ಕರ್ನಾಟಕ

ರೈತರ ಸಾಲ ಮನ್ನಾ ಮಾಡಲು ಆಗ್ರಹಿಸಿ ನಾಳೆ ಕರ್ನಾಟಕ ಬಂದ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.11. ಕೇಂದ್ರ ಹಾಗೂ ರಾಜ್ಯ ಸರಕಾರಗಳು ರೈತರ ಸಾಲವನ್ನು ಮನ್ನಾ ಮಾಡಬೇಕು,‌ ಮಧ್ಯಪ್ರದೇಶದ ಮಂದಸೌರ್ ನಲ್ಲಿ ನಡೆದ ಗೋಲಿಬಾರ್ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯು ನಾಳೆ (ಜೂ.12 ನೇ ಸೋಮವಾರ) ರಾಜ್ಯ ಬಂದ್ ಗೆ ಕರೆ ನೀಡಿದೆ. ರೈತರ ನ್ಯಾಯಯುತ ಬೇಡಿಕೆಯನ್ನು ಈಡೇರಿಸಲು ಆಗ್ರಹಿಸಿ ರೈತರು ಮಧ್ಯಪ್ರದೇಶದ ಮಂದಸೌರ್ ನಲ್ಲಿ ಪ್ರತಿಭಟನೆ ಮಾಡುತ್ತಿದ್ದಾಗ ಪೊಲೀಸರು ಗೋಲಿಬಾರ್ ಮಾಡಿಸುವ ಮೂಲಕ ಹಲವು ರೈತರ ಸಾವಿಗೆ ಕಾರಣವಾಗಿದ್ದು, ಇದನ್ನು ಖಂಡಿಸಿ […]

ರೈತರ ಸಾಲ ಮನ್ನಾ ಮಾಡಲು ಆಗ್ರಹಿಸಿ ನಾಳೆ ಕರ್ನಾಟಕ ಬಂದ್ Read More »

ಕರ್ನಾಟಕ

ಹಳೇ ಕಾನೂನು ಬಳಸಿ ಎಂ.ಆರ್.ಪಿ.ಎಲ್.ಗೆ ಭೂಸ್ವಾಧೀನ: ಮುಖ್ಯಮಂತ್ರಿಗೆ ದೂರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.08. ಕೆಐಎಡಿಬಿಯು ಹಳೇ ಕಾನೂನನ್ನು ಬಳಕೆ ಮಾಡಿಕೊಂಡು ಎಂ ಆರ್ ಪಿಎಲ್ ವಿಸ್ತರಣೆಗಾಗಿ ರೈತರ ಕೃಷಿ ಭೂಮಿಯನ್ನು ಭೂಸ್ವಾಧೀನ ಮಾಡುತ್ತಿದೆ ಎಂದು ಮಂಗಳೂರು ವಿಶೇಷ ಆರ್ಥಿಕ ವಲಯ ವಿರೋಧಿ ಹೋರಾಟಗಾರ್ತಿ ವಿದ್ಯಾ ದಿನಕರ್ ಮುಖ್ಯಮಂತ್ರಿಗೆ ದೂರು ನೀಡಿದ್ದಾರೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿಯನ್ನು ಭೇಟಿಯಾದ ವಿದ್ಯಾ ದಿನಕರ್ ನೇತೃತ್ವದ ನಿಯೋಗ, ಹಳೇ ಕಾನೂನನ್ನು ಬಳಕೆ ಮಾಡಿಕೊಂಡು ಭೂಸ್ವಾಧೀನ ಮಾಡಬಾರದು ಎಂದು ಈಗಾಗಲೇ ಹೈಕೋರ್ಟ್ ಆದೇಶ ನೀಡಿದೆ. ಯುಪಿಎ ಸರಕಾರ 2013 ರಲ್ಲಿ ಹೊಸ ಭೂಸ್ವಾಧೀನ ಕಾಯ್ದೆಯನ್ನು ಜಾರಿಗೆ

ಹಳೇ ಕಾನೂನು ಬಳಸಿ ಎಂ.ಆರ್.ಪಿ.ಎಲ್.ಗೆ ಭೂಸ್ವಾಧೀನ: ಮುಖ್ಯಮಂತ್ರಿಗೆ ದೂರು Read More »

ಕರ್ನಾಟಕ

ಬಸ್ – ಲಾರಿ ಡಿಕ್ಕಿ: 7 ಜನ ಗಂಭೀರ

(ನ್ಯೂಸ್ ಕಡಬ) newskadaba.com ಭಟ್ಕಳ, ಜೂ.07. ಖಾಸಗಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ 7 ಜನರು ಗಂಭೀರವಾಗಿ ಗಾಯಗೊಂಡ ಘಟನೆ ಭಟ್ಕಳ ತಾಲೂಕಿನ ಬೆಳಕೆ ಬಳಿ ನಡೆದಿದೆ. ವಿ.ಆರ್.ಎಲ್. ಬಸ್ ಸಂಸ್ಥೆಗೆ ಸೇರಿದ ವೋಲ್ವೊ ಬಸ್ ಇದಾಗಿದ್ದು, ಬೆಳಗಾವಿಯಿಂದ ಮಂಗಳೂರಿನತ್ತ ತೆರಳುತ್ತಿತ್ತು ಎನ್ನಲಾಗಿದೆ. ಅಪಘಾತದಲ್ಲಿ ಹಲವರಿಗೆ ಗಾಯಗಳಾಗಿದ್ದು, ಬಸ್ ಚಾಲಕ ಸೇರಿದಂತೆ 7 ಜನರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸ್ – ಲಾರಿ ಡಿಕ್ಕಿ: 7 ಜನ ಗಂಭೀರ Read More »

ಕರ್ನಾಟಕ

ಲೂಟಿಕೋರ ಖಾಸಗಿ ಆಸ್ಪತ್ರೆಗಳಿಗೆ ಕಡಿವಾಣ: ರಮೇಶ್‌ಕುಮಾರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.6. ಬಡ ಜನರನ್ನು ಲೂಟಿ ಮಾಡುತ್ತಿರುವ ಖಾಸಗಿ ಆಸ್ಪತ್ರೆಗಳಿಗೆ ಎರಡು ವಾರಗಳಲ್ಲಿ ಕಡಿವಾಣ ಹಾಕಲಾಗುವುದು ಎಂದು ಆರೋಗ್ಯ ಸಚಿವ ಕೆ.ಆರ್.ರಮೇಶ್ ಕುಮಾರ್‌ ಎಚ್ಚರಿಕೆ ನೀಡಿದ್ದಾರೆ. ಅವರು ಮಂಗಳವಾರ ನಗರದ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಕಾಕ್ಲಿಯಾರ್ ಇಂಪ್ಲಾಂಟ್ ಯೋಜನೆಗೆ ಚಾಲನೆ ಹಾಗೂ 25 ಹಾಸಿಗೆಗಳ ಡಯಾಲಿಸಿಸ್ ಘಟಕಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ಖಾಸಗಿ ಆಸ್ಪತ್ರೆಗಳು ಜನರಿಂದ ಚಿಕಿತ್ಸೆಗಾಗಿ ದುಪ್ಪಟ್ಟು ಹಣವನ್ನು ಲೂಟಿಮಾಡುತ್ತಿದ್ದು, ಇದು ನಮ್ಮ ಗಮನಕ್ಕೂ ಬಂದಿದೆ. ಈ ಸಂಬಂಧ ಸದ್ಯದಲ್ಲೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ

ಲೂಟಿಕೋರ ಖಾಸಗಿ ಆಸ್ಪತ್ರೆಗಳಿಗೆ ಕಡಿವಾಣ: ರಮೇಶ್‌ಕುಮಾರ್ Read More »

ಕರ್ನಾಟಕ

ಚಿಕ್ಕಮಗಳೂರು: ಮೂವರು ಶಂಕಿತ ನಕ್ಸಲರು ಮುಖ್ಯವಾಹಿನಿಗೆ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜೂ.5. ಜಿಲ್ಲೆಯ ಕಾಡಿನಲ್ಲಿ ನಕ್ಸಲ್ ಚಟುವಟಿಕೆಯಲ್ಲಿ ಸಕ್ರೀಯರಾಗಿದ್ದರು ಎನ್ನಲಾದ ಮೂವರು ಶಂಕಿತ ನಕ್ಸಲರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚಿಕ್ಕಮಗಳೂರು ಜಿಲ್ಲಾಡಳಿತ ಹಾಗೂ ಎಡಪಂಥೀಯ ಶರಣಾಗತ ಸಮಿತಿಯ ಎದುರು ಸಮಾಜದ ಮುಖ್ಯವಾಹಿನಿ ಪ್ರವೇಶಿಸಿದ್ದಾರೆ. ಮೂಡಿಗೆರೆ ತಾಲೂಕಿನ ಕಳಸ ಬಳಿಯ ಹಳುವಳ್ಳಿ ಗ್ರಾಮದ ಜರಿಮನೆ ಎಂಬಲ್ಲಿನ ಕನ್ಯಾಕುಮಾರಿ ಅಲಿಯಾಸ್ ಸುವರ್ಣ (30), ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದ ಚೆನ್ನಮ್ಮ ಅಲಿಯಾಸ್ ಸುಮಾ(32) ಮತ್ತು ಬೆಂಗಳೂರು ಬನ್ನೇರುಘಟ್ಟ ರಸ್ತೆಯ ಕಂಟ್ರಕ್ಲಬ್ ರಸ್ತೆಯ ಶಿವು ಅಲಿಯಸ್ ಜ್ಞಾನದೇವು(31)

ಚಿಕ್ಕಮಗಳೂರು: ಮೂವರು ಶಂಕಿತ ನಕ್ಸಲರು ಮುಖ್ಯವಾಹಿನಿಗೆ Read More »

ಕರ್ನಾಟಕ

ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಮಂಡನೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

  (ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.5.  ಮೂಢ ನಂಬಿಕೆ ಪ್ರತಿಬಂಧಕ ಕಾಯ್ದೆಯನ್ನು ವಿಧಾನಸಭೆಯಲ್ಲಿ ಮಂಡಿಸಲು ರಾಜ್ಯ ಸರಕಾರವು ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ. ಅವರು ಸೋಮವಾರ ವಿಧಾನಸಭೆಯಲ್ಲಿ ಭೋಜನ ವಿರಾಮದ ಬಳಿಕ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ನಿಯಮ 69ರಡಿಯಲ್ಲಿ ಬರಗಾಲದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡುವ ವೇಳೆ ಮಧ್ಯಪ್ರವೇಶಿಸಿ ಈ ಹೇಳಿಕೆ ನೀಡಿದರು. ಮೂಢನಂಬಿಕೆ ಪ್ರತಿಬಂಧಕ ಕಾಯ್ದೆಯನ್ನು ವಿಧಾನಸಭೆಯಲ್ಲಿ ಮಂಡನೆ ಮಾಡಿದ ಬಳಿಕ ನಂಬಿಕೆ ಹಾಗೂ ಮೂಢ ನಂಬಿಕೆಗಳ ಕುರಿತು ಚರ್ಚೆ ಮಾಡೋಣ.

ಮೂಢನಂಬಿಕೆ ಪ್ರತಿಬಂಧಕ ಕಾಯ್ದೆ ಮಂಡನೆ: ಮುಖ್ಯಮಂತ್ರಿ ಸಿದ್ಧರಾಮಯ್ಯ Read More »

ಕರ್ನಾಟಕ
Scroll to Top