ಕರ್ನಾಟಕ

ಕೋಟ: ಯುವಕರ ನಡುವೆ ಹೊಡೆದಾಟ ;ಒಬ್ಬನ ಕೊಲೆಯಲ್ಲಿ ಅಂತ್ಯ, 4 ಮಂದಿ ಆರೆಸ್ಟ್

(ನ್ಯೂಸ್‌ ಕಡಬ) newskadaba.com,  ಡಿ.15 ಕೋಟ: ಕ್ಷುಲ್ಲಕ ಕಾರಣಕ್ಕೆ ಯುವಕರ ನಡುವೆ ಹೊಡೆದಾಟ ನಡೆದು ಓರ್ವ ಸಾವನ್ನಪ್ಪಿದ ಘಟನೆ ಬ್ರಹ್ಮಾವರ ತಾಲೂಕಿನ ಕೋಟತಟ್ಟು ಪಡುಕರೆಯ ಐದು ಸೆಂಟ್ಸ್ ಬಳಿ ಭಾನುವಾರ ತಡರಾತ್ರಿ ನಡೆದಿದೆ. ಮೃತನನ್ನು ಪಡುಕರೆ ಸಂತೋಷ್ ಮೊಗವೀರ (30) ಎಂದು ಗುರುತಿಸಲಾಗಿದೆ.ಶಬರಿಮಲೆಗೆ ಹೋಗಿ ಬಂದಿದ್ದ ಯುವಕರು ಭಾನುವಾರ ರಾತ್ರಿ ಎಣ್ಣೆ ಪಾರ್ಟಿ ಮಾಡಿ ಕ್ಷುಲ್ಲಕ ವಿಚಾರಕ್ಕೆ ಹೊಡೆದಾಡಿಕೊಂಡಿದ್ದಾರೆ. ಸಂತೋಷ ಮೊಗವೀರನಿಗೆ ಮಾರಣಾಂತಿಕ ಹಲ್ಲೆಯಾಗಿ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ ತಕ್ಷಣ ಸ್ಥಳೀಯರ ಸಹಕಾರದಿಂದ ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಸೇರಿಸಿರುತ್ತಾರೆ. […]

ಕೋಟ: ಯುವಕರ ನಡುವೆ ಹೊಡೆದಾಟ ;ಒಬ್ಬನ ಕೊಲೆಯಲ್ಲಿ ಅಂತ್ಯ, 4 ಮಂದಿ ಆರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಇಂದಿನ ಚಿನ್ನದ ದರ

(ನ್ಯೂಸ್‌ ಕಡಬ) newskadaba.com,  ಡಿ.15:  ಇಂದು, ಡಿಸೆಂಬರ್ 15, 2025 ರಂದು ಬೆಂಗಳೂರಿನಲ್ಲಿ ಚಿನ್ನದ ದರ ಹೆಚ್ಚಾಗಿದೆ, 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ₹13,473 ಮತ್ತು 22 ಕ್ಯಾರೆಟ್ ಚಿನ್ನದ ಬೆಲೆ ₹12,350 ಬೆಳ್ಳಿ ದರವೂ ₹201 ಕ್ಕೆ ಏರಿಕೆಯಾಗಿದೆ. ಭಾರತದಾದ್ಯಂತ ಚಿನ್ನದ ದರಗಳಲ್ಲಿ ಏರಿಳಿತಗಳಿದ್ದು, ಹೂಡಿಕೆದಾರರು ಚಿನ್ನವನ್ನು ಮುಖ್ಯ ಹೂಡಿಕೆಯಾಗಿ ಪರಿಗಣಿಸುತ್ತಿದ್ದಾರೆ. ಇಂದಿನ ಚಿನ್ನದ ಬೆಲೆ (ಬೆಂಗಳೂರು): 24 ಕ್ಯಾರೆಟ್ (1 ಗ್ರಾಂ): ₹13,473 22 ಕ್ಯಾರೆಟ್ (1 ಗ್ರಾಂ): ₹12,350 ಇಂದಿನ

ಇಂದಿನ ಚಿನ್ನದ ದರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಶಿಕ್ಷಣಕ್ಕೆ ಹೆಸರಾಗಿರುವ ಮಂಗಳೂರು, ಇನ್ನೊಂದು ಮಗ್ಗುಲಲ್ಲಿ ಡ್ರಗ್ಸ್‌ ಮಾರುಕಟ್ಟೆಯಾಗಿಯೂ ಕುಖ್ಯಾತಿ ಗಳಿಸಿದೆ!…

(ನ್ಯೂಸ್‌ ಕಡಬ) newskadaba.com,  ಡಿ.15 : ರಾಜ್ಯದಲ್ಲಿ ಬೆಂಗಳೂರಿನಿಂದಾಚೆಗೆ ಮಾದಕ ದ್ರವ್ಯದ ಮಾರಕ ಜಾಲ ದೊಡ್ಡಮಟ್ಟದಲ್ಲಿ ವಿಸ್ತರಿಸಿರುವುದು ಮಂಗಳೂರಿನಲ್ಲಿ. ಶಿಕ್ಷಣಕ್ಕೆ ಹೆಸರಾಗಿರುವ ಮಂಗಳೂರು, ಇನ್ನೊಂದು ಮಗ್ಗುಲಲ್ಲಿ ಡ್ರಗ್ಸ್‌ ಮಾರುಕಟ್ಟೆಯಾಗಿಯೂ ಕುಖ್ಯಾತಿ ಗಳಿಸಿದೆ!. ಆದರೆ, ಕಳೆದ ಕೆಲವು ತಿಂಗಳುಗಳಿಂದ ಜಿಲ್ಲೆಯ ಇಡೀ ಪೊಲೀಸ್‌ ಇಲಾಖೆ ಡ್ರಗ್ಸ್‌ ವಿರುದ್ಧ ಆಖಾಡಕ್ಕಿಳಿದು ನೇರ ಸಮರಕ್ಕೆ ಧುಮುಕಿದ್ದು, ಡ್ರಗ್ಸ್‌ ಪೆಡ್ಲರ್‌ಗಳಲ್ಲಿ ನಡುಕ ಹುಟ್ಟಿಸಿದೆ. ಈ ಕಾರಣದಿಂದ ದೊಡ್ಡಮಟ್ಟದ ಧನಾತ್ಮಕ ಬದಲಾವಣೆ ಜಿಲ್ಲೆಯಲ್ಲಿ ಕಂಡು ಬಂದಿದೆ.ಆದರೆ, ಕಳೆದೊಂದು ದಶಕದಿಂದ ವಿಸ್ತಾರವಾಗಿ ಚಾಚಿಕೊಂಡಿರುವ ಮಾದಕ ದ್ರವ್ಯದ

ಮಂಗಳೂರು: ಶಿಕ್ಷಣಕ್ಕೆ ಹೆಸರಾಗಿರುವ ಮಂಗಳೂರು, ಇನ್ನೊಂದು ಮಗ್ಗುಲಲ್ಲಿ ಡ್ರಗ್ಸ್‌ ಮಾರುಕಟ್ಟೆಯಾಗಿಯೂ ಕುಖ್ಯಾತಿ ಗಳಿಸಿದೆ!… Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ನಲ್ಲಿ ಅನ್ಯ ಧರ್ಮದ ಬಗ್ಗೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪೋಸ್ಟ್ –ಆರೋಪಿ ಬಂಧನ

(ನ್ಯೂಸ್‌ ಕಡಬ) newskadaba.com,  ಡಿ.15 ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ-ಪ್ರಚೋದನಕಾರಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಬಜಪೆ ಠಾಣಾ ಪೊಲೀಸರು ಭಾನುವಾರ ವಶಕ್ಕೆ ಪಡೆದಿದ್ದಾರೆ.ಮಂಗಳೂರು, ಉಳಾಯಿಬೆಟ್ಟು, ಕೊಟ್ಟಾನ ಹೌಸ್ ನ ಪ್ರಸ್ತುತ ಬಂಟ್ವಾಳ ತಾಲೂಕಿನ ಪಾಣೆ ಮಂಗಳೂರು, ಸಜಿಪಮುನ್ನೂರು ಗ್ರಾಮದ ಸೌದಿ ಅರೆಬಿಯಾದಲ್ಲಿರುವ ಅಬ್ದುಲ್ ಖಾದರ್ ನೇಹಾದ್ (27) ಆರೋಪಿಯಾಗಿರುತ್ತಾನೆ. ಇದೇ ಅಕ್ಟೋಬರ್ 11ರಂದು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ನಲ್ಲಿ  _sdpi_2025_ID ಎಂಬ ಖಾತೆಯಲ್ಲಿ ಅನ್ಯ ಧರ್ಮದ ಬಗ್ಗೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪೋಸ್ಟ್ ಹಾಕಿದ ಬಗ್ಗೆ ಬಜಪೆ ಪೊಲೀಸ್

ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ನಲ್ಲಿ ಅನ್ಯ ಧರ್ಮದ ಬಗ್ಗೆ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಪೋಸ್ಟ್ –ಆರೋಪಿ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಂಗ್ರೆಸ್ ಶಾಸಕ ಹಿರಿಯ ನಾಯಕಶಾಮನೂರು ಶಿವಶಂಕರಪ್ಪ ನಿಧನ

(ನ್ಯೂಸ್‌ ಕಡಬ) newskadaba.com,  ಡಿ.15 ಬೆಂಗಳೂರು : ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ ವಿಧಿವಶರಾಗಿದ್ದಾರೆ. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರಿಗೆ 94 ವರ್ಷ ವಯಸ್ಸಾಗಿತ್ತು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ಕೊನೆಯುಸಿರೆಳೆದಿದ್ದಾರೆ. ಭಾರತದಲ್ಲೇ ಹಿರಿಯ ಶಾಸಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಆದರೆ ವಯೋಸಹಜ ಅನಾರೋಗ್ಯದ ಹಿನ್ನೆಲೆ ಕಳೆ ದಿನಗಳಿಂದ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಗೆ

ಕಾಂಗ್ರೆಸ್ ಶಾಸಕ ಹಿರಿಯ ನಾಯಕಶಾಮನೂರು ಶಿವಶಂಕರಪ್ಪ ನಿಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ ; ಆರೆಂಜ್ ಅಲರ್ಟ್

(ನ್ಯೂಸ್‌ ಕಡಬ) newskadaba.com,  ಡಿ.15 ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಮೈಕೊರೆಯುವ ಚಳಿ ಜನರನ್ನು ಕಂಗಾಲಾಗಿಸಿದೆ. ಕಳೆದ ಎರಡು ದಿನಗಳಿಂದ ನಗರದಲ್ಲಿ ಕನಿಷ್ಠ ತಾಪಮಾನ 14–15 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಹೆಚ್‌ಎಎಲ್ ವ್ಯಾಪ್ತಿಯಲ್ಲಿ 13 ಡಿಗ್ರಿ ಸೆಲ್ಸಿಯಸ್ ತನಕ ತಾಪಮಾನ ಇಳಿಕೆಯಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 2 ದಿನಗಳಲ್ಲಿ ಶೀತದ ಅಲೆಗಳು ಉಂಟಾಗುವ ಸಾಧ್ಯತೆಯಿದ್ದು, ಬಾಗಲಕೋಟೆಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಗದಗ, ಚಿಕ್ಕಮಗಳೂರು ಹಾಗೂ ಮೈಸೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಲಾಲ್​ಬಾಗ್​ಗೆ ವಾಕಿಂಗ್​ ಬರುವವರ ಸಂಖ್ಯೆ ಶೇ.50

ಇಂದಿನ ಹವಾಮಾನ ವರದಿ ; ಆರೆಂಜ್ ಅಲರ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದ ತೆಂಗು ಬೆಳೆಗಾರರಿಗೆ ಸಿಹಿ ಸುದ್ದಿ

(ನ್ಯೂಸ್‌ ಕಡಬ) newskadaba.com,  ಡಿ.13: ಪ್ರಧಾನಿ ನರೇಂದ್ರಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟವು 2026ರ ಹಂಗಾಮಿನ ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಲು ಅನುಮೋದನೆ ನೀಡಿದ್ದು, ರಾಜ್ಯದ ರೈತರಿಗೆ ಮತ್ತೊಮೆ ಸಿಹಿ ಸುದ್ದಿ ನೀಡಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ತಿಳಿಸಿದ್ದಾರೆ. ಕರ್ನಾಟಕದ ತೆಂಗು ಬೆಳೆಗಾರರಿಗೆ ಮೋದಿ ಸರ್ಕಾರವು ಹೊಸವರ್ಷದ ಕೊಡುಗೆಯಾಗಿ ಕೊಬ್ಬರಿ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ ಮಾಡಿದೆ ಎಂದು ಹೇಳಿದ್ದಾರೆ. ಕೇಂದ್ರದ ಈ ನಿರ್ಧಾರದಿಂದಾಗಿ ರಾಜ್ಯದ ತೆಂಗು ಬೆಳೆಗಾರರಿಗೆ ಹೆಚ್ಚಿನ

ರಾಜ್ಯದ ತೆಂಗು ಬೆಳೆಗಾರರಿಗೆ ಸಿಹಿ ಸುದ್ದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿ: ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ಶೇಷಗಿರಿ ಭಟ್ ನ ಬಂಧನ, ಬಿಡುಗಡೆ

(ನ್ಯೂಸ್‌ ಕಡಬ) newskadaba.com,  ಡಿ.13 ಉಪ್ಪಿನಂಗಡಿ: ಜಾತಕ ತೋರಿಸಲು ಬಂದ ಯುವತಿಯೋರ್ವಳ ಹಿಂದೆ ಬಿದ್ದ ಜ್ಯೋತಿಷಿಯೊಬ್ಬ ಮದುವೆಯಾಗುವಂತೆ ನಿರಂತರ ಕಿರುಕುಳ ನೀಡಿದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರಿನಲ್ಲಿ ನಡೆದಿದೆ.ಮೂಲತಃ ಶಿರಸಿ ಮೂಲದವನಾದ, ಸ್ಥಳೀಯ ದೇವಸ್ಥಾನದಲ್ಲಿ ಕೆಲಸ ಮಾಡಿಕೊಂಡಿದ್ದ ಶೇಷಗಿರಿ ಭಟ್ ಆರೋಪಿ ಜ್ಯೋತಿಷಿ. ಸಂತ್ರಸ್ತ ಯುವತಿಯ ಮನೆಯವರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಈತನನ್ನು ಬಂಧಿಸಿದ್ದು, ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾನೆ. ತೆಕ್ಕಾರಿನ ಯುವತಿಯೊಬ್ಬಳ ಜಾತಕ ಪರಿಶೀಲಿಸಲು ಆಕೆಯ ಮನೆಯವರು ಶೇಷಗಿರಿ ಭಟ್ ಬಳಿಗೆ ಕರೆದುಕೊಂಡು ಹೋಗಿದ್ದರು. ಈ ವಿಚಾರವಾಗಿ

ಉಪ್ಪಿನಂಗಡಿ: ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ಶೇಷಗಿರಿ ಭಟ್ ನ ಬಂಧನ, ಬಿಡುಗಡೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹೊಸ Gen-Z ಅಂಚೆ ಕಚೇರಿ ಸ್ಥಾಪಿಸಿದ ಇಂಡಿಯಾ ಪೋಸ್ಟ್

(ನ್ಯೂಸ್‌ ಕಡಬ) newskadaba.com,  ಡಿ.13: ಅಂಚೆ ಕಚೇರಿಗಳನ್ನು ಉಳಿಸಲು ಹಾಗೂ ಮತ್ತೆ ಹೆಚ್ಚು ಹೆಚ್ಚು ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಹೊಸ ಯೋಜನೆ  ಒಂದನ್ನು  ಕೈಗೊಂಡಿದೆ. Gen Z (ಜೆನ್-ಜಿ) 1997 ರಿಂದ 2012 ರ ನಡುವೆ ಜನಿಸಿದ ತಲೆಮಾರಿಗಾಗಿ ಹೊಸ ಯೋಜನೆಯೊಂದನ್ನು ಅಂಚೆ ಕಚೇರಿ ಮೂಲಕ ಪರಿಚಯಿಸಿದೆ. ಡಿಸೆಂಬರ್ 9 ರಂದು ಇಂಡಿಯಾ ಪೋಸ್ಟ್ ಎರಡು ಆಧುನಿಕ ಮತ್ತು ವಿದ್ಯಾರ್ಥಿ ಕೇಂದ್ರಿತ Gen-Z ಅಂಚೆ ಕಚೇರಿಗಳನ್ನು ಸ್ಥಾಪಿಸಿದೆ. ಒಂದನ್ನು ಕೇರಳದ ಕೊಟ್ಟಾಯಂನ ಸಿಎಂಸಿ ಕಾಲೇಜು, ಇನ್ನೊಂದು ವಿಶಾಖಪಟ್ಟಣಂನ

ಹೊಸ Gen-Z ಅಂಚೆ ಕಚೇರಿ ಸ್ಥಾಪಿಸಿದ ಇಂಡಿಯಾ ಪೋಸ್ಟ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರಿನಿಂದ ಮಂಗಳೂರು, ಉಡುಪಿ, ಕಾರವಾರಕ್ಕೆ ವಂದೇ ಭಾರತ್ ರೈಲು

(ನ್ಯೂಸ್‌ ಕಡಬ) newskadaba.com,  ಡಿ.13 ಉಡುಪಿ: ಕರಾವಳಿ ಕರ್ನಾಟಕದ ರೈಲ್ವೆ ಪ್ರಯಾಣಿಕರ ಹಿತದೃಷ್ಟಿಯಿಂದ, ಘಾಟ್ ವಿಭಾಗದಲ್ಲಿ ವಿದ್ಯುದ್ದೀಕರಣ ಕಾರ್ಯ ಪೂರ್ಣಗೊಂಡ ನಂತರ ಬೆಂಗಳೂರಿನಿಂದ ಮಂಗಳೂರು, ಉಡುಪಿ ಮತ್ತು ಕಾರವಾರಕ್ಕೆ ವಂದೇ ಭಾರತ್ ಎಕ್ಸ್‌ಪ್ರೆಸ್ ಅನ್ನು ಓಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವರನ್ನು ಭೇಟಿಯಾಗಿ ಈ ಸಂಬಂಧ ಒಂದು ಮನವಿ ಪತ್ರವನ್ನು ಸಲ್ಲಿಸಿ, ಈ ರೈಲು ಮಾರ್ಗದಲ್ಲಿ

ಬೆಂಗಳೂರಿನಿಂದ ಮಂಗಳೂರು, ಉಡುಪಿ, ಕಾರವಾರಕ್ಕೆ ವಂದೇ ಭಾರತ್ ರೈಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top