ಕರ್ನಾಟಕ

ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ: ಕಣ್ತುಂಬಿಕೊಂಡ ಭಕ್ತಾದಿಗಳು

(ನ್ಯೂಸ್‌ ಕಡಬ) newskadaba.com,  ಅ.18: ತುಲಾ ಸಂಕ್ರಮಣದ ದಿನ (ಅ.17 ರಂದು) ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವವಾಗಿದ್ದು, ಸಾವಿರಾರು ಭಕ್ತಾದಿಗಳು ಅಪರೂಪದ ಕ್ಷಣವನ್ನು ಕಣ್ತುಂಬಿಕೊಂಡರು. ಶುಕ್ರವಾರ ಮಧ್ಯಾಹ್ನ 1.44ಕ್ಕೆ ತೀರ್ಥರೂಪಿಣಿಯಾಗಿ ತಾಯಿ ಕಾವೇರಿ ಪವಿತ್ರ ಬ್ರಹ್ಮಕುಂಡಿಕೆಯಲ್ಲಿ ದರ್ಶನ ನೀಡಿದಳು. ಇದಕ್ಕೂ ಮುನ್ನ ಅರ್ಚಕ ಗುರುರಾಜಾಚಾರ್ ನೇತೃತ್ವದಲ್ಲಿ 11ಕ್ಕೂ ಅಧಿಕ ಅರ್ಚಕರು ಕುಂಕುಮಾರ್ಚನೆ, ಪುಷ್ಪಾರ್ಚನೆ ಮೂಲಕ ಕಾವೇರಿಗೆ ಪೂಜೆ ಸಲ್ಲಿಕೆ ಮಾಡಿದರು. ತೀರ್ಥೋದ್ಭವ ಆಗುತ್ತಿದ್ದಂತೆ ಅರ್ಚಕ ವೃಂದದವರಿಂದ ಭಕ್ತರ ಮೇಲೆ ಕಾವೇರಿ ತೀರ್ಥ ಪ್ರೋಕ್ಷಣೆ ಮಾಡಲಾಯಿತು. ಭಾಗಮಂಡಲದ ಶ್ರೀ ಭಂಗಡೇಶ್ವರ […]

ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ: ಕಣ್ತುಂಬಿಕೊಂಡ ಭಕ್ತಾದಿಗಳು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

12 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಟ್ಯೂಷನ್ ಶಿಕ್ಷಕ; 10 ವರ್ಷ ಜೈಲು ಶಿಕ್ಷೆ ಘೋಷಣೆ

(ನ್ಯೂಸ್‌ ಕಡಬ) newskadaba.com,  ಅ.18: ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ವಿಶೇಷ ನ್ಯಾಯಾಲಯವು ತನ್ನ ತರಗತಿಗಳಿಗೆ ಹಾಜರಾಗುತ್ತಿದ್ದ 12 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 60 (Physical Assault) ವರ್ಷದ ಟ್ಯೂಷನ್ ಶಿಕ್ಷಕನಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 5,000 ರೂ. ದಂಡ ವಿಧಿಸಿದೆ. ರಾಜೇಂದ್ರನಗರ ಮಂಡಲದ ಹೈದರ್ಗುಡ ನಿವಾಸಿಯಾಗಿರುವ ಸಂತ್ರಸ್ತೆಯ ಮೇಲೆ 2017 ರ ಡಿಸೆಂಬರ್‌ನಲ್ಲಿ ಶಿಕ್ಷಕ ಅತ್ಯಾಚಾರ ಎಸಗಿದ್ದ. ಸಂತ್ರಸ್ತೆಯ ತಾಯಿಯ ಹೇಳಿಕೆ ಪ್ರಕಾರ, 7 ನೇ

12 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಟ್ಯೂಷನ್ ಶಿಕ್ಷಕ; 10 ವರ್ಷ ಜೈಲು ಶಿಕ್ಷೆ ಘೋಷಣೆ Read More »

ಕರ್ನಾಟಕ

ಕಾಂತಾರ ಚಾಪ್ಟರ್‌ 1;ದಾಖಲೆ ಸೃಷ್ಟಿಸಿದ ರಿಷಬ್ ಶೆಟ್ಟಿ ಸಿನಿಮಾ: 717.50 ಕೋಟಿ ಗಳಿಕೆ

(ನ್ಯೂಸ್‌ ಕಡಬ) newskadaba.com,  ಅ.18 ರಿಷಬ್ ಶೆಟ್ಟಿಯವರ ‘ಕಾಂತಾರ ಚಾಪ್ಟರ್‌ 1’ ವಿಜಯ ಯಾತ್ರೆ ಮುಂದುವರಿದಿದ್ದು, ವಿಶ್ವಾದ್ಯಂತ 717.50 ಕೋಟಿ ರು.ಗೂ ಗಳಿಕೆ ಮಾಡಿದೆ. ಭಾರತದಲ್ಲಿ 500 ಕೋಟಿ ರು.ಗೂ ಅಧಿಕ ಕಲೆಕ್ಷನ್‌ ಮಾಡಿದೆ. ಸಿನಿಮಾ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್‌ ಈ ಗಳಿಕೆಯನ್ನು ಅಧಿಕೃತವಾಗಿ ಘೋಷಣೆ ಮಾಡಿದೆ ಈ ಬಾರಿ ವೀಕೆಂಡ್‌ ಹಾಗೂ ದೀಪಾವಳಿ ಹಬ್ಬ ಜೊತೆಯಾಗಿ ಬಂದಿದ್ದು ಸಿನಿಮಾ ಗಳಿಕೆಯನ್ನು ಶೀಘ್ರ 1000 ಕೋಟಿ ಹೊಸ್ತಿಲು ದಾಟಿಸುವ ನಿರೀಕ್ಷೆ ಇದೆ. ಸಿನಿಮಾ ಸಕ್ಸಸ್‌ ಓಟ

ಕಾಂತಾರ ಚಾಪ್ಟರ್‌ 1;ದಾಖಲೆ ಸೃಷ್ಟಿಸಿದ ರಿಷಬ್ ಶೆಟ್ಟಿ ಸಿನಿಮಾ: 717.50 ಕೋಟಿ ಗಳಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ಸಿನಿಮಾ

ದೀಪಾವಳಿ ಹಬ್ಬ: ನೈರುತ್ಯ ರೈಲ್ವೆಯಿಂದ ವಿಶೇಷ ರೈಲು ಸೇವೆ

(ನ್ಯೂಸ್‌ ಕಡಬ) newskadaba.com,  ಅ.18: ಬೆಂಗಳೂರು: ನೈಋತ್ಯ ರೈಲ್ವೆಯ (SWR) ಬೆಂಗಳೂರು ವಿಭಾಗವು ದೀಪಾವಳಿ ಮತ್ತು ಛತ್ ಪೂಜಾ ಸಮಯದಲ್ಲಿ ಜನರ ಸಂಚಾರ ದಟ್ಟಣೆಯನ್ನು ಹಾಗೂ ದೀರ್ಘ ವಾರಾಂತ್ಯದ ಜನಸಂದಣಿಯನ್ನು ನಿಭಾಯಿಸಲು ಬೃಹತ್ ಯೋಜನೆಯನ್ನು ರೂಪಿಸಿದೆ. SWR ಬೆಂಗಳೂರು, ಮೈಸೂರು ಮತ್ತು ಹುಬ್ಬಳ್ಳಿ ವಿಭಾಗಗಳ ಪ್ರಮುಖ ನಿಲ್ದಾಣಗಳಲ್ಲಿ 136 ವಿಶೇಷ ರೈಲುಗಳು (338 ಟ್ರಿಪ್‌ಗಳು), 540 ಹೆಚ್ಚುವರಿ ಬೋಗಿಗಳು, ವರ್ಧಿತ ಭದ್ರತೆ, ಸಹಾಯ ಕೇಂದ್ರಗಳು, ವೈದ್ಯಕೀಯ ತಂಡಗಳು ಮತ್ತು ಸುಧಾರಿತ ಪ್ರಯಾಣಿಕರ ಮಾರ್ಗದರ್ಶನ ಸೌಲಭ್ಯ ನೀಡುತ್ತಿದೆ. ರೈಲು

ದೀಪಾವಳಿ ಹಬ್ಬ: ನೈರುತ್ಯ ರೈಲ್ವೆಯಿಂದ ವಿಶೇಷ ರೈಲು ಸೇವೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ವ್ಯಕ್ತಿಯೊಬ್ಬರ ಮೊಬೈಲ್ ಫೋನ್ ಹ್ಯಾಕ್; 64,000 ರೂ. ವಂಚನೆ

(ನ್ಯೂಸ್‌ ಕಡಬ) newskadaba.com,  ಅ.18 ಮಂಗಳೂರು: ಇ ಪರಿವಾಹನ್ ಚಲನ್ ಆಧಾರಿತ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಯೊಬ್ಬರ ಮೊಬೈಲ್ ಫೋನ್ ಹ್ಯಾಕ್ ಆಗಿ 64,000 ರೂ. ಕಳೆದುಕೊಂಡ ಘಟನೆಗೆ ಸಂಬಂಧಿಸಿದಂತೆ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರುದಾರರು ಅಕ್ಟೋಬರ್ 5 ರಂದು ಸ್ನೇಹಿತರನ್ನು ಭೇಟಿ ಮಾಡಲು ನಗರಕ್ಕೆ ಬಂದಿದ್ದರು. ಅಂದು ಸಂಜೆ, ಅವರಿಗೆ ಅಪರಿಚಿತ ಸಂಖ್ಯೆಯಿಂದ ಇ ಪರಿವಾಹನ್ ಚಲನ್ ಆಧಾರಿತ ಲಿಂಕ್ ಇರುವ ವಾಟ್ಸಾಪ್ ಸಂದೇಶ ಬಂದಿತ್ತು. ಆ ರಾತ್ರಿ, ಅವರು ಅದನ್ನು ಪರಿಶೀಲಿಸಲು ಆ

ಮಂಗಳೂರು: ವ್ಯಕ್ತಿಯೊಬ್ಬರ ಮೊಬೈಲ್ ಫೋನ್ ಹ್ಯಾಕ್; 64,000 ರೂ. ವಂಚನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೂಜಿ ಮೀನು ಹೊಟ್ಟೆಗೆ ಚುಚ್ಚಿ ಮೀನುಗಾರ ಸಾವು

(ನ್ಯೂಸ್‌ ಕಡಬ) newskadaba.com,  ಅ.18: ಕಾರವಾರ: ತೀಕ್ಷ್ಣ ಮೂಗಿನ ಸೂಜಿ ಮೀನು ಹೊಟ್ಟೆಗೆ ಚುಚ್ಚಿದ್ದರಿಂದ ಮೀನುಗಾರನೊಬ್ಬ ಸಾವನ್ನಪ್ಪಿರುವ ವಿಚಿತ್ರ ಘಟನೆಯೊಂದು ಕಾರವಾರದಲ್ಲಿ ನಡೆದಿದೆ. ಮೃತನನ್ನು ಮಾಜಾಳಿ ದಂಡೇಭಾಗದ ನಿವಾಸಿ ಅಕ್ಷಯ್ ಅನಿಲ್ ಮಾಜಾಳಿಕರ್ (24) ಎಂದು ಗುರುತಿಸಲಾಗಿದೆ. ಅಕ್ಟೋಬರ್‌ 14ರಂದು ಅಕ್ಷಯ್‌, ಆಳ ಸಮುದ್ರದಲ್ಲಿ ಮೀನಿನ ಬೇಟೆಗೆ ತೆರಳಿದ್ದ. ದೋಣಿಯಲ್ಲಿದ್ದಾಗಲೇ 8ರಿಂದ 10 ಇಂಚು ಉದ್ದದ ಚೂಪು ಮೂತಿಯ ಸೂಜಿ ಮೀನು, ನೀರಿನಿಂದ ಜಿಗಿದು ಬಂದು ಅಕ್ಷಯ್ ಹೊಟ್ಟೆಗೆ ಚುಚ್ಚಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅಕ್ಷಯ್‌ನನ್ನ ಕೂಡಲೇ

ಸೂಜಿ ಮೀನು ಹೊಟ್ಟೆಗೆ ಚುಚ್ಚಿ ಮೀನುಗಾರ ಸಾವು Read More »

ಕರಾವಳಿ, ಕರ್ನಾಟಕ

ಬೆದರಿಕೆ ಕರೆ ಬರುತ್ತಿರುವುದರಿಂದ ಸಚಿವ ಪ್ರಿಯಾಂಕ್ ಖರ್ಗೆಗೆ ಭದ್ರತೆ: ಗೃಹ ಸಚಿವ ಪರಮೇಶ್ವರ್

(ನ್ಯೂಸ್‌ ಕಡಬ) newskadaba.com,  ಅ.18: ರಾಜ್ಯದಲ್ಲಿ ಆರ್‌ಆರ್‌ಎಸ್ ಚಟುವಟಿಕೆ ನಿಷೇಧಿಸುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಸಚಿವ ಪ್ರಿಯಾಂಕ್‌ ಖರ್ಗೆಯವರಿಗೆ ಬೆದರಿಕೆಯೊಡ್ಡುವ ಪೋಸ್ಟ್ ಮಾಡಿದ್ದ ವ್ಯಕ್ತಿಯನ್ನು ಮಹಾರಾಷ್ಟ್ರದಲ್ಲಿ ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಪ್ರಿಯಾಂಕ್‌ ಖರ್ಗೆಯವರಿಗೆ ಎಲ್ಲ ರೀತಿಯ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಜತೆಗೆ ಇದರ ಹಿಂದೆ ಯಾರಾದರೂ ಇದ್ದರೆ ಎಂಬ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದರು. ಶಾಲಾ ಕಾಲೇಜು ಹಾಗೂ ಧಾರ್ಮಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಸೇರಿ ಬೇರೆ ಬೇರೆ

ಬೆದರಿಕೆ ಕರೆ ಬರುತ್ತಿರುವುದರಿಂದ ಸಚಿವ ಪ್ರಿಯಾಂಕ್ ಖರ್ಗೆಗೆ ಭದ್ರತೆ: ಗೃಹ ಸಚಿವ ಪರಮೇಶ್ವರ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಖಾಸಗಿ ಬಸ್ಸುಗಳ ಟಿಕೆಟ್ ದುಬಾರಿ: ದೀಪಾವಳಿ ಹಬ್ಬ ರಜೆಯ ಖುಷಿಯಲ್ಲಿದ್ದವರಿಗೆ ಬಿಗ್ ಶಾಕ್ ..!

(ನ್ಯೂಸ್‌ ಕಡಬ) newskadaba.com,  ಅ.18: ದೀಪಾವಳಿ ಹಬ್ಬಕ್ಕೆ ಸಾಲು ಸಾಲು ರಜೆ ಇದೆ, ಖುಷಿಯಲ್ಲಿ ಊರಿಗೆ ಹೋಗಿ ಎಂಜಾಯ್ ಮಾಡಿಕೊಂಡು ಬರೋಣ, ಇಲ್ಲದಿದ್ದರೆ ನೆಂಟರು, ಬಂಧುಬಳಗದವರ ಊರುಗಳಿಗೆ ಹೋಗಿ ಖುಷಿಯಾಗಿ ನಾಲ್ಕು ದಿನ ಇದ್ದು ಬರೋಣ ಎಂದು ಅಂದುಕೊಂಡವರಿಗೆ ಖಾಸಗಿ ಬಸ್ಸುಗಳು ಯದ್ವಾತದ್ವಾ ಬೆಲೆ ಏರಿಕೆ ಮಾಡಿರುವುದು ಬಿಗ್ ಶಾಕ್ ನೀಡಿದೆ. ದೀಪಾವಳಿ ರಜೆಗೆ ಊರು-ಪರವೂರುಗಳಿಗೆ ವಿಸ್ತೃತ ವಾರಾಂತ್ಯವನ್ನು ಕಳೆಯಲು ಬಯಸುವ ಜನರಿಂದ ಖಾಸಗಿ ಬಸ್ ನಿರ್ವಾಹಕರು ಹಣ ಸುಲಿಗೆ ಮಾಡುತ್ತಿದ್ದಾರೆ ಎನ್ನಬಹುದು. ಹಲವಾರು ಮಾರ್ಗಗಳ ಟಿಕೆಟ್‌ಗಳು

ಖಾಸಗಿ ಬಸ್ಸುಗಳ ಟಿಕೆಟ್ ದುಬಾರಿ: ದೀಪಾವಳಿ ಹಬ್ಬ ರಜೆಯ ಖುಷಿಯಲ್ಲಿದ್ದವರಿಗೆ ಬಿಗ್ ಶಾಕ್ ..! Read More »

ಕರ್ನಾಟಕ

ಹನಿಟ್ರ್ಯಾಪ್: ಕೇರಳ ಮೂಲದ ಉದ್ಯಮಿಗೆ ಲಕ್ಷಾಂತರ ರೂ. ವಂಚನೆ; ಆರೋಪ

(ನ್ಯೂಸ್‌ ಕಡಬ) newskadaba.com,  ಅ.18 ಮಂಗಳೂರು: ರಾಜ್ಯದಲ್ಲಿ ಹನಿಟ್ರ್ಯಾಪ್ ತಂಡಗಳು ಸಕ್ರಿಯವಾಗಿದ್ದು, ಅಸಹಾಯಕ ಹೆಣ್ಣು ಮಕ್ಕಳನ್ನು ಮುಂದಿಟ್ಟು ಉದ್ಯಮಿಗಳಿಗೆ ಬಲೆ ಬೀಸುವ ಕಾರ್ಯಗಳು ಅವ್ಯಾಹತವಾಗಿ ನಡೆಯುತ್ತಿದೆ. ಮರ್ಯಾದೆಗೆ ಅಂಜಿ ಬಹಳಷ್ಟು ಮಂದಿ ಲಕ್ಷಾಂತರ ರೂ. ನೀಡಿ ಮೋಸ ಹೋಗುತ್ತಿದ್ದಾರೆ. ಇಂತಹ ಸಂತ್ರಸ್ತರು ಮುಂದೆ ಬಂದಲ್ಲಿ ಅವರಿಗೆ ಉಚಿತವಾಗಿ ಕಾನೂನು ನೆರವು ನೀಡಲು ಸಿದ್ಧ ಎಂದು ಬೆಂಗಳೂರಿನ ನ್ಯಾಯವಾದಿ ಸೌದಾ ಹೇಳಿದ್ದಾರೆ. ಮಂಗಳೂರಿನಲ್ಲಿ ಶುಕ್ರವಾರ ಕರೆದ ಸುದ್ದಿಗೋಷ್ಠಿಯಲ್ಲಿ ಅವರು, ಕೇರಳ ಮೂಲದ ಗಲ್ಫ್ ಉದ್ಯಮಿಯೊಬ್ಬರಿಗೆ ಬಂಟ್ವಾಳದ ಹನಿಟ್ರ್ಯಾಪ್ ತಂಡವೊಂದು ಮೋಸ

ಹನಿಟ್ರ್ಯಾಪ್: ಕೇರಳ ಮೂಲದ ಉದ್ಯಮಿಗೆ ಲಕ್ಷಾಂತರ ರೂ. ವಂಚನೆ; ಆರೋಪ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇಂದಿನ ಹವಾಮಾನ ವರದಿ

(ನ್ಯೂಸ್‌ ಕಡಬ) newskadaba.com,  ಅ.18: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ವರುಣ ಆರ್ಭಟಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇಂದು (ಅ.18) ಬೆಂಗಳೂರು, ಮೈಸೂರು, ಬೆಳಗಾವಿ, ಧಾರವಾಡ ಸೇರಿ ರಾಜ್ಯದ 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಇನ್ನು ಅ.21ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಾಳಿಯು ಗಂಟೆಗೆ 35 ಕಿ.ಮೀ.ನಿಂದ 55 ಕಿ.ಮೀ ವೇಗ ತಲುಪುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಅವಧಿಯಲ್ಲಿ ಸಮುದ್ರ ಪ್ರದೇಶಗಳಿಗೆ ಮೀನುಗಾರರು ತೆರಳದಂತೆ ಎಚ್ಚರಿಕೆ

ಇಂದಿನ ಹವಾಮಾನ ವರದಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top