ಕರ್ನಾಟಕ

ಕನ್ನಡದ ಹಿರಿಯ ನಟ, ನಿರ್ದೇಶಕ ಕಾಶೀನಾಥ್ ವಿಧಿವಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.18. ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕಾಶಿನಾಥ್‌ ಅವರು ಶ್ರೀಶಂಕರ ಕ್ಯಾನ್ಸರ್‌ ಆಸ್ಪತ್ರೆಯಲ್ಲಿ ಗುರುವಾರ ಇಹಲೋಕ ತ್ಯಜಿಸಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಾಶೀನಾಥ್ ಅವರನ್ನು 2 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫ‌ಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ರಿಯಲ್‌ ಸ್ಟಾರ್‌ ಉಪೇಂದ್ರ, ಸಂಗೀತ ನಿರ್ದೇಶಕ ವಿ.ಮನೋಹರ್‌, ನಿರ್ದೇಶಕ ಸುನೀಲ್‌ ಕುಮಾರ್‌ ದೇಸಾಯಿ ಸೇರಿದಂತೆ ಅನೇಕರನ್ನು ಕಾಶೀನಾಥ್ ಚಿತ್ರರಂಗಕ್ಕೆ ಕರೆತಂದಿದ್ದಾರೆ. ಕಾಶಿನಾಥ್‌ ಅವರ ನಿಧನದ ವಾರ್ತೆ ತಿಳಿದು ಚಿತ್ರರಂಗದ […]

ಕನ್ನಡದ ಹಿರಿಯ ನಟ, ನಿರ್ದೇಶಕ ಕಾಶೀನಾಥ್ ವಿಧಿವಶ Read More »

ಕರ್ನಾಟಕ

ರಾಜ್ಯದ ಮರಳು ಹರಾಜು ನೀತಿ ಅವೈಜ್ಞಾನಿಕವೆಂದು ಚಾಟಿ ಬೀಸಿದ ಹೈಕೋರ್ಟ್ ►ಇಂದಿರಾ ಕ್ಯಾಂಟೀನ್ ಮಾದರಿಯಲ್ಲಿ ಮರಳನ್ನು ವಿತರಣೆ ಮಾಡಲು ಸಲಹೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.18. ರಾಜ್ಯದಲ್ಲಿ ಜಾರಿಯಲ್ಲಿರುವ ಮರಳು ಹರಾಜು ನೀತಿ ಅವೈಜ್ಞಾನಿಕ ಹಾಗೂ ಅವಾಸ್ತವಿಕವಾಗಿದೆ’ ಎಂದು ಕಿಡಿ ಕಾರಿರುವ ಹೈಕೋರ್ಟ್‌, ಇಂದಿರಾ ಕ್ಯಾಂಟೀನ್‌ ರೀತಿಯಲ್ಲಿ ಮರಳನ್ನು ವಿತರಿಸಲು ಸೂಚನೆ ನೀಡಿದೆ. ಸರ್ಕಾರದ ವತಿಯಿಂದ ನಡೆಸಿದ್ದ ಮರಳು ಹರಾಜು ಪ್ರಕ್ರಿಯೆಯಲ್ಲಿ ‘ಹೆಚ್ಚಿನ ಮೊತ್ತಕ್ಕೆ ಬಿಡ್‌ ಮಾಡಲಾಗಿದ್ದರೂ ನನ್ನ ಅರ್ಜಿಯನ್ನು ತಿರಸ್ಕರಿಸಲಾಗಿದೆ’ ಎಂದು ಆರೋಪಿಸಿ ಹಾವೇರಿಯ ವನಜಾಕ್ಷಿ ಎಂಬವರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಚ್‌.ಜಿ.ರಮೇಶ್‌ ಹಾಗೂ ನ್ಯಾಯಮೂರ್ತಿ ಪಿ.ಎಸ್‌.ದಿನೇಶ್

ರಾಜ್ಯದ ಮರಳು ಹರಾಜು ನೀತಿ ಅವೈಜ್ಞಾನಿಕವೆಂದು ಚಾಟಿ ಬೀಸಿದ ಹೈಕೋರ್ಟ್ ►ಇಂದಿರಾ ಕ್ಯಾಂಟೀನ್ ಮಾದರಿಯಲ್ಲಿ ಮರಳನ್ನು ವಿತರಣೆ ಮಾಡಲು ಸಲಹೆ Read More »

ಕರ್ನಾಟಕ

ಶಾಂತಿ ಕದಡುವವರ ವಿರುದ್ಧ ಗೂಂಡಾ ಕಾಯ್ದೆ ಹಾಕಿ ಗಡೀಪಾರು ಮಾಡಿ ► ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.17. ಸಮಾಜದಲ್ಲಿ ಮತೀಯವಾದಗಳ ಮೂಲಕ ಶಾಂತಿ ಕದಡುವವರನ್ನು ಗೂಂಡಾ ಕಾಯ್ದೆ ಹಾಕಿ ಗಡೀಪಾರು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಯ್ಯ ಸೂಚನೆ ನೀಡಿದ್ದಾರೆ. ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಆರಂಭವಾದ ಎರಡು ದಿನಗಳ ಪೊಲೀಸ್ ಹಿರಿಯ ಅಧಿಕಾರಿಗಳ ವಾರ್ಷಿಕ ಸಮ್ಮೇಳನದಲ್ಲಿ ಮಾತನಾಡಿ, ಪೊಲೀಸರು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಂಡಿದ್ದರೆ ಮಂಗಳೂರು ದೀಪಕ್‍ರಾವ್ ಮತ್ತು ಬಶೀರ್ ಅವರ ಕೊಲೆ ಪ್ರಕರಣಗಳನ್ನು ತಡೆಯಬಹುದಿತ್ತು ಎಂದರು. ಸಮಾಜದ ಶಾಂತಿ ಕದಡುವವರು ಯಾರೇ ಆದರೂ ಮುಲಾಜಿಲ್ಲದೆ ಕ್ರಮ ಜರುಗಿಸಿ.

ಶಾಂತಿ ಕದಡುವವರ ವಿರುದ್ಧ ಗೂಂಡಾ ಕಾಯ್ದೆ ಹಾಕಿ ಗಡೀಪಾರು ಮಾಡಿ ► ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ Read More »

ಕರ್ನಾಟಕ

ಕರಾವಳಿಯಲ್ಲಿ ಕೆಎಸ್ಸಾರ್ಟಿಸಿ ಚಾಲಕ – ನಿರ್ವಾಹಕ‌ರ ಕೊರತೆ ► ಮಂಗಳೂರು, ಪುತ್ತೂರು ವಿಭಾಗಕ್ಕೆ ತಕ್ಷಣವೇ ಸಿಬ್ಬಂದಿಗಳ ನೇಮಕಾತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.17. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ಮತ್ತು ಮಂಗಳೂರು ವಿಭಾಗದಲ್ಲಿ ಚಾಲಕರು, ನಿರ್ವಾಹಕರ ಕೊರತೆ ಇರುವುದರಿಂದ ತಕ್ಷಣವೇ ನೇಮಕಾತಿಗೆ ಚಾಲನೆ ನೀಡಲಾಗಿದೆ ಎಂದು ಸಾರಿಗೆ ಸಚಿವ ಎಚ್.ಎಂ. ರೇವಣ್ಣ ಹೇಳಿದ್ದಾರೆ. ಪುತ್ತೂರು ಮತ್ತು ಮಂಗಳೂರು ಭಾಗದಲ್ಲಿ ಕರ್ತವ್ಯದಲ್ಲಿ ಇದ್ದವರು ವರ್ಗಾವಣೆ ಕೇಳಿದ್ದಾರೆ. ಕರಾವಳಿಯವರು ಪ್ರಪಂಚದಾದ್ಯಂತ ಕೆಲಸ ಮಾಡ್ತಾರೆ. ಆದರೆ ಅಲ್ಲಿ ಚಾಲಕ, ನಿರ್ವಾಹಕ ವೃತ್ತಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ. ಹೀಗಾಗಿ ಸಮಸ್ಯೆ ಸೃಷ್ಟಿಯಾಗಿದೆ. ಅದಕ್ಕಾಗಿ ಮಂಗಳೂರು-ಪುತ್ತೂರು ವಿಭಾಗಕ್ಕೆ ತಕ್ಷಣವೇ

ಕರಾವಳಿಯಲ್ಲಿ ಕೆಎಸ್ಸಾರ್ಟಿಸಿ ಚಾಲಕ – ನಿರ್ವಾಹಕ‌ರ ಕೊರತೆ ► ಮಂಗಳೂರು, ಪುತ್ತೂರು ವಿಭಾಗಕ್ಕೆ ತಕ್ಷಣವೇ ಸಿಬ್ಬಂದಿಗಳ ನೇಮಕಾತಿ Read More »

ಕರ್ನಾಟಕ

ಪಾವಗಡದ ಸೋಲಾರ್ ಪಾರ್ಕನ್ನು ಕಂಡು ಮೋದಿಗೆ ಗಾಬರಿಯಾಗಿದೆ ► ಪ್ರಧಾನಿಯ ಕಾಳೆಲೆದ ಇಂಧನ ಸಚಿವ ಡಿ.ಕೆ.ಶಿವಕುಮಾರ್

(ನ್ಯೂಸ್ ಕಡಬ) newskadaba.com ಚಿತ್ರದುರ್ಗ, ಜ.17. ತುಮಕೂರಿನ ಪಾವಗಡದಲ್ಲಿ ನಿರ್ಮಾಣವಾಗುತ್ತಿರುವ ವಿಶ್ವದ ಅತೀ ದೊಡ್ಡ ಸೋಲಾರ್ ಪಾರ್ಕ್ ಕಂಡು ಪ್ರಧಾನಿ ಮೋದಿ ಗಾಬರಿಯಾಗಿದ್ದಾರೆ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ಪಂಚ್ ನೀಡಿದ್ದಾರೆ. ಅವರು ಚಿತ್ರದುರ್ಗದ ಹೊಸದುರ್ಗದಲ್ಲಿ ವಿದ್ಯುತ್ ಉಪಕೇಂದ್ರಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ಜಮೀನು ಖರೀದಿ ಮಾಡದೇ ಯಾವುದೇ ಭೂ ಸ್ವಾಧೀನವೂ ಇಲ್ಲದೆ ಸುಮಾರು 12 ಸಾವಿರ ಎಕರೆಯಲ್ಲಿ ನಿರ್ಮಾಣವಾಗುತ್ತಿರುವ ಸೋಲಾರ್ ಪಾರ್ಕನ್ನು ನೋಡಿ ಪ್ರಧಾನಿ ಮೋದಿ ಅವರೇ ಗಾಬರಿಯಾಗಿದ್ದಾರೆ ಎಂದರು. ರಾಜ್ಯ ಸರ್ಕಾರ ರೈತರ ಸಾಲ

ಪಾವಗಡದ ಸೋಲಾರ್ ಪಾರ್ಕನ್ನು ಕಂಡು ಮೋದಿಗೆ ಗಾಬರಿಯಾಗಿದೆ ► ಪ್ರಧಾನಿಯ ಕಾಳೆಲೆದ ಇಂಧನ ಸಚಿವ ಡಿ.ಕೆ.ಶಿವಕುಮಾರ್ Read More »

ಕರ್ನಾಟಕ

ಕಸ ತುಂಬುವ ವಾಹನದಲ್ಲಿ ಪತ್ರಕರ್ತನ ಮೃತದೇಹ ರವಾನೆ ► ವರದಿ ಕೇಳಿದ ಸಿಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.16. ಅಪಘಾತದಲ್ಲಿ ಮೃತಪಟ್ಟ ಖಾಸಗಿ ವಾಹಿನಿಯ ವರದಿಗಾರನ ಮೃತದೇಹವನ್ನು ಕಸ ತುಂಬುವ ವಾಹನದಲ್ಲಿ ರವಾನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವರದಿ ಕೇಳಿದ್ದಾರೆ. ಮೌನೇಶ ಪೋತರಾಜ್(28) ಎಂಬವರು ಶನಿವಾರ ರಾತ್ರಿ ಹಾನಗಲ್ ನ ಗಂಡೂರು ಬಳಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದರು. ಪೋತರಾಜ್ ಅವರ ಮೃತದೇಹವನ್ನು ಹಾನಗಲ್ ಪುರಸಭೆಯ ಕಸ ತುಂಬುವ ಟ್ರ್ಯಾಕ್ಟರ್ ನಲ್ಲಿ ರವಾನೆ ಮಾಡಲಾಗಿತ್ತು. ಈ ಸಂಬಂಧ ಉತ್ತರ ವಲಯದ ಐಜಿಪಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ವರದಿ ಕೇಳಿದ್ದಾರೆ. ಈ ಬಗ್ಗೆ

ಕಸ ತುಂಬುವ ವಾಹನದಲ್ಲಿ ಪತ್ರಕರ್ತನ ಮೃತದೇಹ ರವಾನೆ ► ವರದಿ ಕೇಳಿದ ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ನಕಲಿ ಸಮೀಕ್ಷೆಯ ಮೂಲಕ ಕಾಂಗ್ರೆಸ್ ಹೆಸರು ದುರುಪಯೋಗ ಆರೋಪ ► ಸಿಎಚ್ಎಸ್ ಸರ್ವೇಶ್ ಸಂಸ್ಥೆಯ ವಿರುದ್ಧ ಪೊಲೀಸ್ ದೂರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.16. ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹೆಸರನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ಸಿಎಚ್‍ಎಸ್ ಸರ್ವೇಶ್ ಸಂಸ್ಥೆಯವರ ವಿರುದ್ಧ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಗಿದೆ. ರಾಜ್ಯದ ಜನತೆ ವಿಧಾನಸಭೆ ಚುನಾವಣೆಗಳ ಕುರಿತು ಲೆಕ್ಕಾಚಾರ ಮಾಡುತ್ತಿರುವ ಈ ಸಂದರ್ಭದಲ್ಲಿ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ನಕಲಿ ಸಮೀಕ್ಷೆ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಡುವ ಮೂಲಕ ಜನರಲ್ಲಿ ತಪ್ಪು ಗ್ರಹಿಕೆ ಮೂಡಿಸುವ ಅನೈತಿಕ ಮಾರ್ಗ ಹಿಡಿದಿವೆ. ಜೆಪಿ ನಗರ, ಡಾಲರ್ಸ್ ಕಾಲೋನಿಯ ದೀಪಕ್ ಅವಸ್ಥಿ ಅವರ ನೇತೃತ್ವದ

ನಕಲಿ ಸಮೀಕ್ಷೆಯ ಮೂಲಕ ಕಾಂಗ್ರೆಸ್ ಹೆಸರು ದುರುಪಯೋಗ ಆರೋಪ ► ಸಿಎಚ್ಎಸ್ ಸರ್ವೇಶ್ ಸಂಸ್ಥೆಯ ವಿರುದ್ಧ ಪೊಲೀಸ್ ದೂರು Read More »

ಕರ್ನಾಟಕ

ಪೊಲೀಸರಿಗೇ ತಟ್ಟಿದ ಸರಗಳ್ಳರ ಹಾವಳಿ ► ಪೊಲೀಸ್ ಇನ್ಸ್‌ಪೆಕ್ಟರ್ ಪತ್ನಿಯ ಮಾಂಗಲ್ಯ ಸರವನ್ನೇ ಕಿತ್ತೊಯ್ದ ಖದೀಮರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.15. ರಾಜ್ಯ ರಾಜಧಾನಿಯಲ್ಲಿ ಸರಗಳ್ಳರ ಹಾವಳಿ ಮುಂದುವರಿದಿದ್ದು, ಸೋಮವಾರದಂದು ಒಂದು ಹೆಜ್ಜೆ ಮುಂದುವರಿದು ಪೊಲೀಸ್ ಇನ್ಸ್‌ಪೆಕ್ಟರ್ ಪತ್ನಿಯ ಮಾಂಗಲ್ಯ ಸರವನ್ನೇ ಎಗರಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಡಿಜಿ ಕಛೇರಿಯಲ್ಲಿ ಇನ್ಸ್‌ಪೆಕ್ಟರ್ ಆಗಿರುವ ಕೆಂಚೇಗೌಡ ಎಂಬವರ ಪತ್ನಿ ಗಂಗಮ್ಮ ಸಂಕ್ರಾಂತಿ ಹಬ್ಬದ ಪ್ರಯುಕ್ತ ಗೇಟಿನ ಎದುರು ರಂಗೋಲಿ ಹಾಕಿ‌ ಒಳ ಬರುವಾಗ ಆಗಂತುಕನೊಬ್ಬ ಆಗಮಿಸಿ ಮಾಂಗಲ್ಯ ಸರವನ್ನು ಎಳೆದಿದ್ದಾನೆ. ಈ ಸಂದರ್ಭದಲ್ಲಿ ವಿರೋಧಿಸಿದ ಗಂಗಮ್ಮರನ್ನು ನೆಲಕ್ಕೆ ಎಳೆದು ಸರದೊಂದಿಗೆ ಪರಾರಿಯಾಗಿರುವ ದೃಶ್ಯ

ಪೊಲೀಸರಿಗೇ ತಟ್ಟಿದ ಸರಗಳ್ಳರ ಹಾವಳಿ ► ಪೊಲೀಸ್ ಇನ್ಸ್‌ಪೆಕ್ಟರ್ ಪತ್ನಿಯ ಮಾಂಗಲ್ಯ ಸರವನ್ನೇ ಕಿತ್ತೊಯ್ದ ಖದೀಮರು Read More »

ಕರ್ನಾಟಕ

ಕರ್ನಾಟಕದವರು ಹರಾಮಿಗಳು ಎಂದು ವಿವಾದ ಸೃಷ್ಟಿಸಿದ ಗೋವಾ ನೀರಾವರಿ ಸಚಿವ

(ನ್ಯೂಸ್ ಕಡಬ) newskadaba.com ಬೆಳಗಾವಿ, ಜ.14. ಕರ್ನಾಟಕದವರು ಹರಾಮಿಗಳು, ಅವರು ಏನು ಬೇಕಾದರೂ ಮಾಡಬಹುದು. ಹೀಗಾಗಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಮಹದಾಯಿ ಕಾಮಗಾರಿ ಪರಿಶೀಲನೆಗಾಗಿ ಕರ್ನಾಟಕಕ್ಕೆ ಆಗಮಿಸಿದ್ದೇನೆ ಎಂದು ಗೋವಾ ನೀರಾವರಿ ಸಚಿವ ವಿನೋದ್ ಪಾಳೇಕರ್ ಉದ್ದಟತನದ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ. ಗೋವಾ ರಾಜ್ಯದ ನೀರಾವರಿ ಸಚಿವ ಹಾಗೂ ಇಲಾಖೆಯ ಅಧಿಕಾರಿಗಳು ಖಾನಾಪುರ ತಾಲೂಕಿನ ಮಹದಾಯಿ ಉಗಮ ಸ್ಥಾನವಾದ ಕಣಕುಂಬಿಗೆ ಬಿಗಿ ಪೊಲೀಸ್ ಭದ್ರತೆಯ ಮಧ್ಯೆ ಆಗಮಿಸಿ ಅಲ್ಲಿನ ಕಾಮಗಾರಿ ಪರಿಶೀಲನೆ ನಡೆಸಿ ಅವಹೇಳನಕಾರಿ ಹೇಳಿಕೆ‌

ಕರ್ನಾಟಕದವರು ಹರಾಮಿಗಳು ಎಂದು ವಿವಾದ ಸೃಷ್ಟಿಸಿದ ಗೋವಾ ನೀರಾವರಿ ಸಚಿವ Read More »

ಕರ್ನಾಟಕ

ಆ್ಯಪಲ್ ತುಂಡು ಗಂಟಲಲ್ಲಿ ಸಿಲುಕಿ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಜ.14. ಸೇಬು ತುಂಡೊಂದು ಗಂಟಲಲ್ಲಿ ಸಿಕ್ಕಿ ಹಾಕಿಕೊಂಡ ಪರಿಣಾಮ ಬಾಲಕ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರದಲ್ಲಿ ಶನಿವಾರದಂದು ನಡೆದಿದೆ. ಮೃತ ಯುವಕನನ್ನು ಚಿಕ್ಕಬಳ್ಳಾಪುರದ ನಕ್ಕಲಕುಂಟೆಯ ಶಾಂತಿನಗರ ನಿವಾಸಿ ಆಸೀಫ್ (11) ಎಂದು ಗುರುತಿಸಲಾಗಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಆಸೀಫ್ ಶನಿವಾರದಂದು ಸೇಬು ಹಣ್ಣು ತಿನ್ನುವ ವೇಳೆ ಏಕಾಏಕಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಮೃತಪಟ್ಟಿದ್ದಾನೆ. ಆಸೀಫ್ ಶವದ ಮರಣೋತ್ತರ ಪರೀಕ್ಷೆ ನಡೆಸಿದ ಜಿಲ್ಲಾ ಆಸ್ಪತ್ರೆಯ ವೈದ್ಯರು ಗಂಟಲಿನಲ್ಲಿ ಸೇಬು ಸಿಕ್ಕಿಹಾಕಿಕೊಂಡಿದ್ದರಿಂದಲೇ ಬಾಲಕ

ಆ್ಯಪಲ್ ತುಂಡು ಗಂಟಲಲ್ಲಿ ಸಿಲುಕಿ ಬಾಲಕ ಮೃತ್ಯು Read More »

ಕರ್ನಾಟಕ
Scroll to Top