ಕರ್ನಾಟಕ

ಬಂಟ್ವಾಳ ನ್ಯಾಯಾಲಯದಲ್ಲಿ ಶನಿವಾರ ನಡೆದ ಲೋಕ ಅದಾಲತ್‌ನಲ್ಲಿ ಬಾಕಿ ಇದ್ದ 6228 ದಾವಾ ಪ್ರಕರಣಗಳಲ್ಲಿ 785 ಪ್ರಕರಣಗಳು ಇತ್ಯರ್ಥ

(ನ್ಯೂಸ್‌ ಕಡಬ) newskadaba.com,  ಸೆ.15 ಬಂಟ್ವಾಳ : ಬಂಟ್ವಾಳ ಕೋರ್ಟ್ ನಲ್ಲಿ  ಸೆ.13 (ಶನಿವಾರ)  ರಂದು ನಡೆದ ಲೋಕ ಅದಾಲತ್ ನಲ್ಲಿ ಬಾಕಿ ಇದ್ದ ಹಲವು ಪ್ರಕರಣಗಳು ಇತ್ಯರ್ಥಗೊಂಡು ರೂ. 32,68,475 ರೂ. ಸಂದಾಯಗೊಂಡು ಇತ್ಯರ್ಥಗೊಂಡಿರುತ್ತದೆ. ಹಾಗೆಯೇ ಒಟ್ಟು 9898 ಪಿಎಲ್‌ಸಿ ಪ್ರಕರಣಗಳು ಇತ್ಯರ್ಥಗೊಂಡಿದ್ದು, 3,02,54,522 ರೂ. ಸಂದಾಯವಾಗಿದೆ. ಹಿರಿಯ ಸಿವಿಲ್ ನ್ಯಾಯಾಧೀಶರಾದ ಅನಿಲ್ ಪ್ರಕಾಶ್ ಎಂ ಪಿ, ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಕೃಷ್ಣಮೂರ್ತಿ ಎನ್. ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ರಾಜೇಂದ್ರ ಪ್ರಸಾದ್ ಕೆ. ಎಸ್ ಹಾಗೂ […]

ಬಂಟ್ವಾಳ ನ್ಯಾಯಾಲಯದಲ್ಲಿ ಶನಿವಾರ ನಡೆದ ಲೋಕ ಅದಾಲತ್‌ನಲ್ಲಿ ಬಾಕಿ ಇದ್ದ 6228 ದಾವಾ ಪ್ರಕರಣಗಳಲ್ಲಿ 785 ಪ್ರಕರಣಗಳು ಇತ್ಯರ್ಥ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ ಪಾರು

(ನ್ಯೂಸ್‌ ಕಡಬ) newskadaba.com,  ಸೆ.13 : ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ರಸ್ತೆಯಲ್ಲೇ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಎಕ್ಕೂರಿನಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. ಮರದ ದಿಮ್ಮಿಗಳನ್ನು ಹೊತ್ತ ಲಾರಿ ಮಂಗಳೂರು ಕಡೆಯಿಂದ ತಲಪಾಡಿ ಕಡೆಗೆ ಸಾಗುತ್ತಿತ್ತು. ಈ ವೇಳೆ ಎಕ್ಕೂರು ಬಳಿ ಇಳಿಜಾರು ರಸ್ತೆಯಲ್ಲಿ ಲಾರಿ ಮಗುಚಿ ಬಿದ್ದಿದೆ. ಅಪಘಾತದ ವೇಳೆ ಚಾಲಕ ಅತಿ ವೇಗ ಮತ್ತು ಅಜಾಗರೂಕತೆಯಿಂದ ಲಾರಿಯನ್ನು ಚಲಾಯಿಸುತ್ತಿದ್ದ. ಇದರಿಂದಾಗಿ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡಿದ್ದಾನೆ ಎಂದು ವರದಿಯಾಗಿದೆ. ಅದೃಷ್ಟವಶಾತ್ ಚಾಲಕ

ಮಂಗಳೂರು: ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ ಪಾರು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಜಯಲಕ್ಷ್ಮೀ ದರ್ಶನ್ ಮನೆಯಲ್ಲಿ ಕಳ್ಳತನ; ದೂರು ದಾಖಲು, ಅವರ ಮೇಲೆಯೇ ಅನುಮಾನ!

(ನ್ಯೂಸ್‌ ಕಡಬ) newskadaba.com,  ಸೆ.13 : ಜೈಲಿನಲ್ಲಿರುವ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ನಿವಾಸದಲ್ಲಿ ಕಳ್ಳತನವಾಗಿದೆ. ಈ ಸಂಬಂಧ ವಿಜಯಲಕ್ಷ್ಮೀ ದರ್ಶನ್ ಅವರ ಮ್ಯಾನೇಜರ್ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರಿನ ಹಿನ್ನಲೆ CK ಅಚ್ಚುಕಟ್ಟು ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮನೆಕೆಲಸದವರ ಮೇಲೆ ಶಂಕೆ ವ್ಯಕ್ತಪಡಿಸಿ ಮ್ಯಾನೇಜರ್ ನಾಗರಾಜ್ ಈ ದೂರನ್ನು ದಾಖಲಿಸಿದ್ದಾರೆ. ದೂರಿನಲ್ಲಿ 3 ಲಕ್ಷ ರೂಪಾಯಿ ಕಳ್ಳತನವಾಗಿರುವ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಸೆಪ್ಟೆಂಬರ್ 4ರಂದು ಕೆಲಸದ ನಿಮಿತ್ ವಿಜಯಲಕ್ಷ್ಮೀ ದರ್ಶನ್ ಮೈಸೂರಿಗೆ ತೆರಳಿದ್ದರು.

ವಿಜಯಲಕ್ಷ್ಮೀ ದರ್ಶನ್ ಮನೆಯಲ್ಲಿ ಕಳ್ಳತನ; ದೂರು ದಾಖಲು, ಅವರ ಮೇಲೆಯೇ ಅನುಮಾನ! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಬೆಂಗಳೂರು: ಮೆಟ್ರೋ ರೈಲಿನಲ್ಲಿ ಕೇವಲ 20 ನಿಮಿಷದಲ್ಲಿ ಜೀವಂತ ಹೃದಯ ರವಾನೆ – ಮತ್ತೊಂದು ದಾಖಲೆ

(ನ್ಯೂಸ್‌ ಕಡಬ) newskadaba.com,  ಸೆ.13 ಬೆಂಗಳೂರು: ಕೇವಲ 20 ನಿಮಿಷದಲ್ಲಿ ಜೀವಂತ ಹೃದಯ ರವಾನೆ ,ಬೆಂಗಳೂರು ಮೆಟ್ರೋ ಮತ್ತೊಂದು ದಾಖಲೆ ನಿರ್ಮಿಸಿ  ಮೆಚ್ಚುಗೆಗೆ ಪಾತ್ರವಾಗಿದೆ. ನಿರ್ಣಾಯಕ ಹೃದಯ ಕಸಿಗಾಗಿ ಗುರುವಾರ ರಾತ್ರಿ 11 ಗಂಟೆಗೆ ಬೆಂಗಳೂರು ಮೆಟ್ರೋ ರೈಲಿನಲ್ಲಿ ಜೀವಂತ ಹೃದಯವನ್ನು ದಾಖಲೆಯ ಸಮಯದಲ್ಲಿ ಸಾಗಾಟ ಮಾಡಿದೆ. ಸೆಪ್ಟೆಂಬರ್ 11, 2025 ರ ರಾತ್ರಿ, ಯಶವಂತಪುರದಿಂದ ಮಂತ್ರಿ ಸ್ಕ್ವೇರ್‌ವರೆಗೆ ಜೀವಂತ ಹೃದಯ ಸಾಗಿಸುವ ಕಾರ್ಯಾಚರಣೆ ಯಶಸ್ವಿಯಾಗಿ ಸಂಪೂರ್ಣಗೊಂಡು ಸಾರ್ವಜನಿಕ ಮತ್ತು ವೈದ್ಯಕೀಯ ವಲಯಗಳಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಯಿತು.

ಬೆಂಗಳೂರು: ಮೆಟ್ರೋ ರೈಲಿನಲ್ಲಿ ಕೇವಲ 20 ನಿಮಿಷದಲ್ಲಿ ಜೀವಂತ ಹೃದಯ ರವಾನೆ – ಮತ್ತೊಂದು ದಾಖಲೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಟ್ರ್ಯಾಕ್ಟರ್‌ ಅನ್ನು ಲಾರಿಯಿಂದ ಇಳಿಸುವಾಗ ಮೈಮೇಲೆ ಬಿದ್ದು ಯುವಕ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.13 ಧಾರವಾಡ: ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಕೃಷಿಮೇಳದ ಮೊದಲ‌ ದಿನವೇ ದುರಂತವೊಂದು ಸಂಭವಿಸಿದೆ‌. ಲಾರಿಯಿಂದ ಟ್ರ್ಯಾಕ್ಟರ್ ಇಳಿಸುವಾಗ ಮೈಮೇಲೆ ಬಿದ್ದು ಯುವಕ ಮೃತಪಟ್ಟಿದ್ದಾನೆ. ತುಮಕೂರು ಮೂಲದ ಪರಶುರಾಮ (32) ಮೃತ. ಶನಿವಾರದಿಂದ ನಡೆಯುವ ಕೃಷಿ ಮೇಳದ ಪ್ರದರ್ಶನಕ್ಕೆ ಪರಶುರಾಮ ಟ್ರ್ಯಾಕ್ಟರ್ ತಂದಿದ್ದ. ಲಾರಿಯಿಂದ ಟ್ರ್ಯಾಕ್ಟರ್ ಇಳಿಸುವಾಗ ನಿಯಂತ್ರಣ ತಪ್ಪಿ ಪರಶುರಾಮನ ಮೈಮೇಲೆ ಬಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಟ್ರ್ಯಾಕ್ಟರ್‌ ಅನ್ನು ಲಾರಿಯಿಂದ ಇಳಿಸುವಾಗ ಮೈಮೇಲೆ ಬಿದ್ದು ಯುವಕ ಮೃತ್ಯು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಸೆ.15ರಂದು ಜೀ಼ಕನ್ನಡ – ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್, ಕಾಮಿಡಿ ಕಿಲಾಡಿಗಳು ಮಹಾ ಆಡಿಷನ್

(ನ್ಯೂಸ್‌ ಕಡಬ) newskadaba.com,  ಸೆ.13 ಮಂಗಳೂರು: ಪ್ರತಿಭೆಗಳನ್ನು ಗುರುತಿಸುವಲ್ಲಿ ನಂ.1 ಚಾನೆಲ್ ಆದ ಜೀ಼ ಕನ್ನಡ ವಾಹಿನಿ ಈಗ ಮತ್ತೊಮ್ಮೆ ಪ್ರತಿಭಾನ್ವಿತ ಕಲಾವಿದರಿಗೆ ಅವಕಾಶ ಕೊಡುತ್ತಿದೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಮತ್ತು ಕಾಮಿಡಿ ಕಿಲಾಡಿಗಳು ಆಡಿಷನ್ 31 ಜಿಲ್ಲೆಗಳಲ್ಲಿ ನಡೆಯಲಿದೆ. ಪ್ರತಿಭೆ ಇದ್ದರೂ ಅವಕಾಶ ಸಿಗದೇ ಇರುವವವರಿಗೆ ಜೀ಼ಕನ್ನಡ ಒಂದು ಅತ್ಯುತ್ತಮ ವೇದಿಕೆ ಕಲ್ಪಿಸಿಕೊಡುತ್ತಿದೆ. ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಭಾಗವಹಿಸುವವರ ವಯಸ್ಸು 6 ರಿಂದ 60 ರವರೆಗೆ ಇರಬೇಕು ಮತ್ತು ನೀವು ಉತ್ತಮವಾಗಿ ಡ್ಯಾನ್ಸ್ ಮಾಡುವವರಾಗಿರಬೇಕು. ಇನ್ನು, ಕಾಮಿಡಿ

ಮಂಗಳೂರು: ಸೆ.15ರಂದು ಜೀ಼ಕನ್ನಡ – ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್, ಕಾಮಿಡಿ ಕಿಲಾಡಿಗಳು ಮಹಾ ಆಡಿಷನ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಡ್ರೈವರ್‌ಗಳ ತಪ್ಪಿನಿಂದ ಅಪಘಾತವಾದ್ರೆ ಸರ್ಕಾರ ಹೇಗೆ ಹೊಣೆ?’- ಸಿಎಂ ಸಿದ್ದರಾಮಯ್ಯ ಪ್ರಶ್ನೆ

(ನ್ಯೂಸ್‌ ಕಡಬ) newskadaba.com,  ಸೆ.13 ಮೈಸೂರು :  ಅಪಘಾತಗಳನ್ನ ತಡೆಯಬೇಕು ಅಂತಲೇ ರಸ್ತೆ ಸುರಕ್ಷತಾ ಕಾನೂನುಗಳನ್ನ ಮಾಡಿದ್ದೇವೆ. ಆದರೂ ಡ್ರೈವರ್‌ಗಳ ತಪ್ಪುಗಳಿಂದ ಅಪಘಾತಗಳು ಸಂಭವಿಸಿದ್ರೆ ಸರ್ಕಾರ ಹೇಗೆ ಹೊಣೆಗಾರಿಗೆ ಆಗುತ್ತೆ? ಅಂತ ಸಿಎಂ ಪ್ರಶ್ನಿಸಿದ್ದಾರೆ. ಹಾಸನ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸಂಭವಿಸಿದ ಟ್ರಕ್ ದುರಂತರದಲ್ಲಿ 9 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಡ್ರೈವರ್‌ಗಳ ತಪ್ಪಿನಿಂದ ಅಪಘಾತವಾದರೆ ಸರ್ಕಾರ ಹೇಗೆ ಹೊಣೆಗಾರಿಕೆ ಆಗುತ್ತೆ? ಎಂದು  ಸಿದ್ದರಾಮಯ್ಯ ಅವರು ಕೇಳಿದರು. “ಕ್ಯಾಂಟರ್ ನುಗ್ಗಿ ಅಪಘಾತ ಆಗಿದೆ. ಮೃತರ

‘ಡ್ರೈವರ್‌ಗಳ ತಪ್ಪಿನಿಂದ ಅಪಘಾತವಾದ್ರೆ ಸರ್ಕಾರ ಹೇಗೆ ಹೊಣೆ?’- ಸಿಎಂ ಸಿದ್ದರಾಮಯ್ಯ ಪ್ರಶ್ನೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದ ಶಾಲೆಗಳಿಗೆ ಸೆ.20ರಿಂದ ದಸರಾ ರಜೆ

(ನ್ಯೂಸ್‌ ಕಡಬ) newskadaba.com,  ಸೆ.13 ಬೆಂಗಳೂರು: ಕರ್ನಾಟಕದಲ್ಲಿ ಶಾಲಾ ಮಕ್ಕಳಿಗೆ ಸೆಪ್ಟೆಂಬರ್ 20ರಿಂದ ದಸರಾ ರಜೆ ಆರಂಭವಾಗಲಿದೆ. ಸೆಪ್ಟೆಂಬರ್ ಹಾಗೂ ಅಕ್ಟೋಬರ್‌ನಲ್ಲಿ ಒಟ್ಟು 18 ದಿನಗಳು ದಸರಾ ರಜೆ ಸಿಗಲಿದೆ. ಈ ಬಗ್ಗೆ ಕರ್ನಾಟಕ ಶಿಕ್ಷಣ ಇಲಾಖೆಯು ಮಾಹಿತಿ ನೀಡಿದ್ದು, ಶೈಕ್ಷಣಿಕ ವರ್ಷ ಆರಂಭದಲ್ಲಿಯೇ ರಜೆ ಹಾಗೂ ಕಾರ್ಯ ಚಟುವಟಿಕೆಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಂತೆ ದಸರಾ ರಜೆ ಸೆಪ್ಟೆಂಬರ್ 20 ರಿಂದ ಆರಂಭವಾಗಿ ಅಕ್ಟೋಬರ್ 7ರವರೆಗೂ ಇರಲಿದೆ. 2025-26ನೇ ಶೈಕ್ಷಣಿಕ ಸಾಲಿನ ದಸರಾ ರಜೆ ಸೆಪ್ಟೆಂಬರ್

ರಾಜ್ಯದ ಶಾಲೆಗಳಿಗೆ ಸೆ.20ರಿಂದ ದಸರಾ ರಜೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು: ಬಟ್ಟೆ ಅಂಗಡಿ, ಕಲ್ಯಾಣ ಮಂಟಪದಲ್ಲಿ ಚಿನ್ನದ ಸರ ಕಳ್ಳತನ ಪ್ರಕರಣ ; ಮಹಿಳೆ ಮಿನ್ನತ್ ಬಂಧನ

(ನ್ಯೂಸ್‌ ಕಡಬ) newskadaba.com,  ಸೆ.13 ಮಂಗಳೂರು : ಬಟ್ಟೆ ಅಂಗಡಿ ಹಾಗೂ ಕಲ್ಯಾಣ ಮಂಟಪದಲ್ಲಿ ನಡೆದ ಚಿನ್ನದ ಸರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಮೂಲದ ಮಹಿಳೆ ಮಿನ್ನತ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತಳಿಂದ ಒಟ್ಟು 1.80 ಲಕ್ಷ ರೂ. ಮೌಲ್ಯದ 18 ಗ್ರಾಂ ತೂಕದ ಚಿನ್ನದ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ. ಜೂನ್ 2 ರಂದು ಉಳ್ಳಾಲ ತಾಲೂಕಿನ ಬೆಳ್ಮ ಗ್ರಾಮದ ರಹಮತ್ ತಮ್ಮ ಮಕ್ಕಳೊಂದಿಗೆ ತೊಕ್ಕೊಟ್ಟಿನಲ್ಲಿರುವ ಸಾಗರ್ ಕಲೆಕ್ಷನ್ ಬಟ್ಟೆ ಅಂಗಡಿಗೆ ಹೋಗಿದ್ದರು. ಮಳೆಯ ಕಾರಣ ಅವರು ಸ್ಟ್ರೀಟ್ ಪ್ಯಾಲೇಸ್

ಮಂಗಳೂರು: ಬಟ್ಟೆ ಅಂಗಡಿ, ಕಲ್ಯಾಣ ಮಂಟಪದಲ್ಲಿ ಚಿನ್ನದ ಸರ ಕಳ್ಳತನ ಪ್ರಕರಣ ; ಮಹಿಳೆ ಮಿನ್ನತ್ ಬಂಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಬ್ಯುರೋಕ್ರಸಿಯ ಅಟ್ಟಹಾಸ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ’ – ಬಂಟ್ವಾಳ SDPI ನಾಯಕರ ಸಭೆಯಲ್ಲಿ ರಿಯಾಝ್ ಕಡಂಬು

(ನ್ಯೂಸ್‌ ಕಡಬ) newskadaba.com,  ಸೆ.13 ಬಂಟ್ವಾಳ : ‘ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದಲ್ಲಿ ನಮ್ಮ ಸಂವಿಧಾನ  ಮತ್ತು ಸಂವಿಧಾನ ಪ್ರತಿಪಾದಿಸಿದ ಮೌಲ್ಯ ಮತ್ತು ಕಾನೂನುಗಳೇ ಅಂತಿಮವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ಘನತೆ, ಗೌರವದ ಮತ್ತು ಸ್ವಾಭಿಮಾನದ ಬದುಕನ್ನ ಸಂವಿಧಾನ ಪ್ರತಿಪಾದಿಸಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ, ಮತ್ತು ವಾಕ್ ಸ್ವಾತಂತ್ರ್ಯವನ್ನು ಪ್ರತಿಯೊಬ್ಬ ನಾಗರಿಕನಿಗೂ ಖಾತ್ರಿಪಡಿಸಿದ ಸಂವಿಧಾನಕ್ಕೆ ವಿರುದ್ಧವಾಗಿ ಅನ್ಯಾಯವನ್ನು ಪ್ರಶ್ನಿಸಿದವರಿಗೆ  ಇಲ್ಲಿನ ಅಧಿಕಾರಶಾಹಿಯು ಅನ್ಯಾಯವಾಗಿ ಪ್ರಕರಣ ದಾಖಲಿಸುವ ಮೂಲಕ ನಾಗರಿಕನ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳುತ್ತಿದೆ. ಇದು

‘ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಬ್ಯುರೋಕ್ರಸಿಯ ಅಟ್ಟಹಾಸ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ’ – ಬಂಟ್ವಾಳ SDPI ನಾಯಕರ ಸಭೆಯಲ್ಲಿ ರಿಯಾಝ್ ಕಡಂಬು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top