ಕರ್ನಾಟಕ

ಅನ್ನಭಾಗ್ಯ ಯೋಜನೆ: ಇಂದಿರಾ ಆಹಾರ ಕಿಟ್ ನಲ್ಲಿ ಹೆಸರುಕಾಳಿನ ಬದಲು ತೊಗರಿ ಬೇಳೆ ನೀಡಲು ತೀರ್ಮಾನ

(ನ್ಯೂಸ್‌ ಕಡಬ) newskadaba.com,  ನ.06:   ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ. ಅಕ್ಕಿ ಬದಲು ಇಂದಿರಾ ಆಹಾರ ಕಿಟ್ ಘೋಷಿಸಿದ್ದ ಸರ್ಕಾರ, ಅದರಲ್ಲಿ ನೀಡಲು ಉದ್ದೇಶಿಸಿದ್ದ ಆಹಾರ ಧಾನ್ಯಗಳನ್ನು ಪರಿಷ್ಕರಣೆ ಮಾಡಿದೆ. ಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಂಡಿದ್ದು, ‘ಇಂದಿರಾ ಪೌಷ್ಟಿಕ ಆಹಾರ ಕಿಟ್’ ಬದಲು ಇಂದಿರಾ ಕಿಟ್ ಎಂದು ತೀರ್ಮಾನಿಸಿದೆ. ಅಲ್ಲದೆ, ಕಿಟ್‌ನಲ್ಲಿ ಇರಬೇಕಿದ್ದ ಹೆಸರುಕಾಳಿನ ಬದಲು ಹೆಚ್ಚುವರಿ ತೊಗರಿಬೇಳೆ ನೀಡಲು ನಿರ್ಧರಿಸಿದೆ. ಸಂಪುಟ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿದ ಕಾನೂನು […]

ಅನ್ನಭಾಗ್ಯ ಯೋಜನೆ: ಇಂದಿರಾ ಆಹಾರ ಕಿಟ್ ನಲ್ಲಿ ಹೆಸರುಕಾಳಿನ ಬದಲು ತೊಗರಿ ಬೇಳೆ ನೀಡಲು ತೀರ್ಮಾನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ – ವೈದ್ಯಕೀಯ ಪರೀಕ್ಷೆ ವೇಳೆ ದೃಢ

(ನ್ಯೂಸ್‌ ಕಡಬ) newskadaba.com,  ನ.07 ರಾಯಚೂರು: 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು ವೈದ್ಯಕೀಯ ಪರೀಕ್ಷೆ ವೇಳೆ ದೃಢಪಟ್ಟಿರುವ ಘಟನೆ ರಾಯಚೂರಿನ ಮಸ್ಕಿ ತಾಲೂಕಿನ ಹಳ್ಳಿಯೊಂದರಲ್ಲಿ ನಡೆದಿದೆ…ಘಟನೆ ಬಳಿಕ ಪೋಕ್ಸೋ ಕೇಸ್‌ ದಾಖಲಿಸಿಕೊಂಡ ಪೊಲೀಸರು ಆರೋಪಿ ಯುವಕನನ್ನ ಬಂಧಿಸಿ ಜೈಲಿಗಟ್ಟಿದ್ದಾರೆ. 25ರ ಯುವಕ ವಿದ್ಯಾರ್ಥಿಯನಿಯನ್ನ ಪುಸಲಾಯಿಸಿ ಕರೆದೊಯ್ದಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು. ಬಳಿಕ ಪೊಲೀಸರು ಇಬ್ಬರನ್ನೂ ಪತ್ತೆಹಚ್ಚಿ ಕರೆತಂದಿದ್ದರು . ಈ ವೇಳೆ ವಿದ್ಯಾರ್ಥಿನಿಯನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆಕೆ ಗರ್ಭಿಣಿಯಾಗಿರುವುದು ದೃಢವಾಗಿದೆ.ನಂತರ ಯುವಕನನ್ನ ಜೈಲಿಗಟ್ಟಿದ ಪೊಲೀಸರು ವಿದ್ಯಾರ್ಥಿನಿಯನ್ನ ಆಸ್ಪತ್ರೆಗೆ

9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ – ವೈದ್ಯಕೀಯ ಪರೀಕ್ಷೆ ವೇಳೆ ದೃಢ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಬ್ಯಾಂಕ್ ಸಾಲ

(ನ್ಯೂಸ್‌ ಕಡಬ) newskadaba.com,  ನ.07 ಬೆಂಗಳೂರು: ಗೃಹಲಕ್ಷ್ಮಿ ಫಲಾನುಭವಿಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಗುಡ್‌ನ್ಯೂಸ್‌ ನೀಡಿದ್ದಾರೆ. ಗೃಹಲಕ್ಷ್ಮಿ ಸೊಸೈಟಿಯಿಂದ 3 ಲಕ್ಷ ರೂ.ವರೆಗೂ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು ಎಂದು ಸಚಿವೆ ತಿಳಿಸಿದ್ದಾರೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನವೆಂಬರ್ 19 ರಂದು ನಡೆಯಲಿರುವ ಐಸಿಡಿಎಸ್ ಯೋಜನೆಯ ಅಂಗನವಾಡಿ ಸುವರ್ಣ ಮಹೋತ್ಸವ, ಅಕ್ಕಾ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಉದ್ಘಾಟನೆ ಕುರಿತು ಡಾ.ಬಾಬು ಜಗಜೀವನರಾಮ್ ಆಡಿಟೋರಿಯಂ ಮತ್ತು ತರಬೇತಿ ಕೇಂದ್ರದಲ್ಲಿ

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಬ್ಯಾಂಕ್ ಸಾಲ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

5 ವರ್ಷದಲ್ಲಿ 25,000 ಸ್ಟಾರ್ಟ್‌ ಅಪ್‌ ನೀತಿಗೆ ಕ್ಯಾಬಿನೆಟ್‌ ಒಪ್ಪಿಗೆ

(ನ್ಯೂಸ್‌ ಕಡಬ) newskadaba.com,  ನ.07 ಬೆಂಗಳೂರು : ರಾಜ್ಯವನ್ನು ಜಾಗತಿಕ ನಾವೀನ್ಯತಾ ಕೇಂದ್ರವಾಗಿ ಬಲಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರೂಪಿಸಿರುವ ‘ಕರ್ನಾಟಕ ನವೋದ್ಯಮ ನೀತಿ- 2025-2030’ಕ್ಕೆ ಗುರುವಾರ ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ್ದು, ನೀತಿಯಡಿ ಮುಂದಿನ 5 ವರ್ಷದಲ್ಲಿ 25,000 ಸ್ಟಾರ್ಟ್‌ ಅಪ್‌ ಹುಟ್ಟು ಹಾಕುವ ಗುರಿ ಹೊಂದಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ನೀತಿಗೆ ಅನುಮೋದನೆ ನೀಡಿದ್ದು, ಈ ಹೊಸ ನೀತಿ ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿ 25,000 ಹೊಸ ಸ್ಟಾರ್ಟ್‌ಅಪ್‌ಗಳನ್ನು ಹುಟ್ಟು ಹಾಕುವ ಗುರಿ

5 ವರ್ಷದಲ್ಲಿ 25,000 ಸ್ಟಾರ್ಟ್‌ ಅಪ್‌ ನೀತಿಗೆ ಕ್ಯಾಬಿನೆಟ್‌ ಒಪ್ಪಿಗೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು:‘ಶಕ್ತಿ ಯೋಜನೆ’ಯಿಂದ ಮಹಿಳಾ ಪ್ರಯಾಣಿಕರ ಸಂಖ್ಯೆ 2.5 ಪಟ್ಟು ಹೆಚ್ಚಳ

(ನ್ಯೂಸ್‌ ಕಡಬ) newskadaba.com,  ನ.07 ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ ಯೋಜನೆʼ ಬೆಂಗಳೂರಿನಲ್ಲಿ ಮಹಿಳೆಯರ ಸಾರಿಗೆ ವ್ಯವಸ್ಥೆಯಲ್ಲಿ ಗಮನಾರ್ಹ ಬದಲಾವಣೆ ತಂದಿದೆ ಎಂದು ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯ ತನ್ನ ಅಧ್ಯಯನ ವರದಿಯಲ್ಲಿ ತಿಳಿಸಿದೆ. ಮಹಿಳಾ ಪ್ರಯಾಣಿಕರ ಸಂಖ್ಯೆ ಹಿಂದಿಗಿಂತಲೂ ಎರಡೂವರೆ ಪಟ್ಟು ಹೆಚ್ಚಳವಾಗಿದೆ ಎಂದು ಅದು ತಿಳಿಸಿದೆ. ಶಕ್ತಿ ಯೋಜನೆ ಅಡಿ ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕು ನಿಗಮಗಳ ಬಸ್‌ಗಳಲ್ಲಿ ಉಚಿತ

ಬೆಂಗಳೂರು:‘ಶಕ್ತಿ ಯೋಜನೆ’ಯಿಂದ ಮಹಿಳಾ ಪ್ರಯಾಣಿಕರ ಸಂಖ್ಯೆ 2.5 ಪಟ್ಟು ಹೆಚ್ಚಳ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಒಂದು ಲಕ್ಷ ಮನೆಗಳಿಗೆ ಕಸದಿಂದ ಉತ್ಪಾದಿಸಿದ ವಿದ್ಯುತ್‌ ಪೂರೈಕೆ

(ನ್ಯೂಸ್‌ ಕಡಬ) newskadaba.com,  ನ.07 ಬೆಂಗಳೂರು : ಸಾರ್ವಜನಿಕರು ಕಟ್ಟುನಿಟ್ಟಾಗಿ ಹಸಿ ಮತ್ತು ಒಣ ಕಸ ವಿಂಗಡಿಸಿಕೊಟ್ಟರೆ ಒಂದು ಲಕ್ಷ ಮನೆಗಳಿಗೆ ಕಸದಿಂದ ಉತ್ಪಾದಿಸಿದ ವಿದ್ಯುತ್‌ ಪೂರೈಕೆ ಮಾಡಬಹುದಾಗಿದೆ ಎಂದು ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕರೀಗೌಡ ತಿಳಿಸಿದ್ದಾರೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ಕರ್ನಾಟಕ ಪವರ್ ಕಾರ್ಪೊರೇಶನ್ (ಕೆಪಿಸಿಎಲ್) ಸಹಭಾಗಿತ್ವದಲ್ಲಿ ಬಿಡದಿಯಲ್ಲಿ ಸ್ಥಾಪಿಸಿರುವ ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಘಟಕಕ್ಕೆ ಗುರುವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು…. 314.74 ಕೋಟಿ ರು. ವೆಚ್ಚದಲ್ಲಿ ಘಟಕ ಬಳಿಕ

ಒಂದು ಲಕ್ಷ ಮನೆಗಳಿಗೆ ಕಸದಿಂದ ಉತ್ಪಾದಿಸಿದ ವಿದ್ಯುತ್‌ ಪೂರೈಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚಿನ್ನದ ಬೆಲೆಯಲ್ಲಿ ಇಳಿಕೆ

(ನ್ಯೂಸ್‌ ಕಡಬ) newskadaba.com,  ನ.06: ಚಿನ್ನ ಮತ್ತು ಬೆಳ್ಳಿ ಫ್ಯೂಚರ್ ಮಾರುಕಟ್ಟೆಗಳ ಬೆಲೆಯಲ್ಲಿ ಸಾಧಾರಣ ಏರಿಕೆ ಕಂಡುಬಂದಿದೆ. ಆದರೆ ಚಿಲ್ಲರೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಕುಸಿದಿದೆ. ಬೆಳಿಗ್ಗೆ 9.45 ರ ಹೊತ್ತಿಗೆ, ಮಲ್ಟಿ ಕಮಾಡಿಟಿ ಎಕ್ಸ್ಚೇಂಜ್ (MCX)ನಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 1,20,617 ರೂ.ಗಳಲ್ಲಿ ಕಂಡುಬಂದಿದೆ. ಈ ಬೆಲೆಯನ್ನು ಹಿಂದಿನ ಅವಧಿಗೆ ಹೋಲಿಸಿದರೆ ಶೇ. 0.08 ರಷ್ಟು ಹೆಚ್ಚಾಗಿದೆ. MCX ನ ಅಧಿಕೃತ ವೆಬ್‌ಸೈಟ್ ಪ್ರಕಾರ, ಡಿಸೆಂಬರ್ ವಿತರಣೆಗೆ ಬೆಳ್ಳಿಯ ಬೆಲೆಯೂ ಪ್ರತಿ ಕಿಲೋಗ್ರಾಂಗೆ 1,47,503

ಚಿನ್ನದ ಬೆಲೆಯಲ್ಲಿ ಇಳಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಿವಮೊಗ್ಗ: ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ – ಸಾಗರ KSRTC ಡಿಪೋ ಭದ್ರತಾ ಸಿಬ್ಬಂದಿ ಸಾವು

(ನ್ಯೂಸ್‌ ಕಡಬ) newskadaba.com,  ನ.06 ಶಿವಮೊಗ್ಗ: ಸಾಗರದ ಕೆಎಸ್ಆರ್‌ಟಿಸಿ ಡಿಪೋದ ಭದ್ರತಾ ಸಿಬ್ಬಂದಿ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಮೃತರನ್ನು ಸಾಗರದ ನಿವಾಸಿ ಸಂದೀಪ್ (41) ಎಂದು ಗುರುತಿಸಲಾಗಿದೆ. ಬುಧವಾರ ರಾತ್ರಿ ಪಾಳಿಯಲ್ಲಿ ಅವರು ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಸಂದೀಪ್​ರನ್ನು ಸಹೋದ್ಯೋಗಿಗಳು ಬಸ್ಸಿನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ಅಷ್ಟರಲ್ಲೇ ಸಂದೀಪ್ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಕರೆದುಕೊಂಡು ಬಂದ ಸಿಬ್ಬಂದಿ ಚಂದ್ರು ಮಾತನಾಡಿ, ನಾನು ಬಸ್​ನಲ್ಲಿ ಚಾಲಕ ಕಂ ನಿರ್ವಾಹಕನಾಗಿ ಕೆಲಸ‌

ಶಿವಮೊಗ್ಗ: ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತ – ಸಾಗರ KSRTC ಡಿಪೋ ಭದ್ರತಾ ಸಿಬ್ಬಂದಿ ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಂದಿನಿ ತುಪ್ಪ ದರ ಹೆಚ್ಚಳ

(ನ್ಯೂಸ್‌ ಕಡಬ) newskadaba.com,  ನ.06 ಬೆಂಗಳೂರು: ಕರ್ನಾಟಕ ಹಾಲು ಮಹಾಮಂಡಲ ಜಿಎಸ್ ಟಿ ಬೆಲೆ ಇಳಿಕೆಯ ಬೆನ್ನಲ್ಲೇ ನಂದಿನಿ ತುಪ್ಪದ ಬೆಲೆಯನ್ನು 610 ರೂಪಾಯಿಗಳಿಂದ 700ರೂಪಾಯಿಗೆ ಹೆಚ್ಚಳ ಮಾಡಿದೆ. ಈ ನಿರ್ಧಾರವನ್ನು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ಇದರಿಂದ ಹಾಲು ಉತ್ಪಾದಕರಿಗೆ ಹೆಚ್ಚಿನ ಅನುಕೂಲವಾಗುತ್ತದೆ ಎಂದು ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ನಂದಿನಿ ತುಪ್ಪದ ಬೆಲೆ ಏಕೆ ಏಕಾಏಕಿ 90 ರೂಪಾಯಿ ಹೆಚ್ಚಾಗಿದೆ ಎಂದು ಇಂದು ಮಾಧ್ಯಮ ಪ್ರತಿನಿಧಿಗಳು ದೆಹಲಿಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ಪ್ರಶ್ನೆ ಮಾಡಿದರು. ಅದಕ್ಕೆ

ನಂದಿನಿ ತುಪ್ಪ ದರ ಹೆಚ್ಚಳ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು : ಮಗಳೊಂದಿಗೆ ಆತ್ಮಹತ್ಯೆಗೆ ಯತ್ನ ಪ್ರಕರಣ – ಇನ್ನುಮುಂದೆ ಅಜ್ಜನ ಆರೈಕೆಯಲ್ಲಿರಲಿದೆ ಮಗು

(ನ್ಯೂಸ್‌ ಕಡಬ) newskadaba.com,  ನ.06 ಮಂಗಳೂರು: ತನ್ನ ಚಿಕ್ಕ ಮಗಳೊಂದಿಗೆ ಸಮುದ್ರಕ್ಕೆ ಹಾರಿ, ಬಳಿಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯ ಮಗುವನ್ನು ಆಕೆಯ ಅಜ್ಜನಿಗೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪತ್ನಿಯೊಂದಿಗಿನ ಜಗಳದಿಂದಾಗಿ ಆ ವ್ಯಕ್ತಿ ತನ್ನ ಮಗಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದ ಎಂದು ವರದಿಯಾಗಿದೆ. ಪೊಲೀಸರು ಕ್ಷಿಪ್ರವಾಗಿ ಕ್ರಮ ಕೈಗೊಂಡು ಸಕಾಲದಲ್ಲಿ ಇಬ್ಬರನ್ನೂ ರಕ್ಷಿಸುವಲ್ಲಿ ಯಶಸ್ವಿಯಾದರು….ಗಂಡ –ಹೆಂಡತಿಯ ನಡುವಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ಪ್ರಯತ್ನಗಳು ನಡೆದವು, ಆದರೆ ಹೆಂಡತಿ ರಾಜಿ ಮಾಡಿಕೊಳ್ಳಲು ನಿರಾಕರಿಸಿ ವಿಚ್ಛೇದನಕ್ಕೆ ಒತ್ತಾಯಿಸಿದಳು. ನ್ಯಾಯಾಲಯದ

ಮಂಗಳೂರು : ಮಗಳೊಂದಿಗೆ ಆತ್ಮಹತ್ಯೆಗೆ ಯತ್ನ ಪ್ರಕರಣ – ಇನ್ನುಮುಂದೆ ಅಜ್ಜನ ಆರೈಕೆಯಲ್ಲಿರಲಿದೆ ಮಗು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top