ಕರ್ನಾಟಕ

ಅ.15ರಿಂದ ಎರಡು ದಿನ ಕಲ್ಯಾಣ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಪ್ರವಾಸ

(ನ್ಯೂಸ್‌ ಕಡಬ) newskadaba.com ಅ. 14. ನಾಳೆಯಿಂದ 2  ದಿನಗಳ ಕಾಲ ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು  ಪ್ರವಾಸ ಕೈಗೊಳ್ಳಲಿದ್ದಾರೆ. ಕಲ್ಯಾಣ ಕರ್ನಾಟಕದ ಜಿಲ್ಲೆಗಳಾದ ಕಲಬುರಗಿ, ಬೀದರ್, ಕೊಪ್ಪಳ, ಬಳ್ಳಾರಿ, ರಾಯಚೂರು ಹಾಗೂ ಯಾದಗಿರಿಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ನಿರ್ಮಲಾ ಸೀತಾರಾಮನ್ ಭಾಗಿಯಾಗಲಿದ್ದಾರೆ. ಈ ಸಮಯದಲ್ಲಿ ರೈತ ಪ್ರಮುಖರು, ರೈತ ಕೇಂದ್ರಗಳು, ಕೃಷಿ ತರಬೇತಿ ಕೇಂದ್ರಗಳು, ಕೃಷಿ ಉತ್ಪನ್ನಗಳ ಸಂಸ್ಕರಣಾ ಕೇಂದ್ರಗಳಿಗೆ ಭೇಟಿ ನೀಡಿ ಸಂವಾದ ನಡೆಸಲಿದ್ದಾರೆ. ಕೇಂದ್ರಕ್ಕೆ ಎನ್‌ಡಿಆರ್‌ಎಫ್ […]

ಅ.15ರಿಂದ ಎರಡು ದಿನ ಕಲ್ಯಾಣ ಕರ್ನಾಟಕಕ್ಕೆ ನಿರ್ಮಲಾ ಸೀತಾರಾಮನ್ ಪ್ರವಾಸ Read More »

ಕರ್ನಾಟಕ

RSS ಚುಟುವಟಿಕೆಗೆ ನಿಷೇಧ: ತಮಿಳುನಾಡು ನೀತಿ ಅಧ್ಯಯನಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

(ನ್ಯೂಸ್‌ ಕಡಬ) newskadaba.com ಅ. 14. ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸುವ ಕುರಿತಾಗಿ ತಮಿಳುನಾಡು ಸರ್ಕಾರದ ನೀತಿಗಳನ್ನು ಅಧ್ಯಯನ ಮಾಡುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರದಂದು ಸೂಚನೆ ನೀಡಿದ್ದಾರೆ. ಬಾಗಲಕೋಟೆ ಜಿಲ್ಲೆ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್‌ಎಸ್‌ಎಸ್ ಸಂಘಟನೆ ತನ್ನ ಚಟುವಟಿಕೆಗಳಿಗೆ ಸರ್ಕಾರಿ ಸ್ಥಳಗಳನ್ನು ಬಳಸಿಕೊಳ್ಳುತ್ತಿದೆ. ತಮಿಳುನಾಡು ರಾಜ್ಯದಲ್ಲಿ ಇದನ್ನು ನಿರ್ಬಂಧಿಸಿದಂತೆ ರಾಜ್ಯದಲ್ಲಿಯೂ ನಿರ್ಬಂಧಿಸಬೇಕು ಎಂದು ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಪತ್ರ

RSS ಚುಟುವಟಿಕೆಗೆ ನಿಷೇಧ: ತಮಿಳುನಾಡು ನೀತಿ ಅಧ್ಯಯನಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸರ್ದಾರ್ ಪಟೇಲ್ 150ನೇ ಜಯಂತಿ- ವಿವಿಧ ಕಾರ್ಯಕ್ರಮಗಳು

(ನ್ಯೂಸ್‌ ಕಡಬ) newskadaba.com  ಅ. 14. ಸರ್ದಾರ್ ವಲ್ಲಭಾಯ್ ಪಟೇಲ್ ಅವರ 150ನೇ ಜನ್ಮ ವಾರ್ಷಿಕೋತ್ಸವದ ಸಂಭ್ರಮದ ಭಾಗವಾಗಿ, ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಮೇರಾ ಯುವ ಭಾರತ್ (MY Bharat) ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಭಾರತದ ರಾಜಕೀಯ ಏಕೀಕರಣದ ಮೂಲಕ ಏಕೀಕೃತ ಭಾರತವನ್ನು ನಿರ್ಮಿಸುವಲ್ಲಿ ಸರ್ದಾರ್ ವಲ್ಲಭಾಯ್ ಪಟೇಲ್ ಅವರ ಪಾತ್ರವನ್ನು ಯುವಜನರಿಗೆ ತಿಳಿಯಪಡಿಸುವುದು ಮತ್ತು ದೇಶದ ಐಕ್ಯತೆ ಹಾಗೂ ಸಮಗ್ರತೆಯನ್ನು ಕಾಪಾಡುವಲ್ಲಿ ಯುವಜನರ ಭಾಗವಹಿಸುವಿಕೆಯನ್ನು ಖಚಿತಪಡಿಸುವುದು ಈ ಕಾರ್ಯಕ್ರಮಗಳ

ಸರ್ದಾರ್ ಪಟೇಲ್ 150ನೇ ಜಯಂತಿ- ವಿವಿಧ ಕಾರ್ಯಕ್ರಮಗಳು Read More »

ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ

(ನ್ಯೂಸ್‌ ಕಡಬ) newskadaba.com  ಅ. 14. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025-28 ನೆ ಅವಧಿಯ ಆಡಳಿತ ಮಂಡಳಿ ಚುನಾವಣೆಗೆ ಸೋಮವಾರ ಅಧಿಸೂಚನೆ ಪ್ರಕಟಗೊಂಡಿದೆ. ಅಕ್ಟೋಬರ್ 19ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, (ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೆ) ನಾಮಪತ್ರ ಸಲ್ಲಿಸಲು ಅಕ್ಟೋಬರ್ 27 ಕೊನೆಯ ದಿನ. ಅಕ್ಟೋಬರ್ 28ರಂದು ನಾಮಪತ್ರಗಳ ಪರಿಶೀಲನೆ, ಅ. 30 ರಂದು  ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವ ಕೊನೆಯ ದಿನವಾಗಿರುತ್ತದೆ. ನವೆಂಬರ್ 9ರಂದು  ಬೆಳಿಗ್ಗೆ 9 ರಿಂದ ಮಧ್ಯಾಹ್ನ 3

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ Read More »

ಕರ್ನಾಟಕ

ವಿದ್ಯಾರ್ಥಿಗಳಿಗೆ ಕಿರುಕುಳ ಆರೋಪ – ಇಬ್ಬರು ಅರೆಸ್ಟ್

(ನ್ಯೂಸ್‌ ಕಡಬ) newskadaba.com ಅ. 14. ವಿದ್ಯಾರ್ಥಿಗಳನ್ನು ಹಿಂಬಾಲಿಸಿ ಕಿರುಕುಳ ನೀಡಲೆತ್ನಿಸಿದ ಆರೋಪದಡಿ ಇಬ್ಬರನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ.   ಬಂಧಿತರನ್ನು ಉದ್ಯಾವರ ಜಮಾಲುದ್ದೀನ್ ಫೈಝಲ್ (39) ಮತ್ತು ಹೊಸಬೆಟ್ಟುವಿನ ರಾಫಿಲ್ (45) ಎಂದು ಗುರುತಿಸಲಾಗಿದೆ. ಮಂಜೇಶ್ವರ ಗೋವಿಂದ ಪೈ ಕಾಲೇಜು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಹಿಂಬಾಲಿಸಿ ಕಾರಿನಲ್ಲಿ ಬಂದ ಆರೋಪಿಗಳು ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡಲು ಯತ್ನಿಸಿದ್ಧರು ಎನ್ನಲಾಗಿದೆ. ನಂತರ ವಿದ್ಯಾರ್ಥಿನಿಯರು ಹೇಗೋ ತಪ್ಪಿಸಿ ಮನೆಗೆ ತಲುಪಿದ್ದರು.

ವಿದ್ಯಾರ್ಥಿಗಳಿಗೆ ಕಿರುಕುಳ ಆರೋಪ – ಇಬ್ಬರು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾರ್ಜಿಂಗ್ ಹಾಕಿದ್ದ EV Bike ಏಕಾಏಕಿ ಸ್ಫೋಟ, ತಪ್ಪಿದ ಭಾರೀ ಅನಾಹುತ!

(ನ್ಯೂಸ್‌ ಕಡಬ) newskadaba.com,  ಅ .13:  ಚಾರ್ಜಿಂಗ್ ಹಾಕಿದ್ದ ಇವಿ ಬೈಕ್ ಇದ್ದಕ್ಕಿದ್ದಂತೆ ಸ್ಫೋಟಗೊಂಡು ಸುಟ್ಟು ಕರಕಲಾದ ಭಯಾನಕ ಘಟನೆ ಬಸವೇಶ್ವರನಗರದ ಶಿವನಹಳ್ಳಿಯಲ್ಲಿ ನಡೆದಿದೆ. ಅದೃಷ್ಟವಶಾತ್ ಈ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮುಕೇಶ್ ಎಂಬುವವರಿಗೆ ಸೇರಿದ ಈ ಇವಿ ಬೈಕ್, ಮನೆಯ ಬೇಸ್‌ಮೆಂಟ್‌ನಲ್ಲಿ ಚಾರ್ಜಿಂಗ್‌ನಲ್ಲಿತ್ತು. ರಾತ್ರಿ 11 ಗಂಟೆ ಸುಮಾರಿಗೆ ಚಾರ್ಜಿಂಗ್‌ನಲ್ಲಿದ್ದ ಎಲೆಕ್ಟ್ರಿಕ್ ಬೈಕ್ ಒಂದು ಇದ್ದಕ್ಕಿದ್ದಂತೆ ಸ್ಪೋಟಗೊಂಡು ಬೆಂಕಿಗಾಹುತಿಯಾಗಿದೆ. ಸ್ಪೋಟದಿಂದಾಗಿ ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಪಕ್ಕದಲ್ಲಿದ್ದ ಸೈಕಲ್ ಕೂಡ ಬೆಂಕಿಗೆ ಆಹುತಿಯಾಗಿದೆ. ಬೆಂಕಿ

ಚಾರ್ಜಿಂಗ್ ಹಾಕಿದ್ದ EV Bike ಏಕಾಏಕಿ ಸ್ಫೋಟ, ತಪ್ಪಿದ ಭಾರೀ ಅನಾಹುತ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರಿನ ಎರಡು ಮನೆಗಳಿಗೆ ಸಿಡಿಲು ಬಡಿತ ; 6 ಜನರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ಅ .13 ಮಂಗಳೂರು: 2 ಮನೆಗಳಿಗೆ ಸಿಡಿಲು ಬಡಿದು ಆರು ಮಂದಿ ಗಾಯಗೊಂಡಿರುವ ಘಟನೆ ಸುರತ್ಕಲ್ ಕಾಟಿಪಳ್ಳ 9ನೇ ಬ್ಲಾಕ್ ಮಧ್ಯದ ಗುರುನಗರ ಎಂಬಲ್ಲಿ ರವಿವಾರ ರಾತ್ರಿ ಸಂಭವಿಸಿದೆ. ಭಾರತಿ(30), ವಿನಯ(35), ಕುಸುಮ(55), ಹರಿಯಪ್ಪ(67), ರವಿಕಲಾ (60), ನಿತೀಶ್ (35) ಎಂಬವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ವರದಿಯಾಗಿದೆ. ಕಾಟಿಪಳ್ಳ 9ನೇ ಬ್ಲಾಕ್ ಪರಿಸರದಲ್ಲಿ ಭಾನುವಾರ ರಾತ್ರಿ ಏಕಾಏಕಿ ಸಿಡಿಲು ಗುಡುಗು ಸಹಿತ ಭಾರೀ ಮಳೆ ಸುರಿದಿದೆ. ಈ

ಮಂಗಳೂರಿನ ಎರಡು ಮನೆಗಳಿಗೆ ಸಿಡಿಲು ಬಡಿತ ; 6 ಜನರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದೀಪಾವಳಿ ಹಬ್ಬದೊಳಗಾಗಿ ಜಿಲ್ಲೆಯ ರೈತರಿಗೆ ಬೆಳೆ ಹಾನಿ ಪರಿಹಾರದ ಹಣ:ಖಂಡ್ರೆ

(ನ್ಯೂಸ್‌ ಕಡಬ) newskadaba.com,  ಅ .13:  ಅತಿವೃಷ್ಟಿಯಿಂದಾದ ಬೆಳೆಹಾನಿಯ ಸಂಪೂರ್ಣ ವರದಿ ಬಂದ ತಕ್ಷಣ, ದೀಪಾವಳಿ ಹಬ್ಬದೊಳಗಾಗಿ ಬೀದರ್ ಜಿಲ್ಲೆಯ ಎಲ್ಲಾ ರೈತರಿಗೆ ಬೆಳೆ ಹಾನಿ ಪರಿಹಾರವನ್ನು ತಕ್ಷಣ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿಯಲ್ಲಿ ಭಾನುವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಅತಿವೃಷ್ಟಿಯಿಂದಾದ ಹಾನಿ ಕುರಿತ ಸಮೀಕ್ಷಾ ವರದಿಗಳು ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಈ ವರ್ಷ ಅತಿವೃಷ್ಟಿಯಿಂದ ಬೀದರ ಜಿಲ್ಲೆಯಾದ್ಯಂತ ರೈತರ ಬೆಳೆಗಳು, ರಸ್ತೆ ಮತ್ತು

ದೀಪಾವಳಿ ಹಬ್ಬದೊಳಗಾಗಿ ಜಿಲ್ಲೆಯ ರೈತರಿಗೆ ಬೆಳೆ ಹಾನಿ ಪರಿಹಾರದ ಹಣ:ಖಂಡ್ರೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಏರಿಕೆಯಾದ ಚಿನ್ನದ ಬೆಲೆ; ಇಳಿಕೆಯಾದ ಡೈಮಂಡ್ ಬೆಲೆ

(ನ್ಯೂಸ್‌ ಕಡಬ) newskadaba.com,  ಅ .13 ಚಿನ್ನ ಅಂದ್ರೆ ಕಷ್ಟ ಎಂಬಂತೆ ಆಗಿದೆ. ಆಭರಣ ಪ್ರಿಯ ಮಹಿಳೆಯರು ಚಿನ್ನ ಖರೀದಿ ಇನ್ನು ಕನಸು ಅಂದುಕೊಳ್ಳುತ್ತಿದ್ದಾರೆ. ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ ನಡುವೆ ವಜ್ರದ ಬೆಲೆ ಹಂತ ಹಂತವಾಗಿ ಇಳಿಕೆಯಾಗುತ್ತಿದೆ. ರಷ್ಯಾ ಮತ್ತು ಉಕ್ರೇನ್ ಯುದ್ಧ, ಡೊನಾಲ್ಡ್ ಟ್ರಂಪ್ ಅತಿರೇಕದ ಸುಂಕಗಳ ಪರಿಣಾಮ ಚಿನ್ನವಿಂದು ಗಗನಕುಸುವಾಗಿದೆ. ಈ ಎಲ್ಲಾ ಜಾಗತೀಕ ಬದಲಾವಣೆಗಳು ನೇರವಾಗಿ ಚಿನ್ನದ ಮಾರುಕಟ್ಟೆ ಮೇಲೆ ಪರಿಣಾಮ ಬೀರುತ್ತಿವೆ. ಕಳೆದ ಕೆಲವು ತಿಂಗಳಿನಿಂದ ಗಣನೀಯವಾಗಿ ವಜ್ರದ

ಏರಿಕೆಯಾದ ಚಿನ್ನದ ಬೆಲೆ; ಇಳಿಕೆಯಾದ ಡೈಮಂಡ್ ಬೆಲೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ನಟ ದರ್ಶನ್‌ಗೆ ಜೈಲಿನಲ್ಲಿ ಅಗತ್ಯ ಸೌಲಭ್ಯ ಕಾನೂನು ಸೇವಾ ಪ್ರಾಧಿಕಾರ ಪರಿಶೀಲನೆ

(ನ್ಯೂಸ್‌ ಕಡಬ) newskadaba.com,  ಅ .13. ಬೆಂಗಳೂರು : – ನಟ ದರ್ಶನ್‌ಗೆ ಜೈಲಿನಲ್ಲಿ ಅಗತ್ಯ ಸೌಲಭ್ಯ ಒದಗಿಸಲಾಗಿದೆಯೇ ಎನ್ನುವ ಪರಿಶೀಲಿಸುವಂತೆ ನ್ಯಾಯಾಲಯದ ಸೂಚನೆ ಹಿನ್ನೆಲೆಯಲ್ಲಿ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಮತ್ತು ಸದಸ್ಯರು ಇಂದು ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಲಿದ್ದಾರೆ. 2ನೇ ಬಾರಿಗೆ ಜೈಲು ಸೇರಿರುವ ನಟ ದರ್ಶನ್ ಜೈಲಿನಲ್ಲಿ ಅಧಿಕಾರಿಗಳು ಅಗತ್ಯ ಸೌಲಭ್ಯ ನೀಡಿಲ್ಲ ಎಂದು ಕೋರ್ಟ್‌ಗೆ ಅರ್ಜಿ ಹಾಕಿದ್ದರು. ದರ್ಶನ್ ಅರ್ಜಿ ಪುರಸ್ಕರಿಸಿದ ಕೋರ್ಟ್ ಕಾನೂನು ಸೇವಾ ಪ್ರಾಧಿಕಾರದ ಸದಸ್ಯರಿಗೆ ಜೈಲಿಗೆ

ನಟ ದರ್ಶನ್‌ಗೆ ಜೈಲಿನಲ್ಲಿ ಅಗತ್ಯ ಸೌಲಭ್ಯ ಕಾನೂನು ಸೇವಾ ಪ್ರಾಧಿಕಾರ ಪರಿಶೀಲನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top