ಕರ್ನಾಟಕ

ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ನೇರ ನೇಮಕಾತಿ

(ನ್ಯೂಸ್‌ ಕಡಬ) newskadaba.com,  ನ.03 : ಬೆಂಗಳೂರು: ಅಂತರರಾಷ್ಟ್ರೀಯ ಪದಕ ವಿಜೇತರಿಗೆ ಸರ್ಕಾರಿ ಹುದ್ದೆಗಳಲ್ಲಿ ಮೀಸಲಾತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರವಿವಾರ ಹೇಳಿದರು.ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 14 ವರ್ಷದೊಳಗಿನ ಮಕ್ಕಳ ಮಿನಿ ಕರ್ನಾಟಕ ಕ್ರೀಡಾಕೂಟವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಉದ್ಘಾಟಿಸಿದರು. ಈ ಸಮಯದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಪ್ರೋತ್ಸಾಹ ಕೊಟ್ಟುಕೊಂಡೇ ಬರುತ್ತಿದೆ. ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಲು ಇಂಥಾ ಕ್ರೀಡಾಕೂಟ ಸಹಕಾರಿ ಆಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ […]

ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ನೇರ ನೇಮಕಾತಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮತ್ತೊಂದು ಕಾಲ್ತುಳಿತ ಪ್ರಕರಣ: 10 ಭಕ್ತರ ಸಾವು, ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇಗುಲದಲ್ಲಿ ದುರಂತ!

(ನ್ಯೂಸ್‌ ಕಡಬ) newskadaba.com,  ನ..01: ದೇಶದಲ್ಲಿ ಮತ್ತೊಂದು ಕಾಲ್ತುಳಿತ ಪ್ರಕರಣ ವರದಿಯಾಗಿದ್ದು, ಆಂಧ್ರಪ್ರದೇಶದ ದೇಗುಲದಲ್ಲಿ ಕಾಲ್ತುಳಿತ ಸಂಭವಿಸಿ ಕನಿಷ್ಠ 10 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ. ಆಂಧ್ರ ಪ್ರದೇಶದ ಶ್ರೀಕಾಕುಳನಲ್ಲಿರುವ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿದ್ದು ದುರಂತದಲ್ಲಿ ಕನಿಷ್ಛ 10 ಮಂದಿ ಭಕ್ತರು ಸಾವನ್ನಪ್ಪಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕಾರ್ತಿಕ ಮಾಸದ ಏಕಾದಶಿ ಶನಿವಾರ ಬಂದಿದ್ದರಿಂದ, ದೇವರ ದರ್ಶನ ಪಡೆಯಲು ಹೆಚ್ಚಿನ ಸಂಖ್ಯೆಯ ಭಕ್ತರು ಸೇರಿದ್ದರು. ಈ ಸಮಯದಲ್ಲಿ, ಜನಸಂದಣಿ ಹೆಚ್ಚಾದ ಕಾರಣ

ಮತ್ತೊಂದು ಕಾಲ್ತುಳಿತ ಪ್ರಕರಣ: 10 ಭಕ್ತರ ಸಾವು, ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇಗುಲದಲ್ಲಿ ದುರಂತ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕನ್ನಡ ಭಾಷೆ ಮೇಲ್ದರ್ಜೆಗೆ ಹೊಸ ನೀತಿ : ಸಿಎಂ ಸಿದ್ದರಾಮಯ್ಯ

(ನ್ಯೂಸ್‌ ಕಡಬ) newskadaba.com,  ನ..01: ಕೃತಕಬುದ್ಧಿಮತ್ತೆಯ ತಂತ್ರಜ್ಞಾನ ಇಡೀ ಜಗತ್ತನ್ನು ಆಕ್ರಮಿಸುತ್ತಿದೆ. ಇದರಿಂದ ಉದ್ಯೋಗ ನಷ್ಟವಾಗುವ ಆತಂಕವಿದೆ. ಹೊಸ ಸವಾಲಿಗೆ ತಕ್ಕ ಹಾಗೆ ಭಾಷೆಯನ್ನು ಸಜ್ಜುಗೊಳಿಸಬೇಕಿದೆ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು. ನಗರದ ಕಂಠೀರವ ಕ್ರೀಡಾಂಗಣದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಆಧುನಿಕತೆಗೆ ಅನುಗುಣವಾಗಿ ಭಾಷೆಯನ್ನು ಮೇಲ್ದರ್ಜೆಗೆರಿಸಲು ತಂತ್ರಜ್ಞರು ಹಾಗೂ ವಿದ್ವಾಂಸರು ಒಗ್ಗೂಡಿ ಕೆಲಸ ಮಾಡಬೇಕು. ಸರ್ಕಾರ ಕೂಡ ಕನ್ನಡ ಭಾಷೆ ಮತ್ತು ಪರಂಪರೆಯನ್ನು ಜಾಗತಿಕ ಮಟ್ಟಕ್ಕೇರಿಸಲು ಹೊಸ ನೀತಿ ರೂಪಿಸಲಿದೆ ಎಂದು

ಕನ್ನಡ ಭಾಷೆ ಮೇಲ್ದರ್ಜೆಗೆ ಹೊಸ ನೀತಿ : ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕ

ಇಬ್ಬರನ್ನು ಬಲಿ ಪಡೆದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಆದೇಶ

(ನ್ಯೂಸ್‌ ಕಡಬ) newskadaba.com,  ನ.01 ಚಿಕ್ಕಮಗಳೂರು: ಶೃಂಗೇರಿಯ ಕೆರೆಮನೆ ಗ್ರಾಮದಲ್ಲಿ ಕಾಡಿಗೆ ಸೊಪ್ಪು ತರಲು ಹೋಗಿದ್ದವರನ್ನು ಬಲಿ ಪಡೆದಿದ್ದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ ದುಬಾರೆ, ಹಾರಂಗಿ ಆನೆ ಶಿಬಿರದ ಸಾಕಾನೆಗಳಿಂದ ಕಾಡಾನೆ ಸೆರೆ ಕಾರ್ಯಾಚರಣೆಗೆ ಸಿದ್ಧತೆ ನಡೆಯುತ್ತಿದೆ. ಏಕಲವ್ಯನ ನೇತೃತ್ವದಲ್ಲಿ ಪುಂಡಾನೆ ಸೆರೆಗೆ ಕಾರ್ಯಾಚರಣೆ ನಡೆಯಲಿದೆ. ಇಂದು ಸಹ ಕಾಡಾನೆಗಳು ತೋಟದ ಮೇಲೆ ದಾಳಿ ನಡೆಸಿ, ಅಡಿಕೆ ಹಾಗೂ ಬಾಳೆಗಿಡಗಳನ್ನು ನಾಶ ಮಾಡಿವೆ. ಕಾಡಾನೆ ಹಾವಳಿ ನಿಯಂತ್ರಣಕ್ಕೆ ಕ್ರಮಕೈಗೊಳ್ಳುವಂತೆ ಸಚಿವ ಕೆ.ಜೆ ಜಾರ್ಜ್ ಅವರಿಗೂ

ಇಬ್ಬರನ್ನು ಬಲಿ ಪಡೆದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಆದೇಶ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉದ್ಯೋಗಾವಕಾಶಗಳ ಕೊರತೆ ಸೇರಿ ಹಲವು ಕಾರಣಗಳಿಗಾಗಿ ಕನ್ನಡ M.A ದಾಖಲಾತಿಯಲ್ಲಿ ಇಳಿಕೆ

(ನ್ಯೂಸ್‌ ಕಡಬ) newskadaba.com,  ನ..01: ಕಳೆದ ಕೆಲವು ವರ್ಷಗಳಿಂದ ಕನ್ನಡ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆಯುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ ಎಂದು ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳ ಕನ್ನಡ ಪ್ರಾಧ್ಯಾಪಕರು ಅಭಿಪ್ರಾಯ ಪಟ್ಟಿದ್ದಾರೆ. ಈ ಕುಸಿತಕ್ಕೆ ಹಲವಾರು ಕಾರಣಗಳಿವೆ, ಅವುಗಳಲ್ಲಿ ಪ್ರಮುಖವಾದವು, ಸೀಮಿತ ಕೆಲಸದ ಅವಕಾಶಗಳು, ಕನ್ನಡ ವಿಭಾಗಗಳಲ್ಲಿ ಶಾಶ್ವತ ಉಪನ್ಯಾಸಕರ ಕೊರತೆ ಮತ್ತು ಮಾನವಿಕ ವಿಷಯಗಳಲ್ಲಿ ಕೋರ್ಸ್‌ಗಳನ್ನು ಕಲಿಸಲು ಹೊಸ ಕಾಲೇಜುಗಳ ಕೊರತೆ ಸೇರಿವೆ. ಕನ್ನಡದಲ್ಲಿ ಎಂಎ ಮುಗಿದ ನಂತರ ಉದ್ಯೋಗಾವಕಾಶಗಳು ಸೀಮಿತವಾಗಿವೆ. ಸಂಶೋಧನೆ ಮತ್ತು ಬೋಧನೆಯ

ಉದ್ಯೋಗಾವಕಾಶಗಳ ಕೊರತೆ ಸೇರಿ ಹಲವು ಕಾರಣಗಳಿಗಾಗಿ ಕನ್ನಡ M.A ದಾಖಲಾತಿಯಲ್ಲಿ ಇಳಿಕೆ Read More »

ಕರ್ನಾಟಕ

‘ಕನ್ನಡ ಅತ್ಯಂತ ಪ್ರಾಚೀನ ಭಾಷೆ’-ಶೋಭಾ ಕರಂದ್ಲಾಜೆ

(ನ್ಯೂಸ್‌ ಕಡಬ) newskadaba.com,  ನ.01 ಬೆಂಗಳೂರು: ಅರಸಿನ, ಕುಂಕುಮ ಬಣ್ಣವುಳ್ಳ ಕನ್ನಡಾಂಬೆಯ ಧ್ವಜವನ್ನು ನಮ್ಮ ಹಿರಿಯರು ಶುಭದ ಸಂಕೇತವಾಗಿ ಸ್ವೀಕರಿಸಿದ್ದಾರೆ ಎಂದು ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ವಿಶ್ಲೇಷಿಸಿದರು. ನಗರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ ಅವರು ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಕುರಿತ ಸಂದೇಶ ನೀಡಿದರು. ಕನ್ನಡ, ಕರ್ನಾಟಕದ ಏಕೀಕರಣಕ್ಕಾಗಿ ಲಕ್ಷಾಂತರ ಜನರು ಹೋರಾಟ ಮಾಡಿದ್ದಾರೆ.

‘ಕನ್ನಡ ಅತ್ಯಂತ ಪ್ರಾಚೀನ ಭಾಷೆ’-ಶೋಭಾ ಕರಂದ್ಲಾಜೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶೀಘ್ರದಲ್ಲೇ ಆಹಾರ ನಿಗಮದ 386 ನೂತನ ಸಿಬ್ಬಂದಿ ನೇಮಕಾತಿ ಪತ್ರ ವಿತರಣೆ

(ನ್ಯೂಸ್‌ ಕಡಬ) newskadaba.com,  ನ.01 ಬೆಂಗಳೂರು: ಆಹಾರ ನಿಗಮದಲ್ಲಿ ನೇಮಕಾತಿ ಪ್ರಕ್ರಿಯೆ ನಡೆದಿದ್ದು, ಶೀಘ್ರದಲ್ಲೇ ಆಹಾರ ನಿಗಮದ 386 ನೂತನ ಸಿಬ್ಬಂದಿಯ ನೇಮಕಾತಿ ಪತ್ರ ವಿತರಣೆ ಮಾಡಲಾಗುವುದು ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದರು. ವಸಂತನಗರದ ಅಬ್ದುಲ್‌ಕಲಾಂ ಭವನದಲ್ಲಿ ನಡೆದ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ 52ನೇ ವರ್ಷದ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಮೊದಲು ನಿಮಗದಲ್ಲಿ 1500 ಸಾವಿರ ಸಿಬ್ಬಂದಿ ಇದ್ದರು. 200ರಿಂದ 250ಕ್ಕೆ ಇಳಿದಿದೆ. ನೇಮಕಾತಿ ಪ್ರಕ್ರಿಯೆ ನಡೆದಿದೆ.

ಶೀಘ್ರದಲ್ಲೇ ಆಹಾರ ನಿಗಮದ 386 ನೂತನ ಸಿಬ್ಬಂದಿ ನೇಮಕಾತಿ ಪತ್ರ ವಿತರಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ, ಜ್ಞಾನಪೀಠ ಮತ್ತು ಭಾರತ ರತ್ನ ಪ್ರಶಸ್ತಿ ಪುರಸ್ಕೃತರ ಹುಟ್ಟೂರಿಗೆ ಕೋಟಿ ಭಾಗ್ಯ: ಪ್ರೀಯಾಂಕ್ ಖರ್ಗೆ ಘೋಷಣೆ

(ನ್ಯೂಸ್‌ ಕಡಬ) newskadaba.com,  ನ.01 ಕಲಬುರಗಿ : ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ರಾಜ್ಯ ಸರ್ಕಾರವು ನಾಡಿನ ಸಾಹಿತ್ಯ ಮತ್ತು ರಾಷ್ಟ್ರಕ್ಕೆ ಮಹತ್ತರ ಕೊಡುಗೆ ನೀಡಿದ ಮಹನೀಯರ ಹುಟ್ಟೂರಿಗೆ ವಿಶೇಷ ನೆರವು ಘೋಷಿಸಿದೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಹಾಗೂ ಭಾರತ ರತ್ನ ಗೌರವ ಪಡೆದ ಕನ್ನಡಿಗರ ಹುಟ್ಟೂರುಗಳ ಸರ್ವತೋಮುಖ ಅಭಿವೃದ್ಧಿಗಾಗಿ ತಲಾ ಒಂದು ಕೋಟಿ ರೂಪಾಯಿ ವಿಶೇಷ ಅನುದಾನವನ್ನು ಒದಗಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ನಿರ್ಧರಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಕಲಬುರಗಿಯಲ್ಲಿ ಶನಿವಾರ

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ, ಜ್ಞಾನಪೀಠ ಮತ್ತು ಭಾರತ ರತ್ನ ಪ್ರಶಸ್ತಿ ಪುರಸ್ಕೃತರ ಹುಟ್ಟೂರಿಗೆ ಕೋಟಿ ಭಾಗ್ಯ: ಪ್ರೀಯಾಂಕ್ ಖರ್ಗೆ ಘೋಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ಕಾರಿ ಕಚೇರಿ, ಸಭೆ, ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿ ಬಳಕೆಗೆ ನಿಷೇಧ: ರಾಜ್ಯ ಸರ್ಕಾರ

(ನ್ಯೂಸ್‌ ಕಡಬ) newskadaba.com,  ನ.01 ಬೆಂಗಳೂರು: ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲಿ ಬಳಕೆಯನ್ನು ನಿಷೇಧಿಸಲಾಗಿದೆ. ಈ ಸಂಬಂಧ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದಾರೆ. ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‌ಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಹಿಂದೆಯೇ ಸೂಚನೆಗಳನ್ನು ನೀಡಲಾಗಿತ್ತು. ಈ ಕ್ರಮವನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು

ಸರ್ಕಾರಿ ಕಚೇರಿ, ಸಭೆ, ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿ ಬಳಕೆಗೆ ನಿಷೇಧ: ರಾಜ್ಯ ಸರ್ಕಾರ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪೊಲೀಸರು ಲಂಚ ಪಡೆದಿರುವುದು ಸಾಬೀತಾದರೆ ಸೇವೆಯಿಂದ ವಜಾ : ಗೃಹ ಸಚಿವ ಪರಮೇಶ್ವರ್

(ನ್ಯೂಸ್‌ ಕಡಬ) newskadaba.com,  ನ..01: ಪೊಲೀಸ್‌‍ ಇಲಾಖೆಯ ಸೇವೆಯಲ್ಲಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಲಂಚ ಪಡೆದಿರುವುದು ಸಾಬೀತಾದರೆ ಸೇವೆಯಿಂದಲೇ ವಜಾಗೊಳಿಸಲಾ ಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಭ್ರಷ್ಟಚಾರವನ್ನು ತಮ ಸರ್ಕಾರ ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ಕೆ. ಶಿವಕುಮಾರ್‌ ಎಂಬುವರು ತಮ ಮಗಳ ಸಾವಿನ ಬಳಿಕ ಮರಣೋತ್ತರ ಪರೀಕ್ಷೆ ಸೇರಿದಂತೆ ವಿವಿಧ ಕೆಲಸಗಳಿಗೆ ಯಾವ ರೀತಿ ಲಂಚ ವಸೂಲಿ ಮಾಡಲಾಯಿತು ಎಂಬುದನ್ನು ಸಾಮಾಜಿಕ ಜಾಲತಾಣದಲ್ಲಿ ಸುಧೀರ್ಘವಾಗಿ ಬರೆದುಕೊಂಡಿದ್ದರು. ಇದಕ್ಕೆ ಸಂಬಂಧಪಟ್ಟಂತೆ

ಪೊಲೀಸರು ಲಂಚ ಪಡೆದಿರುವುದು ಸಾಬೀತಾದರೆ ಸೇವೆಯಿಂದ ವಜಾ : ಗೃಹ ಸಚಿವ ಪರಮೇಶ್ವರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top