ಕರ್ನಾಟಕ

ಆನ್ ಲೈನ್ ಹೂಡಿಕೆ ಹೆಸರಿನಲ್ಲಿ ವ್ಯಕ್ತಿಗೆ 9.2 ಲಕ್ಷ ರೂ. ವಂಚನೆ..!

(ನ್ಯೂಸ್‌ ಕಡಬ) newskadaba.com,  ನ.06:   ಬೈಲಹೊಂಗಲದ ನಿವಾಸಿಯೊಬ್ಬರು ಆನ್‌ಲೈನ್ ಹೂಡಿಕೆ ವಂಚನೆಗೆ ಬಲಿಯಾಗಿದ್ದು, 9,23,948 ರೂ.ಗಳನ್ನು ಕಳೆದುಕೊಂಡಿದ್ದಾರೆ. ಬೈಲಹೊಂಗಲದ ನಿವಾಸಿ ಪ್ರವೀಣ್ ಅನಂತ್ ರೇಣಿಕೆ ವಂಚನೆಗೊಳಗಾದ ವ್ಯಕ್ತಿಯಾಗಿದ್ದಾರೆ. ‘ಓರಿಯೊನೆಕ್ಸ್ ಮಾರ್ಕೆಟ್ಸ್’ ಎಂಬ ನಕಲಿ ಕಂಪನಿಯ ಮೂಲಕ ಹೆಚ್ಚಿನ ಲಾಭದ ಭರವಸೆ ನೀಡಿ ವಂಚಿಸಲಾಗಿದ್ದು, ಈ ಸಂಬಂಧ ಬೆಳಗಾವಿಯ ಜಿಲ್ಲಾ ಸೈಬರ್ ಆರ್ಥಿಕ ಮತ್ತು ಮಾದಕ ದ್ರವ್ಯ (ಸಿಇಎನ್) ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಕ್ಟೋಬರ್ 13 ರಂದು, ಪ್ರವೀಣ್ ಅನಂತ್ ರೇಣಿಕೆ ಅವರ ಬ್ಯಾಂಕ್ ಖಾತೆಗೆ ಲಿಂಕ್ […]

ಆನ್ ಲೈನ್ ಹೂಡಿಕೆ ಹೆಸರಿನಲ್ಲಿ ವ್ಯಕ್ತಿಗೆ 9.2 ಲಕ್ಷ ರೂ. ವಂಚನೆ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ವಿಧಿವಶ

(ನ್ಯೂಸ್‌ ಕಡಬ) newskadaba.com,  ನ.06 ಬೆಂಗಳೂರು: ಕನ್ನಡದ ಖ್ಯಾತ ಖಳನಟ ಹರೀಶ್ ರಾಯ್ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದು, ಇಂದು ನಿಧನ ಹೊಂದಿದ್ದಾರೆ. ‘ಓಂ’, ‘ನಲ್ಲ’, ‘ಕೆಜಿಎಫ್’, ‘ಕೆಜಿಎಫ್ 2’ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳಲ್ಲಿ ತಮ್ಮ ಶಕ್ತಿಶಾಲಿ ಅಭಿನಯದಿಂದ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದ ಅವರು, ಕಳೆದ ಕೆಲವು ವರ್ಷಗಳಿಂದ ಥೈರಾಯ್ಡ್ ಕ್ಯಾನ್ಸರ್ ನೊಂದಿಗೆ ಹೋರಾಟ ನಡೆಸುತ್ತಿದ್ದರು. ಹರೀಶ್ ರಾಯ್ ಅವರ ಆರೋಗ್ಯ ಕಳೆದ ತಿಂಗಳುಗಳಿಂದ ಹದಗೆಡುತ್ತಲೇ ಇತ್ತು. ಹೊಟ್ಟೆ ಉಬ್ಬರಗೊಂಡು ದೇಹ ಕೃಷಗೊಂಡಿದ್ದ ಅವರು ಗುರುತೇ

ಕನ್ನಡ ಚಿತ್ರರಂಗದ ಖ್ಯಾತ ಖಳನಟ ಹರೀಶ್ ರಾಯ್ ವಿಧಿವಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಳ್ಳಾರೆ ಸಮೀಪದ ಹುಡುಗ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ

(ನ್ಯೂಸ್‌ ಕಡಬ) newskadaba.com,  ನ.06 ಸುಳ್ಯ: ಬೆಳ್ಳಾರೆ ಸಮೀಪದ ಪೆರುವಾಜೆ ಎಂಬಲ್ಲಿ 17 ವರ್ಷದ ಯುವಕ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನ. 5ರಂದು ರಾತ್ರಿ ವರದಿಯಾಗಿದೆ. ಈತನು ಬೆಳ್ಳಾರೆಯ ದೀಪಕ್ ಕೋಲ್ಡ್ ಹೌಸ್ ನಲ್ಲಿ ಕೆಲಸಕ್ಕಿದ್ದನು..ಈ ಹುಡುಗನನ್ನು ಗಗನ್ ಎಂದು ಗುರುತಿಸಲಾಗಿದೆ, ಪೆರುವಾಜೆಯಲ್ಲಿರುವ ಬಾಡಿಗೆ ರೂಮಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.. . ಮೂಲತಃ ಕಳೆಂಜದವರಾಗಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ಯುವಕ ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ.  

ಬೆಳ್ಳಾರೆ ಸಮೀಪದ ಹುಡುಗ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯ ಸರ್ಕಾರದ ಆದೇಶಕ್ಕೆ ಮತ್ತೆ ಹಿನ್ನಡೆ; ಅರ್ಜಿ ವಜಾಗೊಳಿಸಿದ ನ್ಯಾಯಾಲಯ

(ನ್ಯೂಸ್‌ ಕಡಬ) newskadaba.com,  ನ.06:   ಸರ್ಕಾರಿ ಜಾಗದಲ್ಲಿ ಕಾರ್ಯಕ್ರಮ ನಡೆಸಲು ಸರ್ಕಾರದ ಅನುಮತಿ ಪಡೆಯಬೇಕೆಂಬ ಆದೇಶಕ್ಕೆ ನೀಡಲಾಗಿದ್ದ ತಡೆಯನ್ನು ರಾಜ್ಯ ಸರ್ಕಾರ ಮೇಲ್ಮನವಿ ಅರ್ಜಿಯನ್ನು ಧಾರವಾಡ ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ. ನ್ಯಾ.ನಾಗಪ್ರಸನ್ನ ಅವರ ನೀಡಿದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿಯನ್ನು ಸಲ್ಲಿಕೆ ಮಾಡಿತ್ತು. ಈ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾ.ಎಸ್.​ಜಿ.ಪಂಡಿತ್​ ಹಾಗೂ ನ್ಯಾ.ಗೀತಾ ಕೆ.ಬಿ ಅವರ ಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿದೆ. ತಡೆಯಾಜ್ಞೆ ತೆರವಿಗೆ ಏಕಸದಸ್ಯ ಪೀಠದಲ್ಲಿ ಮನವಿ ಸಲ್ಲಿಸಲು ವಿಭಾಗೀಯ ಪೀಠ ಅವಕಾಶ

ರಾಜ್ಯ ಸರ್ಕಾರದ ಆದೇಶಕ್ಕೆ ಮತ್ತೆ ಹಿನ್ನಡೆ; ಅರ್ಜಿ ವಜಾಗೊಳಿಸಿದ ನ್ಯಾಯಾಲಯ Read More »

ಕರ್ನಾಟಕ

ರಾಜ್ಯದ ಪಂಚ ಗ್ಯಾರಂಟಿಗಳಿಂದ ಪ್ರತಿ ಕುಟುಂಬಕ್ಕೆ ಮಾಸಿಕ ಸರಾಸರಿ ₹10,000 ಪ್ರಯೋಜನ

(ನ್ಯೂಸ್‌ ಕಡಬ) newskadaba.com,  ನ.06 ಬೆಂಗಳೂರು:  ‘ರಾಜ್ಯದಲ್ಲಿ ಪಂಚ ಗ್ಯಾರಂಟಿಗಳಿಂದ ನಾಲ್ಕು ಜನರ ಕುಟುಂಬ ಕನಿಷ್ಠ ಸರಾಸರಿ ತಿಂಗಳಿಗೆ 10 ಸಾವಿರ ರು. ಪ್ರಯೋಜನ ಪಡೆಯುತ್ತಿದೆ. ತನ್ಮೂಲಕ ಕರ್ನಾಟಕ ಗ್ಯಾರಂಟಿ ಮಾದರಿ ಸಾಮಾಜಿಕ, ಆರ್ಥಿಕ ಕ್ರಾಂತಿಗೆ ಕಾರಣವಾಗಿದ್ದು, ಇದನ್ನು ರಾಷ್ಟ್ರೀಯ ಮಾದರಿಯಾಗಿ ಗುರುತಿಸಿ ಎಲ್ಲಾ ರಾಜ್ಯಗಳಲ್ಲೂ ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಆರ್ಥಿಕ ಬೆಂಬಲ ನೀಡಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೇಂದ್ರ ಸರ್ಕಾರ ರಾಜ್ಯದ ಗ್ಯಾರಂಟಿ ಮಾದರಿಯನ್ನು ಗುರುತಿಸಿ ರಾಜ್ಯಗಳಿಗೆ ಹೆಚ್ಚುವರಿ ಹಾಗೂ ನ್ಯಾಯಬದ್ಧ ಆರ್ಥಿಕ ಬೆಂಬಲ

ರಾಜ್ಯದ ಪಂಚ ಗ್ಯಾರಂಟಿಗಳಿಂದ ಪ್ರತಿ ಕುಟುಂಬಕ್ಕೆ ಮಾಸಿಕ ಸರಾಸರಿ ₹10,000 ಪ್ರಯೋಜನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶುಭ ಸುದ್ದಿ, ಇನ್ನು ಮುಂದೆ ಸರ್ಕಾರಿ ಪಿಯುಸಿ ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿಯೂಟ ನೀಡಲು ಸರಕಾರ ಚಿಂತನೆ

(ನ್ಯೂಸ್‌ ಕಡಬ) newskadaba.com,  ನ.06 ಬೆಂಗಳೂರು : ಇದುವರೆಗೂ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಮಧ್ಯಾಹ್ನದ ನೀಡಲಾಗುತ್ತಿದೆ. ಒಂದರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಬಿಸಿಯೂಟ ನೀಡುವ ಮೂಲಕ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿಗೆ ಸರ್ಕಾರ ಈ ಯೋಜನೆ ರೂಪಿಸಿದೆ. ಇದೀಗ ಸರ್ಕಾರ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು, ಪಿಯುಸಿ ವಿದ್ಯಾರ್ಥಿಗಳಿಗೂ ಕೂಡ ಮಧ್ಯಾಹ್ನದ ಬಿಸಿ ಊಟ ನೀಡಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ. ಸರಕಾರಿ ಪಿಯು ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ಸರಕಾರ ಚಿಂತನೆ ನಡೆಸಿದೆ.

ಶುಭ ಸುದ್ದಿ, ಇನ್ನು ಮುಂದೆ ಸರ್ಕಾರಿ ಪಿಯುಸಿ ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿಯೂಟ ನೀಡಲು ಸರಕಾರ ಚಿಂತನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೊಲೀಸ್ ಠಾಣೆಯಲ್ಲಿ ನಿಂತಿದ್ದ ಕಾರಿನಲ್ಲಿ ಕಂತೆ ಕಂತೆ ಹಣ..!

(ನ್ಯೂಸ್‌ ಕಡಬ) newskadaba.com,  ನ.05:  ಕೊಪ್ಪ ಪಟ್ಟಣದಲ್ಲಿ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಪೊಲೀಸರು ಸೀಜ್ ಮಾಡಿದ್ದ ಕಾರಿನಲ್ಲಿ ಲಕ್ಷಾಂತರ ರೂಪಾಯಿ ನಗದು, ಚಿನ್ನ ಮತ್ತು ಬೆಳ್ಳಿ ಪತ್ತೆಯಾಗಿದ್ದು, ಪೊಲೀಸ್ ಇಲಾಖೆಯಲ್ಲೇ ಚರ್ಚೆಗೆ ಗ್ರಾಸವಾಗಿದೆ. ಕಳೆದ ಒಂದು ತಿಂಗಳಿಂದ ಪೊಲೀಸ್ ಠಾಣೆಯ ಆವರಣದಲ್ಲಿ ನಿಂತಿದ್ದ ಕಾರನ್ನು ಪರಿಶೀಲಿಸಿದಾಗ ಈ ಆಘಾತಕಾರಿ ಮಾಹಿತಿ ಹೊರಬಂದಿದೆ. ಈ ಕಾರು ಮಾಜಿ ಶಿಕ್ಷಣ ಸಚಿವ ದಿ. ಗೋವಿಂದೇಗೌಡರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟದ್ದು. ನೇಪಾಳಿ ಗ್ಯಾಂಗ್ ವಿರುದ್ಧ ನಡೆದ ತನಿಖೆಯಲ್ಲಿ

ಪೊಲೀಸ್ ಠಾಣೆಯಲ್ಲಿ ನಿಂತಿದ್ದ ಕಾರಿನಲ್ಲಿ ಕಂತೆ ಕಂತೆ ಹಣ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬ್ರಿಟಿಷ್ ಅಧಿಕಾರಿ ಸ್ವಾಗತಕ್ಕೆ ಜನಗಣಮನ ಗೀತೆ ರಚನೆ: ವಿವಾದ ಸೃಷ್ಟಿಸಿದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿಕೆ

(ನ್ಯೂಸ್‌ ಕಡಬ) newskadaba.com,  ನ.06 ಕಾರವಾರ: ಜನಗಣಮನ ಬ್ರಿಟಿಷ್ ಅಧಿಕಾರಿ ಸ್ವಾಗತಕ್ಕೆ ರಚಿಸಿದ್ದ ಗೀತೆಯಾಗಿದೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹೇಳಿದ್ದು, ಈ ಹೇಳಿಕೆ ವಿವಾದ ಸೃಷ್ಟಿಸಿದೆ.ಹೊನ್ನಾವರದಲ್ಲಿ ಬುಧವಾರ ಸರ್ದಾರ್ ವಲ್ಲಭಬಾಯಿ ಪಟೇಲ್ 150ನೇ ಜನ್ಮ ದಿನಾಚರಣೆ ಅಂಗವಾಗಿ ನಡೆದ ಏಕತೆಗಾಗಿ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕಾಗೇರಿಯವರು ಮಾತನಾಡಿದ್ದಾರೆ. ಬಂಕಿಮ್ ಚಂದ್ರ ಚಟರ್ಜಿ ಬರೆದ ವಂದೇ ಮಾತರಂ ಜನ ಗಣ ಮನಕ್ಕೆ ಸಮನಾಗಿದೆ. ವಂದೇ ಮಾತರಂ ಅನ್ನು ರಾಷ್ಟ್ರಗೀತೆಯನ್ನಾಗಿ ಮಾಡಲು ಸಾಕಷ್ಟು ಒತ್ತಡವಿತ್ತು.

ಬ್ರಿಟಿಷ್ ಅಧಿಕಾರಿ ಸ್ವಾಗತಕ್ಕೆ ಜನಗಣಮನ ಗೀತೆ ರಚನೆ: ವಿವಾದ ಸೃಷ್ಟಿಸಿದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅಕ್ಟೋಬರ್ ತಿಂಗಳ ರಾಜ್ಯವಾರು ಸರಕು ಮತ್ತು ಸೇವಾ ತೆರಿಗೆ ಆದಾಯ ವರದಿ ಬಿಡುಗಡೆ; ಬೆಳವಣಿಗೆ ದರದಲ್ಲಿ ಕರ್ನಾಟಕ ಪ್ರಥಮ ಸ್ಥಾನ

(ನ್ಯೂಸ್‌ ಕಡಬ) newskadaba.com,  ನ.06 ಬೆಂಗಳೂರು: 2025ರ ಅಕ್ಟೋಬರ್‌ನಲ್ಲಿ ಜಿಎಸ್‌ಟಿ ಸಂಗ್ರಹ ಬೆಳವಣಿಗೆಯಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ. ದಸರಾ ಹಬ್ಬದ ಸಮಯದಲ್ಲಿ ಕರ್ನಾಟಕ ಜಿಎಸ್ಟಿ ಸಂಗ್ರಹದಲ್ಲಿ ಹೆಚ್ಚಿನ ಸಂಗ್ರಹ ಮಾಡಿದ್ದು, ಸೆಪ್ಟೆಂಬರ್‌ನಿಂದ ತೆರಿಗೆ ಆದಾಯದಲ್ಲಿ 10% ಬೆಳವಣಿಗೆ ದಾಖಲಾಗಿದೆ.2024ರ ಅಕ್ಟೋಬರ್​ಗೆ ಹೋಲಿಸಿದರೆ 2025ರ ಅಕ್ಟೋಬರ್​ ಆಂತರಿಕ ಜಿಎಸ್​​ಟಿ 1,45,052 ಕೋಟಿ ರೂ. ಸಂಗ್ರಹವಾಗಿದೆ. ಅಂದರೆ ಶೇ.2ರಷ್ಟು ಬೆಳವಣಿಗೆ ಹೊಂದಿದೆ. ಹಣಕಾಸು ಸಚಿವಾಲಯ ರಾಜ್ಯಗಳ ಜಿಎಸ್​​ಟಿ ಆದಾಯದ ಸಂಗ್ರಹ ಮತ್ತು ಬೆಳವಣಿಗೆ ದರ ಮಾಹಿತಿ ಬಿಡುಗಡೆ ಮಾಡಿದ್ದು, ಆ

ಅಕ್ಟೋಬರ್ ತಿಂಗಳ ರಾಜ್ಯವಾರು ಸರಕು ಮತ್ತು ಸೇವಾ ತೆರಿಗೆ ಆದಾಯ ವರದಿ ಬಿಡುಗಡೆ; ಬೆಳವಣಿಗೆ ದರದಲ್ಲಿ ಕರ್ನಾಟಕ ಪ್ರಥಮ ಸ್ಥಾನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚುನಾವಣೆ: ಬೆಂಗಳೂರು ಮತ್ತು ಬಿಹಾರದ ನಗರಗಳನ್ನು ಸಂಪರ್ಕಿಸುವ ವಿಶೇಷ ರೈಲುಗಳ ಸಂಚಾರ

(ನ್ಯೂಸ್‌ ಕಡಬ) newskadaba.com,  ನ.06 ಬೆಂಗಳೂರು: ಬಿಹಾರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಪೂರ್ವ ರೈಲ್ವೆ, ಬೆಂಗಳೂರಿನಿಂದ ಬಿಹಾರಕ್ಕೆ ವಿಶೇಷ ರೈಲುಗಳನ್ನು ಸಂಚರಿಸಲಿದೆ. ಬಿಹಾರದಿಂದ ಹೊರಡುವ ರೈಲು ರೈಲು ಸಂಖ್ಯೆ 03403 ನಾಳೆ ನವೆಂಬರ್ 7 ರಂದು ರಾತ್ರಿ 10.30 ಕ್ಕೆ ಭಾಗಲ್ಪುರದಿಂದ ಹೊರಟು ನವೆಂಬರ್ 9 ರಂದು ಕೆಆರ್ ಪುರಂ ಮತ್ತು ಎಸ್‌ಎಂವಿಟಿ ಬೆಂಗಳೂರು ಮೂಲಕ ರಾತ್ರಿ 11.50 ಕ್ಕೆ ಯಶವಂತಪುರ ತಲುಪಲಿದೆ. ಬೆಂಗಳೂರಿನಿಂದ ಹೊರಡುವ ರೈಲು ರೈಲು ಸಂಖ್ಯೆ 03404 ನವೆಂಬರ್

ಚುನಾವಣೆ: ಬೆಂಗಳೂರು ಮತ್ತು ಬಿಹಾರದ ನಗರಗಳನ್ನು ಸಂಪರ್ಕಿಸುವ ವಿಶೇಷ ರೈಲುಗಳ ಸಂಚಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top