ಕರ್ನಾಟಕ

ಐಎಸ್ಐ ಮುದ್ರೆ ಇಲ್ಲದ ಹೆಲ್ಮೆಟ್ ಧರಿಸಿ ಅಪಘಾತವಾದರೆ ಇನ್ಶುರೆನ್ಸ್‌ ನೀಡಬೇಕಾಗಿಲ್ಲ ►ಹೈಕೋರ್ಟಿನಿಂದ ಮಹತ್ವದ ತೀರ್ಪು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.10. ಬೈಕ್ ಅಪಘಾತದ ಸಂದರ್ಭದಲ್ಲಿ ಪ್ರಾಣ ಹಾನಿ ಅಥವಾ ದೈಹಿಕ ಹಾನಿಯುಂಟಾದ ಸಂದರ್ಭದಲ್ಲಿ ಐಎಸ್‌ಐ ಮುದ್ರೆ ಹೊಂದಿರದ ಹೆಲ್ಮೆಟ್ ಧರಿಸಿದ್ದರೆ ಅಥವಾ ಸೀಟ್ ಬೆಲ್ಟ್ ಧರಿಸದೆ ಇದ್ದರೆ ಅಂತಹ ವಾಹನ ಸವಾರರು ವಿಮಾ ಹಣ ಪಡೆಯಲು ಅರ್ಹರಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.   ಬಸ್ ಮತ್ತು ಬೈಕ್ ನಡುವಿನ ಅಪಘಾತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪಾವಗಡ ತಾಲ್ಲೂಕಿನ ಓಬಳಾಪುರ ಗ್ರಾಮದ ಎನ್‌. ನರೇಶ್‌ ಬಾಬು ಮತ್ತು ಸಿ.ವಿ.ಜಯಂತ್‌ ಎಂಬವರಿಗೆ […]

ಐಎಸ್ಐ ಮುದ್ರೆ ಇಲ್ಲದ ಹೆಲ್ಮೆಟ್ ಧರಿಸಿ ಅಪಘಾತವಾದರೆ ಇನ್ಶುರೆನ್ಸ್‌ ನೀಡಬೇಕಾಗಿಲ್ಲ ►ಹೈಕೋರ್ಟಿನಿಂದ ಮಹತ್ವದ ತೀರ್ಪು Read More »

ಕರ್ನಾಟಕ

ಶೀಘ್ರದಲ್ಲೇ ಕೋಮು ಸೂಕ್ಷ್ಮ ಜಿಲ್ಲೆಗಳ ಕೆಳಹಂತದ ಎಲ್ಲಾ ಪೊಲೀಸರ ವರ್ಗಾವಣೆ ►ಗೃಹ ಸಚಿವ ರಾಮಲಿಂಗಾ ರೆಡ್ಡಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.10. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಒಂದೇ ಕಡೆ ಬೀಡುಬಿಟ್ಟು ಕಾರ್ಯ ನಿರ್ವಹಿಸುತ್ತಿರುವ ಇನ್ಸ್‌ಪೆಕ್ಟರ್, ಸಬ್ ಇನ್ಸ್‌ಪೆಕ್ಟರ್ ಸೇರಿದಂತೆ ಕೆಳಹಂತದ ಪೊಲೀಸ್ ಸಿಬ್ಬಂದಿಗಳನ್ನು ಬೇರೆಡೆ ವರ್ಗಾವಣೆ ಮಾಡುವ ಬಗ್ಗೆ ಐಜಿಪಿಯಿಂದ ವರದಿ ಪಡೆದು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಅವರು ಸೋಮವಾರದಂದು ವಿಕಾಸಸೌಧದಲ್ಲಿನ ತನ್ನ ಕಛೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸುತ್ತಾ ಪೊಲೀಸ್ ಇಲಾಖೆಯಲ್ಲಿ ಏಳು ವಲಯಗಳನ್ನು ರಚಿಸಲಾಗಿದ್ದು, ಆಯಾ ವಲಯದಲ್ಲಿರುವ ಕೆಳಹಂತದ ಸಿಬ್ಬಂದಿಗಳು ಹಲವು

ಶೀಘ್ರದಲ್ಲೇ ಕೋಮು ಸೂಕ್ಷ್ಮ ಜಿಲ್ಲೆಗಳ ಕೆಳಹಂತದ ಎಲ್ಲಾ ಪೊಲೀಸರ ವರ್ಗಾವಣೆ ►ಗೃಹ ಸಚಿವ ರಾಮಲಿಂಗಾ ರೆಡ್ಡಿ Read More »

ಕರ್ನಾಟಕ

ಈಶ್ವರಪ್ಪ ಹುಚ್ಚನ ಹಾಗೆ ಮಾತನಾಡುವುದನ್ನು ನಿಲ್ಲಿಸಲಿ ► ಕಾಗೋಡು ತಿಮ್ಮಪ್ಪರಿಂದ ವಾಗ್ದಾಳಿ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜ.09, ಸಿಎಂ ಸಿದ್ದರಾಮಯ್ಯನವರ ವಿರುದ್ಧ ‘ಹುಚ್ಚನ ಕೈಯಲ್ಲಿ ಆಡಳಿತ ಕೊಟ್ಟಂತಾಗಿದೆ’ ಎಂದು ಟೀಕಾಪ್ರಹಾರ ನಡೆಸಿದ್ದ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪನವರ ವಿರುದ್ಧ ಇದೀಗ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ವಾಗ್ದಾಳಿ ನಡೆಸಿದ್ದಾರೆ. ಅವರು ಮಂಗಳವಾರದಂದು ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿ, ಕೆ.ಎಸ್.ಈಶ್ವರಪ್ಪರವರು ಮೊದಲು ಹುಚ್ಚನಂತೆ ಮಾತನಾಡುವುದನ್ನು ನಿಲ್ಲಿಸಲಿ. ಜವಾಬ್ದಾರಿಯುತ ಸ್ಥಾನದಲ್ಲಿರುವ ಅವರು ಬಾಯಿಗೆ ಬಂದಂತೆ ಮಾತನಾಡುವುದು ಸರಿಯಲ್ಲ. ಅವರು ಪರಿಸ್ಥಿತಿಯ ಇತಿಮಿತಿಯನ್ನು ಅರಿತು ಮಾತನಾಡಬೇಕು’ ಎಂದು ಕಾಗೋಡು ತಿಮ್ಮಪ್ಪ

ಈಶ್ವರಪ್ಪ ಹುಚ್ಚನ ಹಾಗೆ ಮಾತನಾಡುವುದನ್ನು ನಿಲ್ಲಿಸಲಿ ► ಕಾಗೋಡು ತಿಮ್ಮಪ್ಪರಿಂದ ವಾಗ್ದಾಳಿ Read More »

ಕರ್ನಾಟಕ

ಮಂಗನ ಕೈಯಲ್ಲಿ ಮಾಣಿಕ್ಯ, ಹುಚ್ಚನ ಕೈಯಲ್ಲಿ ಆಡಳಿತ ► ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಈಶ್ವರಪ್ಪ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.09. ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿರುವ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಈಶ್ವರಪ್ಪ ಇದೀಗ ಸಿಎಂ ಸಿದ್ದರಾಮಯ್ಯರನ್ನು ಹುಚ್ಚ ಎಂದು ಹೇಳುವ ಮೂಲಕ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅಮಿತ್ ಷಾ ರಾಜ್ಯಕ್ಕೆ ಬಂದು ಹೋದ ಮೇಲೆ ರಾಜ್ಯದಲ್ಲಿ ಬೆಂಕಿಯನ್ನು ಹಚ್ಚುವ ಕೆಲಸದಲ್ಲಿ ಕಾಂಗ್ರೆಸ್‌ನವರು ತೊಡಗಿದ್ದಾರೆ ಎಂದಿರುವ ಈಶ್ವರಪ್ಪ, ಸಿದ್ದರಾಮಯ್ಯರವರು ನಾನು ಓರ್ವ ಹಿಂದೂ ಅಂತಾರೆ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗಿಂತ ಉತ್ತಮ ಹಿಂದೂ ನಾನು ಅಂತಾರೆ. ಆದರೆ

ಮಂಗನ ಕೈಯಲ್ಲಿ ಮಾಣಿಕ್ಯ, ಹುಚ್ಚನ ಕೈಯಲ್ಲಿ ಆಡಳಿತ ► ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಈಶ್ವರಪ್ಪ Read More »

ಕರ್ನಾಟಕ

ದೀಪಕ್ ರಾವ್ ಹತ್ಯೆಗೆ ಬಿಜೆಪಿ ಕಾರ್ಪೋರೇಟರ್ ಸುಪಾರಿ ► ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಗಂಭೀರ ಆರೋಪ

(ನ್ಯೂಸ್ ಕಡಬ) newskadaba.com ಮೈಸೂರು, ಜ.08. ದಕ್ಷಿಣ ಕನ್ನಡ ಜಿಲ್ಲೆಯ ಕಾಟಿಪಳ್ಳದಲ್ಲಿ ಜನವರಿ 3ರಂದು ಹಾಡುಹಗಲೇ ದುಷ್ಕರ್ಮಿಗಳಿಂದ ಬರ್ಬರ ಹತ್ಯೆಗೀಡಾದ‌ ದೀಪಕ್ ರಾವ್ ಹತ್ಯೆಗೆ ಬಿಜೆಪಿಯ ಸ್ಥಳೀಯ ಕಾರ್ಪೋರೇಟರ್ ಸುಪಾರಿ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ‌ ಗಂಭೀರ ಆರೋಪ ಮಾಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೀಪಕ್ ರಾವ್ ಹತ್ಯೆ ಹಿಂದೆ ಸ್ಥಳೀಯ ಬಿಜೆಪಿ ಕಾರ್ಪೋರೇಟರ್ ಸುಪಾರಿ ನೀಡಿರುವುದರ ಬಗ್ಗೆ ನನಗೆ ಮಾಹಿತೆಯಿದೆ. ಆದರೆ ಈ ಸತ್ಯಗಳೆಲ್ಲವನ್ನೂ ತನಿಖಾ ಸಂಸ್ಥೆಗಳ ಮೂಲಗಳಿಂದ ಮಾಹಿತಿ ಪಡೆದಿರುವ ಆಡಳಿತಾರೂಢ

ದೀಪಕ್ ರಾವ್ ಹತ್ಯೆಗೆ ಬಿಜೆಪಿ ಕಾರ್ಪೋರೇಟರ್ ಸುಪಾರಿ ► ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಗಂಭೀರ ಆರೋಪ Read More »

ಕರ್ನಾಟಕ

ಜ.20 ರಿಂದ ಶಿರಾಡಿ ಘಾಟ್ ರಸ್ತೆ ಬಂದ್ ► ವಾಹನಗಳನ್ನು A ಮತ್ತು B ಪಟ್ಟಿಗೆ ಸೇರಿಸಿ ಬದಲಿ ಸಂಚಾರಕ್ಕೆ ವ್ಯವಸ್ಥೆ

(ನ್ಯೂಸ್ ಕಡಬ) newskadaba.com ಹಾಸನ, ಜ.08. ಇದೇ ತಿಂಗಳ 20 ರಿಂದ ಮಂಗಳೂರು-ಬೆಂಗಳೂರು ಮಾರ್ಗದ ಶಿರಾಡಿ ಘಾಟ್ ರಸ್ತೆ ಅಭಿವೃದ್ಧಿ ಕಾಮಗಾರಿಯ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ರಸ್ತೆ ಬಂದ್ ಮಾಡಲಾಗುತ್ತಿದ್ದು, ಪರ್ಯಾಯ ಮಾರ್ಗ ಸೂಚಿಸಲಾಗಿದೆ ಎಂದು ಲೋಕೋಪಯೋಗಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ ಹೇಳಿದ್ದಾರೆ. ಸಕಲೇಶಪುರ ಪ್ಲಾಂಟರ್ಸ್ ಕ್ಲಬ್ ನಲ್ಲಿ ಶಿರಾಡಿ ಘಾಟ್ ರಸ್ತೆಯ ತಾತ್ಕಾಲಿಕ ಮಾರ್ಗ ಬದಲಾವಣೆ ಮಾಡುವ ಮತ್ತು ಸಾಧಕ ಭಾದಕಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಮಾತನಾಡಿದ ಸಚಿವರು, ಅಧಿಕವಾದ ಮಳೆಯಿಂದ

ಜ.20 ರಿಂದ ಶಿರಾಡಿ ಘಾಟ್ ರಸ್ತೆ ಬಂದ್ ► ವಾಹನಗಳನ್ನು A ಮತ್ತು B ಪಟ್ಟಿಗೆ ಸೇರಿಸಿ ಬದಲಿ ಸಂಚಾರಕ್ಕೆ ವ್ಯವಸ್ಥೆ Read More »

ಕರ್ನಾಟಕ

ರಾಜ್ಯ ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ಅವಘಡ ► ಐವರು ಸಜೀವ ದಹನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.08. ಬೆಳ್ಳಂಬೆಳಗ್ಗೆ ಉಂಟಾದ ಅಗ್ನಿ ಅವಘಡದಲ್ಲಿ ರಾತ್ರಿ ಪಾಳಿಯ ಕೆಲಸ ಮುಗಿಸಿ ಮಲಗಿದ್ದ ಐವರು ಸಜೀವ ದಹನವಾದ ಹೃದಯವಿದ್ರಾವಕ ಘಟನೆ ಬೆಂಗಳೂರಿನ ಬಾರ್ ಅಂಡ್ ರೆಸ್ಟೋರೆಂಟ್‍ವೊಂದರಲ್ಲಿ ಸೋಮವಾರ ನಡೆದಿದೆ. ಹಳೆಯದಾದ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದ ಕೈಲಾಸ್ ಬಾರ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ನಂತರ ಬೆಂಕಿಯ ಕೆನ್ನಾಲಗೆ ಇಡೀ ಕಟ್ಟಡವನ್ನೇ ಆವರಿಸಿದೆ. ಕಟ್ಟಡದಲ್ಲಿ ಯಾವುದೇ ಎಮರ್ಜೆನ್ಸಿ ಎಕ್ಸಿಟ್ ಇಲ್ಲದ ಕಾರಣ ರಾತ್ರಿ ಕೆಲಸ‌ ಮುಗಿಸಿ ನಿದ್ದೆ ಮಾಡಿ ಮಲಗಿದ್ದ

ರಾಜ್ಯ ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ಅವಘಡ ► ಐವರು ಸಜೀವ ದಹನ Read More »

ಕರ್ನಾಟಕ

ನೀವು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿಲ್ಲವೇ…? ► ಜ.12 ರವರೆಗೆ ಅವಕಾಶ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.07. ಭಾರತದ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಬಗ್ಗೆ ಜನವರಿ 1 ರಂದು ಅರ್ಹತಾ ದಿನಾಂಕವಾಗಿ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಜನವರಿ 12 ರ ವರೆಗೆ ವಿಸ್ತರಣೆ ಮಾಡಿ ಅಧಿಸೂಚನೆ ಹೊರಡಿಸಿದೆ. ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರು ತಮ್ಮ ಹಕ್ಕು ಆಕ್ಷೇಪಣೆಗಳನ್ನು ಜನವರಿ 12 ರೊಳಗೆ ಮತಗಟ್ಟೆಯ ಕ್ಷೇತ್ರ ಮಟ್ಟದ ಅಧಿಕಾರಿಯವರಲ್ಲಿ ಅಥವಾ ಮಂಗಳೂರು ಮಹಾನಗರ ಪಾಲಿಕೆ ಲಾಲ್‍ಬಾಗ್ ಕಚೇರಿಯ ಚುನಾವಣಾ ಶಾಖೆಯಲ್ಲಿ ಸಲ್ಲಿಸಬಹುದು ಎಂದು

ನೀವು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿಲ್ಲವೇ…? ► ಜ.12 ರವರೆಗೆ ಅವಕಾಶ ವಿಸ್ತರಣೆ Read More »

ಕರ್ನಾಟಕ

ನಾಳೆ(ಜ.07) ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ ► 200 ಕೋಟಿ ರೂ‌. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.06. ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜನವರಿ 7ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಬೆಳ್ತಂಗಡಿ, ಪುತ್ತೂರು ಹಾಗೂ ಮೂಡಬಿದ್ರೆ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸುಮಾರು 200 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಭಾನುವಾರ ಬೆಳಿಗ್ಗೆ 10.40ಕ್ಕೆ ಬೆಳ್ತಂಗಡಿಗೆ ಆಗಮಿಸುವ ಮುಖ್ಯಮಂತ್ರಿಗಳು, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ಮಧ್ಯಾಹ್ನ 12.45 ಕ್ಕೆ  ಬೆಳ್ತಂಗಡಿಯಿಂದ ಹೆಲಿಕಾಪ್ಟರ್ ಮೂಲಕ ಹೊರಟು 1.05

ನಾಳೆ(ಜ.07) ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ ► 200 ಕೋಟಿ ರೂ‌. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ Read More »

ಕರ್ನಾಟಕ

ಕಾರ್ಕಳ: ಯುವಕನಿಗೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ತಂಡ ► ಗಾಯಾಳು ಯುವಕ ಆಸ್ಪತ್ರೆಗೆ

(ನ್ಯೂಸ್ ಕಡಬ) newskadaba.com ಕಾರ್ಕಳ, ಜ.05. ಕರಾವಳಿಯಲ್ಲಿ ಕೋಮು ಘರ್ಷಣೆಯ ಬಿಸಿ ಆರುವುದಕ್ಕಿಂತ ಮೊದಲೇ ಯುವಕನೋರ್ವನಿಗೆ ತಂಡವೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ ಕಾರ್ಕಳದ ಬಂಗ್ಲೆಗುಡ್ಡೆ ಜಂಕ್ಷನ್‌ನಲ್ಲಿ ಗುರುವಾರ ರಾತ್ರಿ ನಡೆದಿದೆ. ಹಲ್ಲೆಗೊಳಗಾದ ಯುವಕನನ್ನು ಫುಲ್ಕೇರಿ ನಿವಾಸಿ ಮೊಹ್ಸಿನ್ ಎಂದು ಗುರುತಿಸಲಾಗಿದೆ. ಗುರುವಾರ ರಾತ್ರಿ ಬಂಗ್ಲೆಗುಡ್ಡೆ ಜಂಕ್ಷನ್ ನಲ್ಲಿ ನಿಂತಿದ್ದಾಗ ಉಡುಪಿ ಜಿಲ್ಲಾ ಬಜರಂಗದಳದ ಮುಖಂಡ ಮಹೇಶ್ ಶೆಣೈ ನೇತೃತ್ವದಲ್ಲಿ ಬಂದ ಆರೇಳು ಮಂದಿಯ ತಂಡ ಮೊಹ್ಸಿನ್ ಮೇಲೆ ಮಾರಕಾಯುಧಗಳಿಂದ ಹಲ್ಲೆ ನಡೆಸಿದೆ ಎಂದು ಪೊಲೀಸ್ ದೂರು

ಕಾರ್ಕಳ: ಯುವಕನಿಗೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ತಂಡ ► ಗಾಯಾಳು ಯುವಕ ಆಸ್ಪತ್ರೆಗೆ Read More »

ಕರ್ನಾಟಕ
Scroll to Top