ಕರ್ನಾಟಕ

ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲ್ ನಿಷೇಧ-ಸಿ.ಎಂ

(ನ್ಯೂಸ್‌ ಕಡಬ) newskadaba.com,  ನ..01: ರಾಜ್ಯದಾದ್ಯಂತ ಸರ್ಕಾರಿ ಕಚೇರಿಗಳು ಮತ್ತು ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲ್‌ಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ, ಪರಿಸರ ಸ್ನೇಹಿ ವಸ್ತುಗಳನ್ನು ಬಳಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ಜೊತೆಗೆ, ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಕೆಎಂಎಫ್‌ನ ‘ನಂದಿನಿ’ ಉತ್ಪನ್ನಗಳಾದ ತಿಂಡಿ ತಿನಿಸುಗಳನ್ನು ಬಳಸಲು ಸೂಚನೆ ನೀಡಲಾಗಿದೆ. ಸಮಗ್ರ ರಾಜ್ಯದಲ್ಲಿರುವ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಮತ್ತು ಸರ್ಕಾರಿ ಸಭೆ-ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‌ಗಳ ಬಳಕೆಯನ್ನು ನಿಷೇಧಿಸಲಾಗಿದೆ. ಈ ಪ್ಲಾಸ್ಟಿಕ್ ಬಾಟಲ್‌ಗಳ […]

ಸರ್ಕಾರಿ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲ್ ನಿಷೇಧ-ಸಿ.ಎಂ Read More »

ಕರ್ನಾಟಕ

ಮಂಗಳೂರು : ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ- ವಿವಿಧ ಕ್ಷೇತ್ರದ 68 ಸಾಧಕರು, 26 ಸಂಘ-ಸಂಸ್ಥೆಗಳಿಗೆ ಪ್ರಶಸ್ತಿ ಘೋಷಣೆ

(ನ್ಯೂಸ್‌ ಕಡಬ) newskadaba.com,  ನ.01 ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತವು ಈ ವರ್ಷದ ಪ್ರತಿಷ್ಠಿತ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಿದ್ದು, ಸಮಾಜಕ್ಕೆ ನೀಡಿದ ಅಸಾಧಾರಣ ಕೊಡುಗೆಗಳಿಗಾಗಿ ವಿವಿಧ ಕ್ಷೇತ್ರಗಳ ಅತ್ಯುತ್ತಮ ವ್ಯಕ್ತಿಗಳನ್ನು ಗುರುತಿಸಿದೆ. ವಿವಿಧ ಕ್ಷೇತ್ರದ 68 ಸಾಧಕರು ಮತ್ತು 26 ಸಂಘ-ಸಂಸ್ಥೆಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ಪುರಸ್ಕೃತರಲ್ಲಿ ಜೋಸೆಫ್ ಮಥಿಯಾಸ್, ರೆಮೋನಾ  ಇವೆಟ್‌ ಪಿರೇರಾ  ಮತ್ತು ಸತೀಶ್ ಇರಾ , ಅವರು ತಮ್ಮ ಕ್ಷೇತ್ರಗಳಲ್ಲಿ ಗಮನಾರ್ಹ ಕೊಡುಗೆ ನೀಡಿದ್ದಾರೆ. ಈ ವರ್ಷ

ಮಂಗಳೂರು : ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ- ವಿವಿಧ ಕ್ಷೇತ್ರದ 68 ಸಾಧಕರು, 26 ಸಂಘ-ಸಂಸ್ಥೆಗಳಿಗೆ ಪ್ರಶಸ್ತಿ ಘೋಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ಪೂರ್ಣ: ಒಟ್ಟು 6.13 ಕೋಟಿ ಮಂದಿ ಸಮೀಕ್ಷೆ

(ನ್ಯೂಸ್‌ ಕಡಬ) newskadaba.com,  ನ.01: ಬೆಂಗಳೂರು ರಾಜ್ಯ ಹಿಂದುಳಿದ ವರ್ಗಗಗಳ ಆಯೋಗ ಕಳೆದ ಸೆ. 22ರಿಂದ ನಡೆಸುತ್ತಿದ್ದ ಶೈಕ್ಷಣಿಕ ಮತ್ತು ಸಾಮಾಜಿಕ ಸಮೀಕ್ಷೆ ಶುಕ್ರವಾರ ಮುಕ್ತಾಯವಾಗಿದ್ದು, 6,13,83,908 ಜನರ ಮಾಹಿತಿ ಸಂಗ್ರಹಿಸಲಾಗಿದೆ. 2025ಕ್ಕೆ ರಾಜ್ಯದಲ್ಲಿ 6,85,38000 ಜನರು ಇರಬಹುದೆಂದು ಆಯೋಗ ಅಂದಾಜಿಸಿತ್ತು. ಆದರೆ 6.13 ಕೋಟಿ ಜನ ಮಾತ್ರ ಮಾಹಿತಿ ನೀಡಿದ್ದಾರೆ. 4,22,258 ಕುಟುಂಬಗಳು ಮಾಹಿತಿ ನೀಡಲು ನಿರಾಕರಿಸಿವೆ. ಅಲ್ಲದೆ, 34,49,681 ಮನೆಗಳು ಖಾಲಿ ಇಲ್ಲವೇ ಬೀಗ ಹಾಕಿದ್ದರಿಂದ ಸಮೀಕ್ಷೆ ಮಾಡಲಾಗಿಲ್ಲ ಎಂದು ಆಯೋಗದ ಸದಸ್ಯ ಕಾರ್ಯದರ್ಶಿ

ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ಪೂರ್ಣ: ಒಟ್ಟು 6.13 ಕೋಟಿ ಮಂದಿ ಸಮೀಕ್ಷೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ರಾಜ್ಯದ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ನ.01 ರಾಜ್ಯದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದ್ದು, ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಮಾತ್ರ ಮಳೆಯಾಗುತ್ತಿದೆ. ಇಂದು ಸಹ ಈ ಭಾಗಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಸಂಜೆ ಹಾಗೂ ಮುಂಜಾನೆಯ ವೇಳೆ ಚಳಿಯ ವಾತಾವರಣ ಇರಲಿದೆ ಎಂದು ಇಲಾಖೆ ವರದಿ ಮಾಡಿದೆ.. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18

ಇಂದಿನ ರಾಜ್ಯದ ಹವಾಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಕಾಣಿಯೂರು ರೈಲು ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್ ದಾಟಿ ನಿಂತಿದ್ದರಿಂದ ಪ್ರಯಾಣಿಕರಿಗೆ ತೀವ್ರ ತೊಂದರೆ

(ನ್ಯೂಸ್‌ ಕಡಬ) newskadaba.com,  ನ.01 : ಅಕ್ಟೋಬರ್ 29 ರಂದು ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಪ್ರತಿದಿನ ರಾತ್ರಿ 7:30 ರ ಸುಮಾರಿಗೆ ನಿಲ್ದಾಣ ತಲುಪಬೇಕಿತ್ತು.ದಿನನಿತ್ಯದಂತೆ ಕಾಣಿಯೂರು ನಿಲ್ದಾಣಕ್ಕೆ ಆಗಮಿಸಬೇಕಿದ್ದ ರೈಲನ್ನು, ಲೋಕೋ ಪೈಲಟ್ (ಚಾಲಕ) ಅತಿಯಾದ ವೇಗದಲ್ಲಿ ಚಲಾಯಿಸಿದ್ದರಿಂದ ಪ್ಲಾಟ್‌ಫಾರ್ಮ್‌ನಲ್ಲಿ ನಿಲ್ಲಿಸಲು ಸಾಧ್ಯವಾಗಲಿಲ್ಲ. ಪರಿಣಾಮವಾಗಿ, ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ ಅನ್ನು ದಾಟಿ, ನಿಲ್ದಾಣದ ಆಚೆ ಭಾಗದಲ್ಲಿ ನಿಂತಿತು. ರೈಲು ಸರಿಯಾದ ಸ್ಥಳದಲ್ಲಿ ನಿಲ್ಲದ ಕಾರಣ, ರೈಲಿನಿಂದ ಇಳಿಯಬೇಕಿದ್ದ ಪ್ರಯಾಣಿಕರು ತೀವ್ರ ಅನಾನುಕೂಲಕ್ಕೆ ಒಳಗಾದರು. ಮುಖ್ಯವಾಗಿ ರಾತ್ರಿಯ ಸಮಯವಾಗಿದ್ದರಿಂದ,

ಮಂಗಳೂರು-ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಕಾಣಿಯೂರು ರೈಲು ನಿಲ್ದಾಣದಲ್ಲಿ ಪ್ಲಾಟ್‌ಫಾರ್ಮ್ ದಾಟಿ ನಿಂತಿದ್ದರಿಂದ ಪ್ರಯಾಣಿಕರಿಗೆ ತೀವ್ರ ತೊಂದರೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕನ್ನಡಿಗರಿಗೆ 70ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡದಲ್ಲೇ ಶುಭಾಶಯ ತಿಳಿಸಿದ ಮೋದಿ

(ನ್ಯೂಸ್‌ ಕಡಬ) newskadaba.com,  ನ.01 ಬೆಂಗಳೂರು: 70ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ನಾಡಿನಾದ್ಯಂತ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ. ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ.. ಕೇಂದ್ರ

ಕನ್ನಡಿಗರಿಗೆ 70ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಕನ್ನಡದಲ್ಲೇ ಶುಭಾಶಯ ತಿಳಿಸಿದ ಮೋದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೇಶದ ಸಮಸ್ಯೆಗಳನ್ನು ಸೃಷ್ಟಿಸುತ್ತಿರುವ ಆರ್ಎಸ್ಎಸ್ ನ್ನು ನಿಷೇಧಿಸಬೇಕು- ಖರ್ಗೆ

(ನ್ಯೂಸ್‌ ಕಡಬ) newskadaba.com,  ಅ..31: ದೇಶದಲ್ಲಿ ಹೆಚ್ಚಿನ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳನ್ನು ಬಿಜೆಪಿ ಮತ್ತು ಆರ್‌ಎಸ್‌ಎಸ್ ಸೃಷ್ಟಿಸುತ್ತಿರುವುದರಿಂದ, ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ನಿಷೇಧಿಸಬೇಕು ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮ ದಿನಾಚರಣೆ ಹಿನ್ನೆಲೆ ಕಾಂಗ್ರೆಸ್ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ನಡೆಸಿದ ವಾಗ್ದಾಳಿಗೆ ತಿರುಗೇಟು ನೀಡಿ, 1948ರಲ್ಲಿ ಮಹಾತ್ಮ ಗಾಂಧಿಯವರ ಹತ್ಯೆಯ ನಂತರ ಆರ್‌ಎಸ್‌ಎಸ್ ಅನ್ನು ಟೀಕಿಸಿದ ಸರ್ದಾರ್ ಪಟೇಲ್ ಅವರ

ದೇಶದ ಸಮಸ್ಯೆಗಳನ್ನು ಸೃಷ್ಟಿಸುತ್ತಿರುವ ಆರ್ಎಸ್ಎಸ್ ನ್ನು ನಿಷೇಧಿಸಬೇಕು- ಖರ್ಗೆ Read More »

ಕರ್ನಾಟಕ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ದೋಷಾರೋಪಪಟ್ಟಿ ಸಲ್ಲಿಸಿದ ಎನ್ಐಎ

(ನ್ಯೂಸ್‌ ಕಡಬ) newskadaba.com,  ಅ..31: ಬರ್ಬರವಾಗಿ ಕೊಲೆಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಜರಂಗದಳದ ಕಾರ್ಯಕರ್ತ ಸುಹಾಸ್‌‍ ಶೆಟ್ಟಿ ಹತ್ಯೆಯು ಪೂರ್ವ ನಿಯೋಜಿತ ಕೃತ್ಯ ಎಂದು ರಾಷ್ಟ್ರೀಯ ತನಿಖಾ ದಳ( ಎನ್‌ ಐಎ) ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ (ಚಾರ್ಚ್‌ಶೀಟ್‌) ಸಲ್ಲಿಸಿದೆ. ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ 1967, ಭಾರತೀಯ ನ್ಯಾಯಸಂಹಿತಾ 2023 ಮತ್ತು ಶಸಾ್ತ್ರಸ್ತ್ರ ಕಾಯಿದೆ, 1959ರ ವಿವಿಧ ವಿಭಾಗಗಳಡಿ ಚಾರ್ಜ್‌ಶೀಟ್‌ ಸಲ್ಲಿಸಲಾಗಿದೆ. 2025ರ ಮೇ ತಿಂಗಳಿನಲ್ಲಿ ಸುಹಾಸ್‌‍ ಶೆಟ್ಟಿಯನ್ನು ಮಾರಕಾಯುಧಗಳಿಂದ ಶಸ್ತ್ರಸಜ್ಜಿತವಾದ ಏಳು ಮಂದಿ ಬರ್ಭರವಾಗಿ ಹತ್ಯೆ ಮಾಡಿದ್ದರು.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ದೋಷಾರೋಪಪಟ್ಟಿ ಸಲ್ಲಿಸಿದ ಎನ್ಐಎ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಜಾತಿಗಣತಿ ಪರಿ ವೀಕ್ಷಣೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

(ನ್ಯೂಸ್‌ ಕಡಬ) newskadaba.com,  ಅ. 31 ಚಿಟಗುಪಾ : ತಾಲುಕಿನ ವಿವದಡೆ ಜಾತಿಗಣತಿ ಕಾರ್ಯಕ್ಕೆ ತಾಲುಕ ಪಂಚಾಯತ್ ಗ್ರಾಮ ಪಂಚಾಯಿತಿ ಸಿಬ್ಬಂದಿಗಳನ್ನು ಬಳಸಿಕೊಳ್ಳುತ್ತಿದ್ದು ಇದರಿಂದ ಗ್ರಾಮ ಪಂಚಾಯತ್ ಮತ್ತು ತಾಲುಕ ಪಂಚಾತ ಗಳಲ್ಲಿ ತಮ್ಮ ಸಮಸ್ಯೆ ಹೇಳಲು ಸಾರ್ವಜನಿಕರ ಕಾರ್ಯಗಳಿಗೆ ತಡೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ ಎಂದರು. ಮಾಧ್ಯಮ ದವರೊಂದಿಗೆ ಮಾತನಾಡುತ್ತ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು ಮನಾ ಏಖೇಳಿ ಗ್ರಾಮದಲ್ಲಿ ಜಾತಿಗಣತಿ ಕಾರ್ಯದಲ್ಲಿ ಪಾಲ್ಗೊಂಡು ಮಾತನಾಡಿದರು. ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಜಾತಿಗಣತಿ ಕಾರ್ಯದಲ್ಲಿದ್ದರೆ ಕಾರ್ಯದರ್ಶಿಗಳು ಗ್ರಾಮಪಂಚಾಯತ ನಲ್ಲಿದ್ದು

ಜಾತಿಗಣತಿ ಪರಿ ವೀಕ್ಷಣೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮತ್ತೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ!

(ನ್ಯೂಸ್‌ ಕಡಬ) newskadaba.com,  ಅ. 31 ಬೆಂಗಳೂರು:ಸ್ಯಾಂಡಲ್ವುಡ್‌ನಲ್ಲಿ ವೃತ್ತಿ ಜೀವನ ಆರಂಭಿಸಿದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಪ್ಯಾನ್ ಇಂಡಿಯಾ ಮಟ್ಟದಲ್ಲೂ ಹೆಸರು ಮಾಡಿದ್ದು, ತೆಲುಗು, ತಮಿಳು ಮತ್ತು ಹಿಂದಿ ಚಿತ್ರರಂಗಗಳಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅಭಿಮಾನಿಗಳ ದೃಷ್ಟಿಯಲ್ಲಿ ರಶ್ಮಿಕಾ ಮೊದಲ ಸಿನಿಮಾ ಕಿರಿಕ್ ಪಾರ್ಟಿ ಆಗಿದೆ. ಆದರೆ, ನಕಿರಿಕ್ ಪಾರ್ಟಿ ಅವರ ಫಸ್ಟ್ ಸಿನಿಮಾ ಅಲ್ಲ ಎಂಬುವುದಾಗಿ ಟಿ ಸ್ವತಃ ಒಪ್ಪಿದ್ದಾರೆ. ರಶ್ಮಿಕಾ ಮಂದಣ್ಣ ಹೇಳಿರುವಂತೆ, ಅವರ ಮೊದಲ ಸಿನಿಮಾ ಅವಕಾಶ ಗೆಳೆಯರೇ

ಮತ್ತೆ ಕನ್ನಡಿಗರ ಕೆಂಗಣ್ಣಿಗೆ ಗುರಿಯಾದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ
Scroll to Top