಿಕನ ಸ್ಥಿತಿ ಗಂಭೀರವಾಗಿದ್ದು, 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಮಡಿಕೇರಿಯಿಂದ ಕುಶಾಲನಗರ ಮಾರ್ಗವಾಗಿ ಹಾಸನಕ್ಕೆ ತೆರಳುತ್ತಿದ್ದ ಬಸ್ ಹಾಗೂ ಮೈಸೂರಿನಿಂದ ಕುಶಾಲನಗರ ಮಾರ್ಗವಾಗಿ ಮಡಿಕೇರಿಗೆ

ಮಾಣಿ-ಮೈಸೂರು ಹೆದ್ದಾರಿಯಲ್ಲಿ ಕೆಎಸ್ಸಾರ್ಟಿಸಿ ಬಸ್ ಗಳ ಮುಖಾಮುಖಿ ಢಿಕ್ಕಿ ► ಚಾಲಕರಿಬ್ಬರು ಮೃತ್ಯು, 20 ಕ್ಕೂ ಅಧಿಕ ಮಂದಿಗೆ ಗಾಯ Read More »

ಕರ್ನಾಟಕ

ರಾಜ್ಯದ ಹಲವೆಡೆ ವರ್ಷದ ಮೊದಲ ತುಂತುರು ಮಳೆಯ ಅನುಭವ ► ಇನ್ನೆರಡು ದಿನಗಳ ಕಾಲ ಮಳೆಯ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.08. ರಾಜ್ಯದ ಹಲವೆಡೆ ತುಂತುರು ಮಳೆಯಾಗಿದ್ದು, ಈ ವರ್ಷದ ಮೊದಲ ಮಳೆ ಹನಿಯು ಭೂಮಿಯನ್ನು ಸ್ಪರ್ಶಿಸಿದೆ‌. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ಇನ್ನು ಎರಡು ದಿನಗಳ ಕಾಲ ರಾಜ್ಯದ ಕರಾವಳಿ ಭಾಗ, ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬಂಗಾಳಕೊಲ್ಲಿಯ ನೈರುತ್ಯ ಭಾಗದಲ್ಲಿ ಹಾಗೂ ಮಾಲ್ಡೀವ್ಸ್ ನಿಂದ ಕರ್ನಾಟಕದ ಕರಾವಳಿ ಪ್ರದೇಶದವರೆಗೆ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ಎರಡು ದಿನಗಳ ಕಾಲ

ರಾಜ್ಯದ ಹಲವೆಡೆ ವರ್ಷದ ಮೊದಲ ತುಂತುರು ಮಳೆಯ ಅನುಭವ ► ಇನ್ನೆರಡು ದಿನಗಳ ಕಾಲ ಮಳೆಯ ಸಾಧ್ಯತೆ Read More »

ಕರ್ನಾಟಕ

ಕೃಷ್ಣಮಠವನ್ನು ಸರಕಾರ ಸ್ವಾಧೀನಪಡಿಸಿದರೆ ನಾನು ನೌಕರನಾಗಿ ಮಠದಲ್ಲಿ ಇರಲಾರೆ ► ಪೇಜಾವರ ಶ್ರೀ ಆಕ್ರೋಶ

(ನ್ಯೂಸ್ ಕಡಬ) newskadaba.com ಉಡುಪಿ, ಫೆ.07. ಕೃಷ್ಣಮಠವನ್ನು ಸರಕಾರವು ಸ್ವಾಧೀನಪಡಿಸಿದರೆ ನಾನು ಸರಕಾರದ ನೌಕರನಾಗಿ ಮಠದಲ್ಲಿ ಇರಲಾರೆ. ನಾನು ಮಠದಿಂದ ಹೊರಬರುತ್ತೇನೆ ಎಂದು ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿಗಳು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇವಾಲಯ ಮತ್ತು ಮಠಗಳ ಸ್ವಾಧೀನ ವಿಚಾರಕ್ಕೆ ಸಂಬಂಧಿಸಿದಂತೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು ದೇವಾಲಯ ಮತ್ತು ಮಠಗಳ ಸ್ವಾಧೀನಕ್ಕೆ ಕೈ ಹಾಕುವ ಮೂಲಕ ಸರಕಾರವೇ ವಿಪಕ್ಷದ ಹೋರಾಟಕ್ಕೆ ಅಸ್ತ್ರ ಕೊಟ್ಟಂತಾಗಿದೆ. ಆದರೆ ನಾನು ಇದರ ವಿರುದ್ಧ ಹೋರಾಟ ಮಾಡುವುದಿಲ್ಲ. ಈ

ಕೃಷ್ಣಮಠವನ್ನು ಸರಕಾರ ಸ್ವಾಧೀನಪಡಿಸಿದರೆ ನಾನು ನೌಕರನಾಗಿ ಮಠದಲ್ಲಿ ಇರಲಾರೆ ► ಪೇಜಾವರ ಶ್ರೀ ಆಕ್ರೋಶ Read More »

ಕರ್ನಾಟಕ

ಖಾಸಗಿ ಶಾಲೆಗೆ ಮಕ್ಕಳನ್ನು ಕಳುಹಿಸುವ ಪೋಷಕರಿಗೆ ಸಿಹಿ ಸುದ್ದಿ ► ಫೆ.20 ರಿಂದ ಉಚಿತ ಶಿಕ್ಷಣಕ್ಕಾಗಿ RTE ಕಾಯ್ದೆಯಡಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.07. ಶಿಕ್ಷಣ ಹಕ್ಕು ಕಾಯ್ದೆಯಡಿ ಮಕ್ಕಳನ್ನು ಶಾಲೆಗೆ ಸೇರಿಸಲು ಬಯಸುವ ಪೋಷಕರಿಗೆ ಫೆಬ್ರವರಿ 20 ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ. 2018-19 ನೇ ಸಾಲಿನಲ್ಲಿ RTE ಅಡಿ ಖಾಸಗಿ ಮತ್ತು ಅನುದಾನಿತ ಶಾಲೆಗಳಲ್ಲಿ 1.44 ಲಕ್ಷ ಸೀಟುಗಳನ್ನು ಕಾಯ್ದಿರಿಸಲಾಗಿದ್ದು, ಸಾರ್ವಜನಿಕ ಶಿಕ್ಷಣ ಇಲಾಖೆ ಶೇ.25 ರಷ್ಟು ಸೀಟುಗಳಿಗೆ ಉಚಿತವಾಗಿ ಪ್ರವೇಶ ನೀಡುವ ಬಗ್ಗೆ ಆರ್ ಟಿಇ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಇದೇ ಫೆಬ್ರವರಿ 20 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಮಾರ್ಚ್

ಖಾಸಗಿ ಶಾಲೆಗೆ ಮಕ್ಕಳನ್ನು ಕಳುಹಿಸುವ ಪೋಷಕರಿಗೆ ಸಿಹಿ ಸುದ್ದಿ ► ಫೆ.20 ರಿಂದ ಉಚಿತ ಶಿಕ್ಷಣಕ್ಕಾಗಿ RTE ಕಾಯ್ದೆಯಡಿ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ Read More »

ಕರ್ನಾಟಕ

ರಾಜ್ಯ ರಾಜಧಾನಿಯಲ್ಲಿ ರೌಡಿಶೀಟರ್ ಬರ್ಬರ ಹತ್ಯೆ ► ರಕ್ಷಣೆಗಾಗಿ ಕಿ.ಮೀ. ಓಡಿದರೂ ನಡುರಸ್ತೆಯಲ್ಲೇ ಅಟ್ಟಾಡಿಸಿ ಕೊಂದರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.06. ರೌಡಿ ಶೀಟರ್ ಓರ್ವನನ್ನು ದುಷ್ಕರ್ಮಿಗಳು ಅಟ್ಟಾಡಿಸಿ ಹತ್ಯೆಗೈದ ಘಟನೆ ಸೋಮವಾರದಂದು ರಾಜ್ಯ ರಾಜಧಾನಿಯಲ್ಲಿ ನಡೆದಿದೆ. ದುಷ್ಕರ್ಮಿಗಳಿಂದ ಹತ್ಯೆಗೊಳಗಾದಾತನ್ನು ರೌಡಿ ಸೈಕಲ್ ರವಿ ಸಹಚರ ಬನಶಂಕರಿ ಠಾಣಾ ವ್ಯಾಪ್ತಿಯ ರೌಡಿಶೀಟರ್ ಕುಮಾರ್ ಎಂದು ಗುರುತಿಸಲಾಗಿದೆ. ಯಲಚೇನಹಳ್ಳಿ ಮೆಟ್ರೋ ಸಮೀಪ ಈ ಹತ್ಯೆ ನಡೆದಿದ್ದು, ದುಷ್ಕರ್ಮಿಗಳು ನಡು ರಸ್ತೆಯಲ್ಲಿಯೇ ಅಟ್ಟಾಡಿಸಿ ಹೊಡೆದಿದ್ದಾರೆ. ಕುಮಾರ್ ಪ್ರಾಣ ಉಳಿಸಿಕೊಳ್ಳಲು ಒಂದು ಕಿಮೀ ಓಡಿದರೂ ಬೆನ್ನು ಬಿಡದ ದುಷ್ಕರ್ಮಿಗಳು ಕುಮಾರ್ ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ರಾಜ್ಯ ರಾಜಧಾನಿಯಲ್ಲಿ ರೌಡಿಶೀಟರ್ ಬರ್ಬರ ಹತ್ಯೆ ► ರಕ್ಷಣೆಗಾಗಿ ಕಿ.ಮೀ. ಓಡಿದರೂ ನಡುರಸ್ತೆಯಲ್ಲೇ ಅಟ್ಟಾಡಿಸಿ ಕೊಂದರು Read More »

ಕರ್ನಾಟಕ

ಸಿದ್ದರಾಮಯ್ಯ ಸರಕಾರವನ್ನು ಹೊಗಲಿ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದ ರಾಜ್ಯಪಾಲ ► ಕಾಂಗ್ರೆಸ್ ವಿರುದ್ಧ ಪ್ರಧಾನಿಯಿಂದ ತೆಗಳಿಕೆ, ರಾಜ್ಯಪಾಲರಿಂದ ಹೊಗಳಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.05. ಭಾನುವಾರದಂದು ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ಪರಿವರ್ತನಾ ಯಾತ್ರೆ ಸಮಾರೋಪ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಹೀನಾ ಮಾನ ಟೀಕಿಸಿದರು. ಆದರೆ ಇಂದು ಅದೇ ಕಾಂಗ್ರೆಸ್ ಸರ್ಕಾರವನ್ನು ರಾಜ್ಯಪಾಲ ವಜುಭಾಯ್ ವಾಲಾ ಬಾಯ್ತುಂಬ ಹೊಗಳಿದ್ದಾರೆ. ವಿಧಾನಮಂಡಲ ಅಧಿವೇಶನದ ಮೊದಲ ದಿನವಾದ ಇಂದು ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಿದ ರಾಜ್ಯಪಾಲ ವಜುಭಾಯಿ ವಾಲಾ ಅವರು ರಾಜ್ಯ ಸರ್ಕಾರದ ಸಾಧನೆಗಳು, ಅಭಿವೃದ್ಧಿ ಕಾರ್ಯಕ್ರಮಗಳ ಪಟ್ಟಿ ಓದಿದರು. ಸರ್ಕಾರದ ಸಾಧನೆಗೆ

ಸಿದ್ದರಾಮಯ್ಯ ಸರಕಾರವನ್ನು ಹೊಗಲಿ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದ ರಾಜ್ಯಪಾಲ ► ಕಾಂಗ್ರೆಸ್ ವಿರುದ್ಧ ಪ್ರಧಾನಿಯಿಂದ ತೆಗಳಿಕೆ, ರಾಜ್ಯಪಾಲರಿಂದ ಹೊಗಳಿಕೆ Read More »

ಕರ್ನಾಟಕ

ಮೂಲಭೂತ ಸೌಕರ್ಯಗಳನ್ನು ಒದಗಿಸಿಲ್ಲವೆಂಬ ಆಕ್ರೋಶ ► ಕಾಂಗ್ರೆಸ್ ಶಾಸಕ ಇಕ್ಬಾಲ್ ಅನ್ಸಾರಿಗೆ ಚೊಂಬು, ಚಪ್ಪಲಿ ಎಸೆದ ಮಹಿಳೆಯರು

(ನ್ಯೂಸ್ ಕಡಬ) newskadaba.com ಕೊಪ್ಪಳ, ಫೆ.05. ಗಂಗಾವತಿ ಶಾಸಕ ಇಕ್ಬಾಲ್ ಅನ್ಸಾರಿಗೆ ಮಹಿಳೆಯರು ತಂಬಿಗೆ ಮತ್ತು ಚಪ್ಪಲಿ ಎಸೆದ ಘಟನೆ ಭಾನುವಾರ ರಾತ್ರಿ ನಡೆದಿದ್ದು ಈ ಮೂಲಕ ಶಾಸಕ ಇಕ್ಬಾಲ್​ ಅನ್ಸಾರಿಗೆ ಮತ್ತೊಮ್ಮೆ ಅವಮಾನವಾಗಿದೆ. ಭಾನುವಾರ ರಾತ್ರಿ ಕೊಪ್ಪಳದ ಗಂಗಾವತಿ ನಗರದ 28 ನೇ ವಾರ್ಡ್​ ವೀಕ್ಷಣೆಗೆ ಹೋಗಿದ್ದ ಅನ್ಸಾರಿ ಅವರನ್ನು ಮಹಿಳೆಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಸಮರ್ಪಕ ಶೌಚಾಲಯ ವ್ಯವಸ್ಥೆ ಇಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಅನ್ಸಾರಿ ಅವರ ಭಾಷಣಕ್ಕೆ ಮಹಿಳೆಯರು ಅಡ್ಡಿ ಪಡಿಸಿದ್ದು, ಮಹಿಳೆಯರನ್ನು

ಮೂಲಭೂತ ಸೌಕರ್ಯಗಳನ್ನು ಒದಗಿಸಿಲ್ಲವೆಂಬ ಆಕ್ರೋಶ ► ಕಾಂಗ್ರೆಸ್ ಶಾಸಕ ಇಕ್ಬಾಲ್ ಅನ್ಸಾರಿಗೆ ಚೊಂಬು, ಚಪ್ಪಲಿ ಎಸೆದ ಮಹಿಳೆಯರು Read More »

ಕರ್ನಾಟಕ

ಮೋದಿಯವರ ‘ಪಕೋಡಾ ಮಾರಾಟ ಒಂದು ಉದ್ಯೋಗವಲ್ಲವೇ’ ಹೇಳಿಕೆಗೆ ಖಂಡನೆ ► ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಪಕೋಡಾ ತಿನ್ನಿಸಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.04. ಪಕೋಡಾ ಮಾರಾಟ ಮಾಡುವುದು ಒಂದು ಉದ್ಯೋಗವಲ್ಲವೇ..? ಎಂಬ ಪ್ರಧಾನಿ ಮೋದಿ ಅವರ ಹೇಳಿಕೆಯನ್ನು ವಿರೋಧಿಸಿ, ಪ್ರತಿಭಟನೆ ನಡೆಸಿದ ಕೆಲ ಯುವಕರು, ಬಿಜೆಪಿ ಕಾರ್ಯಕರ್ತರಿಗೆ ಪಕೋಡಾ ತಿನ್ನಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿದರು. ರವಿವಾರ ನಗರದ ಅರಮನೆ ಮೈದಾನದಲ್ಲಿ ಬಿಜೆಪಿಯ ಪರಿವರ್ತನಾ ಯಾತ್ರೆ ಸಮಾರಂಭ ಹಿನ್ನೆಲೆಯಲ್ಲಿ ನಾನಾ ಕಡೆಗಳಿಂದ ಬಸ್ ಗಳಲ್ಲಿ ಬರುತ್ತಿದ್ದ ಬಿಜೆಪಿ ಕಾರ್ಯಕರ್ತರಿಗೆ ಕೆಲ ಯುವಕರು, ಪದವೀಧರರ ವೇಶ ಹಾಕಿಕೊಂಡು ‘ಪಕೋಡಾ’ ಹಂಚಿದರು. ಪದವೀಧರ ಯುವಕರು, ಸ್ವಾಭಿಮಾನಿ ಪಕೋಡಾ ಸ್ಟಾಲ್

ಮೋದಿಯವರ ‘ಪಕೋಡಾ ಮಾರಾಟ ಒಂದು ಉದ್ಯೋಗವಲ್ಲವೇ’ ಹೇಳಿಕೆಗೆ ಖಂಡನೆ ► ಬೆಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಪಕೋಡಾ ತಿನ್ನಿಸಿ ಪ್ರತಿಭಟನೆ Read More »

ಕರ್ನಾಟಕ
Scroll to Top