ಕರ್ನಾಟಕ

ಒಮಾನ್‌ನಲ್ಲಿ ದೂಷಿತ ವಾಹನ ಅಪಘಾತ: ಮೂಡುಬಿದಿರೆ ಮೂಲದ ಯುವಕ ದುರಂತ ಮೃತ್ಯು

(ನ್ಯೂಸ್‌ ಕಡಬ) newskadaba.com  ಜು.29:ಒಮಾನ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂಡುಬಿದಿರೆ ಸಮೀಪದ ಸಾಣೂರು ಮೂಲಗುತ್ತು ನಿವಾಸಿ ರಾಜವರ್ಮ ಜೈನ್ (33) ಅವರು ಮೃತಪಟ್ಟಿದ್ದಾರೆ. ಒಮಾನ್‌ನ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದ ರಾಜವರ್ಮ, ಸಹೋದ್ಯೋಗಿ ವಾಹನವನ್ನು ರಿವರ್ಸ್ ವೇಳೆ ಆಕಸ್ಮಿಕವಾಗಿ ಚಕ್ರದಡಿಗೆ ಸಿಲುಕಿ ಗಂಭೀರ ಗಾಯಗೊಂಡು ಸ್ಥಳದಲ್ಲೇ ಅಸುನೀಗಿದ್ದಾರೆ. ಮೃತ ರಾಜವರ್ಮ ಜೈನ್ ಅವರು ಪತ್ನಿ, ಪುತ್ರಿ ಹಾಗೂ ಅಪಾರ ಕುಟುಂಬಸ್ಥರನ್ನು ಅಗಲಿದ್ದಾರೆ.

ಒಮಾನ್‌ನಲ್ಲಿ ದೂಷಿತ ವಾಹನ ಅಪಘಾತ: ಮೂಡುಬಿದಿರೆ ಮೂಲದ ಯುವಕ ದುರಂತ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರಾವಳಿಯಲ್ಲಿ ತೀವ್ರಗೊಂಡ ಪುಷ್ಯ ನಕ್ಷತ್ರದ ಮಳೆ: ಮುನ್ನೆಚ್ಚರಿಕೆ ವಹಿಸಲು ಹವಾಮಾನ ಇಲಾಖೆ ಸೂಚನೆ

(ನ್ಯೂಸ್‌ ಕಡಬ) newskadaba.com  ಜು.29: ಕರಾವಳಿ ಕರ್ನಾಟಕದಲ್ಲಿ ‘ಪುಷ್ಯ ನಕ್ಷತ್ರ’ದ ಮಳೆ ತೀವ್ರಗೊಂಡ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಜುಲೈ 29ರಂದು ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ತೀವ್ರತೆ ಹೆಚ್ಚಾಗಲಿರುವ ಕಾರಣ ಕರಾವಳಿಯ ಮೂರೂ ಜಿಲ್ಲೆಗಳ ಜನತೆಗೆ ವಿಶೇಷ ಎಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ.

ಕರಾವಳಿಯಲ್ಲಿ ತೀವ್ರಗೊಂಡ ಪುಷ್ಯ ನಕ್ಷತ್ರದ ಮಳೆ: ಮುನ್ನೆಚ್ಚರಿಕೆ ವಹಿಸಲು ಹವಾಮಾನ ಇಲಾಖೆ ಸೂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ: ಪೊಲೀಸರು ಮತ್ತು ಆಹಾರ ಇಲಾಖೆ ಜಂಟಿ ದಾಳಿ, ಲಾರಿ ಜಪ್ತಿ

(ನ್ಯೂಸ್‌ ಕಡಬ) newskadaba.com  ಜು.29: ಸರ್ಕಾರದ ಉಚಿತ ಅನ್ನಭಾಗ್ಯ ಯೋಜನೆಗೆ ಸೇರಿದ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯನ್ನು ಆಹಾರ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ. ಕುಮಟಾದ ನಾಡಾ ಮಸ್ಕೇರಿಯ ಶ್ರೀ ಗಣೇಶ್ ರೈಸ್ ಇಂಡಸ್ಟ್ರೀಸ್ ಮಾಲೀಕ ನಾಗರಾಜ ನಾಯ್ಕ್ ಅವರು ಅಕ್ಕಿಯನ್ನು ಲಾರಿಗೆ ತುಂಬಿಸಿದ್ದರು. ಲಾರಿ ಮಾಲೀಕ ಗಿರೀಶ್ ನಾಯ್ಕ್ ಅವರ ಸೂಚನೆಯಂತೆ ಚಾಲಕ ಕೆ. ನರಸಿಂಹ ಈ ಸರ್ಕಾರಿ ಅಕ್ಕಿಯನ್ನು ಕೇರಳದ ಕಾಸರಗೋಡಿನ ಶಾಜಿ ಟ್ರೇಡಿಂಗ್ ಕಂಪನಿಗೆ ಅಕ್ರಮವಾಗಿ ಸಾಗಿಸುತ್ತಿದ್ದಾನೆ

ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ: ಪೊಲೀಸರು ಮತ್ತು ಆಹಾರ ಇಲಾಖೆ ಜಂಟಿ ದಾಳಿ, ಲಾರಿ ಜಪ್ತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸಿಯಾಚಿನ್‌ನಲ್ಲಿ ಇತಿಹಾಸ ಬರೆದ ಭಾರತೀಯ ಸೇನೆಯ ಮೊದಲ ಮಹಿಳಾ ಅಧಿಕಾರಿ ಕ್ಯಾಪ್ಟನ್ ಶಿವಾ ಚೌಹಾಣ್!

(ನ್ಯೂಸ್‌ ಕಡಬ) newskadaba.com  ಜು.29: ಭಾರತೀಯ ಸೇನೆಯ ಕ್ಯಾಪ್ಟನ್ ಶಿವಾ ಚೌಹಾಣ್ ಅವರು 2023ರ ಜನವರಿಯಲ್ಲಿ ವಿಶ್ವದ ಅತಿ ಎತ್ತರದ ಯುದ್ಧಭೂಮಿಯಾದ ಸಿಯಾಚಿನ್ ಹಿಮನದಿಯ ‘ಕುಮಾರ್ ಪೋಸ್ಟ್’ (15,632 ಅಡಿ ಎತ್ತರ) ನಲ್ಲಿ ನಿಯೋಜನೆಗೊಂಡ ಮೊದಲ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.ರಾಜಸ್ಥಾನದ ಉದಯಪುರ ಮೂಲದ ಶಿವಾ, ತಮ್ಮ 11ನೇ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡರೂ ಆರ್ಥಿಕ ಹಾಗೂ ವೈಯಕ್ತಿಕ ಕಷ್ಟಗಳನ್ನು ಮೆಟ್ಟಿನಿಂತು ಸಿವಿಲ್ ಎಂಜಿನಿಯರಿಂಗ್ (ಬಿ.ಟೆಕ್) ಪದವಿ ಪೂರ್ಣಗೊಳಿಸಿದರು. 2020ರ ಸರ್ವಿಸಸ್ ಸೆಲೆಕ್ಷನ್ ಬೋರ್ಡ್ (SSB) ಸಂದರ್ಶನದಲ್ಲಿ

ಸಿಯಾಚಿನ್‌ನಲ್ಲಿ ಇತಿಹಾಸ ಬರೆದ ಭಾರತೀಯ ಸೇನೆಯ ಮೊದಲ ಮಹಿಳಾ ಅಧಿಕಾರಿ ಕ್ಯಾಪ್ಟನ್ ಶಿವಾ ಚೌಹಾಣ್! Read More »

ಕರಾವಳಿ, ಕರ್ನಾಟಕ

ದಕ್ಷಿಣ ಕನ್ನಡದ ನಾಡ ಕಚೇರಿಗಳಲ್ಲಿ ಕೆಲಸ ಬಂದ್: ಸರ್ವರ್ ಸಮಸ್ಯೆಯಿಂದ ಕಂಗಾಲಾದ ನಾಗರಿಕರು

(ನ್ಯೂಸ್‌ ಕಡಬ) newskadaba.com, ಜು.28 ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು, ಕಡಬ, ಬಂಟ್ವಾಳ ಹಾಗೂ ಬೆಳ್ತಂಗಡಿ ಸೇರಿದಂತೆ ಹಲವು ನಾಡ ಕಚೇರಿಗಳಲ್ಲಿ ಕಳೆದ 10 ದಿನಗಳಿಂದ ನೆಟ್ವರ್ಕ್ ಮತ್ತು ಸರ್ವರ್ ಸಮಸ್ಯೆ ತೀವ್ರಗೊಂಡಿದ್ದು, ಸಾರ್ವಜನಿಕ ಸೇವೆಗಳು ಸಂಪೂರ್ಣವಾಗಿ ಸ್ತಬ್ಧಗೊಂಡಿವೆ. ತಾಂತ್ರಿಕ ದೋಷದಿಂದಾಗಿ ಜಾತಿ, ಆದಾಯ, ನಿವಾಸ ಸೇರಿದಂತೆ ವಿವಿಧ ಅಗತ್ಯ ಪ್ರಮಾಣಪತ್ರಗಳ ವಿತರಣೆ ಸಂಪೂರ್ಣ ವಿಳಂಬವಾಗಿದೆ. ಸಾರ್ವಜನಿಕರು ಗಂಟೆಗಟ್ಟಲೆ ಸರದಿಯಲ್ಲಿ ಕಾದರೂ ಕೆಲಸವಾಗದೆ ಬರಿಗೈಯಲ್ಲಿ ಮನೆಗೆ ಹಿಂದಿರುಗುವಂತಾಗಿದೆ. ವಿದ್ಯಾರ್ಥಿವೇತನ, ವಿವಿಧ ಸರ್ಕಾರಿ ಯೋಜನೆಗಳ ಸೌಲಭ್ಯ ಹಾಗೂ

ದಕ್ಷಿಣ ಕನ್ನಡದ ನಾಡ ಕಚೇರಿಗಳಲ್ಲಿ ಕೆಲಸ ಬಂದ್: ಸರ್ವರ್ ಸಮಸ್ಯೆಯಿಂದ ಕಂಗಾಲಾದ ನಾಗರಿಕರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಿನ ಹಂಪನಕಟ್ಟೆಯಲ್ಲಿ ಭಾರೀ ಬೆಂಕಿ ಅವಘಡ: ಶೂ ಅಂಗಡಿ ಸಂಪೂರ್ಣ ಭಸ್ಮ!

(ನ್ಯೂಸ್‌ ಕಡಬ) newskadaba.com,  ಜು.28 ಮಂಗಳೂರು: ಮಂಗಳೂರಿನ ಪ್ರಮುಖ ವಾಣಿಜ್ಯ ಪ್ರದೇಶವಾದ ಹಂಪನಕಟ್ಟೆಯಲ್ಲಿರುವ ಶೂ ಅಂಗಡಿಯೊಂದರಲ್ಲಿ ಮಂಗಳವಾರ ಬೆಳಗಿನ ಜಾವ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಅಂಗಡಿ ಸಂಪೂರ್ಣ ಭಸ್ಮಗೊಂಡಿದೆ. ಬೆಂಕಿಯ ಕೆನ್ನಾಲಿಗೆ ತೀವ್ರವಾಗಿದ್ದರಿಂದ ಪಕ್ಕದಲ್ಲಿದ್ದ ಎರಡು ಅಂಗಡಿಗಳಿಗೂ ಬೆಂಕಿ ವ್ಯಾಪಿಸಿದೆ. ಘಟನೆಯಲ್ಲಿ ‘ಯುರೋಪ್’ ಹೆಸರಿನ ಪ್ರಸಿದ್ಧ ಶೂ ಅಂಗಡಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಸತತ ಪ್ರಯತ್ನ ನಡೆಸಿ ಬೆಂಕಿಯನ್ನು ಹತೋಟಿಗೆ ತರುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಮೇಲ್ನೋಟಕ್ಕೆ ವಿದ್ಯುತ್

ಮಂಗಳೂರಿನ ಹಂಪನಕಟ್ಟೆಯಲ್ಲಿ ಭಾರೀ ಬೆಂಕಿ ಅವಘಡ: ಶೂ ಅಂಗಡಿ ಸಂಪೂರ್ಣ ಭಸ್ಮ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪತ್ನಿಯನ್ನು ಕೊಂದು ಅತ್ತೆ-ಮಾವನಿಗೆ ವೀಡಿಯೋ ಕಾಲ್ ಮಾಡಿದ ಪತಿ!

(ನ್ಯೂಸ್‌ ಕಡಬ) newskadaba.com,  ಜು.28 ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲೂಕಿನ ಗಲಗಲಿ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದ್ದು, ಪತ್ನಿಯನ್ನ ಹತ್ಯೆಗೈದು ಆಕೆ ಪ್ರಾಣಕ್ಕಾಗಿ ಒದ್ದಾಡುತ್ತಿದ್ದ ದೃಶ್ಯವನ್ನು ಅತ್ತೆ-ಮಾವನಿಗೆ ವೀಡಿಯೋ ಕಾಲ್ ಮೂಲಕ ತೋರಿಸಿದ ಕ್ರೂರ ಘಟನೆ ನಡೆದಿದೆ. ಮೃತ ಮಹಿಳೆಯನ್ನ ಭಾಗ್ಯಶ್ರೀ ಜಿಗಳೂರು (23) ಎಂದು ಗುರುತಿಸಲಾಗಿದೆ. ಅನೈತಿಕ ಸಂಬಂಧದ ಶಂಕೆಯಿಂದ ಗಂಡ ಪ್ರವೀಣ್ ಜಿಗಳೂರು ಎಂಬಾತ ಪತ್ನಿಯೊಂದಿಗೆ ಜಗಳವಾಡಿ, ಕಟ್ಟಿಗೆಯಿಂದ ಹಲ್ಲೆ ನಡೆಸಿ ನೇಣು ಬಿಗಿದು ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಕೊಲೆಯ ಬಳಿಕ ಆ

ಪತ್ನಿಯನ್ನು ಕೊಂದು ಅತ್ತೆ-ಮಾವನಿಗೆ ವೀಡಿಯೋ ಕಾಲ್ ಮಾಡಿದ ಪತಿ! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಬ್ಯಾಂಕ್ ಆಫ್ ಬರೋಡಾ ಗ್ರಾಹಕರ ಗಮನಕ್ಕೆ: ನೆಟ್ ಬ್ಯಾಂಕಿಂಗ್, ‘bob World’ ಆಪ್ PIN ತಕ್ಷಣವೇ ಬದಲಾಯಿಸಿ!

(ನ್ಯೂಸ್‌ ಕಡಬ) newskadaba.com,  ಜು.28 : ಭಾರತದ 3ನೇ ಅತಿ ದೊಡ್ಡ ಸರ್ಕಾರಿ ಬ್ಯಾಂಕ್ ಆದ ‘ಬ್ಯಾಂಕ್ ಆಫ್ ಬರೋಡಾ’ದ 1,000 GB (1 TB) ಸೂಕ್ಷ್ಮ ಮಾಹಿತಿ ಡಾರ್ಕ್ ವೆಬ್‌ನಲ್ಲಿ ಸೋರಿಕೆಯಾಗಿದೆ.‘ಟ್ರಿಪಲ್ ಎಕ್ಸ್’ ಎಂಬ ಹ್ಯಾಕರ್ಸ್ ಗುಂಪು ಬ್ಯಾಂಕಿನ ಇಮೇಲ್ ವ್ಯವಸ್ಥೆಯಲ್ಲಿದ್ದ ಲೋಪವನ್ನು ಬಳಸಿಕೊಂಡು ಈ ದಾಳಿ ನಡೆಸಿದೆ. ಏನೆಲ್ಲಾ ಸೋರಿಕೆಯಾಗಿದೆ ಎನ್ನುವುದಾದರೆ ಗ್ರಾಹಕರ ಖಾಸಗಿ ವಿವರ 1 ರಿಂದ 3 ಲಕ್ಷ ಗ್ರಾಹಕರ ಅಪ್ಲಿಕೇಶನ್ ಫಾರ್ಮ್‌ಗಳು, ಫೋಟೋಗಳು, ಹೆಸರು, ಮೊಬೈಲ್ ಸಂಖ್ಯೆ ಹಾಗೂ ಆಧಾರ್

ಬ್ಯಾಂಕ್ ಆಫ್ ಬರೋಡಾ ಗ್ರಾಹಕರ ಗಮನಕ್ಕೆ: ನೆಟ್ ಬ್ಯಾಂಕಿಂಗ್, ‘bob World’ ಆಪ್ PIN ತಕ್ಷಣವೇ ಬದಲಾಯಿಸಿ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡು: ಮನೆ ಯಲ್ಲೇ ನೇಣು ಬಿಗಿದುಕೊಂಡು ನಿವೃತ್ತ ಎಸ್‌ಐ ಧನ್ ರಾಜ್ ಮೃತ್ಯು

(ನ್ಯೂಸ್‌ ಕಡಬ) newskadaba.com,  ಜು.28  ಕಾಸರಗೋಡು ಜಿಲ್ಲೆಯಲ್ಲಿ ಪೊಲೀಸ್ ವೃತ್ತಿಯಲ್ಲಿ ಹಲವಾರು ಪ್ರಮುಖ ಕ್ರಿಮಿನಲ್ ಪ್ರಕರಣಗಳನ್ನು ಭೇದಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ನಿವೃತ್ತ ಸಬ್ ಇನ್ಸ್‌ಪೆಕ್ಟರ್ ಧನ್ ರಾಜ್ (65) ಜುಲೈ 27 ರ ಸೋಮವಾರ  ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ. ಕಾಸರಗೋಡು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳು ಹಾಗೂ ಅಪರಾಧ ವಿಭಾಗದಲ್ಲಿ ದಕ್ಷ ಮತ್ತು ಚತುರ ತನಿಖಾ ಅಧಿಕಾರಿಯಾಗಿ ಸೇವೆ ಸಲ್ಲಿಸಿ, ಹಲವಾರು ಪ್ರಮುಖ ಕ್ರಿಮಿನಲ್ ಪ್ರಕರಣಗಳನ್ನು ಭೇದಿಸಿದ್ದರು. ನಿವೃತ್ತಿಯ ನಂತರ ಚೆರ್ಕಳದ ಖಾಸಗಿ

ಕಾಸರಗೋಡು: ಮನೆ ಯಲ್ಲೇ ನೇಣು ಬಿಗಿದುಕೊಂಡು ನಿವೃತ್ತ ಎಸ್‌ಐ ಧನ್ ರಾಜ್ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ ತಾಲೂಕಿನಲ್ಲಿ ಮುಂದುವರಿದ ಕಾಡಾನೆ ಭೀತಿ: ಅರಣ್ಯ ಇಲಾಖೆಯ ಕ್ರಮಕ್ಕೆ ಒತ್ತಾಯ

(ನ್ಯೂಸ್‌ ಕಡಬ) newskadaba.com,  ಜು.28  ಸುಳ್ಯ: ತಾಲೂಕಿನಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ರೈತರ ತೋಟಗಳಿಗೆ ನುಗ್ಗಿ ಬೆಳೆ ನಾಶಪಡಿಸುತ್ತಿರುವುದರಿಂದ ರೈತರು ತೀವ್ರ ಆರ್ಥಿಕ ನಷ್ಟ ಎದುರಿಸುವಂತಾಗಿದೆ. ಉಬರಡ್ಕ ಮಿತ್ತೂರು ಗ್ರಾಮದಲ್ಲಿ ಇಂದು ಮುಂಜಾನೆ ರೈತರ ತೋಟಗಳಿಗೆ ದಾಳಿ ಇಟ್ಟ ಕಾಡಾನೆಗಳ ಹಿಂಡು, ಅಪಾರ ಪ್ರಮಾಣದ ಬಾಳೆ ಹಾಗೂ ತೆಂಗಿನ ಮರಗಳನ್ನು ಧ್ವಂಸಗೊಳಿಸಿವೆ. ಈಗಾಗಲೇ ಅಡಿಕೆ ಎಲೆ ಚುಕ್ಕಿ ಮತ್ತು ಹಳದಿ ರೋಗದಿಂದ ಕಂಗೆಟ್ಟಿದ್ದ ತಾಲೂಕಿನ ರೈತರಿಗೆ, ಕಾಡಾನೆಗಳ ಸರಣಿ ಉಪಟಳ ಗಾಯದ ಮೇಲೆ ಬರೆ ಎಳೆದಂತಾಗಿದೆ. ಶೀಘ್ರವೇ

ಸುಳ್ಯ ತಾಲೂಕಿನಲ್ಲಿ ಮುಂದುವರಿದ ಕಾಡಾನೆ ಭೀತಿ: ಅರಣ್ಯ ಇಲಾಖೆಯ ಕ್ರಮಕ್ಕೆ ಒತ್ತಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top