ಕರ್ನಾಟಕ

ವಯನಾಡು ಭೂಕುಸಿತ: ಮೃತರ ಸಂಖ್ಯೆ 6ಕ್ಕೆ ಏರಿಕೆ; ಮೂರು ಶವಗಳ ಪತ್ತೆ

(ನ್ಯೂಸ್‌ ಕಡಬ) newskadaba.com,  ಜು.10 : ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಗುರುವಾರ ಶೋಧ ಕಾರ್ಯಾಚರಣೆಯ ವೇಳೆ ದುರಂತದ ಸ್ಥಳ ಹಾಗೂ ಸಮೀಪದ ನದಿಯಿಂದ ಒಟ್ಟು ಮೂರು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಮೃತದೇಹಗಳನ್ನು ಉತ್ತರ ಪ್ರದೇಶದ ಸರ್ವೇಯರ್ ಅಜರುದ್ದೀನ್ ಅನ್ಸಾರಿ, ಹಿಮಾಚಲ ಪ್ರದೇಶದ ಎಂಜಿನಿಯರ್ ರಾಹುಲ್ ಶರ್ಮಾ ಹಾಗೂ ಬಿಹಾರದ ಆಪರೇಟರ್ ಮೊಹಮ್ಮದ್ ಇಮ್ರಾನ್ ಎಂದು ಗುರುತಿಸಲಾಗಿದೆ. ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ವೈತಿರಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದ್ದು, ಬಳಿಕ ಕೋಝಿಕ್ಕೋಡ್ […]

ವಯನಾಡು ಭೂಕುಸಿತ: ಮೃತರ ಸಂಖ್ಯೆ 6ಕ್ಕೆ ಏರಿಕೆ; ಮೂರು ಶವಗಳ ಪತ್ತೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಡಿತರ ಚೀಟಿದಾರರೇ ಗಮನಿಸಿ: ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಮೊಬೈಲ್ ಲಿಂಕ್ ಮಾಡಲು ಸುವರ್ಣಾವಕಾಶ

(ನ್ಯೂಸ್‌ ಕಡಬ) newskadaba.com,  ಜು.10  ಕರ್ನಾಟಕದ ಪಡಿತರ ಚೀಟಿದಾರರು ತಮ್ಮ ಕಾರ್ಡ್‌ನಲ್ಲಿರುವ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ರಾಜ್ಯ ಸರ್ಕಾರವು ಮುಕ್ತ ಅವಕಾಶ ಕಲ್ಪಿಸಿದೆ. ಆನ್‌ಲೈನ್ ಮತ್ತು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 31, 2027 ರವರೆಗೆ ಅಂತಿಮ ಗಡುವು ನೀಡಲಾಗಿದೆ.   ಏನೆಲ್ಲಾ ತಿದ್ದುಪಡಿ ಮಾಡಿಸಬಹುದು: ಹೊಸ ಸದಸ್ಯರ ಹೆಸರು ಸೇರ್ಪಡೆ/ತೆಗೆದುಹಾಕುವುದು ,ಕುಟುಂಬದ ಮುಖ್ಯಸ್ಥರ ಬದಲಾವಣೆ ಹಾಗೂ ಫೋಟೋ ಅಪ್ಡೇಟ್,ನ್ಯಾಯಬೆಲೆ ಅಂಗಡಿ ವಿಳಾಸ ಬದಲಾವಣೆ ಮತ್ತು ಮೊಬೈಲ್ ಸಂಖ್ಯೆ ಲಿಂಕ್ ಮಾಡುವುದು…ಬೇಕಾಗುವ ಪ್ರಮುಖ ದಾಖಲೆಗಳು: ಪತ್ನಿ ಹೆಸರು

ಪಡಿತರ ಚೀಟಿದಾರರೇ ಗಮನಿಸಿ: ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಮೊಬೈಲ್ ಲಿಂಕ್ ಮಾಡಲು ಸುವರ್ಣಾವಕಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಭಾರತ-ಆಸ್ಟ್ರೇಲಿಯಾ ಐತಿಹಾಸಿಕ ಕ್ರೀಡಾ ಒಪ್ಪಂದ: ಪ್ರಧಾನಿ ಮೋದಿ ಅಧಿಕೃತ ಘೋಷಣೆ

(ನ್ಯೂಸ್‌ ಕಡಬ) newskadaba.com,  ಜು.10  ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಕ್ರೀಡಾ ಬಾಂಧವ್ಯ ಬಲಪಡಿಸಲು ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.ಮೆಲ್ಬೋರ್ನ್ ಕ್ರಿಕೆಟ್ ಕ್ಲಬ್ (MCC) ಜೊತೆಗಿನ ಈ ಸಹಭಾಗಿತ್ವವನ್ನು ಪ್ರಧಾನಿ ನರೇಂದ್ರ ಮೋದಿ ಅಧಿಕೃತವಾಗಿ ಘೋಷಿಸಿದ್ದಾರೆ. ಕ್ರಿಕೆಟ್, ಫುಟ್‌ಬಾಲ್ ಹಾಗೂ ಕಬಡ್ಡಿ ಕ್ರೀಡೆಗಳ ಅಭಿವೃದ್ಧಿಗೆ ವಿಶೇಷ ಆದ್ಯತೆ, ತಳಮಟ್ಟದಲ್ಲೇ ಯುವ ಕ್ರೀಡಾಪಟುಗಳನ್ನು ಗುರುತಿಸಿ ವಿಶ್ವದರ್ಜೆಯ ತರಬೇತಿ ನೀಡುವುದು.ಮತ್ತು ಕ್ರೀಡಾ ವಿಜ್ಞಾನ ಮತ್ತು ತಾಂತ್ರಿಕ ಪರಿಣತಿ ವಿನಿಮಯದ ಮೂಲಕ ಒಲಿಂಪಿಕ್ಸ್ ಹಾಗೂ ಕಾಮನ್‌ವೆಲ್ತ್ ಕ್ರೀಡಾಕೂಟಗಳಿಗೆ ಭಾರತೀಯ ಅಥ್ಲೀಟ್‌ಗಳನ್ನು ಸಜ್ಜುಗೊಳಿಸುವುದು.

ಭಾರತ-ಆಸ್ಟ್ರೇಲಿಯಾ ಐತಿಹಾಸಿಕ ಕ್ರೀಡಾ ಒಪ್ಪಂದ: ಪ್ರಧಾನಿ ಮೋದಿ ಅಧಿಕೃತ ಘೋಷಣೆ Read More »

ಕರ್ನಾಟಕ, ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಬ್ರಹ್ಮಣ್ಯದ ಲಾಡ್ಜ್‌ನಲ್ಲಿ ನೇಣಿಗೆ ಶರಣಾದ ವ್ಯಕ್ತಿ: ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ಜು.10  ಸುಬ್ರಹ್ಮಣ್ಯ: ಪ್ರಸಿದ್ಧ ನಾಗಕ್ಷೇತ್ರ ಸುಬ್ರಹ್ಮಣ್ಯದ ವಸತಿಗೃಹ (ಲಾಡ್ಜ್) ಒಂದರಲ್ಲಿ ನಿನ್ನೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಈ ಸಂಬಂಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕ್ಷೇತ್ರದ ದೇವರ ಗದ್ದೆಗೆ ಹೋಗುವ ರಸ್ತೆಯಲ್ಲಿರುವ ವಸತಿಗೃಹವೊಂದರಲ್ಲಿ ಈ ಘಟನೆ ಸಂಭವಿಸಿದೆ. ಮೃತರು ಹೊರಗಿನಿಂದ ಬಂದ ಯಾತ್ರಿಕರೆನ್ನಲಾಗಿದ್ದು, ತಂಗಿದ್ದ ಕೋಣೆಯ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆಂಜನೇಯ ರೆಡ್ಡಿ ಅವರು ಭೇಟಿ

ಸುಬ್ರಹ್ಮಣ್ಯದ ಲಾಡ್ಜ್‌ನಲ್ಲಿ ನೇಣಿಗೆ ಶರಣಾದ ವ್ಯಕ್ತಿ: ಪ್ರಕರಣ ದಾಖಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನಿಯಮ ಉಲ್ಲಂಘನೆ: ಇಬ್ಬರು ಕೈದಿಗಳ ಬಳಿ ಮೊಬೈಲ್ ಫೋನ್ ಜಪ್ತಿ

(ನ್ಯೂಸ್‌ ಕಡಬ) newskadaba.com,  ಜು.10 : ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ಬಳಿ ಮೊಬೈಲ್ ಪತ್ತೆಯಾಗಿರುವ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಿಚಾರಣಾಧೀನ ಕೈದಿಗಳಾದ ಮೊಹಮ್ಮದ್ ಅಜ್ಮಲ್ ಮತ್ತು ಮೊಹಮ್ಮದ್ ಇಕ್ಬಾಲ್. ಜುಲೈ 7ರಂದು ರಾತ್ರಿ ಜೈಲಿನ ಅಧೀಕ್ಷಕ ಶರಣ ಬಸಪ್ಪ ನೇತೃತ್ವದಲ್ಲಿ ಸಿಬ್ಬಂದಿಯೊಂದಿಗೆ ಜೈಲಿನ ‘ಎ‘ ಬ್ಲಾಕ್‌ನ ಕೊಠಡಿ ಸಂಖ್ಯೆ 3ರಲ್ಲಿ ಹಠಾತ್ ತಪಾಸಣೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಕೊಠಡಿಯಲ್ಲಿದ್ದ ಇಬ್ಬರು ವಿಚಾರಣಾಧೀನ ಕೈದಿಗಳ ಬಳಿ ಮೊಬೈಲ್ ಫೋನ್‌ಗಳು ಪತ್ತೆಯಾಗಿವೆ.ನಿಯಮ ಉಲ್ಲಂಘಿಸಿ ಮೊಬೈಲ್ ಹೊಂದಿದ್ದ ಕೈದಿಗಳ ವಿರುದ್ಧ

ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನಿಯಮ ಉಲ್ಲಂಘನೆ: ಇಬ್ಬರು ಕೈದಿಗಳ ಬಳಿ ಮೊಬೈಲ್ ಫೋನ್ ಜಪ್ತಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮುಂದಿನ 3 ದಿನ ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ: ಕರಾವಳಿ ಜಿಲ್ಲೆಗಳಿಗೆ ಹೈ ಅಲರ್ಟ್!

(ನ್ಯೂಸ್‌ ಕಡಬ) newskadaba.com,  ಜು.10 : ಮುಂಬರುವ ಮೂರು ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 50 ರಿಂದ 60 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಮುನ್ನೆಚ್ಚರಿಕೆಯಾಗಿ ಸಮುದ್ರ ತೀರ ಹಾಗೂ ತಗ್ಗು ಪ್ರದೇಶದ ಜನರಿಗೆ ಸುರಕ್ಷಿತವಾಗಿರಲು ಸೂಚಿಸಲಾಗಿದೆ.

ಮುಂದಿನ 3 ದಿನ ರಾಜ್ಯಾದ್ಯಂತ ಭಾರೀ ಮಳೆ ಮುನ್ಸೂಚನೆ: ಕರಾವಳಿ ಜಿಲ್ಲೆಗಳಿಗೆ ಹೈ ಅಲರ್ಟ್! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಷ್ಟ್ರೀಯ ಸಾಂಖ್ಯಿಕ ದಿನಾಚರಣೆ

(ನ್ಯೂಸ್ ಕಡಬ) newskadaba.com ಜು. 10. ಪ್ರೊ.ಪಿ.ಸಿ. ಮಹಾಲನೋಬಿಸ್‍ ರವರ 133ನೇ ಜನ್ಮ ದಿನಾಚರಣೆಯ ಅಂಗವಾಗಿ 20ನೇ ರಾಷ್ಟ್ರೀಯ ಸಾಂಖ್ಯಿಕ ದಿನಾಚರಣೆಯನ್ನು ಜು.7 ರಂದು ದ.ಕ. ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕಛೇರಿಯಲ್ಲಿ ದೀಪ ಬೆಳಗಿಸಿ ಆಚರಿಸಲಾಯಿತು. ಮಣಿಪಾಲ ಪ್ರಸನ್ನ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್ ಮುಖ್ಯಸ್ಥ ಪ್ರೊ.ವಾಸುದೇವ ಗುಡ್ಡಟ್ಟು ಅನ್‍ ಲಾ ಕಿಂಗ್ ದ ಪೊಟೆನ್ಶಿಯಲ್  ಆಫ್ ಅಡ್ಮಿಸ್ಟ್ರೇಟಿವ್ ಡಾಟಾ  ಎಂಬ ವಿಷಯದ  ಬಗ್ಗೆ ಉಪನ್ಯಾಸ ನೀಡಿದರು. ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಸುಷ್ಮಾ ಕೆ.ಎಸ್ ಅವರು ಅಧ್ಯಕ್ಷತೆ ವಹಿಸಿದ್ದರು.

ರಾಷ್ಟ್ರೀಯ ಸಾಂಖ್ಯಿಕ ದಿನಾಚರಣೆ Read More »

ಕರ್ನಾಟಕ

ಆಸ್ಟ್ರೇಲಿಯಾಕ್ಕೆ ಪ್ರಧಾನಿ ಮೋದಿ ಭೇಟಿ: ಮೆಲ್ಬೋರ್ನ್‌ನಲ್ಲಿ ಅನಿವಾಸಿ ಭಾರತೀಯರಿಂದ ಭವ್ಯ ಸಾಂಪ್ರದಾಯಿಕ ಸ್ವಾಗತ

(ನ್ಯೂಸ್‌ ಕಡಬ) newskadaba.com ಜು. 09: ಮೂರು ರಾಷ್ಟ್ರಗಳ ಪ್ರವಾಸದ ಎರಡನೇ ಹಂತವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೂರು ದಿನಗಳ ಅಧಿಕೃತ ಭೇಟಿಗಾಗಿ ಆಸ್ಟ್ರೇಲಿಯಾದ ಮೆಲ್ಬೋರ್ನ್‌ಗೆ ಆಗಮಿಸಿದ್ದು, ಅಲ್ಲಿನ ಅನಿವಾಸಿ ಭಾರತೀಯ ಸಮುದಾಯದಿಂದ ಅಭೂತಪೂರ್ವ ಸಾಂಪ್ರದಾಯಿಕ ಸ್ವಾಗತ ಲಭಿಸಿದೆ. ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿಯವರನ್ನು ನೂರಾರು ಅನಿವಾಸಿ ಭಾರತೀಯರು ತ್ರಿವರ್ಣ ಧ್ವಜ ಹಾರಿಸಿ, ‘ಭಾರತ್ ಮಾತಾ ಕೀ ಜೈ’ ಮತ್ತು ‘ಮೋದಿ, ಮೋದಿ’ ಘೋಷಣೆಗಳೊಂದಿಗೆ ಆತ್ಮೀಯವಾಗಿ ಬರಮಾಡಿಕೊಂಡರು. ‘ಆಸ್ಟ್ರೇಲಿಯನ್ ಇಂಡಿಯನ್ ಆರ್ಕೆಸ್ಟ್ರಾ’ ತಂಡವು ಪ್ರಸ್ತುತಪಡಿಸಿದ

ಆಸ್ಟ್ರೇಲಿಯಾಕ್ಕೆ ಪ್ರಧಾನಿ ಮೋದಿ ಭೇಟಿ: ಮೆಲ್ಬೋರ್ನ್‌ನಲ್ಲಿ ಅನಿವಾಸಿ ಭಾರತೀಯರಿಂದ ಭವ್ಯ ಸಾಂಪ್ರದಾಯಿಕ ಸ್ವಾಗತ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಹಾರಾಷ್ಟ್ರ ಭಾರಿ ಮಳೆ: ಪ್ರವಾಹದ ನೀರಿನಲ್ಲಿ ತೇಲಿಹೋದ HPCL ಘಟಕದ 3,000 ಗ್ಯಾಸ್ ಸಿಲಿಂಡರ್‌ಗಳು!

(ನ್ಯೂಸ್‌ ಕಡಬ) newskadaba.com,  ಜು.09 : ಮುಂಬೈ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ರಾಯಗಢ ಜಿಲ್ಲೆಯ ಪನ್ವೇಲ್ ತಾಲೂಕಿನ ಚವಾಣೆ ಗ್ರಾಮದಲ್ಲಿರುವ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಘಟಕಕ್ಕೆ ಪ್ರವಾಹದ ನೀರು ನುಗ್ಗಿದ್ದು, ಸುಮಾರು 3,000 ಗ್ಯಾಸ್ ಸಿಲಿಂಡರ್‌ಗಳು ನೀರಿನಲ್ಲಿ ತೇಲಿ ಹೋಗಿವೆ. ಪಾತಾಳಗಂಗಾ ನದಿಯ ಪ್ರವಾಹದ ಹೊಡೆತಕ್ಕೆ ಸಿಲುಕಿ HPCL ಬಾಟ್ಲಿಂಗ್ ಘಟಕದ ಆವರಣದಲ್ಲಿದ್ದ ಗ್ಯಾಸ್ ತುಂಬಿದ ಹಾಗೂ ಖಾಲಿ ಸಿಲಿಂಡರ್‌ಗಳು ನದಿಯಲ್ಲಿ ಕೊಚ್ಚಿ ಹೋಗಿವೆ. ನೂರಾರು ಸಿಲಿಂಡರ್‌ಗಳು ತೇಲುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ

ಮಹಾರಾಷ್ಟ್ರ ಭಾರಿ ಮಳೆ: ಪ್ರವಾಹದ ನೀರಿನಲ್ಲಿ ತೇಲಿಹೋದ HPCL ಘಟಕದ 3,000 ಗ್ಯಾಸ್ ಸಿಲಿಂಡರ್‌ಗಳು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪಣಂಬೂರು ಬೀಚ್‌ನಲ್ಲಿ ಭಾರಿ ಕಡಲು ಕೊರೆತ: ಎರಡು ಬೃಹತ್ ಮರಗಳು ಧರೆಗುರುಳಿ, ಸ್ಥಳೀಯರಲ್ಲಿ ಆತಂಕ!

(ನ್ಯೂಸ್‌ ಕಡಬ) newskadaba.com,  ಜು.09 ಮಂಗಳೂರು: ನಗರದ ಪ್ರಸಿದ್ಧ ಪಣಂಬೂರು ಅಂತರರಾಷ್ಟ್ರೀಯ ಬೀಚ್‌ನಲ್ಲಿ ಕಳೆದ ಕೆಲವು ದಿನಗಳಿಂದ ಬೀಸುತ್ತಿರುವ ಭಾರಿ ಗಾಳಿ ಮತ್ತು ಕಡಲಬ್ಬರದ ಪರಿಣಾಮವಾಗಿ ಕಡಲು ಕೊರೆತ ಉಂಟಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬೀಚ್‌ನ ಪ್ರಮುಖ ತಡೆಗೋಡೆ, ಕಚೇರಿ ಹಾಗೂ ಟಿಕೆಟ್ ಕೌಂಟರ್ ಸಮೀಪ ಕಡಲು ಕೊರೆತ ತೀವ್ರವಾಗಿದ್ದು, ಎರಡು ಬೃಹತ್ ಮರಗಳು ಧರೆಗುರುಳಿವೆ.ಕೋಸ್ಟ್ ಗಾರ್ಡ್ ಕಚೇರಿ ಸಮೀಪ ಹೆಚ್ಚಿನ ಹಾನಿಯಾಗದಂತೆ ತಡೆಯಲು ತಾತ್ಕಾಲಿಕವಾಗಿ ಬೃಹತ್ ಕಲ್ಲುಗಳನ್ನು ಅಳವಡಿಸಲಾಗಿದೆ. ಜಿಲ್ಲೆಯಲ್ಲಿ ಮಳೆ ಪ್ರಮಾಣ ಕಡಿಮೆಯಿದ್ದರೂ, ತೀರದಲ್ಲಿ

ಪಣಂಬೂರು ಬೀಚ್‌ನಲ್ಲಿ ಭಾರಿ ಕಡಲು ಕೊರೆತ: ಎರಡು ಬೃಹತ್ ಮರಗಳು ಧರೆಗುರುಳಿ, ಸ್ಥಳೀಯರಲ್ಲಿ ಆತಂಕ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top