ಕರ್ನಾಟಕ

ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ವಿಭಾಗದ 55 ಕಿ.ಮೀ. ರೈಲು ಮಾರ್ಗದ ವಿದ್ಯುದೀಕರಣ ಕಾರ್ಯ ಪೂರ್ಣ

(ನ್ಯೂಸ್‌ ಕಡಬ) newskadaba.com, ಜ.05 ಸಕಲೇಶಪುರ : ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ವಿಭಾಗದ 55 ಕಿ.ಮೀ. ರೈಲು ಮಾರ್ಗದ ವಿದ್ಯುದೀಕರಣ ಕಾರ್ಯ ಪೂರ್ಣಗೊಂಡಿದ್ದು, ರೈಲುಗಳ ಸಂಖ್ಯೆ ಹೆಚ್ಚಾಗುವುದರಿಂದ ಪ್ರಯಾಣಿಕರು ಹಾಗೂ ವ್ಯಾಪಾರ ವಹಿವಾಟು, ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಗಲಿದೆ ಎಂಬ ನಿರೀಕ್ಷೆ ಮೂಡಿದೆ. ಈ ಭಾಗದ ಜನರ ದೀರ್ಘಕಾಲದ ರೈಲ್ವೆ ಮೂಲಸೌಕರ್ಯದ ಬೇಡಿಕೆ ಕೊನೆಗೂ ಈಡೇರಿದಂತಾಗಿದ್ದು, ಪ್ರಸ್ತುತ 10 ರೈಲುಗಳು ಸಂಚರಿಸುತ್ತಿದೆ. ಈಗ ರೈಲುಗಳ ಸಂಖ್ಯೆ ಹೆಚ್ಚಾಗಲಿದೆ. ಇದರಿಂದ ಪ್ರಯಾಣಿಕರಿಗೆ ಸುಗಮ ಸಂಚಾರಕ್ಕೆ ಅನುಕೂಲವಾಗುವುದಲ್ಲದೆ ವ್ಯಾಪಾರಸ್ಥರ ಆರ್ಥಿಕ ಚಟುವಟಿಕೆಗೆ ಸಹಕಾರಿಯಾಗಲಿದೆ. ಅಲ್ಲದೆ ಪ್ರವಾಸಿ ತಾಣಗಳಿಗೂ […]

ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ವಿಭಾಗದ 55 ಕಿ.ಮೀ. ರೈಲು ಮಾರ್ಗದ ವಿದ್ಯುದೀಕರಣ ಕಾರ್ಯ ಪೂರ್ಣ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com, ಜ.05: ಮುಂದಿನ 2 ದಿನಗಳ ಕಾಲ ರಾಜ್ಯದ ಕೆಲವೆಡೆ ತಾಪಮಾನ ಕುಸಿಯಲಿದ್ದು, ಚಳಿ ಹೆಚ್ಚಾಗಿರಲಿದೆ. ಸಂಜೆ ಹಾಗೂ ಮುಂಜಾನೆಯ ವೇಳೆ ಹೆಚ್ಚಿನ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲಲ್ಲಿ ಒಣಹವೆ ಇರಲಿದೆ ಎಂದು ಇಲಾಖೆ ವರದಿ ಮಾಡಿದೆ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ 71 ಲಕ್ಷ ರೂ.ವಂಚನೆ ಜಂಟಿ ವ್ಯವಸ್ಥಾಪಕರ ವಿರುದ್ಧ ಕೇಸ್ ದಾಖಲು

(ನ್ಯೂಸ್‌ ಕಡಬ) newskadaba.com, ಜ.03 :ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ ನಗದು ಮತ್ತು ಚಿನ್ನವನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ದೂರಿನ ಪ್ರಕಾರ, ಈ ಘಟನೆ ಸೆಪ್ಟೆಂಬರ್ 4, 2023 ರಿಂದ ಡಿಸೆಂಬರ್ 19, 2025 ರ ಅವಧಿಯಲ್ಲಿ ಆರೋಪಿ ಪುಲುಗುಜ್ಜು ನಿವಾಸಿ ಸುಬ್ರಹ್ಮಣ್ಯಂ (30) ಬ್ಯಾಂಕ್ ಆಫ್ ಬರೋಡಾ, ಪೆರ್ನೆ ಶಾಖೆಯಲ್ಲಿ ಜಂಟಿ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸುತ್ತಿದ್ದರು ಫೆಬ್ರವರಿ 6, 2024 ರಿಂದ ಡಿಸೆಂಬರ್ 16,

ಬಂಟ್ವಾಳ: ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿ 71 ಲಕ್ಷ ರೂ.ವಂಚನೆ ಜಂಟಿ ವ್ಯವಸ್ಥಾಪಕರ ವಿರುದ್ಧ ಕೇಸ್ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ದರದಲ್ಲಿ ಭಾರಿ ಇಳಿಕೆ

(ನ್ಯೂಸ್‌ ಕಡಬ) newskadaba.com, ನವದೆಹಲಿ, ಜ. 3: ಹೊಸ ವರ್ಷದಲ್ಲಿ ಏರುತ್ತಲೇ ಇರುವ ಚಿನ್ನದ ದರ ಶನಿವಾರ (ಜನವರಿ 3) ಇಳಿಕೆಯಾಗಿದೆ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್‌ 1 ಗ್ರಾಂ ಚಿನ್ನದ ಬೆಲೆಯಲ್ಲಿ 35 ರುಪಾಯಿ ಕಡಿಮೆಯಾಗಿದ್ದು, 12,450 ರುಪಾಯಿಗೆ ತಲುಪಿದೆ. 24 ಕ್ಯಾರಟ್‌ 1 ಗ್ರಾಂ ಚಿನ್ನದ ದರದಲ್ಲಿ 38 ರುಪಾಯಿ ಇಳಿಕೆಯಾಗಿ, 13,582 ರುಪಾಯಿ ಆಗಿದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 99,600 ರುಪಾಯಿ ಬೆಲೆ ಬಾಳಿದರೆ, 10 ಗ್ರಾಂಗೆ ನೀವು 1,24,500 ರುಪಾಯಿ

ಚಿನ್ನದ ದರದಲ್ಲಿ ಭಾರಿ ಇಳಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಜ.03: ಮುಂದಿನ 2-3 ದಿನಗಳ ಕಾಲ ರಾಜ್ಯದ ಕೆಲವೆಡೆ ತಾಪಮಾನ ಕುಸಿಯಲಿದ್ದು, ಚಳಿ ಹೆಚ್ಚಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಒಳಹವೆ ಇರಲಿದೆ ಎಂದು ವರದಿ ಮಾಡಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ

ರಾಜ್ಯದ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜರ್ಮನಿಯ ಮನೆಯಲ್ಲಿ ಅಗ್ನಿ ಅನಾಹುತ ಹೊಸ ವರ್ಷದಂದೇ ಭಾರತೀಯ ವಿದ್ಯಾರ್ಥಿ ಸಾವು

(ನ್ಯೂಸ್‌ ಕಡಬ) newskadaba.com,ಜ.02 ಬರ್ಲಿನ್:    ಜರ್ಮನಿಯಲ್ಲಿರುವ ನಿವಾಸದಲ್ಲಿ ಅಗ್ನಿ ಅವಘಡ ಉಂಟಾಗಿ ಹೊಸ ವರ್ಷದ ದಿನವೇ ಭಾರತೀಯ ವಿದ್ಯಾರ್ಥಿ ಮೃತಪಟ್ಟಿದ್ದು, ಕುಟುಂಬಸ್ಥರಿಗೆ ಆಘಾತ ಉಂಟಾಗಿದೆ.ತಡರಾತ್ರಿ ಸಂಭವಿಸಿದ ಬೆಂಕಿ ಅಪಘಡದಲ್ಲಿ ತೆಲಂಗಾಣದ ಹೃತಿಕ್ ರೆಡ್ಡಿ(25) ಸಾವನ್ನಪ್ಪಿದ್ದಾರೆ. ವೇಗವಾಗಿ ಹರಡುತ್ತಿದ್ದ ಬೆಂಕಿ ಮತ್ತು ದಟ್ಟ ಹೊಗೆಯಿಂದ ತಪ್ಪಿಸಿಕೊಳ್ಳಲು ಹೃತಿಕ್ ಬರ್ಲಿನ್‌ನ ಅಪಾರ್ಟ್ಮೆಂಟ್‌ನ ಮೇಲಿನ ಮಹಡಿಯಿಂದ ಹಾರಿದ್ದ. ಪರಿಣಾಮ ಆತನ ತಲೆಗೆ ತೀವ್ರ ಪೆಟ್ಟಾಗಿತ್ತು. ಹೃತಿಕ್ ನನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಹೊಸ ವರ್ಷದ ದಿನದಂದೇ ಈ

ಜರ್ಮನಿಯ ಮನೆಯಲ್ಲಿ ಅಗ್ನಿ ಅನಾಹುತ ಹೊಸ ವರ್ಷದಂದೇ ಭಾರತೀಯ ವಿದ್ಯಾರ್ಥಿ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ಪ್ರಧಾನಿ ಮೋದಿಯು ಸುರೇಶ್ ಕುಮಾರ್ ಅವರ ಸಾಹಸಕ್ಕೆ ಮೆಚ್ಚುಗೆ

(ನ್ಯೂಸ್‌ ಕಡಬ) newskadaba.com,ಜ.02 ಬೆಂಗಳೂರು: 70ನೇ ವಯಸ್ಸಿನಲ್ಲೂ ಬೆಂಗಳೂರಿನಿಂದ ಸುಮಾರು 655 ಕಿ.ಮೀ. ದೂರದ ಕನ್ಯಾಕುಮಾರಿಗೆ ಸೈಕಲ್‌ ಯಾತ್ರೆ ನಡೆಸಿದ್ದ ಮಾಜಿ ಸಚಿವ, ಬಿಜೆಪಿ ಶಾಸಕ ಎಸ್‌.ಸುರೇಶ್‌ಕುಮಾರ್ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ಗುರುವಾರ(ಜ.01) ದೂರವಾಣಿ ಮೂಲಕ ಸುರೇಶ್‌ಕುಮಾರ್ ಅವರನ್ನು ಸಂಪರ್ಕಿಸಿರುವ ಪ್ರಧಾನಿ ಮೋದಿ ಅವರು ಸೈಕಲ್‌ ಯಾತ್ರೆಯ ಅನುಭವ ಪಡೆದುಕೊಂಡು, ಪ್ರಶಂಸೆ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಖುದ್ದು ಸುರೇಶ್‌ಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು, ‘ಅತ್ಯಂತ ಸಂತಸದ ಸಂಗತಿ. ಪ್ರಧಾನಿ ಮೋದಿ ಅವರು

ಬೆಂಗಳೂರಿಂದ ಕನ್ಯಾಕುಮಾರಿಗೆ ಸೈಕಲ್ ಸವಾರಿ ಪ್ರಧಾನಿ ಮೋದಿಯು ಸುರೇಶ್ ಕುಮಾರ್ ಅವರ ಸಾಹಸಕ್ಕೆ ಮೆಚ್ಚುಗೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಪು: ಸೇತುವೆಗೆ ಬೈಕ್ ಢಿಕ್ಕಿ; ಸವಾರ ಸ್ಥಳದಲ್ಲೇ ಸಾವು

(ನ್ಯೂಸ್‌ ಕಡಬ) newskadaba.com,ಜ.02 ಕಾಪು: ಉದ್ಯಾವರ ರಾಷ್ಟ್ರೀಯ ಹೆದ್ದಾರಿ 66ರ ಸೇತುವೆಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಸವಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶುಕ್ರವಾರ ನಸುಕಿನ ವೇಳೆ 2.30ರ ಸುಮಾರಿಗೆ ಸಂಭವಿಸಿದೆ. ಮೃತರನ್ನು ಸುಬ್ರಹ್ಮಣ್ಯದ ಯುವರಾಜ್ ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಯಿಂದ ಉಡುಪಿ ಕಡೆ ತೆರಳುತ್ತಿದ್ದ ಬೈಕ್ ಅತಿ ವೇಗ ಹಾಗೂ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಸೇತುವೆಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಪರಿಣಾಮ ರಸ್ತೆಗೆ ಬಿದ್ದ ಸವಾರ ಯುವರಾಜ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.

ಕಾಪು: ಸೇತುವೆಗೆ ಬೈಕ್ ಢಿಕ್ಕಿ; ಸವಾರ ಸ್ಥಳದಲ್ಲೇ ಸಾವು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಕ್ಕೆ:ತಪಸ್ಯಾಗೆ ರಾಷ್ಟç ಮಟ್ಟದಲ್ಲಿ ಚಿನ್ನದ ಪದಕ

(ನ್ಯೂಸ್‌ ಕಡಬ) newskadaba.com,ಜ.02: ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ತಪಸ್ಯಾ.ಎಸ್.ನಾಯಕ್ ರಾಷ್ಟç ಮಟ್ಟದ 69ನೇ ನೆಟ್ ಬಾಲ್ ಪಂದ್ಯಾಟದ ಬಾಲಕಿಯರ ವಿಭಾಗದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ರಾಷ್ಟç ಮಟ್ಟದ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ.ಇದು ಗ್ರಾಮೀಣ ಪ್ರದೇಶ ಕುಕ್ಕೆಗೆ ಹೆಮ್ಮೆಯ ಗರಿಯಾಗಿದೆ. 69ನೇ ರಾಷ್ಟç ಮಟ್ಟದ ನೆಟ್‌ಬಾಲ್ ಪಂದ್ಯಾಟದಲ್ಲಿ ಕರ್ನಾಟಕ ತಂಡವು ಕೇರಳವನ್ನು 4 ಅಂಕಗಳಿAದ ಸೋಲಿಸಿ

ಕುಕ್ಕೆ:ತಪಸ್ಯಾಗೆ ರಾಷ್ಟç ಮಟ್ಟದಲ್ಲಿ ಚಿನ್ನದ ಪದಕ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,ಜ.02: ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಾಮರಾಜನಗರ, ಕೊಡಗು, ಮಂಡ್ಯ ಹಾಗೂ ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ವರದಿ ತಿಳಿಸಿದೆ. ಬೆಂಗಳೂರಿನಲ್ಲಿ ಜ.3ರವರೆಗೂ ಚಳಿ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27

ಇಂದಿನ ಹವಾಮಾನ ವರದಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top