ಕರ್ನಾಟಕ

ನಾಳೆಯಿಂದ ಸಾರಿಗೆ ನೌಕರರ ಮುಷ್ಕರ, ಬಸ್‌‍ಗಳ ಸಂಚಾರದಲ್ಲಿ ವ್ಯತ್ಯಯ

(ನ್ಯೂಸ್‌ ಕಡಬ) newskadaba.com,ಜ.28  ಬೆಂಗಳೂರು:  ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌‍ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳ ನೌಕರರು ನಾಳೆಯಿಂದ ಮುಷ್ಕರ ನಡೆಸಲು ಮುಂದಾಗಿದ್ದು, ಬಸ್‌‍ಗಳ ಸಂಚಾರದಲ್ಲಿ ವ್ಯತ್ಯಯ ಆಗುವ ಸಾಧ್ಯತೆ ಇದೆ. ಇದು ಪ್ರಯಾಣಿಕರ ಮೇಲೆ ಪರಿಣಾಮ ಬೀರಲಿದೆ.ವೇತನ ಮತ್ತು ವೇತನ ಪರಿಷ್ಕರಣೆಗೆ ಸಂಬಂಧಿಸಿದ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮುಷ್ಕರಕ್ಕೆ ಸಾರಿಗೆ ನೌಕರರು ಮುಂದಾಗಿದ್ದಾರೆ. ಈ ನಡುವೆ ಗುರುವಾರ ಗೈರಾದರೆ ನೋ ವರ್ಕ್‌ […]

ನಾಳೆಯಿಂದ ಸಾರಿಗೆ ನೌಕರರ ಮುಷ್ಕರ, ಬಸ್‌‍ಗಳ ಸಂಚಾರದಲ್ಲಿ ವ್ಯತ್ಯಯ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿಯ ಕೋಡಿಬೆಂಗ್ರೆಯಲ್ಲಿ ಘೋರ ದುರಂತ ಪ್ರವಾಸಿ ದೋಣಿ ಪಲ್ಟಿಯಾಗಿ ಸಾವಿನ ಸಂಖ್ಯೆ 3ಕ್ಕೆ ಏರಿಕೆ

  (ನ್ಯೂಸ್‌ ಕಡಬ) newskadaba.com,ಜ.28  ಕೋಡಿಬೆಂಗ್ರೆಯಲ್ಲಿ ಪ್ರವಾಸಿ ದೋಣಿ ಮುಳುಗಿದ ಘಟನೆಯಲ್ಲಿ ಗಾಯಗೊಂಡಿದ್ದ ಮತ್ತೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಮೂರಕ್ಕೆ ಏರಿದೆ.ಮೃತರನ್ನು ಮೈಸೂರು ನಿವಾಸಿ ದಿಶಾ (23) ಎಂದು ಗುರುತಿಸಲಾಗಿದೆ. ಜನವರಿ 26 ರ ಮಧ್ಯಾಹ್ನ ಈ ಘಟನೆ ಸಂಭವಿಸಿದ್ದು, ಮೈಸೂರಿನಿಂದ ಕೋಡಿಬೆಂಗ್ರೆಗೆ ರಜೆಯ ಮೇಲೆ ಬಂದಿದ್ದ ಯುವಕರ ಗುಂಪೊಂದು ಪ್ರಯಾಣಿಸುತ್ತಿದ್ದ ಪ್ರವಾಸಿ ದೋಣಿ ನೀರಿನಲ್ಲಿ ಮುಳುಗಿ ದುರಂತ ಸಂಭವಿಸಿದೆ. ಅದೇ ದಿನ ಇಬ್ಬರು ಸಾವನ್ನಪ್ಪಿದ್ದರೆ, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡು ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದರು.

ಉಡುಪಿಯ ಕೋಡಿಬೆಂಗ್ರೆಯಲ್ಲಿ ಘೋರ ದುರಂತ ಪ್ರವಾಸಿ ದೋಣಿ ಪಲ್ಟಿಯಾಗಿ ಸಾವಿನ ಸಂಖ್ಯೆ 3ಕ್ಕೆ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಿಕ್ಷಣ ಕ್ಷೇತ್ರದಲ್ಲಿ ಮಧು ಬಂಗಾರಪ್ಪ ಹೊಸ ಕ್ರಾಂತಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಇನ್ಮುಂದೆ ನೋಟ್‌ಬುಕ್‌ಗಳೂ ಸಂಪೂರ್ಣ ಫ್ರೀ!

  (ನ್ಯೂಸ್‌ ಕಡಬ) newskadaba.com,ಜ.28 : ಮುಂದಿನ ಶೈಕ್ಷಣಿಕ ವರ್ಷದಿಂದ ಎಲ್‌ಕೆಜಿಯಿಂದ 12 ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳು ಮತ್ತು ನೋಟ್‌ಬುಕ್‌ಗಳು ದೊರೆಯಲಿವೆ ಎಂದು ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ.. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಆರಂಭದಲ್ಲಿ 500 ಕೆಪಿಎಸ್ ಶಾಲೆಗಳ ಸ್ಥಾಪನೆಗೆ ಅನುಮೋದನೆ ನೀಡಿತ್ತು.”ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲು ಮತ್ತು ಎಲ್ಲಾ ಸೌಲಭ್ಯಗಳನ್ನು ಒಂದೇ ಸೂರಿನಡಿ ಒದಗಿಸಲು, ಸರ್ಕಾರವು ಈಗ ಒಟ್ಟು 3,500 ಕೋಟಿ ರೂ. ವೆಚ್ಚದಲ್ಲಿ 900 ಕೆಪಿಎಸ್ ಶಾಲೆಗಳನ್ನು ಮಂಜೂರು ಮಾಡಿದೆ”

ಶಿಕ್ಷಣ ಕ್ಷೇತ್ರದಲ್ಲಿ ಮಧು ಬಂಗಾರಪ್ಪ ಹೊಸ ಕ್ರಾಂತಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಇನ್ಮುಂದೆ ನೋಟ್‌ಬುಕ್‌ಗಳೂ ಸಂಪೂರ್ಣ ಫ್ರೀ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರು: ಅಕ್ರಮ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟ ಜಾಲ ಪತ್ತೆ- ನಾಲ್ವರು ಅರೆಸ್ಟ್‌

(ನ್ಯೂಸ್‌ ಕಡಬ) newskadaba.com,ಜ.28 ಪುತ್ತೂರು: ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪತ್ತೆ ಮಾಡಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.ಆರೋಪಿಗಳಾದ ಪೂತ್ತೂರಿನ ಮೊಹಮ್ಮದ್ ಹರ್ಷದ್ (33), ಮಹಮ್ಮದ್ ಆರೀಶ್ (31), ಇಬ್ರಾಹಿಂ ಅಶ್ರಫ್ ಅಲಿಯಾಸ್ ರೋಜಾ ಅಶ್ರಫ್ (46) , ಬಂಟ್ವಾಳ ನಿವಾಸಿ ಮುಸ್ತಾಫ (46) ಎಂದು ಗುರುತಿಸಲಾಗಿದೆ. ಆರೋಪಿಗಳಿಂದ ಅಂದಾಜು ರೂ. 50,000/- ಮೌಲ್ಯದ ಸುಮಾರು 6.39 ಗ್ರಾಂ ಎಂಡಿಎಂಎ,

ಪುತ್ತೂರು: ಅಕ್ರಮ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟ ಜಾಲ ಪತ್ತೆ- ನಾಲ್ವರು ಅರೆಸ್ಟ್‌ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಜ.28: ರಾಜ್ಯದ ಹವಾಮಾನದಲ್ಲಿ ಪ್ರತಿದಿನವೂ ಏರುಪೇರು ಉಂಟಾಗುತ್ತಿದ್ದು, ಕಳೆದ ಕೆಲವು ದಿನಗಳಿಂದ ಚಳಿಯ ತೀವ್ರ ಕಡಿಮೆಯಾಗುತ್ತಿದೆ ಎನ್ನುವಾಗಲೇ ಮತ್ತೆ ರಾಜ್ಯದಲ್ಲಿ ಚಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಮುಂದಿನ ಎರಡು ದಿನ ತುಂತುರು ಮಳೆ ಜೊತೆಗೆ ಭಾರೀ ಚಳಿಯ ವಾತಾವರಣ ಮುಂದುವರೆಯಲಿದೆ ಎಂದು ಐಎಂಡಿ ಮುನ್ಸೂಚನೆ ಕೊಟ್ಟಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಪಿಲ್ಯ ಫ್ಯಾಶನ್ ನಲ್ಲಿ ಹರೇಕಳ ಹಾಜಬ್ಬ ರಿಗೆ ಸನ್ಮಾನ

(ನ್ಯೂಸ್‌ ಕಡಬ) newskadaba.com,ಜ.27 ಕಡಬ: ಪಿಲ್ಯ ಫ್ಯಾಶನ್ ಮತ್ತು ಪಿಲ್ಯ ಮ್ಯಾಚಿಂಗ್ ಸೆಂಟರ್ ಸಮೂಹ ಸಂಸ್ಥೆಯ ವತಿಯಿಂದ ಭಾರತದ ಅತ್ಯುತ್ತಮ ಪದ್ಮಶ್ರೀ ಪುರಸ್ಕೃತರಾದ ಹರೇಕಳ ಹಾಜಬ್ಬ ರವರನ್ನು ಗೌರವಿಸಿ ಸನ್ಮಾನಿಸಲಾಯಿತು. ಸಮಾರಂಭದಲ್ಲಿ ದಯಾನಂದ ನಾಯ್ಕ್,ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತರ ಆಯೋಗದ ಉಪಾಧ್ಯಕ್ಷ ತೊಮಸ್ ಎಡೆಯಾಲ್, ಆದಂ ಪಿಲ್ಯ, ಕಳಾರ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಕೆ.ಎಚ್ ಹಂಝ ಕಳಾರ, , ಹಮೀದ್ ಮಾಸ್ಟರ್,  ನ್ಯಾಷನಲ್ ರಝ್ಝಾಕ್, ಸುಮಾ ದಡ್ಡು ಪಿಲ್ಯ, ಸಮದ್ ರೆಂಜಳ, ಮಂಜುನಾಥ್, ಎಸ್.ಎಂ ಮರ್ಧಾಳ, ಮಿಸ್ತಾ ಕಳಾರ,

ಕಡಬ: ಪಿಲ್ಯ ಫ್ಯಾಶನ್ ನಲ್ಲಿ ಹರೇಕಳ ಹಾಜಬ್ಬ ರಿಗೆ ಸನ್ಮಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಡಬ: ಪಿಲ್ಯ ಫ್ಯಾಶನ್ ನಲ್ಲಿ ಹರೇಕಳ ಹಾಜಬ್ಬ ರಿಗೆ ಸನ್ಮಾನ

(ನ್ಯೂಸ್‌ ಕಡಬ) newskadaba.com,ಜ.27 ಕಡಬ: ಪಿಲ್ಯ ಫ್ಯಾಶನ್ ಮತ್ತು ಪಿಲ್ಯ ಮ್ಯಾಚಿಂಗ್ ಸೆಂಟರ್ ಸಮೂಹ ಸಂಸ್ಥೆಯ ವತಿಯಿಂದ ಭಾರತದ ಅತ್ಯುತ್ತಮ ಪದ್ಮಶ್ರೀ ಪುರಸ್ಕೃತರಾದ ಹರೇಕಳ ಹಾಜಬ್ಬ ರವರನ್ನು ಗೌರವಿಸಿ ಸನ್ಮಾನಿಸಲಾಯಿತು. ಸಮಾರಂಭದಲ್ಲಿ ದಯಾನಂದ ನಾಯ್ಕ್,ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತರ ಆಯೋಗದ ಉಪಾಧ್ಯಕ್ಷ ತೊಮಸ್ ಎಡೆಯಾಲ್, ಆದಂ ಪಿಲ್ಯಾ, ಕಳಾರ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಹಂಝ ಕಳಾರ,ಪಿಲ್ಯಾ, ಹಮೀದ್ ಮಾಸ್ಟರ್,  ನ್ಯಾಷನಲ್ ರಝ್ಝಾಕ್, ಸುಮಾ ದಡ್ಡು ಪಿಲ್ಯ, ಸಮದ್ ರೆಂಜಳ, ಮಂಜುನಾಥ್, ಎಸ್.ಎಂ ಮರ್ಧಾಳ, ಮಿಸ್ತಾ ಕಳಾರ, ಫರ್ಹಾನ್ ಮರ್ಧಾಳ,

ಕಡಬ: ಪಿಲ್ಯ ಫ್ಯಾಶನ್ ನಲ್ಲಿ ಹರೇಕಳ ಹಾಜಬ್ಬ ರಿಗೆ ಸನ್ಮಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತೀಯ ವಾಯುಪಡೆಯಲ್ಲಿ ಅಗ್ನಿವೀರ್ ನೇಮಕಾತಿ

(ನ್ಯೂಸ್‌ ಕಡಬ) newskadaba.com,ಜ.27 : ಕೇಂದ್ರ ರಕ್ಷಣಾ ಸಚಿವಾಲಯದ ಘಟಕವಾದ ಭಾರತೀಯ ವಾಯುಪಡೆ 2026ರ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ನೇಮಕಾತಿಗೆ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಈ ನೇಮಕಾತಿಗೆ ಅರ್ಹರಾದ ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದೇಶಸೇವೆಯೊಂದಿಗೆ ಶಿಸ್ತು, ಗೌರವ ಮತ್ತು ಭವಿಷ್ಯದ ವೃತ್ತಿಜೀವನವನ್ನು ಕಟ್ಟಿಕೊಳ್ಳಲು ಬಯಸುವ ಯುವಜನರಿಗೆ ಅಗ್ನಿವೀರ್ ವಾಯು ನೇಮಕಾತಿ ಒಂದು ಮಹತ್ವದ ಅವಕಾಶವಾಗಿದೆ. ಅರ್ಜಿ ಪ್ರಕ್ರಿಯೆ ಮತ್ತು ಕೊನೆಯ ದಿನಾಂಕ: ಅಗ್ನಿವೀರ್ ವಾಯು ನೇಮಕಾತಿಗೆ ಆನ್‌ಲೈನ್

ಭಾರತೀಯ ವಾಯುಪಡೆಯಲ್ಲಿ ಅಗ್ನಿವೀರ್ ನೇಮಕಾತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ : ಸಮುದ್ರದಲ್ಲಿ ಅಲೆಗಳ ಅಬ್ಬರಕ್ಕೆ ಪ್ರವಾಸಿಗರ ದೋಣಿ ಮಗುಚಿ ಇಬ್ಬರ ಸಾವು

(ನ್ಯೂಸ್‌ ಕಡಬ) newskadaba.com,ಜ.27 ಉಡುಪಿ:  ಸಮುದ್ರದಲ್ಲಿ ಅಲೆಗಳ ಅಬ್ಬರಕ್ಕೆ ಪ್ರವಾಸಿಗರ ದೋಣಿ ಮಗುಚಿ ಸಂಭವಿಸಿದ ದುರಂತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಉಡುಪಿಯ ಡೆಲ್ಟಾ ಬೀಚ್‌ ಕೋಡಿಬೆಂಗ್ರೆಯಲ್ಲಿ ಈ ಘಟನೆ ನಡೆದಿದೆ.ಮೃತರನ್ನು ಮೈಸೂರಿನ ಶಂಕರಪ್ಪ( 22) ಹಾಗೂ ಸಿಂಧು (23) ಎಂದು ಗುರುತಿಸಲಾಗಿದೆ.ಉಡುಪಿಯ ಸಮುದ್ರ ವಿಹಾರಕ್ಕೆ ಬಂದಿದ್ದ 28 ಜನರ ಪೈಕಿ ಇಬ್ಬರು ಸಾವನ್ನಪ್ಪಿದ್ದು, ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ. ಮೈಸೂರಿನ ಬಿಪಿಒ ಕಾಲ್‌ ಸೆಂಟರ್‌ವೊಂದರ 28 ಮಂದಿ ಪ್ರವಾಸಿಗರ ತಂಡ ಇಲ್ಲಿಗೆ ಬಂದಿತ್ತು.ಎರಡು ಪ್ರವಾಸಿ ಬೋಟುಗಳಲ್ಲಿ 28 ಮಂದಿ ಕಡಲಿಗೆ

ಉಡುಪಿ : ಸಮುದ್ರದಲ್ಲಿ ಅಲೆಗಳ ಅಬ್ಬರಕ್ಕೆ ಪ್ರವಾಸಿಗರ ದೋಣಿ ಮಗುಚಿ ಇಬ್ಬರ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ಬೆಲೆಯಲ್ಲಿ ಏರಿಕೆ

(ನ್ಯೂಸ್‌ ಕಡಬ) newskadaba.com,ಜ.27: ಮಂಗಳವಾರದ ಫ್ಯೂಚರ್ಸ್ ವಹಿವಾಟಿನಲ್ಲಿ ಬೆಳ್ಳಿ ಬೆಲೆ ಪ್ರತಿ ಕೆಜಿಗೆ 3.59 ಲಕ್ಷ ರೂ.ಗೆ ದಾಖಲೆಯ ಏರಿಕೆ ಕಂಡಿದ್ದು, ನಿರಂತರ ಭೌಗೋಳಿಕ ರಾಜಕೀಯ ಮತ್ತು ಆರ್ಥಿಕ ಅನಿಶ್ಚಿತತೆಯ ನಡುವೆ ಹೂಡಿಕೆದಾರರ ಬಲವಾದ ಬೇಡಿಕೆಯಿಂದಾಗಿ ಚಿನ್ನ 10 ಗ್ರಾಂಗೆ 1.59 ಲಕ್ಷ ರೂ.ಗೆ ಗರಿಷ್ಠ ಮಟ್ಟವನ್ನು ತಲುಪಿದೆ. ಮಲ್ಟಿ ಕಮಾಡಿಟಿ ಎಕ್ಸ್ಚೇಂಜ್ (MCX) ನಲ್ಲಿ, ಮಾರ್ಚ್ ವಿತರಣೆಯ ಬೆಳ್ಳಿ ಪ್ರತಿ ಕಿಲೋಗ್ರಾಂಗೆ 25,101 ರೂ. ಅಥವಾ ಶೇಕಡಾ 7.5 ರಷ್ಟು ಹೆಚ್ಚಾಗಿ 3,59,800 ರೂ.ಗೆ ದಾಖಲೆಯನ್ನು

ಚಿನ್ನದ ಬೆಲೆಯಲ್ಲಿ ಏರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top