ಕರ್ನಾಟಕ

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಉತ್ತೀರ್ಣ ಅಂಕ ಇಳಿಕೆ; ಶಿಕ್ಷಣ ತಜ್ಞರಿಂದ ವಿರೋಧ

(ನ್ಯೂಸ್‌ ಕಡಬ) newskadaba.com,  ಅ.16 ಬೆಂಗಳೂರು: ಶಿಕ್ಷಣ ವ್ಯವಸ್ಥೆಯಲ್ಲಿ ಒಂದು ಪ್ರಮುಖ ಬದಲಾವಣೆಯಾಗಿ, ರಾಜ್ಯ ಸರ್ಕಾರ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳಿಗೆ ತೇರ್ಗಡೆ ಅಂಕಗಳನ್ನು ಕಡಿತಗೊಳಿಸಿದೆ. ಎಸ್ ಎಸ್ ಎಲ್ ಸಿಯಲ್ಲಿ ಉತ್ತೀರ್ಣ ಅಂಕಗಳನ್ನು 35 ರಿಂದ 33 ಕ್ಕೆ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಕನಿಷ್ಠ ಉತ್ತೀರ್ಣ ಅಂಕಗಳನ್ನು 35 ರಿಂದ 30 ಕ್ಕೆ ಇಳಿಸಿ ಆದೇಶ ಹೊರಡಿಸಿದೆ. ಈ ಬಗ್ಗೆ ನಿನ್ನೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ, […]

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಉತ್ತೀರ್ಣ ಅಂಕ ಇಳಿಕೆ; ಶಿಕ್ಷಣ ತಜ್ಞರಿಂದ ವಿರೋಧ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಖ್ಯಾತ ಗಾಯಕಿ ಜೊತೆ ಸಂಗೀತ ನಿರ್ದೇಶಕ ರಘು ದೀಕ್ಷಿತ್ ಇದೀಗ ಎರಡನೇ ಮದುವೆಗೆ ಸಜ್ಜು

(ನ್ಯೂಸ್‌ ಕಡಬ) newskadaba.com,  ಅ.16 ಬೆಂಗಳೂರು: ಖ್ಯಾತ ಗಾಯಕ ರಘು ದೀಕ್ಷಿತ್ ಅವರು ಗ್ರಾö್ಯಮಿ-ನಾಮನಿರ್ದೇಶಿತ ಖ್ಯಾತ ಗಾಯಕಿ, ಕೊಳಲು ವಾದಕಿ ವಾರಿಜಶ್ರೀ ವೇಣುಗೋಪಾಲ್ ಅವರೊಂದಿಗೆ ಎರಡನೇ ಮದುವೆ ಸಜ್ಜಾಗಿದ್ದಾರೆ. ರಘು ದೀಕ್ಷಿತ್ ಹಾಗೂ ವಾರಿಜಶ್ರೀ ಹಲವು ಆಲ್ಬಂಗಳಲ್ಲಿ ಜೊತೆಯಾಗಿ ಹಾಡಿದ್ದು, ಒಬ್ಬರಿಗೊಬ್ಬರು ಪರಸ್ಪರ ಪರಿಚಿತರು. ಅನೇಕ ವರ್ಷಗಳಿಂದ ಪರಸ್ಪರ ಪರಿಚಿತರಾಗಿರುವ ಇವರಿಬ್ಬರು, ಇದೀಗ ವಿವಾಹವಾಗಲು ನಿರ್ಧರಿಸಿದ್ದಾರೆ. ಇದೇ ತಿಂಗಳು ಕೊನೆಯಲ್ಲಿ ಮದುವೆ ನಿಶ್ಚಯವಾಗಿದೆ. ರಘು ದೀಕ್ಷಿತ್ ಅವರಿಗೆ ಇದು ಎರಡನೇ ವಿವಾಹ. ಈ ಹಿಂದೆ ಶಾಸ್ತ್ರೀಯ ನೃತ್ಯಗಾರ್ತಿ

ಖ್ಯಾತ ಗಾಯಕಿ ಜೊತೆ ಸಂಗೀತ ನಿರ್ದೇಶಕ ರಘು ದೀಕ್ಷಿತ್ ಇದೀಗ ಎರಡನೇ ಮದುವೆಗೆ ಸಜ್ಜು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಾಸರಗೋಡು ಜಿಲ್ಲೆಯ ಇಬ್ಬರು ಮಕ್ಕಳಿಗೆ ಅಮೀಬಿಕ್ ಮಿದುಳು ಜ್ವರ ದೃಢ

(ನ್ಯೂಸ್‌ ಕಡಬ) newskadaba.com,  ಅ.16 ಕಾಸರಗೋಡು: ಜಿಲ್ಲೆಗೆ ಅಮೀಬಿಕ್‌ ಮಿದುಳು ಜ್ವರ ಕಾಲಿರಿಸಿರುವುದು ದೃಢವಾಗಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಾಸರಗೋಡು ಜಿಲ್ಲೆಯ 6 ವರ್ಷದ ಬಾಲಕ ಸಹಿತ ಕಣ್ಣೂರು ಜಿಲ್ಲೆಯ ಮೂರೂವರೆ ವಯಸ್ಸಿನ ಮಗುವಿಗೂ ಮಿದುಳು ಜ್ವರ ದೃಢೀಕರಿಸಲಾಗಿದೆ. ಇಬ್ಬರೂ ಕಲ್ಲಿಕೋಟೆ ಮೆಡಿಕಲ್‌ ಕಾಲೇಜಿನ ಪ್ರತ್ಯೇಕ ನಿಗಾ ವಿಭಾಗದಲ್ಲಿ ಚಿಕಿತ್ಸೆಯಲ್ಲಿದ್ದಾರೆ. ಅವರ ಆರೋಗ್ಯ ಸ್ಥಿತಿ ಆತಂಕಕಾರಿಯೇನಲ್ಲ ಎಂದು ಅಧಿಕೃತರು ತಿಳಿಸಿದ್ದಾರೆ ಈಗಾಗಲೇ ಈ ವರ್ಷ ಕೇರಳದಲ್ಲಿ 42 ಮಂದಿಗೆ ಅಮೀಬಿಕ್‌ ಮಿದುಳು ಜ್ವರ ಬಾಧಿಸಿದೆ ಎಂದು ಆರೋಗ್ಯ

ಕಾಸರಗೋಡು ಜಿಲ್ಲೆಯ ಇಬ್ಬರು ಮಕ್ಕಳಿಗೆ ಅಮೀಬಿಕ್ ಮಿದುಳು ಜ್ವರ ದೃಢ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬಂಟ್ವಾಳ: ಅಪ್ರಾಪ್ತ ವಯಸ್ಕನಿಗೆ ವಾಹನ ನೀಡಿದ ಮಾಲೀಕರಿಗೆ 32000 ದಂಡ !

(ನ್ಯೂಸ್‌ ಕಡಬ) newskadaba.com,  ಅ.16 ಬಂಟ್ವಾಳ: ಅಪ್ರಾಪ್ತ ಅಪಘಾತಕ್ಕೀಡಾದ ಮೋಟಾರ್ ಸೈಕಲ್ ಸವಾರಿ ಮಾಡಲು ಅವಕಾಶ ನೀಡಿದ್ದಕ್ಕಾಗಿ ಬಂಟ್ವಾಳ ಎಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯವು ವಾಹನ ಮಾಲೀಕರಿಗೆ 32,000 ರೂ. ದಂಡ ವಿಧಿಸಿದೆ.. ವಿಟ್ಲ ಪೊಲೀಸರ ಪ್ರಕಾರ, ಅಪರಾಧ ಸಂಖ್ಯೆ 74/2025 ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 281 ಮತ್ತು 125 (ಎ) ಅಡಿಯಲ್ಲಿ ಮತ್ತು ಭಾರತೀಯ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 4 (1), 181, 146, 196, 199 ಎ

ಬಂಟ್ವಾಳ: ಅಪ್ರಾಪ್ತ ವಯಸ್ಕನಿಗೆ ವಾಹನ ನೀಡಿದ ಮಾಲೀಕರಿಗೆ 32000 ದಂಡ ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮದುವೆ ಬಗ್ಗೆ ಸುಳಿವು ಕೊಟ್ಟ ನಟಿ ರಚಿತಾ ರಾಮ್

(ನ್ಯೂಸ್‌ ಕಡಬ) newskadaba.com,  ಅ.16- ಕೊನೆಗೂ ನಟಿ ರಚಿತಾ ರಾಮ್ ತಮ್ಮ ಮದ್ವೆ ಬಗ್ಗೆ ಸುಳಿವು ಕೊಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುವಾಗ, ಸದ್ಯದಲ್ಲಿಯೇ ಮದುವೆ ಆಗುವೆ, ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಡುವೆ. ಲವ್ ಮ್ಯಾರೇಜೋ & ಅರೇಂಜ್ ಮ್ಯಾರೇಜೋ ಏನೋ ಮ್ಯಾರೇಜ್ ಆಗುವೆ. ಒಟ್ನಲ್ಲಿ ಇನ್ನು ಕೆಲವೇ ದಿನಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡುವೆ ಎಂದಿದ್ದಾರೆ. ಇತ್ತೀಚೆಗೆ ತಮ್ಮ ಹುಟ್ಟುಹಬ್ಬದ ಸಂದರ್ಭದಲ್ಲೂ ನಟಿ ಮದುವೆ ಬಗ್ಗೆ ಸುಳಿವು ಕೊಟ್ಟಿದ್ದರು. ಮದುವೆಯಾಗುವ ಹುಡುಗ ಹೇಗಿರಬೇಕು ಎನ್ನುವ ಬಗ್ಗೆ ಯಾವ

ಮದುವೆ ಬಗ್ಗೆ ಸುಳಿವು ಕೊಟ್ಟ ನಟಿ ರಚಿತಾ ರಾಮ್ Read More »

ಕರ್ನಾಟಕ, ಸಿನಿಮಾ

ಯಕ್ಷಗಾನ ದಿಗ್ಗಜ ದಿನೇಶ್ ಅಮ್ಮಣ್ಣಾಯ ವಿಧಿವಶ

(ನ್ಯೂಸ್‌ ಕಡಬ) newskadaba.com,  ಅ.16 ಮಂಗಳೂರು: ಯಕ್ಷಗಾನ ಹಿರಿಯ ಭಾಗವತ ಗಾನ ಕೋಗಿಲೆ ದಿನೇಶ್ ಅಮ್ಮಣ್ಣಾಯ(65) ಅವರು ಇಂದು ವಿಧಿವಶರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅಮ್ಮಣ್ಣಾಯರು ಇಂದು ಬೆಳ್ತಂಗಡಿಯ ಅರಸಿನಮಕ್ಕಿಯ ಸ್ವಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ತೆಂಕುತಿಟ್ಟು ಯಕ್ಷಗಾನ ಪರಂಪರೆಯ ಹಿರಿಯ ಭಾಗವತರಾಗಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಕಲಾ ಸೇವೆ ಸಲ್ಲಿಸಿದ್ದ ಅಮ್ಮಣ್ಣಾಯ ‘ರಸರಾಗ ಚಕ್ರವರ್ತಿ’ ಎಂಬ ಬಿರುದು ಹೊಂದಿದ್ದರು. ದಾಮೋದರ ಮಂಡೆಚ್ಚರ ಆಪ್ತ ಶಿಷ್ಯ ಇನ್ನು ದಿನೇಶ್‌ ಅಮ್ಮಣ್ಣಾಯರು ಹಿರಿಯ ಭಾಗವತ ದಾಮೋದರ ಮಂಡೆಚ್ಚ ಅವರ

ಯಕ್ಷಗಾನ ದಿಗ್ಗಜ ದಿನೇಶ್ ಅಮ್ಮಣ್ಣಾಯ ವಿಧಿವಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯ ರಾಜಧಾನಿಯಲ್ಲಿ‌ ಕಂಬಳ ನಡೆಸಲು ಅನುಮತಿಸಿದ ಹೈಕೋರ್ಟ್

(ನ್ಯೂಸ್ ಕಡಬ) newskadaba.com ಅ. 16. ಕರಾವಳಿಯಿಂದ ಹೊರಗೆ ಕಂಬಳ ನಡೆಸುವುದಕ್ಕೆ ಇದ್ದ ಅಡ್ಡಿ ನಿವಾರಣೆಯಾಗಿದ್ದು, ಕಂಬಳ ಆಯೋಜನೆಗೆ ಪೇಟಾದವರು ತಕರಾರು ಮಾಡಿದ ಹಿನ್ನೆಲೆಯಲ್ಲಿ ನಿಂತು ಹೋಗಿದ್ದ ಮೈಸೂರು, ಬೆಂಗಳೂರು ಹಾಗೂ ಶಿವಮೊಗ್ಗ ಕಂಬಳ ನಡೆಸಲು ಹೈಕೋಟ್೯ ಇದೀಗ ಅನುಮತಿ ನೀಡಿದೆ. ಪುತ್ತೂರು ಶಾಸಕ ಅಶೋಕ್‌ ರೈಯವರು ಬೆಂಗಳೂರಿನಲ್ಲಿ ಕಂಬಳ ಆಯೋಜಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದರು. ಆದರೆ ಅದರ ಮರುವರ್ಷ ಬೆಂಗಳೂರಿನಲ್ಲಿ ಮತ್ತೆ ಕಂಬಳ ನಡೆಸಲು ಮುಂದಾದಾಗ ಪೆಟಾ ತಕರಾರು ತೆಗೆದು ಕೋರ್ಟ್‌ ಮೆಟ್ಟಿಲೇರಿತ್ತು. ಇದರಿಂದಾಗಿ ಮತ್ತೆ

ರಾಜ್ಯ ರಾಜಧಾನಿಯಲ್ಲಿ‌ ಕಂಬಳ ನಡೆಸಲು ಅನುಮತಿಸಿದ ಹೈಕೋರ್ಟ್ Read More »

ಕರ್ನಾಟಕ

ರಷ್ಯಾದಿಂದ ಇಂಧನ ಖರೀದಿ ವಿಚಾರ; ಟ್ರಂಪ್ ಹೇಳಿಕೆ ಬೆನ್ನಲ್ಲೇ ಭಾರತ ಸ್ಪಷ್ಟನೆ

(ನ್ಯೂಸ್‌ ಕಡಬ) newskadaba.com,  ಅ.16- ಅಮೆರಿಕದ ಒತ್ತಾಯದಂತೆ ಭಾರತ ರಷ್ಯಾದಿಂದ ಇಂಧನ ಖರೀದಿಯನ್ನು  ಸಂಪೂರ್ಣವಾಗಿ ನಿಲ್ಲಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಒಪ್ಪಿಕೊಂಡಿದ್ದಾರೆ ಎಂದು ಡೊನಾಲ್ಡ್‌ ಟ್ರಂಪ್‌ಹೇಳಿಕೆ ನೀಡಿರುವ ಬೆನ್ನಲ್ಲೇ ಇದೀಗ ಭಾರತ ಸ್ಪಷ್ಟನೆ ನೀಡಿದೆ. ವಿದೇಶಾಂಗ ಸಚಿವಾಲಯ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಅಸ್ಥಿರ ಇಂಧನ ಸನ್ನಿವೇಶದಲ್ಲಿ ಭಾರತೀಯ ಗ್ರಾಹಕರ ಹಿತಾಸಕ್ತಿಗಳನ್ನು ಕಾಪಾಡುವುದು ಭಾರತದ ನಿರಂತರ ಆದ್ಯತೆಯಾಗಿದೆ ಎಂದು ಹೇಳಿದೆ. ಭಾರತ ತೈಲ ಮತ್ತು ಅನಿಲದ ಅತಿದೊಡ್ಡ ಆಮದುದಾರ ರಾಷ್ಟ್ರವಾಗಿ ಹೊರಹೊಮ್ಮಿದೆ. ಅಸ್ಥಿರ ಇಂಧನ ಸನ್ನಿವೇಶದಲ್ಲಿ ಭಾರತೀಯ ಗ್ರಾಹಕರ

ರಷ್ಯಾದಿಂದ ಇಂಧನ ಖರೀದಿ ವಿಚಾರ; ಟ್ರಂಪ್ ಹೇಳಿಕೆ ಬೆನ್ನಲ್ಲೇ ಭಾರತ ಸ್ಪಷ್ಟನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲೇ ಪ್ರಥಮ ಬಾರಿಗೆ ಇಂದ್ರಾಳಿ ರೈಲು ನಿಲ್ದಾಣದಲ್ಲಿ ಡಿಜಿಟಲ್ ಲಾಕರ್ ಸೌಲಭ್ಯ

(ನ್ಯೂಸ್ ಕಡಬ) newskadaba.com ಅ. 16. ರೈಲ್ವೆಯ ಪ್ರಯಾಣಿಕರಿಗೆ ರಾಜ್ಯದಲ್ಲೇ ಮೊದಲನೇಯದಾಗಿ ಉಡುಪಿಯ ಇಂದ್ರಾಳಿ ರೈಲ್ವೇ ನಿಲ್ದಾಣದಲ್ಲಿ ಡಿಜಿಟಲ್ ಲಾಕರ್ ಸೌಲಭ್ಯವನ್ನು ಒದಗಿಸಲಾಗಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ. ಆಧುನಿಕ ತಂತ್ರಜ್ಞಾನದೊಂದಿಗೆ ಉಡುಪಿ ರೈಲ್ವೇ ನಿಲ್ದಾಣದಲ್ಲಿ ಒಟ್ಟು 15 ಲಾಕರ್‌ ಗಳನ್ನು ಒದಗಿಸಲಾಗಿದೆ. ರೈಲ್ವೆ ಪ್ರಯಾಣಿಕರು ಉಡುಪಿಯಲ್ಲಿ ಇಳಿದು ನಿರ್ದಿಷ್ಟ ವೇಳೆಯ ಅವಧಿಗೆ ಗೊತ್ತುಪಡಿಸಿದ ಶುಲ್ಕ ಪಾವತಿಸಿ ತಮ್ಮ ಎಲ್ಲಾ ಲಗೇಜ್‌ ಗಳನ್ನು ಸುರಕ್ಷಿತವಾಗಿ ಡಿಜಿಟಲ್ ಲಾಕರ್ ವ್ಯವಸ್ಥೆಯಲ್ಲಿ ಇರಿಸಿ, ತಮ್ಮ ಕೆಲಸ ಮುಗಿಸಿಕೊಂಡು ಬಂದು

ರಾಜ್ಯದಲ್ಲೇ ಪ್ರಥಮ ಬಾರಿಗೆ ಇಂದ್ರಾಳಿ ರೈಲು ನಿಲ್ದಾಣದಲ್ಲಿ ಡಿಜಿಟಲ್ ಲಾಕರ್ ಸೌಲಭ್ಯ Read More »

ಕರ್ನಾಟಕ

ಮೈಸೂರು : ಕಾಂತಾರ ಚಾಪ್ಟರ್ 1 ಉತ್ತಮ ಪ್ರದರ್ಶನ –ರಿಷಬ್ ಶೆಟ್ಟಿ ಚಾಮುಂಡಿ ಬೆಟ್ಟಕ್ಕೆ ಭೇಟಿ

(ನ್ಯೂಸ್‌ ಕಡಬ) newskadaba.com,  ಅ.16:  ಮೈಸೂರು : ಕಾಂತಾರ ಚಾಪ್ಟರ್ 1 ಯಶಸ್ವಿ ಪ್ರದರ್ಶನ ಬೆನ್ನಲ್ಲೇ ನಟ ರಿಷಬ್ ಶೆಟ್ಟಿ ಚಾಮುಂಡಿ ಬೆಟ್ಟಕ್ಕೆ  ಭೇಟಿ ನೀಡಿ, ದೇವಿ ದರ್ಶನ ಪಡೆದುಕೊಂಡರು.. ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಅವರು ಚಾಮುಂಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಮಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲವೂ ಖುಷಿಯಾಗಿದೆ. ನಾಡಿನ ಜನತೆ ಹಾಗೂ ದೇಶದಾದ್ಯಂತ ತುಂಬಾ ಅದ್ಭುತವಾದ ಯಶಸ್ಸನ್ನು ಕೊಟ್ಟಿದ್ದಾರೆ. ಯಾವತ್ತೋ ಹೇಳಿದ್ದೇ ಈ ಸಿನಿಮಾದ ಯಶಸ್ಸು ಮೊದಲು ಕನ್ನಡಿಗರಿಗೆ ಸಲ್ಲಬೇಕು. ಅದೇ

ಮೈಸೂರು : ಕಾಂತಾರ ಚಾಪ್ಟರ್ 1 ಉತ್ತಮ ಪ್ರದರ್ಶನ –ರಿಷಬ್ ಶೆಟ್ಟಿ ಚಾಮುಂಡಿ ಬೆಟ್ಟಕ್ಕೆ ಭೇಟಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top