ಕರ್ನಾಟಕ

ಮಾಣಿ-ಮೈಸೂರು ರಸ್ತೆಗೆ ಉರುಳಿದ ಬೃಹತ್ ಮರ: ಸಂಚಾರ ಸಂಪೂರ್ಣ ಬಂದ್

(ನ್ಯೂಸ್‌ ಕಡಬ) newskadaba.com,  ಜು.07 ಮಂಗಳವಾರ ಬೆಳಿಗ್ಗೆ ಸುರಿದ ಭಾರೀ ಗಾಳಿ–ಮಳೆಗೆ ಬಂಟ್ವಾಳ ತಾಲೂಕಿನ ಮಾಣಿ ಸಮೀಪ ಮಾಣಿ–ಮೈಸೂರು ರಸ್ತೆಗೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದ ಪರಿಣಾಮ ರಸ್ತೆ ಸಂಚಾರ ಕೆಲಕಾಲ ಸಂಪೂರ್ಣ ಅಸ್ತವ್ಯಸ್ತಗೊಂಡಿತು.ವಿದ್ಯುತ್ ಕಂಬಗಳು ತುಂಡಾಗಿ ಬಿದ್ದಿವೆ. ಮಾಣಿ ಪಟ್ಲ ಕೋಡಿ ಎಂಬಲ್ಲಿ ಮರ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಯಿತು. ಇದರಿಂದ ಬೆಳಿಗ್ಗೆ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿಗಳು, ಉದ್ಯೋಗಕ್ಕೆ ಹಾಗೂ ವಿವಿಧ ಕೆಲಸಗಳಿಗೆ ತೆರಳುತ್ತಿದ್ದ ಸಾರ್ವಜನಿಕರು ಸಾಕಷ್ಟು ತೊಂದರೆ […]

ಮಾಣಿ-ಮೈಸೂರು ರಸ್ತೆಗೆ ಉರುಳಿದ ಬೃಹತ್ ಮರ: ಸಂಚಾರ ಸಂಪೂರ್ಣ ಬಂದ್ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

NEET, UPSC ಅಭ್ಯರ್ಥಿಗಳೇ ಎಚ್ಚರ! ನಕಲಿ ಪ್ರಶ್ನೆಪತ್ರಿಕೆ ನೀಡಿ ಲಕ್ಷಾಂತರ ರೂ. ಲೂಟಿ ಮಾಡುತ್ತಿದ್ದ ಜಾಲ ಪದಾಂಗಣಕ್ಕೆ

(ನ್ಯೂಸ್‌ ಕಡಬ) newskadaba.com,  ಜು.07: ನವದೆಹಲಿ: ದೇಶದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳಾದ ನೀಟ್ (NEET), ಯುಪಿಎಸ್‌ಸಿ (UPSC) ಸಿವಿಲ್ ಸರ್ವೀಸ್, ಎಸ್‌ಎಸ್‌ಸಿ ಸಿಜಿಎಲ್ (SSC CGL), ಎನ್‌ಡಿಎ (NDA) ಹಾಗೂ ಐಬಿಪಿಎಸ್ (IBPS) ಸೇರಿದಂತೆ ವಿವಿಧ ರಾಜ್ಯಗಳ ಬೋರ್ಡ್ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ ಹೆಸರಿನಲ್ಲಿ ಅಭ್ಯರ್ಥಿಗಳನ್ನು ಗುರಿಯಾಗಿಸಿಕೊಂಡು ಕೋಟ್ಯಂತರ ರೂಪಾಯಿ ವಂಚಿಸುತ್ತಿದ್ದ ಬೃಹತ್ ಜಾಲವೊಂದು ಪತ್ತೆಯಾಗಿದೆ. ಪರೀಕ್ಷೆಗೆ ಕೇವಲ ಕೆಲವೇ ಗಂಟೆಗಳ ಮುನ್ನ, “ನಮ್ಮ ಬಳಿ ಅಸಲಿ ಪ್ರಶ್ನೆಪತ್ರಿಕೆ ಇದೆ” ಎಂದು ನಂಬಿಸಿ ಪ್ರತಿ ಅಭ್ಯರ್ಥಿಯಿಂದ ₹50,000

NEET, UPSC ಅಭ್ಯರ್ಥಿಗಳೇ ಎಚ್ಚರ! ನಕಲಿ ಪ್ರಶ್ನೆಪತ್ರಿಕೆ ನೀಡಿ ಲಕ್ಷಾಂತರ ರೂ. ಲೂಟಿ ಮಾಡುತ್ತಿದ್ದ ಜಾಲ ಪದಾಂಗಣಕ್ಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಾಟ್ಸಪ್ ಯೂಸರ್ ನೇಮ್ ವೈಶಿಷ್ಟ್ಯ: ಮೆಟಾ ಸಂಸ್ಥೆಗೆ ಪ್ರತಿಕ್ರಿಯಿಸಲು 3 ದಿನಗಳ ಹೆಚ್ಚುವರಿ ಕಾಲಾವಕಾಶ ನೀಡಿದ ಕೇಂದ್ರ ಸರ್ಕಾರ!

(ನ್ಯೂಸ್‌ ಕಡಬ) newskadaba.com,  ಜು.07:ವಾಟ್ಸಪ್‌ನ ಹೊಸ ‘ಯೂಸರ್ ನೇಮ್ (Username)’ ವೈಶಿಷ್ಟ್ಯದ ಕುರಿತು ಎದ್ದಿರುವ ಆತಂಕಗಳಿಗೆ ಪ್ರತಿಕ್ರಿಯೆ ನೀಡಲು ಕೇಂದ್ರ ಸರ್ಕಾರವು ಮೆಟಾ ಸಂಸ್ಥೆಗೆ ಹೆಚ್ಚುವರಿಯಾಗಿ ಮೂರು ದಿನಗಳ ಕಾಲಾವಕಾಶ ನೀಡಿದೆ. ಬಳಕೆದಾರರು ತಮ್ಮ ಫೋನ್ ನಂಬರ್ ಹಂಚಿಕೊಳ್ಳದೆ ಚಾಟ್ ಮಾಡಲು ಅನುವು ಮಾಡಿಕೊಡುವ ಈ ಹೊಸ ವೈಶಿಷ್ಟ್ಯದಿಂದ ನಕಲಿ ಖಾತೆಗಳ ಸೃಷ್ಟಿ, ಗುರುತಿನ ಕಳವು, ಪ್ರಸಿದ್ಧ ವ್ಯಕ್ತಿಗಳ ಹೆಸರಿನಲ್ಲಿ ವಂಚನೆ ಹಾಗೂ ಸೈಬರ್ ಅಪರಾಧಗಳು ಹೆಚ್ಚಾಗಬಹುದು ಎಂದು ಕೇಂದ್ರ ಐಟಿ ಸಚಿವಾಲಯ ತೀವ್ರ ಕಳವಳ ವ್ಯಕ್ತಪಡಿಸಿದೆ.

ವಾಟ್ಸಪ್ ಯೂಸರ್ ನೇಮ್ ವೈಶಿಷ್ಟ್ಯ: ಮೆಟಾ ಸಂಸ್ಥೆಗೆ ಪ್ರತಿಕ್ರಿಯಿಸಲು 3 ದಿನಗಳ ಹೆಚ್ಚುವರಿ ಕಾಲಾವಕಾಶ ನೀಡಿದ ಕೇಂದ್ರ ಸರ್ಕಾರ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

‘ಜನಸ್ನೇಹಿ ವೈದ್ಯ’ ಪದವಿನಂಗಡಿಯ ಡಾ. ಭರತ್ ಕುಮಾರ್ ಇನ್ನಿಲ್ಲ

(ನ್ಯೂಸ್‌ ಕಡಬ) newskadaba.com,  ಜು.07 ಬಡ ಕುಟುಂಬಗಳಿಗೆ ಉಚಿತ ವೈದ್ಯಕೀಯ ಸೇವೆ ಹಾಗೂ ಔಷಧ ನೀಡುವ ಮೂಲಕ ‘ಜನಸ್ನೇಹಿ ವೈದ್ಯ’ ಎಂದೇ ಪ್ರಸಿದ್ಧರಾಗಿದ್ದ ಪದವಿನಂಗಡಿಯ ಡಾ. ಭರತ್ ಕುಮಾರ್ ಎಂ. ಅವರು ಸೋಮವಾರ (ಜುಲೈ 6) ಬೆಳಗ್ಗೆ ನಿಧನರಾಗಿದ್ದಾರೆ. ಕಳೆದ 30ಕ್ಕೂ ಹೆಚ್ಚು ವರ್ಷಗಳಿಂದ ಪದವಿನಂಗಡಿಯಲ್ಲಿ ಕ್ಲಿನಿಕ್ ನಡೆಸುತ್ತಿದ್ದ ಇವರು, ಯಾವುದೇ ಸ್ವಾರ್ಥವಿಲ್ಲದೆ ಜನಸಾಮಾನ್ಯರಿಗೆ ಚಿಕಿತ್ಸೆ ನೀಡುತ್ತಿದ್ದರು.ಪದವಿನಂಗಡಿ ಮಾತ್ರವಲ್ಲದೆ ಕೊಂಚಾಡಿ, ಪಚ್ಚನಾಡಿ, ಬೊಂದೇಲ್, ಕಾವೂರು ಹಾಗೂ ದೇರೆಬೈಲ್ ಸೇರಿದಂತೆ ಮಂಗಳೂರಿನ ಸುತ್ತಮುತ್ತಲಿನ ಹಲವು ಪ್ರದೇಶಗಳ ಬಡ ರೋಗಿಗಳಿಗೆ

‘ಜನಸ್ನೇಹಿ ವೈದ್ಯ’ ಪದವಿನಂಗಡಿಯ ಡಾ. ಭರತ್ ಕುಮಾರ್ ಇನ್ನಿಲ್ಲ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಡಿಎಲ್ ಇಲ್ಲದ ನಿರ್ವಾಹಕನಿಂದ ಅಪಘಾತ ಬೆನ್ನಲ್ಲೇ ಕಟ್ಟುನಿಟ್ಟಿನ ಕ್ರಮ: ನಿಯಮ ಉಲ್ಲಂಘಿಸುವ ವಾಹನಗಳ ವಿರುದ್ಧ ಪೊಲೀಸರ ಎಚ್ಚರಿಕೆ

(ನ್ಯೂಸ್‌ ಕಡಬ) newskadaba.com,  ಜು.07 ಇತ್ತೀಚೆಗೆ ಮಣಿಪಾಲದಲ್ಲಿ ನಡೆದ ಖಾಸಗಿ ಶಾಲಾ ಬಸ್ ಅಪಘಾತ ಹಾಗೂ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ, ಉಡುಪಿ ಮತ್ತು ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ಶಾಲಾ ವಾಹನಗಳ ದಿಢೀರ್ ತಪಾಸಣೆ ನಡೆಸಲಾಯಿತು. ಮಾನ್ಯ ಚಾಲನಾ ಪರವಾನಗಿ (DL) ಇಲ್ಲದ ನಿರ್ವಾಹಕನೊಬ್ಬ ಬಸ್ ಚಲಾಯಿಸಿದ್ದೇ ಮಣಿಪಾಲ ಅಪಘಾತಕ್ಕೆ ಪ್ರಮುಖ ಕಾರಣ ಎಂದು ತನಿಖೆಯಲ್ಲಿ ತಿಳಿದುಬಂದ ಹಿನ್ನೆಲೆಯಲ್ಲಿ ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಚಾಲಕರ ಚಾಲನಾ ಪರವಾನಗಿ (DL), ವಾಹನ ಫಿಟ್‌ನೆಸ್ ಪ್ರಮಾಣಪತ್ರ

ಡಿಎಲ್ ಇಲ್ಲದ ನಿರ್ವಾಹಕನಿಂದ ಅಪಘಾತ ಬೆನ್ನಲ್ಲೇ ಕಟ್ಟುನಿಟ್ಟಿನ ಕ್ರಮ: ನಿಯಮ ಉಲ್ಲಂಘಿಸುವ ವಾಹನಗಳ ವಿರುದ್ಧ ಪೊಲೀಸರ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ವಿಶ್ವಬ್ಯಾಂಕ್‌ನ ‘ಮೇಲ್ಮಧ್ಯಮ ಆದಾಯ’ದ ಗಡಿ ದಾಟಿದ ಕರ್ನಾಟಕ ಸೇರಿ ದೇಶದ 5 ರಾಜ್ಯಗಳು; ದೆಹಲಿಗೆ ಪ್ರಥಮ ಸ್ಥಾನ

(ನ್ಯೂಸ್‌ ಕಡಬ) newskadaba.com,  ಜು.07 ಭಾರತವು ಒಟ್ಟಾರೆಯಾಗಿ ಇನ್ನೂ ‘ಕೆಳ-ಮಧ್ಯಮ ಆದಾಯ’ದ ($2,760 ತಲಾದಾಯ) ದೇಶವಾಗಿಯೇ ಉಳಿದಿದ್ದರೂ, ದೇಶದ ಐದು ಪ್ರಮುಖ ರಾಜ್ಯಗಳು ವಿಶ್ವಬ್ಯಾಂಕ್‌ನ ‘ಮೇಲ್ಮಧ್ಯಮ ಆದಾಯ’ದ ಗಡಿಯನ್ನು ($4,636 ಕಟ್‌ಆಫ್) ಯಶಸ್ವಿಯಾಗಿ ದಾಟಿ ಜಾಗತಿಕ ಮಟ್ಟದಲ್ಲಿ ಸಾಧನೆ ಮಾಡಿವೆ. ದೇಶದ ರಾಜಧಾನಿ ದೆಹಲಿ ($6,217) ಪ್ರಥಮ ಸ್ಥಾನದಲ್ಲಿದ್ದರೆ, ಕರ್ನಾಟಕ ($5,579) ದ್ವಿತೀಯ ಸ್ಥಾನದಲ್ಲಿದೆ. ಉಳಿದಂತೆ ತೆಲಂಗಾಣ ($5,407), ತಮಿಳುನಾಡು ($5,329) ಮತ್ತು ಗುಜರಾತ್ ($4,734) ನಂತರದ ಸ್ಥಾನಗಳಲ್ಲಿವೆ.ಮಹಾರಾಷ್ಟ್ರ ($4,628), ಹರಿಯಾಣ ($4,627) ಮತ್ತು ಕೇರಳ ($4,610)

ವಿಶ್ವಬ್ಯಾಂಕ್‌ನ ‘ಮೇಲ್ಮಧ್ಯಮ ಆದಾಯ’ದ ಗಡಿ ದಾಟಿದ ಕರ್ನಾಟಕ ಸೇರಿ ದೇಶದ 5 ರಾಜ್ಯಗಳು; ದೆಹಲಿಗೆ ಪ್ರಥಮ ಸ್ಥಾನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕೊಡಗು: ಮಲ್ಲಳ್ಳಿ ಜಲಪಾತದಲ್ಲಿ ಕೊಚ್ಚಿ ಹೋಗುತ್ತಿದ್ದ ಆಂಧ್ರದ ಇಬ್ಬರು ವಿದ್ಯಾರ್ಥಿಗಳ ಸಾಹಸಮಯ ರಕ್ಷಣೆ!

(ನ್ಯೂಸ್‌ ಕಡಬ) newskadaba.com,  ಜು.07 ಕೊಡಗು: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮಲ್ಲಳ್ಳಿ ಜಲಪಾತದಲ್ಲಿ ಪ್ರವಾಹದ ಸೆಳೆತಕ್ಕೆ ಸಿಲುಕಿ ಅಪಾಯದಲ್ಲಿದ್ದ ಆಂಧ್ರಪ್ರದೇಶದ ಇಬ್ಬರು ಕಾಲೇಜು ವಿದ್ಯಾರ್ಥಿಗಳನ್ನು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಯಶಸ್ವಿಯಾಗಿ ರಕ್ಷಿಸಿದ್ದಾರೆ. ಆಂಧ್ರಪ್ರದೇಶ ಮೂಲದ ಗಣೇಶ್ ನಾಯಕ್ (21) ಮತ್ತು ಸಂತೋಷ್ ಕುಮಾರ್ (23).ಜಲಪಾತದಲ್ಲಿ ನೀರು ಕಡಿಮೆ ಇದೆ ಎಂದು ಭಾವಿಸಿ, ಇಬ್ಬರು ವಿದ್ಯಾರ್ಥಿಗಳು ಸುರಕ್ಷತಾ ಬೇಲಿಯನ್ನು ದಾಟಿ ನೀರಿಗೆ ಇಳಿದಿದ್ದರು. ಇದೇ ವೇಳೆ ಜಲಪಾತದ ಮೇಲ್ಭಾಗದ ವಿದ್ಯುತ್ ಉತ್ಪಾದನಾ ಘಟಕದಿಂದ ಏಕಾಏಕಿ

ಕೊಡಗು: ಮಲ್ಲಳ್ಳಿ ಜಲಪಾತದಲ್ಲಿ ಕೊಚ್ಚಿ ಹೋಗುತ್ತಿದ್ದ ಆಂಧ್ರದ ಇಬ್ಬರು ವಿದ್ಯಾರ್ಥಿಗಳ ಸಾಹಸಮಯ ರಕ್ಷಣೆ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕ್ಷಣಿಕ ಸೆಲ್ಫಿ ವ್ಯಾಮೋಹ ಮಲ್ಲಳ್ಳಿ ಜಲಪಾತದಲ್ಲಿ ಜವರಾಯನಿಂದ ಜಸ್ಟ್ ಮಿಸ್!

(ನ್ಯೂಸ್ ಕಡಬ) newskadaba.com ಜು. 07.ಕೊಡಗಿನ ಮಲ್ಲಳ್ಳಿ ಜಲಪಾತದಲ್ಲಿ ಒಂದು ಕ್ಷಣದ ಹುಚ್ಚಾಟ, ಇಡೀ ಜೀವವನ್ನೇ ಪಣಕ್ಕಿಟ್ಟ ಘಟನೆ ನಡೆದಿದೆ. ಕೇವಲ ಫೋಟೋ ಮತ್ತು ಸೆಲ್ಫಿಗಾಗಿ ಜಲಪಾತದ ರೌದ್ರ ರೂಪದ ನಡುವೆಯೇ ನುಗ್ಗಿದ ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳು, ಸಾವಿನ ದವಡೆಗೆ ಸಿಲುಕಿ ಕೊನೆಗೂ ಅಗ್ನಿಶಾಮಕ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಪಾರಾಗಿದ್ದಾರೆ. ಮೂಲತಃ ಆಂಧ್ರಪ್ರದೇಶದವರಾದ, ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ಸಂತೋಷ್ ಕುಮಾರ್ ಮತ್ತು ಗಣೇಶ್ ನಾಯಕ್ ಎಂಬ ಇಬ್ಬರು ವಿದ್ಯಾರ್ಥಿಗಳು ಸೋಮವಾರಪೇಟೆ ತಾಲೂಕಿನ ಮಲ್ಲಳ್ಳಿ ಜಲಪಾತಕ್ಕೆ ಪ್ರವಾಸಕ್ಕೆ ಬಂದು, ಮಳೆಗಾಲದ ರಭಸದ ನಡುವೆಯೂ

ಕ್ಷಣಿಕ ಸೆಲ್ಫಿ ವ್ಯಾಮೋಹ ಮಲ್ಲಳ್ಳಿ ಜಲಪಾತದಲ್ಲಿ ಜವರಾಯನಿಂದ ಜಸ್ಟ್ ಮಿಸ್! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್, ವೀಡಿಯೋ

ಪ್ರಧಾನಿ ನರೇಂದ್ರ ಮೋದಿಗೆ ಇಂಡೋನೇಷ್ಯಾದ ಅತ್ಯುನ್ನತ ‘ಬಿಂಟಾಂಗ್ ಆದಿಪೂರ್ಣ’ ಪ್ರಶಸ್ತಿ ಗೌರವ

(ನ್ಯೂಸ್‌ ಕಡಬ) newskadaba.com,  ಜು.07 : ಮೂರು ರಾಷ್ಟ್ರಗಳ ಪ್ರವಾಸದ ಮೊದಲ ಹಂತವಾಗಿ ಇಂಡೋನೇಷ್ಯಾಕ್ಕೆ ಭೇಟಿ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಆ ದೇಶದ ಅತ್ಯುನ್ನತ ನಾಗರಿಕ ಗೌರವವಾದ ‘ಬಿಂಟಾಂಗ್ ಆದಿಪೂರ್ಣ’ ಪ್ರಶಸ್ತಿ ನೀಡಿ ಸನ್ಮಾನಿಸಲಾಗಿದೆ. ಜಕಾರ್ತಾದ ಇಸ್ತಾನಾ ಮೆರ್ಡೆಕಾ ಅಧ್ಯಕ್ಷೀಯ ಭವನದಲ್ಲಿ ಇಂಡೋನೇಷ್ಯಾ ಅಧ್ಯಕ್ಷ ಪ್ರಬೊವೊ ಸುಬಿಯಾಂತೊ ಅವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು. 1959ರಲ್ಲಿ ಸ್ಥಾಪನೆಯಾದ ಈ ಪ್ರಶಸ್ತಿಯು ಇಂಡೋನೇಷ್ಯಾದ ಅತ್ಯುನ್ನತ ಗೌರವವಾಗಿದ್ದು, ರಾಷ್ಟ್ರದ ಏಕತೆ, ಸ್ಥಿರತೆ ಮತ್ತು ಸಮೃದ್ಧಿಗೆ ಅಸಾಧಾರಣ ಕೊಡುಗೆ

ಪ್ರಧಾನಿ ನರೇಂದ್ರ ಮೋದಿಗೆ ಇಂಡೋನೇಷ್ಯಾದ ಅತ್ಯುನ್ನತ ‘ಬಿಂಟಾಂಗ್ ಆದಿಪೂರ್ಣ’ ಪ್ರಶಸ್ತಿ ಗೌರವ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಪ್ಪಿನಂಗಡಿಯ 60 ವರ್ಷ ಹಳೆಯ ನೇತ್ರಾವತಿ ಸೇತುವೆಯಲ್ಲಿ ಬಿರುಕು

(ನ್ಯೂಸ್‌ ಕಡಬ) newskadaba.com,  ಜು.07 ಉಪ್ಪಿನಂಗಡಿ: ಪುತ್ತೂರು-ಬೆಳ್ತಂಗಡಿ ತಾಲೂಕಿನ ಪ್ರಮುಖ ಸಂಪರ್ಕ ಕೊಂಡಿಯಾಗಿರುವ, 60 ವರ್ಷ ಹಳೆಯ ಉಪ್ಪಿನಂಗಡಿಯ ನೇತ್ರಾವತಿ ಸೇತುವೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಕಳೆದೊಂದು ವರ್ಷದಿಂದ ಮೂಡುಬಿದಿರೆ ಕಡೆಯಿಂದ ಮೈಸೂರಿಗೆ ನೂರಾರು ಘನ ವಾಹನಗಳಲ್ಲಿ ಮಿತಿಮೀರಿ ಮಣ್ಣು ಸಾಗಿಸುತ್ತಿರುವುದು ಬಿರುಕಿಗೆ ಕಾರಣ ಎನ್ನಲಾಗಿದೆ.ಸೇತುವೆಯ ಪಿಲ್ಲರ್‌ಗಳ ಕಾಂಕ್ರೀಟ್ ಕಿತ್ತುಹೋಗಿ ಒಳಗಿನ ಕಬ್ಬಿಣದ ಸರಳುಗಳು ಕಾಣಿಸುತ್ತಿವೆ. ಜೊತೆಗೆ, ಸ್ಲ್ಯಾಬ್‌ಗಳಲ್ಲಿ ಅಶ್ವತ್ಥ ಗಿಡಗಳು ಬೆಳೆದು ಬೇರು ಬಿಡುತ್ತಿವೆ. ಸೇತುವೆಯ ಮೇಲಿನ ಮಣ್ಣು-ಕಸವನ್ನು ಇಲಾಖೆ ಸ್ವಚ್ಛಗೊಳಿಸುತ್ತಿಲ್ಲ. ಪ್ರಸ್ತುತ

ಉಪ್ಪಿನಂಗಡಿಯ 60 ವರ್ಷ ಹಳೆಯ ನೇತ್ರಾವತಿ ಸೇತುವೆಯಲ್ಲಿ ಬಿರುಕು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top